Tag: ಹರೀಶ್ ಪೂಂಜಾ

  • ಕೋಮುದ್ವೇಷ ಭಾಷಣ ಆರೋಪ – ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

    ಕೋಮುದ್ವೇಷ ಭಾಷಣ ಆರೋಪ – ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

    ಮಂಗಳೂರು: ಮುಸ್ಲಿಂ ಧರ್ಮದ (Muslim Religion) ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಭಾಷಣ ಆರೋಪದಡಿ ಬೆಳ್ತಂಗಡಿ (Belthangady) ವಿಧಾನಸಭಾ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಶನಿವಾರ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ತೆಕ್ಕಾರು ನಿವಾಸಿ ಇಬ್ರಾಹಿಂ.ಎಸ್.ಬಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು – ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ

    ಧರ್ಮ, ಧರ್ಮಗಳ ನಡುವೆ ದ್ವೇಷ ಬಿತ್ತುವ ಭಾಷಣ ಮಾಡಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ (Uppinangady Police Station) ಬಿಎನ್‌ಎಸ್ ಕಾಯ್ದೆಯಡಿ 196, 352(2) ಪ್ರಕರಣ ದಾಖಲಾಗಿದೆ.

  • ಸುಹಾಸ್‌ಗೆ ಆತ್ಮರಕ್ಷಣೆಗೆ ಒಂದು ದೊಣ್ಣೆಯನ್ನೂ ಇಟ್ಟುಕೊಳ್ಳಲು ಪೊಲೀಸರು ಅವಕಾಶ ನೀಡಲಿಲ್ಲ: ಹರೀಶ್ ಪೂಂಜಾ

    ಸುಹಾಸ್‌ಗೆ ಆತ್ಮರಕ್ಷಣೆಗೆ ಒಂದು ದೊಣ್ಣೆಯನ್ನೂ ಇಟ್ಟುಕೊಳ್ಳಲು ಪೊಲೀಸರು ಅವಕಾಶ ನೀಡಲಿಲ್ಲ: ಹರೀಶ್ ಪೂಂಜಾ

    – ಪೊಲೀಸ್ ಇಲಾಖೆಯಲ್ಲಿ ಮುಸಲ್ಮಾನ್ ಅಧಿಕಾರಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ: ಬಿಜೆಪಿ ಶಾಸಕ
    – ಇದು ಪೊಲೀಸ್ ಇಲಾಖೆ ವೈಫಲ್ಯ ಎಂದು ಆರೋಪ

    ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ ವೈಫಲ್ಯ ಇದೆ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ಅಸಮಾಧಾನ ಹೊರಹಾಕಿದರು.

    ಸುಹಾಸ್ ಶೆಟ್ಟಿ ಮೇಲೆ ದಾಳಿಯಾಗುತ್ತೆ ಅನ್ನೋ ಮಾಹಿತಿ ಪೊಲೀಸ್ ಇಲಾಖೆಗೆ ಮೊದಲೇ ಇತ್ತು. ಸುಹಾಸ್ ಶೆಟ್ಟಿ ಆತ್ಮರಕ್ಷಣೆಗೂ ಪೊಲೀಸರು ಯಾವುದೇ ಆಯುಧಗಳನ್ನು ಇಟ್ಟುಕೊಳ್ಳಲು ಅವಕಾಶ ನೀಡಲಿಲ್ಲ. ಆತನ ಬಳಿ ಯಾವುದೇ ಆಯುಧವಿಲ್ಲ ಅನ್ನೋ ವಿಚಾರ ಹಂತಕರಿಗೆ ಗೊತ್ತಾಗಿದ್ದು ಹೇಗೆ? ಈ ಮಾಹಿತಿ ಸೋರಿಕೆಯಾಗಿದ್ದು ಯಾರಿಂದ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ ಪರಿಸ್ಥಿತಿ ನಿರ್ಮಾಣ ಮಾಡಲು ಹೊರಟಂತೆ ಕಾಣ್ತಿದೆ: ಬಿವೈವಿ ಕಿಡಿ

    ಪೊಲೀಸ್ ಇಲಾಖೆಯಲ್ಲಿ ಮುಸಲ್ಮಾನ್ ಅಧಿಕಾರಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಯಾವುದೇ ಮಾರಾಕಸ್ತ್ರ ಇಲ್ಲ ಅನ್ನೋ ಮಾಹಿತಿ ಪೊಲೀಸ್ ಇಲಾಖೆಗೆ ಗೊತ್ತಿತ್ತು. 6 ಜನ ಇದ್ದಾಗಲೇ ದಾಳಿ ಮಾಡುತ್ತಾರೆ ಎಂದಾಗ ಮಾಹಿತಿ ಕೊಟ್ಟವರು ಯಾರು? ಇದು ಪೊಲೀಸ್ ಇಲಾಖೆಯ ವೈಫಲ್ಯ. ಮಾಹಿತಿ ಸೋರಿಕೆಯಾಗಿ ಈ ರೀತಿಯ ಹತ್ಯೆಯಾಗಿದೆ. ಇಲಾಖೆಯ ಒಳಗಿನಿಂದಲೇ ಮಾಹಿತಿ ಹೋಗಿದೆ ಎಂದು ಆರೋಪಿಸಿದರು.

    ಆತ್ಮರಕ್ಷಣೆಗೆ ಒಂದು ದೊಣ್ಣೆಯನ್ನೂ ಜೊತೆಗಿಟ್ಟುಕೊಳ್ಳಲು ಪೊಲೀಸರು ಅವಕಾಶ ನೀಡಲಿಲ್ಲ. ಪೊಲೀಸ್ ಇಲಾಖೆ ರಕ್ಷಣೆ ಕೊಡಬೇಕಿತ್ತು. ವಾಹನ ತಪಾಸಣೆ ಮಾಡಿ ಆತ್ಮರಕ್ಷಣೆಗೂ ವ್ಯವಸ್ಥೆ ಇಲ್ಲದ ಹಾಗೆ ನೋಡಿಕೊಂಡವರು ಯಾರು? ನನಗೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ. ಈ ಪ್ರಕರಣದ ತನಿಖೆಯನ್ನ ಎನ್‌ಐಎಗೆ ವಹಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಸುಹಾಸ್‌ ಹತ್ಯೆ ಖಂಡಿಸಿ ಇಂದು ದ.ಕನ್ನಡ ಜಿಲ್ಲೆ ಬಂದ್‌ಗೆ ಕರೆ

  • ಸಿದ್ದರಾಮಯ್ಯಗೂ ಔರಂಗಜೇಬ್‌ಗೂ ಯಾವುದೇ ವ್ಯತ್ಯಾಸ ಇಲ್ಲ: ಹರೀಶ್ ಪೂಂಜಾ

    ಸಿದ್ದರಾಮಯ್ಯಗೂ ಔರಂಗಜೇಬ್‌ಗೂ ಯಾವುದೇ ವ್ಯತ್ಯಾಸ ಇಲ್ಲ: ಹರೀಶ್ ಪೂಂಜಾ

    ಉಡುಪಿ: ಸಿಎಂ ಸಿದ್ದರಾಮಯ್ಯ ಹಾಗೂ ಔರಂಗಜೇಬ್‌ಗೂ ಯಾವುದೇ ವ್ಯತ್ಯಾಸ ಇಲ್ಲ. ತೆರಿಗೆ ಲೂಟಿ ಮಾಡುವ ಸಿಎಂಗೆ ಔರಂಗಜೇಬನೇ ಪ್ರೇರಣೆ ಎಂದು ಶಾಸಕ ಹರೀಶ್ ಪೂಂಜಾ ವಾಗ್ದಾಳಿ ನಡೆಸಿದರು.

    ರಾಜ ಸರ್ಕಾರದಿಂದ ಕರಾವಳಿ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು. ಈ ವೇಳೆ ಸಿಎಂ ವಿರುದ್ಧ ಹರೀಶ್ ಪೂಂಜಾ ಕಿಡಿಕಾರಿದರು.

    ಬಹುಸಂಖ್ಯಾತ ಹಿಂದೂಗಳ ಹಣ ದೋಚಿ ಮುಸಲ್ಮಾನರಿಗೆ ಬೇಕಾಬಿಟ್ಟಿ ಯೋಜನೆ ನೀಡುತ್ತಿದ್ದಾರೆ. ಹಿಂದೂಗಳಿAದ ಹೆಚ್ಚು ತೆರಿಗೆ ಸಂಗ್ರಹ ಮಾಡುತ್ತಾರೆ. ಆ ಹಣವನ್ನು ಮುಸಲ್ಮಾನರಿಗೆ ಹಂಚಿಕೆ ಮಾಡುತ್ತಾರೆ. ಔರಂಗಜೇಬ್ ಜಿಝಿಯಾ ಎಂಬ ತೆರಿಗೆ ಮೂಲಕ ಹಣ ಸಂಗ್ರಹ ಮಾಡುತ್ತಿದ್ದ. ನಮ್ಮ ರಾಜ್ಯದಲ್ಲಿ ಔರಂಗಜೇಬನ ಆಡಳಿತ ಇದೆ ಎಂದು ಟೀಕಿಸಿದರು.

    ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ. ನಮ್ಮ ರಾಜ್ಯದ ಹಿಂದೂಗಳು ಏನು ಅನ್ಯಾಯ ಮಾಡಿದ್ದರು? 2028 ರ ವರೆಗೆ ಸಿದ್ದರಾಮಯ್ಯ ಅಧಿಕಾರದಲ್ಲಿ ಇರಲ್ಲ. ಸಾಂಬಾಜಿ ರೀತಿಯಲ್ಲೇ ಕಾಂಗ್ರೆಸ್ ಸರ್ಕಾರವನ್ನು ಕೂಡಾ ಹೊಡೆದೋಡಿಸುತ್ತೇವೆ ಎಂದು ಎಚ್ಚರಿಸಿದರು.

  • ಪ್ರತ್ಯೇಕ ಕರಾವಳಿಯ ಕೂಗು ಎಬ್ಬಿಸಿದ ಪೂಂಜಾ

    ಪ್ರತ್ಯೇಕ ಕರಾವಳಿಯ ಕೂಗು ಎಬ್ಬಿಸಿದ ಪೂಂಜಾ

    ಬೆಂಗಳೂರು: ಪ್ರತ್ಯೇಕ ಕರಾವಳಿಯ ಕೂಗು ದಿಢೀರ್ ಎಂದು ಕೇಳಿ ಬಂದಿದೆ. ವಿಧಾನಸಭೆ ಕಲಾಪದಲ್ಲಿ ಕರಾವಳಿ ಜಿಲ್ಲೆಗಳ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯುವಾಗ ಬಿಜೆಪಿಯ ಹರೀಶ್ ಪೂಂಜಾ (Harish Poonja) ಈ ಕೂಗೆಬ್ಬಿಸಿದ್ದಾರೆ.

    ವಿಧಾನಸಭೆಯಲ್ಲಿ 69 ನಿಯಮದಡಿಯಲ್ಲಿ ಕರಾವಳಿ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಇಂದು ಚರ್ಚೆ ನಡೆಯಿತು. ಈ ವೇಳೆ ಸುನಿಲ್ ಕುಮಾರ್ ಮಾತನಾಡಿ, ಸದನದಲ್ಲಿ ಉತ್ತರ ಕರ್ನಾಟಕ, ಬೆಂಗಳೂರು ಬಗ್ಗೆ ಚರ್ಚೆ ಆಗುತ್ತದೆ. ಆದರೆ ಕರಾವಳಿ ಬಗ್ಗೆ ಯಾವತ್ತೂ ಚರ್ಚೆಗಳು ನಡೆದಿಲ್ಲ. ಟೆಂಪಲ್ ಟೂರಿಸಂ ವಿಚಾರವಾಗಿ ಕರಾವಳಿಯನ್ನು ಅಭಿವೃದ್ಧಿ ಪಡಿಸಬೇಕು. 330 ಕಿ.ಮೀ ಇರುವ ಬೀಚ್ ಟೂರಿಸಂ ಅಭಿವೃದ್ಧಿ ಪಡಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಪ್ರವಾಸಿಗರೇ ಗಮನಿಸಿ; ಕಾಫಿನಾಡ ಮುಳ್ಳಯ್ಯನಗಿರಿ-ದತ್ತಪೀಠ 3 ದಿನ ಬಂದ್!

    ಕರಾವಳಿಯನ್ನು ಬುದ್ಧಿವಂತರ ಜಿಲ್ಲೆ ಎಂದು ಕರೆಯುತ್ತಾರೆ. ಕರಾವಳಿ ಜಿಲ್ಲೆಯ ಜನ ರಾಷ್ಟ್ರೀಯತೆ, ಹಿಂದುತ್ವದಲ್ಲಿ ಮುಂಚೂಣಿಯಲ್ಲಿದ್ದಾರೆ. ಕರಾವಳಿ ಜನ ಹೋಟೆಲ್ ಮ್ಯಾನೇಜ್ಮೆಂಟ್, ದೇವಸ್ಥಾನ ಮ್ಯಾನೇಜ್ಮೆಂಟ್ ಹಾಗೂ ಖಾಸಗಿ ಬಸ್ ಮ್ಯಾನೇಜ್ಮೆಂಟ್‌ನಲ್ಲಿ ಪ್ರಸಿದ್ದರು. ಸರ್ಕಾರವನ್ನು ಅವಲಂಬಿಸದೇ ಸರ್ಕಾರಿ ಶಾಲೆಗಳನ್ನು ನಮ್ಮ ಜಿಲ್ಲೆಯಲ್ಲಿ ಅಭಿವೃದ್ಧಿ ಮಾಡಿದ್ದೇವೆ. ಆದರೆ ಕರಾವಳಿ ಭಾಗದ ಸಮಸ್ಯೆ ಬಗ್ಗೆ ಚರ್ಚೆ ನಡೆಯುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಮತಾಂತರ ಆಗುವಂತೆ ನನಗೆ ಒತ್ತಡ ಹೇರುತ್ತಿದ್ದರು: ಮಾಜಿ ಪಾಕ್ ಕ್ರಿಕೆಟಿಗ ಕನೇರಿಯಾ

    ಈ ಸಂದರ್ಭದಲ್ಲಿ ಮಾತನಾಡಿದ ಹರೀಶ್ ಪೂಂಜಾ, ಕರಾವಳಿ ಅಭಿವೃದ್ಧಿ ಕಡೆಗಣಿಸಿದ್ರೆ ನಾವು ಪ್ರತ್ಯೇಕ ವಿಧಾನಸೌಧ ಕಟ್ಟಿಸಿಕೊಂಡು ಮಾತಾಡುವ ವ್ಯವಸ್ಥೆ ತರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಸ್ಪೀಕರ್ ಯು.ಟಿ.ಖಾದರ್ ಅವರು ಹರೀಶ್ ಪೂಂಜಾ ಮಾತಾಡುವಾಗ ಬೇಗ ಮುಗಿಸಿ ಎಂದರು. ಇದನ್ನೂ ಓದಿ: ಐಪಿಎಸ್ ಸೂಚನೆಯಂತೆ ರನ್ಯಾಗೆ ಗ್ರೀನ್‌ಚಾನಲ್ – ಡಿಆರ್‌ಐ ಮುಂದೆ ಶಿಷ್ಟಾಚಾರ ಅಧಿಕಾರಿ ಹೇಳಿಕೆ

    ಕರಾವಳಿ ಜಿಲ್ಲೆಗಳು ನಮ್ಮ ಜೊತೆಗೇ ಇರಬೇಕು. ನೀವೂ ನಾವೂ ಒಟ್ಟಿಗೆ ಇರಬೇಕು, ಅಪಸ್ವರ ಬೇಡ ಎಂದು ಕಾಂಗ್ರೆಸಿಗರು ಹೇಳಿದರು.

  • ನಾನು ಭ್ರಷ್ಟಾಚಾರ ಎಸಗಿಲ್ಲ – ಮಾರಿಗುಡಿಯಲ್ಲಿ ಹರೀಶ್ ಪೂಂಜಾ ಪ್ರಮಾಣ

    ನಾನು ಭ್ರಷ್ಟಾಚಾರ ಎಸಗಿಲ್ಲ – ಮಾರಿಗುಡಿಯಲ್ಲಿ ಹರೀಶ್ ಪೂಂಜಾ ಪ್ರಮಾಣ

    ಮಂಗಳೂರು: ನಾನು ಯಾವುದೇ ರೀತಿಯಲ್ಲಿ ಭ್ರಷ್ಟಾಚಾರ ಎಸಗಿಲ್ಲ ಎಂದು ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ಅವರು ದೇವರ ಮುಂದೆ ಪ್ರಮಾಣ ಮಾಡಿದ್ದಾರೆ.

    ನಾನು ಒಂದು ರೂಪಾಯಿ ಮುಟ್ಟಿಲ್ಲ, ಭ್ರಷ್ಟಾಚಾರ ಮಾಡಿಲ್ಲ, ಒಂದು ವೇಳೆ ತಪ್ಪುಮಾಡಿದ್ದರೆ ತಕ್ಕ ಶಿಕ್ಷೆಯನ್ನು ಮಾರಿಗುಡಿಯ ಮಹಾದೇವಿ ನೀಡಲಿ ಎಂದು ಬೆಳ್ತಂಗಡಿ ಮಾರಿಗುಡಿ ದೇವಿ ದೇವಸ್ಥಾನದಲ್ಲಿ ಪ್ರಮಾಣ ಮಾಡಿದ್ದಾರೆ. ಇದನ್ನೂ ಓದಿ: ದರ್ಶನ್‌ & ಗ್ಯಾಂಗ್‌ಗೆ ಜೈಲೇ ಗತಿ – ಆ.28ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

    ಪ್ರಮಾಣ ಮಾಡಿದ್ದು ಯಾಕೆ?
    ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ (Rakshith  Shivaram) ಆರೋಪಿಸಿದ್ದರು. ಇದನ್ನೂ ಓದಿ:ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆ ಬೈಕ್‌ಗೆ ಬೆಂಕಿ ಇಟ್ಟ ಸವಾರ

    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ- ಬೆಳ್ತಂಗಡಿ (Belthangadi) ಪ್ರವಾಸಿ ಬಂಗಲೆ ಹಾಗೂ ಹೆದ್ದಾರಿ ಕಾಮಗಾರಿಯಲ್ಲಿ ಹರೀಶ್ ಪೂಂಜಾ ಭ್ರಷ್ಟಾಚಾರ ಎಸಗಿದ್ದಾರೆ. ಹೆದ್ದಾರಿಯ ಕಾಮಗಾರಿಯಲ್ಲಿ ಶಾಸಕ 3 ಕೋಟಿ ಕಿಕ್ ಬ್ಯಾಕ್ ಮಾಡಿದ್ದಾರೆ. ಕಾಮಗಾರಿ ಪೂರ್ಣಗೊಂಡರೂ 2 ಕೋಟಿ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಮಾಡಿದ್ದಾರೆ ಎಂದು ದೂರಿದ್ದರು. ಇದನ್ನೂ ಓದಿ:ಬಾಲ ರಾಮನ ಮೂರ್ತಿ ಕೆತ್ತಿದ ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಅಮೆರಿಕ ವೀಸಾ ನಿರಾಕರಣೆ

    ಮಾರ್ಚ್ 28, 2023 ರಲ್ಲಿ ಬೆಳ್ತಂಗಡಿಲ್ಲಿ ಪ್ರವಾಸಿ ಮಂದಿರ ಉದ್ಘಾಟನೆಯಾಗಿತ್ತು. ಈ ಪ್ರವಾಸಿ ಮಂದಿರ 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿತ್ತು. ಪ್ರವಾಸಿ ಮಂದಿರದ ಅನುದಾನವನ್ನು ಚುನಾವಣೆ ಪ್ರಚಾರಕ್ಕೆ ಬಳಸಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ದೂರು ನೀಡಿ ತನಿಖೆಗೆ ಆಗ್ರಹಿಸಿದ್ದಾರೆ. ಇದನ್ನೂ ಓದಿ:ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲ್ಲ: ಡಿಕೆಶಿ

    ಇಬ್ಬರ ನಡುವಿನ ವಾಕ್ಸಮರ ಜೋರಾಗುತ್ತಿದ್ದಂತೆ ಇಂದು ಹರೀಶ್ ಪೂಂಜಾ ಅವರು ಮಾರಿಗುಡಿಗೆ ಬಂದು ಪ್ರಮಾಣ ಮಾಡಿದ್ದಾರೆ. ದೇವರಿಗೆ ಪ್ರಾರ್ಥನೆ ಸಲ್ಲಿಸಿ ತೆಂಗಿನಕಾಯಿ ಒಡೆದು ನಾನು ತಪ್ಪು ಮಾಡಿಲ್ಲ. ನನ್ನ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ರಕ್ಷಿತ್ ಶಿವರಾಂ ಸೇರಿದಂತೆ ಎಲ್ಲರಿಗೂ ತಕ್ಕ ಶಿಕ್ಷೆ ನೀಡುವಂತೆ ಪ್ರಾರ್ಥಿಸಿಕೊಂಡಿದ್ದಾರೆ.ಕೇಜ್ರಿವಾಲ್‌ಗೆ ಜಾಮೀನು ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

  • ಮುಸ್ಲಿಮರಿಗೆ ಅನುದಾನ ಕೊಡೋಕೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ರಾ – ಹರೀಶ್ ಪೂಂಜಾ ಪ್ರಶ್ನೆ

    ಮುಸ್ಲಿಮರಿಗೆ ಅನುದಾನ ಕೊಡೋಕೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ರಾ – ಹರೀಶ್ ಪೂಂಜಾ ಪ್ರಶ್ನೆ

    ಮಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ (BJP Protest) ನಡೆಯಿತು. ನಗರದ ಪಿವಿಎಸ್ ಜಂಕ್ಷನ್ ನಲ್ಲಿರುವ ಬಿಜೆಪಿ ಕಚೇರಿ ಎದುರು ತೆಂಗಿನಕಾಯಿ ಗೆರಟೆ, ಚೆಂಬು, ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja), ಎಸ್ಸಿ-ಎಸ್ಟಿ ಸಮುದಾಯಗಳಿಗೆ ಅನುದಾನ ಕೊಡಿ ಅಂದ್ರೆ ಸರ್ಕಾರದ ಬಳಿ ಅನುದಾನ ಇಲ್ಲ ಅಂತಾರೆ. ಆದ್ರೆ ಮುಸ್ಲಿಮರಿಗೆ 10,000 ಕೋಟಿ ರೂ. ಅನುದಾನವನ್ನು ಎಸ್ಸಿ-ಎಸ್ಟಿ ಸಮುದಾಯದ (SC-ST Community) ಅನುದಾನದಿಂದ ಕೊಟ್ಟಿದ್ದಾರೆ ಎಂದು ಕಿಡಿ ಕಾರಿದರು.

    ಇವತ್ತು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಬಕ್ರೀದ್ ಹಬ್ಬದ ಸಲುವಾಗಿ ಮುಸ್ಲಿಮರಿಗೆ (Muslims) ಕೊಡೋದಕ್ಕಾ? ಸಾಮಾನ್ಯರ ಮೇಲೆ ತೆರಿಗೆ ಹೊರೆ ಹೊರಿಸುವ ಮೂಲಕ ಯಾವ ಸಮುದಾಯುಕ್ಕೆ ಓಲೈಕೆ ಮಾಡ್ತೀದ್ದಿರಿ? ರಾಜ್ಯದ ಅಭಿವೃದ್ಧಿ ಮಾಡುವ ಚಿಂತನೆ ನಿಮಗೆ ಇದ್ದಿದ್ದರೆ ಬೆಲೆ ಏರಿಕೆ ಮಾಡುವ ಕೆಲಸ ಮಾಡುತ್ತಿರಲಿಲ್ಲ. ನಿಮ್ಮ ಏಕಪಕ್ಷೀಯ ನಿರ್ಧಾರಗಳೇ ಬೆಲೆ ಏರಿಕೆಗೆ ಕಾರಣ ಎಂದು ವಾಗ್ದಾಳಿ ನಡೆಸಿದರು.

    ಜನಸಾಮಾನ್ಯರ ಮೇಲೆ ಬೆಲೆ ಏರಿಕೆ (Petrol Price Hike) ಹೊರೆ ಹಿಂಪಡೆಯುವವರೆಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಹೋರಾಟ ಮುಂದುವರಿಸುತ್ತೇವೆ. ಇದು ಸಾಂಕೇತಿಕ ಹೋರಾಟ ಮುಂದೆ ಬಿಜೆಪಿ ಉಗ್ರರೂಪದ ಹೋರಾಟ ಮಾಡಲಿದೆ ಎಂದು ಎಚ್ಚರಿಕೆ ನೀಡಿದರು.

    ಪ್ರತಿಭಟನೆ ವೇಳೆ ಸ್ಕೂಟರ್ ಹಾಗೂ ಕಾರಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದ್ದು, ಪೆಟ್ರೋಲ್ ಬಂಕ್ ವರೆಗೂ ಸಾಗಿತ್ತು. ಪಿವಿಎಸ್ ಸರ್ಕಲ್ ನಿಂದ ನವಭಾರತ್ ಸರ್ಕಲ್‌ವರೆಗೆ ವಾಹನಗಳನ್ನು ಎಳೆದುಕೊಂಡು ಚೆಂಬಿನಲ್ಲಿ ಹಣ ಸಂಗ್ರಹಿಸಿ ಆ ಹಣವನ್ನು ಪೆಟ್ರೋಲ್ ಬಂಕ್ ಸಿಬ್ಬಂದಿಗೆ ನೀಡಿ ಚೆಂಬಲ್ಲಿ ಪೆಟ್ರೋಲ್ ಪಡೆದುಕೊಂಡು ಕಾರಿಗೆ ತುಂಬಿಸಿ ವಿನೂತನ ಪ್ರತಿಭಟನೆ ನಡೆಸಿದ್ರು.ಪ್ರತಿಭಟನೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ,ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸೇರಿ ಹಲವರು ಭಾಗಿಯಾಗಿದ್ದರು.

  • ಉಗ್ರರನ್ನು ಬಂಧಿಸಿದ್ರೂ ಠಾಣೆಗೆ ನುಗ್ತೀರಾ?- ಹರೀಶ್ ಪೂಂಜಾಗೆ ಚಾಟಿ ಬೀಸಿದ ಹೈಕೋರ್ಟ್

    ಉಗ್ರರನ್ನು ಬಂಧಿಸಿದ್ರೂ ಠಾಣೆಗೆ ನುಗ್ತೀರಾ?- ಹರೀಶ್ ಪೂಂಜಾಗೆ ಚಾಟಿ ಬೀಸಿದ ಹೈಕೋರ್ಟ್

    ಬೆಂಗಳೂರು: ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದಾಗಲೂ ಪೊಲೀಸ್ ಠಾಣೆಗೆ ನುಗ್ತೀರಾ ಎಂದು ಬೆಳ್ತಂಗಡಿ (Belthangady) ಶಾಸಕ ಹರೀಶ್ ಪೂಂಜಾ (Harish Poonja) ಅವರನ್ನು ಹೈಕೋರ್ಟ್ (Karnataka High Court) ತೀವ್ರ ತರಾಟೆಗೆ ತೆಗೆದುಕೊಂಡಿದೆ.

    ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪದಡಿ ದಾಖಲಾದ ಎಫ್‍ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದೆ. ಪೊಲೀಸ್ ಠಾಣೆಗೆ ಏಕೆ ಹೋಗಿದ್ದು? ಶಾಸಕರಾದ ಮಾತ್ರಕ್ಕೆ ಠಾಣೆಗೆ ಹೋಗಿ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಬಹುದೇ? ಭಯೋತ್ಪಾದಕರನ್ನು ಪೊಲೀಸರು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ಹೋಗಿ ಪೊಲೀಸರನ್ನು ಪ್ರಶ್ನೆ ಮಾಡುವಿರಾ? ಇದನ್ನೆಲ್ಲಾ ಒಪ್ಪಲು ಆಗುವುದಿಲ್ಲ. ನಾಳೆ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನೋಡಲು ಕೋರ್ಟ್ ಬಂದು ನಮ್ಮ ಮುಂದೆ ಕುಳಿತರೆ ಹೇಗೆ? ಆಗ ಏನು ಮಾಡುವುದು ಎಂದು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಖಾರವಾಗಿ ಪ್ರಶ್ನಿಸಿದೆ.

    ಶಾಸಕರು ಇರೋದು ಶಾಸನ ರೂಪಿಸಲು. ಅದರಂತೆ ಶಾಸನ ರಚನೆ ಮಾಡುವುದಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು. ಅದುಬಿಟ್ಟು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವುದಲ್ಲ ಎಂದು ಪೀಠ ಹೇಳಿದೆ. ನಂತರ ಅರ್ಜಿಯಲ್ಲಿ ಪ್ರತಿವಾದಿಯಾದ ಬೆಳ್ತಗಂಡಿ ಠಾಣಾ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

    ಏನಿದು ಪ್ರಕರಣ?: ಪರವಾನಗಿ ಪಡೆಯದೇ ಗಣಿಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರ ಕ್ರಮ ಆಕ್ಷೇಪಿಸಿ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಹಾಗೂ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ರದ್ದುಗೊಳಿಸುವಂತೆ ಶಾಸಕ ಹೈಕೋರ್ಟ್ ಮೆಟ್ಟಿಲೇರಿದ್ದರು.

  • ವಿಚಾರಣೆಗೆ ಬನ್ನಿ – ಹರೀಶ್‌ ಪೂಂಜಾ ಬಂಧನ ಮಾಡದೇ ತೆರಳಿದ ಪೊಲೀಸರು

    ವಿಚಾರಣೆಗೆ ಬನ್ನಿ – ಹರೀಶ್‌ ಪೂಂಜಾ ಬಂಧನ ಮಾಡದೇ ತೆರಳಿದ ಪೊಲೀಸರು

    – ಇದು ಕಾರ್ಯಕರ್ತರ ಗೆಲುವು ಎಂದ ಕಟೀಲ್‌
    – ಬೆಳಗ್ಗೆಯಿಂದ ಪೂಂಜಾ ನಿವಾಸದಲ್ಲಿ ಭಾರೀ ಹೈಡ್ರಾಮಾ

    ಮಂಗಳೂರು: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಾ (Beltangady BJP MLA Harish Poonja) ಅವರನ್ನು ಬಂಧನ ಮಾಡದೇ ಇರಲು ಪೊಲೀಸರು ನಿರ್ಧರಿಸಿದ್ದಾರೆ. ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗುವಂತೆ ಶಾಸಕರಿಗೆ ತಿಳಿಸಿ ತೆರಳಿದ್ದಾರೆ.

    ಸಂಜೆ ಮಾಧ್ಯಮಗಳ ಜೊತೆ ಮಾತನಾಡಿದ ಹರೀಶ್‌ ಪೂಂಜಾ, ಅಕ್ರಮ ಕಲ್ಲಿನ ಕೋರೆ ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ (BJP Yuva Morcha) ಅಧ್ಯಕ್ಷ ಶಶಿಧರ್‌ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೂ ಶಶಿಧರ್‌ ಶೆಟ್ಟಿಗೂ ಯಾವುದೇ ಸಂಬಂಧವಿಲ್ಲ. ಉದ್ದೇಶಪೂರ್ವಕವಾಗಿ ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಈ ಕಾರಣಕ್ಕೆ ನಾನು ಪ್ರತಿಭಟಿಸಿದ್ದೆ ಎಂದು ತಿಳಿಸಿದರು.

    ಅಂದು ಅಧಿಕಾರಕ್ಕಾಗಿ ಸಿದ್ದರಾಮಯ್ಯನವರು ಬಿದರಿ ಅವರ ಕಾಲರ್‌ ಪಟ್ಟಿ ಹಿಡಿದಿದ್ದರು. ನಾನು ಅಧಿಕಾರಕ್ಕೆ ಪೊಲೀಸರ ವಿರುದ್ಧ ಮಾತನಾಡಿಲ್ಲ. ಕಾರ್ಯಕರ್ತನ ಪರವಾಗಿ ನಾನು ಮಾತನಾಡಿದ್ದೇನೆ. ಅಮಾಯಕನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಾನೆ ಎಂಬ ಕಾರಣಕ್ಕೆ ಕೇಸ್‌ ಹಾಕಲಾಗಿದೆ. ಕಾಂಗ್ರೆಸ್‌ನ ದ್ವೇಷದ ರಾಜಕಾರಣವನ್ನು ನಾವು ಸಹಿಸುವುದಿಲ್ಲ ಎಂದು ಹೇಳಿದರು.

    ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ದಕ್ಷಿಣ ಕನ್ನಡದ ಎಲ್ಲಾ ಬಿಜೆಪಿ ಶಾಸಕರು, ಹಾಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ಇಲ್ಲಿಗೆ ಆಗಮಿಸಿದ್ದಾರೆ. ನೋಟಿಸ್‌ ನೀಡದೇ ಬಂಧನ ಮಾಡುವ ಪ್ರಯತ್ನ ನಡೆದಿತ್ತು. ಈಗ ನೋಟಿಸ್‌ ನೀಡಿ ಹೋಗಿದ್ದಾರೆ. ಮೊದಲ ಹಂತದ ಗೆಲುವು ಕಾರ್ಯಕರ್ಯರಿಗೆ ಮತ್ತು ಪೂಂಜಾ ಅವರಿಗೆ ಸಿಕ್ಕಿದೆ ಎಂದರು.

    ಇವತ್ತು ಬೆಳಗ್ಗೆಯೇ ಹರೀಶ್ ಪೂಂಜಾ ಬಂಧಿಸಲು ಪೊಲೀಸರು ಅವರ ಗರ್ಡಾಡಿಯ ಮನೆಗೆ ಬಂದಿದ್ದರು. ಹರೀಶ್ ಪೂಂಜಾ ಮಾತ್ರ ನಾನು ಬರುವುದಿಲ್ಲ ಎಂದು ಹೇಳಿದರು. ಹರೀಶ್ ಪೂಂಜಾ ಮಾತ್ರ ನಾನು ಬರುವುದಿಲ್ಲ ಎಂದು ಹೇಳಿದರು. ವಿಷಯ ತಿಳಿದ ಪೂಂಜಾ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಸೇರಿದರು.

    ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆಯುತ್ತಿದ್ದಂತೆ ಹರೀಶ್ ಪೂಂಜಾ ಮನೆಗೆ ಹೆಚ್ಚುವರಿ ಪೋಲಿಸರು ಆಗಮಿಸಿದರು. ಪುತ್ತೂರು ಡಿವೈಎಸ್ ಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ 150 ಕ್ಕೂ ಅಧಿಕ ಪೊಲೀಸ ಆಗಮಿಸಿದರು. ಆದರೆ ಪೊಲಿಸರನ್ನು ಮನೆಯ ಒಳಗೆ ಹೋಗಲು ಕಾರ್ಯಕರ್ತರು ಬಿಡಲಿಲ್ಲ.

    ಈ ಸಂದರ್ಭದಲ್ಲಿ ಡಿವೈಎಸ್‌ಪಿ ಹಾಗೂ ಸರ್ಕಲ್ ಪೋಲಿಸ್ ಅಧಿಕಾರಿಗಳು ಹರೀಶ್‌ ಪೂಂಜಾ ಜೊತೆ ಮಾತುಕತೆ ನಡೆಸಿದರು. ವಕೀಲರು ಸ್ಥಳಕ್ಕೆ ಆಗಮಿಸಿ ನೋಟಿಸ್‌ ನೀಡದೇ ಬಂಧನ ಮಾಡುವುದು ಎಷ್ಟು ಸರಿ. ಈ ಪ್ರಕರಣಕ್ಕೆ ಜಾಮೀನು ರಹಿತ ಸೆಕ್ಷನ್‌ ಸೇರಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಬೆಳಗ್ಗೆಯಿಂದ ಸಂಜೆಯವರೆಗೂ ಭಾರೀ ಹೈಡ್ರಾಮಾ ನಡೆದು ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿ ಬಂಧನ ಮಾಡದೇ ತೆರಳಿದರು.

    ಶಾಸಕರು ಏನೋ ಉದ್ವೇಗದಿಂದ ಮಾತಾಡಿದ್ದಾರೆ. ಆದರೆ ದುರುದ್ದೇಶದಿಂದ ಕೂಡಿಲ್ಲ. ಇದನ್ನೇ ನೆಪ ಮಾಡಿಕೊಂಡು ಶಾಸಕರ ಬಂಧನಕ್ಕೆ ಮುಂದಾಗಿರುವುದು ಸರಿಯಲ್ಲ. ಮುಂದೆ ಆಗುವ ಅನಾಹುತಗಳಿಗೆ ಪೊಲೀಸರೇ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದರು.

     

    ಹರೀಶ್‌ ಪೂಂಜಾ ಅವರನ್ನು ಬಂಧನ ಮಾಡಿದರೆ ನಾಳೆ ದಕ್ಷಿಣ ಕನ್ನಡ ಬಂದ್‌ಗೆ ಕರೆ ನೀಡಲಾಗುವುದು ಎಂದು ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದರು.

    ಏನಿದು ಪ್ರಕರಣ?
    ಅನುಮತಿ ಪಡೆಯದೇ ಪ್ರತಿಭಟನೆ (Protest) ನಡೆಸಿ ಬೆಳ್ತಂಗಡಿ ಪೊಲೀಸರಿಗೆ ಬೆದರಿಕೆ ಅರೋಪದ ಮೇಲೆ ಹರೀಶ್ ಪೂಂಜಾ ವಿರುದ್ಧ ಕೇಸ್ ದಾಖಲಾಗಿತ್ತು. ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸ್ತೇನೆ ಎಂದು ಹರೀಶ್ ಪೂಂಜಾ ಬೆದರಿಕೆ ಹಾಕಿದ್ದರು. ಈ ಸಂಬಂಧ ಬೆಳ್ತಂಗಡಿ ಬಿಜೆಪಿ ಶಾಸಕರ ವಿರುದ್ಧ ಐಪಿಸಿ 143, 147, 341, 504, 506 ಜೊತೆಗೆ 149 ಸೆಕ್ಷನ್‌ಗಳ ಅಡಿ ಒಟ್ಟು ಎರಡು ಕೇಸ್ ದಾಖಲಾಗಿತ್ತು.

  • ಹರೀಶ್‌ ಪೂಂಜಾ ಬಂಧನಕ್ಕೆ ಮುಂದಾದ ಪೊಲೀಸರು – ಬೆಳ್ತಂಗಡಿಯಲ್ಲಿ ಹೈಡ್ರಾಮಾ

    ಹರೀಶ್‌ ಪೂಂಜಾ ಬಂಧನಕ್ಕೆ ಮುಂದಾದ ಪೊಲೀಸರು – ಬೆಳ್ತಂಗಡಿಯಲ್ಲಿ ಹೈಡ್ರಾಮಾ

    ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ಬಂಧನಕ್ಕೆ ಪೊಲೀಸರು ಮುಂದಾಗಿದ್ದು, ಬೆಳ್ತಂಗಡಿಯಲ್ಲಿ (Belthangady) ಇಡೀ ದಿನ ಭಾರೀ ಹೈಡ್ರಾಮಾ ನಡೆಯಿತು.

    ಇವತ್ತು ಬೆಳಗ್ಗೆಯೇ ಹರೀಶ್ ಪೂಂಜಾ ಬಂಧಿಸಲು ಪೊಲೀಸರು ಅವರ ಗರ್ಡಾಡಿಯ ಮನೆಗೆ ಬಂದಿದ್ದರು. ಹರೀಶ್ ಪೂಂಜಾ ಮಾತ್ರ ನಾನು ಬರುವುದಿಲ್ಲ ಎಂದು ಹೇಳಿದರು. ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ ಕಾರಣ  ಭಾರೀ ಸಂಖ್ಯೆಯಲ್ಲಿ ಪೊಲೀಸರು ಸಹ ಆಗಮಿಸಿದ್ದರು.   ಇನ್ನೊಂದು ಕಡೆ ವಕೀಲರು ಸಹ ಮನೆಗೆ ಆಗಮಿಸಿದರು.

    ವಿಷಯ ತಿಳಿದ ಪೂಂಜಾ ಬೆಂಬಲಿಗರು ಭಾರೀ ಸಂಖ್ಯೆಯಲ್ಲಿ ಸೇರಿದರು. ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಾ (Brijesh Chauta) ಸೇರಿ ಹಲವರು ಆಗಮಿಸಿದರು. ಯಾವುದೇ ಕಾರಣಕ್ಕೂ ಪೂಂಜಾ ಬಂಧಿಸಬಾರದು. ಪೊಲೀಸರು ವಾಪಸ್ ಹೋಗ್ಬೇಕು ಎಂದು ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದರು.

    ಉದ್ದೇಶಪೂರ್ವಕವಾಗಿ ಪೂಂಜಾರನ್ನು ಜೈಲಿಗೆ ಕಳಿಸುವ ಷಡ್ಯಂತ್ರ ನಡೆದಿದೆ ಎಂದು ಆಕ್ರೋಶ ಹೊರಹಾಕಿದರು. ಶಾಸಕರು ಏನೋ ಉದ್ವೇಗದಿಂದ ಮಾತಾಡಿದ್ದಾರೆ. ಆದರೆ ದುರುದ್ದೇಶದಿಂದ ಕೂಡಿಲ್ಲ. ಇದನ್ನೇ ನೆಪ ಮಾಡಿಕೊಂಡು ಶಾಸಕರ ಬಂಧನಕ್ಕೆ ಮುಂದಾಗಿರೋದು ಸರಿಯಲ್ಲ. ಮುಂದೆ ಆಗುವ ಅನಾಹುತಗಳಿಗೆ ಪೊಲೀಸರೇ ಹೊಣೆ ಆಗ್ತಾರೆ ಎಂದು ಬಿಜೆಪಿ ಎಚ್ಚರಿಕೆ ನೀಡಿತ್ತು.

     

    ಪ್ರತಿಭಟನೆ ಜೋರಾಗುತ್ತಿದ್ದಂತೆ ಪೊಲೀಸರು ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿ  ಹರೀಶ್‌ ಪೂಂಜಾ ಅವರಿಗೆ ನೋಟಿಸ್‌ ಜಾರಿ ಮಾಡಿ ತೆರಳಿದರು.

    ಅನುಮತಿ ಪಡೆಯದೇ ಪ್ರತಿಭಟನೆ (Protest) ನಡೆಸಿ ಬೆಳ್ತಂಗಡಿ ಪೊಲೀಸರಿಗೆ ಬೆದರಿಕೆ ಅರೋಪದ ಮೇಲೆ ಹರೀಶ್ ಪೂಂಜಾ ವಿರುದ್ಧ ಕೇಸ್ ದಾಖಲಾಗಿತ್ತು. ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸ್ತೇನೆ ಎಂದು ಹರೀಶ್ ಪೂಂಜಾ ಬೆದರಿಕೆ ಹಾಕಿದ್ದರು.

    ಈ ಸಂಬಂಧ ಬೆಳ್ತಂಗಡಿ ಬಿಜೆಪಿ ಶಾಸಕರ ವಿರುದ್ಧ ಐಪಿಸಿ 143, 147, 341, 504, 506 ಜೊತೆಗೆ 149 ಸೆಕ್ಷನ್‌ಗಳ ಅಡಿ ಒಟ್ಟು ಎರಡು ಕೇಸ್ ದಾಖಲಾಗಿತ್ತು.

     

  • ಬೆಳ್ತಂಗಡಿಯ ಕಾರ್ಯಕರ್ತರನ್ನ ಮುಟ್ಟಿದ್ರೆ ಪೊಲೀಸರ ಕಾಲರ್ ಹಿಡಿಯಲೂ ರೆಡಿ: ಹರೀಶ್ ಪೂಂಜಾ ವಿವಾದ

    ಬೆಳ್ತಂಗಡಿಯ ಕಾರ್ಯಕರ್ತರನ್ನ ಮುಟ್ಟಿದ್ರೆ ಪೊಲೀಸರ ಕಾಲರ್ ಹಿಡಿಯಲೂ ರೆಡಿ: ಹರೀಶ್ ಪೂಂಜಾ ವಿವಾದ

    ಮಂಗಳೂರು: ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರನ್ನ ಮುಟ್ಟಿದ್ರೆ ಪೊಲೀಸರ ಕಾಲರ್ ಹಿಡಿಯಲು ನಾನು ರೆಡಿ ಎಂದು ಶಾಸಕ ಹರೀಶ್ ಪೂಂಜಾ (Harish Poonja) ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

    ಬೆಳ್ತಂಗಡಿ (Belthangady) ತಾಲೂಕು ಕಚೇರಿ ಮುಂಭಾಗದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಎಸ್‍ಪಿಗೆ (Dakshina Kannada SP) ಬುದ್ಧಿ ಇಲ್ಲ. ಕಾಂಗ್ರೆಸ್ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಭಟನೆಯಲ್ಲಿ ಪೊಲೀಸರಿಗೆ ಹರೀಶ್ ಪೂಂಜಾ ಅವಾಜ್ ಹಾಕಿದ್ದಾರೆ. ಇದನ್ನೂ ಓದಿ: ಶಾಸಕ ಹರೀಶ್‌ ಪೂಂಜಾ ವಿರುದ್ಧ ಎಫ್‌ಐಆರ್‌!

    ನನ್ನ ಕಾರ್ಯಕರ್ತರನ್ನ, ಬಿಜೆಪಿ ಕಾರ್ಯಕರ್ತರನ್ನು ಅರೆಸ್ಟ್ ಮಾಡಿ ವಿನಾಕಾರಣ ಒಳಗೆ ಕೂರಿಸಿದಾಗ ನಾನು ಅಧಿಕಾರಯುತವಾಗಿಯೇ ಮಾತನಾಡೋದು. ಒಬ್ಬ ನಿರಪರಾಧಿಗೆ ಅನ್ಯಾಯವಾಗದಂತೆ ನೋಡಿಕೊಳ್ಳೋದು ನನ್ನ ಜವಾಬ್ದಾರಿ. ಮೊನ್ನೆನೂ ಅಷ್ಟೇ ಮಾತನಾಡಿದ್ದು. ಜನತಾ ಪಾರ್ಟಿಯ ಕಾರ್ಯಕರ್ತರ ಪರವಾಗಿ, ಬೆಳ್ತಂಗಡಿಯ ಮತದಾರರಿಗೆ ಅನ್ಯಾಯ ಆಗುತ್ತೆ ಅಂತಾದ್ರೆ ನಾನು ಜೈಲಲ್ಲಿ ಕೂರಲೂ ರೆಡಿ ಇದ್ದೇನೆ ಎಂದು ಆಕ್ರೋಶದ ಮಾತುಗಳನ್ನಾಡಿದರು. 

    ಜಿಲ್ಲಾ ವರಿಷ್ಠಾಧಿಕಾರಿಯವರ ತಲೆಯಲ್ಲಿ ಕೂದಲಿಲ್ಲ, ಎಸ್ ಪಿಯ ತಲೆಯಲ್ಲಿ ಕೂದಲಿಲ್ಲ. ನೋಡಿದ್ದೀರ ನೀವೂ, ನಾನು ಬರೇ ಕೂದಲಿಲ್ಲ ಅಂದುಕೊಂಡಿದ್ದೆ, ಒಳಗೆ ಮೆದುಳೂ ಇಲ್ಲ ಅಂತ ಈಗ ಗೊತ್ತಾಯ್ತು. ಇವರು ಯಾವ ರೀತಿ ಷಡ್ಯಂತ್ರ ಮಾಡಿದ್ದಾರೆ ಅಂದ್ರೆ ಶಶಿಯನ್ನು ಅರೆಸ್ಟ್ ಮಾಡಿದಾಕ್ಷಣ ಇನ್ಸ್‍ಪೆಕ್ಟರ್‍ಗೆ ಫೋನ್ ಮಾಡಿದ್ರೆ ಫೋನ್ ರಿಸೀವ್ ಮಾಡಲ್ಲ. ಎಷ್ಟು ಸಲ ಕಾಲ್ ಮಾಡಿದರೂ ರಾತ್ರಿ ನನ್ನ ಫೋನ್ ಕರೆಗೆ ಉತ್ತರಿಸಲಿಲ್ಲ. ಎಸ್‍ಪಿ ಕಾಂಗ್ರೆಸ್ ಏಜೆಂಟ್ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಅಂತ ಕಿಡಿಕಾರಿದ್ದಾರೆ.