Tag: ಹಳಿ

  • ಉಡುಪಿ| ಹಳಿಯ ಕಬ್ಬಿಣ ಕದ್ದ ಬಾಲಕರಿಗೆ ಥಳಿಸಿದ್ದಕ್ಕೆ ರೈಲ್ವೇ ಸಿಬ್ಬಂದಿ ಮೇಲೆ ಕೇಸ್‌

    ಉಡುಪಿ| ಹಳಿಯ ಕಬ್ಬಿಣ ಕದ್ದ ಬಾಲಕರಿಗೆ ಥಳಿಸಿದ್ದಕ್ಕೆ ರೈಲ್ವೇ ಸಿಬ್ಬಂದಿ ಮೇಲೆ ಕೇಸ್‌

    ಉಡುಪಿ: ಹಳಿಯ ಕಬ್ಬಿಣ ಕದ್ದ ಆರೋಪದಲ್ಲಿ ಬಾಲಕರಿಗೆ ಸ್ಥಳದಲ್ಲೇ ಏಟು ನೀಡಿದ್ದಕ್ಕೆ ಕೊಂಕಣ ರೈಲ್ವೇ ಸಿಬ್ಬಂದಿ (Konkan Railway Employee) ವಿರುದ್ಧ ಕೇಸ್‌ ದಾಖಲಾಗಿದೆ.

    ಪಲಿಮಾರು ಗ್ರಾಮದ ಅವರಾಲು ಮಟ್ಟು ಎಂಬಲ್ಲಿರುವ ಅಜ್ಜನ ಮನೆಗೆ ಬಾಲಕನೋರ್ವ ತನ್ನ ಗೆಳೆಯನೊಂದಿಗೆ ಹೋಗಿದ್ದನು. ಫೆ.15ರಂದು ಮಧ್ಯಾಹ್ನದ ವೇಳೆಗೆ ಇವರಿಬ್ಬರು ರೈಲು ಹಳಿಯ (Railway Track) ಕಬ್ಬಿಣದ ಲಾಕ್ ಮತ್ತು ತುಂಡುಗಳನ್ನು ಕದಿಯುತ್ತಿದ್ದರು.

    ಎಂದಿನಂತೆ ಪರೀಕ್ಷೆ ಮಾಡಲು ಹಳಿಯಲ್ಲಿ ಬರುತ್ತಿದ್ದಾಗ ರೈಲ್ವೇ ಗ್ಯಾಂಗ್‌ಮ್ಯಾನ್‌ ಶಾಲಾ ಸಮವಸ್ತ್ರದಲ್ಲಿರುವ ಇಬ್ಬರು ಬಾಲಕರನ್ನು ನೋಡಿದ್ದಾರೆ. ಸ್ಥಳದಲ್ಲಿ ಕಬ್ಬಿಣದ ತುಂಡುಗಳನ್ನು ನೋಡಿ ಶಾಕ್‌ ಆಗಿ “ಇಲ್ಲಿ ಏನು ಮಾಡುತ್ತಿದ್ದೀರಿ? ಹಳಿಯ ಕಬ್ಬಿಣವನ್ನು ಕಳ್ಳತನ ಮಾಡುತ್ತಿದ್ದೀರಾ? ಯಾವ ಶಾಲೆಯಲ್ಲಿ ಓದುತ್ತಿದ್ದೀರಿ? ನಿಮ್ಮ ತಂದೆ ತಾಯಿ ಯಾರು” ಎಂದು ಪ್ರಶ್ನಿಸಿ ಕೋಲಿನಿಂದ ಒಬ್ಬನ ತಲೆಗೆ ಹಾಗೂ ಮತ್ತೋರ್ವನ ಕಾಲಿಗೆ ಹೊಡೆದಿದ್ದರು. ಇದನ್ನೂ ಓದಿ: ಅಪಾರ್ಟ್‌ಮೆಂಟ್‌ನಲ್ಲಿ ನಾಲ್ವರ ಶವ ಪತ್ತೆ – I Am Sorry ಎಂದು ಬರೆದು ಪ್ರಾಣಬಿಟ್ಟ ಕುಟುಂಬ!

    ಇಬ್ಬರು ಬಾಲಕರಿಗೆ ಗದರಿಸುತ್ತಿರುವ ದೃಶ್ಯವನ್ನು ಗ್ಯಾಂಗ್‌ಮ್ಯಾನ್‌ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಈ ವಿಡಿಯೋ ಈಗ ಕರಾವಳಿ ಭಾಗದ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

    ಕೇಸ್‌ ದಾಖಲು:
    ಇಡೀ ಘಟನೆಯ ವೀಡಿಯೋವನ್ನು ಮಾಡಿ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿ ಓರ್ವ ಬಾಲಕನ ತಂದೆ ರೈಲ್ವೇ ಸಿಬ್ಬಂದಿ ವಿರುದ್ಧ ಪಡುಬಿದ್ರೆ ಠಾಣೆಯಲ್ಲಿ ದೂರು ನೀಡಿದ್ದು ಈಗ ಪ್ರಕರಣ ದಾಖಲಾಗಿದೆ. ಪಡುಬಿದ್ರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

     

  • ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್ ರೈಲಿನ 8 ಬೋಗಿಗಳು!

    ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್ ರೈಲಿನ 8 ಬೋಗಿಗಳು!

    ಜೈಪುರ: ಮುಂಬೈಯಿಂದ ಜೋಧಪುರಕ್ಕೆ ತೆರಳುತ್ತಿದ್ದ ಸೂರ್ಯನಗರಿ ಎಕ್ಸ್‌ಪ್ರೆಸ್ ರೈಲು (Suryanagari Express) ಹಳಿತಪ್ಪಿರುವ (Derail) ಘಟನೆ ರಾಜಸ್ಥಾನದ (Rajasthan) ಪಾಲಿಯಲ್ಲಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ 10 ಪ್ರಯಾಣಿಕರು ಗಾಯಗೊಂಡಿದ್ದಾರೆ.

    ಜೋಧ್‌ಪುರ ವಿಭಾಗದ ರಾಜ್‌ಕಿವಾಸ್-ಬೊಮದ್ರಾ ವಿಭಾಗದ ನಡುವೆ ಇಂದು ಮುಂಜಾನೆ 3:27ರ ವೇಳೆಗೆ ಘಟನೆ ನಡೆದಿದೆ. ಬಾಂದ್ರಾ ಟರ್ಮಿನಲ್‌ನಿಂದ ಜೋಧ್‌ಪುರಕ್ಕೆ ತೆರಳುತ್ತಿದ್ದ ರೈಲಿನ 8 ಬೋಗಿಗಳು ಹಳಿ ತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಘಟನೆಯಲ್ಲಿ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. 10 ಜನರಿಗೆ ಗಾಯಗಳಾಗಿವೆ. ಅಪಘಾತದ ಬಳಿಕ ಪ್ರಯಾಣಿಕರಿಗೆ ಬೇರೆ ರೈಲಿನ ವ್ಯವಸ್ಥೆ ಮಾಡಲಾಗಿದೆ. ಉನ್ನತ ಅಧಿಕಾರಿಗಳು ಸ್ಥಳ ತಲುಪಿದ್ದು, ಜನರಲ್ ಮ್ಯಾನೇಜರ್ ನಾರ್ತ್ ವೆಸ್ಟರ್ನ್ ರೈಲ್ವೇ ಮತ್ತು ಇತರ ಉನ್ನತ ಅಧಿಕಾರಿಗಳು ಜೈಪುರದ ಪ್ರಧಾನ ಕಚೇರಿಯ ನಿಯಂತ್ರಣ ಕೊಠಡಿಯಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದ್ದಾರೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ- ಭಕ್ತರಿಗೆ ದರ್ಶನ

    ಘಟನೆಯ ಬಗ್ಗೆ ವಿವರಣೆ ನೀಡಿರುವ ಪ್ರಯಾಣಿಕರೊಬ್ಬರು, ರೈಲು ಮಾರ್ವಾರ್ ಜಂಕ್ಷನ್‌ನಿಂದ ಹೊರಟ 5 ನಿಮಿಷಗಳಲ್ಲಿ ಜೋರಾದ ಶಬ್ದ ಹಾಗೂ ಕಂಪನದ ಅನುಭವವಾಯಿತು. 2-3 ನಿಮಿಷಗಳ ಬಳಿಕ ರೈಲು ನಿಂತಿತು. ನಾವು ಕೆಳಗಿಳಿದ ಸುಮಾರು 8 ಸ್ಲೀಪರ್ ಕ್ಲಾಸ್ ಕೋಚ್‌ಗಳು ಹಳಿತಪ್ಪಿರುವುದು ಕಂಡುಬಂತು. 15-20 ನಿಮಿಷಗಳಲ್ಲಿ ಸ್ಥಳಕ್ಕೆ ಅಂಬುಲೆನ್ಸ್‌ಗಳು ಬಂದವು ಎಂದು ತಿಳಿಸಿದ್ದಾರೆ.

    ಈ ನಡುವೆ ರಾಜಸ್ಥಾನದಲ್ಲಿ ರೈಲು ಹಳಿ ತಪ್ಪಿದ್ದರಿಂದ ಹಲವಾರು ರೈಲು ಸಂಚಾರಕ್ಕೂ ತೊಂದರೆಯಾಗಿದೆ. ಇದನ್ನೂ ಓದಿ: ಹೆಲ್ಮೆಟ್ ಆಯ್ತು, ಈಗ ಜೆಡಿಎಸ್ ಮುಖಂಡ ಆರ್. ಉಗ್ರೇಶ್‍ರಿಂದ ಬಾಳೆ ಹಣ್ಣು ಭಾಗ್ಯ

    Live Tv
    [brid partner=56869869 player=32851 video=960834 autoplay=true]

  • ಹಳಿ ತಪ್ಪಿದ ಗೂಡ್ಸ್ ರೈಲು- 6 ರೈಲುಗಳ ಸಂಚಾರ ರದ್ದು

    ಹಳಿ ತಪ್ಪಿದ ಗೂಡ್ಸ್ ರೈಲು- 6 ರೈಲುಗಳ ಸಂಚಾರ ರದ್ದು

    ವಿಜಯಪುರ: ಗೂಡ್ಸ್ ರೈಲು ಹಳಿ ತಪ್ಪಿ ಬೋಗಿಗಳು ಉರುಳಿ ಬಿದ್ದ ಘಟನೆ ವಿಜಪುರದಲ್ಲಿ ನಡೆದಿದೆ. ಗೂಡ್ಸ್ ಗಾಡಿ ಆದ ಕಾರಣ ಭಾರಿ ಅನಾಹುತ ತಪ್ಪಿದಂತಾಗಿದೆ.

    ಗೂಡ್ಸ್ ರೈಲಿನ ಬೋಗಿಗಳು ಕಟ್ ಆಗಿ 6 ಬೋಗಿಗಳು ಉರುಳಿ ಬಿದ್ದಿವೆ. ಚಲಿಸುತ್ತಿದ್ದ ವೇಳೆ ಏಕಾಏಕಿ ರೈಲ್ವೆಯ ಆರು ಬೋಗಿಗಳು ಕಟ್ ಆಗಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ, ಯಾವುದೇ ಪ್ರಾಣ ಹಾನಿಯಾಗಿಲ್ಲ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಮುಳವಾಡ ರೈಲು ನಿಲ್ದಾಣದ ಬಳಿ ಘಟನೆ ನಡೆದಿದೆ. ಇದನ್ನೂ ಓದಿ: ಸ್ವಾಮೀಜಿ ಆತ್ಮಹತ್ಯೆ ಪ್ರಕರಣ- ಮೂರು ಪುಟಗಳ ಡೆತ್‍ನೋಟ್ ಪತ್ತೆ

    6 ಬೋಗಿಗಳು ಟ್ರ್ಯಾಕ್‍ನಿಂದ ಕಟ್ ಆಗಿ ಹೊರಗಡೆಗೆ ಬಿದ್ದಿವೆ. ಸ್ಥಳಕ್ಕೆ ವಿಜಯಪುರ ರೈಲ್ವೆ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನಾಹುತ ಹಿನ್ನೆಲೆ ಸೊಲ್ಲಾಪುರ ಹಾಗೂ ವಿಜಯಪುರ ಮಾರ್ಗದಿಂದ ಹುಬ್ಬಳ್ಳಿ ಮಾರ್ಗಕ್ಕೆ ಹೋಗಬೇಕಿದ್ದ ಆರು ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ರೈಲ್ವೆ ಇಲಾಖೆ ಅಧಿಕಾರಿಗಳಿಂದ ಇಂದು ಸಂಚರಿಸಬೇಕಿದ್ದ 6 ರೈಲು ಕ್ಯಾನ್ಸಲ್ ಮಾಡಿರುವ ಕುರಿತು ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ದೀಪಾವಳಿ ಎಂದರೆ ಭಯೋತ್ಪಾದನೆಯ ಅಂತ್ಯದ ಹಬ್ಬ: ಮೋದಿ

    Live Tv
    [brid partner=56869869 player=32851 video=960834 autoplay=true]

  • ಇರಾನ್‌ನಲ್ಲಿ ಹಳಿತಪ್ಪಿದ ರೈಲು – 10 ಸಾವು, 50 ಮಂದಿಗೆ ಗಾಯ

    ಇರಾನ್‌ನಲ್ಲಿ ಹಳಿತಪ್ಪಿದ ರೈಲು – 10 ಸಾವು, 50 ಮಂದಿಗೆ ಗಾಯ

    ಟೆಹರಾನ್: ಪ್ರಯಾಣಿಕರ ರೈಲೊಂದು ಹಳಿ ತಪ್ಪಿ 10 ಮಂದಿ ಸಾವನ್ನಪ್ಪಿರುವ ಘಟನೆ ಬುಧವಾರ ಮುಂಜಾನೆ ಪೂರ್ವ ಇರಾನ್‌ನಲ್ಲಿ ನಡೆದಿದೆ.

    ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದು, 50 ಮಂದಿಗೆ ಗಾಯಗಳಾಗಿವೆ. ಅವರಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

    ಇರಾನ್‌ನ ಮರುಭೂಮಿ ಪ್ರದೇಶವಾಗಿರುವ ತಬಾಸ್‌ನಲ್ಲಿ ಮುಂಜಾನೆ ರೈಲಿನ 7 ಬೋಗಿಗಳು ಹಳಿ ತಪ್ಪಿವೆ. ದುರ್ಘಟನೆ ನಡೆದಿರುವ ಪ್ರದೇಶ ನಗರದಿಂದ ದೂರದಲ್ಲಿದ್ದು, ಸಂವಹನವೂ ಕಷ್ಟಕರವಾಗಿದೆ. ಘಟನೆ ನಡೆಯುತ್ತಿದ್ದಂತೆ ಅಂಬುಲೆನ್ಸ್‌ಗಳು ಹಾಗೂ 3 ಹೆಲಿಕಾಪ್ಟರ್‌ಗಳು ರಕ್ಷಣಾಕಾರ್ಯಕ್ಕೆ ಧಾವಿಸಿವೆ. ಇದನ್ನೂ ಓದಿ: ಭಾರೀ ಅಗ್ನಿ ಅವಘಡ – 90ಕ್ಕೂ ಅಧಿಕ ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ

    ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ರೈಲು ನೆಲ ಅಗೆಯುವ ಯಂತ್ರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಇಡಿ ಸಮನ್ಸ್ – ವಿಚಾರಣೆಯಿಂದ ವಿನಾಯಿತಿ ಕೋರಿದ ಸೋನಿಯಾ

    2016ರಲ್ಲೂ ಇರಾನ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ಹಲವರು ಸಾವನ್ನಪ್ಪಿದ್ದರು. ಇರಾನ್‌ನಲ್ಲಿ ಪ್ರತೀ ವರ್ಷ ರಸ್ತೆ ಅಪಘಾತಗಳಲ್ಲೇ ಸುಮಾರು 17,000 ಜನರು ಸಾವನ್ನಪ್ಪುತ್ತಾರೆ ಎಂದು ಅಂಕಿ ಅಂಶ ತಿಳಿಸಿದೆ. ಜೊತೆಗೆ ವಿಶ್ವದಲ್ಲೇ ಅತ್ಯಂತ ಅಪಾಯಕಾರಿ ಸಂಚಾರಿ ಮಾರ್ಗಗಳನ್ನು ಹೊಂದಿರುವ ದೇಶಗಳಲ್ಲಿ ಇರಾನ್ ಒಂದಾಗಿದೆ.

  • 140 ಪ್ರಯಾಣಿಕರ ಜೀವ ಉಳಿಸಿ ತಾನೇ ಪ್ರಾಣ ಬಿಟ್ಟ ಹೈಸ್ಪೀಡ್ ಬುಲೆಟ್ ಟ್ರೈನ್ ಚಾಲಕ

    ಬೀಜಿಂಗ್: ಹೈಸ್ಪೀಡ್ ಬುಲೆಟ್ ರೈಲೊಂದು ಹಳಿ ತಪ್ಪಿದ್ದು, ಚಾಲಕ ಮೃತಪಟ್ಟ ಘಟನೆ ಚೀನಾದ ಗ್ಯುಝೌ ಪ್ರಾಂತ್ಯದಲ್ಲಿ ನಡೆದಿದೆ. ಘಟನೆಯಲ್ಲಿ 7 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಬುಲೆಟ್ ರೈಲು ಚೀನಾದ ಸೌತ್ ವೆಸ್ಟರ್ನ್ ಗುಯಾಂಗ್ ಪ್ರಾಂತ್ಯದಿಂದ ದಕ್ಷಿಣ ಪ್ರಾಂತ್ಯದ ಗುವಾಂಗ್‌ಝೌಗೆ ಚಲಿಸುತ್ತಿದ್ದಾಗ ರೊಂಗ್‌ಜಿಯಾಂಗ್ ನಿಲ್ದಾಣದ ಸುರಂಗ ಪ್ರವೇಶದ್ವಾರದಲ್ಲಿ ಹಳಿತಪ್ಪಿದೆ. ರೋಜಿಯಾಂಗ್ ನಿಲ್ದಾಣದಲ್ಲಿ ಮಣ್ಣು ಕುಸಿದಿದ್ದ ಕಾರಣ ರೈಲಿನ 2 ಬೋಗಿಗಳು ಹಳಿತಪ್ಪಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ಸೇನೆಯಲ್ಲಿ 4 ವರ್ಷ ಮಾತ್ರ ಸೇವೆ – ಶೀಘ್ರವೇ ಅಗ್ನಿಪಥ್‌ಗೆ ಅನುಮೋದನೆ

    ಘಟನೆ ಬಳಿಕ ಆನ್ ಬೋರ್ಡ್ ಡೇಟಾ ಪರಿಶೀಲಿಸಿದಾಗ, ಬುಲೆಟ್ ರೈಲು ಯುಝೈ ಸುರಂಗ ಪ್ರವೇಶಿಸುವ ಸಂದರ್ಭ ಹಳಿಯಲ್ಲಿ ದೋಷವಿರುವುದನ್ನು ಚಾಲಕ ಕೇವಲ 5 ಸೆಕೆಂಡುಗಳಲ್ಲಿ ಗುರುತಿಸಿ, ತಕ್ಷಣವೇ ಬ್ರೇಕ್ ಹಾಕಿದ್ದಾನೆ. ಆದರೂ ರೈಲು 900 ಮೀಟರ್ ದೂರಕ್ಕೆ ಜಾರಿದೆ. ಇದನ್ನೂ ಓದಿ: 37 ವರ್ಷದ ಹಳೆಯ ಕಾರನ್ನು ರಾಷ್ಟ್ರೀಯ ಆಸ್ತಿಯೆಂದು ಘೋಷಿಸಿದ ರವಿಶಾಸ್ತ್ರಿ

    ಚಾಲಕನ ಸಮಯಪ್ರಜ್ಞೆಯಿಂದ ಸುಮಾರು 140 ಪ್ರಯಾಣಿಕರು ಪಾರಾಗಿದ್ದಾರೆ. ಘಟನೆಯಲ್ಲಿ 7 ಪ್ರಯಾಣಿಕರು ಗಾಯಗೊಂಡಿದ್ದು, ಚಾಲಕ ಮಾತ್ರ ಪ್ರಾಣ ಬಿಟ್ಟಿದ್ದಾನೆ.

  • ದೂಧ್ ಸಾಗರ್ ಬಳಿ ಹಳಿ ತಪ್ಪಿದ ಅಮರಾವತಿ ಎಕ್ಸ್‌ಪ್ರೆಸ್‌ ರೈಲು

    ದೂಧ್ ಸಾಗರ್ ಬಳಿ ಹಳಿ ತಪ್ಪಿದ ಅಮರಾವತಿ ಎಕ್ಸ್‌ಪ್ರೆಸ್‌ ರೈಲು

    ಪಣಜಿ: ದೂಧ್ ಸಾಗರ್ ಬಳಿ ವಾಸ್ಕೊ- ಹೌರಾ ಅಮರಾವತಿ ಎಕ್ಸ್‌ಪ್ರೆಸ್‌ ರೈಲು ಹಳಿ ತಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

    ದೂಧ್ ಸಾಗರ್ ಮತ್ತು ಕಾರಂಜೋಲ್ ನಡುವೆ ಈ ರೈಲಿನ ಎಂಜಿನಿನ ಮುಂಭಾಗದ ಎರಡು ಜೋಡಿ ಚಕ್ರಗಳು ಹಳಿ ತಪ್ಪಿವೆ ಎಂದು ನೈರುತ್ಯ ರೈಲ್ವೆ ಸಾರ್ವಜನಿಕ ಮುಖ್ಯ ಸಂಪರ್ಕಾಧಿಕಾರಿ ಮಾಹಿತಿ ನೀಡಿದರು. ಬೆಳಗ್ಗೆ 6:30ಕ್ಕೆ ವಾಸ್ಕೋ-ಡ-ಗಾಮಾದಿಂದ ಹೊರಟಿದ್ದ ಈ ರೈಲು, ಬೆಳಿಗ್ಗೆ 8:56ಕ್ಕೆ ದೂಧ್ ಸಾಗರ್ ಬಳಿ ಬಂದಾಗ ಹಳಿ ತಪ್ಪಿದೆ ಎಂದು ತಿಳಿಸಿದರು.

    ವಿಷಯ ತಿಳಿದ ತಕ್ಷಣ ತ್ವರಿತ ಅಪಘಾತ ಪರಿಹಾರ ರೈಲು ಮತ್ತು ವೈದ್ಯಕೀಯ ಸಲಕರಣೆ ವ್ಯಾನ್ ಸ್ಥಳಕ್ಕೆ ಭೇಟಿ ನೀಡಿ, ಸುರಕ್ಷತಾ ಪರಿಹಾರ ಕಾರ್ಯಾಚರಣೆ ನಡೆಸಿ ಮತ್ತೆ ಎಂಜಿನ್ ಹಳಿಗೆ ತರಲಾಗಿದೆ. ಹಳಿ ತಪ್ಪಿದ್ದರಿಂದ ರೈಲಿನ ಯಾವುದೇ ಬೋಗಿಯ ಮೇಲೆ ಪರಿಣಾಮ ಬೀರಿಲ್ಲ. ಈ ಘಟನೆ ಹಿನ್ನೆಲೆಯಲ್ಲಿ ಎರ್ನಾಕುಲಂ-ಪುಣೆ ಎಕ್ಸ್‌ಪ್ರೆಸ್‌ ರೈಲು ಸಂಚಾರದಲ್ಲಿ ವಿಳಂಬ ಕೂಡಾ ಆಗಿದೆ.

  • ರೈಲ್ವೆ ಹಳಿ ತಪ್ಪಿ ಮೂವರು ಸಾವು, 50 ಮಂದಿಗೆ ಗಾಯ

    ರೈಲ್ವೆ ಹಳಿ ತಪ್ಪಿ ಮೂವರು ಸಾವು, 50 ಮಂದಿಗೆ ಗಾಯ

    ವಾಷಿಂಗ್ಟನ್: ರೈಲ್ವೆ ಅಪಘಾತದಿಂದ ಓರ್ವ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವ ಘಟನೆ ಅಮೆರಿಕದ ಮೊಂಟಾನಾದಲ್ಲಿ ಶನಿವಾರ ನಡೆದಿದೆ. ಇದನ್ನೂ ಓದಿ: ದ್ವೇಷದ ವಿಷವನ್ನು ಬಿತ್ತಿರುವಾಗ ಅಮೃತ ಮಹೋತ್ಸವಕ್ಕೆ ಅರ್ಥವಿದೆಯೇ?: ರಾಹುಲ್

    ಸದ್ಯ ಸ್ಥಳೀಯ ಅಧಿಕಾರಿಗಳೊಂದಿಗೆ ರೈಲು ನಿರ್ವಾಹಕ ಅಮ್ಟ್ರಾಕ್ ಗಾಯಗೊಂಡ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಗೊಳಿಸುವ ಕೆಲಸವನ್ನು ಮಾಡುತ್ತಿದ್ದಾರೆ ಮತ್ತು ರೈಲಿನಲ್ಲಿ ಸುಮಾರು 147 ಮಂದಿ ಪ್ರಯಾಣಿಕರು ಹಾಗೂ 13 ಸಿಬ್ಬಂದಿ ಇದ್ದರು ಎನ್ನಲಾಗುತ್ತಿದೆ.

    Railway track

    ಉತ್ತರ ಮೊಂಟಾನಾದ ಜೋಪ್ಲಿನ್ ಬಳಿ ಸಂಜೆ 4 ಗಂಟೆಗೆ ರೈಲು ಹಳಿ ತಪ್ಪಿದ್ದು, ಘಟನೆ ಕುರಿತ ಕೆಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಘಟನಾ ಸ್ಥಳದಲ್ಲಿ ಲಗೇಜ್‍ಗಳು ಚೆಲ್ಲಾಪಿಲ್ಲಿಯಾಗಿದೆ ಮತ್ತು ಹಲವಾರು ರೈಲಿನ ಬೋಗಿಗಳು ಹಳಿಯಿಂದ ಪಕ್ಕಕ್ಕೆ ಸರಿದಿರುವುದನ್ನು ನೋಡಬಹುದಾಗಿದೆ.

    ಘಟನೆಯಲ್ಲಿ ಮೂರಕ್ಕಿಂತ ಅಧಿಕ ಮಂದಿ ಮೃತಪಟ್ಟಿದ್ದು, 50 ಮಂದಿ ಗಾಯಗೊಂಡಿದ್ದಾರೆ ಎಂದು ಮೊಂಟಾನಾದ ವಿಪತ್ತು ಮತ್ತು ತುರ್ತು ಸೇವೆಗಳ ಸಂಯೋಜಕರು ತಿಳಿಸಿದ್ದಾರೆ. ಇದನ್ನೂ ಓದಿ: ಪಂಜಾಬ್‍ನಲ್ಲಿ ನೂತನ ಸಚಿವ ಸಂಪುಟ ರಚನೆ ಕಸರತ್ತು- ಐವರು ಹಳೆ ಸಚಿವರಿಗೆ ಕೊಕ್

  • ರೈಲು ಡಿಕ್ಕಿಯೊಡೆದು ಆನೆ ಸಾವು: ತಪ್ಪಿದ ಅನಾಹುತ

    ರೈಲು ಡಿಕ್ಕಿಯೊಡೆದು ಆನೆ ಸಾವು: ತಪ್ಪಿದ ಅನಾಹುತ

    ಹಾಸನ: ರೈಲಿಗೆ ಸಿಲುಕಿ ಕಾಡಾನೆ ಸಾವನ್ನಪ್ಪಿ ಭಾರಿ ಅನಾಹುತವೊಂದು ತಪ್ಪಿದ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಬಾಳ್ಳುಪೇಟೆ ಬಳಿ ನಡೆದಿದೆ.

    ಬೆಂಗಳೂರು-ಕಾರವಾರ ಮಾರ್ಗದಲ್ಲಿ ಚಲಿಸುತ್ತಿದ್ದ ರೈಲಿಗೆ ಒಂಟಿ ಸಲಗ ಸಿಲುಕಿದೆ. ರೈಲು ಡಿಕ್ಕಿಯೊಡೆದ ರಭಸಕ್ಕೆ ಸಾವನ್ನಪ್ಪಿದ ಒಂಟಿಸಲಗ, ರೈಲ್ವೆ ಹಳಿಯ ಮೇಲೆ ಬಿದ್ದಿದೆ. ಇದ್ರಿಂದ ಬೆಂಗಳೂರಿನಿಂದ ಕಾರವಾರಕ್ಕೆ ತೆರಳುತ್ತಿದ್ದ ರೈಲು ಸ್ಥಳದಲ್ಲೇ ನಿಲ್ಲುವಂತಾಗಿತ್ತು.

     

    ಸ್ಥಳಕ್ಕೆ ರೈಲ್ವೆ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ. ಮಲೆನಾಡು ಭಾಗದಲ್ಲಿ ಕಾಡಾನೆ ಸಂತತಿ ಹೆಚ್ಚಿದ್ದು, ಗುಂಪಿನಿಂದ ಬೇರ್ಪಟ್ಟಿದ್ದ ಒಂಟಿ ಸಲಗ ಕೆಲ ದಿನಗಳಿಂದ ರೈಲ್ವೆ ಹಳಿ ಮೇಲೆ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡಿತ್ತು. ಇದೀಗ ಅದೇ ಆನೆ ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ.

  • ಹಳಿ ತಪ್ಪಿದ ರೈಲು 11 ಜನರು ಸಾವು, 100 ಮಂದಿ ಗಂಭೀರ

    ಹಳಿ ತಪ್ಪಿದ ರೈಲು 11 ಜನರು ಸಾವು, 100 ಮಂದಿ ಗಂಭೀರ

    ಈಜಿಪ್ಟ್: ರೈಲು ಹಳಿ ತಪ್ಪಿ ಉರುಳಿಬಿದ್ದ ಪರಿಣಾಮ 11 ಜನರು ಸಾವನ್ನಪ್ಪಿದ್ದು, ಸುಮಾರು 100ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಈಜಿಪ್ಟ್‍ನ ಕೈರೋ ಬಳಿ ನಡೆದಿದೆ.

    ರೈಲು ಈಜಿಪ್ಟ್ ರಾಜಧಾನಿಯಿಂದ ಮನ್ಸೌರಾದ ನೇಲ್ ಡೆಲ್ಟಾ ನಗರಕ್ಕೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರೈಲು ಹಳಿ ತಪ್ಪಲು ಕಾರಣವೇನೆಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

    ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು 50ಕ್ಕೂ ಹೆಚ್ಚು ಅಂಬುಲೆನ್ಸ್‍ನಲ್ಲಿ ಕರೆದೊಯ್ದು ಹತ್ತಿರದ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತಾಗಿ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಸಾವು-ನೋವುಗಳ ಸಂಖ್ಯೆಯಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

  • ರಸ್ತೆ ಬಿಟ್ಟು ರೈಲ್ವೆ ಟ್ರ್ಯಾಕ್‍ನಲ್ಲಿಯೇ ಬೈಕ್ ಓಡಿಸಿದ ಸವಾರರು- ಫೋಟೋ ವೈರಲ್

    ರಸ್ತೆ ಬಿಟ್ಟು ರೈಲ್ವೆ ಟ್ರ್ಯಾಕ್‍ನಲ್ಲಿಯೇ ಬೈಕ್ ಓಡಿಸಿದ ಸವಾರರು- ಫೋಟೋ ವೈರಲ್

    ಪಾಟ್ನಾ: ಸಾಮಾನ್ಯವಾಗಿ ರೈಲ್ವೇ ಟ್ರ್ಯಾಕ್ ನಲ್ಲಿ ರೈಲು ಮಾತ್ರ ಚಲಿಸುತ್ತೆ ಎಂಬುದು ಎಲ್ಲರಿಗೂ ಗೊತ್ತಿರೋ ವಿಚಾರ. ಹೆಚ್ಚೆಂದರೆ ಜನ ಟ್ರ್ಯಾಕ್ ನಲ್ಲಿ ನಡೆದುಕೊಂಡು ಹೋಗಬಹುದು ಅಷ್ಟೆ. ಆದರೆ ಈ ಟ್ರ್ಯಾಕ್ ನಲ್ಲಿ ಬೈಕ್ ಓಡಿಸುತ್ತಾರೆ ಅಚ್ಚರಿಯಾದರೂ ಸತ್ಯ.

    ಹೌದು. ಪ್ರಯಾಣಿಕರ ರೈಲು ಆಗಿರಲಿ ಅಥವಾ ಪ್ರಯಾಣಿಕರಿಗೆ ಸರಕು ಸಾಗಟ ಮಾಡುವ ರೈಲುಗಳು ಓಡಲು ಹಳಿಗಳ ಮಿತಿಯನ್ನು ನಿಗದಿಪಡಿಸಲಾಗಿದೆ. ಈ ಹಳಿಯಲ್ಲಿ ಬೇರೆ ಯಾವುದೇ ವಾಹನ ಚಲಿಸುವುದನ್ನು ನಿಷೇಧಿಸಲಾಗಿದೆ. ಆದರೆ ಬಿಹಾರದ ಛಪ್ರಾದ ರೈಲ್ವೆ ಕ್ರಾಸಿಂಗ್‍ನಲ್ಲಿ ಅಚ್ಚರಿಯ ಸಂಗತಿಯೊಂದು ನಡೆದಿದೆ.

    ನಗರದ ಮಧ್ಯಭಾಗದಲ್ಲಿ ಮೊದಲ ಡಬಲ್ ಡೆಕ್ಕರ್ ಸೇತುವೆಯ ನಿರ್ಮಾಣದಿಂದಾಗಿ ಪ್ರತಿನಿತ್ಯ ಟ್ರಾಫಿಕ್ ಜಾಮ್ ಆಗುವ ಪರಿಸ್ಥಿತಿ ಎದುರಾಗಿದೆ. ಇದನ್ನು ತಪ್ಪಿಸಲು ಜನರು ತಮ್ಮ- ತಮ್ಮ ಕೆಲಸಗಳಿಗೆ ತೆರಳಲು ಬೇರೆ ಮಾರ್ಗವನ್ನು ಅನುಸರಿಸಲು ಪ್ರಯತ್ನಿಸಿದ್ದಾರೆ. ಹೀಗಾಗಿ ಅನೇಕ ಮಂದಿ ಬೈಕು ಸವಾರರು ರೈಲ್ವೆ ಹಳಿಗಳಲ್ಲಿ ಹೋಗುತ್ತಿರುವುದು ಕಂಡುಬಂದಿದೆ.

    ಜನರು ತಮ್ಮ ಕೆಲಸಕ್ಕೆ ಹೋಗಲು ಅದೇ ರೈಲ್ವೆ ಕ್ರಾಸಿಂಗ್ ಸಂಖ್ಯೆ 44 ಮೂಲಕ ಹೋಗುತ್ತಿದ್ದರು. ಹಮ್ಸಾಫರ್ ರೈಲು ನಿಂತಿದ್ದರಿಂದ ರೈಲ್ವೆ ಕ್ರಾಸಿಂಗ್ ಅನ್ನು ಕೆಲ ಹೊತ್ತು ಸ್ಥಗಿತಗೊಳಿಸಲಾಗಿತ್ತು. ಆದರೂ ಜನ ತಾಳ್ಮೆಯಿಂದ ಪ್ರತಿಕ್ರಿಯಿಸಿದರು. ಜನ ತಮ್ಮ ಜೀವವನ್ನು ಲೆಕ್ಕಿಸದೆ ರೈಲುಗಳಿಗಾಗಿ ಮಾಡಿದ ಹಳಿಗಳ ನಡುವೆ ತಮ್ಮ ಬೈಕ್‍ಗಳಲ್ಲಿ ಹೋಗಲು ಪ್ರಾರಂಭಿಸಿದರು. ಆ ಟ್ರ್ಯಾಕ್‍ನಲ್ಲಿ ರೈಲು ಬಂದರೆ ಅಪಘಾತ ಕಟ್ಟಿಟ್ಟ ಬುತ್ತಿ ಅಲ್ಲದೆ ಎಷ್ಟು ಮಾರಕವಾಗಬಹುದು ಎಂಬುದು ಕಲ್ಪನೆಗೆ ಮೀರಿದೆ.

    ಕೊರೊನಾ ಎಂಬ ಸಾಂಕ್ರಾಮಿಕ ರೋಗದಿಂದಾಗಿ ಇಡೀ ದೇಶದಲ್ಲಿ ರೈಲು ಸಂಚಾರವನ್ನು ಕಡಿಮೆ ಮಾಡಲಾಗಿದೆ. ಅತ್ಯಂತ ಬ್ಯುಸಿ ಇರುವ ರೈಲ್ವೇ ಟ್ರ್ಯಾಕ್ ಗಳಲ್ಲಿ ಇದೂ ಒಂದಾಗಿದೆ. ಇನ್ನೊಂದು ವಿಚಾರವೆಂದರೆ, ರೈಲ್ವೆ ಆಡಳಿತವು ಪ್ರತಿ ಬಿಡುವಿಲ್ಲದ ರೈಲು ಗೇಟ್‍ನಲ್ಲಿ ರೈಲ್ವೆ ಸಂರಕ್ಷಣಾ ಪಡೆಯ ಸಿಬ್ಬಂದಿಯನ್ನು ನೇಮಿಸುತ್ತದೆ. ಆದರೆ ಈ ರೈಲು ಗೇಟ್‍ನಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ಇರಲಿಲ್ಲ. ಹೀಗಾಗಿ ಬೈಕ್ ನಲ್ಲಿ ಜನ ಓಡಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ರೈಲ್ವೆ ಕ್ರಾಸಿಂಗ್‍ನ ಎರಡೂ ಹಳಿಗಳಲ್ಲಿ ಎರಡೂ ದಿಕ್ಕುಗಳಿಂದ ರೈಲು ನಿಂತಿದೆ. ರೈಲ್ವೆ ಕ್ರಾಸಿಂಗ್ ಅನ್ನು ಮುಚ್ಚಲು ಗೇಟ್‍ಮ್ಯಾನ್ ಕಾಯುತ್ತಿದ್ದಾರೆ, ಆದರೆ ಜನರು ರೈಲ್ವೆ ಕ್ರಾಸಿಂಗ್‍ಗಳನ್ನು ಸಹ ನಿಲ್ಲಿಸಲು ಅವಕಾಶ ನೀಡದಷ್ಟು ಅವಸರದಲ್ಲಿದ್ದಾರೆ. ಹೀಗಾಗಿ ಗೇಟ್ ಮುಚ್ಚುವುದು ಸಹ ಕಷ್ಟ ಎನ್ನುವಂತಾಗಿದೆ.