Tag: ಹಸಿರು ಜೆರ್ಸಿ

  • IPL 2025: ಆರ್‌ಸಿಬಿಗೆ ಆಗಿಬಾರದ ಗ್ರೀನ್ ಜೆರ್ಸಿ – ಗೆಲುವಿಗಿಂತ ಸೋಲೇ ಹೆಚ್ಚು; ಇಂದಿನ ಲಕ್‌ ಹೇಗಿದೆ?

    IPL 2025: ಆರ್‌ಸಿಬಿಗೆ ಆಗಿಬಾರದ ಗ್ರೀನ್ ಜೆರ್ಸಿ – ಗೆಲುವಿಗಿಂತ ಸೋಲೇ ಹೆಚ್ಚು; ಇಂದಿನ ಲಕ್‌ ಹೇಗಿದೆ?

    ಜೈಪುರ್‌: ರಜತ್‌ ಪಾಟಿದಾರ್ ನಾಯಕತ್ವದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB_ ತಂಡ ಇಂದು (ಏ.13) ರಾಜಸ್ಥಾನ್‌ ರಾಯಲ್ಸ್‌ (RR) ವಿರುದ್ಧ ಸೆಣಸಲಿದೆ.

    ಜೈಪುರದ ಸವಾಯ್‌ ಮಾನ್ಸಿಂಗ್‌ ಕ್ರಿಕೆಟ್‌ ಮೈದಾನದಲ್ಲಿ ಮಧ್ಯಾಹ್ನ 3:30ಕ್ಕೆ ಪಂದ್ಯ ಆರಂಭವಾಗಲಿದೆ. ಆರ್​ಸಿಬಿ ಆಟಗಾರರು ತಮ್ಮ ಕೆಂಪು ಮತ್ತು ಕಪ್ಪು ಮಿಶ್ರಿತ ಜೆರ್ಸಿ ಬದಲಿಗೆ ಹಸಿರು ಜೆರ್ಸಿಯಲ್ಲಿ (Green Jersey) ಕಾಣಿಸಿಕೊಳ್ಳಲಿದ್ದಾರೆ.

    2011ರ ಐಪಿಎಲ್​ನಿಂದಲೂ ಪ್ರತಿ ಆವೃತ್ತಿಯ ಒಂದು ಪಂದ್ಯದಲ್ಲಿ ಆರ್‌ಸಿಬಿ ಗ್ರೀನ್ ಜೆರ್ಸಿ (Green Jersey) ತೊಟ್ಟು ಪಂದ್ಯವನ್ನಾಡಲು ಆರಂಭಿಸಿತು. ಅಂದಿನಿಂದ ಆರ್​ಸಿಬಿ ಪ್ರತಿ ವರ್ಷ ಐಪಿಎಲ್‌ನಲ್ಲಿ (IPL 2023) ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಆಡುತ್ತಿದೆ. ನಮ್ಮ ಸುತ್ತಲಿನ ಹಸಿರು ಪರಿಸರವನ್ನು ಸಂರಕ್ಷಿಸುವಂತೆ ಜಾಗೃತಿಗೊಳಿಸುವ ಉದ್ದೇಶವೂ ಇದ್ದಾಗಿದೆ.

    ಗೆಲುವಿಗಿಂತ ಸೋಲೇ ಹೆಚ್ಚು:
    2011ರಲ್ಲಿ ಗೆಲುವು ಸಾಧಿಸಿದ್ದ ಆರ್‌ಸಿಬಿ 2012, 2013, 2014ರಲ್ಲಿ ಸೋಲು ಕಂಡಿತು. 2015ರಲ್ಲಿ ಯಾವುದೇ ಫಲಿತಾಂಶವಿಲ್ಲದೇ ಪಂದ್ಯ ರದ್ದಾಯಿತು. 2016ರಲ್ಲಿ ಗೆಲುವು ಸಾಧಿಸಿತ್ತು. ನಂತರ 2017, 2018, 2019, 2020ರಲ್ಲಿ ಸೋತಿತ್ತು. 2021 ನೀಲಿ ಜೆರ್ಸಿ ಧರಿಸಿ ಕಣಕ್ಕಿಳಿದಿದ್ದರೂ ಸೋಲು ಕಂಡಿತ್ತು. 2023ರಲ್ಲಿ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ತವರು ಕ್ರೀಡಾಂಗಣದಲ್ಲೇ ಗೆಲುವು ಸಾಧಿಸಿತ್ತು. ಆದ್ರೆ ಕಳೆದ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ವಿರುದ್ಧ ಕೇವಲ 1 ರನ್‌ಗಳಿಂದ ವಿರೋಚಿತ ಸೋಲು ಕಂಡಿತ್ತು. ಇದುವರೆಗೆ 14 ಪಂದ್ಯಗಳ ಪೈಕಿ 9ರಲ್ಲಿ ಸೋಲು ಕಂಡಿದ್ದು, 4ರಲ್ಲಿ ಗೆಲುವು ಸಾಧಿಸಿದೆ. 1 ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇಂದಿನ ಪಂದ್ಯದಲ್ಲಿ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

    ಪುಟಿದೇಳುತ್ತಾ ಆರ್‌ಸಿಬಿ?
    ಪ್ರಸಕ್ತ ಆವೃತ್ತಿಯಲ್ಲಿ ಆಡಿರುವ 5 ಪಂದ್ಯಗಳ ಪೈಕಿ ಮೂರು ಪಂದ್ಯಗಳಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ, ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಕುಸಿದಿದೆ. ಅಲ್ಲದೇ ಕಳೆದ ಎರಡೂ ಪಂದ್ಯಗಳಲ್ಲಿ ತವರಿನಲ್ಲೇ ಸೋತಿರುವುದು ಬೇಸರದ ಸಂಗತಿ. ಇಂದಿನ ಪಂದ್ಯದಲ್ಲಿ ಆರ್‌ಸಿಬಿ ಪುಟಿದೇಳುತ್ತಾ ಎಂಬುದು ಪ್ರಶ್ನೆಯಾಗಿದೆ.

  • `ನಮ್ಮ ಹಸಿರು ಭೂಮಿಗಾಗಿʼ – ಪರಿಸರ ಕಾಳಜಿ ಸಂದೇಶ ಕೊಟ್ಟ RCB

    `ನಮ್ಮ ಹಸಿರು ಭೂಮಿಗಾಗಿʼ – ಪರಿಸರ ಕಾಳಜಿ ಸಂದೇಶ ಕೊಟ್ಟ RCB

    ಬೆಂಗಳೂರು: ಫಾಫ್ ಡು ಪ್ಲೆಸಿಸ್ (Faf du Plessis) ನಾಯಕತ್ವದ ಆರ್‌ಸಿಬಿ (RCB) ತನ್ನ 7ನೇ ಪಂದ್ಯದಲ್ಲಿ ರಾಜಸ್ಥಾನ್ (Rajasthan Royals) ರಾಯಲ್ಸ್ ವಿರುದ್ಧ ತವರಿನಲ್ಲಿ ಸೆಣಸಲಿದೆ.

    ಈ ಪಂದ್ಯದಲ್ಲಿ ಆರ್​ಸಿಬಿ ಆಟಗಾರರು ತಮ್ಮ ಕೆಂಪು ಮತ್ತು ಕಪ್ಪು ಮಿಶ್ರಿತ ಜೆರ್ಸಿ ಬದಲಿಗೆ ಹಸಿರು ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. 2011ರ ಐಪಿಎಲ್​ನಿಂದ ಆರ್​ಸಿಬಿ ಒಂದು ಪಂದ್ಯದಲ್ಲಿ ಗ್ರೀನ್ ಜೆರ್ಸಿ (Green Jersey) ತೊಟ್ಟು ಪಂದ್ಯವನ್ನಾಡಲು ಆರಂಭಿಸಿತು. ಅಂದಿನಿಂದ ಆರ್​ಸಿಬಿ ಪ್ರತಿ ವರ್ಷ ಐಪಿಎಲ್‌ನಲ್ಲಿ (IPL 2023) ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ತೊಟ್ಟು ಆಡುತ್ತಿದೆ. ಇದನ್ನೂ ಓದಿ: ಒಂದೇ ಓವರ್‌ನಲ್ಲಿ 31 ರನ್‌ ಕೊಟ್ಟ ಅರ್ಜುನ್‌ ತೆಂಡೂಲ್ಕರ್‌; ಹರ್ಷ ತಂದ ಅರ್ಷ್‌ದೀಪ್‌ – ಪಂಜಾಬ್‌ಗೆ 13 ರನ್‌ಗಳ ಜಯ

    16ನೇ ಆವೃತ್ತಿಯಲ್ಲಿ 7ನೇ ಪಂದ್ಯವಾಡುತ್ತಿರುವ ಆರ್‌ಸಿಬಿ ತವರಿನಲ್ಲೇ ಪಿಂಕ್ ಆರ್ಮಿ ವಿರುದ್ಧ ಹಸಿರು ಜೆರ್ಸಿ ಧರಿಸಿ ಕಣಕ್ಕಿಳಿಯಲಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರಣದಿಂದ ಆರ್‌ಸಿಬಿ ತಂಡ ಈ ವಿಭಿನ್ನ ಹಾದಿ ಹಿಡಿದಿದೆ. ʻನಮ್ಮ ಹಸಿರು ಭೂಮಿಗಾಗಿʼ ಎಂಬ ಸಂಕಲ್ಪದೊಂದಿಗೆ ʻವಿಶೇಷ ಪಂದ್ಯಕ್ಕೆ ವೇದಿಕೆ ಸಿದ್ಧವಾಗುತ್ತಿದ್ದಂತೆ, ನಮ್ಮ ಪರಿಸರಕ್ಕಾಗಿ ಪ್ರತಿಜ್ಞೆ ತೆಗೆದುಕೊಳ್ಳೋಣʼ, ʻಮುಂದಿನ ಪೀಳಿಗೆಗಾಗಿ ಹಸಿರು ಪರಿಸರ ಉಳಿಸೋಣʼ ಎಂದು ಅಭಿಮಾನಿಗಳಿಗೆ ಕರೆ ನೀಡಿದೆ.

    ಈಗಾಗಲೇ 6 ಪಂದ್ಯಗಳನ್ನಾಡಿರುವ ಆರ್‌ಸಿಬಿ 3 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿ 6ನೇ ಸ್ಥಾನದಲ್ಲಿದೆ. ಭಾನುವಾರ ಪಿಂಕ್‌ ಆರ್ಮಿ ವಿರುದ್ಧ ಗೆದ್ದರೆ ಪಾಯಿಂಟ್ಸ್‌ ಟೇಬಲ್‌ ಪಟ್ಟಿಯಲ್ಲಿ ಒಂದು ಸ್ಥಾನ ಮೇಲಕ್ಕೇರಲಿದೆ. ಇದನ್ನೂ ಓದಿ: 7 ಸಾವಿರ ರನ್‌ ಪೂರೈಸಿದ ರಾಹುಲ್‌ – ಕೊಹ್ಲಿ, ರೋಹಿತ್‌ ಸೇರಿ ಹಲವರ ದಾಖಲೆ ಉಡೀಸ್‌

    ಗೆಲುವಿಗಿಂತ ಸೋಲೆ ಹೆಚ್ಚು: 2011ರ ಆವೃತ್ತಿಯಿಂದ ಆರ್‌ಸಿಬಿ ಋತುವಿನ ಒಂದು ಪಂದ್ಯದಲ್ಲಿ ಹಸಿರು ಜೆರ್ಸಿ ಧರಿಸಿ ಆಡಲು ಆರಂಭಿಸಿತು. 2011ರಲ್ಲಿ ಗೆಲುವು ಸಾಧಿಸಿದ್ದ ಆರ್‌ಸಿಬಿ 2012, 2013, 2014ರಲ್ಲಿ ಸೋಲು ಕಂಡಿತು. 2015ರಲ್ಲಿ ಯಾವುದೇ ಫಲಿತಾಂಶವಿಲ್ಲದೇ ಪಂದ್ಯ ರದ್ದಾಯಿತು. 2016ರಲ್ಲಿ ಗೆಲುವು ಸಾಧಿಸಿತ್ತು. ನಂತರ 2017, 2018, 2019, 2020ರಲ್ಲಿ ಸೋತಿತ್ತು. 2021 ನೀಲಿ ಜೆರ್ಸಿ ಧರಿಸಿ ಕಣಕ್ಕಿಳಿದಿದ್ದರೂ ಸೋಲು ಕಂಡಿತ್ತು. 2023ರ ಆವೃತ್ತಿಯಲ್ಲಿ ಫಲಿತಾಂಶ ಏನಾಗಲಿದೆ ಎಂಬುದನ್ನ ಕಾದು ನೋಡಬೇಕಿದೆ.

  • ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ಕಂಗೊಳಿಸಲಿದೆ ಆರ್‌ಸಿಬಿ

    ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಹಸಿರು ಜೆರ್ಸಿಯಲ್ಲಿ ಕಂಗೊಳಿಸಲಿದೆ ಆರ್‌ಸಿಬಿ

    ಮುಂಬೈ: ಭಾನುವಾರ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಪರಿಸರ ಜಾಗೃತಿಗಾಗಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

    ಪ್ರತಿ ವರ್ಷ ಆರ್‌ಸಿಬಿ ತಂಡ ಟೂರ್ನಿಯ 1 ಪಂದ್ಯದಲ್ಲಿ ಹಸಿರು ಜೆರ್ಸಿತೊಟ್ಟು ಪರಿಸರ ರಕ್ಷಣೆ ಕುರಿತಾಗಿ ವಿಶೇಷ ಅರಿವನ್ನು ಮೂಡಿಸುತ್ತಿತ್ತು. ಈ ಬಾರಿಯೂ ಕೂಡ ಹಸಿರು ಬಣ್ಣದ ಜೆರ್ಸಿ ತೊಟ್ಟು ನಾಳೆ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ತಂಡ ಆಡಳಿದೆ. ಈಗಾಗಲೇ ಆಟಗಾರರು ಹಸಿರು ಬಣ್ಣದ ಜೆರ್ಸಿ ತೊಟ್ಟು ಕಾಣಿಸಿಕೊಳ್ಳುವ ವೀಡಿಯೋ ಆರ್‌ಸಿಬಿಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಮುಂಬೈ ತಂಡಕ್ಕೆ ರೋಚಕ ಜಯ – 3ನೇ ಸೋಲಿನ ಕಹಿ ಅನುಭವಿಸಿದ ಗುಜರಾತ್‌

    ಕಳೆದ ವರ್ಷ ಆರ್‌ಸಿಬಿ ತಂಡ ಹಸಿರು ಬಣ್ಣದ ಜೆರ್ಸಿಯ ಬದಲು ಪಿಪಿಇ ಕಿಟ್‍ನಂಥ ತಿಳಿ ನೀಲಿ ಬಣ್ಣದ ಜೆರ್ಸಿಯೊಂದಿಗೆ ಕೆಕೆಆರ್ ವಿರುದ್ಧ ಕಣ್ಣಕ್ಕಿಳಿದು ಕೊರೊನಾ ವಾರಿಯರ್ಸ್‍ಗೆ ಗೌರವ ಸಲ್ಲಿಸಿತ್ತು. ಇದಲ್ಲದೆ ಪಂದ್ಯದ ಬಳಿಕ ಎಲ್ಲಾ ಆಟಗಾರರ ಜೆರ್ಸಿಯನ್ನು ಹರಾಜು ಹಾಕಲಾಗಿತ್ತು. ಇದರಿಂದ ಬಂದ ಹಣವನ್ನು ಭಾರತದಲ್ಲಿ ಕೊರೊನಾ ಲಸಿಕೆ ನೀಡಲು ಆರ್‌ಸಿಬಿ ಫ್ರಾಂಚೈಸ್ ಮುಂದಾಗಿತ್ತು. ಇದನ್ನೂ ಓದಿ: ಐಪಿಎಲ್‍ನಲ್ಲಿ ವೇಗಿಗಳ ಮಿಂಚಿನ ಎಸೆತಗಳ ದಾಖಲೆ

    ಇದೀಗ 15ನೇ ಆವೃತ್ತಿ ಐಪಿಎಲ್‍ನಲ್ಲಿ ಸೋಲು ಗೆಲುವಿನೊಂದಿಗೆ ಮುನ್ನುಗ್ಗಿ ಆರ್‌ಸಿಬಿ ತಂಡ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಈಗಾಗಲೇ 11 ಪಂದ್ಯಗಳಿಂದ 6 ಜಯ 5 ಸೋಲು ಕಂಡು ಒಟ್ಟು 12 ಅಂಕ ಸಂಪಾದಿಸಿದ್ದು, ಇನ್ನೂಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿ ಪ್ಲೇ ಆಫ್‍ಗೆ ಏರುವ ನಿರೀಕ್ಷೆಯಲ್ಲಿದೆ.