Tag: ಹಳೆ ಯೋಜನೆ

  • ರೈತರಿಗೆ ನೀಡಿದ ಭರವಸೆ ಈಡೇರಿಸಲು ಹೊಸ ಬಜೆಟ್ ಅನಿವಾರ್ಯ: ಎಚ್‍ಡಿಕೆ

    ರೈತರಿಗೆ ನೀಡಿದ ಭರವಸೆ ಈಡೇರಿಸಲು ಹೊಸ ಬಜೆಟ್ ಅನಿವಾರ್ಯ: ಎಚ್‍ಡಿಕೆ

    ಬೆಂಗಳೂರು: ರೈತರಿಗೆ ನೀಡಿದ ಭರವಸೆ ಈಡೇರಿಸಲು ಹೊಸ ಬಜೆಟ್ ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

    ಹೊಸ ಬಜೆಟ್ ಬೇಡ ಎನ್ನುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿಚಾರಕ್ಕೆ ಉತ್ತರ ನೀಡಿರುವ ಕುಮಾರಸ್ವಾಮಿ ಅವರು, ಹೊಸ ಬಜೆಟ್‍ನಲ್ಲಿ ಯಾವುದೇ ದೊಡ್ಡ ಬದಲಾವಣೆಗಳಿಲ್ಲ. ಅಲ್ಲದೇ ಹಳೆಯ ಯೋಜನೆಗಳನ್ನು ಮುಂದುವರಿಸುವ ಯೋಜನೆ ಇದೆ. ಈ ಕುರಿತು ಅವರಿಗೂ ಜೊತೆಗೂ ಚರ್ಚೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

    ಹಿಂದಿನ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸುವುದಿಲ್ಲ. ಅವುಗಳನ್ನು ಮುಂದುವರಿಸಲು ಒಪ್ಪಿಕೊಂಡಿದ್ದು, ಇದರೊಂದಿಗೆ ನಾವು ರೈತರಿಗೆ ನೀಡಿದ್ದ ಸಾಲಮನ್ನಾ ಮಾಡುವ ಭರವಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೊಸ ಬಜೆಟ್ ಮಂಡಿಸಲಾಗುತ್ತಿದೆ ಎಂದು ಹೇಳಿದರು.