Tag: ಹಳೇಬೀಡು

  • ಟಿಟಿ ವಾಹನ, ಬೈಕ್ ಮುಖಾಮುಖಿ ಡಿಕ್ಕಿ- ಬೈಕ್ ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

    ಟಿಟಿ ವಾಹನ, ಬೈಕ್ ಮುಖಾಮುಖಿ ಡಿಕ್ಕಿ- ಬೈಕ್ ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರ

    – ಟಿಟಿ ಚಾಲಕ ಪೊಲೀಸರ ವಶಕ್ಕೆ

    ಹಾಸನ: ಟಿಟಿ (TT) ವಾಹನ ಹಾಗೂ ಬೈಕ್ (Bike) ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಂಭೀರ ಗಾಯಗೊಂಡ ಘಟನೆ ಹಾಸನ (Hassan) ಜಿಲ್ಲೆಯಲ್ಲಿ ನಡೆದಿದೆ.

    ಬೇಲೂರು (Belur) ತಾಲೂಕಿನ ಹಳೇಬೀಡು (Halebeedu) ಹೋಬಳಿಯ ಕಲ್ಲಹಳ್ಳಿ ಅರಣ್ಯದ ಬಳಿ ಘಟನೆ ನಡೆದಿದ್ದು, ಬೈಕ್ ಸವಾರ ಶರತ್ (20) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ವೀರೇಶ್ (20) ಸ್ಥಿತಿ ಚಿಂತಾಜನಕವಾಗಿದೆ. ಸುರಪುರ ಗ್ರಾಮದವರಾದ ಶರತ್ ಮತ್ತು ವೀರೇಶ್ ಸ್ಪ್ಲೆಂಡರ್ ಬೈಕ್‌ನಲ್ಲಿ ಬೇಲೂರಿನಿಂದ ಹಳೇಬೀಡು ಕಡೆಗೆ ಬರುತ್ತಿದ್ದರು. ಈ ಸಂದರ್ಭ ಹಳೇಬೀಡಿನಿಂದ ಬೇಲೂರು ಕಡೆಗೆ ಬರುತ್ತಿದ್ದ ಟಿಟಿ ವಾಹನ ಕಲ್ಲಹಳ್ಳಿ ಗ್ರಾಮದ ಬಳಿ ಬೈಕ್‌ಗೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಇದನ್ನೂ ಓದಿ:‌ 3 ಸಾವಿರಕ್ಕಾಗಿ ಯುವಕನನ್ನು ಹಾಡಹಗಲೇ ಚುಚ್ಚಿ ಚುಚ್ಚಿ ಕೊಂದ!

    ಘಟನೆ ಪರಿಣಾಮ ಶರತ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡ ವೀರೇಶ್‌ನನ್ನು ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟಿಟಿ ವಾಹನ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಎಣ್ಣೆ ಸಾಲ ಕೊಡಲ್ಲ ಎಂದಿದ್ದಕ್ಕೆ ಕ್ಯಾಶಿಯರ್ ಮೇಲೆ ಬಾಟ್ಲಿಯಿಂದ ಹಲ್ಲೆ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿದ್ಯುತ್ ಬಿಲ್ ಪಾವತಿಸದ ಪುರಾತತ್ವ ಇಲಾಖೆ- ಕತ್ತಲಲ್ಲಿ ಹಳೇಬೀಡು ಹೊಯ್ಸಳೇಶ್ವರ ದೇವಾಲಯ

    ವಿದ್ಯುತ್ ಬಿಲ್ ಪಾವತಿಸದ ಪುರಾತತ್ವ ಇಲಾಖೆ- ಕತ್ತಲಲ್ಲಿ ಹಳೇಬೀಡು ಹೊಯ್ಸಳೇಶ್ವರ ದೇವಾಲಯ

    ಹಾಸನ: ವಿದ್ಯುತ್ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಜಿಲ್ಲೆಯ ಬೇಲೂರು ತಾಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಹಳೇಬೀಡು ಹೊಯ್ಸಳೇಶ್ವರ ದೇವಾಲಯದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದ್ದು, ಕತ್ತಲಲ್ಲೇ ದೇವರ ದರ್ಶನ ಮಾಡುವಂತಾಗಿದೆ.

    6 ತಿಂಗಳಿಂದ ಸುಮಾರು 45,000 ರೂ. ವಿದ್ಯುತ್ ಬಿಲ್‍ಅನ್ನು ಪುರಾತತ್ವ ಇಲಾಖೆ ವಿಭಾಗ ಪಾವತಿಸಬೇಕಿದೆ. ಪ್ರತಿನಿತ್ಯ ದೇಗುಲಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರು ದೇವಾಲಯದ ಒಳಗೆ ಕತ್ತಲೆಯ ಇರುವ ಕಾರಣ ದೇಗುಲದ ಒಳಭಾಗದ ಶಿಲ್ಪಕಲೆಯನ್ನು ಸವಿಯಲಾಗದೆ ನಿರಾಶರಾಗುತ್ತಿದ್ದಾರೆ. ಸಾವಿರಾರು ಜನ ಭೇಟಿ ನೀಡುವ ದೇಗುಲದ ವಿದ್ಯುತ್ ಬಿಲ್ ಭರಿಸಲಾಗದ ಪುರಾತತ್ವ ಇಲಾಖೆ ವಿರುದ್ಧ ಪ್ರವಾಸಿಗರು ಬೇಸರ ಹೊರಹಾಕುತ್ತಿದ್ದಾರೆ.

    ಮೂರು ತಿಂಗಳ ಹಿಂದೆ ವಿದ್ಯುತ್ ಬಿಲ್ ಪಾವತಿಸಿಲ್ಲ ಎಂದು ಸೆಸ್ಕ್ ಸಿಬ್ಬಂದಿ ದೇವಾಲಯದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ರು. ಈ ವೇಳೆ ವಿದ್ಯುತ್ ಬಾಕಿ ಪಾವತಿಸುವುದಾಗಿ ಪುರಾತತ್ವ ವಿಭಾಗದ ಅಧಿಕಾರಿಗಳು ಭರವಸೆ ನೀಡಿದ್ದರು. ಹೀಗಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದರು. ಅಂದಿನಿಂದಲೂ ಬಿಲ್ ಬಾಕಿ ಇದ್ದು, ಈಗ ಮೊತ್ತವೂ ಹೆಚ್ಚಾಗಿರುವ ಕಾರಣ ನಿಯಮಾನುಸಾರ ಕನೆಕ್ಷನ್ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು. ಇತಿಹಾಸ ಪ್ರಸಿದ್ಧ ದೇಗುಲದ ವಿದ್ಯುತ್ ಬಿಲ್ ಪಾವತಿಸುವಷ್ಟು ಹಣ ಸರ್ಕಾರದ ಬೊಕ್ಕಸದಲ್ಲಿ ಇಲ್ಲವೇ ಎಂದು ಪ್ರವಾಸಿಗರು ಆಕ್ರೋಶ ಹೊರಹಾಕುತ್ತಿದ್ದಾರೆ.

  • ಮಡಿಕೇರಿಯಲ್ಲಿ ಮಣ್ಣು ಕುಸಿದು ಸ್ಥಳದಲ್ಲಿಯೇ ಇಬ್ಬರು ಮಹಿಳಾ ಕಾರ್ಮಿಕರು ಸಾವು

    ಮಡಿಕೇರಿಯಲ್ಲಿ ಮಣ್ಣು ಕುಸಿದು ಸ್ಥಳದಲ್ಲಿಯೇ ಇಬ್ಬರು ಮಹಿಳಾ ಕಾರ್ಮಿಕರು ಸಾವು

    ಮಡಿಕೇರಿ: ಕಟ್ಟಡ ನಿರ್ಮಾಣ ವೇಳೆ ಮಣ್ಣು ಕುಸಿದು ಸ್ಥಳದಲ್ಲಿಯೇ ಇಬ್ಬರು ಮಹಿಳಾ ಕಾರ್ಮಿಕರು ಮೃತಪಟ್ಟ ಘಟನೆ ಮಡಿಕೇರಿಯಲ್ಲಿ ನಡೆದಿದೆ.

    ಹಾಸನ ಜಿಲ್ಲೆ ಹಳೇಬೀಡು ಮೂಲದ ಕಾರ್ಮಿಕರಾದ ಗೌರಮ್ಮ (40), ಯಶೋಧ(20) ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಮಡಿಕೇರಿ ನಿವಾಸಿ ಸುಬ್ಬಯ್ಯ ಎಂಬವರ ಮನೆ ಕಟ್ಟಡ ನಿರ್ಮಾಣ ವೇಳೆ ಈ ಅವಘಡ ಸಂಭವಿಸಿದೆ. ಮತ್ತೋರ್ವ ಕಾರ್ಮಿಕ ವೆಂಕಟಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಹಳೇಬೀಡು ಮೂಲದ ಕಾರ್ಮಿಕರು ಹೊಟ್ಟೆ ಪಾಡಿಗಾಗಿ ಮಡಿಕೇರಿಯ ರಾಜಾ ಸೀಟ್ ಬಳಿ ಮಣ್ಣಿನ ಕೆಲಸಕ್ಕೆ ಬಂದಿದ್ದರು. ಮಡಿಕೇರಿ ನಗರದ ಗೌಳಿ ಬೀದಿಯಲ್ಲಿನ ಸುಬ್ಬಯ್ಯ ಅವರ ಮನೆಯಲ್ಲಿ ಒಟ್ಟು 6 ಜನ ಇಂದು ತಳಪಾಯನ್ನು ತೆಗೆಯುತ್ತಿದ್ದರು. ಈ ವೇಳೆ ಬರೆ ಕುಸಿದು ನಾಲ್ವರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ. ಅವರಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟರೆ, ಓರ್ವ ಮಹಿಳೆ ಹಾಗೂ ಓರ್ವ ಪುರುಷ ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ಪಾರಾಗಿದ್ದಾರೆ.

    ಬದುಕುಳಿದ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರಲ್ಲಿ ವೆಂಕಟಸ್ವಾಮಿ ಸ್ಥಿತಿ ಚಿಂತಾಜನಕವಾಗಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಮೃತಪಟ್ಟ ಮಹಿಳೆಯರಿಗೆ ಹಾಗೂ ಗಾಯಗೊಂಡವರಿಗೆ ಪರಿಹಾರ ಕೊಡಿಸಲಾಗುತ್ತದೆ ಎಂದು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ನಿವೃತ್ತ ಮಡಿಕೇರಿ ನಿರೀಕ್ಷಕ ಅನೂಪ್ ಮಾದಪ್ಪ ಭರವಸೆ ನೀಡಿದ್ದಾರೆ.

    ಬರೆಯ ಮಣ್ಣಿನಲ್ಲಿ ಸಿಲುಕಿ ಬದುಕುಳಿದ ಮಹಿಳೆ ಮಾತನಾಡಿ, ಕೆಲಸವನ್ನು ಮುಗಿಸಿ ಇನ್ನೊಂದು 10 ಬುಟ್ಟಿ ಮಣ್ಣು ಬಾಕಿ ಇತ್ತು. ಅದನ್ನು ಎತ್ತಿ ಹಾಕಿ ಹೋಗೋಣ ಅಂದುಕೊಂಡಿದ್ದೇವು. ಮಣ್ಣ ತೆಗೀತಾ ಇದ್ದಾಗ ಕಣ್ಣು ಮುಚ್ಚಿ ಬಿಡೋದರೋಳಗೆ ಬರೆ ಕುಸಿಯಿತು. ಸತ್ತವರಲ್ಲಿ ಒಬ್ಬಳಿಗೆ ಎರಡು ಪುಟ್ಟ ಮಕ್ಕಳಿದ್ದಾರೆ. ಇನ್ನೊಬ್ಬಳಿಗೆ ಮದುವೆಯಾಗಿ ಕೇವಲ 6 ತಿಂಗಳು ಆಗಿದೆ ಎಂದು ದು:ಖ ತೋಡಿಕೊಂಡರು.

    ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸ್, ಅಗ್ನಿಶಾಮಕ ದಳ ಸಿಬ್ಬಂದಿ ಮಣ್ಣಿನ ಅಡಿ ಸಿಲುಕಿಕೊಂಡಿದ್ದ ಗೌರಮ್ಮ ಹಾಗೂ ಯಶೋಧ ಅವರ ಮೃತದೇಹವನ್ನು ಹೊರ ತೆಗೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವೆಂಕಟಸ್ವಾಮಿ ಅವರನ್ನು ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಂದಿಬೆಟ್ಟ, ಚಾಮುಂಡಿಬೆಟ್ಟ, ಬೇಲೂರು, ಹಳೇಬೀಡಿಗೆ ಕೆಎಸ್‍ಟಿಡಿಸಿಯಿಂದ ಪ್ರವಾಸ ಆಯೋಜನೆ

    ನಂದಿಬೆಟ್ಟ, ಚಾಮುಂಡಿಬೆಟ್ಟ, ಬೇಲೂರು, ಹಳೇಬೀಡಿಗೆ ಕೆಎಸ್‍ಟಿಡಿಸಿಯಿಂದ ಪ್ರವಾಸ ಆಯೋಜನೆ

    ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಬೇಸಿಗೆ ರಜೆ ಹಿನ್ನೆಲೆಯಲ್ಲಿ ಎರಡು ವಿಶೇಷ ಪ್ರವಾಸವನ್ನು ಆಯೋಜಿಸಿದೆ.

    ರಾಜ್ಯಕ್ಕೆ ಭೇಟಿ ನೀಡುವ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರಿಗೆ ಕೈಗೆಟಕುವ ದರದಲ್ಲಿ ನಂದಿಬೆಟ್ಟ ಮತ್ತು ಮೈಸೂರು, ಹಾಸನ ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳಿಗೆ ಪ್ರವಾಸವನ್ನು ಆಯೋಜಿಸಿದೆ. ಏಪ್ರಿಲ್ 1ರಿಂದ ಪ್ರವಾಸಿಗರು ಇದರ ಸದುಪಯೋಗವನ್ನು ಪಡೆಯಬಹುದಾಗಿದೆ.

    1.ಬೆಂಗಳೂರು-ದೇವನಹಳ್ಳಿ-ನಂದಿಬೆಟ್ಟ ಪ್ರವಾಸ: ಒಂದು ದಿನದ ಪ್ರವಾಸವಾಗಿದ್ದು, ಪ್ರತಿ ಶನಿವಾರ ಹಾಗೂ ಭಾನುವಾರ ಈ ಪ್ರವಾಸವನ್ನು ಆಯೋಜಿಸಲಾಗುತ್ತಿದೆ. ಈ ಪ್ರವಾಸವು ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನ ಯಶವಂತಪುರ ಬಿಎಂಟಿಸಿ ಬಸ್ ನಿಲ್ದಾಣದಿಂದ ನಿರ್ಗಮಿಸಿ ದೇವನಹಳ್ಳಿ ಕೋಟೆ-ಮುದ್ದೇನಹಳ್ಳಿ ವಿಶ್ವೇಶ್ವರಯ್ಯ ಜನ್ಮಸ್ಥಳ-ನಂದಿಗ್ರಾಮದ ದೇವಸ್ಥಾನಗಳಿಗೆ ಭೇಟಿ ನೀಡಿ ಸಾಯಂಕಾಲ 5 ಗಂಟೆವರೆಗೆ ನಂದಿಬೆಟ್ಟದ ವೀಕ್ಷಣೆ ಮಾಡುವ ವ್ಯವಸ್ಥೆ ಇರುತ್ತದೆ. ಈ ಪ್ರವಾಸದ ದರವು ಪ್ರತಿಯೊಬ್ಬರಿಗೆ ಊಟದ ವ್ಯವಸ್ಥೆ ಸೇರಿ 700 ರೂ. ಆಗಿರುತ್ತದೆ.

    2.ಬೆಂಗಳೂರು-ಮೈಸೂರು-ಶ್ರವಣಬೆಳಗೊಳ-ಬೇಲೂರು-ಹಳೇಬೀಡು-ಬೆಳವಾಡಿ-ಪ್ರವಾಸ: ಇದು 2 ದಿನಗಳ ಪ್ರವಾಸವಾಗಿದ್ದು, ಮೊದಲನೆ ದಿನ ಬೆಳಿಗ್ಗೆ 6.30ಕ್ಕೆ ಬೆಂಗಳೂರಿನಿಂದ ಹೊರಟು ಶ್ರೀರಂಗಪಟ್ಟಣ-ಮೈಸೂರಿನ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ಕೆ.ಆರ್ ಸಾಗರ ವೀಕ್ಷಣೆ ಮತ್ತು ಕೆ.ಆರ್ ಸಾಗರದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಎರಡನೇ ದಿನ ಬೆಳಿಗ್ಗೆ ಕೆ.ಆರ್ ಸಾಗರದಿಂದ ಹೊರಟು ಶ್ರವಣಬೆಳಗೊಳ-ಬೇಲೂರು-ಹಳೇಬೀಡು-ಬೆಳವಾಡಿ ವೀರನಾರಾಯಣಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡುವ ವ್ಯವಸ್ಥೆ ಇದೆ. ಈ ಪ್ರವಾಸದ ದರವು ಊಟದ ವ್ಯವಸ್ಥೆ ಸೇರಿ ಪ್ರತಿಯೊಬ್ಬರಿಗೆ 1,900 ರೂ. ಆಗಿದೆ.

    ಪ್ರವಾಸಿಗರು ಇದೇ ರೀತಿ ಮುಂಬರುವ ಬೇಸಿಗೆ ರಜೆ ಹಿನ್ನೆಲೆಯಲ್ಲಿ ನಿಗಮದಿಂದ ಮೈಸೂರು-ಊಟಿ-ಕೊಡೆಕೆನಾಲ್-ಕೊಡಗಿನ ಪ್ರವಾಸಿ ಸ್ಥಳಗಳಿಗೆ ಬೇಡಿಕೆಗೆ ಅನುಗುಣವಾಗಿ ಪ್ರವಾಸಗಳನ್ನು ಆಯೋಜಿಸಲಾಗಿದೆ. ಪ್ರವಾಸಿಗರು ಇದರ ಸದುಪಯೋಗವನ್ನು ಪಡೆಯಲು, ಬುಕ್ಕಿಂಗ್ ಗಾಗಿ
    www.kstdc.co  ವೆಬ್ ಸೈಟ್ ಹಾಗೂ ದೂರವಾಣಿ ಸಂಖ್ಯೆ – 89706 50070, 080-43344334 ಸಂಪರ್ಕಿಸಬಹುದಾಗಿದೆ.