Tag: ಹರ್ಸಿಮ್ರತ್ ಕೌರ್ ಬಾದಲ್

  • ರಾಹುಲ್ ಗಾಂಧಿ ಜೇಬಿಗೆ ಕತ್ತರಿ ಹಾಕಿದ್ದು ಯಾರು?: ಹರ್ಸಿಮ್ರತ್ ಕೌರ್ ಬಾದಲ್

    ರಾಹುಲ್ ಗಾಂಧಿ ಜೇಬಿಗೆ ಕತ್ತರಿ ಹಾಕಿದ್ದು ಯಾರು?: ಹರ್ಸಿಮ್ರತ್ ಕೌರ್ ಬಾದಲ್

    ಚಂಡೀಗಢ: ಶ್ರೀ ಹರ್ಮಂದಿರ್ ಸಾಹಿಬ್‍ನಲ್ಲಿ ರಾಹುಲ್ ಗಾಂಧಿ ಅವರ ಜೇಬಿಗೆ ಕತ್ತರಿ ಹಾಕಿದ್ದು ಯಾರು? ಕಾಂಗ್ರೆಸ್ ಅವರು ಸುಳ್ಳು ಸುದ್ದಿಗಳನ್ನು ಹರಡಬೇಡಿ ಎಂದು ಮಾಜಿ ಕೇಂದ್ರ ಸಚಿವೆ ಮತ್ತು ಎಸ್‍ಎಡಿ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ಹೇಳಿದ್ದಾರೆ.

    ಫೆಬ್ರವರಿ 20ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಹಲವಾರು ಪಕ್ಷದ ಅಭ್ಯರ್ಥಿಗಳು ಹಾಗೂ ರಾಹುಲ್ ಗಾಂಧಿ ಅವರು ಬುಧವಾರ ಅಮೃತಸರದ ಗೋಲ್ಡನ್ ಟೆಂಪಲ್‍ಗೆ ಭೇಟಿ ನೀಡಿದ್ದರು. ಈ ವೇಳೆ ರಾಹುಲ್ ಗಾಂಧಿ ಅವರೊಂದಿಗೆ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ, ಉಪ ಮುಖ್ಯಮಂತ್ರಿಗಳಾದ ಸುಖಜಿಂದರ್ ಸಿಂಗ್ ರಾಂಧವಾ ಮತ್ತು ಒಪಿ ಸೋನಿ ಉಪಸ್ಥಿತರಿದ್ದರು. ಇದನ್ನೂ ಓದಿ: ಅಫ್ಘಾನಿಸ್ತಾನಕ್ಕೆ ಭಾರತದ ನೆರವು – ಇರಾನ್ ಸಹಾಯ

    ಈ ಕುರಿತಂತೆ ಟ್ವೀಟ್ ಮಾಡಿರುವ ಹರ್ಸಿಮ್ರತ್ ಕೌರ್ ಬಾದಲ್ ಅವರು, ಶ್ರೀ ಹರ್ಮಂದಿರ್ ಸಾಹಿಬ್‍ನಲ್ಲಿ ರಾಹುಲ್ ಗಾಂಧಿ ಅವರ ಜೇಬಿಗೆ ಕೈ ಹಾಕಿದವರು ಯಾರು? ಚರಣ್‍ಜಿತ್ ಸಿಂಗ್ ಚನ್ನಿ ಅವರಾ? ಅಥವಾ ಸುಖಜಿಂದರ್ ಸಿಂಗ್ ರಾಂಧವಾ ಅವರಾ? ಇವರ ಹತ್ತಿರ ಬರಲು ಸೆಕ್ಯೂರಿಟಿ ಗಾರ್ಡ್‍ಗಳು ಅನುಮತಿ ನೀಡಿದ್ದು, ಕೇವಲ ಮೂವರಿಗೆ ಮಾತ್ರ. ಈ ರೀತಿ ಸುಳ್ಳು ಹೇಳುವ ಮೂಲಕ ನಮ್ಮ ಪವಿತ್ರ ದೇಗುಲಕ್ಕೆ ಕೆಟ್ಟ ಹೆಸರು ತರುವ ಒಂದು ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದಾರೆ.

    ಈ ಟ್ವೀಟ್‍ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‍ನ ಮುಖ್ಯ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಅಂತಹ ಸುಳ್ಳು ಸುದ್ದಿಗಳನ್ನು ಹರಡುವುದು ಅಪಹಾಸ್ಯ. ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿ ಜವಾಬ್ದಾರಿ ಮತ್ತು ಪ್ರಬುದ್ಧತೆಯನ್ನು ತೋರಿಸಬೇಕು ಎಂದು ಹೇಳಿದ್ದಾರೆ.  ಇದನ್ನೂ ಓದಿ: ಆಕಾಶ ಬೆಳಗಿದವು 1,000 ಮೇಡ್ ಇನ್ ಇಂಡಿಯಾ ಡ್ರೋನ್‍ಗಳು