Tag: ಹರೀಶ್ ಪೂಂಜಾ

  • ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‍ಐಆರ್ ದಾಖಲು

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‍ಐಆರ್ ದಾಖಲು

    ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆ (Belthangady Police Station) ಯಲ್ಲಿ ಎಫ್‍ಐಆರ್ ದಾಖಲಾಗಿದೆ.

    ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತಾ ಕೆ.ಪೂಜಾರಿ ನೀಡಿರುವ ದೂರಿನಡಿ ಪೊಲೀಸರು ಐಪಿಸಿ ಸೆಕ್ಷನ್ 153 (ಗಲಭೆಯನ್ನು ಉಂಟುಮಾಡುವ ಉದ್ದೇಶದಿಂದ ಪ್ರಚೋದನೆಯನ್ನು ನೀಡುವುದು), 153ಎ (ದ್ವೇಷದ ಭಾವನೆಗೆ ಉತ್ತೇಜನ), 505 (ಸಾರ್ವಜನಿಕ ಕಿಡಿಗೇಡಿತನವನ್ನು ಉಂಟುಮಾಡುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೋಮು ಪ್ರಚೋದಕ ಹಾಗೂ ದ್ವೇಷ ಉಂಟಾಗುವ ಭಾಷಣ ಮಾಡಿದ ಆರೋಪದ ಮೇಲೆ ಈ ಕೇಸ್ ದಾಖಲಾಗಿದೆ.

    ಏನಿದು ಪ್ರಕರಣ..?: ಇತ್ತೀಚೆಗೆ ಬೆಳ್ತಂಗಡಿಯ ಕಿನ್ಯಮ್ಮ ಸಭಾಭವನದಲ್ಲಿ ಬಿಜೆಪಿ (BJP) ಯ ಅಭಿನಂದನಾ ಕಾರ್ಯಕ್ರಮ ನಡೆದಿತ್ತು. ಈ ವೇಳೆ ತುಳುವಿನಲ್ಲಿ ಮಾತನಾಡುತ್ತಾ 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ (Siddaramaiah) ಹತ್ಯೆ ಮಾಡಿದ್ದಾರೆ ಎಂದು ಹೇಳುವ ಮೂಲಕ ಶಾಸಕರು ಎಡವಟ್ಟು ಮಾಡಿದ್ದರು. ಇದನ್ನೂ ಓದಿ: 24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ: ಹರೀಶ್ ಪೂಂಜಾ

    ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್ (Congress) ಪರ ಪ್ರಚಾರ ನಡೆಸಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಶಾಸಕರು, ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ನಾಯಕರ ಬಗ್ಗೆಯೂ ಗರಂ ಆಗಿದ್ದರು. ಹೀಗೆ ಮಾತನಾಡುತ್ತಾ ಸಿಎಂ ವಿರುದ್ಧ ಕೊಲೆ ಆರೋಪ ಮಾಡಿದ್ದರು. ಇದಾದ ಬೆನ್ನಲ್ಲೇ ಪೂಂಜಾ ಭಾಷಣದ ತುಣುಕು ಸಾಮಾಜಿಕ ಜಾಲತಾಣಲ್ಲಿ ವೈರಲ್ ಆಗಿದ್ದು, ಕೈ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಮುಂದಿನ ದಿನಗಳು ಹಿಂದೂಗಳಿಗೆ ಕಠಿಣವಾಗಲಿದೆ: ಕೋಟ ಶ್ರೀನಿವಾಸ ಪೂಜಾರಿ

    ಕೊಲೆ ಆರೋಪ ಮಾಡಿದ್ದು ಯಾಕೆ..?; ಹಿಂದೂ ನಾಯಕ ಸತ್ಯಜಿತ್ ಸುರತ್ಕಲ್ (Satyajit Suratkal) ಅವರು ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದರು. ಈ ವಿಚಾರವನ್ನು ತಮ್ಮ ಭಾಷಣದ ವೇಳೆ ಪ್ರಸ್ತಾಪ ಮಾಡಿದ ಶಾಸಕರು, 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರಿ. ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರಿ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ ಎಂದು ಶಾಸಕರು ಹೇಳಿದ್ದರು.

  • 24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ: ಹರೀಶ್ ಪೂಂಜಾ

    24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ: ಹರೀಶ್ ಪೂಂಜಾ

    ಮಂಗಳೂರು: 24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ (Siddaramaiah) ಹತ್ಯೆ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ಶಾಸಕ ಹರೀಶ್ ಪೂಂಜಾ (Harish Poonja) ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

    ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ನಾಯಕರು ಕಾಂಗ್ರೆಸ್ (Congress) ಪರ ಮತಪ್ರಚಾರ ಮಾಡಿದ್ದಕ್ಕಾಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸತ್ಯಜಿತ್ ಸುರತ್ಕಲ್ ವಿರುದ್ಧ ವಾಗ್ದಾಳಿ ನಡೆಸುವ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಮೇಲೆ ಕೊಲೆ ಆರೋಪ ಹೊರಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಕೇಳಲು ನೀವು ಯಾರು? – ಏರು ಧ್ವನಿಯಲ್ಲೇ ಡಿಕೆ ಸುರೇಶ್‌, ಎಂಬಿ ಪಾಟೀಲ್‌ ಫೈಟ್‌

    ನಾನು ಹಿಂದುತ್ವಕ್ಕೆ ದ್ರೋಹ ಮಾಡಿದ್ದರೆ ನೀವು ಬಂದು ಇಲ್ಲಿ ಹರೀಶ್ ಪೂಂಜಾನನ್ನು ಸೋಲಿಸಲು ಪ್ರಯತ್ನ ಮಾಡಿದ್ದನ್ನು ನಾನು ಒಪ್ಪಿಕೊಳ್ಳುತ್ತಿದ್ದೆ. ನಾನು ಹಿಂದುತ್ವದ ಸಿದ್ಧಾಂತವನ್ನು ಬಿಟ್ಟಿದ್ದರೆ ನೀವು ಇಲ್ಲಿ ಬಂದು ಹಿಂದುತ್ವದ ವಿರುದ್ಧ ಕಾಂಗ್ರೆಸ್‌ಗೆ ಮತ ಹಾಕಿ ಎಂದಿದ್ದರೆ ನಾನು ಒಪ್ಪಿಕೊಳ್ಳುತ್ತಿದ್ದೆ. ಸತ್ಯಣ್ಣ ನಿಮ್ಮ ಹತ್ತಿರ ಒಂದು ಕೇಳುತ್ತೇನೆ. 24 ಜನ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದಂತಹ ಸಿದ್ದರಾಮಯ್ಯಗೆ ಮತ ಕೇಳಿದ್ದೀರಿ. ಬಜರಂಗದಳವನ್ನು (Bajarang Dal) ಬ್ಯಾನ್ ಮಾಡುತ್ತೇವೆ ಎಂದು ಹೇಳಿದ ಕಾಂಗ್ರೆಸ್‌ಗೆ ನೀವು ವೋಟು ಕೇಳಿದ್ದೀರಿ. ಇವತ್ತು ಬೆಳ್ತಂಗಡಿ ತಾಲೂಕಿನ ಜನ ಸತ್ಯಣ್ಣ ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಕೇಳುತ್ತಿದ್ದಾರೆ. ಇದಕ್ಕೆ ಸತ್ಯಣ್ಣ ಉತ್ತರ ಕೊಡಬೇಕು ಎಂದು ಸಿದ್ದರಾಮಯ್ಯ ಅವರ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಗುರುವಾರ ಜೆಡಿಎಸ್‌ನಿಂದ ಪರಾಮರ್ಶೆ ಸಭೆ – ಮತ್ತೆ ಸಿನಿಮಾದತ್ತ ನಿಖಿಲ್ ಒಲವು

    ಸಿದ್ದರಾಮಯ್ಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಲಾಭ ಪಡೆಯಲು ದುಂಬಾಲು – ಬೆಂಗಳೂರಿನಲ್ಲಿ ಬಿಪಿಎಲ್ ಕಾರ್ಡ್‍ಗೆ ಫುಲ್‌ ಡಿಮ್ಯಾಂಡ್‌

  • ಹರೀಶ್ ಪೂಂಜಾ ಕೊಲೆ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್ – ಆರೋಪಿ ರಿಯಾಜ್ ವಶಕ್ಕೆ

    ಹರೀಶ್ ಪೂಂಜಾ ಕೊಲೆ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್ – ಆರೋಪಿ ರಿಯಾಜ್ ವಶಕ್ಕೆ

    ಮಂಗಳೂರು: ಬೆಳ್ತಂಗಡಿ (Belthangady)  ಶಾಸಕ ಹರೀಶ್ ಪೂಂಜಾ ಅವರಿಗೆ (Harish Poonja) ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಯಾಜ್ ಎಂಬಾತನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇದು ಕೊಲೆಯತ್ನ ಪ್ರಕರಣವಲ್ಲ, ಕಾರ್ ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆಯಾಗಿದೆ ಎಂಬ ಸತ್ಯ ಬಯಲಾಗಿದೆ.

    ನಿನ್ನೆ ರಾತ್ರಿ ಮಂಗಳೂರಿನ (Mangaluru) ಫರಂಗಿಪೇಟೆ ಬಳಿಕ ಶಾಸಕರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ತಲ್ವಾರ್ ಝಳಪಿಸಿ, ಕಾರಿನ ಗಾಜುಗಳನ್ನು ಜಖಂ ಮಾಡಿದ್ದಾರೆ. ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಶಾಸಕ ಹರೀಶ್ ಪೂಂಜಾರ ಕಾರ್ ಚಾಲಕ ನವೀನ್ ಪೊಲೀಸರಿಗೆ ದೂರು ನೀಡಿದ್ದರು. ಇದನ್ನೂ ಓದಿ: ಹರೀಶ್‌ ಪೂಂಜಾ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿ ದುಷ್ಕರ್ಮಿಯಿಂದ ಜೀವ ಬೆದರಿಕೆ

    ಆ ಬಳಿಕ ಪೊಲೀಸರು ತನಿಖೆ ಆರಂಭಿಸಿ ಸ್ಕಾರ್ಪಿಯೋ ಕಾರಿನಲ್ಲಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಂತರ ಪ್ರಕರಣದ ಬಗ್ಗೆ ದ.ಕ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮಾಧ್ಯಮ ಹೇಳಿಕೆ ನೀಡಿದ್ದು, ಇದು ಕೊಲೆಯತ್ನ ಪ್ರಕರಣವಲ್ಲ. ಓವರ್ ಟೇಕ್ ಮಾಡುವ ಭರದಲ್ಲಿ ಮಾಡಿದಾಗ ನಡೆದ ಘಟನೆಯಾಗಿದೆ. ಸ್ಕಾರ್ಪಿಯೋ ಕಾರಿನಲ್ಲಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ. ಆರೋಪಿಯ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿಲ್ಲ ಪ್ರಕರಣದ ಬಗ್ಗೆ ತನಿಖೆ ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭೂತಾನ್‍ನಿಂದ 17 ಸಾವಿರ ಟನ್ ಅಡಿಕೆ ಆಮದಿಗೆ ಮುಂದಾದ ಕೇಂದ್ರ – ರೈತರಿಂದ ವಿರೋಧ

    ಈ ಘಟನೆ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಹರೀಶ್ ಪೂಂಜಾ, ಇದರ ಹಿಂದೆ ಜಿಹಾದಿ ಶಕ್ತಿಗಳಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ನಾನು ಹಿಂದುತ್ವದ ಪರವಾಗಿ ಕೆಲಸ ಮಾಡುವ ಶಾಸಕ. ಇದಕ್ಕೆ ನನ್ನ ಮೇಲೆ ಜಿಹಾದಿ ಶಕ್ತಿಗಳು ಹಗೆ ಸಾಧಿಸುವ ಸಾಧ್ಯತೆ ಇದೆ. ಆದ್ರೆ ಇದಕ್ಕೆ ನಾವು ಹೆದರಲ್ಲ. ಹಿಂದುತ್ವದ ವಿಚಾರದಲ್ಲಿ ರಾಜಿಯಾಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹರೀಶ್‌ ಪೂಂಜಾ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿ ದುಷ್ಕರ್ಮಿಯಿಂದ ಜೀವ ಬೆದರಿಕೆ

    ಹರೀಶ್‌ ಪೂಂಜಾ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿ ದುಷ್ಕರ್ಮಿಯಿಂದ ಜೀವ ಬೆದರಿಕೆ

    ಮಂಗಳೂರು: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ(Harish Poonja) ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಯೊಬ್ಬ ತಲವಾರು ಝಳಪಿಸಿದ ಘಟನೆ ಮಂಗಳೂರು ಹೊರವಲಯದ ಫರಂಗಿಪೇಟೆಯಲ್ಲಿ ನಡೆದಿದೆ.

    ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದ ಹರೀಶ್ ಪೂಂಜಾ ತನ್ನ ಕಾರನ್ನು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ರಾತ್ರಿ ತೆರಳುತ್ತಿದ್ದರು.

    ಫರಂಗಿಪೇಟೆಯಲ್ಲಿ ಕಾರನ್ನು ಹಿಂದಿಕ್ಕಿ ಅವ್ಯಾಚ್ಯವಾಗಿ ಬೈದು ತಲವಾರು ಝಳಪಿಸಿ ದುಷ್ಕರ್ಮಿ ಪರಾರಿಯಾಗಿದ್ದಾನೆ. ಗುರುವಾರ ರಾತ್ರಿ 11:30ರ ವೇಳೆಗೆ ಈ ಘಟನೆ ನಡೆದಿದ್ದು ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಹರೀಶ್‌ ಪೂಂಜಾ ಅವರ ಕಾರು ಚಾಲಕ ನವೀನ್‌ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

    ದೂರಿನಲ್ಲಿ ಏನಿದೆ?
    ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಹರೀಶ್‌ ಪೂಂಜಾ ಸರ್ಕೂಟ್ ಹೌಸ್‌ಗೆ ಹೋಗಿದ್ದರು. ರಾತ್ರಿ ಅಲ್ಲಿಂದ ಶಾಸಕರು ತಮ್ಮ ಸಂಬಂಧಿಕರಾದ ಪ್ರಶಾಂತ್‌ ಮತ್ತು ಕುಶಿತ್ ಅವರ ಕಾರಿನಲ್ಲಿ ಬೆಳ್ತಂಗಡಿಗೆ ಬರುತ್ತಿದ್ದರೆ ನಾನು ಆ ಕಾರನ್ನು ಹಿಂಬಾಲಿಕೊಂಡು ಬರುತ್ತಿದ್ದೆ. ಇದನ್ನೂ ಓದಿ: ಕಾಂತಾರ: ಬಾಲಿವುಡ್‌ನಲ್ಲಿ ಧೂಳ್, ತಮಿಳಿನ ಟ್ರೇಲರ್‌ಗೂ ಸಖತ್ ರೆಸ್ಪಾನ್ಸ್

    ನಂತೂರು, ಪಡೀಲ್ ಮಾರ್ಗವಾಗಿ ಬರುತ್ತಿದ್ದಾಗ ನಾಗುರಿ ರೈಲ್ವೇ ಸೇತುವೆಯ ಬಳಿ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರು ನಮ್ಮ ಕಾರನ್ನು ಹಿಂಬಾಲಿಸಿಕೊಂಡು ಬರುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಕೂಡಲೇ ನಾನು ಫೋನ್‌ ಮೂಲಕ ಶಾಸಕರಿಗೆ ಈ ವಿಚಾರ ತಿಳಿಸಿದೆ.

    ಫರಂಗಿಪೇಟೆ ಮೀನು ಮಾರ್ಕೆಟ್ ನ ಸ್ವಲ್ಪ ಮುಂದಕ್ಕೆ ತಲುಪುತ್ತಿದ್ದಂತೆ ರಾತ್ರಿ 11:15ರ ವೇಳೆ ಶಾಸಕರಿದ್ದ ಕಾರಿಗೆ ಅಡ್ಡಲಾಗಿ ಬಂದು ಚಾಲಕ ಕುಕಿತ್ ರವರನ್ನು ಉದ್ದೇಶಿಸಿ ರ.. ಮಕ್ಕಳೇ ಎಂದು ಬೈದು ತನ್ನ ಕೈಯಲ್ಲಿದ್ದ ಆಯುಧವನ್ನು ತೋರಿಸಿ ಜೀವ ಬೆದರಿಕೆ ಹಾಕಿ ಕಾರನ್ನು ರಭಸವಾಗಿ ಬಿಸಿರೋಡು ಕಡೆಗೆ ಚಲಾಯಿಸಿಕೊಂಡು ಹೋಗಿದ್ದಾನೆ. ಈತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುತ್ತಿದ್ದೇನೆ.

    Live Tv
    [brid partner=56869869 player=32851 video=960834 autoplay=true]

  • ತಾಕತ್ತಿನಿಂದ ಹೇಳ್ತೇನೆ, ನನಗೆ ಮುಸ್ಲಿಮರ ಮತಗಳು ಬೇಡ, ಹಿಂದೂಗಳ ಮತಗಳಷ್ಟೇ ಸಾಕು: ಹರೀಶ್ ಪೂಂಜಾ

    ತಾಕತ್ತಿನಿಂದ ಹೇಳ್ತೇನೆ, ನನಗೆ ಮುಸ್ಲಿಮರ ಮತಗಳು ಬೇಡ, ಹಿಂದೂಗಳ ಮತಗಳಷ್ಟೇ ಸಾಕು: ಹರೀಶ್ ಪೂಂಜಾ

    ಮಂಗಳೂರು: ನನಗೆ ಮುಸ್ಲಿಮರ ಮತಗಳು ಬೇಡ, ಹಿಂದೂಗಳ ಮತಗಳಷ್ಟೇ ಸಾಕು ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಬೆಳ್ತಂಗಡಿಯ ಧಾರ್ಮಿಕ ಸಭಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಸ್ಪರ್ಧಿಸಲು ಸಂಘದ ಹಿರಿಯರು ಸೂಚಿಸಿದ್ರೆ ಸ್ಪರ್ಧೆ ಮಾಡುತ್ತೇನೆ. ಆದರೆ ಆಗ ತಾಕತ್ತಿನಿಂದ ಹೇಳ್ತೇನೆ, ನನಗೆ ಮುಸ್ಲಿಮರ ವೋಟ್ ಬೇಡ. ನನಗೆ ಕೇವಲ ಹಿಂದೂಗಳ ವೋಟ್ ಅಷ್ಟೇ ಸಾಕು. ಯಾಕೆಂದರೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಆಗಬೇಕು. ಕಾಶಿಯಲ್ಲಿ ವಿಶ್ವನಾಥ ದೇವರ ಮಂದಿರ ನಿರ್ಮಾಣ ಆಗಬೇಕು. ದತ್ತ ಪೀಠದಲ್ಲಿ ದತ್ತಾತ್ರೇಯರ ಪೀಠ ನಿರ್ಮಾಣ ಆಗಬೇಕು. ಹೀಗಾಗಿ ಬಹಳ ಧೈರ್ಯದಿಂದ ಹೇಳ್ತೇನೆ ನನಗೆ ಮುಸ್ಲಿಮರ ಮತಗಳು ಬೇಡ ಎಂದು ತುಳು ಭಾಷೆಯಲ್ಲಿ ಧಾರ್ಮಿಕ ಸಭೆಯೊಂದರಲ್ಲಿ ಗುಡುಗಿದ್ದಾರೆ. ಇದನ್ನೂ ಓದಿ: ಹಳೇಹುಬ್ಬಳ್ಳಿ ಗಲಭೆ ಪ್ರಕರಣ- 8 ಮಂದಿಗೆ ಜಾಮೀನು

    ಕಾಂಗ್ರೆಸ್ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತ ಹತ್ಯೆ ಆಗಿದೆ. ಕೆಂಪುಕೋಟೆ ಮೇಲೆ ಭಗವಾದ್ವಜ ಹಾರಿಸ್ತೀವಿ ಎಂದು ಹೇಳಿರುವ ಭಾಷಣದ ತುಣುಕುಗಳು ಭಾರೀ ವೈರಲ್ ಆಗಿದೆ. ಇದೀಗ ಈ ಹೇಳಿಕೆ ಮುಂದಿನ ಚುನಾವಣೆಯಲ್ಲಿ ಅವರ ಮತಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯ ಬಗ್ಗೆ ಮಾತುಗಳು ಕೇಳಿಬರುತ್ತಿದೆ. ಇದನ್ನೂ ಓದಿ: ಹುಡುಗಿಗೆ ಮೆಸೇಜ್ ಮಾಡಿದನೆಂದು ದಲಿತ ಯುವಕನ ಮೇಲೆ ಅಮಾನುಷ ಹಲ್ಲೆ – ಅರೆಬೆತ್ತಲೆ ಮೆರವಣಿಗೆ

  • ಕೆಂಪು ಕೋಟೆಯ ಮೇಲೆ ಭಗವಧ್ವಜ ಹಾರಿಸಿಯೇ ಸಿದ್ಧ: ಹರೀಶ್ ಪೂಂಜಾ

    ಕೆಂಪು ಕೋಟೆಯ ಮೇಲೆ ಭಗವಧ್ವಜ ಹಾರಿಸಿಯೇ ಸಿದ್ಧ: ಹರೀಶ್ ಪೂಂಜಾ

    ಮಂಗಳೂರು: ಕೆಂಪು ಕೋಟೆಯ ಮೇಲೆ ಭಗವಧ್ವಜ ಹಾರಿಸಿಯೇ ಸಿದ್ಧ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದ್ದಾರೆ.

    ಶಿವಮೊಗ್ಗದ ಹರ್ಷ ಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು. ತುಳು ಭಾಷೆಯಲ್ಲಿ ಹರೀಶ್ ಪೂಂಜಾ ಮಾಡಿದ ಭಾಷಣದ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಕಾಂಗ್ರೆಸ್ ಷಡ್ಯಂತ್ರ, ಪ್ರೇರಣೆ ಮತ್ತು ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.

    ಕೆಂಪು ಕೋಟೆ ಮೇಲೆ ಭಗವಧ್ವಜ ಹಾರಿಸ್ತೀವಿ ಅಂತ ಈಶ್ವರಪ್ಪ ಹೇಳಿದ್ರು ಅನ್ನೋ ಕಾರಣಕ್ಕೆ ಅಧಿವೇಶನ ಮೊಟಕುಗೊಳಿಸಿದ್ರು. ಆದರೆ ಬೆಳ್ತಂಗಡಿಯ ಈ ಸಭೆಯಲ್ಲಿ ಬೆಳ್ತಂಗಡಿ ಶಾಸಕನಾಗಿ ನಾನು ಹೇಳ್ತೀನಿ. ಈ ಹಿಂದೂ ಸಮಾಜ ಕೆಂಪು ಕೋಟೆಯ ಮೇಲೆ ಭಗವಧ್ವಜ ಹಾರಿಸಿಯೇ ಸಿದ್ಧ. ಆದರೆ ಕೆಂಪುಕೋಟೆಯ ಮೇಲೆ ಭಗವಧ್ವಜ ಹಾರಿಸೋದು ರಾಷ್ಟ್ರಧ್ವಜದ ಕೆಳಗೆ. ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜದ ಕೆಳಗೆ ಭಗವಧ್ವಜ ಹಾರಿಸೋದನ್ನ ಯಾವ ಪಕ್ಷದಿಂದಲೂ ತಪ್ಪಿಸೋದಕ್ಕೆ ಸಾಧ್ಯವೇ ಇಲ್ಲ ಎಂದು ಖಡಕ್ಕಾಗಿ ನುಡಿದರು. ಇದನ್ನೂ ಓದಿ: ತೆಲುಗು ಸೂಪರ್ ಸ್ಟಾರ್ ಬಾಲಯ್ಯ ಜತೆ ನಟಿಸಲ್ಲ ಅಂದ ಕನ್ನಡತಿ

    ಇದು ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಮಾಜದ ಸಂಕಲ್ಪ. ದೇಶಕ್ಕೆ ಸ್ವಾತಂತ್ರ್ಯ ಸಿಗಲು ಬಾಲಗಂಗಾಧರ ತಿಲಕರು ಭಗವಧ್ವಜ ಎದುರಿಟ್ಟು ಹೋರಾಟ ಮಾಡಿದರು. ಅದಕ್ಕೂ ಮೊದಲು ಹಿಂದೂ ಸಮಾಜದ ಶಕ್ತಿಯಾಗಿದ್ದ ಶಿವಾಜಿ ಮಹಾರಾಜರ ಶಕ್ತಿಯೂ ಭಗವಧ್ವಜ ಆಗಿದೆ ಎಂದರು.

  • ಮಹಿಳಾ ಅರಣ್ಯಾಧಿಕಾರಿಯನ್ನು ಪ್ರಭಾವ ಬಳಸಿ ವರ್ಗಾವಣೆ – ಹರೀಶ್ ಪೂಂಜಾ ವಿರುದ್ಧ ಗಂಭೀರ ಆರೋಪ

    ಮಹಿಳಾ ಅರಣ್ಯಾಧಿಕಾರಿಯನ್ನು ಪ್ರಭಾವ ಬಳಸಿ ವರ್ಗಾವಣೆ – ಹರೀಶ್ ಪೂಂಜಾ ವಿರುದ್ಧ ಗಂಭೀರ ಆರೋಪ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅರಣ್ಯ ಸಂಚಾರಿ ದಳದ ಮಹಿಳಾ ಅಧಿಕಾರಿ ಸಂಧ್ಯಾ ಸಚಿನ್‍ರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ತನ್ನ ಪ್ರಭಾವವನ್ನು ಬಳಸಿಕೊಂಡು ವರ್ಗಾವಣೆ ಮಾಡಿರುವ ಆರೋಪ ಕೇಳಿಬಂದಿದೆ.

    ದಕ್ಷಿಣ ಕನ್ನಡ ಜಿಲ್ಲಾ ಅರಣ್ಯ ಸಂಚಾರಿದಳದ ಪ್ರಭಾರ ಅಧಿಕಾರಿಯಾಗಿದ್ದ ಸಂಧ್ಯಾ ಸಚಿನ್, ಬೆಳ್ತಂಗಡಿ ತಾಲೂಕಿನ ಅಕ್ರಮ ಮರ ಸಾಗಾಟಗಾರರ ಮರಮಟ್ಟು, ವಾಹನ ವಶಪಡಿಸಿಕೊಂಡಿದ್ದರು. ಇದಕ್ಕೆ ಹರೀಶ್ ಪೂಂಜಾ ಆಕ್ಷೇಪ ವ್ಯಕ್ತಪಡಿಸಿದ್ದರು. ಆ ಬಳಿಕ ಹರೀಶ್ ಪೂಂಜಾ ಅರಣ್ಯ ಅಧಿಕಾರಿಯನ್ನು ಬೀದರ್‌ಗೆ ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದರು ಎಂಬ ಆರೋಪವಿದೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಮೋದಿ ದೀರ್ಘಾಯಸ್ಸು, ಆರೋಗ್ಯ ವೃದ್ಧಿಗಾಗಿ ಮಹಾಮೃತ್ಯುಂಜಯ ಯಾಗ

    ಸದ್ಯ ಬೀದರ್‌ನ ನೌಬಾದ್ ಅರಣ್ಯ ತರಬೇತಿ ಕೇಂದ್ರಕ್ಕೆ ಸಂಧ್ಯಾ ಸಚಿನ್ ವರ್ಗಾವಣೆಯಾಗಿದ್ದಾರೆ. ಈ ನಡುವೆ ಹರೀಶ್ ಪೂಂಜಾ, ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರಕ್ಕೆ ಬಸವರಾಜ ಬೊಮ್ಮಾಯಿ ಸಹಿ ಹಾಕಿರುವ ಪತ್ರದ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನು ಗಮನಿಸಿ ಶಾಸಕರು ಮರಗಳ್ಳರಿಗೆ ಬೆಂಬಲಿಸಿ ದ್ವೇಷದಿಂದ ವರ್ಗ ಮಾಡಿದ್ದಾರೆ ಎಂದು ಸಂಧ್ಯಾ ಸಚಿನ್ ಆರೋಪಿಸಿದ್ದಾರೆ. ಇದನ್ನೂ ಓದಿ: ನೈಟ್ ಕರ್ಫ್ಯೂ ರದ್ದು – ಸಿನಿಮಾಗೆ ಶೇ.50 ರಷ್ಟು ನಿರ್ಬಂಧ ಮುಂದುವರಿಕೆ

    ಶಾಸಕರು ಕೋಪಗೊಂಡು ನನ್ನಲ್ಲಿ ವೈಯಕ್ತಿಕ ದ್ವೇಷ ಹಗೆತನ ಸಾಧಿಸಿ ಬೀದರ್‌ಗೆ ವರ್ಗಾವಣೆ ಮಾಡಿದ್ದಾರೆ. ಇದು ಏಕಪಕ್ಷೀಯ ಆದೇಶ ಎಂದು ಆರೋಪಿಸಿ ಸಂಧ್ಯಾ ಸಚಿನ್ ನ್ಯಾಯ ಒದಿಗಿಸಿಕೊಡಿ ಎಂದು ಬೆಳ್ತಂಗಡಿ ನಾರಾಯಣ ಗುರು ಸ್ವಾಮಿ ಸೇವಾ ಸಂಘಟನೆಗೆ ಪತ್ರ ಬರೆದಿದ್ದಾರೆ. ಇದೀಗ ಸಂಧ್ಯಾ ಸಚಿನ್ ಬರೆದಿರುವ ಪತ್ರ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಒಟ್ಟಿನಲ್ಲಿ ಸರ್ಕಾರಿ ಅಧಿಕಾರಿ ಮತ್ತು ಜನಪ್ರತಿನಿಧಿಗಳ ಸಂಘರ್ಷ ಪದೇ ಪದೇ ರಾಜ್ಯದಲ್ಲಿ ಸದ್ದು ಮಾಡುತ್ತಿದೆ.

  • ಧರ್ಮಸ್ಥಳದಲ್ಲಿ ಮೋದಿ ದೀರ್ಘಾಯಸ್ಸು, ಆರೋಗ್ಯ ವೃದ್ಧಿಗಾಗಿ ಮಹಾಮೃತ್ಯುಂಜಯ ಯಾಗ

    ಧರ್ಮಸ್ಥಳದಲ್ಲಿ ಮೋದಿ ದೀರ್ಘಾಯಸ್ಸು, ಆರೋಗ್ಯ ವೃದ್ಧಿಗಾಗಿ ಮಹಾಮೃತ್ಯುಂಜಯ ಯಾಗ

    ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ಮಹಾಮೃತ್ಯುಂಜಯ ಯಾಗ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ನಡೆಯಿತು.

    ಧರ್ಮಸ್ಥಳದ ದೇವಸ್ಥಾನದ ಅಮೃತ ವರ್ಷಿಣಿ ಸಂಭಾಗಣದಲ್ಲಿ ನಡೆದ ಯಾಗದ ನೇತೃತ್ವವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಹಿಸಿದ್ದರು. ಯಾಗ ಕರ್ತೃಗಳಾಗಿ ಹರೀಶ್ ಪೂಂಜಾ ದಂಪತಿ ಕುಳಿತು, ಪೂಜಾ ಕಾರ್ಯದಲ್ಲಿ ತೊಡಗಿದ್ದರು. 80 ಅರ್ಚಕರು ಏಕಕಂಠದಲ್ಲಿ ರುದ್ರ ಪಾರಾಯಣ ನಡೆಸಿದ್ದು, ಮೋದಿ ಹೆಸರಿನಲ್ಲಿ ವಿವಿಧ ವಿಧಿಗಳನ್ನು ನಡೆಸಲಾಗಿದೆ. ಮೋದಿಯ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ಒಂದು ಲಕ್ಷ ಮೃತ್ಯುಂಜಯ ಜಪ ಪಾರಾಯಣ ಕೂಡ ಮಾಡಲಾಯಿತು. ಇದನ್ನೂ ಓದಿ: ಕೇರಳವನ್ನು ಪ್ರಶ್ನಿಸಬೇಕೇ ಹೊರತು ಕೇಂದ್ರವನ್ನಲ್ಲ: ಸಿದ್ದುಗೆ ಬಿಜೆಪಿ ತಿರುಗೇಟು

    ಇಂದು ಬೆಳಗ್ಗೆ ಚತುರ್ವೇದ ಪಾರಾಯಣ, ಗೋಪೂಜೆ, ಮಹಾಗಣಪತಿ ಹೋಮ, ಸಪ್ತ ಕುಂಡಗಳಲ್ಲಿ ಮಹಾ ಮೃತ್ಯುಂಜಯ ಹೋಮ ನಡೆದಿದೆ. ಈ ಎಲ್ಲಾ ಕಾರ್ಯಗಳಲ್ಲಿ ಹರೀಶ್ ಪೂಂಜ ದಂಪತಿ ಯಾಗ ಕರ್ತೃಗಳಾಗಿ ಕುಳಿತು, ಗೋ, ಗಜ ಹಾಗೂ ಅಶ್ವ ಪೂಜೆಗಳನ್ನು ನೆರವೇರಿಸಿದ್ದಾರೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಕೊರೊನಾ ನೆಗೆಟಿವ್

    ಈ ಯಾಗದಲ್ಲಿ ಸಚಿವರಾದ ಕೆ.ಎಸ್ ಈಶ್ವರಪ್ಪ, ಶಶಿಕಲಾ ಜೊಲ್ಲೆ, ಸಿಸಿ ಪಾಟೀಲ್, ಕೋಟ ಶ್ರೀನಿವಾಸ ಪೂಜಾರಿ, ಎಸ್ ಅಂಗಾರ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಇದನ್ನೂ ಓದಿ: ಜನವರಿ 31ರ ವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

  • ಪ್ರವಾಹ ಪರಿಹಾರದ ಲೆಕ್ಕ ಕೊಡಿ- ಪೂಂಜಾ ಕಚೇರಿಗೆ ಕೈ ಮುತ್ತಿಗೆ ಯತ್ನ

    ಪ್ರವಾಹ ಪರಿಹಾರದ ಲೆಕ್ಕ ಕೊಡಿ- ಪೂಂಜಾ ಕಚೇರಿಗೆ ಕೈ ಮುತ್ತಿಗೆ ಯತ್ನ

    ಮಂಗಳೂರು: ಪ್ರವಾಹ ಪರಿಹಾರದ ಲೆಕ್ಕ ಕೊಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆದಿದೆ.

    ಮಾಜಿ ಶಾಸಕ ವಸಂತ ಬಂಗೇರಾ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಬೆಳ್ತಂಗಡಿ ಪ್ರವಾಹ ಸಂತ್ರಸ್ತರ ಕಾಳಜಿ ರಿಲೀಫ್ ಫಂಡ್ ಲೆಕ್ಕ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ನಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

    ಮುತ್ತಿಗೆ ಯತ್ನದ ವೇಳೆ ಮಾಜಿ ಶಾಸಕ ವಸಂತ ಬಂಗೇರಾ ಮತ್ತು ಪೊಲೀಸರ ಮಧ್ಯೆ ತಳ್ಳಾಟ ನಡೆದಿದೆ. ಪರಸ್ಪರ ತಳ್ಳಾಡಿ ಪೊಲೀಸರ ಜೊತೆ ಮಾತಿನ ಚಕಮಕಿ ನಡೆದಿದ್ದು, ಶಾಸಕರ ಕಚೇರಿಯ ಗೇಟ್ ಬಳಿಯೇ ಪ್ರತಿಭಟನಾಕರರನ್ನು ಪೊಲೀಸರು ತಡೆದಿದ್ದಾರೆ.

    ಮಾಸ್ಕ್, ಸಾಮಾಜಿಕ ಅಂತರ ಇಲ್ಲದೇ ಮುತ್ತಿಗೆ ಯತ್ನಿಸಿದ್ದಾರೆ. 15 ದಿನಗಳ ಒಳಗೆ ಕಾಳಜಿ ರಿಲೀಫ್ ಫಂಡ್ ಲೆಕ್ಕ ಕೊಡದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಕಳೆದ ವರ್ಷದ ಪ್ರವಾಹದ ವೇಳೆ ಕಾಳಜಿ ರಿಲೀಫ್ ಫಂಡ್ ಸ್ಥಾಪನೆ ಮಾಡಲಾಗಿತ್ತು.

  • ತಲ್ವಾರ್ ಹಿಡಿದು ಗೋಕಳ್ಳತನ ಮಾಡೋರಿಗೆ, ಅದೇ ತಲ್ವಾರ್‌ನಿಂದ ಉತ್ತರ ಕೋಡೋಕೆ ನಮ್ಗೆ ಗೊತ್ತು: ಬಿಜೆಪಿ ಶಾಸಕ

    ತಲ್ವಾರ್ ಹಿಡಿದು ಗೋಕಳ್ಳತನ ಮಾಡೋರಿಗೆ, ಅದೇ ತಲ್ವಾರ್‌ನಿಂದ ಉತ್ತರ ಕೋಡೋಕೆ ನಮ್ಗೆ ಗೊತ್ತು: ಬಿಜೆಪಿ ಶಾಸಕ

    – ಗೋಕಳ್ಳರ ಮಾತು ಕೇಳಿ ಹಿಂದು ಸಂಘಟನೆ ಕಾರ್ಯಕರ್ತರ ಮೇಲೆ ಕೇಸ್

    ಮಂಗಳೂರು: ಅಕ್ರಮ ಗೋಸಾಗಾಟ ಪತ್ತೆಹಚ್ಚಿದ ಹಿಂದು ಸಂಘಟನೆ ಕಾರ್ಯಕರ್ತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದಕ್ಕೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ವಿಚಾರ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು ಠಾಣೆಗೆ ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಕಾರ್ಯಕರ್ತರ ಜೊತೆಯಲ್ಲಿ ರಾತ್ರಿಯಿಡಿ ಕುಳಿತು ಪ್ರತಿಭಟನೆ ಮಾಡಿದ್ದಾರೆ.

    ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಹಿಂದೂ ಸಂಘಟನೆ ಕಾರ್ಯಕರ್ತರು ಕಾನೂನಿನ ಪ್ರಕಾರ ಪೊಲೀಸರಿಗೆ ಗೋಕಳ್ಳರನ್ನು ಒಪ್ಪಿಸಿದ್ದಾರೆ. ಆದರೆ ಪೊಲೀಸರೇ ಹಿಡಿದುಕೊಟ್ಟವರ ಮೇಲೆ ಕೇಸ್ ಹಾಕುತ್ತಿರುವುದು ಸರಿಯಲ್ಲ. ಇತ್ತೀಚಿಗೆ ಅಕ್ರಮ ಗೋವು ಸಾಗಾಟಕ್ಕೆ ಕೆಲವರು ಬೆಂಬಲ ನೀಡುತ್ತಿದ್ದಾರೆ. ಅದನ್ನು ನಾವು ಖಂಡಿಸುತ್ತೇವೆ ಎಂದರು.

    ನಾನು ಶಾಸಕನಾಗುವ ಮೊದಲು ಒಬ್ಬ ಹಿಂದೂ. ಇಲ್ಲಿರುವ ಕಾರ್ಯಕರ್ತರು ಹಾಗೂ ನಾವು ಹಿಂದೂತ್ವವನ್ನು ಕಾಪಾಡಲು ಹಾಗೂ ಗೋ ರಕ್ಷಣೆಗಾಗಿ ಪ್ರಾಣಾ ಕೊಡಲು ಸಿದ್ಧರಿದ್ದೇವೆ. ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆ ಗೋಕಳ್ಳರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನಾವು ಎಲ್ಲದಕ್ಕೂ ಸಿದ್ಧರಿಗಿದ್ದೇವೆ. ತಲ್ವಾರ್ ಹಿಡಿದು ಗೋಕಳ್ಳತನ ಮಾಡುವವರಿಗೆ, ಅದೇ ತಲ್ವಾರ್ ಹಿಡಿದು ಉತ್ತರ ಕೋಡೋಕೆ ನಮಗೆ ಗೊತ್ತಿದೆ. ಈ ರೀತಿ ನಡೆದರೆ ಖಂಡಿತ ಇದು ದಕ್ಷಿಣ ಕನ್ನಡ ಶಾಂತಿ ಕದಡುತ್ತದೆ ಎಂದು ಹೇಳಿದ್ದಾರೆ.

    ಯಾವತ್ತಿನಿಂದ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಯು.ಟಿ.ಖಾದರ್ ಆದರೋ ಅವತ್ತಿನಿಂದ ಈ ಅಕ್ರಮಗಳು ಹೆಚ್ಚಾಗಿವೆ. ಈ ಬಗ್ಗೆ ಸರ್ಕಾರ ಹಾಗೂ ಪೊಲೀಸರು ಕ್ರಮ ಕೈಗೊಳ್ಳದೆ ಗಲಾಟೆ ನಡೆದು, ಜಿಲ್ಲೆಯ ಶಾಂತಿ ಕದಡಿದರೆ ಉಸ್ತುವಾರಿ ಸಚಿವ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತವೇ ನೇರ ಹೊಣೆ ಎಂದು ಎಚ್ಚರಿಸಿದ್ದಾರೆ.

    ಗುರುವಾರ ತಡರಾತ್ರಿ ಬೆಳ್ತಂಗಡಿ ತಾಲೂಕಿನ ಬಂದರು ಬಳಿ ಮೂರು ಹಸುಗಳನ್ನು ಟೆಂಪೋದಲ್ಲಿ ಅಮಾನುಷ ರೀತಿಯಲ್ಲಿ ಕಟ್ಟಿ ಒಯ್ಯಲಾಗುತಿತ್ತು. ಖಚಿತ ಮಾಹಿತಿ ಮೇರೆಗೆ ವಾಹನವನ್ನು ಕೆಲ ಹಿಂದು ಸಂಘಟನೆ ಕಾರ್ಯಕರ್ತರು ನಿಲ್ಲಿಸಿ, ಗೋಕಳ್ಳರನ್ನು ಹಿಡಿದು ಉಪ್ಪಿನಂಗಡಿ ಠಾಣೆಗೆ ಒಪ್ಪಿಸಿದ್ದರು. ಆದರೆ ಪೊಲೀಸರು ಗೋವಿನ ಸಾಗಾಟ ಮಾಡ್ತಿದ್ದವರ ಮೇಲೆ ಪ್ರಕರಣ ದಾಖಲಿಸುವ ಬದಲು ಅವರ ಮಾತನ್ನು ಮಾತು ಕೇಳಿ, ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆಯೇ ಪ್ರಕರಣ ದಾಖಲಿಸಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದು, ಭಾರಿ ವಿವಾದಕ್ಕೆ ಕಾರಣವಾಗಿದೆ.