Tag: ಹಾಫ್ ಮ್ಯಾರಥಾನ್

  • ಮಂಗಳೂರು ದಸರಾ| ಅ.6ರಂದು ಹಾಫ್ ಮ್ಯಾರಥಾನ್

    ಮಂಗಳೂರು ದಸರಾ| ಅ.6ರಂದು ಹಾಫ್ ಮ್ಯಾರಥಾನ್

    ಮಂಗಳೂರು: ಕುದ್ರೋಳಿ (Kudroli) ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ (  Gokarnanatheshwara Temple) ನಡೆಯುತ್ತಿರುವ ಮಂಗಳೂರು (Mangaluru) ದಸರಾ ಮಹೋತ್ಸವ ಅಂಗವಾಗಿ ಕ್ಷೇತ್ರದ ವತಿಯಿಂದ ಜಿಯೂಸ್ ಫಿಟ್ನೆಸ್ ಕೇಂದ್ರ, ಖೇಲೋ ಇಂಡಿಯಾ ಹಾಗೂ ಡೆಕತ್ಲಾನ್ ಸಹಭಾಗಿತ್ವದಲ್ಲಿ ಅ.6ರಂದು ದಸರಾ ಹಾಫ್ ಮ್ಯಾರಥಾನ್ ಪಂದ್ಯಾಟ ನಡೆಯಲಿದೆ ಎಂದು ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದ್ದಾರೆ.

    ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ವನ್ ಸಿಟಿ ವನ್ ಸ್ಪಿರಿಟ್’ ಧ್ಯೇಯದೊಂದಿಗೆ `ಎಲ್ಲಿ ಒಗ್ಗಟ್ಟಿದೆಯೂ ಅಲ್ಲಿ ಬಲವಿದೆ’ ಎಂಬ ವಾಕ್ಯದೊಂದಿಗೆ ಈ ಪಂದ್ಯಾಟ ನಡೆಯಲಿದೆ. 21 ಕಿ.ಮೀ., 10 ಕಿ.ಮೀ. ಹಾಗೂ 5 ಕಿ.ಮೀ.ಗಳ ಮೂರು ವಿಭಾಗಗಳಲ್ಲಿ ಹ್ಯಾಪ್ ಮ್ಯಾರಥಾನ್ ಆಯೋಜಿಸಲಾಗಿದೆ ಎಂದರು. ಇದನ್ನೂ ಓದಿ: ಭಯೋತ್ಪಾದನೆ ಆರೋಪದಿಂದ ಕುಟುಂಬ ರಕ್ಷಿಸಲು 2.5 ಕೋಟಿ ಲಂಚಕ್ಕೆ ಬೇಡಿಕೆ – NIA ಅಧಿಕಾರಿಯನ್ನೇ ಬಂಧಿಸಿದ ಸಿಬಿಐ

    ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ನಡೆಯಲಿರುವ ಹಾಫ್ ಮ್ಯಾರಥಾನ್‌ನಲ್ಲಿ ಪ್ರಥಮ ವಿಜೇತರಿಗೆ 25ಸಾವಿರ ರೂ. ನಗದು ಬಹುಮಾನ, ದ್ವಿತೀಯ ಬಹುಮಾನ 15ಸಾವಿರ ರೂ. ಆಗಿರುತ್ತದೆ. 21 ಕಿ.ಮೀ. ಮ್ಯಾರಥಾನ್ ಬೆಳಗ್ಗೆ 5 ಗಂಟೆಗೆ, 10 ಕಿ.ಮೀ. ಮ್ಯಾರಥಾನ್ 5.30ಕ್ಕೆ ಹಾಗೂ 5ಕಿ.ಮೀ. ನಡಿಗೆ 6.30ಕ್ಕೆ ಕುದ್ರೋಳಿ ಕ್ಷೇತ್ರದಿಂದ ಆರಂಭಗೊಳ್ಳಲಿದೆ ಎಂದು ತಿಳಿಸಿದರು. ಇದನ್ನೂ ಓದಿ:  Chhattisgarh | ಭದ್ರತಾ ಪಡೆಗಳಿಂದ ಎನ್‌ಕೌಂಟರ್‌ – 14 ನಕ್ಸಲರು ಬಲಿ

    ಹಾಫ್ ಮ್ಯಾರಥಾನ್ (Half Marathon) ಕ್ಷೇತ್ರದಿಂದ ಹೊರಟು ನಾರಾಯಣ ಗುರು ಸರ್ಕಲ್ ಆಗಿ, ಚಿಲಿಂಬಿ, ಪೈ ಸೇಲ್ಸ್ ದೇರೇಬೈಲ್, ಕರ್ನಾಟಕ ಬ್ಯಾಂಕ್, ಭಾರತ್ ಮಾಲ್, ಬಿಜೈನಿಂದ ಕದ್ರಿ ದೇವಸ್ಥಾನ ರಸ್ತೆ ಮಾರ್ಗವಾಗಿ, ಮಲ್ಲಿಕಟ್ಟೆ ಭಾರತ್ ಬೀಡಿ, ಕಂಕನಾಡಿ, ವೆಲೆನ್ಸಿಯಾ, ಮಂಗಳಾದೇವಿ, ಫಾರಂ ಮಾಲ್, ಕ್ಲಾಕ್‌ಟವರ್ ಆಗಿ ವೆಂಕಟ್ರಮಣ ದೇವಸ್ಥಾನದ ಬಳಿಯಿಂದ ಕ್ಷೇತ್ರಕ್ಕೆ ಹಿಂತಿರುಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಬಳ್ಳಾರಿ ಜೈಲಿನಲ್ಲಿರುವ ಆರೋಪಿ ದರ್ಶನ್‌ಗೆ ಬೆನ್ನು ನೋವು

    ಮ್ಯಾರಥಾನ್‌ನಲ್ಲಿ ಭಾಗವಹಿಸುವವರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಸ್ವಯಂ ಸೇವಕರ ಜತೆಗೆ, ಫಿಸಿಯೋತೆರಪಿಸ್ಟ್‌ಗಳು, ಆಂಬುಲೆನ್ಸ್‌ಗಳನ್ನು ನಿಗದಿತ ಸ್ಥಳಗಳಲ್ಲಿ ಸ್ಥಿತಗೊಳಿಸಲಾಗಿರುತ್ತದೆ. ಮ್ಯಾರಥಾನ್‌ನಲ್ಲಿ ಭಾಗವಹಿಸುವವರಿಗೆ ಲೋಕೇಷನ್ ದೃಷ್ಟಿಯಿಂದ ಮೈಕ್ರೋ ಚಿಪ್‌ಗಳನ್ನು ನೀಡಲಾಗುತ್ತದೆ. ಭಾಗವಹಿಸುವ ಎಲ್ಲರಿಗೂ ಪದಕ, ಪ್ರಮಾಣ ಪತ್ರ ಹಾಗೂ ಟೀ ಶರ್ಟ್‌ಗಳನ್ನು ಒದಗಿಸಲಾಗುತ್ತದೆ ಎಂದು ವಿವರಿಸಿದರು. ಇದನ್ನೂ ಓದಿ: ಸಂಪುಟದಲ್ಲಿ ಚರ್ಚಿಸಿ ಒಳ ಮೀಸಲಾತಿ ಜಾರಿಗೆ ತೀರ್ಮಾನ: ಸಿಎಂ

    ಈಗಾಗಲೇ ಸುಮಾರು 1200ರಷ್ಟು ಮಂದಿ ನೋಂದಣಿ ಮಾಡಿಕೊಂಡಿದ್ದು, ಸ್ಥಳದಲ್ಲೇ ನೋಂದಣಿಗೂ ಅವಕಾಶವಿರಲಿದೆ. ಸುಮಾರು 2000ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸಹಿತ ಹಲವು ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಸರ್ಕಾರಿ ನಿವಾಸ ತೊರೆದು ಆಪ್ ಸಂಸದನ ಮನೆಗೆ‌ ತೆರಳಿದ ಕೇಜ್ರಿವಾಲ್

    ಪತ್ರಿಕಾಗೋಷ್ಟಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ರಕ್ಷಿತ್, ಜಯರಾಂ ಶಾಂ ಸುಂದರ್, ರಾಜೇಶ್, ರವಿ, ಧನರಾಜ್, ಸುಖ್ ಪಾಲ್ ಪೊಳಲಿ, ರಕ್ಷಿತ್ ಉಪಸ್ಥಿತರಿದ್ದರು. ಇದನ್ನೂ ಓದಿ: ಮೂರು ಜಿಲ್ಲೆಗಳ ಕಾಡಾನೆ ಹಾವಳಿ ತಡೆಗೆ ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ: ಈಶ್ವರ್ ಖಂಡ್ರೆ

  • ಪಂಚೆಯಲ್ಲಿಯೇ ಓಡಿ ಬಿದ್ರು ಸಚಿವರು: ವಿಡಿಯೋ

    ಪಂಚೆಯಲ್ಲಿಯೇ ಓಡಿ ಬಿದ್ರು ಸಚಿವರು: ವಿಡಿಯೋ

    ಮೈಸೂರು: ಪಂಚೆಯಲ್ಲೇ ಓಡುತ್ತಿದ್ದ ಉನ್ನತ ಶಿಕ್ಷಣ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ರಸ್ತೆ ಮಧ್ಯದಲ್ಲಿಯೇ ಬಿದ್ದಿದ್ದಾರೆ. ಅದೃಷ್ಟವಶಾತ್ ಸಚಿವರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ.

    ದಸರಾ ಹಿನ್ನೆಲೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಗರದ ಓವಲ್ಸ್ ಮೈದಾನದಲ್ಲಿ ಮ್ಯಾರಥಾನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಸಚಿವರಾದ ಸಾರಾ ಮಹೇಶ್ ಹಾಗೂ ಜಿ.ಟಿ.ದೇವೇಗೌಡ, ಶ್ರೀನಿವಾಸ್ ಮ್ಯಾರಥಾನ್‍ಗೆ ಚಾಲನೆ ನೀಡಿದರು.

    ಮ್ಯಾರಥಾನ್ ಚಾಲನೆ ಬಳಿಕ ಸಚಿವರು ಓಟಗಾರರ ಜೊತೆಗೆ ಸ್ಪರ್ಧೆ ನೀಡಲು ಮುಂದಾದರು. ಆದರೆ ಪಂಚೆ ಧರಿಸಿದ್ದ ಜಿ.ಟಿ.ದೇವೇಗೌಡ ಅವರು, ಪಂಚೆಯನ್ನು ಎರಡೂ ಕೈಯಲ್ಲಿ ಹಿಡಿದುಕೊಂಡು ವೇಗವಾಗಿ ಹೆಜ್ಜೆ ಹಾಕುತ್ತಿದ್ದರು. ಈ ವೇಳೆ ಕಾಲು ತೊಡರಾಗಿ ನೆಲಕ್ಕೆ ಬಿದ್ದಿದ್ದಾರೆ. ಅದೃಷ್ಟವಶಾತ್ ಯಾವುದೇ ಗಂಭೀರ ಗಾಯವಾಗಿಲ್ಲ. ಸಚಿವರು ಬೀಳುತ್ತಿದ್ದಂತೆ ಇಬ್ಬರು ಕ್ಯಾಮೆರಾ ಮೆನ್ ಹಾಗೂ ಒಬ್ಬರು ಮ್ಯಾರಥಾನ್ ಸ್ಪರ್ಧಿ ಅವರ ಕೈ ಹಿಡಿದು ಮೇಲೆತ್ತಿದ್ದಾರೆ.

    ಇದಕ್ಕೂ ಮುನ್ನ ಮ್ಯಾರಥಾನ್ ಉದ್ಘಾಟನೆಗೆ ಸಚಿವರಾದ ಜಿಟಿ ದೇವೇಗೌಡ ಮತ್ತು ಸಾರಾ ಮಹೇಶ್ ಒಂದೂವರೇ ಗಂಟೆ ತಡವಾಗಿ ಬಂದಿದ್ದರು. ಇದರಿಂಗಾಗಿ ಸ್ಪರ್ಧಿಗಳು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=rcI0vmfDiW0

  • ಮೈಸೂರು ದಸರಾ 2018: ಇಂದು ಹಾಫ್ ಮ್ಯಾರಥಾನ್ ಆಯೋಜನೆ!

    ಮೈಸೂರು ದಸರಾ 2018: ಇಂದು ಹಾಫ್ ಮ್ಯಾರಥಾನ್ ಆಯೋಜನೆ!

    ಮೈಸೂರು: ಮೈಸೂರು ದಸರಾದ ಹಿನ್ನೆಲೆ ದಿನವೂ ಒಂದೊಂದು ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿತ್ತು. ಇಂದು ಐದನೇ ದಿನವಾಗಿದ್ದು, ಮ್ಯಾರಥಾನ್ ಓಟ ಆಯೋಜನೆ ಮಾಡಲಾಗಿದೆ.

    ದಸರಾ ಹಿನ್ನೆಲೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹಾಗೂ ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಸಣ್ಣ ಕೈಗಾರಿಕೆ ಸಚಿವ ಶ್ರೀನಿವಾಸ್ ಮ್ಯಾರಥಾನ್‍ಗೆ ಚಾಲನೆ ನೀಡಿದರು. ಮ್ಯಾರಥಾನ್ ನಲ್ಲಿ ಮೈಸೂರಿನ ಜನತೆ ಭಾಗಿಯಾಗಿದ್ದಾರೆ. ಅಷ್ಟೇ ಅಲ್ಲದೇ ಮಕ್ಕಳು, ಯುವಕ, ಯುವತಿಯರು ಭಾಗಿಯಾಗಿದ್ದಾರೆ.

    ಮೈಸೂರಿನ ಓವಲ್ಸ್ ಮೈದಾನದಲ್ಲಿ ಮ್ಯಾರಥಾನ್ ಓಟವನ್ನು ಪ್ರಾರಂಭ ಮಾಡಲಾಗಿದ್ದು, ಮೈಸೂರಿನ ಪ್ರಮುಖ ರಸ್ತೆಯಲ್ಲಿ ಮ್ಯಾರಥಾನ್ ಓಟವನ್ನು ಏರ್ಪಡಿಸಲಾಗಿದೆ.

    ಮ್ಯಾರಥಾನ್ ಉದ್ಘಾಟನೆಗೆ ತಡವಾಗಿ ಬಂದ ಸಚಿವರ ವಿರುದ್ಧ ಮೈಸೂರಿಗರು ಅಸಮಾಧಾನ ಹೊರ ಹಾಕಿದ್ರು. ಬೆಳ್ಳಗ್ಗೆ ಆರು ಗಂಟೆಗೆ ಪ್ರಾರಂಭವಾಗಬೇಕಿದ್ದ ಮ್ಯಾರಥಾನ್ ಓಟ ಸಚಿವರಾದ ಜಿಟಿ ದೇವೇಗೌಡ ಮತ್ತು ಸಾರಾ ಮಹೇಶ್ ಒಂದೂವರೇ ಗಂಟೆ ತಡವಾಗಿ ಬಂದ ಕಾರಣ ಬಿಸಿಲಿನಲ್ಲಿ ಓಡಬೇಕಾ ಅಂತ ಮೈಸೂರಿಗರು ಆಕ್ರೋಶ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv