Tag: ಹಲ್ಲೆ

  • ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆಗೈದ ಐವರು ವಶಕ್ಕೆ: ಸಂತೋಷ್ ಬಾಬು

    ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆಗೈದ ಐವರು ವಶಕ್ಕೆ: ಸಂತೋಷ್ ಬಾಬು

    ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣವೊಂದು ನಡೆದಿರುವ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಬೆಳಕಿಗೆ ಬಂದಿದೆ.

    ಹೊಸೂರಿನ ಸಂದೀಪ್ ಸೊಲಂಕಿ ಎಂಬ ಯುವಕನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಲಾಗಿದೆ. ಇನ್‍ಸ್ಟಾ ಇನ್‍ಬಾಕ್ಸ್ ನಲ್ಲಿ ಬೈಯ್ದು ಮೆಸೇಜ್ ಹಾಕಿದ್ದ ಅನ್ನೋ ಕಾರಣಕ್ಕೆ ಹಲ್ಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಪ್ರಾಥಮಿಕ ಶಾಲಾ ಹಂತದಲ್ಲಿ NEP ಜಾರಿ ಮಾಡೋದಿಲ್ಲ: ಮಧು ಬಂಗಾರಪ್ಪ

    ಯುವಕನನ್ನು ಬೆತ್ತಲೆ ಮಾಡಿ ಹಲ್ಲೆ ಮಾಡುತ್ತಿರುವ ದೃಶ್ಯ ಮೊಬೈಲ್‍ನಲ್ಲಿ ಸೆರೆಹಿಡಿಯಲಾಗಿದ್ದು, ಇದೀಗ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸೆಟ್ಲಮೆಂಟ್ ಏರಿಯಾದ ಬಡ್ಡಿಂಗ್ ರೌಡಿಗಳಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.

    ಸಂತ್ರಸ್ತ ಸಂದೀಪ್ ಇನ್‍ಸ್ಟಾಗ್ರಾಂನಲ್ಲಿ ರೀಲ್ ಮಾಡಿದ್ದೆ ಪ್ರಕರಣಕ್ಕೆ ಮೂಲ ಕಾರಣ ಎನ್ನಲಾಗಿದೆ. ಸೆರೆಯಾದ ಹಲ್ಲೆಯ ದೃಶ್ಯದಲ್ಲಿ ಕೆಲವರ ಮುಖ ಪರಿಚಯ ಸಿಕ್ಕಿದ್ದು, ಸೆಟ್ಲಮೆಂಟ್ ಏರಿಯಾದ ಗಂಗಾಧರ, ನಗರದ ಪ್ರಜ್ವಲ್ ಗಾಯಕವಾಡ, ಗಬ್ಬೂರಿನ ಜಸ್ಟೀನ್ ಮಂಜ್ಯಾ @ ಮಂಜುನಾಥ್ ಅಂಗಡಿ ಹಾಗೂ ಸೆಟ್ಲಮೆಂಟ್ ಏರಿಯಾದ ಮಂಜ್ಯಾ @ ಮಂಜುನಾಥ್ ಎಂಬುದಾಗಿ ಗುರುತಿಸಲಾಗಿದೆ. ಇನ್ನು ವೀಡಿಯೋದಲ್ಲಿ ದುಷ್ಕರ್ಮಿಗಳು ಮರಾಠಿ ಹಾಗೂ ಕನ್ನಡದಲ್ಲಿ ಮಾತನಾಡಿರುವುದು ಬಯಲಾಗಿದೆ.

    ಪ್ರಕರಣ ಸಂಬಂಧ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಸಂತೋಷ್ ಬಾಬು ಸುದ್ದಿಗೊಷ್ಠಿ ನಡೆಸಿ ಮಾತನಾಡಿ, ಎರಡು ವೀಡಿಯೋ ಮೂಲಕ ನಮ್ಮ ಗಮನಕ್ಕೆ ವಿಷಯ ಬಂದಿದೆ. ಈ ಸಂಬಂಧ ಒಟ್ಟು ಐವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಜ್ವಲ್, ವಿನಾಯಕ್, ಗಣೇಶ್, ಸಚಿನ್ ಹಾಗೂ ಮಂಜು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ ಎಂದರು.

    ಇನ್‍ಸ್ಟಾದಲ್ಲಿ ಸಂತ್ರಸ್ತ ಸಂದೀಪ್, ಪ್ರಜ್ವಲ್ ತಾಯಿಗೆ ಬೈದಿದ್ದ. ಆದರೆ ಈ ಬಗ್ಗೆ ಸಂದೀಪ್ ಇದುವೆರಗೂ ದೂರು ಕೊಟ್ಟಿಲ್ಲ. ಯಾರ ಸಂಪರ್ಕದಲ್ಲಿ ಸಹ ಇಲ್ಲ. ಮೂರು ನಾಲ್ಕು ತಿಂಗಳ ಹಿಂದೆ ನಡೆದ ಘಟನೆ ಇದಾಗಿದೆ. ಹುಬ್ಬಳ್ಳಿಯ ಸೆಟ್ಲಮೆಂಟ್ ನಲ್ಲಿ ನಡೆದ ಘಟನೆ ಆದರೆ ಸ್ಥಳ ಯಾವುದಿ ಎಂದು ಖಚಿತವಾಗಿಲ್ಲ. ಪೊಲೀಸರು ಈ ತರಹದ ಘಟನೆ ಆಗೋ ಮುಂಚೆ ಎಚ್ಚೆತ್ತುಕೊಳ್ಳಬೇಕಿತ್ತು. ವೀಡಿಯೋದಲ್ಲಿ ಇರುವ ಸಂದೀಪ್‍ಗಾಗಿ ಹುಡುಕಾಡುತ್ತಿದ್ದೇವೆ ಎಂದು ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾರ್ವಜನಿಕ ಸ್ಥಳದಲ್ಲಿ ಪೊಲೀಸರಿಂದ ಹಲ್ಲೆ – ಮನನೊಂದ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

    ಸಾರ್ವಜನಿಕ ಸ್ಥಳದಲ್ಲಿ ಪೊಲೀಸರಿಂದ ಹಲ್ಲೆ – ಮನನೊಂದ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

    ಶಿವಮೊಗ್ಗ: ಸಾರ್ವಜನಿಕ ಸ್ಥಳದಲ್ಲಿ ಪೊಲೀಸರಿಂದ (Police) ಹಲ್ಲೆಗೊಳಗಾಗಿ ಮನನೊಂದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ.

    ಶಿವಮೊಗ್ಗ ಜಿಲ್ಲೆ, ಭದ್ರಾವತಿ ತಾಲೂಕಿನ ಹೊಳೆಹೊನ್ನೂರು (Holehonnur) ನಿವಾಸಿ ಮಂಜುನಾಥ್ (23) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕಳೆದ 11 ದಿನಗಳ ಹಿಂದೆ ಹೊಳೆಹೊನ್ನೂರಿನ ಕೆನ್ನೆಕೊಪ್ಪದಲ್ಲಿ ಈ ಘಟನೆ ನಡೆದಿದ್ದು ಇದೀಗ ತಡವಾಗಿ ಬೆಳಕಿಗೆ ಬಂದಿದೆ.

    ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಹಲ್ಲೆ ಮಾಡಿದ್ದರಿಂದ ಮನನೊಂದು ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಪೊಲೀಸರೇ ಕಾರಣ ಎಂದು ಮೃತ ವ್ಯಕ್ತಿಯ ಪತ್ನಿ ಆರೋಪಿಸಿದ್ದಾರೆ. ಇದನ್ನೂ ಓದಿ: ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ಮೇಲೆ ಲಾಂಗ್‌ನಿಂದ ಹಲ್ಲೆ

    ಇದೀಗ ಮಂಜುನಾಥ್ ಮೇಲೆ ಹಲ್ಲೆ ನಡೆಸಿದ್ದ ಇಬ್ಬರು ಪೊಲೀಸರ ವಿರುದ್ಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಲಾಗಿದೆ. ಇದನ್ನೂ ಓದಿ: ಚಿಪ್ಸ್ ಕರೆಯುವ ಎಣ್ಣೆ ಬಾಣಲೆಗೆ ಬಿದ್ದಿದ್ದ 25 ರ ಯುವಕ ಸಾವು

  • ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ಮೇಲೆ ಲಾಂಗ್‌ನಿಂದ ಹಲ್ಲೆ

    ಜಗಳ ಬಿಡಿಸಲು ಹೋದ ಪೊಲೀಸ್ ಪೇದೆ ಮೇಲೆ ಲಾಂಗ್‌ನಿಂದ ಹಲ್ಲೆ

    ಹಾಸನ: ಜಗಳ (Uproar) ಬಿಡಿಸಲು ಹೋದ ಪೊಲೀಸ್ ಪೇದೆ (Police Constable) ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ (Attack) ನಡೆಸಿರುವ ಘಟನೆ ಹಾಸನ (Hassan) ಜಿಲ್ಲೆಯ ಹೊಳೆನರಸೀಪುರ (Holenarasipura) ತಾಲೂಕಿನಲ್ಲಿ ನಡೆದಿದೆ.

    ತಾಲೂಕಿನ ಮಳಲಿ ದೇವಸ್ಥಾನದಲ್ಲಿ ಘಟನೆ ನಡೆದಿದ್ದು, ಯಸಳೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶರತ್ ಹಲ್ಲೆಗೊಳಗಾಗಿದ್ದಾರೆ. ಶರತ್ ಹೊಳೆನರಸೀಪುರ ತಾಲೂಕಿನ ಕುಂದೂರು ಹೋಬಳಿಯ ಎಸ್.ಹೊನ್ನೇನಹಳ್ಳಿ ಗ್ರಾಮದವರಾಗಿದ್ದು, ಜೂ.15ರಂದು ಸಾಂದರ್ಭಿಕ ರಜೆ ಪಡೆದು ತಮ್ಮ ಗ್ರಾಮದ ದೀಪಕ್ ಎಂಬವರ ಮಗಳ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಮಳಲಿ ದೇವಸ್ಥಾನಕ್ಕೆ ಬಂದಿದ್ದರು. ಈ ವೇಳೆ ದೇವಸ್ಥಾನದ ಬಳಿಯಿರುವ ಸೋನಾ ಶ್ರೇಯ ಕನ್ವೆನ್ಷನ್ ಹಾಲ್ ಮುಂಭಾಗ ಚೇತನ್ ಎಂಬ ಯುವಕನಿಗೆ ಶರತ್ ಅವರ ಗ್ರಾಮಕ್ಕೆ ಸೇರಿದ ಯುವಕರ ಗುಂಪೊಂದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡುತ್ತಿದ್ದರು. ಇದನ್ನೂ ಓದಿ: ಚಿಪ್ಸ್ ಕರೆಯುವ ಎಣ್ಣೆ ಬಾಣಲೆಗೆ ಬಿದ್ದಿದ್ದ 25 ರ ಯುವಕ ಸಾವು

    ಈ ಸಂದರ್ಭ ಶರತ್ ಜಗಳ ಬಿಡಿಸಲು ಹೋಗಿದ್ದು, ಮಿಥುನ್, ಲೋಹಿತ್, ನಟರಾಜ ಹಾಗೂ ಇತರರು ಶರತ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ನಟರಾಜ ಎಂಬ ಆರೋಪಿ ಶರತ್ ತಲೆಗೆ ಕಲ್ಲಿನಿಂದ ಹೊಡೆದು ಕಾರಿನಿಂದ ಲಾಂಗ್ ತಂದಿದ್ದು, ಇದನ್ನು ನೋಡಿದ ಶರತ್ ಕನ್ವೆನ್ಷನ್ ಹಾಲ್ ಒಳಗೆ ಓಡಿದ್ದಾರೆ. ಈ ವೇಳೆ ಪುಂಡರೂ ಸಹ ಕನ್ವೆನ್ಷನ್ ಹಾಲ್ ಒಳಗೆ ನುಗ್ಗಿ ಶರತ್ ಮೇಲೆ ಮನಬಂದಂತೆ ಲಾಂಗ್‌ನಿಂದ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಕೋಮು ಸಂಘರ್ಷದಲ್ಲಿ ಬಲಿಯಾದ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

    ಹಲ್ಲೆಯಿಂದಾಗಿ ಶರತ್ ಹಾಲ್‌ನಲ್ಲೇ ಕುಸಿದು ಬಿದ್ದಿದ್ದಾರೆ. ಈ ಕುರಿತು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶರತ್ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರಯಾಗಿದ್ದು, ಸದ್ಯ ಗಾಯಾಳು ಶರತ್ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಊರಿಗೆ ಹೋಗೋಣವೆಂದು ಕರ್ಕೊಂಡು ಬಂದು ಮಕ್ಕಳೆದುರೇ ದಾರಿ ಮಧ್ಯೆ ಪತ್ನಿಯನ್ನ ಹೊಡೆದು ಕೊಂದ!

  • 25 ಬಾರಿ ಚಾಕುವಿನಿಂದ ಇರಿದು ಮಗಳನ್ನೇ ಕೊಂದ ಪಾಪಿ ತಂದೆ!

    25 ಬಾರಿ ಚಾಕುವಿನಿಂದ ಇರಿದು ಮಗಳನ್ನೇ ಕೊಂದ ಪಾಪಿ ತಂದೆ!

    ಗಾಂಧಿನಗರ: ಮಗಳನ್ನು ಬರ್ಬರವಾಗಿ (Daughter Murder in Surat) ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಸೂರತ್ ಪೊಲೀಸರು (Surat Police) ಬಂಧಿಸಿದ್ದಾರೆ.

    ಈ ಘಟನೆ ಮೇ 18ರಂದು ಕಡೋದರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

    ಪ್ರಕರಣ ಸಂಬಂಧ ಪತ್ನಿ ರೇಖಾ ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ಘಟನೆ ನಡೆದು 2 ದಿನಗಳ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರಾಮಾನುಜ (45) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಪಶ್ಚಾತ್ತಾಪವಿಲ್ಲ, ನನ್ನ ತಿರಸ್ಕರಿಸಿದ್ದಕ್ಕೆ ಆಕೆಯನ್ನು ಕೊಂದೆ- ತಪ್ಪೊಪ್ಪಿಕೊಂಡ ಸಾಹಿಲ್

    ರಾಮಾನುಜ ತನ್ನ ಕುಟುಂಬದ ಜೊತೆ ಸೂರತ್‍ನ ಸತ್ಯ ನಗರ ಸೊಸೈಟಿಯಲ್ಲಿ ಬಾಡಿಗೆ ಅಪಾರ್ಟ್‌ ಮೆಂಟ್‍ನಲ್ಲಿ ವಾಸಿಸುತ್ತಿದ್ದನು. ಮಗಳು ಟೆರೇಸ್ ಮೇಲೆ ಮಲಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಪತ್ನಿಯೊಂದಿಗೆ ರಾಮಾನುಜ ಜಗಳವಾಡಿದ್ದಾನೆ. ಈ ಜಗಳ ತಾರಕಕ್ಕೇರಿ ಆರೋಪಿ ತಾಳ್ಮೆ ಕಳೆದುಕೊಂಡಿದ್ದು, ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸಿಸಿಟಿವಿಯಲ್ಲಿ ಏನಿದೆ..?: ರಾತ್ರಿ 11.20 ರ ಸುಮಾರಿಗೆ ರಾಮಾನುಜ ಮೊದಲು ತನ್ನ ಮಕ್ಕಳ ಮುಂದೆಯೇ ಪತ್ನಿ (Wife) ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಮಕ್ಕಳು ತಡೆಯಲು ಪ್ರಯತ್ನಿಸಿದ್ದಾರೆ. ಆಗ ಮಕ್ಕಳ ಮೇಲೂ ಹಲ್ಲೆ ಮಾಡಲು ರಾಮಾನುಜ ಯತ್ನಿಸಿದ್ದಾನೆ. ಹೀಗೆ ಸಿಟ್ಟಿನಲ್ಲಿದ್ದ ರಾಮಾನುಜನ ಕೈಗೆ ಮಗಳು ಸಿಕ್ಕಿದ್ದಾಳೆ. ಮಗಳನ್ನು ಗೋಡೆಗೆ ದಬ್ಬಿ ಅನೇಕ ಬಾರಿ ಚಾಕುವಿನಿಂದ ಇರಿದಿದ್ದಾನೆ.

    ತನ್ನ ಜೀವವನ್ನು ಉಳಿಸಿಕೊಳ್ಳಲು ತಂದೆಯ ಹಿಡಿತದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಾ, ಪಕ್ಕದಲ್ಲಿದ್ದ ಕೋಣೆಯೊಳಗೆ ಆಕೆ ನುಗ್ಗಿದಳು. ಅವಳನ್ನು ಹಿಂಬಾಲಿಸಿದ ರಾಮಾನುಜ ಚಾಕುವಿನಿಂದ ಮತ್ತೆ ಚುಚ್ಚಿದ್ದಾನೆ. ಮಗಳ ಮೇಲೆ ಮಾರಣಾಂತಿಕ ಹಲ್ಲೆಯ ಬಳಿಕವೂ ರಾಮಾನುಜನು ತನ್ನ ಪತ್ನಿಗೆ ಹಾನಿ ಮಾಡಲು ನಿರ್ಧರಿಸಿ ಟೆರೇಸ್ ಮೇಲೆ ಹೋದನು. ತಮ್ಮ ತಾಯಿಯನ್ನು ರಕ್ಷಿಸುವ ಸಲುವಾಗಿ ಮಕ್ಕಳು ಪ್ರಧ್ಯಪ್ರವೇಶ ಮಾಡಿ ರಾಮಾನುಜನ ಹಲ್ಲೆಗೊಳಗಾಗಿ ಅವರೂ ಗಾಯಗೊಂಡಿದ್ದಾರೆ.

    ಈ ಬಗ್ಗೆ ಸೂರತ್ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಕೂಡಲೇ ಎಚ್ಚೆತ್ತ ಪೊಲೀಸರು ರಾಮಾನುಜನನ್ನು ಬಂಧಿಸಿ, ಕೊಲೆಗೆ ಬಳಸಿದ್ದ ಆಯುಧವನ್ನೂ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ ಮತ್ತು ಆತನ ವಿರುದ್ಧ ಕೊಲೆ ಮತ್ತು ಕೊಲೆ ಯತ್ನ ಸೇರಿದಂತೆ ಐಪಿಸಿಯ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕರಣದ ಪ್ರಮುಖ ತನಿಖಾಧಿಕಾರಿ ಇನ್‍ಸ್ಪೆಕ್ಟರ್ ಆರ್‍ಕೆ ಪಟೇಲ್ ತಿಳಿಸಿದ್ದಾರೆ. ಅಧಿಕಾರಿಗಳು ಸಂತ್ರಸ್ತೆ ಮತ್ತು ದೂರುದಾರರಾದ ರೇಖಾ ಅವರಿಂದ ಹೇಳಿಕೆಗಳನ್ನು ತೆಗೆದುಕೊಂಡಿದ್ದಾರೆ. ಇತ್ತ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

  • ವಿಚಾರಣೆ ವೇಳೆ ಕಾನ್ಸ್ಟೇಬಲ್ ಮೇಲೆ ಹಲ್ಲೆ – ಮೂವರಿಗೆ ನ್ಯಾಯಾಂಗ ಬಂಧನ

    ವಿಚಾರಣೆ ವೇಳೆ ಕಾನ್ಸ್ಟೇಬಲ್ ಮೇಲೆ ಹಲ್ಲೆ – ಮೂವರಿಗೆ ನ್ಯಾಯಾಂಗ ಬಂಧನ

    ರಾಯಚೂರು: ಅಪಘಾತ (Accident) ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವೇಳೆ ಪೊಲೀಸ್ ಕಾನ್ಸ್ಟೇಬಲ್ (Police Constable) ಮೇಲೆ ಹಲ್ಲೆ (Attack) ಮಾಡಿರುವ ಘಟನೆ ರಾಯಚೂರಿನ (Raichur) ದೇವದುರ್ಗದ ಗಬ್ಬೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ.

    ನರಸಿಂಹಲು ಹಲ್ಲೆಗೊಳಗಾದ ಪೊಲೀಸ್ ಕಾನ್ಸ್ಟೇಬಲ್. ಆರೋಪಿಗಳಾದ ಟಾಟಾ ಏಸ್ ವಾಹನದ ಮಾಲೀಕ ಹಾಗೂ ಚಾಲಕರಾದ ಆರೋಪಿ ಸೈಯದ್ ಫರೀದ್, ಸೈಯದ್ ವಹೀದ್, ಸೈಯದ್ ದಸ್ತಗಿರಿ ಮೂವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಲಾಗಿದೆ. ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಲಾರಿ ಹಾಗೂ ಟಾಟಾ ಏಸ್ ನಡುವಿನ ಅಪಘಾತ ಪ್ರಕರಣ ವಿಚಾರಣೆ ವೇಳೆ ಘಟನೆ ನಡೆದಿದೆ. ಇದನ್ನೂ ಓದಿ: ತಾಂತ್ರಿಕ ತೊಂದರೆಯಿಂದ ತರಬೇತಿ ವಿಮಾನ ತುರ್ತು ಭೂಸ್ಪರ್ಶ- ತಪ್ಪಿದ ಭಾರೀ ಅನಾಹುತ

    ಅಪಘಾತವಾದ ಎರಡು ವಾಹನಗಳನ್ನು ಠಾಣೆಗೆ ತಂದು ನಿಲ್ಲಿಸಿ ದೂರು ಕೊಡಿ. ಇಲ್ಲವಾದರೆ ಹೊರಗಡೆ ಸಂಧಾನ ಮಾಡಿಕೊಳ್ಳಿ ಎಂದು ಹೇಳಿದ್ದಕ್ಕೆ ಲಾರಿಯವರ ಪರ ಮಾತನಾಡುತ್ತಿದ್ದೀರಿ ಎಂದು ಪೊಲೀಸ್ ಕಾನ್ಸ್ಟೇಬಲ್ ಮೇಲೆ ಮೂವರು ಹಲ್ಲೆ ಮಾಡಿದ್ದಾರೆ. ಕರ್ತವ್ಯನಿರತ ಪೊಲೀಸ್ ಮೇಲೆ ಹಲ್ಲೆ ಹಿನ್ನೆಲೆ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪ್ರಿಯಕರನಿಗೋಸ್ಕರ ಗಂಡನಿಗೇ ಸ್ಕೆಚ್‌ ಹಾಕಿ ಮುಗಿಸಿದ್ಲು ಕೋಲಾರದ ಖತರ್ನಾಕ್ ಲೇಡಿ

  • ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ

    ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ

    ಮಂಗಳೂರು: ಬಜರಂಗದಳ (Bajrangdal) ಮತ್ತು ಬಿಜೆಪಿ ಕಾರ್ಯಕರ್ತರ (bJP Activists) ಮೇಲೆ ತಲವಾರು ದಾಳಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ.

    ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರ ಶಂಕೆ ವ್ಯಕ್ತವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ತಂಡದಿಂದ ದಾಳಿ ನಡೆದಿರುವ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ: ಬಿಲ್ ಕೇಳಲು ಬಂದ ಲೈನ್‍ಮೆನ್ ಮೇಲೆ ಹಲ್ಲೆ ಮಾಡಿದ್ದ ವ್ಯಕ್ತಿ ಅರೆಸ್ಟ್

    ಪೆರಾಜೆ (Peraje) ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೇಲೆ ದಾಳಿಯಾಗಿದೆ. ಮಾಣಿ ಜಂಕ್ಷನ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಓಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್‍ಗೆ ಡಿಕ್ಕಿ ಹೊಡೆದು ಕೃತ್ಯ ಎಸಗಿದೆ. ಘಟನೆಯಿಂದ ಯುವಕರ ಕಾಲು ಮತ್ತು ತಲೆಯ ಭಾಗಕ್ಕೆ ಗಾಯಗಳಾಗಿವೆ. ಹಲ್ಲೆಗೊಳಗಾದ ಇಬ್ಬರು ಯುವಕರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು, ಪ್ರವೀಣ್ ನಾಯ್ಕ್ ಯಾನೆ ಮಹಾಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ ಬಗ್ಗೆ ದೂರು ನೀಡಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರ ತಂಡ ಭೇಟಿ ನೀಡಿ ತನಿಖೆ ನಡೆಸಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬಿಲ್ ಕೇಳಲು ಬಂದ ಲೈನ್‍ಮೆನ್ ಮೇಲೆ ಹಲ್ಲೆ ಮಾಡಿದ್ದ ವ್ಯಕ್ತಿ ಅರೆಸ್ಟ್

    ಬಿಲ್ ಕೇಳಲು ಬಂದ ಲೈನ್‍ಮೆನ್ ಮೇಲೆ ಹಲ್ಲೆ ಮಾಡಿದ್ದ ವ್ಯಕ್ತಿ ಅರೆಸ್ಟ್

    ಕೊಪ್ಪಳ: ಕರೆಂಟ್ ಬಿಲ್ (Electricity Bill) ಕೇಳಲು ಬಂದಿದ್ದ ಲೈನ್‍ಮೆನ್ ಮೇಲೆ ಹಲ್ಲೆ ಮಾಡಿದ್ದ ವ್ಯಕ್ತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

    ಬಿಲ್ ಕೇಳಲು ಬಂದ ಲೈನ್ ಮೆನ್ ಮಂಜುನಾಥ್ (Lineman Manjunath) ಮೇಲೆ ಚಂದ್ರಶೇಖರಯ್ಯ ಹಲ್ಲೆ ಮಾಡಿದ್ದನು. ಇದೀಗ ಆರೋಪಿ ಚಂದ್ರಶೇಖರಯ್ಯನನ್ನು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಪೊಲೀಸ (Munirabad Police) ರು ಬಂಧಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಶುರುವಾಯ್ತು ಬಿಜೆಪಿ ಕಾಲದ ಅಕ್ರಮದ ತನಿಖೆ – ಮೊದಲ ಎಫ್‌ಐಆರ್‌ ದಾಖಲು

    ಚಂದ್ರಶೇಖರಯ್ಯ ಕಳೆದ ಆರು ತಿಂಗಳಿಂದ ಅಂದಾಜು 9990 ಬಿಲ್ ಬಾಕಿ ಉಳಿಸಿಕೊಂಡಿದ್ದನು. ಹೀಗಾಗಿ ಜೆಸ್ಕಾಂ ಸಿಬ್ಬಂದಿ ಲೈನ್ ಕಟ್ ಮಾಡಿದ್ದರು. ಆದರೂ ಮತ್ತೆ ಅನಧಿಕೃತವಾಗಿ ಚಂದ್ರಶೇಖರಯ್ಯ ವಿದ್ಯುತ್ ಸಂರ್ಪಕ ಪಡೆದಿದ್ದನು. ಈ ಹಿನ್ನೆಲೆಯಲ್ಲಿ ಅಕ್ರಮ ವಿದ್ಯುತ್ ಸಂರ್ಪಕ ಪಡೆದಿದ್ದನ್ನೇ ಪ್ರಶ್ನಿಸೋಕೆ ಬಂದಾಗ ಹಲ್ಲೆ ಮಾಡಿದ್ದಾನೆ. ಹೀಗಾಗೆ ಚಂದ್ರಶೇಖರಯ್ಯ ಅವರನ್ನ ಅರೆಸ್ಟ್ ಮಾಡಿದ್ದೆವೆ. ಮುಂದೆ ಕಾನೂನು ಕ್ರಮ ಕೈಗೊಳ್ತೆವೆ ಎಂದು ಎಸ್ಪಿ ಯಶೋಧಾ ವಂಟಗೋಡಿ ಹೇಳಿದ್ದಾರೆ.

    ಕಾಂಗ್ರೆಸ್ ತಮ್ಮ ಪ್ರಣಾಳಿಕೆಯಲ್ಲಿ 200 ಯುನಿಟ್ ಕರೆಂಟ್ ಉಚಿತವಾಗಿ ನೀಡುತ್ತೇವೆ ಎಂದು ತಿಳಿಸಿತ್ತು. ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಈ ಬೆನ್ನಲ್ಲೇ ಜನ ನಾವು ಕರೆಂಟ್ ಬಿಲ್ ಕಟ್ಟಲ್ಲವೆಂದು ಹಠಕ್ಕೆ ಬಿದ್ದಿದ್ದಾರೆ.

     

  • ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ

    ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯರಿಂದ ಹಲ್ಲೆ

    ಮಡಿಕೇರಿ: ಪ್ರವಾಸಕ್ಕೆಂದು ಬಂದ ಪ್ರವಾಸಿಗರ (Tourists) ಮೇಲೆ ಕ್ಷುಲ್ಲಕ ಕಾರಣಕ್ಕೆ ಪಾರ್ಕಿಂಗ್ ಸುಂಕ ವಸೂಲಿಗಾರರು (Customs Collectors) ದೊಣ್ಣೆಯಿಂದ ಹೊಡೆದು ಹಲ್ಲೆ (Attack) ಮಾಡಿರುವ ಘಟನೆ ಮಡಿಕೇರಿಯ ಅಬ್ಬಿ ಫಾಲ್ಸ್‌ನಲ್ಲಿ (Abbi Falls) ನಡೆದಿದೆ.

    ಹಲ್ಲೆ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಳೆದ ಒಂದು ವಾರದ ಹಿಂದೆ ಆಟೋ  ಡ್ರೈವರ್‌ ಒಬ್ಬರಿಗೆ ಇದೇ ರೀತಿ ಹಲ್ಲೆ ನಡೆಸಲಾಗಿತ್ತು. ಹೀಗೇ ಹಲವು ಬಾರಿ ಪ್ರವಾಸಿಗರ ಮೇಲೆ ಇಲ್ಲಿನ ಸುಂಕ ವಸೂಲಿಗಾರರು ಹಲ್ಲೆ ನಡೆಸುತ್ತಿದ್ದಾರೆ ಎಂಬ ಆರೋಪ ಆಗಾಗ ಕೇಳಿ ಬರುತ್ತಿದೆ. ಆದರೂ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದೇ ಪ್ರವಾಸಿ ತಾಣವಾದ ಕೊಡಗಿಗೆ (Kodagu) ಯಾವುದೇ ಪ್ರವಾಸಿಗರು ಬರದಂತೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್‌ ಬಂಕ್‌ನಲ್ಲಿ ಅಗ್ನಿ ದುರಂತ – ತುಮಕೂರು ಯುವತಿ ಬಲಿ

    ದೂರದ ಊರಿನಿಂದ ಬರುವ ಪ್ರವಾಸಿಗರು ಹಲ್ಲೆಗೊಳಗಾದರೂ ಯಾವುದೇ ದೂರು ನೀಡದೇ ವಾಪಸ್ ತೆರಳುತ್ತಾರೆ. ದೂರು ನೀಡಿದರೆ ಮತ್ತೆ ಪುನಃ ಇಲ್ಲಿಯ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯಕ್ಕೆ ಹಾಜರಾಗಬೇಕಾದ ಕಷ್ಟದಿಂದ ಇದುವರೆಗೂ ಹಲ್ಲೆಗೊಳಗಾದ ಪ್ರವಾಸಿಗಳು ನೇರವಾಗಿ ದೂರು ನೀಡಿಲ್ಲ. ಇದರ ಲಾಭವನ್ನು ಪಡೆದ ವಸೂಲಿಗಾರರು ದುಪ್ಪಟ್ಟು ಬೆಲೆಗೆ ಸಾಮಗ್ರಿಗಳನ್ನು ಮಾರಾಟ ಮಾಡಿ ಪ್ರವಾಸಿಗರು ಪ್ರಶ್ನಿಸಿದಾಗ ಅವರ ಮೇಲೆ ನೇರವಾಗಿ ಹಲ್ಲೆ ನಡೆಸಿ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಹಲವರು ಹೇಳಿದ್ದಾರೆ. ಇದನ್ನೂ ಓದಿ: ಪ್ರಮಾಣವಚನ ಕಾರ್ಯಕ್ರಮದಲ್ಲಿ ಸರಗಳ್ಳರ ಕೈ ಚಳಕ!

    ಜಿಲ್ಲೆಯ ಪ್ರವಾಸೋದ್ಯಮ ಇಲಾಖೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ಕಣ್ಣುಮುಚ್ಚಿ ಕುಳಿತಿದೆ. ಪೊಲೀಸ್ ಇಲಾಖೆ ನಮಗೆ ದೂರು ಬಂದರೆ ಮಾತ್ರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಅಸಹಾಯಕತೆಯನ್ನು ತೋಡಿಕೊಳ್ಳುತ್ತಾರೆ. ಈ ರೀತಿಯಾದ ಪ್ರಕರಣಗಳು ಹೀಗೇ ಮುಂದುವರಿದರೆ ಕೊಡಗು ಜಿಲ್ಲೆಗೆ ಪ್ರವಾಸಿಗರ ಸಂಖ್ಯೆ ಇಳಿಮುಖವಾಗುವ ಸಂಭವವಿದೆ. ಈಗಾಗಲೇ ಇಂತಹ ಪ್ರಕರಣಗಳ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪ್ರವಾಸಿಗರಲ್ಲಿ ಭೀತಿಯ ವಾತಾವರಣ ನಿರ್ಮಿಸುತ್ತಿದೆ. ಇನ್ನಾದರೂ ಜಿಲ್ಲಾಡಳಿತ ಇದಕ್ಕೆ ಸೂಕ್ತ ಕ್ರಮ ಕೈಗೊಂಡು ಪೊಲೀಸರನ್ನು ನಿಯೋಜಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಯುವಕನ ಹತ್ಯೆ ಪ್ರಕರಣ – ಇಬ್ಬರ ಬಂಧನ

  • ಬೆಂಗಳೂರಿನಲ್ಲಿ ಲೇಡಿ ಡಾನ್‌ನಿಂದ ಉದ್ಯಮಿ ಮೇಲೆ ಹಲ್ಲೆ

    ಬೆಂಗಳೂರಿನಲ್ಲಿ ಲೇಡಿ ಡಾನ್‌ನಿಂದ ಉದ್ಯಮಿ ಮೇಲೆ ಹಲ್ಲೆ

    ಬೆಂಗಳೂರು: ಫಾಲೋ ಮಾಡಿಕೊಂಡು ಬಂದು ನಡು ರಸ್ತೆಯಲ್ಲಿ ಥಳಿಸಿ ಲೇಡಿ ಡಾನ್ (Lady Don) ಉದ್ಯಮಿ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಅಖಿಲ್ ಅಲಿಯಾಸ್ ಹೇಮಾದ್ರಿ ಎಂಬ ಉದ್ಯಮಿ ಹಲ್ಲೆಗೊಳಗಾದ ವ್ಯಕ್ತಿ. ಹಲ್ಲೆ ನಡೆಸಿದ ವ್ಯಕ್ತಿಗಳಲ್ಲಿ ಒಬ್ಬನಾದ ಆರೋಪಿ ರೋನಿತ್ ಕಾರು ಬ್ಯಸಿನೆಸ್ ವಿಚಾರದಲ್ಲಿ ಉದ್ಯಮಿಗೆ ವಂಚನೆ ಮಾಡಿದ್ದ. ಈ ಹಿನ್ನೆಲೆ ಅಖಿಲ್ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ರೋನಿತ್‌ನನ್ನು ಬಂಧಿಸಿದ್ದರು. ಬಳಿಕ ಜಾಮೀನು ಪಡೆದು ರೋನಿತ್ ಹೊರಗೆ ಬಂದಿದ್ದ. ಇದನ್ನೂ ಓದಿ: ಗ್ಯಾರಂಟಿ ಸಿಎಂ ಭಾಗ್ಯ ಕೊಡಿ – ಹೈಕಮಾಂಡ್‌ ಮುಂದೆ ಸಿದ್ದು, ಡಿಕೆಶಿ ವಾದ ಏನು?

    ಉದ್ಯಮಿ ತನ್ನ ವಿರುದ್ಧ ದೂರು ನೀಡಿದ ಹಿನ್ನೆಲೆ ರೋನಿತ್ ಪದೇ ಪದೇ ಅಖಿಲ್‌ಗೆ ಬೆದರಿಕೆ ಹಾಕುತ್ತಿದ್ದು, ಸೇಡು ತೀರಿಸಿಕೊಳ್ಳುವ ಸಲುವಾಗಿ ಸಮಯಕ್ಕಾಗಿ ಕಾಯುತ್ತಿದ್ದ. ಅಖಿಲ್ ಕಚೇರಿ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ರೋನಿತ್ ಮತ್ತು ಆತನ ಟೀಂ ಉದ್ಯಮಿಯನ್ನು ಫಾಲೋ ಮಾಡಿಕೊಂಡು ಬಂದು ಎಲ್ ಆಂಡ್ ಟಿ ಅಪಾರ್ಟ್ಮೆಂಟ್ ಬಳಿ ಅಡ್ಡ ಹಾಕಿದ್ದಾರೆ. ಇದನ್ನೂ ಓದಿ: ನಾನು ತಪ್ಪು ಮಾಡಿದ್ರೆ ನನ್ನ ವಂಶ ನಿರ್ವಂಶವಾಗಲಿ – ಮಳವಳ್ಳಿ ಬಿಜೆಪಿ ಪರಾರ್ಜಿತ ಅಭ್ಯರ್ಥಿ

    ನಂತರ ಲೇಡಿ ಡಾನ್ ದುರ್ಗಾ ಅಲಿಯಾಸ್ ಸಹನಾ ಸೇರಿದಂತೆ ಐವರು ಸೇರಿ ಉದ್ಯಮಿ ಅಖಿಲ್ ಕಾರಿನಲ್ಲಿರುವಾಗಲೇ ಅವರ ಮೇಲೆ ಹಲ್ಲೆ ನಡೆಸಿ ಅವರ ಕಾರಿನ ಗ್ಲಾಸ್ ಒಡೆದು ಹಾಕಿದ್ದಾರೆ. ಬಳಿಕ ಅಖಿಲ್‌ಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಕುರಿತು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಮ್ಮಿಶ್ರ ಸರ್ಕಾರದ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ: ಸುಧಾಕರ್ ಬಾಂಬ್

  • ಪ್ರತಿಭಟನಾ ನಿರತ ಕುಸ್ತಿಪಟುಗಳು, ಪೊಲೀಸರ ನಡುವೆ ಸಂಘರ್ಷ – ಹಲ್ಲೆ ಆರೋಪ

    ಪ್ರತಿಭಟನಾ ನಿರತ ಕುಸ್ತಿಪಟುಗಳು, ಪೊಲೀಸರ ನಡುವೆ ಸಂಘರ್ಷ – ಹಲ್ಲೆ ಆರೋಪ

    ನವದೆಹಲಿ: ಮಹಿಳಾ ಕುಸ್ತಿಪಟುಗಳ (Wrestlers) ಮೇಲೆ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಬುಧವಾರ ರಾತ್ರಿ ಕುಸ್ತಿಪಟುಗಳು ಹಾಗೂ ಪೊಲೀಸರ (Police) ನಡುವೆ ಘರ್ಷಣೆ ಏರ್ಪಟ್ಟಿದೆ.

    ಪ್ರತಿಭಟನಾ ಸ್ಥಳಕ್ಕೆ ತಮ್ಮ ಹಾಸಿಗೆಗಳನ್ನು ತರಲು ಯತ್ನಿಸಿದಾಗ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ. ಅನೇಕ ಕುಸ್ತಿಪಟುಗಳ ತಲೆಗೆ ಏಟು ಬಿದ್ದಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಓರ್ವ ಕುಸ್ತಿಪಟು ಘರ್ಷಣೆಯಲ್ಲಿ ಗಾಯಗೊಂಡು ಪ್ರಜ್ಞೆತಪ್ಪಿ ಬಿದ್ದಿದ್ದು, ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಆಮ್ ಆದ್ಮಿ ಪಕ್ಷದ ಶಾಸಕ ಸೋಮನಾಥ್ ಭಾರ್ತಿ ಅವರು ಅನುಮತಿಯಿಲ್ಲದೆ ಹಾಸಿಗೆಗಳನ್ನು ಹಿಡಿದುಕೊಂಡು ಪ್ರತಿಭಟನಾ ಸ್ಥಳಕ್ಕೆ ಬಂದಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿದಾಗ ಸಣ್ಣ ವಾಗ್ವಾದ ನಡೆದಿದೆ. ನಂತರ ಭಾರ್ತಿ ಹಾಗೂ ಇಬ್ಬರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದು, ಹಲ್ಲೆಯ ಆರೋಪವನ್ನು ತಳ್ಳಿಹಾಕಿದ್ದಾರೆ. ಇದನ್ನೂ ಓದಿ: ಬಾರಾಮುಲ್ಲಾದಲ್ಲಿ ಎನ್‌ಕೌಂಟರ್‌ಗೆ ಇಬ್ಬರು ಉಗ್ರರ ಹತ್ಯೆ – ಜಮ್ಮುವಿನಲ್ಲಿ ಹೈ ಅಲರ್ಟ್

    ಘರ್ಷಣೆಯ ಬಳಿಕ ಪ್ರತಿಭಟನಾ ಸ್ಥಳದಲ್ಲಿ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಹಾಗೂ ಬ್ಯಾರಿಕೇಡ್‌ನಿಂದ ನಿರ್ಬಂಧಿಸಲಾಗಿದೆ. ಪ್ರತಿಭಟನಾ ನಿರತ ಕುಸ್ತಿಪಟುಗಳ ಬಳಿಗೆ ಮಾಧ್ಯಮ ಸಿಬ್ಬಂದಿ ತೆರಳದಂತೆಯೂ ತಡೆಯಲಾಗಿದೆ.

    ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಭಾರತದ ಉನ್ನತ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. 6 ಬಾರಿ ಸಂಸದರಾಗಿರುವ ಭೂಷಣ್ ಸಿಂಗ್ ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ಸಿಂಗ್ ವಿರುದ್ಧ ಕುಸ್ತಿಪಟುಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಿಚಾರಣೆ ನಡೆಸಲಿದೆ. ಇದನ್ನೂ ಓದಿ: ಯತ್ನಾಳ್‌, ಪ್ರಿಯಾಂಕ್‌ ಖರ್ಗೆಗೆ ಶೋಕಾಸ್‌ ನೋಟಿಸ್‌ ಜಾರಿ