Tag: ಹವಾಮಾನ ಇಲಾಖೆ

  • ಮೊಂಥಾ ಚಂಡಮಾರುತ ಎಫೆಕ್ಟ್: ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿಜಿಲ್ಲೆಗಳಲ್ಲಿ ವರುರ್ಣಾಭಟ

    ಮೊಂಥಾ ಚಂಡಮಾರುತ ಎಫೆಕ್ಟ್: ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿಜಿಲ್ಲೆಗಳಲ್ಲಿ ವರುರ್ಣಾಭಟ

    – ದೇಶದ ವಿವಿಧೆಡೆ ಅ.28, 29ರಂದು ಭಾರೀ ಮಳೆ
    – ಆಂಧ್ರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಮೊಂಥಾ ಚಂಡಮಾರುತದ (Montha Cyclone) ಪರಿಣಾಮ ಕರ್ನಾಟಕ, ಆಂಧ್ರ, ತೆಲಂಗಾಣದ ಗಡಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

    ಆಂಧ್ರಪ್ರದೇಶ ಹಾಗೂ ಒಡಿಶಾದ ಕರಾವಳಿಯತ್ತ ಚಂಡಮಾರುತ ಮುನ್ನುಗ್ಗುತ್ತಿರುವ ಹಿನ್ನೆಲೆ ದೇಶದ ವಿವಿಧೆಡೆ ಅ.28 ಹಾಗೂ ಅ.29ರಂದು ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇನ್ನೂ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಂಡಮಾರುತದಿಂದಾಗಿ ಈಗಾಗಲೇ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರ (ಅ.28) ಬೆಂಗಳೂರಿನಿಂದ ಹೊರಡಲಿರುವ ಕೆಲವು ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಇದನ್ನೂ ಓದಿ: ಆಂಧ್ರ, ಒಡಿಶಾಕ್ಕೆ ಅಪ್ಪಳಿಸಲಿದೆ `ಮೊಂಥಾ’ ಸೈಕ್ಲೋನ್ – ಕರ್ನಾಟಕ ಸೇರಿ ತಮಿಳುನಾಡಿಗೆ ಮಳೆಯಾರ್ಭಟ

    ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ (Bengaluru) ವಾತಾವರಣ ತಂಪಾಗಿದ್ದು, ಅಲ್ಲಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ನಗರದ SMVTಯಿಂದ ಹೊರಡುವ ಏಳು ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದ್ದು, ಹೊರಡುವ ಸಮಯಕ್ಕಿಂತ 12 ಗಂಟೆ ತಡವಾಗಿ ಹೊರಡಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

    ಆಂಧ್ರ ಕರಾವಳಿ ತೀರ ಪ್ರದೇಶಕ್ಕೆ ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಾ ಇಂದು ಸಂಜೆ ಅಥವಾ ರಾತ್ರಿಯ ವೇಳೆಗೆ ಆಂಧ್ರಪ್ರದೇಶದ ಮಚಲಿಪಟ್ಟಣ ಮತ್ತು ಕಳಿಂಗಪಟ್ಟಣ ನಡುವೆ, ಕಾಕಿನಾಡದ ಸುತ್ತಮುತ್ತಲಿನ ಕರಾವಳಿಯನ್ನು ದಾಟಲಿದೆ. ಈ ಚಂಡಮಾರುತವು ಗಂಟೆಗೆ 90 ರಿಂದ 100 ಕಿ.ಮೀ ವೇಗದಲ್ಲಿ ಚಲಿಸುವ ಸಾಧ್ಯತೆಯಿದೆ. ಅಲ್ಲದೇ ಚಂಡಮಾರುತವು 2-4.6 ಮೀಟರ್ ಎತ್ತರದ ಅಲೆಗಳೊಂದಿಗೆ ಬಂದು ಅಪ್ಪಳಿಸಿದ್ದು, ಆಂಧ್ರದ 1,419 ಹಳ್ಳಿಗಳು ಮತ್ತು 44 ಪಟ್ಟಣಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ಜೊತೆಗೆ ಆಂಧ್ರಪ್ರದೇಶ, ಒಡಿಶಾ, ಪುದುಚೇರಿ, ತಮಿಳುನಾಡು ಮತ್ತು ಛತ್ತೀಸ್‌ಗಢಗಳಲ್ಲಿ ರಾಷ್ಟ್ರೀಯ ವಿಪತ್ತು ಪಡೆಯ 22 ತಂಡಗಳನ್ನು ಸರ್ಕಾರ ನಿಯೋಜಿಸಿದೆ.

    ಈಗಾಗಲೇ ಆಂಧ್ರದ ಹಲವು ನಗರಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪರಿಸ್ಥಿತಿ ಅಸ್ತವ್ಯಸ್ಥವಾಗಿದೆ. ಆಂಧ್ರಪ್ರದೇಶದ ಅನಕಾಪಲ್ಲಿ, ಕಾಕಿನಾಡ, ಕೋನಾಸೀಮಾ, ಶ್ರೀಕಾಕುಳಂ, ನೆಲ್ಲೂರು, ವಿಶಾಖಪಟ್ಟಣಂ, ತಿರುಪತಿ, ಪಶ್ಚಿಮ ಗೋದಾವರಿಯಲ್ಲಿ ಮುಂದಿನ 10 ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಆಂಧ್ರಪ್ರದೇಶದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿದ್ದು, ಜನರನ್ನು ನಿರಾಶ್ರಿತ ಕೇಂದ್ರಗಳಿಗೆ ಶಿಫ್ಟ್ ಮಾಡಲಾಗಿದೆ. ಇನ್ನೂ ಆಂಧ್ರಪ್ರದೇಶದ ಪೂರ್ವ ಕರಾವಳಿಯಲ್ಲಿ ಸಂಚರಿಸುವ 65 ರೈಲುಗಳ ಓಡಾಟ ಸ್ಥಗಿತಗೊಂಡಿದೆ.

    ಮೊಂಥಾ ಚಂಡಮಾರುತದ ಹಿನ್ನೆಲೆ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರು ತಡರಾತ್ರಿ ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಲು ವೀಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನಾ ಸಭೆ ನಡೆಸಿದ್ದು, ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜನರಿಗೆ ಸ್ಪಂದಿಸಲು ಜಿಲ್ಲೆಗೊಬ್ಬರು ಅಧಿಕಾರಿಯನ್ನು ನೇಮಕ ಮಾಡಿ ಎಂದು ಸೂಚನೆ ನೀಡಿದ್ದಾರೆ.ಇದನ್ನೂ ಓದಿ: Cyclone Montha| ಎರಡು ದಿನ ಬೆಂಗಳೂರು ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

     

  • ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮಳೆ – ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮಳೆ – ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    – ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ನಿರೀಕ್ಷೆ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಇಂದು ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ (Rain) ಆರಂಭವಾಗಿದೆ. ನಗರದ ಹಲವೆಡೆ ಶೀತ ಗಾಳಿ ಜೊತೆ ಮಳೆ ಆರಂಭವಾಗಿದ್ದು, ನಗರಾದ್ಯಂತ ಮೋಡ ಕವಿದ ವಾತಾವರಣವಿದೆ.

    ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವವರಿಗೆ ಮಳೆ ಸಾಥ್ ಕೊಟ್ಟಿದೆ. ಇಂದೂ ಸಹ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 13 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರೀ ಮಳೆ ಅಲರ್ಟ್ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇದನ್ನೂ ಓದಿ: ಇರಾನ್ ನಾಯಕನ ಪುತ್ರಿಯ ವಿವಾಹದಲ್ಲಿಲ್ಲ ಹಿಜಾಬ್ – ವೀಡಿಯೋ ವೈರಲ್, ನೆಟ್ಟಿಗರಿಂದ ಆಕ್ರೋಶ

    ಇನ್ನು ಜಿಟಿಜಿಟಿ ಮಳೆಗೆ ಬೆಂಗಳೂರು ಮಲೆನಾಡಿನಂತೆ ಆಗಿದೆ. ಬೆಳ್ಳಗೆಯಿಂದಲೂ ತುಂತುರು ಮಳೆ ಬಿಟ್ಟುಬಿಡದೇ ಸುರಿಯುತ್ತಿದೆ. ಚುಮುಚುಮು ಚಳಿ ಹಾಗೂ ಜಿಟಿಜಿಟಿ ಮಳೆಯೊಂದಿಗೆ ಊಟಿ ವಾತಾವರಣ ನಿರ್ಮಾಣವಾಗಿದೆ. ಇನ್ನೂ ಮುಂದಿನ ಮೂರು ದಿನಗಳವರೆಗೆ ಇದೇ ವಾತವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಚಿತ್ರದುರ್ಗ| ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಶಿಕ್ಷಕ ಜೈಲುಪಾಲು

  • ರಾಜ್ಯದಲ್ಲಿ ಇನ್ನೂ 4‌ ದಿನ ಭಾರೀ ಮಳೆ – ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ರಾಜ್ಯದಲ್ಲಿ ಇನ್ನೂ 4‌ ದಿನ ಭಾರೀ ಮಳೆ – ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಬೆಂಗಳೂರು: ರಾಜ್ಯದಲ್ಲಿ ಮಳೆ ಆರ್ಭಟ ಮತ್ತೆ ಮುಂದುವರಿದಿದೆ. ದೀಪಾವಳಿ ಸಂಭ್ರಮದಲ್ಲಿದ್ದ ಜನತೆಗೆ ಮಳೆರಾಯ ಕೊಂಚ ಬೇಸರ ತರಿಸಿದ್ದಾನೆ. ಈಗಾಗಲೇ ಹಾಸನ, ಚಿಕ್ಕಮಗಳೂರು, ಉಡುಪಿ ಸೇರಿ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಸಾಕಷ್ಟು ಅವಾಂತರ ಸೃಷ್ಟಿಸಿದೆ. ಅಲ್ಲದೇ ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಇಂದಿನಿಂದ ಅಂದ್ರೆ ಅಕ್ಟೋಬರ್‌ 21 ರಿಂದ ಅ.29ರ ವರೆಗೆ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಸಂಜೆ ನಂತರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

    ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕೆಲ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡು ಭಾಗದ ಕೆಲ ಜಿಲ್ಲೆಗಳು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಹಾಸನ, ಕೋಲಾರ, ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ.

  • ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ – ಇಂದು ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ – ಇಂದು ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಬೆಂಗಳೂರು: ಬಂಗಾಳ ಉಪಮಹಾಸಾಗರದಲ್ಲಿ (Bay of Bengal) ನೈರುತ್ಯ ಮಳೆಯ ಮಾರುತ ಚುರುಕು ಹಿನ್ನೆಲೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 18ರವರೆಗೆ ಭಾರೀ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.

    ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಎಲ್ಲಾ ಜಿಲ್ಲೆಗೂ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: 1 ರೂಪಾಯಿ ಬಡ್ಡಿಗೆ ಲೋನ್‌ ಕೊಡಿಸ್ತೀವಿ ಅಂತ ಬರ್ತಾರೆ ಹುಷಾರ್‌ – ಬೆಂಗಳೂರಲ್ಲೊಂದು ಖತರ್ನಾಕ್ ಲೇಡಿ ಗ್ಯಾಂಗ್

     

    ಸಂಜೆ ವೇಳೆಗೆ ಬೆಂಗಳೂರಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆ ಬೆಂಗಳೂರಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಇರಲಿದ್ದು, ಈ ಅವಧಿಯಲ್ಲಿ ಸಿಡಿಲು ಉಂಟಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇದನ್ನೂ ಓದಿ: ನೂರಾರು ಶವಗಳ ಹೂತಿಟ್ಟ ಕೇಸ್ – ಕೋರ್ಟ್‌ನಲ್ಲಿ ಹೊಸ ಕಥೆ ಬಿಚ್ಚಿಟ್ಟ `ಬುರುಡೆ’ ಚಿನ್ನಯ್ಯ

  • ಬೆಂಗಳೂರಲ್ಲಿ ಭಾರೀ ಮಳೆಗೆ ಹಲವೆಡೆ ಜಲಾವೃತ – ಗುಂಡಿಬಿದ್ದ ರಸ್ತೆಗಳಲ್ಲಿ ನಿಂತ ನೀರು, ಕೆಟ್ಟು ನಿಂತ ವಾಹನಗಳು

    ಬೆಂಗಳೂರಲ್ಲಿ ಭಾರೀ ಮಳೆಗೆ ಹಲವೆಡೆ ಜಲಾವೃತ – ಗುಂಡಿಬಿದ್ದ ರಸ್ತೆಗಳಲ್ಲಿ ನಿಂತ ನೀರು, ಕೆಟ್ಟು ನಿಂತ ವಾಹನಗಳು

    ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಮಳೆ ಬಂತು ಅಂದ್ರೆ ವಾಹನ ಸವಾರರು ಈಜುವ ಕಲೆ ಕಲಿಯುವ ಅನಿವಾರ್ಯತೆ ಎದುರಾಗಿದೆ. ಒಂದು ದಿನದ ಹಿಂದಷ್ಟೇ 30 ನಿಮಿಷ ಸುರಿದಿದ್ದ ಮಳೆಯಿಂದಾಗಿ ಹಲವು ರಸ್ತೆಗಳು ರಸ್ತೆಗಳು ಜಲಾವೃತಗೊಂಡಿದ್ದವು. ಇಂದು ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಬಳಿಕೆ ಹಲವು ರಸ್ತೆಗಳು ಜಲಾವೃತಗೊಂಡಿವೆ.

    ಗುಂಡಿ ಬಿದ್ದ ರಸ್ತೆಗಳಲ್ಲಿ ಭಾರೀ ಪ್ರಮಾಣದ ನೀರು ಕಟ್ಟಿಕೊಂಡಿದ್ದು, ಅಲ್ಲಲ್ಲಿ ವಾಹನಗಳು ಕೆಟ್ಟುನಿಲ್ಲುವಂತಾಗಿದೆ. ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಶಿವಾನಂದ ಸರ್ಕಲ್, ಮಲ್ಲೇಶ್ವರಂ, ಚಾಮರಾಜಪೇಟೆ, ಕಾರ್ಪರೇಶನ್, ಲಾಲ್‌ಬಾಗ್ ಸೇರಿದಂತೆ ಬೆಂಗಳೂರಿನ ಪ್ರಮುಖ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಇತ್ತ ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹೊರವಲಯಗಳಲ್ಲೂ ಮಳೆಯಾಗುತ್ತಿದೆ.

    ಗುಂಡಿಬಿದ್ದ ರಸ್ತೆಗಳಲ್ಲಿ ಕಟ್ಟಿಕೊಂಡ ನೀರು
    ಬೆಂಗಳೂರಿನ ಹೃದಯ ಭಾಗದಲ್ಲಿ ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ವಾಹನ ಸವಾರರು ಪರದಾಡುತ್ತಿದ್ದಾರೆ. ಗುಂಡಿ ಬಿದ್ದ ರಸ್ತೆಗಳಲ್ಲಿ ಯಾವುದು ಗುಂಡಿ, ಯಾವುದು ರಸ್ತೆ ಅನ್ನೋದೇ ತಿಳಿಯದಾಗಿದೆ. ಫುಟ್ಬಾತ್‌ಗಳ ಮೇಲೂ ನೀರು ತಂಬಿಕೊಂಡಿದೆ. ಹಲವೆಡೆ ಗುಡುಗು ಸಹಿ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

    ಬೆಂಗಳೂರಲ್ಲಿ ಎಲ್ಲೆಲ್ಲಿ ಮಳೆ?
    ನಗರದ ಎಲೆಕ್ಟ್ರಾನಿಕ್‌ ಸಿಟಿ, ಮಾನ್ಯತಾ ಟೆಕ್ ಪಾರ್ಕ್ ಸುತ್ತಮುತ್ತ, ಸರ್ಜಾಪುರ, ಮಹದೇವಪುರ, ಪೀಣ್ಯ, ದಾಸರಹಳ್ಳಿ, ಕೋರಮಂಗಲ, ಮಲ್ಲೇಶ್ವರ, ಮೆಜೆಸ್ಟಿಕ್, ಎಲೆಕ್ಟ್ರಾನಿಕ್ ಸಿಟಿ, ವಿಪ್ರೋ ಗೇಟ್, ಸರ್ಜಾಪುರ, ಯಶವಂತಪುರ, ಕಾರ್ಪೋರೇಷನ್, ಬಿಟಿಎಂ ಲೇಔಟ್, ವರ್ತೂರು ಬಳಗೆರೆ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ವಾಹನ ಸವಾರರು ಪರದಾಡಿದ್ದಾರೆ. ಸರ್ಜಾಪುರದಲ್ಲಿ ರಸ್ತೆಯಲ್ಲೇ ನೀರು ನಿಂತು ವಾಹನ ಸವಾರರು ಹಿಡೀ ಶಾಪ ಹಾಕಿದ್ದಾರೆ.

    ಬೆಂಗಳೂರಲ್ಲಿ ಮುಂದಿನ 3 ಗಂಟೆ ಆರೇಂಜ್ ಅಲರ್ಟ್
    ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಮುಂದಿನ 3 ಗಂಟೆ ಆರೇಂಜ್ ಅಲರ್ಟ್ ನೀಡಲಾಗಿದೆ. ರಾಜ್ಯ ಹವಾಮಾನ ಇಲಾಖೆಯಿಂದ ಮಳೆಯ‌ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದಿದೆ. ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

  • ಈ ಬಾರಿ ಸರಾಸರಿಗಿಂತ ಹೆಚ್ಚು ಹಿಂಗಾರು ಮಳೆ ಸಾಧ್ಯತೆ – ಡಿಸೆಂಬರ್‌ವರೆಗೂ ತಪ್ಪಿದ್ದಲ್ಲ ಮಳೆಕಾಟ

    ಈ ಬಾರಿ ಸರಾಸರಿಗಿಂತ ಹೆಚ್ಚು ಹಿಂಗಾರು ಮಳೆ ಸಾಧ್ಯತೆ – ಡಿಸೆಂಬರ್‌ವರೆಗೂ ತಪ್ಪಿದ್ದಲ್ಲ ಮಳೆಕಾಟ

    ಬೆಂಗಳೂರು: ಕಳೆದ ವರ್ಷಕ್ಕಿಂತ ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿತ್ತು. ಇನ್ನೇನು ಕೆಲ ದಿನಗಳಲ್ಲಿ ಮುಂಗಾರು ಮುಗಿದು, ಹಿಂಗಾರು ಮಳೆ (Post Mansoon Rain) ಆರಂಭವಾಗಲಿದ್ದು, ಈ ವರ್ಷಾಂತ್ಯದವರೆಗೂ ಜನರಿಗೆ ಮಳೆಕಾಟ ತಪ್ಪಿದ್ದಲ್ಲ.

    2025ನೇ ಸಾಲಿನ ನೈಋತ್ಯ ಮುಂಗಾರು ಕೆಲ ದಿನಗಳಲ್ಲಿ ಮುಕ್ತಾಯವಾಗಲಿದ್ದು, ಹಿಂಗಾರು ಮಳೆ ಆರಂಭಗೊಳ್ಳುತ್ತಿದೆ. ಈ ಮುಂಗಾರು ಮಳೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೂ ದಾಖಲೆಗಳ ಪ್ರಕಾರವಿತ್ತು. ಇದುವರೆಗೂ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗಿದೆ. ಈ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ 339 ಸೆಂಟಿ ಮೀಟರ್ ಮುಂಗಾರು ಮಳೆಯಾಗಿದ್ದು, ಸರಾಸರಿಗಿಂತ 14 ಸೆಂಟಿ ಮೀಟರ್ ಹೆಚ್ಚಿನ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು, ಸಾಕಷ್ಟು ಮಳೆ ಅನಾಹುತಗಳು ಈ ವರ್ಷವಾಗಿವೆ. ಇದನ್ನೂ ಓದಿ: ಬಿಗ್‌ಬಾಸ್ ಮನೆ ಬೀಗ ಓಪನ್ ಆದ್ರೂ ಶೂಟಿಂಗ್ ಇನ್ನೂ ಶುರುವಾಗಿಲ್ಲ!

    ಇನ್ನೂ ಈ ವರ್ಷ ಮುಂಗಾರಿನಂತೆ ಹಿಂಗಾರು ಮಳೆಯೂ ವಾಡಿಕೆಗಿಂತ ಹೆಚ್ಚಾಗೋ ಸಾಧ್ಯತೆಯಿದೆ ಅಂತಾ ಹವಾಮಾನ ಇಲಾಖೆ (IMD) ತಿಳಿಸಿದೆ. ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೂ ಇರಲಿದ್ದು, ಜನರಿಗೆ ಮಳೆ ಕಾಟ ತಪ್ಪಿದ್ದಲ್ಲ ಅಂತಾರೆ ಹವಾಮಾನ ಇಲಾಖೆಯ ವಿಜ್ಞಾನಿಗಳು. ಇದನ್ನೂ ಓದಿ: ರಮ್ಯಾಗೆ ಅವಹೇಳನ| ದರ್ಶನ್‌ ಅಭಿಮಾನಿಗಳ ವಿರುದ್ಧ 380 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

    ಒಟ್ಟಿನಲ್ಲಿ ಈ ಬಾರಿಯ ಮುಂಗಾರು ಹಾಗೂ ಹಿಂಗಾರು ಮಳೆ ಉತ್ತಮವಾಗಿದ್ದು, ರೈತರಿಗೆ ಹಾಗೂ ಜನರಿಗೆ ಸಂತಸವನ್ನುಂಟು ಮಾಡಿದೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ 6 ಕಾರುಗಳಿಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಡಿಫೆಂಡರ್ – ಚಾಲಕ ವಶಕ್ಕೆ

  • ಮುಂಬೈ ಸೇರಿ ಹಲವೆಡೆ ಭಾರೀ ಮಳೆ – ಆರೆಂಜ್ ಅಲರ್ಟ್ ಘೋಷಣೆ

    ಮುಂಬೈ ಸೇರಿ ಹಲವೆಡೆ ಭಾರೀ ಮಳೆ – ಆರೆಂಜ್ ಅಲರ್ಟ್ ಘೋಷಣೆ

    – ನವರಾತ್ರಿಯ ದಾಂಡಿಯಾ ಸಂಭ್ರಮಕ್ಕೆ ಅಡ್ಡಿ ಸಾಧ್ಯತೆ

    ಮುಂಬೈ: ಮುಂಬೈ (Mumbai) ಸೇರಿದಂತೆ ಮಹಾರಾಷ್ಟ್ರದ (Maharashtra) ಕೆಲವು ಭಾಗಗಳಲ್ಲಿ ಶನಿವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ ಘೋಷಿಸಿದೆ.

    ಮುಂಬೈನಲ್ಲಿ ಗುಡುಗು, ಮಿಂಚು ಸಹಿತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಪಾಲ್ಘರ್, ಪುಣೆ, ಥಾಣೆ ಮತ್ತು ರಾಯಗಡ್ ಸೇರಿದಂತೆ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಜಲ್ನಾ, ಬೀಡ್ ಮತ್ತು ಸೋಲಾಪುರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.ಇದನ್ನೂ  ಓದಿ: ಕೊಡಗಿನಲ್ಲಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ – ಸುತ್ತಮುತ್ತಲಿನ ಪ್ರದೇಶದ ಜನಕ್ಕೆ ಕಾಡ್ತಿದೆ ಶ್ವಾಸಕೋಶದ ಸಮಸ್ಯೆ!

    ಶನಿವಾರ (ಸೆ.27) ಬೆಳಗ್ಗೆಯಿಂದಲೂ ಮುಂಬೈ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಪಾಲ್ಘರ್, ಥಾಣೆ ಮತ್ತು ರಾಯಗಡ್‌ನಲ್ಲಿ ಸೋಮವಾರದವರೆಗೂ (ಸೆ.29) ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಅಲ್ಲದೇ ಅಕ್ಟೋಬರ್ ಎರಡನೇ ವಾರದವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಇನ್ನೂ ನವರಾತ್ರಿ ಹಿನ್ನೆಲೆ ಆಯೋಜಿಸಲಾಗಿದ್ದ ದಾಂಡಿಯಾ ನೈಟ್ ಫೆಸ್ಟಿವಲ್‌ಗೂ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಜೊತೆಗೆ ಸೆ.28ರಂದು ನಡೆಯಬೇಕಿದ್ದ ಮಹಾರಾಷ್ಟ್ರ ಲೋಕ ಸೇವಾ ಆಯೋಗದ ಕೆಲ ಪರೀಕ್ಷೆಗಳನ್ನು ಮುಂದೂಡಿ, ನ.9ರಂದು ನಡೆಸುವುದಾಗಿ ತಿಳಿಸಿದೆ.

    ಇನ್ನೂ ಮಹಾರಾಷ್ಟ್ರದಾದ್ಯಂತ ಭಾರೀ ಮಳೆಯ ಹಿನ್ನೆಲೆ ಮೀನುಗಾರರು ಸಮುದ್ರ, ನದಿ, ಕೆರೆಗಳಿಗೆ ಇಳಿಯದಂತೆ ಸೂಚನೆ ನೀಡಿದೆ.ಇದನ್ನೂ  ಓದಿ: ಗಡಿ ಜಿಲ್ಲೆ ಬೀದರ್‌ನಲ್ಲಿ ಧಾರಾಕಾರ ಮಳೆಗೆ ಭಾರೀ ಅವಾಂತರ – ರಸ್ತೆ ಸಂಚಾರ ಬಂದ್‌

     

  • ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಸೆ.29ರವರೆಗೆ ವರುಣಾರ್ಭಟ

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಸೆ.29ರವರೆಗೆ ವರುಣಾರ್ಭಟ

    ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಸೆ.29ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

    ಬಂಗಾಳ ಉಪಸಾಗರದ ಉತ್ತರ ಒಡಿಶಾ, ಆಂಧ್ರದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ (Karnataka) ಭಾರೀ ಮಳೆಯಾಗಲಿದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ – 7 ಮಂದಿ ಬಲಿ

    ಸೆ.23ರಿಂದ ಸೆ.29ರವರೆಗೆ ಹಲವಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು, ಕರಾವಳಿ ಭಾಗ ಹಾಗೂ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.

  • ಮುಂದಿನ ಮೂರ್ನಾಲ್ಕು ದಿನ ಬೆಂಗ್ಳೂರಿಗೆ ಮಳೆ ಅಲರ್ಟ್‌

    ಮುಂದಿನ ಮೂರ್ನಾಲ್ಕು ದಿನ ಬೆಂಗ್ಳೂರಿಗೆ ಮಳೆ ಅಲರ್ಟ್‌

    ಬೆಂಗಳೂರು: ಮುಂದಿನ ಮೂರ್ನಾಲ್ಕು ದಿನ ಬೆಂಗ್ಳೂರಿಗೆ (Bengaluru) ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

    ಮುಂದಿನ ಮೂರ್ನಾಲ್ಕು ದಿನ ಬೆಂಗಳೂರಿನ ಹಲವೆಡೆ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಸದ್ಯ ನಗರದ ಹಲವೆಡೆ ಮಳೆ ಶುರುವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ವಿಧಾನಸೌಧ, ಚಾಲುಕ್ಯ ಸರ್ಕಲ್, ಕೆ ಆರ್ ಸರ್ಕಲ್, ಕಾರ್ಪೋರೇಷನ್ ಸರ್ಕಲ್, ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.ಇದನ್ನೂ ಓದಿ: ಅಲೆಮಾರಿ ಸಮುದಾಯಕ್ಕೆ 1% ಮೀಸಲಾತಿ ಮಾಡಿಸಿ ಕೊಡ್ತೀನಿ – ರಾಯರೆಡ್ಡಿ ಭರವಸೆ

    ಇನ್ನೂ ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

  • ಮುಂದಿನ ಮೂರು ಗಂಟೆ ಬೆಂಗಳೂರಿಗೆ ಮಳೆ ಅಲರ್ಟ್

    ಮುಂದಿನ ಮೂರು ಗಂಟೆ ಬೆಂಗಳೂರಿಗೆ ಮಳೆ ಅಲರ್ಟ್

    – ರಾಜಧಾನಿಯ ಹಲವೆಡೆ ಮಳೆ, ಅಲ್ಲಲ್ಲಿ ಟ್ರಾಫಿಕ್ ಜಾಮ್
    – ರಾಜ್ಯದಲ್ಲಿ 6 ದಿನ ಭಾರೀ ಮಳೆಯ ಮುನ್ಸೂಚನೆ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೆ ಮಳೆ ಆರಂಭವಾಗಿದ್ದು, ಮುಂದಿನ ಮೂರು ಗಂಟೆಗಳ ಕಾಲ ಮಳೆ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಡಿಕೆಶಿ ನಟ್ಟು ಬೋಲ್ಟು ಹೇಳಿಕೆ ಸಾಧು ಕೋಕಿಲ ಕಿತಾಪತಿ – ಕಿಚ್ಚ ಸುದೀಪ್‌

    ಇನ್ನು, ರಾಜ್ಯದಲ್ಲಿ ಆರು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಅಲ್ಲದೇ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: Ramanagara | ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಮಾರಾಮಾರಿ – 23 ಮಂದಿಯ ವಿರುದ್ಧ ಎಫ್‌ಐಆರ್

    ಬಂಗಾಳ ಉಪ ಸಾಗರದ ಒರಿಸ್ಸಾದ ಕರಾವಳಿಯಲ್ಲಿ ಚಂಡಮಾರುತ ಹಿನ್ನೆಲೆ ಉತ್ತರ ಭಾಗದ ಬಂಗಾಳ ಉಪಸಾಗರದಲ್ಲಿ ಸೆಪ್ಟೆಂಬರ್ 2ರಂದು ವಾಯುಭಾರ ಕುಸಿತ ಉಂಟಾಗಲಿದೆ.ಈ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 6ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ ಸೆಪ್ಟೆಂಬರ್ 6ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಸೆಪ್ಟೆಂಬರ್ 2ರಂದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಕೆಲವು ಕಡೆ ಇಂದಿನಿಂದ ಸೆಪ್ಟೆಂಬರ್ 4ರವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು – ರಾಜ್ಯಪಾಲ, ಸಿಎಂರಿಂದ ಆತ್ಮೀಯ ಸ್ವಾಗತ

    ಬೆಂಗಳೂರಲ್ಲಿ ಸೋಮವಾರ ಸಂಜೆಯಿಂದ ವರುಣನ ಆರ್ಭಟ ಜೋರಾಗಿದೆ. ಟೌನ್ ಹಾಲ್, ಕಾರ್ಪೋರೇಷನ್, ಜಯನಗರ, ಜೆಪಿ ನಗರ ಸುತ್ತಮುತ್ತ ಭಾರೀ ಮಳೆಯಾಗಿದೆ. ಸಂಜೆ ವೇಳೆಗೆ ಸುರಿದ ಮಳೆಗೆ ವಾಹನ ಸವಾರರು ಪರದಾಡಿದ್ದಾರೆ. ಅಲ್ಲದೇ ವಿಲ್ಸನ್ ಗಾರ್ಡನ್, ಶಾಂತಿನಗರ, ಲಾಲ್ ಬಾಗ್ ಸುತ್ತಮುತ್ತಲೂ ಜೋರು ಮಳೆಯಾಗಿದೆ. ಇದನ್ನೂ ಓದಿ: ಅಮಿತ್‌ ಶಾ ಜಮ್ಮು ಕಾಶ್ಮೀರದಲ್ಲಿದ್ದಾಗಲೇ ಒಳನುಸುಳಲು ಯತ್ನ – ಶಂಕಿತ ಉಗ್ರರ ಮೇಲೆ ಗುಂಡಿನ ದಾಳಿ

    ಇನ್ನು ಭಾರೀ ಮಳೆಯ ಪರಿಣಾಮ ಮಲ್ಲೇಶ್ವರಂ ರಸ್ತೆಗಳು ನದಿಯಂತಾಗಿವೆ. ಮಂತ್ರಿ ಮಾಲ್, ವಲಯ ಬಿಬಿಎಂಪಿ ಕಚೇರಿ ಮುಂದೆ ಮಳೆ ನೀರು ರಸ್ತೆ ತುಂಬಿ ಹರಿಯುತ್ತಿದೆ. 2-3 ಅಡಿ ಮಳೆ, ಮೋರಿ ನೀರು ನಿಂತ ಪರಿಣಾಮ ವಾಹನ ಸವಾರರು ಹೈರಾಣಾಗಿದ್ದಾರೆ. ಅಲ್ಲದೇ ತಗ್ಗುಪ್ರದೇಶಗಳಿಗೆ ಮಳೆ ನೀರು ನುಗ್ಗುತ್ತಿದ್ದು, ಕೆಆರ್ ಮಾರ್ಕೆಟ್ ರಸ್ತೆಯೂ ಮಳೆ ನೀರಿನಿಂದ ತುಂಬಿದೆ. ಇದನ್ನೂ ಓದಿ: ಭಯೋತ್ಪಾದನೆ ವಿಚಾರದಲ್ಲಿ ಡಬಲ್ ಸ್ಟ್ಯಾಂಡರ್ಡ್‌ ಸರಿಯಲ್ಲ: ಪಾಕ್ ಪ್ರಧಾನಿ ಮುಂದೆಯೇ ಪಹಲ್ಗಾಮ್ ದಾಳಿ ವಿಚಾರ ಪ್ರಸ್ತಾಪಿಸಿದ ಮೋದಿ