Tag: ಹಾರ್ದಿಕ್‌ಪಟೇಲ್

  • ಶ್ರೀರಾಮ, ಹಿಂದೂಗಳ ಮೇಲೆ ಕಾಂಗ್ರೆಸ್‌ಗೆ ಏಕಿಷ್ಟು ಕೋಪ – ಹಾರ್ದಿಕ್ ಪಟೇಲ್

    ಶ್ರೀರಾಮ, ಹಿಂದೂಗಳ ಮೇಲೆ ಕಾಂಗ್ರೆಸ್‌ಗೆ ಏಕಿಷ್ಟು ಕೋಪ – ಹಾರ್ದಿಕ್ ಪಟೇಲ್

    ಗಾಂಧಿನಗರ: ಈಚೆಗಷ್ಟೇ ಕಾಂಗ್ರೆಸ್‌ ಪಕ್ಷ ತೊರೆದ ಪಾಟಿದಾರ್ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್, ಸತತವಾಗಿ ಕಾಂಗ್ರೆಸ್ ವಿರುದ್ಧ ದಾಳಿ ನಡೆಸುತ್ತಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, ಅಯೋಧ್ಯೆಯಲ್ಲಿ ಶತಮಾನಗಳ ನಂತರ ಭಗವಾನ್ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ನಾವು ಹೆಮ್ಮೆ ಪಡಬೇಕು. ಆದರೂ ಕಾಂಗ್ರೆಸ್ ನಾಯಕರು ಭಗವಾನ್ ಶ್ರೀರಾಮನ ವಿರುದ್ಧ ಕೀಳು ಭಾವನೆಯ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಶ್ರೀರಾಮ ಮತ್ತು ಹಿಂದೂಗಳ ಮೇಲೆ ಕಾಂಗ್ರೆಸ್‌ಗೆ ಏಕಿಷ್ಟು ಕೋಪ ಎಂದೂ ಪ್ರಶ್ನಿಸಿದ್ದಾರೆ.

    ಕಾಂಗ್ರೆಸ್ ಜನರ ಭಾವನೆಗಳಿಗೆ ಧಕ್ಕೆ ತರುತ್ತಿದೆ. ಯಾವಾಗಲೂ ಹಿಂದೂಗಳ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ. ಹಿಂದೆಯೂ ನಾನು ಇದನ್ನೇ ಹೇಳಿದ್ದೆ. ಹಾಗಾಗಿ ರಾಮಮಂದಿರವನ್ನು ಶೀಘ್ರವಾಗಿ ನಿರ್ಮಿಸಬೇಕೆಂದು ಬಯಸುತ್ತೇನೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ

    ಸಾಮಾಜಿಕ ಜಾಲತಾಣದಲ್ಲಿ ಟಾರ್ಗೆಟ್: ಸದ್ಯ ಹಾರ್ದಿಕ್ ಪಟೇಲ್ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಇರುವ ಚಿತ್ರವನ್ನು ಹಂಚಿಕೊಂಡಿದ್ದು, ಹೇಳಲು ಇನ್ನೇನೂ ಉಳಿದಿಲ್ಲ ಎಂದು ಟ್ವೀಟ್ ಮಾಡಿರುವುದು ಕೆಂಗಣ್ಣಿಗೆ ಗುರಿಯಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಕೆಲವರು `ಹಾರ್ದಿಕ್ ಭಾಯ್, ನೀವು ತುಂಬಾ ವೇಗವಾಗಿ ಬದಲಾಗುತ್ತೀರಿ ಅಂದುಕೊಂಡಿರಲಿಲ್ಲ. ನೀವು ಕಪಿಲ್ ಮಿಶ್ರಾ ಆಗಲು ಬಯಸುತ್ತೀರೆಂದು ನಾನು ಒಪ್ಪುತ್ತೇನೆ’ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ

    ಹಾರ್ದಿಕ್ ಪಟೇಲ್ ಅವರು ಇದೇ ಮೇ 18 ರಂದು ಕಾಂಗ್ರೆಸ್ ಪಕ್ಷದ ಸ್ಥಾನ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ಪಕ್ಷವು ಕೇವಲ ಪ್ರತಿಭಟನೆಯ ರಾಜಕೀಯಕ್ಕೆ ಸೀಮಿತವಾಗಿದೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದು, ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾಗಾಂಧಿ ಅವರಿಗೆ ಹಂಚಿಕೊಂಡಿದ್ದರು.