Tag: ಹಳದಿ ಅಲರ್ಟ್

  • ನಾಲ್ಕೈದು ದಿನ ಮತ್ತೆ ಭಾರೀ ಮಳೆ, ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

    ನಾಲ್ಕೈದು ದಿನ ಮತ್ತೆ ಭಾರೀ ಮಳೆ, ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

    – ಇಂದು, ನಾಳೆ ಹೆಚ್ಚು ಮಳೆ ಸಾಧ್ಯತೆ

    ಬೆಂಗಳೂರು: ಮುಂದಿನ ನಾಲ್ಕೈದು ದಿನಗಳಲ್ಲಿ ರಾಜ್ಯದ ಬಹುತೇಕ ಎಲ್ಲ ಕಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ಮುನ್ನೆಚ್ಚರಿಕೆ ನೀಡಿದ್ದಾರೆ.

    ರಾಜ್ಯದಲ್ಲಿ ಮಳೆ ಸ್ಥಿತಿಗತಿ ಕುರಿತು ಮಾಹಿತಿ ನೀಡಿರುವ ಅವರು, ಬಂಗಾಳಕೊಲ್ಲಿಯ ಮಧ್ಯ ಭಾಗದಲ್ಲಿ 5.8 ಕಿಲೋಮೀಟರ್ ಎತ್ತರದಲ್ಲಿ ಸಕ್ರ್ಯೂಲೇಷನ್ ಇದೆ. ಮುಂದಿನ 24 ಗಂಟೆಗಳಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಅಕ್ಟೋಬರ್ 19 ರಿಂದ 23 ರವರೆಗೆ ಕರ್ನಾಟಕದ ಕರಾವಳಿಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದ್ದಾರೆ.

    ಭಾರೀ ಮಳೆ ಹಿನ್ನೆಲೆ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ 20-23ರ ವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 19-23 ರವರೆಗೆ ಮಳೆಯಾಗುವ ನಿರೀಕ್ಷೆ ಇದೆ. ಅಲ್ಲದೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಬೀದರ್, ಚಿಕ್ಕಬಳ್ಳಾಪುರ, ಗದಗ ಜಿಲ್ಲೆಗಳಿಗೆ ಅಕ್ಟೋಬರ್ 19-22 ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಲ್ಲಿ ಇಂದು ಹಾಗೂ ಮಂಗಳವಾರ ಮಳೆಯಾಗುವ ಸಾಧ್ಯತೆ ಇದೆ.

    ವಾಯುಭಾರ ಕುಸಿತ ಹಿನ್ನೆಲೆ ಅಕ್ಟೋಬರ್ 21, 22 ಹಾಗೂ 23ರಂದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಬೆಂಗಳೂರಲ್ಲಿ ನಿನ್ನೆ 4 ಸೆಂ.ಮೀ. ಮಳೆಯಾಗಿದೆ. ಇಂದು ಹಾಗೂ ನಾಳೆ ಹೆಚ್ಚಿನ ಮಳೆಯಾಗಲಿದೆ ಎಂದು ಸಿ.ಎಸ್.ಪಾಟೀಲ್ ಎಚ್ಚರಿಸಿದ್ದಾರೆ.

  • ಭಾರೀ ಮಳೆ ಸಾಧ್ಯತೆ- 5 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

    ಭಾರೀ ಮಳೆ ಸಾಧ್ಯತೆ- 5 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

    ಬೆಂಗಳೂರು: ಮುಂದಿನ 5 ದಿನಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಹಿನ್ನೆಲೆ ಹವಾಮಾನ ಇಲಾಖೆ 5 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದೆ.

    ರಾಜ್ಯದ 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಮೂರು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳವರಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಇನ್ನು ಬೆಳಗಾವಿ, ಧಾರವಾಡದಲ್ಲಿ ಜು.9 ಹಾಗೂ 10 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 10 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.

    ಕರಾವಳಿ ಭಾಗದ ಜಿಲ್ಲೆಗಳಲ್ಲಿ ಇಂದಿನಿಂದ ಜು.10ರ ವರೆಗೆ ಸಾಧಾರಣ ಮಳೆ ಹಾಗೂ ಕೆಲವೆಡೆ ವ್ಯಾಪಕ ಮಳೆಯಾಗಲಿದೆ. ಜು.8, 9 ಹಾಗೂ 10ರಂದು ಬಹುತೇಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಕೊರೊನಾ ನಡುವೆ ಇದೀಗ ಮಳೆಯ ಅಬ್ಬರ ಜನತೆಯ ನಿದ್ದೆಗೆಡಿಸಿದೆ.

  • ಬೆಂಗ್ಳೂರಿನಲ್ಲಿ ಹಳದಿ ಅಲರ್ಟ್ ಘೋಷಣೆ – ತುರ್ತು ಸಭೆ ಕರೆದ ಬಿಬಿಎಂಪಿ

    ಬೆಂಗ್ಳೂರಿನಲ್ಲಿ ಹಳದಿ ಅಲರ್ಟ್ ಘೋಷಣೆ – ತುರ್ತು ಸಭೆ ಕರೆದ ಬಿಬಿಎಂಪಿ

    ಬೆಂಗಳೂರು: ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆ ನಗರದಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.

    ನಗರದಲ್ಲಿ 65ರಿಂದ 115 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಫುಲ್ ಅಲರ್ಟ್ ಆಗಿದ್ದಾರೆ. ಗೌತಮ್ ಕುಮಾರ್ ಅವರು ಬಿಬಿಎಂಪಿ ಕಚೇರಿಯಲ್ಲಿ ಅಧಿಕಾರಿಗಳಿಗೆ ತುರ್ತು ಸಭೆ ಕರೆದಿದ್ದರು. ಈ ಸಭೆಯಲ್ಲಿ ಮಳೆಯಿಂದ ಆಗುವ ಹಾನಿಗಳು ಹಾಗೂ ಅನಾಹುತಗಳನ್ನು ತಡೆಗಟ್ಟುವ ಕುರಿತು ಚರ್ಚೆ ಮಾಡಿದ್ದಾರೆ.

    ರಾಜಧಾನಿ ಬೆಂಗಳೂರಲ್ಲಿ ಸೋಮವಾರ ಮಧ್ಯಾಹ್ನದಿಂದ ಶುರುವಾಗಿದ್ದ ಮಳೆ ಇಂದು ಬೆಳಗ್ಗಿನವರೆಗೂ ಮುಂದುವರಿಯಿತು. ತಗ್ಗುಪ್ರದೇಶಗಳಲ್ಲಿರುವ ಮನೆಗಳು, ರಸ್ತೆಗಳು ಜಲಾವೃತಗೊಂಡಿವೆ. ಮೆಜೆಸ್ಟಿಕ್, ಮಲ್ಲೇಶ್ವರಂ, ಸದಾಶಿವನಗರ, ಮೇಖ್ರಿ ಸರ್ಕಲ್, ಜಯನಗರ, ಬಿಟಿಎಂ, ಮೈಕೋ ಲೇಔಟ್ ಹೆಚ್.ಎಸ್.ಆರ್ ಲೇಔಟ್, ಕೆಆರ್ ಮಾರುಕಟ್ಟೆ, ಚಾಮರಾಜಪೇಟೆ, ಜೆಸಿ ರೋಡ್ ಸೇರಿದಂತೆ ಬಹುತೇಕ ಎಲ್ಲ ಕಡೆಗಳಲ್ಲಿ ಮಳೆ ಸುರಿದಿದೆ. ಬಿಟಿಎಂ ಎರಡನೇ ಹಂತದಲ್ಲಿ ಮರ ಬಿದ್ದಿದೆ.

  • ದಸರಾ ಸಂಭ್ರಮಕ್ಕೆ ಮಳೆ ಅಡ್ಡಿ ಸಂಭವ – 23 ಜಿಲ್ಲೆಗಳಲ್ಲಿ ಹಳದಿ ಅಲರ್ಟ್

    ದಸರಾ ಸಂಭ್ರಮಕ್ಕೆ ಮಳೆ ಅಡ್ಡಿ ಸಂಭವ – 23 ಜಿಲ್ಲೆಗಳಲ್ಲಿ ಹಳದಿ ಅಲರ್ಟ್

    ಬೆಂಗಳೂರು: ಇಂದು ನಾಡಿನೆಲ್ಲೆಡೆ ನವರಾತ್ರಿ ಸಂಭ್ರಮ ಜೋರಾಗಿದೆ. ಈ ಸಂಭ್ರಮಕ್ಕೆ ವರುಣ ದೇವ ಅಡ್ಡಿಪಡಿಸುವ ಸಾಧ್ಯತೆಯಿದೆ.

    ಬೆಂಗಳೂರು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಿತ್ರದುರ್ಗ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ 7 ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ 23 ಜಿಲ್ಲೆಗಳಿಗೆ ಹವಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ.

    ಬೆಂಗಳೂರಿಗೂ ಸಹ ಹಳದಿ ಅಲರ್ಟ್ ಘೋಷಿಸಿದ್ದು, ಸಂಜೆಯಿಂದ ರಾತ್ರಿಯವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಸುಮಾರು 7 ರಿಂದ 11 ಸೆಂ.ಮೀ. ಮಳೆಯಾಗುವ ನಿರೀಕ್ಷೆಯಿದ್ದು, ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆಯಿಂದ ರಾತ್ರಿವರೆಗೂ ವ್ಯಾಪಕ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ತೆಲಂಗಾಣದಲ್ಲಿ ಸೈಕ್ಲೋನ್ ಸಕ್ರ್ಯೂಲೇಷನ್ ಇರುವುದರಿಂದ ಹಾಗೂ ಕೇರಳದ ಕಡಿಮೆ ಒತ್ತಡ ರೇಖೆ ತನ್ನ ದಿಕ್ಕು ಬದಲಿಸುತ್ತಿರುವುದರಿಂದ ಮಳೆ ಹೆಚ್ಚಾಗಲಿದೆ ಎಂದು ಮಾಹಿತಿ ನೀಡಿದೆ.

    ನಿನ್ನೆಯೂ ಸಹ ಹವಾಮಾನ ಇಲಾಖೆ ರಾಜ್ಯದ 26 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿತ್ತು. ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ದಾವಣಗೆರೆ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿತ್ತು. ಇಂದು 23 ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ.

  • ರಾಜ್ಯದ 26 ಜಿಲ್ಲೆಗಳಿಗೆ ಇಂದು, ನಾಳೆ Yellow ಅಲರ್ಟ್ ಘೋಷಣೆ

    ರಾಜ್ಯದ 26 ಜಿಲ್ಲೆಗಳಿಗೆ ಇಂದು, ನಾಳೆ Yellow ಅಲರ್ಟ್ ಘೋಷಣೆ

    ಬೆಂಗಳೂರು: ಹವಾಮಾನ ಇಲಾಖೆ ರಾಜ್ಯದ 26 ಜಿಲ್ಲೆಗಳಿಗೆ ಇಂದು ಹಾಗೂ ನಾಳೆ ಹಳದಿ ಅಲರ್ಟ್ ಘೋಷಿಸಿದೆ.

    ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ದಾವಣಗೆರೆ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ಇಂದು ಮತ್ತು ನಾಳೆ ಬೆಂಗಳೂರಿಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

    ಮಂಗಳವಾರ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಹೊರತುಪಡಿಸಿ ಉಳಿದ 23 ಜಿಲ್ಲೆಗಳಿಗೆ ಹಳದಿ ಅಲರ್ಟ್ ಮುಂದುವರಿಯಲಿದೆ. ಅಲ್ಲದೆ 7 ರಿಂದ 11 ಸೆಂಟಿಮೀಟರ್ ಮಳೆಯಾಗುವ ನಿರೀಕ್ಷೆ ಇದೆ.

    ಮಂಗಳವಾರ ಮಧ್ಯಾಹ್ನದವರೆಗೂ ಮೋಡ ಕವಿದ ವಾತಾವರಣವಿದ್ದು, ಸಂಜೆಯಿಂದ ರಾತ್ರಿವರೆಗೂ ವ್ಯಾಪಕವಾದ ಗುಡುಗು ಸಹಿತ ಭಾರೀ ಮಳೆ ಆಗುವ ನಿರೀಕ್ಷೆ ಇದೆ. ತೆಲಂಗಾಣದಲ್ಲಿ ಸೈಕ್ಲೋನ್ ಸರ್ಕ್ಯುಲೇಶನ್ ಇರುವುದರಿಂದ ಹಾಗೂ ಕೇರಳದ ಕಡಿಮೆ ಒತ್ತಡ ರೇಖೆ ತನ್ನ ದಿಕ್ಕು ಬದಲಿಸುತ್ತಿರುವುದರಿಂದ ಮಳೆ ಆಗಲಿದೆ ಎಂದು ಹವಾಮಾನ ತಜ್ಞ ರಾಜ ರಮೇಶ್ ಅವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

  • ಇಂದು, ನಾಳೆ ಬೆಂಗ್ಳೂರಿಗೆ ಹಳದಿ ಅಲರ್ಟ್ ಘೋಷಣೆ

    ಇಂದು, ನಾಳೆ ಬೆಂಗ್ಳೂರಿಗೆ ಹಳದಿ ಅಲರ್ಟ್ ಘೋಷಣೆ

    ಬೆಂಗಳೂರು: ಹವಾಮಾನ ಇಲಾಖೆ ಇಂದು ಹಾಗೂ ಶುಕ್ರವಾರ ಬೆಂಗಳೂರಿಗೆ ಹಳದಿ ಅಲರ್ಟ್ ಘೋಷಿಸಿದೆ.

    ಇಂದು ಮತ್ತು ನಾಳೆ ನಗರದಲ್ಲಿ 7 ರಿಂದ 11 ಸೆಂಟಿಮೀಟರ್ ಮಳೆಯಾಗುವ ನಿರೀಕ್ಷೆ ಇದೆ. ಅಲ್ಲದೆ ತಮಿಳುನಾಡಿನ ಹತ್ತಿರ ಸೈಕ್ಲೋನಿಕ್ ಸರ್ಕ್ಯುಲೇಶನ್ ಇರುವುದರಿಂದ ಮಳೆ ಆಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಕರ್ನಾಟಕದ ಪೂರ್ವ ಭಾಗ, ಉತ್ತರ ಒಳನಾಡು, ಬೆಂಗಳೂರು ಗ್ರಾಮೀಣ, ಬೆಂಗಳೂರು ವ್ಯಾಪಕವಾದ ಭಾರೀ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರಾದ ರಾಜ ರಮೇಶ್ ಅವರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಬುಧವಾರ ರಾತ್ರಿ ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಆರ್ಭಟ ಜೋರಾಗಿತ್ತು. ಕೆ.ಆರ್.ಪುರ ಮತ್ತು ಯಲಹಂಕ, ಸಿ.ವಿ.ರಾಮನ್ ನಗರ ಸುತ್ತಮುತ್ತ ಮತ್ತು ನಗರದ ಹಲವೆಡೆ ಮಳೆ ಸುರಿದಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಾಗಿತ್ತು.

    ನಗರದ ಮಲ್ಲೇಶ್ವರಂ, ಯಶವಂತಪುರ, ಮತ್ತಿಕೆರೆ, ರಾಜಾಜಿನಗರ, ಕೆ.ಆರ್.ಪುರ, ಯಲಹಂಕ, ಸಿ.ವಿ ರಾಮನ್ ನಗರ, ಜಾಲಹಳ್ಳಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಕೆಲವಡೆ ಗುಡುಗು ಮಿಂಚು ಸಹಿತ ಮಳೆಯಾಗಿತ್ತು.