Tag: ಹಾರ್ದಿಕ್‌ಪಾಂಡ್ಯ

  • ಮೆಕಾಯ್ ಮ್ಯಾಜಿಕ್, 2ನೇ T20ಯಲ್ಲಿ ವಿಂಡೀಸ್‌ಗೆ ರೋಚಕ ಜಯ – ಹೋರಾಡಿ ಸೋತ ಭಾರತ

    ಮೆಕಾಯ್ ಮ್ಯಾಜಿಕ್, 2ನೇ T20ಯಲ್ಲಿ ವಿಂಡೀಸ್‌ಗೆ ರೋಚಕ ಜಯ – ಹೋರಾಡಿ ಸೋತ ಭಾರತ

    ಟ್ರೆನಿನಾಡ್: ಬ್ರಾಂಡನ್ ಕಿಂಗ್ ಅವರ ಆಕರ್ಷಕ ಅರ್ಧ ಶತಕ ಹಾಗೂ ಒಬೆಡ್ ಮೆಕಾಯ್ ಅವರ ಮಾರಕ ಬೌಲಿಂಗ್ ನೆರವಿನಿಂದ ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ವಿಂಡೀಸ್ ರೋಚಕ ಜಯ ಸಾಧಿಸಿದೆ.

    ಇಲ್ಲಿನ ವಾರ್ನರ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ 2ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದ ವೆಸ್ಟ್ ಇಂಡೀಸ್, ಬ್ಯಾಟಿಂಗ್ ಮಾಡುವ ಅವಕಾಶವನ್ನು ಟೀಂ ಇಂಡಿಯಾಕ್ಕೆ ನೀಡಿತು. ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ 19.4 ಓವರ್‌ಗಳಲ್ಲಿ 138 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ರನ್‌ಗಳ ಗುರಿ ಬೆನ್ನತ್ತಿದ ವಿಂಡೀಸ್ ತಂಡ 19.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 141 ರನ್‌ಗಳಿಸಿ ರೋಚಕ ಜಯ ಸಾಧಿಸಿತು. ಇದನ್ನೂ ಓದಿ: Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

    ಅರಂಭದಿಂದಲೇ ಮಾರಕ ಬೌಲಿಂಗ್ ದಾಳಿ ಮಾಡಿದ ವಿಂಡೀಸ್ ತಂಡದ ಬೌಲರ್‌ಗಳು ಟೀಂ ಇಂಡಿಯಾದ ಯಾವೊಬ್ಬ ಆಟಗಾರರೂ ಸ್ಥಿರವಾಗಿ ಕ್ರೀಸ್‌ನಲ್ಲಿ ನಿಲ್ಲದಂತೆ ಕಟ್ಟಿಹಾಕಿದರು. ಪರಿಣಾಮವಾಗಿ 138 ರನ್‌ಗಳ ಸಾಧಾರಣ ಮೊತ್ತವನ್ನಷ್ಟೇ ಭಾರತ ಪೇರಿಸಲು ಸಾಧ್ಯವಾಯಿತು. ಈ ಮೊತ್ತವನ್ನು ರಕ್ಷಣೆ ಮಾಡಲು ಭಾರತೀಯ ಬೌಲರ್‌ಗಳು ಕೂಡ ಅಂತಿಮ ಹಂತದವರೆಗೂ ಹೋರಾಡಿದರಾದರೂ ಕೊನೆಯ ಹಂತದಲ್ಲಿ ವಿಂಡೀಸ್ ಗೆದ್ದು ಬೀಗಿದೆ. ಇದನ್ನೂ ಓದಿ: ಪದಕ ಗೆದ್ದಾಗಿದೆ ಇನ್ನಾದರೂ ಸಿನಿಮಾ ನೋಡು – ಚಿನ್ನದ ಹುಡುಗ ಅಚಿಂತ್‌ಗೆ ಮೋದಿ ಸಂದೇಶ

    ಮೆಕಾಯ್ ಮ್ಯಾಜಿಕ್: ಇನ್ನೂ ಭಾರತೀಯ ಬ್ಯಾಟಿಂಗ್ ವಿಭಾಗಕ್ಕೆ ದೊಡ್ಡ ಆಘಾತ ನೀಡಿದ್ದು ವೆಸ್ಟ್ ಇಂಡೀಸ್ ತಂಡದ ವೇಗಿ ಒಬೆದ್ ಮೆಕಾಯ್. ಪಂದ್ಯದ ಮೊದಲ ಎಸೆತವೇ ಭಾರತ ತಂಡಕ್ಕೆ ಆಘಾತ ನೀಡಿತು. ಪಂದ್ಯದ ಮೊದಲ ಎಸೆತದಲ್ಲಿಯೇ ಆರಂಭಿಕ ಆಟಗಾರ ರೋಹಿತ್ ಶರ್ಮಾ ವಿಕೆಟ್ ಉರುಳಿಸಿದರು. ತಮ್ಮ ಮುಂದಿನ ಓವರ್‌ನ ಮೊದಲ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ ವಿಕೆಟ್ ಪಡೆದರು. ಅದಾದ ಬಳಿಕ ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಆರ್.ಅಶ್ವಿನ್ ಹಾಗೂ ಭುವನೇಶ್ವರ್ ಕುಮಾರ್ ವಿಕೆಟ್ ಕಬಳಿಸಿ ಟೀಂ ಇಂಡಿಯಾವನ್ನು ಅಲ್ಪ ಮೊತ್ತದಲ್ಲೇ ಕಟ್ಟಿಹಾಕಿದರು. 4 ಓವರ್‌ಗಳಲ್ಲಿ ಕೇವಲ 17 ರನ್ ನೀಡಿದ ಮೆಕಾಯ್ 6 ವಿಕೆಟ್ ಗಳಿಸಿ ತಂಡದ ಗೆಲುವಿಗೆ ಕಾರಣರಾದರು.

    ಬ್ರೆಂಡನ್ ಕಿಂಗ್ ಅರ್ಧ ಶತಕ: ಅದರಂತೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ ಆರಂಭಿಕ ಆಟಗಾರ ಬ್ರೆಂಡನ್ ಕಿಂಗ್ ಜವಾಬ್ದಾರಿಯುತ ಅರ್ಧ ಶತಕ ಸಿಡಿಸಿ ತಂಡಕ್ಕೆ ನೆರವಾಗಿದ್ದಾರೆ. 52 ಎಸೆತಗಳನ್ನು ಎದುರಿಸಿದ ಬ್ರೆಂಡನ್ 68 ರನ್ (8 ಬೌಂಡರಿ, 2 ಸಿಕ್ಸರ್) ಗಳಿಸಿದರು. ಬಳಿಕ ಅಂತಿಮ ಹಂತದಲ್ಲಿ ಡೆವೋನ್ ಥೋಮಸ್ ಸ್ಪೋಟಕ ಪ್ರದರ್ಶನ ನೀಡಿ ಭಾರತದಿಂದ ಗೆಲುವನ್ನು ಕಸಿದರು. ಥೋಮರ್ 19 ಎಸೆತಗಳಲ್ಲಿ ಸ್ಪೋಟಕ 31 ರನ್ (1 ಬೌಂಡರಿ, 2 ಸಿಕ್ಸರ್) ಸಿಡಿಸಿದರು.

    ರೋಹಿತ್ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದ ನಂತರ ಸೂರ್ಯಕುಮಾರ್ ಯಾದವ್ 11, ಶ್ರೇಯಸ್ ಅಯ್ಯರ್ 10 ಗಳಿಸಿ ಪೆವಿಲಿಯನ್ ಸೇರಿದರು. ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ರಿಷಭ್‌ಪಂತ್ ಹಾಗೂ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದರು. ಸ್ಫೋಟಕ ಬ್ಯಾಟಿಂಗ್ ಆರಂಭಿಸಿದ ರಿಷಭ್ ಪಂತ್ 12 ಎಸೆಗಳಲ್ಲಿ 2 ಸಿಕ್ಸರ್ ಹಾಗೂ 1 ಬೌಂಡರಿಯೊಂದಿಗೆ 24 ರನ್ ಸಿಡಿಸಿದರೆ, ಹಾರ್ದಿಕ್ ಪಾಂಡ್ಯ 31 ಎಸೆತಗಳಲ್ಲಿ 31 ರನ್ (1 ಬೌಂಡರಿ, 2 ಸಿಕ್ಸರ್) ಸಿಡಿಸಿದರು. ಇವರಿಬ್ಬೆ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ 55 ರನ್‌ಗಳನ್ನು ಗಳಿಸಿತ್ತು. ನಂತರದಲ್ಲಿ ಬಂದ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಟೀಂ ಇಂಡಿಯಾ ಸೋಲನ್ನು ಎದುರಿಸಬೇಕಾಯಿತು.

    ಬೌಲಿಂಗ್‌ನಲ್ಲಿ ಅರ್ಶ್‌ದೀಪ್‌ ಸಿಂಗ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಹಾರ್ದಿಕ್ ಪಾಂಡ್ಯ, ಅವೇಶ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು. ಇದನ್ನೂ ಓದಿ: IND vs WI 2nd T20: ಎರಡು ಗಂಟೆ ತಡವಾಗಿ ಪಂದ್ಯ ಆರಂಭ – ಕಾರಣ ಮಾತ್ರ ಸಿಂಪಲ್

    ಸರಣಿ ಸಮಬಲ: ಇನ್ನು ಈ ಫಲಿತಾಂಶದಿಂದಾಗಿ 5 ಟಿ20 ಪಂದ್ಯಗಳ ಟಿ20 ಸರಣಿ ಈಗ 1-1ರಲ್ಲಿ ಸಮಬಲಗೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 2ನೇ ಓವರ್‌ನಿಂದಲೇ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದರೂ ಅತಿ ವೇಗವಾಗಿಯೇ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಾ ಸಾಗಿತು. ಐದು ಓವರ್‌ಗಳಲ್ಲಿ 48 ರನ್ ಗಳಿಸಿದ್ದ ಟೀಂ ಇಂಡಿಯಾ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಬಲಿಷ್ಠ ತಂಡಗಳ ಹಣಾ-ಹಣಿ ಇಂದು – ಐಪಿಎಲ್ ಪ್ರಿಯರಿಗೆ ಡಬಲ್ ಧಮಾಕ

    ಬಲಿಷ್ಠ ತಂಡಗಳ ಹಣಾ-ಹಣಿ ಇಂದು – ಐಪಿಎಲ್ ಪ್ರಿಯರಿಗೆ ಡಬಲ್ ಧಮಾಕ

    ಮುಂಬೈ: ತಲಾ 3 ಪಂದ್ಯಗಳನ್ನು ಗೆದ್ದು ವಿಶ್ವಾಸದಲ್ಲಿರುವ ಕನ್ನಡಿಗ ಮಯಾಂಕ್ ಅಗರ್ವಾಲ್ ನಾಯಕತ್ವದ ಕಿಂಗ್ಸ್ ಪಂಜಾಬ್ ಮತ್ತು ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಇಂದು ಸೆಣಸಲಿವೆ.

    ಸಂಜೆ 7.30ಕ್ಕೆ ನಡೆಯುವ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಹಾಲಿ ಚಾಂಪಿಯನ್ ಚೆನ್ನೈ ಸೂಪರ್‌ಕಿಂಗ್ಸ್ ತಂಡಗಳು ಹಣಾಹಣಿ ನಡೆಸಲಿವೆ. ಇದನ್ನೂ ಓದಿ: ಡಿಕೆ ಸ್ಫೋಟಕ ಫಿಫ್ಟಿ – ಕೊಹ್ಲಿ ಸ್ಟನ್ನಿಂಗ್ ಕ್ಯಾಚ್‌ – ಡೆಲ್ಲಿ ವಿರುದ್ಧ ಆರ್​ಸಿಬಿಗೆ 16 ರನ್‍ಗಳ ಜಯ

    IPL 2022 SRH (1)

    ಡಿ.ವೈ.ಪಾಟೀಲ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂಜಾಬ್ ಮತ್ತು ಎಸ್‌ಆರ್‌ಎಚ್ ನಡುವಿನ ಪಂದ್ಯವು ರೋಚಕ ಹಣಾಹಣಿಗೆ ಸಾಕ್ಷಿಯಾಗಲಿವೆ. ಎರಡೂ ತಂಡಗಳೂ ಈ ಟೂರ್ನಿಯಲ್ಲಿ ಸಿಹಿ, ಕಹಿಯನ್ನು ಸಮನಾಗಿ ಅನುಭವಿಸಿದ್ದು, 5ಕ್ಕೆ ತಲಾ 3 ಪಂದ್ಯಗಳಲ್ಲಿ ಜಯ ಸಾಧಿಸಿವೆ. ಈವರೆಗೆ 17 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 5 ಪಂದ್ಯಗಳಲ್ಲಿ ಪಂಜಾಬ್ ಹಾಗೂ 12 ಪಂದ್ಯಗಳಲ್ಲಿ ಹೈದರಾಬಾದ್ ಗೆಲುವು ಸಾಧಿಸಿದೆ.

    ಮೊದಲೆರಡು ಪಂದ್ಯಗಳಲ್ಲಿ ಸೋತ ನಂತರ ಹೈದ್ರಾಬಾದ್ ತಂಡವು ಸತತ 3 ಪಂದ್ಯಗಳಲ್ಲಿ ಜಯ ಸಾಧಿಸಿತು. ಬ್ಯಾಟಿಂಗ್ ಲಯಕ್ಕೆ ಮರಳಿರುವ ಜೇಸನ್ ರಾಯ್ ಮತ್ತು ಕೇನ್ ವಿಲಿಯಮ್ಸನ್ ತಂಡವನ್ನು ಮುನ್ನಡೆಸುತ್ತಿದ್ದರೆ, ಜೇಸನ್ ಹೋಲ್ಡರ್, ಭುವನೇಶ್ವರ್ ಕುಮಾರ್, ರಶೀದ್ ಖಾನ್ ಬೌಲಿಂಗ್‌ನಲ್ಲಿ ತಮ್ಮ ಪ್ರಾಬಲ್ಯ ಮೆರೆಯುತ್ತಾ ಗೆಲುವಿನ ಹಾದಿಗೆ ತರುತ್ತಿದ್ದಾರೆ.

    IPL 2022 CSK (1)

    ಪಂಜಾಬ್ ತಂಡವು ಆರ್‌ಸಿಬಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳನ್ನು ಸೋಲಿಸಿದೆ. ಅಲ್ಲದೆ ತಾನು ಸೋತ ಎರಡು ಪಂದ್ಯಗಳಲ್ಲಿಯೂ ಉತ್ತಮ ಪ್ರದರ್ಶನವನ್ನೇ ನೀಡಿತ್ತು. ಮಯಾಂಕ್ ಅಗರ್ವಾಲ್, ಶಿಖರ್ ಧವನ್, ಹೊಸಪ್ರತಿಭೆ ಜಿತೇಶ್ ಶರ್ಮಾ ಉತ್ತಮ ಲಯದಲ್ಲಿದ್ದಾರೆ. ಇದನ್ನೂ ಓದಿ: 7 ವಿಕೆಟ್‌ಗಳಿಂದ ಗೆದ್ದ ಟೀಂ ಇಂಡಿಯಾಗೆ ಶೇ.20ರಷ್ಟು ದಂಡ

    ಆಲ್‌ರೌಂಡರ್‌ಗಳ ಸವಾಲ್
    ಮೊದಲ ಬಾರಿಗೆ ಐಪಿಎಲ್ ನಾಯಕತ್ವದ ಹೊಣೆ ಹೊತ್ತಿರುವ ಭಾರತ ಕ್ರಿಕೆಟ್ ತಂಡದ ಇಬ್ಬರು ಆಲ್‌ರೌಂಡರ್‌ಗಳಾದ ರವೀಂದ್ರ ಜಡೇಜಾ ಮತ್ತು ಹಾರ್ದಿಕ್ ಪಾಂಡ್ಯ ನಾಯಕತ್ವದ ತಂಡಗಳು ಇಂದು ಮುಖಾಮುಖಿಯಾಗವೆ. ಗುಜರಾತ್ ಹೊಸ ತಂಡದ ಸೇರ್ಪಡೆಯಿಂದ ಇದೇ ಮೊದಲಬಾರಿಗೆ ತಂಡಗಳು ಮುಖಾಮುಖಿಯಾಗುತ್ತಿದ್ದು, ಪಂದ್ಯವು ಸಂಜೆ 7.30ಕ್ಕೆ ಪುಣೆಯಲ್ಲಿರುವ ಮಹಾರಾಷ್ಟç ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದನ್ನೂ ಓದಿ: ಅಯ್ಯರ್‌ಗೆ 12 ಲಕ್ಷ ದಂಡ – ಐಪಿಎಲ್‌ನಲ್ಲಿ ದಂಡ ಹಾಕೋದು ಯಾಕೆ?

    IPL 2022 SRH (1)

    ಬಲಿಷ್ಠ ತಂಡಗಳ ಪೈಕಿ ಈಗಾಗಲೇ ವೋಟಿಂಗ್‌ಪೋಲ್ ನಡೆಸಲಾಗುತ್ತಿದ್ದು, ಪಂಜಾಬ್ ಗೆಲುವಿಗೆ 19,764 ಮಂದಿ, ಎಸ್‌ಆರ್‌ಎಚ್‌ಗೆ 20,554 ಮಂದಿ ಬೆಂಬಲಿಸಿದ್ದಾರೆ. ಅಂತೆಯೇ ಗುಜರಾತ್ ಟೈಟನ್ಸ್‌ಗೆ 9,682 ಮಂದಿ ಪ್ರೋತ್ಸಾಹಿಸಿದ್ದು, ಚೆನ್ನೈ 10,618 ಜನರ ಬೆಂಬಲ ಗಳಿಸಿದೆ. ಚೆನ್ನೈ ಈಗಾಗಲೇ ಐಪಿಎಲ್ ಕ್ರಮಾಂಕದಲ್ಲಿ ಕೆಳಕ್ಕೆ ಕುಸಿದಿದ್ದು, ಪ್ಲೆ-ಆಫ್ ತಲುಪಲು ಮುಂದಿನ ಎಲ್ಲ ಪಂದ್ಯಗಳಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.

  • ಹೊಸ ತಂಡಗಳಿಗಿಂದು ಮೊದಲ ಪಂದ್ಯ – ಗೆಲುವು ಯಾರಿಗೆಂಬುದೇ ಕುತೂಹಲ?

    ಹೊಸ ತಂಡಗಳಿಗಿಂದು ಮೊದಲ ಪಂದ್ಯ – ಗೆಲುವು ಯಾರಿಗೆಂಬುದೇ ಕುತೂಹಲ?

    ಮುಂಬೈ: ಟಾಟಾ ಐಪಿಎಲ್-2022 ಟೂರ್ನಿಯ ೪ನೇ ಪಂದ್ಯದಲ್ಲಿ ಇದೇ ಮೊದಲ ಬಾರಿಗೆ ಸೇರ್ಪಡೆಗೊಂಡಿರುವ ಗುಜರಾತ್ ಟೈಟನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸೆಣಸಲಿವೆ.

    hardik

    ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದ್ದು, ಚೊಚ್ಚಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಶುಭಾರಂಭ ಮಾಡುವ ತವಕದಲ್ಲಿ ಎರಡೂ ತಂಡಗಳಿವೆ. ಇದನ್ನೂ ಓದಿ: ಸ್ವಿಸ್ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿ ಗೆದ್ದ ಪಿ.ವಿ ಸಿಂಧು

    ಉಭಯ ತಂಡಗಳಲ್ಲೂ ಬಲಿಷ್ಠ ಆಟಗಾರರಿದ್ದು, ಹಾರ್ದಿಕ್ ಪಾಂಡ್ಯ ಗುಜರಾತ್ ತಂಡವನ್ನು ಮತ್ತು ಕನ್ನಡಿಗ ಕೆ.ಎಲ್. ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ನ್ನು ಮುನ್ನಡೆಸಲಿದ್ದಾರೆ. ಈ ಋತುವಿನ ಟಿ-20 ಸಮರದಲ್ಲಿ ಹೊಸ ತಂಡಗಳಲ್ಲಿ ಕ್ರಿಕೆಟ್ ಪ್ರೇಮಿಗಳ ಚಿತ್ತ ನೆಟ್ಟಿದೆ. ಐಪಿಎಲ್-೨೦೨೨ರಲ್ಲಿ ಈ ಎರಡೂ ತಂಡಗಳೂ ಯಾವ ರೀತಿ ಎದುರಾಳಿಗಳಿಗೆ ಪೈಪೋಟಿ ನೀಡುತ್ತವೆ ಎಂಬ ಕುತೂಹಲವೂ ಇದೆ.

    KLH

    ಗುಜರಾತ್ ಟೈಟನ್ಸ್ ನಲ್ಲಿ ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಮಾಡ್ಯೂ ವಾಡೆ( ವಿಕೆಟ್ ಕೀಪರ್), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ರಾಹುಲ್ ತಿವಾಟಿಯಾ, ವರುಣ್ ಅರೋನ್, ರಷೀದ್ ಖಾನ್, ಮೊಹಮ್ಮದ್ ಶಮಿ, ಲಾಕೀ ಫರ್ಗುಸನ್ ಕಣದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ನಲ್ಲಿ ಕೆ.ಎಲ್.ರಾಹುಲ್ (ನಾಯಕ), ಮನನ್ ವೋರಾ, ಎವಿನ್ ಲೆವಿಸ್, ಮನೀಷ್ ಪಾಂಡೆ, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಕೃಷ್ಣಪ್ಪ ಗೌತಮ್, ಡಸ್ಲಾಂಟಾ ಚಮೀರಾ, ಅಂಕಿತ್ ರಜಪೂತ್, ಅವೇಶ್ ಖಾನ್, ರವಿ ಬಿಷ್ಣೋಯ್ ಇರಲಿದ್ದಾರೆ. ಇದನ್ನೂ ಓದಿ: ಬಿಗ್ ಹಿಟ್ಟರ್‌ಗಳ ಪಂಚ್ ಹಿಟ್ – ಆರ್​ಸಿಬಿ ವಿರುದ್ಧ ಪಂಜಾಬ್‍ಗೆ ರೋಚಕ ಗೆಲುವು

    ಕನ್ನಡಿಗ ಕೆ.ಎಲ್.ರಾಹುಲ್ ಈವರೆಗೆ 94 ಪಂದ್ಯಗಳಲ್ಲಿ 3,273 ರನ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ 92 ಪಂದ್ಯಗಳಲ್ಲಿ 1,476 ರನ್ ಗಳಿಸಿದ್ದಾರೆ. ಆಪ್ತಮಿತ್ರರಾಗಿರುವ ಕೆ.ಎಲ್.ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ಸೆಣಸಲಿದ್ದು, ಗೆಲುವು ಯಾರಿಗೆ ಎಂಬ ಕುತೂಹಲ ನೀಡಿದೆ. ರಾಹುಲ್ ಈಗಾಗಲೇ ಹಲವು ಬಾರಿ ಕಿಂಗ್ಸ್ ಪಂಜಾಬ್ ತಂಡದ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದಾರೆ. ಆದರೆ ಮುಂಬೈ ಇಂಡಿಯನ್ಸ್ ನಲ್ಲಿ ಮಧ್ಯಂತರ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿಯುತ್ತಿದ್ದ ಹಾರ್ದಿಕ್ ಪಾಂಡ್ಯ ನೂತನ ತಂಡದ ಸೇರ್ಪಡೆಯಿಂದ ಇದೇ ಮೊದಲ ಬಾರಿಗೆ ಐಪಿಎಲ್‌ನಲ್ಲಿ ತಂಡದ ನಾಯಕನಾಗಿದ್ದು ತಂಡವನ್ನು ಹೇಗೆ ಮುನ್ನಡೆಸಲಿದ್ದಾರೆ ಎಂಬುದು ಸದ್ಯದ ಕುತೂಹಲವಾಗಿದೆ.