Tag: ಹಾರ್ದಿಕ್ ಪಟೇಲ್

  • ಬಿಜೆಪಿ ಸೇರಿದ್ದ ಪಟೀದಾರ್ ಚಳುವಳಿಯ ನಾಯಕ ಹಾರ್ದಿಕ್ ಪಟೇಲ್‍ಗೆ ಗೆಲುವು

    ಬಿಜೆಪಿ ಸೇರಿದ್ದ ಪಟೀದಾರ್ ಚಳುವಳಿಯ ನಾಯಕ ಹಾರ್ದಿಕ್ ಪಟೇಲ್‍ಗೆ ಗೆಲುವು

    ಗಾಂಧಿನಗರ: ಕಾಂಗ್ರೆಸ್ (Congress) ತೊರೆದು ಬಿಜೆಪಿ (BJP) ಸೇರಿದ್ದ ಪಟೀದಾರ್ ಚಳುವಳಿಯ ನಾಯಕ ಹಾರ್ದಿಕ್ ಪಟೇಲ್‍ಗೆ (Hardik Patel) ಗುಜರಾತ್ ಚುನಾವಣೆಯಲ್ಲಿ (Gujarat Election) ಭರ್ಜರಿ ಜಯ ದೊರೆತಿದೆ.

    ವಿರಾಮಗಾಮ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಹಾರ್ದಿಕ್ ಪಟೇಲ್ ಅವರು, ಕಾಂಗ್ರೆಸ್ ಲಖಾಭಾಯ್ ಭಾರವಾಡ್ ಅವರನ್ನು 50,000ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದರು. ಆರಂಭದ ಎಣಿಕೆ ಸುತ್ತುಗಳಿಂದಲೂ ಮುನ್ನಡೆ ಕಾಯ್ದುಕೊಂಡು ಬಂದಿದ್ದ ಪಟೇಲ್ ಅವರು ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.

    2015ರಲ್ಲಿ ಗುಜರಾತ್‍ನಲ್ಲಿ ಪಾಟೀದಾರ್ ಸಮುದಾಯದ ಮೀಸಲಾತಿ ಪರ ನಡೆದಿದ್ದ ಪ್ರತಿಭಟನೆಯ ನೇತೃತ್ವ ವಹಿಸುವ ಮೂಲಕ ದೊಡ್ಡ ಸಂಚಲನ ಉಂಟುಮಾಡಿದ್ದ ಹಾರ್ದಿಕ್ ಪಟೇಲ್, ಸಾಕಷ್ಟು ಲೆಕ್ಕಾಚಾರದ ಬಳಿಕ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಅವರನ್ನು ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

    ಆದರೆ ತಮಗೆ ಪಕ್ಷದಲ್ಲಿ ಯಾವುದೇ ಅಧಿಕಾರ ನೀಡುತ್ತಿಲ್ಲ. ಯಾವುದೇ ಸಭೆಗಳಿಗೆ ಆಹ್ವಾನ ನೀಡುತ್ತಿಲ್ಲ ಎಂದು ನಿರಂತರ ಆರೋಪ ಮಾಡುತ್ತಾ ಬಂದಿದ್ದ ಅವರು, ಕ್ರಮೇಣ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಲು ಆರಂಭಿಸಿದ್ದರು. 2022ರ ಮೇ ತಿಂಗಳಲ್ಲಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಕಾರಣ ನೀಡಿ ಉಚ್ಚಾಟನೆ ಮಾಡಲಾಗಿತ್ತು. ಜೂನ್ ತಿಂಗಳಲ್ಲಿ ಅವರು ಬಿಜೆಪಿ ಸೇರ್ಪಡೆಯಾಗಿದ್ದರು. ಇದನ್ನೂ ಓದಿ: ಆಪ್‌, ಓವೈಸಿ ಪಕ್ಷ ಕೊಟ್ಟ ಹೊಡೆತಕ್ಕೆ ಕಾಂಗ್ರೆಸ್‌ ಪಲ್ಟಿ

    ಈಗಾಗಲೇ ಗುಜರಾತ್‍ನಲ್ಲಿ ಬಿಜೆಪಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಸತತ 7ನೇ ಬಾರಿಗೆ ಗುಜರಾತ್ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಲಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಗೆದ್ದಿದ್ಹೇಗೆ?

    Live Tv
    [brid partner=56869869 player=32851 video=960834 autoplay=true]

  • ನಾನು ಒಬ್ಬ ಸಣ್ಣ ಸೈನಿಕ: ಕಮಲ ಹಿಡಿದ ಹಾರ್ದಿಕ್ ಪಟೇಲ್

    ನಾನು ಒಬ್ಬ ಸಣ್ಣ ಸೈನಿಕ: ಕಮಲ ಹಿಡಿದ ಹಾರ್ದಿಕ್ ಪಟೇಲ್

    ಗಾಂಧಿನಗರ: ಇತ್ತೀಚೆಗೆ ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿದ್ದ ಗುಜರಾತ್ ಯುವರಾಜಕಾರಣಿ ಹಾರ್ದಿಕ್ ಪಟೇಲ್ ಬಿಜೆಪಿ ಪಕ್ಷವನ್ನು ಸೇರಿದ್ದಾರೆ.

    ಗುಜರಾತ್ ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್ ಮತ್ತು ಹಲವು ಹಿರಿಯ ನಾಯಕರ ಸಮ್ಮುಖದಲ್ಲಿ ಹಾರ್ದಿಕ್ ಪಟೇಲ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಗಾಂಧಿನಗರದಲ್ಲಿರುವ ಬಿಜೆಪಿ ಪಕ್ಷದ ಕಚೇರಿಯ ಹೊರಗೆ ಹಾರ್ದಿಕ್ ಪಟೇಲ್ ಅವರನ್ನು ಬಿಜೆಪಿ ಸ್ವಾಗತಿಸುವ ಪೋಸ್ಟರ್ ಹಾಕಲಾಗಿತ್ತು. ಈ ಪೋಸ್ಟ್‌ನಲ್ಲಿ, ಸುಸ್ವಾಗತ ಹಾರ್ದಿಕ್ ಪಟೇಲ್ ಎಂದು ಬರೆಯಲಾಗಿತ್ತು. ಇದನ್ನೂ ಓದಿ: ಯೋಧರು ಪ್ರಯಾಣಿಸುತ್ತಿದ್ದ ವಾಹನ ಸ್ಫೋಟ: 3 ಸೈನಿಕರ ಸ್ಥಿತಿ ಗಂಭೀರ 

    ಹಾರ್ದಿಕ್ ಅವರು ಕಾರ್ಯಕ್ರಮದ ಹಿನ್ನೆಲೆ ಮನೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. ಈ ಫೋಟೋ ಮತ್ತು ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹಾರ್ದಿಕ್ ಅವರು ಪೂಜೆ ಮುಗಿಸಿ ಮನೆಯಿಂದ ತನ್ನ ಬೆಂಬಲಿಗರೊಂದಿಗೆ ಬಿಜೆಪಿ ಕಚೇರಿ ತೆರಳಲಿದ್ದರು.

    ಬಿಜೆಪಿ ಸೇರುತ್ತಿರುವ ಕುರಿತು ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ಪಟೇಲ್, ರಾಷ್ಟ್ರೀಯ, ರಾಜ್ಯ ಹಿತಾಸಕ್ತಿ, ಸಾರ್ವಜನಿಕ ಹಿತಾಸಕ್ತಿ ಮತ್ತು ಸಾಮಾಜಿಕ ಹಿತಾಸಕ್ತಿ ಜೊತೆಗೆ ಹೊಸ ಅಧ್ಯಾಯ ಪ್ರಾರಂಭಿಸಲಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಾಷ್ಟ್ರ ಸೇವೆಯಲ್ಲಿನ ಬೃಹತ್ ಕಾರ್ಯದಲ್ಲಿ ನಾನು ಸಣ್ಣ ಸೈನಿಕನಾಗಿ ಕೆಲಸ ಮಾಡುತ್ತೇನೆ ಎಂದು ಬರೆದುಕೊಂಡಿದ್ದರು. ಇದನ್ನೂ ಓದಿ: ಕಂದಮ್ಮನ ಎದುರೇ ಆತ್ಯಹತ್ಯೆ ಮಾಡಿಕೊಂಡ ತಾಯಿ – ಎರಡೂವರೆ ಗಂಟೆ ಅಮ್ಮ…ಎಂದು ಕಣ್ಣೀರಿಟ್ಟ ಮಗು 

    ಮೇ 18ರಂದು ಹಾರ್ದಿಕ್ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ್ದರು.

  • ಕಾಂಗ್ರೆಸ್‍ಗೆ ಗುಡ್ ಬೈ ಹೇಳಿದ್ದ ಹಾರ್ದಿಕ್ ಪಟೇಲ್ ಶೀಘ್ರವೇ ಬಿಜೆಪಿಗೆ ಸೇರ್ಪಡೆ

    ಕಾಂಗ್ರೆಸ್‍ಗೆ ಗುಡ್ ಬೈ ಹೇಳಿದ್ದ ಹಾರ್ದಿಕ್ ಪಟೇಲ್ ಶೀಘ್ರವೇ ಬಿಜೆಪಿಗೆ ಸೇರ್ಪಡೆ

    ಗಾಂಧೀನಗರ: ಗುಜರಾತ್ ಕಾಂಗ್ರೆಸ್‍ನ ಮಾಜಿ ಕಾರ್ಯಾಧ್ಯಕ್ಷ ಮತ್ತು ಪಾಟಿದಾರ್ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್ ಜೂನ್ 2ರಂದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಲಿದ್ದಾರೆ.

    ಪಶ್ಚಿಮ ರಾಜ್ಯದಲ್ಲಿ ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್ ತೊರೆದ ಕೆಲವೇ ದಿನಗಳಲ್ಲಿ ಬಿಜೆಪಿ ಸೇರುತ್ತಿರುವ ಹಾರ್ದಿಕ್ ಪಟೇಲ್ ಅವರ ನಿರ್ಧಾರವು ಗುಜರಾತ್ ವಿಧಾನಸಭೆ ಚುನಾವಣೆಗೂ ಮುಂಚಿತವಾಗಿಯೇ ಮಹತ್ವ ಪಡೆದುಕೊಂಡಿದೆ.

    ಕೆಲವು ದಿನಗಳಿಂದ ಹಾರ್ದಿಕ್ ಪಟೇಲ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಳ್ಳುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿತ್ತು. ಆದರೆ ಈ ಊಹಾಪೋಹಗಳನ್ನು ನಿರಾಕರಿಸಿ, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಬಗ್ಗೆ ಆಮ್ ಆದ್ಮಿ ಪಕ್ಷದ ವಿರುದ್ಧ ಕಿಡಿಕಾರಿದ್ದರು. ನಾನು ಬಿಜೆಪಿ ಸೇರುವುದಿಲ್ಲ. ಒಂದು ವೇಳೆ ಸೇರಿದರೆ ನಿಮಗೆ ತಿಳಿಸುತ್ತೇನೆ ಎಂದು ಭಾನುವಾರ ಹೇಳಿದ್ದರು. ಇದನ್ನೂ ಓದಿ: ಪಠ್ಯದಲ್ಲಿ ಬಸವಣ್ಣನ ವಿಚಾರಕ್ಕೆ ಧಕ್ಕೆ – ಪಂಡಿತಾರಾದ್ಯ ಶ್ರೀಗಳಿಂದ ಹೋರಾಟದ ಎಚ್ಚರಿಕೆ

    ಇದೀಗ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಬರೆದಿರುವ ಹಾರ್ದಿಕ್ ಪಟೇಲ್ ಅವರು, ಕಾಂಗ್ರೆಸ್ ಪಕ್ಷ ಈ ಬಾರಿಯ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದ್ದಾರೆ. ಜೊತೆಗೆ ಪಕ್ಷವು ದೇಶದಲ್ಲಿನ ಕೆಲವು ಪ್ರಮುಖ ವಿಷಯಗಳ ಬಗ್ಗೆ ತಡೆಹಿಡಿಯುವ ಪಾತ್ರವನ್ನು ಮಾತ್ರ ವಹಿಸಿದೆ ಮತ್ತು ಎಲ್ಲವನ್ನು ವಿರೋಧಿಸುವ ಮಟ್ಟಕ್ಕೆ ಇಳಿದಿದೆ ಎಂದು ತಿಳಿಸಿದ್ದಾರೆ.

  • ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ ಹಾರ್ದಿಕ್ ಪಟೇಲ್

    ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ ಹಾರ್ದಿಕ್ ಪಟೇಲ್

    ಗಾಂಧಿನಗರ: ಗುಜರಾತ್ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವ ಹೊತ್ತಿನಲ್ಲೇ ಗುಜರಾತ್‌ನ ಕಾಂಗ್ರೆಸ್ ಯುವ ಮುಖಂಡ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

    ಮೇ 15 ರಂದು ಉದಯಪುರದಲ್ಲಿ ನಡೆದ ಕಾಂಗ್ರೆಸ್ ವರಿಷ್ಠರ ಮೂರು ದಿನಗಳ ಚಿಂತನ-ಮಂಥನ ಸಭೆಗೆ ಹಾರ್ದಿಕ್ ಪಟೇಲ್ ಗೈರಾಗಿದ್ದರು. ಈ ಘಟನೆಯ ಬೆನ್ನಲ್ಲೇ ಪಟೇಲ್ ಕಾಂಗ್ರೆಸ್ ತೊರೆದಿದ್ದಾರೆ. ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಹಾರ್ದಿಕ್ ಪಟೇಲ್ ರಾಜೀನಾಮೆಯ ನಿರ್ಧಾರ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಹೊಸ ಮದರಸಾಗಳಿಗೆ ಯಾವುದೇ ಅನುದಾನವಿಲ್ಲ

    ಈ ಕುರಿತು ಟ್ವೀಟ್ ಮಾಡಿರುವ ಹಾರ್ದಿಕ್ ಪಟೇಲ್, ನಾನು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ನಿರ್ಧಾರವನ್ನು ನನ್ನ ಸಹೋದ್ಯೋಗಿಗಳು ಮತ್ತು ಗುಜರಾತ್ ಜನ ಸ್ವಾಗತಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಈ ಹೆಜ್ಜೆಯಿಂದ ಭವಿಷ್ಯದಲ್ಲಿ ನಾನು ಗುಜರಾತ್‌ಗೆ ನಿಜವಾಗಿಯೂ ಉತ್ತಮ ಕೆಲಸಗಳನ್ನು ಮಾಡಲು ಸಾಧ್ಯವಾಗಲಿದೆ ಎಂದು ನಂಬುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಶ್ರೀಕೃಷ್ಣನ ಜನ್ಮಸ್ಥಳದಲ್ಲಿರೋ ಮಸೀದಿಯಲ್ಲಿ ಮುಸ್ಲಿಮರ ಪ್ರಾರ್ಥನೆಗೆ ನಿರ್ಬಂಧ ವಿಧಿಸಿ: ಕೋರ್ಟ್‌ಗೆ ಮನವಿ

    ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ. ಗುಜರಾತ್‌ನ ಪಾಟಿದಾರ್ ಸಮುದಾಯದ ಯುವ ಮುಖಂಡ ಹಾರ್ದಿಕ್ ಪಟೇಲ್ 2019 ರಲ್ಲಿ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಸೇರಿದ್ದರು.

    ಅವರು ಕಳೆದ ಕೆಲವು ವಾರಗಳಿಂದ ಗುಜರಾತ್ ಕಾಂಗ್ರೆಸ್ ಘಟಕದಲ್ಲಿ ಆಂತರಿಕ ಕಲಹದ ಬಗ್ಗೆ ದೂರು ನೀಡುತ್ತಿದ್ದರು.

  • ಟ್ವೀಟ್ ಬಯೋದಿಂದ ‘ಕೈ’ ಚಿಹ್ನೆ ಬಿಟ್ಟ ಹಾರ್ದಿಕ್ ಪಟೇಲ್

    ಟ್ವೀಟ್ ಬಯೋದಿಂದ ‘ಕೈ’ ಚಿಹ್ನೆ ಬಿಟ್ಟ ಹಾರ್ದಿಕ್ ಪಟೇಲ್

    ಗಾಂಧಿನಗರ: ಗುಜರಾತ್‍ನಲ್ಲಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಅವರು ತಮ್ಮ ಟ್ವಿಟ್ಟರ್ ಬಯೋದಿಂದ ಪಕ್ಷದ ಹೆಸರನ್ನು ಕೈಬಿಟ್ಟಿದ್ದಾರೆ. ಈ ಮೂಲಕ ಅವರು ಪಕ್ಷದಿಂದ ನಿರ್ಗಮಿಸುವ ಸುಳಿವು ನೀಡಿದ್ದಾರೆ.

    ಕಳೆದ ಕೆಲವು ವರ್ಷಗಳಿಂದ ಪಕ್ಷದಿಂದ ನಿರ್ಗಮಿಸಿದ ಕಾಂಗ್ರೆಸ್ ನಾಯಕರು ಸಾಮಾನ್ಯವಾಗಿ ತಮ್ಮ ಟ್ವಿಟ್ಟರ್ ಬಯೋವನ್ನು ಬದಲಾಯಿಸುವ ಮೂಲಕ ಪಕ್ಷ ಬಿಡುವ ಮೊದಲ ಸುಳಿವು ಬಿಟ್ಟುಕೊಡುತ್ತಾರೆ. ಅದೇ ರೀತಿ ಹಾರ್ದಿಕ್ ಅವರು ರಾಜ್ಯದಲ್ಲಿ ಕೆಲವೇ ತಿಂಗಳುಗಳಲ್ಲಿ ಚುನಾವಣೆ ಇದ್ದು, ಈಗ ಟ್ವೀಟ್ ಬಯೋದಿಂದ ಹೆಸರು ತೆಗೆದಿರುವುದು ಎಲ್ಲರಲ್ಲಿ ಅನುಮಾನ ಮೂಡಿಸಿದೆ. ಇದನ್ನೂ ಓದಿ: ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಬೊಮ್ಮಾಯಿ ನೇತ್ರತ್ವದಲ್ಲಿ ಚುನಾವಣೆ: ನಳಿನ್ 

    2019ರಿಂದಲೂ ಪಕ್ಷಕ್ಕಾಗಿ ದುಡಿಯುತ್ತಿರುವ 28 ವರ್ಷದ ಪಟೇಲ್ ಅವರನ್ನು ಗುಜರಾತ್‍ನಲ್ಲಿ ಕಾಂಗ್ರೆಸ್ ನಾಯಕರು ನಿರ್ಲಕ್ಷಿಸಿದ್ದಾರೆ. ಅದಕ್ಕೆ ಅವರು ಕೈ ಪಕ್ಷ ಬಿಡಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

    ಅಲ್ಲದೇ ಕಳೆದ ತಿಂಗಳ ಹಿಂದೆ ಹಾರ್ದಿಕ್ ಪಟೇಲ್ ಅವರು, ಬಿಜೆಪಿಯಲ್ಲಿ ಕೆಲವು ವಿಷಯಗಳು ಒಳ್ಳೆಯದು ಇವೆ. ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕರಿಗೆ ತಲೆ ಬಿಸಿಮಾಡಿಸಿದ್ದರು.

    ರಾಜಕೀಯವಾಗಿ ಬಿಜೆಪಿ ತೆಗೆದುಕೊಂಡ ಇತ್ತೀಚಿನ ನಿರ್ಧಾರಗಳು ಚೆನ್ನಾಗಿವೆ. ಒಳ್ಳೆಯ ಕ್ರಮಗಳನ್ನು ತೆಗೆದುಕೊಳ್ಳುವ ಶಕ್ತಿ ಅವರಿಗಿದೆ ಎಂದು ನಾವು ಒಪ್ಪಿಕೊಳ್ಳಬೇಕು. ಅವರ ಪರವಾಗಿ ನಿಲ್ಲದೆ ಅಥವಾ ಅವರನ್ನು ಹೊಗಳದೆ, ನಾವು ಕನಿಷ್ಠ ಸತ್ಯವನ್ನು ಒಪ್ಪಿಕೊಳ್ಳಬಹುದು ಎಂದು ನಾನು ನಂಬುತ್ತೇನೆ ಎಂದು ಏಪ್ರಿಲ್ 22 ರಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದರು.

    ಬಿಜೆಪಿ ಜೊತೆ ಪಕ್ಷ ಬದಲಾಯಿಸುವ ಕುರಿತು ಮಾತನಾಡಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇಲ್ಲ, ನಾನು ಯಾವುದೇ ಮಾತುಕತೆ ಮಾಡಿಲ್ಲ. ನಾನು ಬಿಜೆಪಿಯ ಬಗ್ಗೆ ಯೋಚಿಸುವುದಿಲ್ಲ. ನಾನು ಬಿಜೆಪಿಯೊಂದಿಗೆ ಮಾತನಾಡುವುದಿಲ್ಲ. ಚರ್ಚೆಯು ಗುಜರಾತ್ ಜನರ ಬಗ್ಗೆ ಮತ್ತು ಜನರ ಹಿತಾಸಕ್ತಿಗಳ ಬಗ್ಗೆ ಮಾತ್ರ. ನಾನು ಅವರಿಗೆ ಏನಾದರೂ ಒಳ್ಳೆಯದನ್ನು ಮಾಡಬೇಕು ಎಂದು ಹೇಳಿದ್ದರು. ಇದನ್ನೂ ಓದಿ: ಪೊಲೀಸರೊಂದಿಗೆ ಹಾಡಿ ಕುಣಿದ ಹ್ಯಾಟ್ರಿಕ್ ಹೀರೋ : ‘ಟಗರು-2’ ಸುಳಿವು ಕೊಟ್ಟ ಶಿವಣ್ಣ 

    ಕೆಲವು ವರದಿಗಳ ಪ್ರಕಾರ ಅವರು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಾರ್ಟಿ(ಎಎಪಿ)ಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಸೂಚಿಸಲಾಗುತ್ತಿದೆ. ಇದು ಕಾಂಗ್ರೆಸ್‍ಗೆ ಹೋಲಿಸಿದರೆ ಗುಜರಾತ್‍ನಲ್ಲಿ ಉತ್ತಮ ಪ್ರತಿಪಕ್ಷವಾಗಿದೆ.

  • ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ತಂದೆ ಕೊರೊನಾಗೆ ಬಲಿ

    ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ತಂದೆ ಕೊರೊನಾಗೆ ಬಲಿ

    ಅಹಮದಾಬಾದ್: ಕೋವಿಡ್-19 ಸೋಂಕಿಗೆ ತುತ್ತಾಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಅವರ ತಂದೆ ಭಾನುವಾರ ಮೃತಪಟ್ಟಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ಹೇಳಿದ್ದಾರೆ.

    ಮುಖ್ಯಮಂತ್ರಿ ವಿಜಯ್ ರೂಪಾನಿ ಪಟೇಲ್ ಜೊತೆಗೆ ಫೋನ್‍ನಲ್ಲಿ ಮಾತನಾಡಿ ಸಂತಾಪ ಸೂಚಿಸಿದ್ದಾರೆ ಎಂದು ಸರ್ಕಾರದ ಹೇಳಿಕೆಯೊಂದರಲ್ಲಿ ತಿಳಿಸಲಾಗಿದೆ.

    ಅಹಮದಾಬಾದಿನ ಯುಎನ್ ಮೆಹ್ತಾ ಆಸ್ಪತ್ರೆಯಲ್ಲಿ ಕೋವಿಡ್-19 ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಹಾರ್ದಿಕ್ ಪಟೇಲ್ ಅವರ ತಂದೆ ಭರತ್ ಪಟೇಲ್ ಇಂದು ಬೆಳಗ್ಗೆ ಮೃತಪಟ್ಟಿರುವುದಾಗಿ ಭಾರತೀಯ ಯುವ ಕಾಂಗ್ರೆಸ್ ರಾಜ್ಯ ಘಟಕದ ಉಪಾಧ್ಯಕ್ಷ ನಿಖಿಲ್ ಸವಾನಿ ತಿಳಿಸಿರುವುದಾಗಿ ಸುದ್ದಿಸಂಸ್ಥೆ ವರದಿ ಮಾಡಿದೆ.

  • ಸಾರ್ವಜನಿಕ ಸಮಾರಂಭದಲ್ಲಿ ಹಾರ್ದಿಕ್ ಪಟೇಲ್‍ಗೆ ಕಪಾಳಮೋಕ್ಷ

    ಸಾರ್ವಜನಿಕ ಸಮಾರಂಭದಲ್ಲಿ ಹಾರ್ದಿಕ್ ಪಟೇಲ್‍ಗೆ ಕಪಾಳಮೋಕ್ಷ

    ಗಾಂಧಿನಗರ: ಗುಜರಾತ್ ಸ್ಟಾರ್ ಪ್ರಚಾರಕ, ಕಾಂಗ್ರೆಸ್ ಪಕ್ಷದ ನಾಯಕ ಹಾರ್ದಿಕ್ ಪಟೇಲ್‍ಗೆ ವ್ಯಕ್ತಿಯೊರ್ವ ಸಾರ್ವಜನಿಕ ಸಮಾರಂಭದಲ್ಲಿ ಕಪಾಳಮೊಕ್ಷ ಮಾಡಿರುವ ಘಟನೆ ಸುರೇಂದ್ರ ನಗರ್ ಜಿಲ್ಲೆಯಲ್ಲಿ ನಡೆದಿದೆ.

    ಹಾರ್ದಿಕ್ ಪಟೇಲ್ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ತರುಣ್ ಗಜ್ಜಿರ್ ಎಂದು ಗುರುತಿಸಲಾಗಿದ್ದು, ಪಟೇಲ್ ಸಾರ್ವಜನಿಕರ ಸಮಾರಂಭದ ಮೇಲೆ ಭಾಷಣ ಮಾಡುತ್ತಿದ್ದ ವೇಳೆ ಘಟನೆ ನಡೆದಿದೆ. ಏಕಾಏಕಿ ವೇದಿಕೆಯನ್ನು ಹತ್ತಿದ್ದ ತರುಣ್ ನೇರ ಹಾರ್ದಿಕ್ ಪಟೇಲ್ ಬಳಿ ತೆರಳಿ ಹಲ್ಲೆ ನಡೆಸಿದ್ದಾನೆ.

    ಹಾರ್ದಿಕ್ ಮೇಲೆ ಹಲ್ಲೆ ನಡೆಯುತ್ತಿದಂತೆ ಎಚ್ಚೆತ್ತ ಕಾರ್ಯಕರ್ತರು ಕೂಡಲೇ ವೇದಿಕೆ ಮೇಲೆ ಆಗಮಿಸಿ ಆತನನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಪೊಲೀಸರ ವಶಕ್ಕೆ ಒಪ್ಪಿಸಿ ದೂರು ನೀಡಿದ್ದಾರೆ. ವ್ಯಕ್ತಿಯ ವೇದಿಕೆಗೆ ಬಂದು ಹಲ್ಲೆ ನಡೆಸುತ್ತಿದಂತೆ ಹಾರ್ದಿಕ್ ಕ್ಷಣಕಾಲ ಶಾಕ್‍ಗೆ ಗುರಿಯಾದಂತೆ ಕಂಡು ಬಂತು.

    ಇತ್ತ ಪೊಲೀಸರು ತರುಣ್‍ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ತರುಣ್, ಪಾಟೀದರ್ ಸಮುದಾಯದ ಮೀಸಲಾತಿ ಹೋರಾಟ ನಡೆಯುವ ವೇಳೆ ನನ್ನ ಪತ್ನಿ ಗರ್ಭಿಣಿಯಾಗಿದ್ದಳು. ಆಸ್ಪತ್ರೆಗೆ ದಾಖಲಿಸಿದ್ದು ಕೂಡ ಬಂದ್ ನಡೆದಿದ್ದ ಕಾರಣ ಔಷಧಿಗಳು ಲಭ್ಯವಾಗದೇ ಸಮಸ್ಯೆ ಎದುರಿಸಿದ್ದೆ. ಅಲ್ಲದೇ ಪತ್ನಿ ಮಗುವಿಗೆ ಜನ್ಮ ನೀಡಿದ ಬಳಿಕವೂ ಆದೇ ಸಮಸ್ಯೆ ಮುಂದುವರಿದಿತ್ತು. ಅಂದೇ ಈತನಿಗೆ ಸೂಕ್ತ ಬುದ್ಧಿ ಕಲಿಸಲು ನಿರ್ಧರಿಸಿ ಈ ಕೃತ್ಯ ನಡೆಸಿದ್ದಾಗಿ ತಿಳಿಸಿದ್ದಾನೆ.

    ಇತ್ತ ಗುರುವಾರದಂದು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ ವೇಳೆ ಪಕ್ಷದ ವಕ್ತಾರ ಜಿವಿಎಲ್ ನರಸಿಂಹ ರಾವ್ ಅವರಿಗೆ ವ್ಯಕ್ತಿಯೊಬ್ಬ ಶೂ ಎಸೆದಿದ್ದ ಘಟನೆ ನಡೆದಿತ್ತು. ಮಾಲೆಂಗಾವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಅವರು ಬಿಜೆಪಿಗೆ ಸೇರ್ಪಡೆಯಾಗಿ ಭೋಪಾಲ್‍ನಿಂದ ಸ್ಪರ್ಧೆ ನಡೆಸುವ ವಿಚಾರ ಸಂಬಂಧ ಜಿವಿಎಲ್ ರಾವ್ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿತ್ತು.

    ಮಾರ್ಚ್ ತಿಂಗಳಿನಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದ ಹಾರ್ದಿಕ್ ಪಟೇಲ್ 2015ರಲ್ಲಿ ನಡೆದ ಪಾಟೀದಾರ್ ಮೀಸಲಾತಿ ಹೋರಾಟದ ಮೂಲಕ ಮುನ್ನೆಲೆಗೆ ಬಂದಿದ್ದರು.

  • ಮೋದಿ ತವರಲ್ಲಿ ಕಾಂಗ್ರೆಸ್ ರಣಕಹಳೆ

    ಮೋದಿ ತವರಲ್ಲಿ ಕಾಂಗ್ರೆಸ್ ರಣಕಹಳೆ

    – ಕಾಂಗ್ರೆಸ್ ಸೇರಲಿದ್ದಾರೆ ಹಾರ್ದಿಕ್ ಪಟೇಲ್

    ಅಹಮದಾಬಾದ್: ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರ ತವರು ಕ್ಷೇತ್ರದಿಂದಲೇ ಪ್ರಚಾರವನ್ನು ಆರಂಭಿಸಿದೆ. ಮೊದಲ ಬಾರಿಗೆ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಪ್ರಿಯಾಂಕ ಗಾಂಧಿ ಸಹ ಚುನಾವಣಾ ಪ್ರಚಾರದಲ್ಲಿ ಮೊದಲ ಭಾಷಣ ಮಾಡಲಿದ್ದಾರೆ. ಇದೇ ಸಮಾವೇಶದಲ್ಲಿ ಗುಜರಾತ್ ಪಾಟೇದಾರ್ ಮೀಸಲು ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

    ಇಂದು ದಂಡಿ ಸತ್ಯಾಗ್ರಹದ ದಿನವಾಗಿದ್ದರಿಂದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಬರಮತಿ ಆಶ್ರಮದಲ್ಲಿ ನಡೆದ ವಿಶೇಷ ಪ್ರಾರ್ಥನೆಯಲ್ಲಿ ಭಾಗಿಯಾದರು. ಪ್ರಿಯಾಂಕ ಗಾಂಧಿ ಇಂದು ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ.

    ದೇಶ ಸೇವೆ ಮಾಡುವ ಹಂಬಲದಿಂದ ನಾನು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದೇನೆ. ಯಾವುದೇ ಕಾನೂನಾತ್ಮಕ ತೊಂದರೆ ಆಗಿದಿದ್ದರೆ ಪಕ್ಷ ಹಾಗು ಕಾರ್ಯಕರ್ತರು ಒಪ್ಪಿಗೆ ಸೂಚಿಸಿದ್ರೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದೇನೆ ಎಂಬುದನ್ನು ಟ್ವೀಟ್ ಮೂಲಕ ಹಾರ್ದಿಕ್ ಪಟೇಲ್ ತಿಳಿಸಿದ್ದರು.

    ಪಟೇಲ್ ಸಮುದಾಯ ಮೀಸಲಾತಿ ಹೋರಾಟದ ವೇಳೆ ಬಿಜೆಪಿ ಶಾಸಕರೊಬ್ಬರ ಕಚೇರಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಹಾರ್ದಿಕ್ ಪಟೇಲ್‍ಗೆ ಸ್ಥಳೀಯ ವಿಸ್ನಾನಗರ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿತ್ತು. 2015 ಪಟೇಲ್ ಸಮುದಾಯ ಮೀಸಲಾತಿ ನೀಡಲು ಹಾರ್ದಿಕ್ ಪಟೇಲ್ ನೇತೃತ್ವದಲ್ಲಿ ಗುಜರಾತಿನಲ್ಲಿ ಬೃಹತ್ ಹೋರಾಟ ನಡೆದಿತ್ತು. ಈ ವೇಳೆ 3 ರಿಂದ 4 ಸಾವಿರ ಹೋರಾಟಗಾರರು ಸ್ಥಳೀಯ ಬಿಜೆಪಿ ಶಾಸಕ ರುಷಿಕೇಶ್ ಪಟೇಲ್ ಕಚೇರಿ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದರು. ಪ್ರಕರಣಕ್ಕೆ ಸಂಬಂಧಿದಂತೆ ಹಾರ್ದಿಕ್ ಪಟೇಲ್ ಸೇರಿದಂತೆ 17 ಮಂದಿ ಮೇಲೆ ಪ್ರಕರಣ ದಾಖಲಿಸಿ ಪೊಲೀಸರು ಚಾರ್ಜ್‍ಶೀಟ್ ಸಲ್ಲಿಸಿದ್ದರು.

    ಹಾರ್ದಿಕ್ ಪಟೇಲ್ ಜೈಲು ಶಿಕ್ಷೆಗೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದರೂ, ದೋಷಾರೋಪದಿಂದ ಮುಕ್ತವಾಗಿಲ್ಲ. ಹೀಗಾಗಿ ಹಾರ್ದಿಕ್ ಪಟೇಲ್ ಚುನಾವಣೆಗೆ ಸ್ಪರ್ಧಿಸಲು ಕಾನೂನು ತೊಡಕಾಗುವ ಸಾಧ್ಯತೆಗಳಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಾರ್ದಿಕ್ ಪಟೇಲ್‍ಗೆ 2 ವರ್ಷ ಜೈಲು

    ಹಾರ್ದಿಕ್ ಪಟೇಲ್‍ಗೆ 2 ವರ್ಷ ಜೈಲು

    ಗಾಂಧಿನಗರ: ಪಟೇಲ್ ಸಮುದಾಯ ಮೀಸಲಾತಿ ಹೋರಾಟದ ವೇಳೆ ಬಿಜೆಪಿ ಶಾಸಕರೊಬ್ಬರ ಕಚೇರಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಹಾರ್ದಿಕ್ ಪಟೇಲ್‍ಗೆ ಸ್ಥಳೀಯ ವಿಸ್ನಾನಗರ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿದೆ.

    ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಹಾರ್ದಿಕ್ ಪಟೇಲ್ ದೋಷಿ ಎಂದು ತೀರ್ಪು ನೀಡಿದೆ. 2015 ರಲ್ಲಿ ಮೀಸಲಾತಿ ಹೋರಾಟದ ಹೆಸರಲ್ಲಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪ ಸಾಬೀತಾಗಿದ್ದು ಹಾರ್ದಿಕ್ ಜೊತೆ ಪಟೇಲ್ ಸಮುದಾಯದ ಇಬ್ಬರು ನಾಯಕರಿಗೆ ಸಮಾನ ಶಿಕ್ಷೆಯಾಗಿದೆ.

    ಏನಿದು ಪ್ರಕರಣ?
    2015 ಪಟೇಲ್ ಸಮುದಾಯ ಮೀಸಲಾತಿ ನೀಡಲು ಹಾರ್ದಿಕ್ ಪಟೇಲ್ ನೇತೃತ್ವದಲ್ಲಿ ಗುಜರಾತಿನಲ್ಲಿ ಬೃಹತ್ ಹೋರಾಟ ನಡೆದಿತ್ತು. ಈ ವೇಳೆ 3 ರಿಂದ 4 ಸಾವಿರ ಹೋರಾಟಗಾರರು ಸ್ಥಳೀಯ ಬಿಜೆಪಿ ಶಾಸಕ ರುಷಿಕೇಶ್ ಪಟೇಲ್ ಕಚೇರಿ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದರು. ಪ್ರಕರಣಕ್ಕೆ ಸಂಬಂಧಿದಂತೆ ಹಾರ್ದಿಕ್ ಪಟೇಲ್ ಸೇರಿದಂತೆ 17 ಮಂದಿ ಮೇಲೆ ಪ್ರಕರಣ ದಾಖಲಿಸಿ ಪೊಲೀಸರು ಚಾರ್ಜ್‍ಶೀಟ್ ಸಲ್ಲಿಸಿದ್ದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾರ್ದಿಕ್ ಪಟೇಲ್ ಬಂಧನ ಕೂಡ ಆಗಿತ್ತು. ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು ಹಾರ್ದಿಕ್ ಹೊರಬಂದಿದ್ದರು. ಈ ವೇಳೆ ಪ್ರಕರಣದಲ್ಲಿ ತೀರ್ಪು ತಮ್ಮ ಪರ ಬರುತ್ತದೆ ಎಂದು ಪಟೇಲ್ ಸಮುದಾಯದ ಮೀಸಲಾತಿ ಹೋರಾಟ ಕಾರ್ಯಕರ್ತರಿಗೆ ಆಶ್ವಾಸನೆ ನೀಡಿದ್ದರು. ಆದರೆ ಹೋರಾಟದ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಹಾರ್ದಿಕ್ ಪಟೇಲ್ ಗೆ ವಿಸ್ನಾನಗರ್ ಜಿಲ್ಲೆಯನ್ನು ಪ್ರವೇಶ ಮಾಡದಂತೆ ನಿಷೇಧ ಸಹ ವಿಧಿಸಿತ್ತು. ಬಳಿಕ ಗುಜರಾತ್ ಚುನಾವಣೆಯ ಸಮಯದಲ್ಲಿ ನಿಷೇಧವನ್ನು ತೆರವುಗೊಳಿಸಿತ್ತು.

     

  • ಚುನಾವಣೆಗೂ ಮುನ್ನ ರಾಹುಲ್ ಭೇಟಿ ಮಾಡದೇ ತಪ್ಪು ಮಾಡಿದೆ: ಹಾರ್ದಿಕ್ ಪಟೇಲ್

    ಚುನಾವಣೆಗೂ ಮುನ್ನ ರಾಹುಲ್ ಭೇಟಿ ಮಾಡದೇ ತಪ್ಪು ಮಾಡಿದೆ: ಹಾರ್ದಿಕ್ ಪಟೇಲ್

    ಮುಂಬೈ: ಗುಜರಾತ್ ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ಅವರನ್ನು ನಾನು ಭೇಟಿ ಮಾಡದೇ ತಪ್ಪು ಮಾಡಿದೆ ಎಂದು ಪಟೇಲ್ ಮೀಸಲಾತಿ ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಹೇಳಿದ್ದಾರೆ.

    ಖಾಸಗಿ ಮಾಧ್ಯಮ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಹಾರ್ದಿಕ್, ಒಂದು ವೇಳೆ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತಿದ್ದರೆ ಪ್ರತಿಪಕ್ಷ ಇಂದು ಅಧಿಕಾರಕ್ಕೆ ಏರುತಿತ್ತು. ಬಿಜೆಪಿಗೆ 99 ಸ್ಥಾನಗಳು ಸಿಗುವ ಬದಲು ಕೇವಲ 79ರಲ್ಲಿ ಮಾತ್ರ ಗೆಲ್ಲುತಿತ್ತು ಎಂದು ತಿಳಿಸಿದರು.

    ಮಮತಾ ಬ್ಯಾನರ್ಜಿ, ನಿತೀಶ್ ಕುಮಾರ್ ಮತ್ತು ಶಿವಸೇನಾ ಅಧ್ಯಕ್ಷ ಉದ್ದವ್ ಠಾಕ್ರೆ ಅವರನ್ನ ಬಹಿರಂಗವಾಗಿ ಭೇಟಿ ಮಾಡಿದ್ದೇನೆ. ನನಗೆ ರಾಹುಲ್ ಗಾಂಧಿಯವರ ಭೇಟಿಯಲ್ಲೂ ಯಾವುದೇ ಸಮಸ್ಯೆ ಇಲ್ಲ ಎಂದರು.

    2017ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 99 ಸ್ಥಾನಗಳಲ್ಲಿ ಗೆದ್ದಿದ್ದರೆ 77 ಸ್ಥಾನಗಳನ್ನು ಗೆದ್ದುಕೊಂಡಿತ್ತು.