Tag: ಹರ್ಜೋತ್‌ ಸಿಂಗ್

  • 1 ವರ್ಷ ನನ್ನ ಕೈ, ಕಾಲುಗಳಿಗೆ ಚಿಕಿತ್ಸೆ ಬೇಕಿದೆ: ಉಕ್ರೇನ್‌ನಲ್ಲಿ ಗುಂಡೇಟು ತಿಂದಿದ್ದ ಭಾರತದ ವಿದ್ಯಾರ್ಥಿ

    1 ವರ್ಷ ನನ್ನ ಕೈ, ಕಾಲುಗಳಿಗೆ ಚಿಕಿತ್ಸೆ ಬೇಕಿದೆ: ಉಕ್ರೇನ್‌ನಲ್ಲಿ ಗುಂಡೇಟು ತಿಂದಿದ್ದ ಭಾರತದ ವಿದ್ಯಾರ್ಥಿ

    ನವದೆಹಲಿ: ಉಕ್ರೇನ್‌ ಯುದ್ಧದಲ್ಲಿ ಗುಂಡೇಟು ತಗುಲಿ ಗಾಯಗೊಂಡಿದ್ದ ಭಾರತದ ವೈದ್ಯಕೀಯ ವಿದ್ಯಾರ್ಥಿಯು ದೆಹಲಿಯ ಸೇನಾ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾನೆ.

    ತನ್ನ ಆರೋಗ್ಯ ಹಾಗೂ ಚಿಕಿತ್ಸೆ ಕುರಿತು ಮಾತನಾಡಿದ ಗಾಯಾಳು ವಿದ್ಯಾರ್ಥಿ ಹರ್ಜೋತ್‌ ಸಿಂಗ್‌, ಸುಮಾರು 1 ವರ್ಷ ನನ್ನ ಕೈ, ಕಾಲುಗಳಿಗೆ ಚಿಕಿತ್ಸೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. ನನ್ನ ಆರ್ಥಿಕ ಸ್ಥಿತಿ ಸರಿಯಿಲ್ಲ. ನನ್ನ ತಂದೆ ನಿವೃತ್ತರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಭಾರತ ಸರ್ಕಾರ ನನಗೆ ಸಹಾಯ ಮಾಡಬೇಕೆಂದು ನಾನು ಬಯಸುತ್ತೇನೆ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಗುಂಡೇಟಿನಿಂದ ಗಾಯಗೊಂಡಿದ್ದ ವಿದ್ಯಾರ್ಥಿ ಇಂದು ಭಾರತಕ್ಕೆ ವಾಪಸ್‌

    ಮಗನ ಆರೋಗ್ಯ ಕುರಿತು ಪ್ರತಿಕ್ರಿಯಿಸಿದ ಕೇಸರ್ ಸಿಂಗ್, ಈಗ ನನ್ನ ಮಗ ಚೇತರಿಸಿಕೊಳ್ಳುತ್ತಿದ್ದಾನೆ. ಚೇತರಿಸಿಕೊಂಡ ನಂತರ ಅವನು ಏನು ಮಾಡಬೇಕೆಂದು ಯೋಚಿಸುತ್ತಾನೆ. ಯಾವುದೇ ದೇಶವು ಒಳ್ಳೆಯದು ಅಥವಾ ಕೆಟ್ಟದ್ದಲ್ಲ. ಇದು ಎರಡು ಅಹಂಕಾರಗಳ ನಡುವಿನ ಹೋರಾಟವೇ ಹೊರತು ದೇಶಗಳ ನಡುವಿನ ಹೋರಾಟವಲ್ಲ. ಅವನಿಗೆ ಮತ್ತೆ ಅವಕಾಶ ಸಿಕ್ಕರೆ, ಅವನು ಖಂಡಿತವಾಗಿಯೂ ಅಧ್ಯಯನಕ್ಕಾಗಿ ಉಕ್ರೇನ್‌ಗೆ ಹೋಗುತ್ತಾನೆ ಎಂದು ತಿಳಿಸಿದ್ದಾರೆ.

    ಉಕ್ರೇನ್‌ ಮೇಲೆ ರಷ್ಯಾ ಸೇನಾ ಕಾರ್ಯಾಚರಣೆ ವೇಳೆ ಕೀವ್‌ ನಗರದಲ್ಲಿ ಭಾರತದ ವಿದ್ಯಾರ್ಥಿ ಹರ್ಜೋತ್‌ ಸಿಂಗ್‌ಗೆ ಗುಂಡೇಟು ಬಿದ್ದಿತ್ತು. ನಂತರ ಆತನಿಗೆ ಉಕ್ರೇನ್‌ನಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಯುದ್ಧಪೀಡಿತ ರಾಷ್ಟ್ರದಿಂದ ʼಆಪರೇಷನ್‌ ಗಂಗಾʼ ಕಾರ್ಯಾಚರಣೆಯಡಿ ಭಾರತಕ್ಕೆ ವಾಪಸ್‌ ಕರೆಸಿಕೊಳ್ಳಲಾಯಿತು. ಇದನ್ನೂ ಓದಿ: ದಯವಿಟ್ಟು ನನ್ನನ್ನು ಭಾರತಕ್ಕೆ ಕರೆಸಿಕೊಳ್ಳಿ: ಉಕ್ರೇನ್‍ನಲ್ಲಿ ಗುಂಡು ತಗುಲಿದ ವಿದ್ಯಾರ್ಥಿ

    ವಿದ್ಯಾರ್ಥಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ವಿದ್ಯಾರ್ಥಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾನೆ. ಆದರೆ ಆತ ಪೂರ್ಣ ಚೇತರಿಸಿಕೊಳ್ಳಲು ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

  • ಉಕ್ರೇನ್‌ನಲ್ಲಿ ಗುಂಡೇಟಿನಿಂದ ಗಾಯಗೊಂಡಿದ್ದ ವಿದ್ಯಾರ್ಥಿ ಇಂದು ಭಾರತಕ್ಕೆ ವಾಪಸ್‌

    ಉಕ್ರೇನ್‌ನಲ್ಲಿ ಗುಂಡೇಟಿನಿಂದ ಗಾಯಗೊಂಡಿದ್ದ ವಿದ್ಯಾರ್ಥಿ ಇಂದು ಭಾರತಕ್ಕೆ ವಾಪಸ್‌

    ನವದೆಹಲಿ: ಯುದ್ಧಪೀಡಿತ ಉಕ್ರೇನ್‌ನಲ್ಲಿ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಭಾರತದ ವಿದ್ಯಾರ್ಥಿ ಇಂದು ಭಾರತಕ್ಕೆ ವಾಪಸ್‌ ಆಗುತ್ತಿದ್ದಾರೆ.

    ಉಕ್ರೇನ್‌ ರಾಜಧಾನಿ ಕೀವ್‌ನಲ್ಲಿ ಗುಂಡೇಟಿನಿಂದ ಆಸ್ಪತ್ರೆ ಸೇರಿದ್ದ ವಿದ್ಯಾರ್ಥಿಯನ್ನು ಪೋಲೆಂಡ್‌ ದೇಶದಲ್ಲಿ ಕೇಂದ್ರ ಸಚಿವ ವಿ.ಕೆ.ಸಿಂಗ್‌ ಅವರು ಭೇಟಿಯಾಗಿದ್ದಾರೆ. ಅಲ್ಲದೇ ʼಆಪರೇಷನ್‌ ಗಂಗಾʼ ಕಾರ್ಯಾಚರಣೆಯಡಿ ವಿದ್ಯಾರ್ಥಿಯನ್ನು ಭಾರತಕ್ಕೆ ವಾಪಸ್‌ ಕರೆತರಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾಯಿ ಬಿಡದಿದ್ದರೆ ನಾನು ಭಾರತಕ್ಕೆ ಬರುತ್ತಿರಲಿಲ್ಲ: ರಂಜಿತ್ ರೆಡ್ಡಿ

    ಸ್ಟ್ರೆಚರ್‌ನಲ್ಲಿದ್ದ 31 ವರ್ಷದ ವಿದ್ಯಾರ್ಥಿಯೊಂದಿಗೆ ಸಿಂಗ್‌ ಅವರು ರ್ಜೆಸ್ಜೋವ್‌ ವಿಮಾನ ನಿಲ್ದಾಣದಲ್ಲಿ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ. ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ಕರೆದುಕೊಂಡು ಬರುವ ಭರವಸೆ ನೀಡುತ್ತೇನೆ. ಆತ ತನ್ನ ಕುಟುಂಬದೊಂದಿಗೆ ಮತ್ತೆ ಒಂದಾಗುವುದನ್ನು ನೋಡಲು ನಾನು ಎದುರು ನೋಡುತ್ತಿದ್ದೇನೆ. ಬಹುಬೇಗ ಗುಣಮುಖರಾಗಲಿ ಎಂದು ಆಶಿಸುತ್ತೇನೆ ಎಂದು ಸಿಂಗ್‌ ತಿಳಿಸಿದ್ದಾರೆ.

    ವಿದ್ಯಾರ್ಥಿ ಹರ್ಜೋತ್‌ ಸಿಂಗ್‌ ಪ್ರಯಾಣಿಸುವ ವಿಮಾನ ರಾತ್ರಿ 7 ಗಂಟೆಗೆ ದೆಹಲಿ ತಲುಪಲಿದೆ. ಆತನೊಂದಿಗೆ 200 ಮಂದಿ ಭಾರತೀಯರು ಪೋಲೆಂಡ್‌ನಿಂದ ಪ್ರಯಾಣ ಬೆಳೆಸಲಿದ್ದಾರೆ. ಸದ್ಯ ವಿದ್ಯಾರ್ಥಿ ಉಕ್ರೇನ್‌ನಿಂದ ಪೋಲೆಂಡ್‌ಗೆ ಬಂದಿದ್ದಾರೆ. ಇದನ್ನೂ ಓದಿ:  ಮಧ್ಯೆ ಕೆಟ್ಟು ನಿಂತ ಬಸ್ – ರೊಮೆನಿಯಾ ತಲುಪದ 37 ಕನ್ನಡಿಗರು

    ಕೀವ್‌ನಲ್ಲಿ ಭಾರತದ ಹರ್ಜೋತ್‌ ಸಿಂಗ್‌ಗೆ ಗುಂಡೇಟು ಬಿದ್ದಿತ್ತು. ಈ ವೇಳೆ ಆತ ತನ್ನ ಪಾಸ್‌ಪೋರ್ಟ್‌ ಕೂಡ ಕಳೆದುಕೊಂಡಿದ್ದಾರೆ. ಹರ್ಜೋತ್‌ ನಾಳೆ ನಮ್ಮೊಂದಿಗೆ ಭಾರತವನ್ನು ತಲುಪುತ್ತಿದ್ದಾರೆ ಎಂದು ತಿಳಿಸಲು ಸಂತೋಷವಾಗಿದೆ ಎಂದು ಸಚಿವ ಟ್ವೀಟ್‌ ಮಾಡಿದ್ದಾರೆ.