Tag: ಹವಮಾನ ಇಲಾಖೆ

  • ರಾಜ್ಯದ ಹಲವೆಡೆ ಮುಂದುವರಿದ ಮಳೆ – ಕರಾವಳಿಗೆ ಆರೆಂಜ್, ಉತ್ತರ ಒಳನಾಡಿನ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ರಾಜ್ಯದ ಹಲವೆಡೆ ಮುಂದುವರಿದ ಮಳೆ – ಕರಾವಳಿಗೆ ಆರೆಂಜ್, ಉತ್ತರ ಒಳನಾಡಿನ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಬೆಂಗಳೂರು: ಕಳೆದ ಒಂದು ವಾರದಿಂದ ಅಬ್ಬರಿಸುತ್ತಿದ್ದ ಮಳೆ ಇದೀಗ ಕೊಂಚ ಬಿಡುವು ನೀಡಿದೆ. ಇಂದಿನಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಕೊಂಚ ತಗ್ಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.ಇದನ್ನೂ ಓದಿ: ವರ್ಷಕ್ಕೆ 30 ದಿನ ಮಾತ್ರ ತೆರೆಯುವ ಕೊಟ್ಟಿಯೂರು ಶಿವ ದೇಗುಲಕ್ಕೆ ನಟ ದರ್ಶನ್ ಭೇಟಿ

    ಇನ್ನೂ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡಿನ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ ಒಂದು ವಾರದಿಂದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಇಂದಿನಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ.

    ಇನ್ನೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಧಾರವಾಡ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾವೇರಿ, ಬೆಳಗಾವಿ ಸೇರಿದಂತೆ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.ಇದನ್ನೂ ಓದಿ: ಬೆಂಗಳೂರು | ಮರದ ಕೊಂಬೆ ಬಿದ್ದು ಆಸ್ಪತ್ರೆ ಸೇರಿದ್ದ ಯುವಕನ ಬ್ರೈನ್ ಡೆಡ್

  • ಕರಾವಳಿ ಗರಿಷ್ಠ ತಾಪಮಾನ ಇಳಿಕೆ ಸಾಧ್ಯತೆ – ಹೀಟ್ ವೇವ್ ಅಲರ್ಟ್ ವಾಪಸ್

    ಕರಾವಳಿ ಗರಿಷ್ಠ ತಾಪಮಾನ ಇಳಿಕೆ ಸಾಧ್ಯತೆ – ಹೀಟ್ ವೇವ್ ಅಲರ್ಟ್ ವಾಪಸ್

    ಬೆಂಗಳೂರು: ಕರಾವಳಿಯಲ್ಲಿ ಇಂದಿನಿಂದ ಗರಿಷ್ಠ ಉಷ್ಣಾಂಶ 2 ಡಿಗ್ರಿ ಸೆಲ್ಸಿಯಸ್‍ನಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ (Weather Bureau) ತಿಳಿಸಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ನೀಡಿದ್ದ ಬಿಸಿ ಗಾಳಿ ಎಚ್ಚರಿಕೆಯನ್ನು ಇಲಾಖೆ ಹಿಂಪಡೆದಿದೆ.

    ಕರಾವಳಿಯಲ್ಲಿ (Coastal Area) ಉಷ್ಣ ಅಲೆಯ ಪ್ರಭಾವ ಕಳೆದ ಎರಡು ದಿನದಿಂದ ಕಾಣಿಸಿಕೊಂಡಿತ್ತು. ಸಾಮಾನ್ಯವಾಗಿ ಉಂಟಾಗುವ ಹೀಟ್ ವೇವ್ (Heatwave) ಆಗಿರದೆ, ತಾಪಮಾನದ ದಿಢೀರ್ ಏರಿಕೆಯ ಪರಿಣಾಮ ಎಂದು ಇಲಾಖೆ ಎಚ್ಚರಿಸಿತ್ತು. ಇದನ್ನೂ ಓದಿ: ಡೋಲು ಬಡಿಯುತ್ತ ಪಬ್ ಮೇಲೆ ದಾಳಿ- ಸಂಘಟನೆ ಕಾರ್ಯಕರ್ತರು ವಶಕ್ಕೆ

     

    ಸಾಮಾನ್ಯವಾಗಿ ಏಪ್ರಿಲ್ -ಮೇ ತಿಂಗಳಲ್ಲಿ ಉಷ್ಣ ಅಲೆಯ ಪ್ರಮಾಣ ಹೆಚ್ಚಾಗಿ ತಾಪಮಾನ ಏರಿಕೆ ಕಾರಣವಾಗುತ್ತಿತ್ತು. ಕಳೆದ ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಒಂದು ತಿಂಗಳ ಮುಂಚೆಯೇ ಆ ವಾತಾವರಣ ಉಂಟಾಗಿ ಇಲಾಖೆ ಉಷ್ಣ ಅಲೆಯ ಅಲರ್ಟ್ ನೀಡಿತ್ತು. ಆದರೆ ಉಷ್ಣಾಂಶ ಎರಡು ದಿನಗಳಿಗೆ ಸೀಮಿತಗೊಂಡು ಕಡಿಮೆಯಾಗಿದ್ದು ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

    ಉಷ್ಣ ಅಲೆಯ ಪರಿಣಾಮ ಶನಿವಾರ ಉಷ್ಣತೆಯ ಅನುಭವ ಹೆಚ್ಚಾಗಿತ್ತು. ಮಂಗಳೂರಿನಲ್ಲಿ (Mangaluru) ಗರಿಷ್ಠ ತಾಪಮಾನ 36.6 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಕನಿಷ್ಠ 20.8 ಡಿಗ್ರಿ ಸೆಲ್ಸಿಯಸ್ (Celsius) ದಾಖಲಾಗಿದೆ. ಇದನ್ನೂ ಓದಿ: ಕೊರೋನಾ ಬಳಿಕ ದೇಶದಲ್ಲಿ ಫ್ಲೂ ಭೀತಿ- ಚಿಕಿತ್ಸೆ ಹೇಗೆ? ಏನು ಮಾಡಬೇಕು? ಏನು ಮಾಡಬಾರದು?

  • ದಾಖಲೆ ಸೃಷ್ಟಿಸಿದ ಬೆಂಗಳೂರು ವೆದರ್ – 54 ವರ್ಷದ ಬಳಿಕ ಕೂಲೆಸ್ಟ್ ಡೇ ರಿಪೀಟ್

    ದಾಖಲೆ ಸೃಷ್ಟಿಸಿದ ಬೆಂಗಳೂರು ವೆದರ್ – 54 ವರ್ಷದ ಬಳಿಕ ಕೂಲೆಸ್ಟ್ ಡೇ ರಿಪೀಟ್

    ಬೆಂಗಳೂರು: ಮೇ ತಿಂಗಳಿನಲ್ಲಿ ನಿಗಿ, ನಿಗಿ ಕೆಂಡದಂತೆ ಸೂರ್ಯನ ಬಿಸಿಲು ಇರುವುದು ಕಾಮನ್. ಆದರೆ ಈ ಬಾರಿ ಅಸಾನಿ ಚಂಡಮಾರುತದ ಪರಿಣಾಮ ವರುಣನ ಆರ್ಭಟ ತಂಪು ಗಾಳಿ, ಚುಮು, ಚುಮು ಚಳಿಯಿಂದಾಗಿ ಬೆಂಗಳೂರಿನ ವಾತಾವರಣ ಕಳೆದ ಮೂರು ದಿನದಿಂದ ಊಟಿಯನ್ನು ಮೀರಿಸುತ್ತಿದೆ.

    bengaluru weather

    ಬೆಂಗಳೂರಿನ ಈ ವಾತಾವರಣ ದಾಖಲೆಯನ್ನು ಸೃಷ್ಟಿಸಿದೆ. ಅಸಾನಿ ಚಂಡಮಾರುತ ಬೆಂಗಳೂರಿನಲ್ಲಿ 54 ವರ್ಷದ ಹಿಂದಿನ ದಾಖಲೆ ರಿಪೀಟ್ ಮಾಡಿದೆ. 54 ವರ್ಷದ ಬಳಿಕ ಗುರುವಾರ ಬೆಂಗಳೂರಿನ ವೆದರ್ ಸೆಕೆಂಡ್ ಕೂಲೆಸ್ಟ್ ಡೇ ದಾಖಲೆ ಸೃಷ್ಟಿಯಾಗಿದೆ. ಇದನ್ನೂ ಓದಿ: ದೇಶದಲ್ಲಿ ಬಿಜೆಪಿ ತಾಲಿಬಾನ್ ವ್ಯವಸ್ಥೆ ರಚಿಸಲು ಬಯಸುತ್ತಿದೆ: ಶೀವಸೇನೆ

    1972ರಲ್ಲಿ ಮೇ 14 ರಂದು 22.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕಡಿಮೆ ಉಷ್ಣಾಂಶ ದಾಖಲಾಗಿತ್ತು. ಆದರೆ ಗುರುವಾರ ಬೆಂಗಳೂರಿನಲ್ಲಿ 23.00 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಅಲ್ಲದೇ ಇದು ಎರಡನೇ ಅತ್ಯಂತ ಕೂಲೆಸ್ಟ್ ಡೇ ಅಂತ ದಾಖಲೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಬೇಲ್‌ನಲ್ಲಿರುವ ಶಾಸಕರ ಪುತ್ರ ನನ್ನ ಪ್ರಾಮಾಣಿಕತೆ ಪ್ರಶ್ನಿಸುತ್ತಿದ್ದಾರೆ: ನಲಪಾಡ್‌ಗೆ ರಮ್ಯಾ ತಿರುಗೇಟು

  • ರಾಜ್ಯದಲ್ಲಿ ಮುಂದಿನ ಐದು ದಿನ ಮಳೆ

    ರಾಜ್ಯದಲ್ಲಿ ಮುಂದಿನ ಐದು ದಿನ ಮಳೆ

    ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನ ಹಗುರದಿಂದ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಮೋಡ ಕವಿದ ವಾತಾವರಣ ಇದ್ದು, ತುಂತುರು ಮಳೆ ಆಗಲಿದೆ. ಉತ್ತರ ಅಂಡಮಾನ್ ಸಮುದ್ರದಲ್ಲಿ ವಾಯಯಭಾರ ಕುಸಿತ ಕಾಣಿಸಿಕೊಳ್ಳಲಿದೆ. ಅಕ್ಟೋಬರ್ 10 ರಂದು ಉತ್ತರ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತ ಕಾಣಿಸಿಕೊಳ್ಳಲಿದೆ. ಹೀಗಾಗಿ ಮುಂದಿನ ಐದು ದಿನ ಮಳೆ ಆಗಲಿದೆ. ಇದನ್ನೂ ಓದಿ: ದೇವೆಗೌಡ್ರು ಹುಟ್ಟುವ ಮೊದಲೇ RSS ಅಸ್ತಿತ್ವದಲ್ಲಿತ್ತು: ಕೆ.ಎಸ್ ಈಶ್ವರಪ್ಪ


    ಆಂಧ್ರಪ್ರದೇಶದ ಕರಾವಳಿ ಭಾಗದಿಂದ ಮೇಲ್ಮೈ ಸುಳಿಗಾಳಿ ಆರಂಭ ಆಗಿ ರಾಜ್ಯದ ಹಲವೆಡೆ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ನಾಡು ಜಿಲ್ಲೆಗಳಲ್ಲಿ ಜಾಸ್ತಿ ಆಗಬಹುದು ಎಂದು ನೈಸರ್ಗಿಕ ಮತ್ತು ಪ್ರಾಕೃತಿಕ ವಿಕೋಪ ಇಲಾಖೆ ಹವಾಮಾನ ತಙ್ಞ ಸದಾನಂದ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಾನು ಎಲ್ಲರಿಗಿಂತ ಸೀನಿಯರ್, ಅರ್ಧ ಬೆಂಗಳೂರು ಉಸ್ತುವಾರಿ ಕೊಡಲಿ: ಸೋಮಣ್ಣ

    ಅಕ್ಟೋಬರ್ 13 ರವರೆಗೂ ಬೆಂಗಳೂರಲ್ಲಿ ಮಳೆಯಾಗಲಿದೆ. ಬೆಳಗ್ಗೆಯಿಂದ ಬೆಂಗಳೂರಿನಲ್ಲಿ 8.4 ಮಿ.ಮಿ ಮಳೆ ದಾಖಲಾಗಿದೆ. ನಾಳೆ ಹಾಗೂ ನಾಡಿದ್ದು ಬೆಂಗಳೂರು ಗ್ರಾಮಾಂತರ ಭಾಗಗಳಲ್ಲಿ ಹೆಚ್ಚಿನ ಮಳೆ ಸಾಧ್ಯತೆ ಇದೆ. ಬೆಂಗಳೂರು ನಗರ ಭಾಗದಲ್ಲಿ ನಾಳೆ ನಾಡಿದ್ದು, ಇದೇ ವಾತಾವರಣ ಮುಂದಿವರೆಯಲಿದೆ. 12 ಹಾಗೂ 13 ರಂದು ಹೆಚ್ಚಿನ ಮಳೆಯಾಗಲಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರಕ್ಕೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ತಜ್ಞರಾದ ಸದಾನಂದ ಅಡಿಗ ಹೇಳಿದ್ದಾರೆ.

  • ಗುಲಾಬ್ ಚಂಡಮಾರುತ ಎಫೆಕ್ಟ್ – ಬೀದರ್‌ನಲ್ಲಿ ಧಾರಾಕಾರ ಮಳೆ

    ಗುಲಾಬ್ ಚಂಡಮಾರುತ ಎಫೆಕ್ಟ್ – ಬೀದರ್‌ನಲ್ಲಿ ಧಾರಾಕಾರ ಮಳೆ

    ಬೀದರ್: ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾದ ಹಿನ್ನೆಲೆ ಗಡಿ ಜಿಲ್ಲೆ ಬೀದರ್‌ಗೆ ಗುಲಾಬ್ ಚಂಡಮಾರುತದ ಎಫೆಕ್ಟ್ ತಟ್ಟಿದ ಪರಿಣಾಮ ಸತತ ಎರಡು ಗಂಟೆಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಇದನ್ನೂ ಓದಿ: ಪ್ರಧಾನಮಂತ್ರಿಗಳ ಅವಾಸ್ ಯೋಜನೆ, ಸೂರು ಕಲ್ಪಿಸುವಲ್ಲಿ ಬೆಂಗಳೂರು ಮೊದಲು: ಸೋಮಣ್ಣ

    rain

    ಈ ಧಾರಾಕಾರ ಮಳೆಗೆ ಜಿಲ್ಲೆಯ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದ್ದು, ದಟ್ಟವಾದ ಮೋಡಗಳ ಮಧ್ಯೆ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲಿಯೂ ಗುಲಾಬ್ ಚಂಡಮಾರುತ ಒಡಿಶಾ ಹಾಗೂ ತೆಲಂಗಾಣ ರಾಜ್ಯದ ಮೇಲೆ ಭಾರೀ ಪ್ರಭಾವ ಬೀರಲಿದೆ. ಇದನ್ನೂ ಓದಿ: ಹಿಂದೂತ್ವ, ಅಭಿವೃದ್ಧಿ ಎರಡು ಅಜೆಂಡಾ ಇಟ್ಟುಕೊಂಡು ಕೆಲಸ ಮಾಡಿ: ಅಭಯ್ ಪಾಟೀಲ್

    ಹವಮಾನ ಇಲಾಖೆಯ ಪ್ರಕಾರ ಇನ್ನು ಎರಡರಿಂದ ಮೂರು ದಿನಗಳ ಕಾಲ ಗುಲಾಮ್ ಚಂಡಮಾರುತದ ಎಫೆಕ್ಟ್ ಜಿಲ್ಲೆಯಲ್ಲಿ ಇರಲಿದೆ ಎಂದು ಮಾಹಿತಿ ನೀಡಲಾಗಿದ್ದು, ಇದೇ ರೀತಿ ಸತತವಾಗಿ ಧಾರಾಕಾರ ಮಳೆ ಮುಂದುವರೆದರೆ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗುವುದು ಗ್ಯಾರಂಟಿಯಾಗಲಿದೆ. ಇದನ್ನೂ ಓದಿ: ಎರಡು ಮದುವೆ ನಂತರ, ಮೂರನೇ ವಿವಾಹಕ್ಕೆ ತಯಾರಿ- ಸುಳ್ಳು ಹೇಳಿ ಮದುವೆ ಆಗುವುದೇ ಇವನ ಖಯಾಲಿ

  • ಬೆಂಗಳೂರಿನಲ್ಲಿ ಮುಂದಿನ 2 ದಿನ ಮಳೆ ಸಾಧ್ಯತೆ

    ಬೆಂಗಳೂರಿನಲ್ಲಿ ಮುಂದಿನ 2 ದಿನ ಮಳೆ ಸಾಧ್ಯತೆ

    ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕರ್ನಾಟಕದ ಹಲವೆಡೆ ವರುಣನ ಆರ್ಭಟ ಮುಂದುವರಿದೆ. ಜೊತೆಗೆ ರಾಜಧಾನಿ ಬೆಂಗಳೂರಿನಲ್ಲಿಯೂ ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ನಿನ್ನೆ ಹಾಗೂ ಇಂದು ಉತ್ತಮ ಮಳೆಯಾಗಿದ್ದು, ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ 22 ಸೆಂ.ಮೀ. ಮಳೆಯಾಗಿದೆ. ಬೆಳಗಾವಿಯ ನಿಪ್ಪಾಣಿಯಲ್ಲಿ 14 ಸೆಂಟಿ ಮೀಟರ್ ಮಳೆಯಾಗಿದೆ. ಉತ್ತರ ಕನ್ನಡದ ಮಂಚಿಗೆರೆಯಲ್ಲಿ 11 ಸೆಂ.ಮೀ. ಮಳೆ, ಚಿಕ್ಕಮಗಳೂರಿನ ಶೃಂಗೇರಿಯಲ್ಲಿ 12 ಸೆಂ.ಮೀ. ಮಳೆಯಾಗಿದೆ. ಜೂನ್ 17ರಿಂದ 21ರವರೆಗೆ ವ್ಯಾಪಕ ಮಳೆ ಸಾಧ್ಯತೆಯಿದೆಯೆಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

    ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗಿದ್ದು, ಜೂನ್ 17, 18 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಹಾಗೂ ಜೂನ್ 19, 20ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಮಳೆ ಜೂನ್ 17ರಂದು ಆರೆಂಜ್ ಅಲರ್ಟ್ ಹಾಗೂ ಜೂನ್ 18ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿಯಲ್ಲಿ ಯೆಲ್ಲೋ ಅಲರ್ಟ್, 3 ಜಿಲ್ಲೆಗಳಲ್ಲಿ ಜೂನ್ 17, 18ರಂದು ಯೆಲ್ಲೋ ಅಲರ್ಟ್‍ನ್ನು ಹವಾಮಾನ ಇಲಾಖೆ ಘೋಷಣೆ ಮಾಡಿದೆ. ಜೊತೆಗೆ ಬೆಂಗಳೂರಲ್ಲಿಯೂ ಮುಂದಿನ ಎರಡು ದಿನ ಮಳೆಯಾಗುವ ನಿರೀಕ್ಷೆಯಿದೆಯೆಂದು ತಿಳಿಸಿದೆ. ಇದನ್ನೂ ಓದಿ: ಮಲೆನಾಡಲ್ಲಿ ಮುಂಗಾರು ಚುರುಕು- ಜೋಗಕ್ಕೆ ಜೀವದ ಕಳೆ

  • ಬೆಂಗ್ಳೂರಿನ ವಾತಾವರಣದಲ್ಲಿ ಭಾರೀ ಏರುಪೇರು – ಎಚ್ಚರ ವಹಿಸದಿದ್ರೆ ಜನರಿಗೆ ಅಪಾಯ ಕಟ್ಟಿಟ್ಟ ಬುತ್ತಿ

    ಬೆಂಗ್ಳೂರಿನ ವಾತಾವರಣದಲ್ಲಿ ಭಾರೀ ಏರುಪೇರು – ಎಚ್ಚರ ವಹಿಸದಿದ್ರೆ ಜನರಿಗೆ ಅಪಾಯ ಕಟ್ಟಿಟ್ಟ ಬುತ್ತಿ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮತ್ತೊಂದು ದೆಹಲಿ ಆಗುತ್ತಿದ್ಯಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ದೆಹಲಿ ವಾತಾವರಣದಂತೆ ಬೆಂಗಳೂರು ಕೂಡ ಬದಲಾಗುತ್ತಿದೆ. ಬೆಂಗಳೂರಿನ ವಾತಾವರಣದ ಜೊತೆಗೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಬಿಸಿಲಿನ ಏರುಪೇರು ಮತ್ತು ವಾತಾವರಣದ ಬದಲಾವಣೆಯಿಂದ ಅಸ್ತಮ ಕಾಯಿಲೆ ಜನರನ್ನು ಕಾಡುತ್ತಿದೆ.

    ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಬೆಳಗ್ಗೆ ಚಳಿ, ಮಧ್ಯಾಹ್ನ ಬಿಸಿಲು ಮತ್ತು ರಾತ್ರಿ ಚಳಿ ಜಾಸ್ತಿಯಾಗುತ್ತಿದೆ. ಇತ್ತೀಚೆಗೆ ಬಿಸಿಲಿನ ತಾಪ ಹೆಚ್ಚಾಗಿದ್ದು, ವಾತಾವರಣದ ವಾಯು ಮಾಲಿನ್ಯದಿಂದಾಗಿ ಸಾಂಕ್ರಾಮಿಕ ರೋಗಗಳು ಹೆಚ್ಚಾಗ್ತಿವೆ. ಆಸ್ಪತ್ರೆಗಳ ಮುಂದೆ ರೋಗಿಗಳ ಕ್ಯೂ ಹೆಚ್ಚಾಗ್ತಿದೆ. ವಾಯು ಮಾಲಿನ್ಯದಿಂದ ಅಸ್ತಮಾ ಕಾಯಿಲೆ ಜಾಸ್ತಿ ಆಗ್ತಿದ್ದು, ಬೆಂಗಳೂರಿನ ವಾಯುಮಾಲಿನ್ಯ ದೆಹಲಿ ರೀತಿ ಆಗದಂತೆ ಎಚ್ಚರ ವಹಿಸಬೇಕು ಎಂದು ವೈದ್ಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

    ಬೆಂಗಳೂರಿನ ವಾಯು ಮಾಲಿನ್ಯಕ್ಕೆ ಕಾರಣ ಟ್ರಾಫಿಕ್ ಸಮಸ್ಯೆ, ವಾಹನಗಳ ಸಂಖ್ಯೆ ಹೆಚ್ಚಳ, ಮರಗಳ ನಾಶ ಮತ್ತು ಫ್ಯಾಕ್ಟರಿಗಳಿಂದ ಬರುವ ವಿಷಾನಿಲ ಎನ್ನಲಾಗುತ್ತಿದೆ. ಪ್ರತಿ ತಿಂಗಳಿಗೆ ಅಸ್ತಮಾ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸಾಂಕ್ರಾಮಿಕ ರೋಗಗಳಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಜನರ ಕ್ಯೂ ಜಾಸ್ತಿಯಾಗಿದೆ.

    ವಾತಾವರಣ ಏರುಪೇರಿಂದ ಸಾಂಕ್ರಾಮಿಕ ರೋಗಕ್ಕೆ ತುತ್ತಾದವರ ಸಂಖ್ಯೆ ನೋಡೋದಾದ್ರೆ;
    1. ಡಿಸೆಂಬರಿನಲ್ಲಿ ಅಸ್ತಮಾ ರೋಗಿಗಳ ಸಂಖ್ಯೆ 300
    2. ಜನವರಿಯಲ್ಲಿ ಅಸ್ತಮಾ ರೋಗಿಗಳ ಸಂಖ್ಯೆ 350
    3. ಫೆಬ್ರವರಿಯಲ್ಲಿ ಇದರ ಸಂಖ್ಯೆ 550ಕ್ಕೆ ಹೆಚ್ಚಳ

    ವಾತಾವರಣದಲ್ಲಿ ಬದಲಾವಣೆ ಮತ್ತು ಬಿಸಿಲು ಹೆಚ್ಚಾದಂತೆ ಈ ಕಾಯಿಲೆಗಳು ಹೆಚ್ಚಾಗ್ತಿವೆ. ಇದರಿಂದ ಪಾರಾಗಲು ವಾಹನಗಳ ಸಂಖ್ಯೆ ಕಡಿಮೆ ಮಾಡಬೇಕು, ಮರ ಗಿಡಗಳನ್ನು ಬೆಳೆಸಬೇಕು, ಜೊತೆಗೆ ಮಾಲಿನ್ಯದ ಬಗ್ಗೆ ಜಾಗೃತಿ ಮೂಡಿಸಬೇಕು ಇಲ್ಲವೆಂದರೆ ದೆಹಲಿ ರೀತಿ ಆಗುವುದು ಬೇಡಾ ಎಂದು ವೈದ್ಯರು ಹೇಳುತ್ತಾರೆ.

    ರಾಜ್ಯದಲ್ಲಿ ಜನವರಿಯಲ್ಲಿ ಆದ ರಥ ಸಪ್ತಮಿ ಬಳಿಕ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಸೂರ್ಯ ಉತ್ತರಾಯಣದ ಕಡೆ ಪಯಣ ಮಾಡುತ್ತಿರುವ ಹಿನ್ನೆಲೆ ಬಿಸಿಲಿನ ತಾಪ ಜಾಸ್ತಿ ಇರಲಿದೆಯಂತೆ. ಮಾರ್ಚ್ ಅಷ್ಟೋತ್ತಿಗೆ ಸೂರ್ಯ ಸಮಭಾಜಕ ವೃತ್ತದ ಬಳಿಗೆ ಬರಲಿದ್ದು ಬಿಸಿಲು ಜಾಸ್ತಿ ಆಗುವುದರಿಂದ ಸಾಂಕ್ರಾಮಿಕ ರೋಗಗಳು ಜಾಸ್ತಿ ಆಗಲಿದೆ ಎಂದು ಭೂ ಗರ್ಭ ಶಾಸ್ತ್ರಜ್ಞರು ತಿಳಿಸಿದರು.

    ರಥಸಪ್ತಮಿ ಬಳಿಕ ಬಿಸಿಲಿನ ತಾಪದಲ್ಲಿ ಆದ ಬದಲಾವಣೆಯನ್ನು ನೋಡೋದಾದರೆ;
    1. ಡಿಸೆಂಬರಿನಲ್ಲಿ ಬಿಸಿಲಿನ ತಾಪಮಾನ 25 ಡಿಗ್ರಿ ಸೆಲ್ಸಿಯಸ್
    2. ಜನವರಿ ಬಿಸಿಲಿನ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಆಗಿದೆ
    3. ಫೆಬ್ರವರಿಯಲ್ಲಿ ಇದರ ಪ್ರಮಾಣ 36ಕ್ಕೆ ಏರಿಕೆ
    4. ಮಾರ್ಚ್‍ನಲ್ಲಿ ಇನ್ನೂ ಜಾಸ್ತಿಯಾಗುವ ಸಾಧ್ಯತೆ ಇದೆ

  • ಪ್ರವಾಹ ಪೀಡಿತ ಪ್ರದೇಶದಿಂದ ನಾಲ್ಕು ತಾಲೂಕುಗಳಿಗೆ ಸರ್ಕಾರದಿಂದ ಕೊಕ್

    ಪ್ರವಾಹ ಪೀಡಿತ ಪ್ರದೇಶದಿಂದ ನಾಲ್ಕು ತಾಲೂಕುಗಳಿಗೆ ಸರ್ಕಾರದಿಂದ ಕೊಕ್

    ಬೆಳಗಾವಿ: ಕಳೆದ ಐದು ತಿಂಗಳಿನ ಹಿಂದೆ ಅಪ್ಪಳಿಸಿದ ಭೀಕರ ಪ್ರವಾಹಕ್ಕೆ ಸಾವಿರಾರು ಕೋಟಿ ರೂ. ಹಾನಿ ಅನುಭವಿಸಿರುವ ಬೆಳಗಾವಿ ಜಿಲ್ಲೆಯಲ್ಲಿನ ಕೆಲ ತಾಲೂಕುಗಳನ್ನು ಕೈ ಬಿಟ್ಟಿರುವುದರಿಂದ ಸಂತ್ರಸ್ತರಿಗೆ ಜಿಲ್ಲಾಡಳಿತ ಪರಿಹಾರ ವಿತರಣೆ ಮಾಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ.

    ಆಗಸ್ಟ್ ನಲ್ಲಿ ಸುರಿದ ಕುಂಭದ್ರೋಣ ಮಳೆಯಿಂದ ಸೃಷ್ಟಿಯಾದ ಪ್ರವಾಹದಿಂದ ಭಾಗಶಃ ಮುಕ್ಕಾಲು ರಾಜ್ಯದಲ್ಲಿ ಬಾಧಿಸಿತ್ತು. ಆಗಸ್ಟ್ ನಲ್ಲಿ ಆದ ಪ್ರವಾಹದ ನಷ್ಟ ಆಧರಿಸಿ ರಾಜ್ಯದ 22 ಜಿಲ್ಲೆಗಳ ಸುಮಾರು 103 ತಾಲೂಕುಗಳನ್ನು ರಾಜ್ಯ ಸರ್ಕಾರ ಪ್ರವಾಹ ಪೀಡಿತ ತಾಲೂಕು ಎಂದು ಘೋಷಣೆ ಮಾಡಿತ್ತು. ಬಳಿಕ ಅಕ್ಟೋಬರ್ ನಲ್ಲಿ ಅತಿವೃಷ್ಟಿಯಿಂದ ಬೆಳಗಾವಿ ಜಿಲ್ಲೆಯ ಸೇರಿದಂತೆ ರಾಜ್ಯದ 15 ಜಿಲ್ಲೆಯ 55 ತಾಲೂಕುಗಳನ್ನು ನೆರೆ ಪೀಡಿತ ಪ್ರದೇಶ ಎಂದು ಎರಡು ತಿಂಗಳ ಹಿಂದೆ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು.

    ಇದರಲ್ಲಿ ನೆರೆಯಿಂದ ಅತಿ ಹೆಚ್ಚು ಹಾನಿ ಅನುಭವಿಸಿರುವ ಬೆಳಗಾವಿ ಜಿಲ್ಲೆಯಲ್ಲಿ ಆಗಸ್ಟ್ ನಲ್ಲಿ ಎರಡು ಬಾರಿ ಪ್ರವಾಹ ಎದುರಾಗಿತ್ತು. ಗಡಿ ಭಾಗದಲ್ಲಿದ್ದ ಸಪ್ತ ನದಿಗಳು ಉಕ್ಕಿ ಹರಿದು ಮನೆ, ಬೆಳೆ, ಆಸ್ತಿ-ಪಾಸ್ತಿ ಸೇರಿದಂತೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದವು. ಅಕ್ಟೋಬರ್ ನಲ್ಲಿ ಮತ್ತೆ ಮಳೆ ಜೋರಾಗಿ ಅಬ್ಬರಿಸಿ ಅನೇಕ ಮನೆ, ಮಳೆಗೆ ನೆಲ ಕಚ್ಚಿವೆ. ಆದರೆ ನಾಲ್ಕು ತಾಲೂಕುಗಳು ಮಾತ್ರ ಆಗಸ್ಟ್ ನಂತರದ ಅತಿವೃಷ್ಟಿ ಪಟ್ಟಿಯಲ್ಲಿ ಸೇರಿಸಿದ್ದು ಜಿಲ್ಲಾಡಳಿತವೇ ಅಚ್ಚರಿಗೆ ಒಳಗಾಗಿದೆ.

    ಹವಾಮಾನ ಇಲಾಖೆಯ ವರದಿಯ ಪ್ರಕಾರ ಬೆಳಗಾವಿ, ಖಾನಾಪುರ ತಾಲೂಕಿನಲ್ಲಿ ಅಕ್ಟೋಬರ್ ನಲ್ಲಿ ತಲಾ ಒಂದು ಸಾವಿರ ಸೆ.ಮೀ ಮಳೆಯಾಗಿದೆ. ಹುಕ್ಕೇರಿ ಹೊರತು ಪಡಿಸಿ ಉಳಿದ ಎಲ್ಲ ತಾಲೂಕುಗಳಲ್ಲಿ ಅಗಸ್ಟ್ ತಿಂಗಳಿನಲ್ಲಿ ಭಾರೀ ಮಳೆಯಾಗಿದೆ. ಆದರೆ ರಾಜ್ಯ ಸರಕಾರ ಬೆಳಗಾವಿ ಜಿಲ್ಲೆಯ ಖಾನಾಪುರ, ಗೋಕಾಕ್, ಬೈಲಹೊಂಗಲ ತಾಲೂಕುಗಳನ್ನು ಆಗಸ್ಟ್ ನಂತರದ ಅತಿವೃಷ್ಟಿ ಪೀಡಿತ ಎಂದು ಘೋಷಣೆ ಮಾಡಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎಸ್.ಬಿ ಬೊಮ್ಮನಹಳ್ಳಿ ಅವರು, ಆಗಸ್ಟ್ ನಲ್ಲಿ ಬೆಳಗಾವಿ ಜಿಲ್ಲೆ ಪ್ರವಾಹ ಪೀಡಿತ ಎಂದು ಘೋಷಣೆ ಘೋಷಣೆಯಾಗಿತ್ತು. ಬಳಿಕ ನಾಲ್ಕು ತಾಲೂಕು ಮಾತ್ರ ಪ್ರವಾಹ ಪೀಡಿತ ತಾಲೂಕು ಎಂದು ಘೋಷಣೆಯಾಗಿದೆ. ಉಳಿದ ತಾಲೂಕು ಆಗಸ್ಟ್ ಬಳಿಕದ ನೆರೆ ಹಾನಿಗೆ ಪರಿಹಾರ ನೀಡಬೇಕಾದರೆ ಸರ್ಕಾರ ಒಪ್ಪಿಗೆ ಬೇಕು ಎಂದು ತಿಳಿಸಿದ್ದಾರೆ.

  • ದೆಹಲಿಯಲ್ಲಿ ದಟ್ಟ ಮಂಜು – ಹೆದ್ದಾರಿ ಕಾಣದೆ ಕಾಲುವೆಗೆ ಬಿತ್ತು ಕಾರು

    ದೆಹಲಿಯಲ್ಲಿ ದಟ್ಟ ಮಂಜು – ಹೆದ್ದಾರಿ ಕಾಣದೆ ಕಾಲುವೆಗೆ ಬಿತ್ತು ಕಾರು

    – ಆರು ಸಾವು, ವಿಮಾನಗಳ ಹಾರಾಟ ರದ್ದು
    – ಹವಮಾನ ಇಲಾಖೆಯಿಂದ ರೆಡ್ ಅಲರ್ಟ್ ಎಚ್ಚರಿಕೆ

    ನವದೆಹಲಿ: ಉತ್ತರ ಭಾರತದಲ್ಲಿ ಕನಿಷ್ಠ ತಾಪಮಾನ ಪರಿಸ್ಥಿತಿ ಮುಂದುವರಿದಿದೆ. ದೆಹಲಿಯಲ್ಲಿ ಇಂದು ದಟ್ಟ ಮಂಜು ಆವರಿಸಿದ್ದು 30ಕ್ಕೂ ಹೆಚ್ಚು ರೈಲು ಸಂಚಾರ, 50 ಅಧಿಕ ವಿಮಾನಗಳ ಹಾರಾಟ ವಿಳಂಬವಾಗಿದೆ. ಅಲ್ಲದೇ ನಾಲ್ಕು ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ. ಸಂಚಾರ ವ್ಯತ್ಯಯವಾಗಿರುವುದರಿಂದ ಪ್ರಯಾಣಿಕರು ತಮ್ಮ ಏರ್‌ಲೈನ್ಸ್‌ ಸಿಬ್ಬಂದಿಯನ್ನು ನಿರಂತರವಾಗಿ ಸಂಪರ್ಕಿಸಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇಂದು ಬೆಳಗ್ಗೆಯಿಂದಲೇ ಗಾಳಿಯ ಗುಣಮಟ್ಟ ತೀರಾ ಕೆಟ್ಟ ಮಟ್ಟಕ್ಕೆ ಕುಸಿದಿತ್ತು. ಮಾಲಿನ್ಯದ ಜೊತೆಗೆ ದಟ್ಟಮಂಜು ಕವಿದ ಹಿನ್ನೆಲೆಯಲ್ಲಿ ರಸ್ತೆಗಳು ಕಾಣದಂತಹ ವಾತಾವರಣ ಸೃಷ್ಟಿಯಾಗಿತ್ತು. ಮಧ್ಯಾಹ್ನ ಒಂದು ಗಂಟೆಯಾದರೂ ವಾತಾವರಣ ಸಹಜ ಪರಿಸ್ಥಿತಿಗೆ ಬಂದಿರಲಿಲ್ಲ. ವಾಹನ ಸವಾರರು ಸಾಕಷ್ಟು ಪರದಾಡುತ್ತಿದ್ದು ಫಾಗ್ ಲೈಟ್ ಸಹಾಯದಿಂದ ನಿಧಾನವಾಗಿ ವಾಹನ ಚಲಾಯಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

    ನೊಯ್ಡಾ, ದೆಹಲಿ ಸಂಪರ್ಕಿಸುವ ಹೆದ್ದಾರಿಯಲ್ಲಿ ಅತಿಯಾದ ಮಂಜು ಆವರಿಸಿತ್ತು. ಚಲಿಸುತ್ತಿದ್ದ ಕಾರು ಮುಂದೆ ರಸ್ತೆ ಕಾಣದೆ ಕಾಲುವೆಯೊಂದಕ್ಕೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸತ್ತವರಲ್ಲಿ ಇಬ್ಬರು ಮಕ್ಕಳು ಇದ್ದರೆಂದು ತಿಳಿದು ಬಂದಿದ್ದು, ಘಟನೆಯಲ್ಲಿ ಇನ್ನು 5 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯಿಂದ ಮಾರುತಿ ಎರ್ಟಿಗಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

    ಒಟ್ಟು ಕಾರಿನಲ್ಲಿ 11 ಮಂದಿ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದವರೆಲ್ಲರೂ ಸಂಭಾಲ್ ಜಿಲ್ಲೆಯವರಾಗಿದ್ದು, ದೆಹಲಿಗೆ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಮೃತಪಟ್ಟವರನ್ನು ಮಹೇಶ್ (35), ಕಿಶನ್ ಲಾಲ್ (50), ನೀರೇಶ್ (17), ರಾಮ್ ಖಿಲಾದಿ (75), ಮಲ್ಲು(12), ನೇತ್ರಪಾಲ್ (40) ಎಂದು ಗುರುತಿಸಲಾಗಿದೆ.

    ಹವಾಮಾನ ಇಲಾಖೆ ಪಂಜಾಬ್, ಹರಿಯಾಣ, ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಭಾನುವಾರ ರೆಡ್ ಅಲರ್ಟ್ ವಾರ್ನಿಂಗ್ ಎಚ್ಚರಿಕೆ ನೀಡಿತ್ತು. ಮಧ್ಯಪ್ರದೇಶದಲ್ಲಿ ಬ್ಲೂ ಅಲರ್ಟ್ ಘೋಷಣೆ ಮಾಡಲಾಗಿತ್ತು. ಇನ್ನೇರಡು ದಿನಗಳ ಕಾಲ ಉತ್ತರ ಭಾರತ ಪ್ರದೇಶದಲ್ಲಿ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ.

  • ರಾಜ್ಯದಲ್ಲಿ 5 ದಿನ ಮುಂದುವರಿಯಲಿದೆ ಮಳೆ

    ರಾಜ್ಯದಲ್ಲಿ 5 ದಿನ ಮುಂದುವರಿಯಲಿದೆ ಮಳೆ

    ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 5 ದಿನವೂ ವರುಣನ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

    ಅರಬ್ಬೀ ಸಮುದ್ರದ ಪೂರ್ವ ಕೇಂದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಹೀಗಾಗಿ ಮುಂದಿನ 5 ದಿನ ಮಳೆಯಾಗಲಿದೆ. 24 ಗಂಟೆಯಲ್ಲಿ ಮತ್ತಷ್ಟು ವಾಯುಭಾರ ಕುಸಿತ ಆಗುವ ಸಾಧ್ಯತೆ ಇದೆ. ಮತ್ತೆ 12 ಗಂಟೆ ಕಳೆದ ಮೇಲೆ ವಾಯುಭಾರ ಕುಸಿತದ ತೀವ್ರತೆ ಸಹ ಹೆಚ್ಚಾಗಲಿದೆ.

    ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಭಾಗದಲ್ಲಿ ಹೆಚ್ಚು ಮಳೆಯಾಗಲಿದ್ದು, ಮಧ್ಯಾಹ್ನ, ರಾತ್ರಿ ವೇಳೆ ವರುಣನ ಅಬ್ಬರ ಹೆಚ್ಚಾಗಲಿದೆ. ತೀವ್ರವಾದ ವಾಯುಭಾರ ಕುಸಿತಕ್ಕೆ ಕಾರಣವಾಗಲಿದೆ. ಅಲ್ಲದೆ ಹುಬ್ಬಳಿ, ಧಾರವಾಡ, ಬೆಳಗಾವಿಯಲ್ಲೂ ಮಳೆ ದಾಖಲೆ ಮಾಡಿದೆ.

    ಮತ್ತೆ ಬಂಗಾಳಕೊಲ್ಲಿಯಲ್ಲೂ ವಾಯುಭಾರ ಕುಸಿತ ಸಾಧ್ಯತೆ ಇದೆ. ಹೀಗಾಗಿ ಇದೇ ತಿಂಗಳ 23ರೊಳಗೆ ತಮಿಳುನಾಡು ಗಡಿಭಾಗ, ಆಂಧ್ರ ಭಾಗದಲ್ಲೂ ಮಳೆ ಹೆಚ್ಚಾಗಲಿದೆ. ಇತ್ತ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ದಕ್ಷಿಣ ಒಳನಾಡು ಪ್ರದೇಶದಲ್ಲೂ ಮಳೆಯಾಗಲಿದೆ. ಸುಮಾರು 5 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

    ಉತ್ತರ ಕನ್ನಡದಲ್ಲಿ 85 ಮಿ.ಮೀ, ಉಡುಪಿಯ ಕಾರ್ಕಾಳದಲ್ಲಿ 75 ಮಿ.ಮೀ, ಬಾಗಲಕೋಟೆಯಲ್ಲಿ 135 ಮಿ.ಮೀ, ಬೆಳಗಾವಿಯಲ್ಲಿ 92 ಮಿ.ಮೀ, ಧಾರವಾಡದಲ್ಲಿ 87 ಮಿ.ಮೀ, ಚಿಕ್ಕಮಗಳೂರಿನಲ್ಲಿ 165 ಮಿ.ಮೀ, ಮೈಸೂರಿನಲ್ಲಿ 89 ಮಿ.ಮೀ, ಚಿತ್ರದುರ್ಗ 82 ಮಿ.ಮೀ ಮಳೆ, ದಾವಣಗೆರೆ 78 ಮಿ.ಮೀ, ಶಿವಮೊಗ್ಗದಲ್ಲಿ 75 ಮಿ.ಮೀ ಮಳೆ ಆಗಿದೆ.