Tag: ಹಾಲಶ್ರೀ ಸ್ವಾಮೀಜಿ

  • ಹೈದರಾಬಾದ್‍ನಲ್ಲಿ ಹಾಲಶ್ರೀ ಅಡಗಿರುವ ಶಂಕೆ – ಬಂಧನಕ್ಕೆ ತೆರಳಿದ ಸಿಸಿಬಿ ಟೀಂ

    ಹೈದರಾಬಾದ್‍ನಲ್ಲಿ ಹಾಲಶ್ರೀ ಅಡಗಿರುವ ಶಂಕೆ – ಬಂಧನಕ್ಕೆ ತೆರಳಿದ ಸಿಸಿಬಿ ಟೀಂ

    ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಅವರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚಿಸಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ (Chaitra Kundapur) ಗ್ಯಾಂಗ್‍ನ ತಲೆಮರೆಸಿಕೊಂಡಿರುವ ಆರೋಪಿ ಅಭಿನವ ಹಾಲಶ್ರೀ (Halashree) ಬಂಧನಕ್ಕೆ ಸಿಸಿಬಿ ತೀವ್ರ ಹುಡುಕಾಟ ಆರಂಭಿಸಿದೆ. ಆರೋಪಿ ಹೈದರಾಬಾದ್‍ನಲ್ಲಿ (Hyderabad) ಅಡಗಿರುವ ಶಂಕೆ ಇದ್ದು ಬಂಧನಕ್ಕೆ ಸಿಸಿಬಿ (CCB) ಅಧಿಕಾರಿಗಳು ಅಲ್ಲಿಗೆ ತೆರಳಿದ್ದಾರೆ.

    ತಲೆಮರೆಸಿಕೊಂಡಿರುವ ಹಾಲಶ್ರೀ ಪ್ರಕರಣದ ಮೂರನೇ ಆರೋಪಿ ಆಗಿದ್ದು, ಚೈತ್ರಾ ಬಂಧನದ ಬಳಿಕ ಯಾವುದೇ ಸುಳಿವಿಲ್ಲದಂತೆ ನಾಪತ್ತೆಯಾಗಿದ್ದರು. ಪ್ರಕರಣದಲ್ಲಿ ಸ್ವಾಮೀಜಿಯ ಕಾರು ಚಾಲಕ ನಿಂಗರಾಜ್‍ನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ಹಾಲಶ್ರೀ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಆರೋಪಿ ಅಡಗಿರುವ ಸುಳಿವಿಗಾಗಿ ಚಾಲಕನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಅಂದರ್‌ಗೂ ಮುನ್ನ ಬಚಾವ್ ಆಗಲು ಕಾರನ್ನೇ ಮುಚ್ಚಿಟ್ಟಿದ್ದ ಚೈತ್ರಾ ಕುಂದಾಪುರ!

    ಇನ್ನೂ ಸ್ವಾಮೀಜಿ ಮೈಸೂರಿನಲ್ಲಿ ಕಾರು ಬಿಟ್ಟು ಬಳಿಕ ಅಲ್ಲಿಂದ ಪರಾರಿಯಾಗಿದ್ದರು. ಪೊಲೀಸರ ಕಣ್ಣು ತಪ್ಪಿಸಲು ಕಾರಿನ ನಂಬರ್ ಪ್ಲೇಟ್ ತೆಗೆದು ಪ್ರಯಾಣಿಸಿದ್ದರು ಎಂದು ತಿಳಿದು ಬಂದಿದೆ. ಅಲ್ಲದೇ ಸ್ವಾಮೀಜಿಗಳ ಬಳಿ ನಾಲ್ಕು ಸಿಮ್‍ಗಳಿವೆ ಎನ್ನಲಾಗಿದೆ.

    ಸ್ವಾಮೀಜಿ ಆಗಾಗ ಸ್ಥಳ ಬದಲಾಯಿಸುತ್ತಿದ್ದು ಬಂಧನಕ್ಕೆ ಕಷ್ಟವಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳಾ ಸಂಘಟನೆಯಲ್ಲಿ ಹೆಂಡತಿ ಬ್ಯುಸಿ – ಬೇಸತ್ತ ಪತಿಯಿಂದ ಪತ್ನಿ, ಅತ್ತೆಯ ಭೀಕರ ಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉದ್ಯಮಿಗೆ ವಂಚನೆ ಪ್ರಕರಣ – ಕೇಸ್‌ ದಾಖಲಾಗುತ್ತಿದ್ದಂತೆ ಸ್ವಾಮೀಜಿ ನಾಪತ್ತೆ

    ಉದ್ಯಮಿಗೆ ವಂಚನೆ ಪ್ರಕರಣ – ಕೇಸ್‌ ದಾಖಲಾಗುತ್ತಿದ್ದಂತೆ ಸ್ವಾಮೀಜಿ ನಾಪತ್ತೆ

    ವಿಜಯನಗರ: ಎಂಎಲ್‌ಎ ಸೀಟು ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ವಿರುದ್ಧ ಕೇಸ್‌ ದಾಖಲಾಗುತ್ತಿದ್ದಂತೆ ಹಿರೇ ಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ (Halashree Swamiji) ನಾಪತ್ತೆಯಾಗಿದ್ದಾರೆ.

    ಬಿಜೆಪಿಯಿಂದ (BJP) ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಆರೋಪದ ಮೇರೆಗೆ ಬೆಂಗಳೂರಿನ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರಳನ್ನು (Chaithtra Kundapura) ಮಂಗಳವಾರ ರಾತ್ರಿ ಬಂಧಿಸಿದ್ದಾರೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಚೈತ್ರಾಗೆ ಆಶ್ರಯ ನೀಡಿದ್ದು ಕಾಂಗ್ರೆಸ್ ವಕ್ತಾರೆ

    ಚೈತ್ರಾ ಕುಂದಾಪುರ ಸೇರಿದಂತೆ 8 ಮಂದಿಯ ವಿರುದ್ಧ ಉದ್ಯಮಿ ಗೋವಿಂದ ಪೂಜಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ಮತ್ತೊಬ್ಬ 3ನೇ ಆರೋಪಿ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇ ಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ, ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.

    ಹಿಂದೂಪರ ಸಂಘಟನೆಗಳಲ್ಲಿ ಗುರುಸಿಕೊಂಡಿರುವ ಹಾಲಶ್ರೀ ವಂಚನೆ ಪ್ರಕರಣದಲ್ಲಿ A3 ಆರೋಪಿ ಆಗಿದ್ದಾರೆ. ಬೆಳಗಿನಿಂದ ಹಾಲಶ್ರೀ ಮೊಬೈಲ್ ಆಫ್ ಇದ್ದು, ಹಾಲ ಮಠಕ್ಕೂ ಬಾರದೇ ಅಜ್ಞಾತ ಸ್ಥಳಕ್ಕೆ ಸ್ವಾಮೀಜಿ ತೆರಳಿದ್ದಾರೆ. ಇದನ್ನೂ ಓದಿ: ಎಂಎಲ್‌ಎ ಟಿಕೆಟ್‌ಗಾಗಿ ಬರೋಬ್ಬರಿ 5 ಕೋಟಿ ಡೀಲ್ – ಉದ್ಯಮಿಗೆ ಚೈತ್ರಾ ಮೋಸ ಮಾಡಿದ್ದು ಹೇಗೆ? ಪೂರ್ಣ ಕಥೆ ಓದಿ

    ಕಳೆದ ಎರಡು ದಿನಗಳಿಂದ ಸ್ವಾಮೀಜಿ ಅವರು ಮಠಕ್ಕೆ ಬಂದಿಲ್ಲ.‌ ಚೈತ್ರಾ ಅವರ ಬಂಧನ ಬಳಿಕ ಸ್ವಾಮೀಜಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಸಿಸಿಬಿ ಪೊಲೀಸರು ಸ್ವಾಮೀಜಿಗಾಗಿ ಹುಡುಕಾಟ ನಡೆಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಲಶ್ರೀ ಸ್ವಾಮೀಜಿಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ

    ಹಾಲಶ್ರೀ ಸ್ವಾಮೀಜಿಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ

    ಬಳ್ಳಾರಿ: ಆಂಧ್ರ ಪ್ರದೇಶದ ಗುತ್ತಿ-ಅನಂತಪುರಂ ರಾಷ್ಟ್ರೀಯ ಹೆದ್ದಾರಿ ಬಳಿ ಹಾಲು ಮಠದ ಅಭಿನವ ಹಾಲಶ್ರೀ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ.

    ಜಿಲ್ಲೆಯ ಹುವಿನಹಡಗಲಿ ತಾಲೂಕಿನ ಹಿರೇ ಹಡಗಲಿಯಲ್ಲಿ ಹಾಲು ಮಠವಿದ್ದು, ಕೆಲಸದ ನಿಮಿತ್ತವಾಗಿ ಕಳೆದ ಎರಡು ದಿನಗಳ ಹಿಂದೆ ಹೈದರಾಬಾದ್‍ಗೆ ಸ್ವಾಮೀಜಿ ಅವರು ತೆರಳಿದ್ದರು. ಇಂದು ಬೆಳಗಿನ ಜಾವ ಕೆಲಸ ಮುಗಿಸಿಕೊಂಡು ಬಳ್ಳಾರಿಗೆ ಮರಳಿ ಬರುವಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ವಾಮೀಜಿಯವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಸ್ವಾಮೀಜಿ ಅವರ ಕಾರು ಚಾಲಕ ಗಂಭೀರ ಗಾಯಗೊಂಡಿದ್ದು, ಸ್ವಾಮೀಜಿ ಹಾಗೂ ಚಾಲಕ ಹೈದರಾಬಾದ್‍ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಅಪಘಾತಕ್ಕೆ ಲಾರಿ ಚಾಲಕನ ಅಜಾಗರುಕತೆಯೇ ಕಾರಣ ಎಂದು ತಿಳಿದು ಬಂದಿದ್ದು, ಅನಂತಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.