Tag: ಹಳಿಯಾಳ

  • Uttara Kannada | ಮೊಬೈಲ್ ನೋಡಬೇಡ ಎಂದಿದ್ದಕ್ಕೆ 13ರ ಬಾಲಕ ಆತ್ಮಹತ್ಯೆ

    Uttara Kannada | ಮೊಬೈಲ್ ನೋಡಬೇಡ ಎಂದಿದ್ದಕ್ಕೆ 13ರ ಬಾಲಕ ಆತ್ಮಹತ್ಯೆ

    ಕಾರವಾರ: ಮೊಬೈಲ್ (Mobile) ನೋಡಬೇಡ ಎಂದು ತಂದೆ ಮಗನಿಗೆ ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಹಳಿಯಾಳದ ಮಂಗಳವಾಡ ಗ್ರಾಮದಲ್ಲಿ ನಡೆದಿದೆ.

    ಹಳಿಯಾಳದ ಸರ್ಕಾರಿ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ಓಂ ಕದಂ (13) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಪ್ರತಿದಿನ ಹೆಚ್ಚು ಮೊಬೈಲ್ ನೋಡುತ್ತಾ ಕಾಲಕಳೆಯುತ್ತಿದ್ದ ಮಗನಿಗೆ ತಂದೆ ಮನೋಹರ್ ಮೊಬೈಲ್ ನೋಡದಂತೆ ಬುದ್ದಿವಾದ ಹೇಳುತಿದ್ದರು. ಮಾತು ಕೇಳದೇ ಓಂ ಕದಂ ಹಠಕ್ಕೆ ಬಿದ್ದು ಮೊಬೈಲ್ ನೋಡುತಿದ್ದ. ಮಂಗಳವಾರ ರಾತ್ರಿ ಮೊಬೈಲ್ ನೋಡುತ್ತಾ ಕಾಲ ಕಳೆಯುತಿದ್ದ ಮಗನಿಗೆ ಗದರಿಸಿ ಮೊಬೈಲ್ ಕಸಿದುಕೊಂಡು ಓದಿಕೊಳ್ಳುವಂತೆ ತಂದೆ ಮನೋಹರ್ ಬುದ್ದಿವಾದ ಹೇಳಿದ್ದರು. ಇದನ್ನೂ ಓದಿ: ಬೀದರ್ | ಶಾದಿಮಹಲ್ ನಿರ್ಮಾಣ ಹೆಸರಲ್ಲಿ ಹಗರಣ ಆರೋಪ – ಕೋಟ್ಯಂತರ ಹಣ ನುಂಗಿದ್ರಾ ಅಧಿಕಾರಿಗಳು?

    ಇದರಿಂದ ಮನನೊಂದು ಓಂ ಕದಂ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣ ಹಳಿಯಾಳದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರೂ ಆತ ಬದುಕುಳಿಯಲಿಲ್ಲ. ಘಟನೆ ಸಂಬಂಧ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಡಿಗ್ರಿ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಇನ್ಮುಂದೆ ಸಿಸಿಟಿವಿ ಕಣ್ಗಾವಲು

  • ಉತ್ತರ ಕನ್ನಡ| ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 7ನೇ ತರಗತಿ ವಿದ್ಯಾರ್ಥಿ ದುರ್ಮರಣ

    ಉತ್ತರ ಕನ್ನಡ| ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 7ನೇ ತರಗತಿ ವಿದ್ಯಾರ್ಥಿ ದುರ್ಮರಣ

    ಕಾರವಾರ: ಮನೆಯಲ್ಲಿ ಆಟವಾಡುತ್ತಾ ಬಲೂನ್ (Balloon) ಊದಲು ಹೋಗಿ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಹಳಿಯಾಳ (Haliyala) ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.

    ನವೀನ ನಾರಾಯಣ ಬೆಳಗಾಂವಕರ್ (13) ಸಾವಿಗಿಡಾದ ವಿದ್ಯಾರ್ಥಿ. ಈತ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮನೆಯಲ್ಲಿ ಆಟವಾಡುತಿದ್ದ ವೇಳೆ ಬಲೂನ್ ಊದುವಾಗ ಬಾಯಿಯ ಒಳಗೆ ಜಾರಿ ಹೋಗಿ ಗಂಟಲಲ್ಲಿ ಸಿಲುಕಿಕೊಂಡಿದೆ. ಇದನ್ನೂ ಓದಿ: Uttar Pradesh| ಮಹಾ ಕುಂಭಮೇಳ ನಡೆಯುವ ಪ್ರದೇಶ ಹೊಸ ಜಿಲ್ಲೆಯಾಗಿ ಘೋಷಣೆ

    ಗಂಟಲಲ್ಲಿ ಬಲೂನ್ ಸಿಲುಕಿ ಉಸಿರುಗಟ್ಟಿ ಒದ್ದಾಡುತಿದ್ದ ಈತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಉಸಿರಾಟವಾಡಲು ಸಾಧ್ಯವಾಗದೇ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ: ರೆಫ್ರಿ ವಿವಾದಿತ ತೀರ್ಪಿನಿಂದ ಫುಟ್ಬಾಲ್ ಅಭಿಮಾನಿಗಳ ನಡುವೆ ಘರ್ಷಣೆ – 100ಕ್ಕೂ ಹೆಚ್ಚು ಮಂದಿ ಸಾವು

  • ಪತ್ನಿಯನ್ನು ಕೊಂದು ಬ್ಯಾರಲ್‍ಗೆ ತುಂಬಿದ್ದವ ಅರೆಸ್ಟ್

    ಪತ್ನಿಯನ್ನು ಕೊಂದು ಬ್ಯಾರಲ್‍ಗೆ ತುಂಬಿದ್ದವ ಅರೆಸ್ಟ್

    ಉತ್ತರ ಕನ್ನಡ: ಹೆಂಡತಿಯನ್ನು ಕೊಲೆ (Murder) ಮಾಡಿ ನೀರಿನ ಬ್ಯಾರಲ್‍ನಲ್ಲಿ ಮುಚ್ಚಿಟ್ಟಿದ್ದ ಆರೋಪಿಯನ್ನು ಹಳಿಯಾಳ (Haliyal) ಹಾಗೂ ರಾಮನಗರ (Ramnagar) ಠಾಣೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

    CRIME 2

    ಶಾಂತಕುಮಾರಿ ಮಡಿವಾಳ (38) ಕೊಲೆಯಾದ ಮಹಿಳೆ. ತುಕಾರಾಮ್ ಮಡಿವಾಳ ಕೊಲೆ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನಿನ್ ವೋಟ್ ಯಾವಾನಿಗ್ ಬೇಕು ಹೋಗು- ಬಿಜೆಪಿ ಕಾರ್ಯಕರ್ತನಿಗೆ ಚಿಂಚನಸೂರ್ ಕ್ಲಾಸ್

    ತುಕಾರಾಮ್ ತನಗಿಂತ ಹತ್ತು ವರ್ಷ ದೊಡ್ಡವಳಾದ ಶಾಂತಕುಮಾರಿಯನ್ನು ಮದುವೆಯಾಗಿದ್ದ. ಈ ವಿಚಾರವಾಗಿ ಅವರಿಬ್ಬರ ನಡುವೆ ಮನಸ್ತಾಪಗಳಿದ್ದವು ಎನ್ನಲಾಗಿದೆ. ಇದಲ್ಲದೆ ಆರೋಪಿ ಬೇರೆ ಹುಡುಗಿಯರೊಂದಿಗೆ ಮಾತನಾಡುತ್ತಾನೆ ಎಂದು ಶಾಂತಕುಮಾರಿ ಸಂಶಯ ವ್ಯಕ್ತಪಡಿಸಿ ಗಲಾಟೆ ಮಾಡಿದ್ದಾಳೆ. ಗಲಾಟೆಯ ಅಂತ್ಯ ಕೊಲೆಯಲ್ಲಿ ಮುಕ್ತಾಯವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಕೊಲೆಯನ್ನು ಮುಚ್ಚಿಹಾಕುವ ಉದ್ದೇಶದಿಂದ ಆರೋಪಿ, ಪತ್ನಿಯ ಮೃತದೇಹವನ್ನು ನೀರಿನ ಬ್ಯಾರಲ್‍ನಲ್ಲಿ ಹಾಕಿ ಮುಚ್ಚಿಟ್ಟಿದ್ದ. ಬಳಿಕ ಪಕ್ಕದ ಮನೆಯ ಖಾನಾಪುರ (Kanapur) ಮೂಲದ ರಿಜ್ವಾನ್ ಕುಂಬಾರಿ ಎಂಬವರ ವಾಹನವನ್ನು ಬಾಡಿಗೆ ಪಡೆದು, ಸ್ನೇಹಿತ ಸಮೀರ್ ಪಂತೋಜಿ ಹಾಗೂ ಚಾಲಕ ರಿಜ್ವಾನ್ ಜೊತೆ ಸೇರಿ ಮೃತದೇಹವನ್ನು ರಾಮನಗರ ಸಮೀಪದ ಕಾಡಿಗೆ ಎಸೆಯಲು ತೆರಳಿದ್ದಾಗ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಸಫಾರಿ ತೆರಳುತ್ತಿದ್ದ ವೇಳೆ ಘೇಂಡಾಮೃಗಗಳ ದಾಳಿ – 7 ಮಂದಿ ಪ್ರವಾಸಿಗರಿಗೆ ಗಾಯ

  • ಈದ್ಗಾ ಮೈದಾನದ ಎದುರು ಹಾರಾಡಿತು ಭಗವಾಧ್ವಜ – ಹಳಿಯಾಳದಲ್ಲಿ 144 ಸೆಕ್ಷನ್‌ ಜಾರಿ

    ಈದ್ಗಾ ಮೈದಾನದ ಎದುರು ಹಾರಾಡಿತು ಭಗವಾಧ್ವಜ – ಹಳಿಯಾಳದಲ್ಲಿ 144 ಸೆಕ್ಷನ್‌ ಜಾರಿ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಶಕ್ತಿದೇವತೆ ಗ್ರಾಮದೇವಿಗೆ ಸಂಬಂಧಪಟ್ಟ ಧಾರ್ಮಿಕ ಜಾಗದಲ್ಲಿ ಪುರಸಭೆ ನಡೆಸುತ್ತಿರುವ ಕಾಮಗಾರಿಗಳನ್ನು ವಿರೋಧಿಸಿ ಇಂದು ಹಳಿಯಾಳ ಬಂದ್‌ಗೆ (Haliyal Bandh) ಹಿಂದೂ ಸಂಘಟನೆಗಳು ಕರೆ ನೀಡಿದ್ದು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ.

    ಹಳಿಯಾಳದಲ್ಲಿ ಇಂದು ನಗರವನ್ನು ಬಂದ್ ಮಾಡಿ ಪ್ರತಿಭಟನೆ ಹೊರಟಿದ್ದ ಹಿಂದೂ (Hindu) ಕಾರ್ಯಕರ್ತರು ಈದ್ಗಾ ಮೈದಾನದ (Idgah Maidan) ಎದುರು ಇರುವ ಗ್ರಾಮದೇವಿ ಗದ್ದುಗೆ ಜಾಗಕ್ಕೆ ನುಗ್ಗಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು (Police) ಹಾಗೂ ಹಿಂದೂ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆದು ಭದ್ರತೆ ನಡುವೆಯೇ ಬ್ಯಾರಿಕೇಡ್‌ ಕಿತ್ತೆಸೆದಿದ್ದಾರೆ. ದೇವಿಯ ಗದ್ದುಗೆ ಇಡುವ ಸ್ಥಳದಲ್ಲಿ ಪುರಸಭೆಯಿಂದ ನಿರ್ಮಾಣವಾಗುತ್ತಿದ್ದ ನೆಲಹಾಸಿನ ಸಿಮೆಂಟ್ ಬ್ಲಾಕ್‌ಗಳನ್ನು ಕಿತ್ತುಹಾಕಿ ಈದ್ಗಾ ಮೈದಾನದ ಎದುರು ಹಿಂದೂ ಕಾರ್ಯಕರ್ತರು ಭಗವಾಧ್ವಜ (Bhagwa Flag)  ಹಾರಿಸಿದ್ದಾರೆ.

    ಪ್ರತಿಭಟನೆ ಹಿನ್ನೆಲೆಯಲ್ಲಿ ಹಳಿಯಾಳದಲ್ಲಿ144 ಸೆಕ್ಷನ್ (144 Section) ಜಾರಿ ಮಾಡಿ ತಹಶೀಲ್ದಾರ್ ಪ್ರಕಾಶ ಗಾಯಕ್‌ವಾಡ್‌ ಆದೇಶ ಹೊರಡಿಸಿದ್ದಾರೆ. ಹಳಿಯಾಳ ನಗರದ ಮರಡಿಗುಡ್ಡ ಸಮೀಪ ಒಂದು ಕಿ. ಮೀ. ಅಂತರದಲ್ಲಿ ಫೆಬ್ರವರಿ 17 ರವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ದಾವೂದಿ ಬೋಹ್ರಾ ಸಮುದಾಯದ ಶಿಕ್ಷಣ ಸಂಸ್ಥೆಯನ್ನು ಉದ್ಘಾಟಿಸಿದ ಮೋದಿ

    ಏನಿದು ವಿವಾದ?
    ಹಳಿಯಾಳ ನಗರದ ಈದ್ಗಾ ಮೈದಾನದ ಎದುರು ಇರುವ ಸರ್ಕಾರಿ ಜಾಗದಲ್ಲಿ ತಲೆತಲಾಂತರದಿಂದ ಗ್ರಾಮದೇವಿಯ ಗದ್ದುಗೆ ಇಟ್ಟು ವರ್ಷಕ್ಕೊಮ್ಮೆ ಜಾತ್ರೆ ನಡೆಸಲಾಗುತ್ತಿತ್ತು. ಆದರೆ ಕೆಲ ತಿಂಗಳ ಹಿಂದೆ ಪುರಸಭೆ ಅಧ್ಯಕ್ಷ ಅಜರ್ ಬಸರಿಗದ್ದೆ ಅವರು ಈ ಸ್ಥಳದ ಎದುರು ಇರುವ ಈದ್ಗಾ ಮೈದಾನಕ್ಕೆ ನಮಾಜ್ ಮಾಡಲು ಬರುವವರಿಗೆ ಸಹಾಯವಾಗಲು ನೆಲಹಾಸನ್ನು ಹಾಕಲು, ಗಾರ್ಡನ್ ನಿರ್ಮಿಸಲು ಕಾಮಗಾರಿ ಮಂಜೂರು ಮಾಡಿಸಿದ್ದರು. ಈ ನಿರ್ಧಾರಕ್ಕೆ ಗ್ರಾಮದೇವಿ ದೇವಸ್ಥಾನದ ಟ್ರಸ್ಟ್‌ನವರು ಇದು ದೇವರ ಗದ್ದುಗೆ ಇಡುವ ಸ್ಥಳವಾಗಿದ್ದು ಹಾಗೆಯೇ ಬಿಡುವಂತೆ ಮನವಿ ಮಾಡಿದ್ದರು. ಆದರೆ ಈ ಮನವಿಗೆ ಸ್ಪಂದಿಸದ ಪುರಸಭೆ ಕಾಮಗಾರಿ ಮುಂದುವರೆಸಿತ್ತು.

    ಪುರಸಭೆ ನಿರ್ಧಾರವನ್ನು ಖಂಡಿಸಿ ಹಳಿಯಾಳದ ವಿವಿಧ ಸಂಘಟನೆಗಳು ಪ್ರತಿಭಟನೆಯಾಗಿ ಹಳಿಯಾಳ ನಗರ ಬಂದ್‌ಗೆ ಕರೆಕೊಟ್ಟಿದ್ದವು. ಸಾವಿರಾರು ಹಿಂದೂ ಕಾರ್ಯಕರ್ತರು ಏಕಾಏಕಿ ಸೇರಿದ್ದರಿಂದ ಬಂದ್ ಗಲಾಟೆಗೆ ತಿರುಗಿ ಈದ್ಗಾ ಮೈದಾನದೆದುರು ನುಗ್ಗಿದ ಕಾರ್ಯಕರ್ತರು ಸಿಮೆಂಟ್ ಬ್ಲಾಕ್ ತೆಗೆದು ಭಗವಾಧ್ವಜವನ್ನು ಹಾರಿಸಿದರು.

    ಸ್ಥಳೀಯವಾಗಿ 150 ಪೊಲೀಸರನ್ನು ಹಾಗೂ ಎರಡು ಕೆಎಸ್‌ಆರ್‌ಪಿ ತುಕಡಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದ್ದು ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 15ರ ಬಾಲಕಿ ಗರ್ಭಿಣಿ – ಅತ್ಯಾಚಾರಗೈದ ಹಳಿಯಾಳ ಪುರಸಭೆ ಸಿಬ್ಬಂದಿ ಅರೆಸ್ಟ್

    15ರ ಬಾಲಕಿ ಗರ್ಭಿಣಿ – ಅತ್ಯಾಚಾರಗೈದ ಹಳಿಯಾಳ ಪುರಸಭೆ ಸಿಬ್ಬಂದಿ ಅರೆಸ್ಟ್

    ಕಾರವಾರ: 15 ವರ್ಷದ ಬಾಲಕಿಯೋರ್ವಳ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯಾಗಿಸಿದ ಪುರಸಭೆಯ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಕನ್ನಡದ ಹಳಿಯಾಳ ತಾಲೂಕಿನಲ್ಲಿ ನಡೆದಿದೆ.

    ಹಳಿಯಾಳದ ಮುರ್ಕವಾಡ ಗ್ರಾಮದ ನಿವಾಸಿ ಸಚಿನ್ ಹೊಳೆಪ್ಪನವರ್(24) ಬಂಧಿತ ಆರೋಪಿಯಾಗಿದ್ದಾನೆ. ಸಚಿನ್ ಹಳಿಯಾಳ ಪುರಸಭೆಯಲ್ಲಿ ಜೆಸಿಬಿ ಆಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದನು.

    ಸಚಿನ್ ತನ್ನ ಊರಿನ ಬಾಲಕಿಯೊಬ್ಬಳ ಮೇಲೆ ಅತ್ಯಚಾರ ನಡೆಸಿದ್ದನು. ಆದರೆ ಈ ಬಗ್ಗೆ ಬಾಲಕಿ ಯಾರಿಗೂ ತಿಳಿಸಿರಲಿಲ್ಲ. ಕೆಲವು ದಿನಗಳ ಬಳಿಕ ಆರೋಗ್ಯ ಸಮಸ್ಯೆ ಕಂಡುಬಂದ ಕಾರಣಕ್ಕೆ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ತಪಾಸಣೆ ವೇಳೆ ಆಕೆ ಗರ್ಭಿಣಿಯಾಗಿರುವುದು ಬಹಿರಂಗವಾಗಿದೆ.

    ವಿಷಯ ತಿಳಿದ ತಕ್ಷಣ ಬಾಲಕಿಯನ್ನು ವಿಚಾರಿಸಿದಾಗ ಆರೋಪಿಯ ಕೃತ್ಯ ಬೆಳಕಿಗೆ ಬಂದಿದೆ. ನಂತರ ಪಾಲಕರು ಹಳಿಯಾಳದ ಜೀಜಾಮಾತಾ ಮಹಿಳಾ ಸಾಂತ್ವನ ಕೇಂದ್ರಕ್ಕೆ ದೂರು ನೀಡಿದ್ದಾರೆ. ಸದ್ಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

  • ಕ್ರೀಡಾಪಟುಗಳಿಗೆ ಕ್ರೀಡಾ ಸಾಮಗ್ರಿ ಎಸೆದು ಕ್ಷಮೆ ಕೇಳಿದ ಆರ್.ವಿ.ದೇಶಪಾಂಡೆ

    ಕ್ರೀಡಾಪಟುಗಳಿಗೆ ಕ್ರೀಡಾ ಸಾಮಗ್ರಿ ಎಸೆದು ಕ್ಷಮೆ ಕೇಳಿದ ಆರ್.ವಿ.ದೇಶಪಾಂಡೆ

    ಬೆಂಗಳೂರು: ಕ್ರೀಡಾಪಟುಗಳಿಗೆ ಕ್ರೀಡಾ ಸಾಮಗ್ರಿ ಎಸೆದಿದ್ದ ಉತ್ತರ ಕನ್ನಡ ಜಿಲ್ಲೆಯ ಉಸ್ತವಾರಿ ಸಚಿವ ಆರ್.ವಿ.ದೇಶಪಾಂಡೆ ಕ್ಷಮೆ ಕೇಳಿದ್ದಾರೆ.

    ಸ್ಥಳಾವಕಾಶ ಕಡಿಮೆ ಇದ್ದಿದ್ದರಿಂದ ವೇದಿಕೆ ಮೇಲೇ ನಿಂತು ಕ್ರೀಡಾಪಟುಗಳತ್ತ ಕಿಟ್ ಎಸೆದಿದ್ದೇನೆ ಎಂದು ಸಚಿವರು ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ.

    ಆಗಿದ್ದೇನು?: ಜಿಲ್ಲೆಯ ಹಳಿಯಾಳದಲ್ಲಿ ಲೋಕೋಪಯೋಗಿ ಇಲಾಖೆ ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ನೂತನ ಒಳಾಂಗಣ ಕ್ರೀಡಾಂಗಣ ಕಟ್ಟಡ ಉದ್ಘಾಟನೆ ಆಯೋಜಿಸಲಾಗಿತ್ತು. ಜೊತೆಗೆ ರಾಷ್ಟ್ರ ಮಟ್ಟದಲ್ಲಿ ಸಾಧನೆ ತೋರಿದ ಕ್ರೀಡಾ ಪಟುಗಳು ಹಾಗೂ ಸಂಘಗಳಿಗೆ ಸಾಮಗ್ರಿ ವಿತರಣೆ ಕಾರ್ಯಕ್ರಮ ನಡೆದಿತ್ತು.

    ಕಾರ್ಯಕ್ರಮದ ಬಳಿಕ ಸಚಿವರು ಕ್ರೀಡಾಪಟುಗಳಿಗೆ ವಿವಿಧ ಸಾಮಗ್ರಿಗಳನ್ನು ವಿತರಿಸಲು ಮುಂದಾಗಿದ್ದರು. ಆಗ ಸಾಮಗ್ರಿಗಳನ್ನು ಪಡೆಯಲು ಕ್ರೀಡಾಪಟು ಸ್ವಲ್ಪ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಸಚಿವರು ವೇದಿಕೆಯಿಂದಲೇ ಕಿಟ್ ಎಸೆದಿದ್ದರು. ಅಷ್ಟೇ ಅಲ್ಲದೇ ಲಗೂ ಬರ್ರೀ ಪಾ.. ತಗೊಂಡು ಹೋಗಾಕ ಹರಸಾಹಸ ಪಡತಿರಲ್ಲ ಎಂದು ಲೇವಡಿ ಮಾಡಿದ್ದರು. ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿರುವ ಪಟುಗಳ ಮೇಲೆ ದರ್ಪ ಮೆರೆದು ಸಚಿವರು ಅಗೌರವ ತೋರಿದ್ದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕ್ರೀಡಾಪಟುಗಳಿಗೆ ಕ್ರೀಡಾ ಸಾಮಗ್ರಿ ಎಸೆದು ದರ್ಪ ಮೆರೆದ ಆರ್.ವಿ.ದೇಶಪಾಂಡೆ: ವಿಡಿಯೋ

    ಕ್ರೀಡಾಪಟುಗಳಿಗೆ ಕ್ರೀಡಾ ಸಾಮಗ್ರಿ ಎಸೆದು ದರ್ಪ ಮೆರೆದ ಆರ್.ವಿ.ದೇಶಪಾಂಡೆ: ವಿಡಿಯೋ

    ಕಾರವಾರ: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಬಿಸ್ಕೇಟ್ ಎಸೆದು ವಿವಾದಕ್ಕೆ ಗುರಿಯಾಗಿದ್ದರು. ಈ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕ್ರೀಡಾಪಟುಗಳಿಗೆ ಕ್ರೀಡಾ ಸಾಮಗ್ರಿ ಎಸೆದು ದರ್ಪ ಮೆರೆದಿದ್ದಾರೆ.

    ಜಿಲ್ಲೆಯ ಹಳಿಯಾಳದಲ್ಲಿ ಲೋಕೋಪಯೋಗಿ ಇಲಾಖೆ ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ನೂತನ ಒಳಾಂಗಣ ಕ್ರೀಡಾಂಗಣ ಕಟ್ಟಡ ಉದ್ಘಾಟನೆ ಆಯೋಜಿಸಲಾಗಿತ್ತು. ಜೊತೆಗೆ ರಾಷ್ಟ್ರ ಮಟ್ಟದಲ್ಲಿ ಸಾಧನೆ ತೋರಿದ ಕ್ರೀಡಾ ಪಟುಗಳು ಹಾಗೂ ಸಂಘಗಳಿಗೆ ಸಾಮಗ್ರಿ ವಿತರಣೆ ಕಾರ್ಯಕ್ರಮ ನಡೆದಿತ್ತು. ಇದನ್ನೂ ಓದಿ: ಅಧಿಕಾರದ ಮದದಲ್ಲಿ ಅಮಾನವೀಯ ಕೆಲಸ- ಕೊಡಗು ಸಂತ್ರಸ್ತರಿಗೆ ಬಿಸ್ಕೆಟ್ ಎಸೆದ ಸೂಪರ್ ಸಿಎಂ

    ಕಾರ್ಯಕ್ರಮದ ಬಳಿಕ ಸಚಿವರು ಕ್ರೀಡಾಪಟುಗಳಿಗೆ ವಿವಿಧ ಸಾಮಗ್ರಿಗಳನ್ನು ವಿತರಿಸಲು ಮುಂದಾಗಿದ್ದರು. ಆಗ ಸಾಮಗ್ರಿಗಳನ್ನು ಪಡೆಯಲು ಕ್ರೀಡಾಪಟು ಸ್ವಲ್ಪ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಸಚಿವರು ವೇದಿಕೆಯಿಂದಲೇ ಕಿಟ್ ಎಸೆದಿದ್ದಾರೆ. ಅಷ್ಟೇ ಅಲ್ಲದೆ ಲಗೂ ಬರ್ರೀ ಪಾ.. ತಗೊಂಡು ಹೋಗಾಕ ಹರಸಾಹಸ ಪಡತಿರಲ್ಲ ಎಂದು ಲೇವಡಿ ಮಾಡಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿರುವ ಪಟುಗಳ ಮೇಲೆ ದರ್ಪ ಮೆರೆದು ಸಚಿವರು ಅಗೌರವ ತೋರಿದ್ದಾರೆ. ಸಚಿವರ ನಡೆಯ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉತ್ತರ ಕನ್ನಡದಲ್ಲಿ ಉತ್ತರೋತ್ತರ ಅಭಿವೃದ್ಧಿ ಮಾಡೋರು ಯಾರು..?

    ಉತ್ತರ ಕನ್ನಡದಲ್ಲಿ ಉತ್ತರೋತ್ತರ ಅಭಿವೃದ್ಧಿ ಮಾಡೋರು ಯಾರು..?

    ಗೋವಾ, ಬೆಳಗಾವಿ, ಧಾರವಾಡ, ಉಡುಪಿ ಜಿಲ್ಲೆಗಳೊಂದಿಗೆ ತನ್ನ ಗಡಿಯನ್ನ ಹಂಚಿಕೊಂಡಿದೆ ಉತ್ತರ ಕನ್ನಡ ಜಿಲ್ಲೆ. ಹಚ್ಚ ಹಸುರಿನ ಸೀರೆಯುಟ್ಟು ಸದಾ ಮದುವಣಗಿತ್ತಿಯಂತೆ ಕಂಗೊಳಿಸೋ ಈ ಜಿಲ್ಲೆಗೆ ಅರಬ್ಬೀ ಸಮುದ್ರ ಕಿರೀಟಕ್ಕೊಂದು ಗರಿ ಇಟ್ಟಂತೆ. ರವೀಂದ್ರ ನಾಥರಿಗೆ ಗೀತಾಂಜಲಿ ಬರೆಯೋದಕ್ಕೆ ಸ್ಪೂರ್ತಿ ನೀಡಿದ್ದು ಕಾರವಾರದ ಕಡಲ ತೀರವಂತೆ. ಆದ್ರೆ, ಅಭಿವೃದ್ಧಿ ಅನ್ನೋ ವಿಚಾರ ಬಂದಾಗ ಮಾತ್ರ ಉತ್ತರ ಕನ್ನಡ ಜಿಲ್ಲೆ ನಿರುತ್ತರವಾಗಿ ಬಿಡುತ್ತದೆ. ಸಮೃದ್ಧವಾದ ನೈಸರ್ಗಿಕ ಸಂಪನ್ಮೂಲ ಜಿಲ್ಲೆಯ ಪ್ಲಸ್ ಪಾಯಿಂಟ್ ಆಗಿದ್ರೂ ಕೈಗೆಟುಕದೇ ಇರೋ ಅಭಿವೃದ್ಧಿಯೇ ಈ ಜಿಲ್ಲೆಗೆ ತಟ್ಟಿದ ಮಹಾನ್ ಶಾಪ. ಇಂತಿಪ್ಪ ಉತ್ತರ ಕನ್ನಡ ಜಿಲ್ಲೆಯಲ್ಲೀಗ ಚುನಾವಣೆ ರಂಗು ರಂಗೇರಿದೆ.

    ಹಸಿರ ಕಾನನದ ನಡುವೆ ರಮ್ಯ ತಾಣಗಳ ವೈಭವ
    ಉತ್ತರ ಕರ್ನಾಟಕಕ್ಕೆ ಹೋಗೋರು ಬನವಾಸಿಗೆ ಹೋಗಿಲ್ಲ ಅಂದ್ರೆ ನಿಮ್ಮ ಪ್ರವಾಸ ಪರಿಪೂರ್ಣವಾಗೋಕೆ ಸಾಧ್ಯಾನೇ ಇಲ್ಲ. ಮಹಾಕವಿ ಪಂಪನೇ ವರ್ಣಿಸಿರುವಂತೆ ಆರಂಕುಶ ವಿಟ್ಟೊಡಂ ನೆನೆವುದೆನ್ನ ಮನ ಬನವಾಸಿ ದೇಶಮಂ ಅಂತಾ ಈ ಸ್ಥಳವನ್ನು ಮನಬಿಚ್ಚಿ ವರ್ಣಿಸಿದ್ದಾನೆ.

    ಇನ್ನು ಬೇಲೆಕೇರಿಯ ಅದಿರು ನಾಪತ್ತೆ ಪ್ರಕರಣವನ್ನು ಯಾರಾದ್ರೂ ಮರೆಯೋದುಂಟೇ..? ಬೇಲೆಕೇರಿ ಅತ್ಯಂತ ಹಳೆಯ ಹಾಗೂ ಸುಂದರ ಬಂದರು. ಉತ್ತರ ಕನ್ನಡದ ಭಟ್ಕಳ ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ಹೆಬ್ಬಾಗಿಲಾಗಿತ್ತಂತೆ. ಭಯೋತ್ಪಾದಕ ಚಟುವಟಿಕೆಗಳು ಈ ಊರಿಗೆ ಕಪ್ಪು ಮಸಿ ಬಳೀತಾದ್ರೂ ಇಂದಿಗೂ ಭಟ್ಕಳ ಶಾಂತ ಸಮುದ್ರದಂತೆ ಕಂಗೊಳಿಸುತ್ತದೆ.

    ಕಾರವಾರದಿಂದ ಕೇವಲ 40 ಕಿಲೋಮೀಟರ್ ದೂರದಲ್ಲಿದೆ ದಾಂಡೇಲಿ. ಸಿಂಥೇರಿ ರಾಕ್ಸ್, ನಾಗಝರಿ ವ್ಯಾಲಿ, ಕಾವಲಾ ಕೇವ್ಸ್ ಹಗೆ ದಾಂಡೇಲಿಯಲ್ಲಿ ನೋಡೋದಕ್ಕೆ ಅನೇಕ ಸ್ಥಳಗಳಿವೆ. ಅರಣ್ಯದಲ್ಲಿರೋ ವಸತಿ ಗೃಹದಲ್ಲಿ ಉಳಿದುಕೊಂಡು ಪ್ರವಾಸವನ್ನ ಕೂಲಾಗಿ ಅನುಭವಿಸಬಹುದು.

    ಕಾರವಾರದಿಂದ ಸರಿ ಸುಮಾರು 60 ಕಿಲೋಮೀಟರ್ ದೂರದಲ್ಲಿರೋ ಪುಣ್ಯ ಕ್ಷೇತ್ರವೇ ಗೋಕರ್ಣ. ಶಿವನ ಆತ್ಮಲಿಂಗದ ಒಂದು ತುಣುಕು ಇಲ್ಲಿದೆ ಅನ್ನೋ ನಂಬಿಕೆ ಇದೆ. ಹೀಗಾಗಿ ಈ ಕ್ಷೇತ್ರ ವಾರಣಾಸಿಯಷ್ಟೇ ಪವಿತ್ರ ಅನ್ನೋದು ಭಕ್ತರ ಅಂಬೋಣ. ಇನ್ನುಳಿದಂತೆ ಕಾರವಾರ ಸಮುದ್ರ ತೀರ, ಶಿರಸಿಯ ಮಾರಿಕಾಂಬ ದೇವಾಲಯ, ಶ್ಯಾಮಲೆಯ ತಟದಲ್ಲಿರೋ ಸೊಂದಾ ಮಠ, ಹಾಗೆಯೇ ಪ್ರಸಿದ್ಧ ಪ್ರವಾಸೀ ತಾಣವಾಗಿರೋ ಯಾಣ ಕೂಡಾ ನೋಡುಗರನ್ನ ಸೂಜಿಗಲ್ಲಿನಂತೆ ಸೆಳೆಯುತ್ತೆ.

    ದಕ್ಷಿಣ ಕನ್ನಡದಲ್ಲಿ ತೆಂಕು ತಿಟ್ಟು, ಉತ್ತರ ಕನ್ನಡದಲ್ಲಿ ಬಡಾ ಬಡಗುತಿಟ್ಟಿನ ತಾಳ ಮೇಳ..!
    ಯಕ್ಷಗಾನದಲ್ಲಿ ತೆಂಕು ತಿಟ್ಟು, ಬಡಗು ತಿಟ್ಟು ಹಾಗೂ ಬಡಾ ಬಡಗುತಿಟ್ಟು ಅನ್ನೋ ಪ್ರಬೇಧಗಳಿವೆ. ಇದ್ರಲ್ಲಿ ಉತ್ತರ ಕನ್ನಡದವರು ಬಡಾ ಬಡಗು ತಿಟ್ಟನ್ನಾಡುತ್ತಾರೆ. ಕೆರೆಮನೆ ಶಿವರಾಮ ಹೆಗಡೆ, ಕೆರೆಮನೆ ಮಹಾಬಲ ಹೆಗಡೆ, ಕೆರೆಮನೆ ಶಂಭು ಹೆಗಡೆ, ಕೊಂಡದಕುಳಿ ರಾಮಚಂದ್ರ ಹೆಗಡೆ, ಶೇಣಿ ಗೋಪಾಲಕೃಷ್ಣ ಭಟ್ ಹೀಗೆ ಉತ್ತರಕನ್ನಡ ಘಟಾನುಘಟಿ ಯಕ್ಷಕರ್ಮಿಗಳ ತವರೂರು. ಇಂದಿಗೂ ಮನೋರಂಜನೆಗಾಗಿ ಸಿನಿಮಾ, ಟಿವಿ ಮಾಧ್ಯಮಗಳಿದ್ರೂನೂ ಉತ್ತರ ಕನ್ನಡದ ಮಂದಿ ಮಾತ್ರ ಯಕ್ಷಗಾನವನ್ನ ತಮ್ಮ ಉಸಿರಲ್ಲಿ ಉಸಿರಾಗಿಸ್ಕೊಂಡಿದ್ದಾರೆ.

    ಉತ್ತರ ಕನ್ನಡದಲ್ಲಿ ಉತ್ತರವೇ ಇಲ್ಲದ ಪ್ರಶ್ನೆಗಳು ಹಲವಾರು..!
    ಇಷ್ಟೆಲ್ಲಾ ವೈಶಿಷ್ಟ್ಯತೆಗಳ ನಡುವೆ ಉತ್ತರ ಕನ್ನಡದಲ್ಲಿ ಈ ಬಾರಿ ಅತೀ ಹೆಚ್ಚು ಸದ್ದು ಮಾಡಿದ್ದು ಪರೇಶ್ ಮೇಸ್ತಾ ಸಾವು. ಇದು ದೊಡ್ಡ ಮಟ್ಟದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿದ್ದು ಈ ಬಾರಿಯ ಚುನಾವಣೆಯಲ್ಲಿ ಪರಿಣಾಮ ಬೀರೋ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಇನ್ನು, ಅಭಿವೃದ್ಧಿ ಹಾಗೂ ಉತ್ತರ ಕನ್ನಡ ಒಂದು ರೀತಿಯಲ್ಲಿ ಎಣ್ಣೆ ಸೀಗೆ ಇದ್ದಂತೆ. ಅಭಿವೃದ್ಧಿ ಅನ್ನೋದನ್ನ ನೋಡಿಯೇ ಕಾಲವಾಗಿದೆ. ಹಾಗಾದ್ರೆ, ಕ್ಷೇತ್ರವಾರು ಲೆಕ್ಕಾಚಾರಗಳು, ಕಳೆದ ಬಾರಿಯ ಫಲಿತಾಂಶ ಹಾಗೂ ಈ ಬಾರಿಯ ಕ್ಯಾಂಡಿಡೇಟ್ ಗಳ ವಿವರಗಳನ್ನು ನೋಡೋಣ ಬನ್ನಿ.

    ಕಾರವಾರ ಈ ಬಾರಿ ಯಾರ ಪಾಲಿನ ವರ..?

    ಕರ್ನಾಟಕದ ಏಕೈಕ ಅಣು ವಿದ್ಯುತ್ ಸ್ಥಾವರ ಕೈಗಾ ಕಾರವಾರದಲ್ಲಿದೆ. ಕರ್ನಾಟಕದ ಎರಡನೇ ಅತೀ ಪ್ರಮುಖ ಬಂದರೂ ಕೂಡಾ ಹೌದು. ಇಲ್ಲಿನ ಜನ ಪಕ್ಷ ನೋಡೋರೇ ಅಲ್ಲ. ಯಾವ ವ್ಯಕ್ತಿ ಸೂಕ್ತ, ಯಾರ ವರ್ಚಸ್ಸು ಇಲ್ಲಿ ವರ್ಕೌಟ್ ಆಗುತ್ತೋ ಅವರಿಗೇ ಇಲ್ಲಿನ ಮತದಾರ ಜೈ ಅಂತಾನೆ. 2013ರಲ್ಲಿ ಕಾಂಗ್ರೆಸ್ ನಿಂದ ಬಿಜೆಪಿಗೆ ಜಂಪ್ ಆಗಿದ್ದ ಆನಂದ್ ಅಸ್ನೋಟಿಕರ್ ಇಲ್ಲಿ ಮಕಾಡೆ ಮಲಗಿದ್ರು. ಈ ಬಾರಿ ಆಸ್ನೋಟಿಕರ್ ಜೆಡಿಎಸ್ ನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಜೆಡಿಎಸ್ ಇಲ್ಲಿ ಇದ್ದೂ ಇಲ್ಲದಂತಿದ್ರೂ ಆಸ್ನೋಟಿಕರ್ ಹೆಸರು ಸ್ವಲ್ಪ ಮಟ್ಟಿಗೆ ಪರಿಗಣಿತಗೊಳ್ಬೋದು. ಇನ್ನುಳಿದಂತೆ ಬಿಜೆಪಿಯಿಂದ ರೂಪಾಲಿ ನಾಯ್ಕ್, ಕಾಂಗ್ರೆಸ್ ನಿಂದ ಸತೀಶ್ ಸೈಲ್ ಕೃಷ್ಣ ಕಣದಲ್ಲಿದ್ದಾರೆ. ಸೋ ಇಲ್ಲಿ ಮತದಾರ ಯಾರಿಗೆ ಜೈ ಅಂತಾನೆ ಅನ್ನೋದೇ ಸದ್ಯದ ಕುತೂಹಲ.

    ಕುಮಟಾದಲ್ಲಿ ಗೆಲುವಿನ ತಮಟೆ ಹೊಡೆಯೋರು ಯಾರು..?
    ಕುಮಟಾ ಹೊನ್ನವರ ಕ್ಷೇತ್ರದ ಹಾಲಿ ಶಾಸಕಿ ಶಾರದಾ ಮೋಹನ ಶೆಟ್ಟಿ. ಈ ಬಾರಿಯೂ ಇವರೇ ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ. ಜೆಡಿಎಸ್ ನಿಂದ ಜಿಲ್ಲಾ ಪಂಚಾಯತ್ ಸದಸ್ಯ ಪ್ರದೀಪ್ ನಾಯ್ಕ್ ಬಿರುಸಿನ ಪ್ರಚಾರ ನಡೆಸ್ತಾ ಇದ್ದಾರೆ. 2013ರಲ್ಲಿ ಜೆಡಿಎಸ್ ನಿಂದ ಕಂಟೆಸ್ಟ್ ಮಾಡಿ ಕೇವಲ 420 ಮತಗಳಿಂದ ಸೋಲು ಕಂಡಿದ್ದ ದಿನಕರ್ ಶೆಟ್ಟಿ ಈ ಬಾರಿ ಭಾಜಪಾದ ಹುರಿಯಾಳು. ಕಳೆದ ಬಾರಿ ಶಾರದ ಮೋಹನ್ ಶೆಟ್ಟಿ 36,756 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ರು. ಜೆಡಿಎಸ್ ನ ದಿನಕರ್ ಕೇಶವ್ ಶೆಟ್ಟಿ 36,336 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ತೃಪ್ತರಾಗ್ಬೇಕಾಯ್ತು.

    ಭಟ್ಕಳದಲ್ಲಿ ಗೆಲುವಿನ ಅಟ್ಟಕ್ಕೇರೋರು ಯಾರು..?
    ಕಳೆದ ಬಾರಿ ಪಕ್ಷೇತರವಾಗಿ ನಿಂತು ಗೆದ್ದು ಬೀಗಿದ್ದ ಮಂಕಾಳ ವೈದ್ಯ ಈ ಬಾರಿ ಕಾಂಗ್ರೆಸ್ ನಿಂದ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸುನಿಲ್ ನಾಯ್ಕ್ ಈ ಬಾರಿ ಬಿಜೆಪಿಯ ಕಟ್ಟಾಳು. ಜೆಡಿಎಸ್ ಇನಾಯಿತುಲ್ಲಾ ಷಾ ಬಂದ್ರಿಯವರಿಗೆ ಟಿಕೆಟ್ ಕೊಡೋದಕ್ಕೆ ಬಯಸಿದ್ರೂ ಕೊನೆಗೆ ಯಾರನ್ನೂ ಕಣಕ್ಕಿಳಿಸದೆ ಸೈಲೆಂಟಾಗಿದೆ.

    ಹಳಿಯಾಳದಲ್ಲಿ ಗೆಲುವಿನ ಹಳಿಯಲ್ಲಿ ಓಡೋರು ಯಾರು..?
    ಹಳಿಯಾಳ ಕ್ಷೇತ್ರ ಸಚಿವ ಆರ್.ವಿ ದೇಶಪಾಂಡೆಯವ್ರ ಸಾಮ್ರಾಜ್ಯ. 1983ರಿಂದ ಸತತ ಆರು ಎಲೆಕ್ಷನ್ ಗೆದ್ದಿರೋ ದೇಶಪಾಂಡೆಗೆ ಇಲ್ಲಿ ಸೋಲಿನ ರುಚಿ ತೋರಿಸೋರು ಯಾರು ಇಲ್ಲ ಅನ್ನೋ ಪರಿಸ್ಥಿತಿ ಇತ್ತು. ಆದ್ರೆ, 2008ರಲ್ಲಿ ಜೆಡಿಎಸ್ ನಿಂದ ಕಣಕ್ಕಿಳಿಸಿದ್ದ ಸುನಿಲ್ ಹೆಗಡೆ ದೇಶಪಾಂಡೆಯವ್ರ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ್ರು. ಆದ್ರೆ, 2013ರಲ್ಲಿ ಮತ್ತೆ ದೇಶಪಾಂಡೆ ಗೆಲುವಿನ ನಗೆ ಬೀರಿದ್ರು. ಈಗ ಇಬ್ಬರೂ ಮತ್ತೆ ಮುಖಾಮುಖಿಯಾಗ್ತಿದ್ದಾರೆ. ಜೆಡಿಎಸ್ ನಿಂದ ಕೆ. ರಮೇಶ್ ಈ ಬಾರಿ ಕಣದಲ್ಲಿದ್ದಾರೆ.

    ಶಿರಸಿಯಲ್ಲಿ ಯಾರ ಶಿರಕ್ಕೆ ಗೆಲುವಿನ ಮುಕುಟ..?
    ಬಿಜೆಪಿಯಿಂದ ಶಿರಸಿಯನ್ನು ಹೇಗಾದ್ರೂ ಮಾಡಿ ಕಸಿಯಲೇಬೇಕು ಅನ್ನೋ ಪಣಕ್ಕೆ ಬಿದ್ದಿವೆ ಕಾಂಗ್ರೆಸ್ ಹಾಗೂ ಜೆಡಿಎಸ್. 1999ರಿಂದಲೂ ಇಲ್ಲಿ ಬಿಜೆಪಿಯದ್ದೇ ಅಬ್ಬರ. ವಿಶ್ವೇಶ್ವರ ಹೆಗಡೆ ಕಾಗೇರಿ ಇಲ್ಲಿ ಬಿಜೆಪಿಯ ಪ್ರಬಲ ಅಭ್ಯರ್ಥಿ. ದಿ.ರಾಮಕೃಷ್ಣ ಹೆಗಡೆ ಕುಟುಂಬದ ಶಶಿಭೂಷಣ ಹೆಗಡೆ ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿದ್ದು ಕದನ ಕಣ ಕುತೂಹಲ ಮೂಡಿಸಿದೆ. ಹೀಗಾಗಿ, ಶಿರಸಿ ಹವ್ಯಕರ ಮತ ಬ್ಯಾಂಕ್ ಒಡೆದು ಹೋಗುವ ಸಾಧ್ಯತೆ ದಟ್ಟವಾಗಿದೆ. ದಿ.ಎಸ್ ಬಂಗಾರಪ್ಪ ಅವ್ರ ದೂರದ ಸಂಬಂಧಿ ಭೀಮಣ್ಣ ನಾಯ್ಕ್ ಕೂಡಾ ಕಣದಲ್ಲಿದ್ದು ಈ ಬಾರಿ ಘಟಾನುಘಟಿ ನಾಯಕ್ರ ಸಂಬಂಧಿಕರದ್ದೇ ಚರ್ಚೆ ಶಿರಸಿಯಲ್ಲಿ ಜೋರಾಗಿದೆ.

    ಯಲ್ಲಾಪುರದ ಅರಸ ಯಾರಾಗ್ತಾರೆ..?
    ಯಲ್ಲಾಪುರದ ಜನರಿಗೆ ಬಿಜೆಪಿ ಫೆವರೇಟ್ ಅನ್ನೋದು ಸದ್ಯಕ್ಕಿರೋ ಟ್ರೆಂಡ್. ಯಾಕಂದ್ರೆ ಇಲ್ಲಿ ಜನಪ್ರತಿನಿಧಿಗಳು ಯಾರಾಗ್ಬೇಕು ಅನ್ನೋದನ್ನ ನಿರ್ಧರಿಸೋರೇ ಹವ್ಯಕ ಬ್ರಾಹ್ಮಣ, ಲಿಂಗಾಯತ ಹಾಗೂ ನಾಮಧಾರಿಗಳು. ಆದ್ರೆ, 2013ರಲ್ಲಿ ಈ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ಹೋಗಿತ್ತು. ಹಾಲಿ ಶಾಸ್ ಕಾಂಗ್ರೆಸ್ ನ ಶಿವರಾಮ ಹೆಬ್ಬಾರ್ ಈ ಬಾರಿಯೂ ಕಣದಲ್ಲಿದ್ದಾರೆ. ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ತೆನೆ ಹೊತ್ತಿದ್ದ ರವೀಂದ್ರನಾಥ್ ಈ ಬಾರಿ ಜೆಡಿಎಸ್ ನಿಂದ ಪೈಪೋಟಿ ಕೊಡೋಕೆ ನಿಂತಿದ್ದಾರೆ. ಇನ್ನು ಬಿಜೆಪಿಯಿಂದ ವಿಎಸ್ ಪಾಟೀಲ್ ರಣಕಣಕ್ಕೆ ಧುಮುಕಿದ್ದಾರೆ. ಆದ್ರೆ, ಮತದಾರ ಈ ಬಾರಿ ಯಾರಿಗೆ ಕೃಪಾಕಟಾಕ್ಷ ತೋರ್ತಾನೆ ಅನ್ನೋದಕ್ಕೆ ಮೇ 15ರವರೆಗೆ ಕಾಯ್ಲೇಬೇಕು.