Tag: ಹಲಾಲ್ ನಿಷೇಧ

  • ಹಲಾಲ್ ನಿಷೇಧ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಲಿದೆ: ಶಶಿಕಲಾ ಜೊಲ್ಲೆ

    ಹಲಾಲ್ ನಿಷೇಧ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಲಿದೆ: ಶಶಿಕಲಾ ಜೊಲ್ಲೆ

    ಚಿಕ್ಕೋಡಿ(ಬೆಳಗಾವಿ): ಹಲಾಲ್ ನಿಷೇಧ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

    ನಿಪ್ಪಾಣಿಯ ಸಮಾಧಿ ಮಠದಲ್ಲಿ ಇಂದು ಧಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಹಲಾಲ್ ಕಟ್ ನಿಷೇಧ ಮಾಡಬೇಕು ಎಂದು ಈಗಾಗಲೇ ಕೆಲ ಸಂಘಟನೆಗಳು ಒತ್ತಾಯ ಮಾಡುತ್ತಿವೆ. ಹಲಾಲ್ ನಿಷೇಧ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಲಿದೆ. ಹಲಾಲ್ ಕಟ್ ಮಾಡಿ ಮುಸ್ಲಿಂ ದೇವರಿಗೆ ಅರ್ಪಣೆ ಮಾಡುತ್ತಾರೆ ಎಂದು ನಮಗೆ ತಿಳಿದಿದೆ ಎಂದರು. ಇದನ್ನೂ ಓದಿ: ಆಂಧ್ರಪ್ರದೇಶದ ಬಸ್‍ಗಳಲ್ಲಿ 4 ಲಕ್ಷ ಮಹಿಳೆಯರಿಗೆ ಉಚಿತ ಪ್ರಯಾಣ

    ಹಿಂದೂಪರ ಸಂಘಟನೆಗಳು ಮಾಡ್ತಿರೋದು ಸರಿ ಇದೆ ಎಂದ ಸಚಿವೆ, ಹಿಂದೂಪರ ಸಂಘಟನೆಗಳು ಮಾಡ್ತಿರೋ ಹಲಾಲ್ ಕಟ್ ನಿಷೇಧವನ್ನ ಸಮರ್ಥಿಸಿಕೊಂಡರು. ಈ ಸಂಘಟನೆಗಳು ಹೇಳ್ತಿರುವ ಜಟ್ಕಾ ಕಟ್ ಜಾರಿಗೆ ತರಬೇಕು ಎಂದು ಪರೋಕ್ಷವಾಗಿ ಹೇಳಿದರು. ಇದನ್ನೂ ಓದಿ: ಕರ್ನಾಟಕ ನಮ್ಮದು, ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ: ಎಚ್‌ಡಿಕೆ

    ಯುಗಾದಿ ಹಬ್ಬವನ್ನು ಇನ್ನು ಮುಂದೆ ಪ್ರತಿವರ್ಷ ಧಾರ್ಮಿಕ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಗುತ್ತದೆ ಅಂತ ಈ ಹಿಂದೆ ಸಚಿವೆ ಶಶಿಕಲಾ ಜೊಲ್ಲೆ ಘೋಷಣೆ ಮಾಡಿದ್ದರು. ಅದರಂತೆ ಇಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಸಮಾಧಿ ಮಠದಲ್ಲಿ ಸರ್ಕಾರದಿಂದಲೇ ಕಾರ್ಯಕ್ರಮ ಆಯೋಜನೆ ಮಾಡಿ ಪ್ರಥಮಬಾರಿಗೆ ಧಾರ್ಮಿಕ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.

    ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹಾಗೂ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಭಾಗಿಯಾಗಿ ಗೋಪೂಜೆ, ಎತ್ತುಗಳ ಪೂಜೆ ಹಾಗೂ ಭೂಮಿ ಪೂಜೆ ಮಾಡಿ ನೇಗಿಲು ಹಿಡಿದು ಬಿತ್ತನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಚಿವೆ ಹುಕ್ಕೇರಿಶನ ವಚನ ಗಾಯನ ಹಾಗೂ ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ ಹಾಡು ಹಾಡುವ ಮೂಲಕ ಎಲ್ಲರನ್ನ ರಂಜಿಸಿದರು.