Tag: ಹಾಲಿನ ದರ

  • ಹಾವೇರಿ ಹಾಲು ಒಕ್ಕೂಟದಿಂದ ಹಾಲಿನ ದರ 3.50 ರೂ. ಇಳಿಕೆ!

    ಹಾವೇರಿ ಹಾಲು ಒಕ್ಕೂಟದಿಂದ ಹಾಲಿನ ದರ 3.50 ರೂ. ಇಳಿಕೆ!

    ಹಾವೇರಿ: ರಾಜ್ಯದಲ್ಲಿ ಸರ್ಕಾರ ಪ್ರತಿ ಲೀಟರ್ ಹಾಲಿಗೆ 4 ರೂ. ಏರಿಕೆ (Milk Price Hike) ಮಾಡಿ ಗ್ರಾಹಕರಿಗೆ ಶಾಕ್ ನೀಡಿತ್ತು. ಆದ್ರೆ ಹಾವೇರಿ ಜಿಲ್ಲಾ ಹಾಲು ಒಕ್ಕೂಟ ಸರ್ಕಾರಕ್ಕೆ ಸೆಡ್ಡು ಹೊಡೆದಿದೆ. ಪ್ರತಿ ಲೀಟರ್ ಹಾಲಿನ ದರ 3.50 ರೂ. ಇಳಿಕೆ ಮಾಡಿದೆ.

    ಮಾರ್ಚ್ 28 ರಿಂದ ಆದೇಶವನ್ನ ಜಾರಿಗೆ ಮಾಡಿದೆ. ಏಪ್ರೀಲ್ 1 ರಿಂದ ಪ್ರತಿ ಲೀಟರ್‌ಗೆ 4 ರೂಪಾಯಿ ಹೆಚ್ಚಿಸಲು ಕೆಎಂಎಫ್ (KMF) ನಿರ್ಧಾರ ಮಾಡಿದೆ. ಆದರೆ ಹಾವೇರಿ ಹಾಲು ಒಕ್ಕೂಟ ಮಾತ್ರ ಲೀಟರ್ ಹಾಲಿಗೆ 3.50 ರೂ.ಪಾಯಿ ಕಡಿಮೆ ಮಾಡಿ ಆದೇಶ ಮಾಡಿದೆ, ಇದು ರೈತರ ಆಕ್ರೋಶ ಕಾರಣವಾಗಿದೆ. ಇದನ್ನೂ ಓದಿ: Milk Price Hike | ಗ್ಯಾರಂಟಿ ಸರ್ಕಾರದ ಬಂದ ಮೇಲೆ ಯಾವುದು ಎಷ್ಟು ಏರಿಕೆ? ಮುಂದೆ ಏನೇನು ಶಾಕ್ ಸಿಗುತ್ತೆ?

    ಎಮ್ಮೆ ಹಾಲಿಗೆ ಲೀಟರ್‌ಗೆ 43 ರೂ. ನೀಡಲಾಗುತ್ತಿತ್ತು. ಹಸುವಿನ ಹಾಲಿಗೆ 30.50 ರೂಪಾಯಿ ನೀಡಲಾಗ್ತಿತ್ತು. ಆದರೆ ಆರ್ಥಿಕ ನಷ್ಟ ಉಂಟಾಗಿದೆ ಎಂಬ ಕಾರಣ ನೀಡಿ 3.50 ರೂಪಾಯಿ ಕಟ್ ಮಾಡಿದೆ. ಮಾರ್ಚ್ 27ರಂದೇ ಹಾವೆಮುಲ್‌ ಆದೇಶ ಮಾಡಿದೆ. ಇದರಿಂದ 43 ರೂ. ಇದ್ದ ಎಮ್ಮೆ ಹಾಲಿನ ದರ 39.50 ರೂ., 30.50 ರೂ. ಇದ್ದ ಹಸುವಿನ ಹಾಲಿನ ದರ 27 ರೂ.ಗಳಿಗೆ ಇಳಿಕೆಯಾಗಿದೆ. ಇದನ್ನೂ ಓದಿ: ರಾಜ್ಯದ ಜನತೆಗೆ ಕರೆಂಟ್‌ ಶಾಕ್‌ – ಫಿಕ್ಸೆಡ್ ಚಾರ್ಜ್ ದರ 25 ರೂ. ಏರಿಕೆ

    ಹಾಲು ಉತ್ಪನ್ನಗಳ ದರ ಕುಸಿತವಾಗಿದೆ. ಹಾಲು ಉತ್ಪಾದಕರಿಗೆ ಹೆಚ್ಚಿನ ದರ ನೀಡಿ ಒಕ್ಕೂಟಕ್ಕೆ ಆರ್ಥಿಕ ನಷ್ಟ ಉಂಟಾಗುತ್ತಿದೆ. ಒಕ್ಕೂಟದ ಆರ್ಥಿಕ ನಷ್ಟ ಕಡಿಮೆ ಮಾಡಲು ದರ ಕಡಿಮೆ ಮಾಡಲಾಗಿದೆ ಎಂದು ಹಾಲು ಒಕ್ಕೂಟ ನಿರ್ದೇಶಕರು ಆದೇಶ ಮಾಡಿದ್ದಾರೆ. ಆದರೆ ಜಿಲ್ಲೆಯ ಹಾಲು ಉತ್ಪಾದಕ ರೈತರು ಗ್ರಾಹಕರಿಗೆ 4 ಏರಿಕೆ ಮಾಡಿದ್ದಾರೆ. ಮೊದಲು ಕೊಡುವ ದರದಲ್ಲಿ ಇಳಿಕೆ ಮಾಡಿದ್ದು ಯಾವ ನ್ಯಾಯ ನಿಮ್ಮದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Exclusive | ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ ಕೇಸ್‌ – ಆಡಿಯೋದಲ್ಲಿ ಬಯಲಾಯ್ತು ಸಂಚಿನ ರಹಸ್ಯ

  • ಹಾಲಿನ ದರ ಏರಿಕೆ – ಇಂದು ಸಿಎಂ ಸಭೆಯಲ್ಲಿ ನಿರ್ಧಾರ ಸಾಧ್ಯತೆ!

    ಹಾಲಿನ ದರ ಏರಿಕೆ – ಇಂದು ಸಿಎಂ ಸಭೆಯಲ್ಲಿ ನಿರ್ಧಾರ ಸಾಧ್ಯತೆ!

    ಬೆಂಗಳೂರು: ರಾಜ್ಯ ಸರ್ಕಾರ ಉಚಿತ ಗ್ಯಾರಂಟಿಗಳನ್ನ ಘೋಷಿಸಿ ಅದರಲ್ಲಿ ಕೆಲವೊಂದನ್ನ ನೀಡುತ್ತಲೂ ಇದೆ. ಆದ್ರೆ ಯಾವಾಗ ಗ್ಯಾರಂಟಿ ಅನುಷ್ಠಾನಕ್ಕೆ ಬಂತೋ ಆಗಿನಿಂದ ಜನರ ಮೇಲೆ ದರ ಏರಿಕೆಯ ಬರೆ ಹಾಕುತ್ತಲೇ ಇದೆ. ಇದೀಗ ಹಾಲಿನ ದರ ಹೆಚ್ಚಳ (Milk Price Hike) ಮಾಡಲು ಸರ್ಕಾರ ಮುಂದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಈ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ಸಭೆ ಕರೆದಿದ್ದಾರೆ. ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ಹಾಗೂ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಸಂಬಂಧಪಟ್ಟ ಸಚಿವರೊಂದಿಗೆ ಸಭೆ ನಡೆಸಲಿದ್ದು, ಹಾಲಿನ ದರ ಏರಿಕೆ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ. ಇದನ್ನೂ ಓದಿ: ತುಮಕೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಶೀತಲ ಸಮರ; ಡಾ.ರಂಗನಾಥ್-ರಾಜಣ್ಣ ಕುಟುಂಬ ನಡುವೆ ವಾರ್

    ಮೇವು, ಆಹಾರ, ಕೂಲಿ ಸೇರಿ ಇತರೇ ಖರ್ಚುಗಳು ಹೆಚ್ಚಾಗಿರುವುದರಿಂದ ಪ್ರತಿ ಲೀ. ಹಾಲಿಗೆ 5 ರೂ. ನಂತೆ ದರ ಹೆಚ್ಚಳ ಮಾಡಲು ವಿವಿಧ ಹಾಲು ಒಕ್ಕೂಟಗಳು ಪಶುಸಂಗೋಪನೆ ಸಚಿವ ವೆಂಕಟೇಶ್ ಅವರಿಗೆ ಒತ್ತಾಯಿಸಿದ್ದವು. ಈ ಹಿನ್ನೆಲೆ ದರ ಹೆಚ್ಚಳ ಪ್ರಸ್ತಾಪವಾಗಿದ್ದು, ಸರ್ಕಾರದ ಅನುಮತಿ ಬಾಕಿಯಿದೆ. ಇದನ್ನೂ ಓದಿ: IPL 2025: ಗಾಯಕ್ವಾಡ್‌, ರಚಿನ್‌ ಫಿಫ್ಟಿ ಆಟ – ಮುಂಬೈ ವಿರುದ್ಧ ಚೆನ್ನೈಗೆ 4 ವಿಕೆಟ್‌ಗಳ ಜಯ

  • ಹಾಲಿನ ದರ 10 ರೂ. ಹೆಚ್ಚಳಕ್ಕೆ ಬೇಡಿಕೆ ಇದೆ: ಸಚಿವ ವೆಂಕಟೇಶ್

    ಹಾಲಿನ ದರ 10 ರೂ. ಹೆಚ್ಚಳಕ್ಕೆ ಬೇಡಿಕೆ ಇದೆ: ಸಚಿವ ವೆಂಕಟೇಶ್

    ಬೆಂಗಳೂರು: ಬಸ್ ಟಿಕೆಟ್ ದರ ಏರಿಕೆ ಬಳಿಕ ಸರ್ಕಾರ ಜನರಿಗೆ ಮತ್ತೊಂದು ಶಾಕ್ ನೀಡಲು ಸಿದ್ಧತೆ ನಡೆಸುತ್ತಿದೆ. ಶೀಘ್ರವೇ ಹಾಲಿನ ದರ ಏರಿಕೆಗೆ (Milk Price Hike) ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ (K Venkatesh) ಖುದ್ದು ಸುಳಿವು ನೀಡಿದ್ದಾರೆ.

    ಹಾಲಿನ ದರ ಏರಿಕೆ ಬಗ್ಗೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳ ಮಾಡಬೇಕು ಎಂದು ರೈತರ ಒತ್ತಾಯ ಇದೆ. ಯಾಕೆಂದರೆ ರೈತರು ಜಾನುವಾರುಗಳಿಗೆ ನೀಡುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ ಆಗಿದೆ. ಈ ಹಿನ್ನೆಲೆ ಹಾಲಿನ ದರ 10 ರೂ. ಏರಿಕೆ ಮಾಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ನಾವಿನ್ನೂ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ ಬಳಿಕ ಅಂತಿಮ ತೀರ್ಮಾನ ಮಾಡುತ್ತೇವೆ ಎಂದರು. ಇದನ್ನೂ ಓದಿ: ಪೀಣ್ಯ ಬಸವೇಶ್ವರ ಬಸ್ ನಿಲ್ದಾಣವಾಗುತ್ತಾ ಕಲ್ಯಾಣ ಮಂಟಪ, ಮಾಲ್?

    ರೈತರು ಹಾಲಿನ ಮೇಲೆ ಅವಲಂಬಿತರಾಗಿದ್ದಾರೆ. ದಿನೇ ದಿನೇ ಹಾಲಿನ ಉತ್ಪಾದನೆ ಹೆಚ್ಚಳ ಆಗುತ್ತಿದೆ. ರೈತರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು. 5 ರೂ, 3 ರೂ, 10 ರೂ. ಮಾಡುತ್ತೇವೋ ಅದು ಇನ್ನೂ ತೀರ್ಮಾನ ಆಗಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: 17 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಶುದ್ಧೀಕರಣ ಘಟಕದಲ್ಲಿ ನಾಯಿ ಶವ ಪತ್ತೆ

    ಒಟ್ಟಾರೆ ಹಾಲಿನ ದರ ಏರಿಕೆ ಪ್ರಸ್ತಾಪ ಇರೋದು ಸತ್ಯ ಎಂದು ಸಚಿವರು ಒಪ್ಪಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ಕೊಟ್ಟರೆ ಶೀಘ್ರವೇ ಹಾಲಿನ ದರ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ರಾಮನಗರ ಟೌನ್ ವ್ಯಾಪ್ತಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ

  • ಸಂಕ್ರಾಂತಿ ಬಳಿಕ ಗ್ರಾಹಕರ ಕೈ ಸುಡಲಿದೆ ಹಾಲು – 5 ರೂ. ದರ ಹೆಚ್ಚಳ ಆಗುತ್ತಾ?

    ಸಂಕ್ರಾಂತಿ ಬಳಿಕ ಗ್ರಾಹಕರ ಕೈ ಸುಡಲಿದೆ ಹಾಲು – 5 ರೂ. ದರ ಹೆಚ್ಚಳ ಆಗುತ್ತಾ?

    – ಹೆಚ್ಚುವರಿ 50 ಎಂಎಲ್ ಹಾಲು ಕಡಿತ

    ಬೆಂಗಳೂರು: ಹಾಲಿನ (Milk) ದರ ಏರಿಕೆಗೆ ಪ್ರಸ್ತಾವನೆ ಬಂದಿದ್ದು, ಸಂಕ್ರಾಂತಿ ಹಬ್ಬದ ಬಳಿಕ ಹಾಲಿನ ದರದ ಪರಿಷ್ಕರಣೆ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಕೆಎಂಎಫ್ (KMF) ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬುಧವಾರ ನಡೆದ ಹಾಲಿನ ಒಕ್ಕೂಟದ ಸಬೆಯಲ್ಲಿ 5 ರೂ. ದರ ಏರಿಕೆಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ನಾವು ಪರಿಶೀಲಿಸುತ್ತೇವೆ. ಇನ್ನೂ ನಂದಿನಿ ಹಾಲಿನಲ್ಲಿ 50 ಎಂಎಲ್ ಹೆಚ್ಚುವರಿ ನೀಡಿ, 2 ರೂ. ಹೆಚ್ಚಳ ಮಾಡಲಾಗಿತ್ತು. ಈ ಹೆಚ್ಚುವರಿ ಹಾಲು ವಾಪಸ್‍ಗೆ ನಿರ್ಧಾರ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ಸದ್ಯ ನಂದಿನಿ ವಿವಿಧ ಹಾಲಿನ ದರಗಳ ಮಾಹಿತಿ

    50 ಎಂಎಲ್ ಹಾಲು ಕಡಿತಕ್ಕೆ ಕಾರಣವೇನು?
    ಐದು ವರ್ಷದಲ್ಲಿ ಏಕಾಏಕಿ ಹಾಲಿನ ಉತ್ಪಾದನೆ ಹೆಚ್ಚಾಗಿತ್ತು. ಹೀಗಾಗಿ ಕೆಎಂಎಫ್ 50 ಎಂಎಲ್ ಹಾಲನ್ನು ಹೆಚ್ಚುವರಿಯಾಗಿ ಸೇರಿಸಿ 2 ರೂ. ಹೆಚ್ಚು ಮಾಡಿತ್ತು. ಆದರೆ ಈಗ ಹಾಲಿನ ಉತ್ಪಾದನೆ ಯಥಾಸ್ಥಿತಿಗೆ ಬಂದಿದೆ. ಹೀಗಾಗಿ ಹೆಚ್ಚುವರಿ ಹಾಲು 50 ಎಂಎಲ್‍ನ್ನು ಕಡಿತ ಮಾಡಿ ಈ ಹಿಂದಿನಂತೆ ಸರಬರಾಜು ಮಾಡಲು ನಿರ್ಧಾರ ಮಾಡಲಾಗಿದೆ.

    ಇಡ್ಲಿ ದೋಸೆ ಹಿಟ್ಟು: ಇಂದಿನಿಂದ ಇಡೀ ಬೆಂಗಳೂರು ನಗರದಲ್ಲಿ ಇಡ್ಲಿ ದೋಸೆ ಹಿಟ್ಟು ನೀಡಿದ್ದೇವೆ. ಖಾಸಗಿಯವರು ದೋಸೆ ಹಿಟ್ಟು/ಇಡ್ಲಿ ಹಿಟ್ಟು ಎಷ್ಟು ಮಾರ್ಕೆಟಿಂಗ್ ಮಾಡ್ತಾರೋ ಅದರ 20% ನಷ್ಟು ನಾವು ನೀಡುತ್ತೇವೆ. ಅಂದರೆ 5 ಸಾವಿರ ಮೆಟ್ರಿಕ್ ಟನ್ ನೀಡಲಿದ್ದೇವೆ. 15-20% ನಷ್ಟು ಸದ್ಯಕ್ಕೆ ನೀಡಲಿದ್ದೇವೆ. ಈಗ ಖಾಸಗಿಯವರು 30 ಸಾವಿರ ಮೆಟ್ರಿಕ್ ಟನ್ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.‌

    ಎಲ್ಲರಿಗೂ ಪ್ರೋಟಿನ್ ಬೇಕು. ಹೀಗಾಗಿ ಗುಣಮಟ್ಟದ ಹಿಟ್ಟು ನೀಡುತ್ತೇವೆ. ಇದು ನಂದಿನಿ, ಪಾರ್ಲರ್ ಆನ್‍ಲೈನ್‍ನಲ್ಲಿಯೂ ಸಿಗಲಿದೆ. ಬೆಂಗಳೂರಿನಲ್ಲಿ ಆರಂಭಿಕ ದಿನದಲ್ಲಿ ಮಾರ್ಕೆಟಿಂಗ್ ಮಾಡುತ್ತೇವೆ. ಶೀಘ್ರದಲ್ಲೇ ಬೇರೆ ಕಡೆಯೂ ಆರಂಭಿಸಲಿದ್ದೇವೆ ಎಂದು ಮಾಹಿತಿ ನಿಡಿದ್ದಾರೆ.

  • ಬಳ್ಳಾರಿ ಗ್ರಾಹಕರ ಜೇಬಿಗೆ ಕತ್ತರಿ – KMFನಿಂದ ಒಂದು ದರ, ಮಾರಾಟಕ್ಕೆ ಮತ್ತೊಂದು ದರ

    ಬಳ್ಳಾರಿ ಗ್ರಾಹಕರ ಜೇಬಿಗೆ ಕತ್ತರಿ – KMFನಿಂದ ಒಂದು ದರ, ಮಾರಾಟಕ್ಕೆ ಮತ್ತೊಂದು ದರ

    -1 ಲೀಟರ್ ಹಾಲಿನ ಬೆಲೆ ಬರೋಬ್ಬರಿ 4 ರೂ. ಏರಿಕೆ

    ಬಳ್ಳಾರಿ: ರಾಜ್ಯದಲ್ಲಿ ಹಾಲಿನ ದರ (Milk Price) ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಎಂಎಫ್ (KMF) ಹಾಗೂ ಸರ್ಕಾರ ಧೋರಣೆ ಅನುಸರಿಸಿದೆ. ಪ್ರತೀ ಲೀಟರ್ ಹಾಲಿನ ಮೇಲೆ ಎರಡು ರೂ. ದರ ಏರಿಕೆ ಮಾಡೋದಾಗಿ ಹೇಳಿತ್ತು. ಆದರೆ ಸರ್ಕಾರ, ಕೆಎಂಎಫ್ ಹೇಳಿದ್ದ ದರವೇ ಒಂದು, ಹೆಚ್ಚಳ ಮಾಡಿದ್ದೇ ಮತ್ತೊಂದು ಎನ್ನುವಂತಾಗಿದ್ದು, ಗ್ರಾಹಕರ ಕಣ್ಣು ಕೆಂಪಾಗಿಸಿದೆ. ಒಂದು ಲೀಟರ್ ಹಾಲಿನ ಮೇಲೆ ಬರೋಬ್ಬರಿ ನಾಲ್ಕು ರೂ. ಹೆಚ್ಚಳ ಮಾಡಿ, ಜನರ ಜೇಬಿಗೆ ಕತ್ತರಿ ಹಾಕಿದೆ.

    ಪೆಟ್ರೋಲ್ ಬೆಲೆ ಏರಿಕೆಯ ಬಳಿಕ ಇದೀಗ ಸರ್ಕಾರ ಹಾಲಿನ ದರ ಏರಿಕೆ ಮಾಡಿ, ಜನರಿಗೆ ಶಾಕ್ ನೀಡಿದೆ. ಕೆಎಂಎಫ್ ಹಾಗೂ ಸರ್ಕಾರದಿಂದ ಅರ್ಧ ಲೀಟರ್ ಹಾಗೂ ಒಂದು ಲೀಟರ್ ಹಾಲಿನ ಪ್ಯಾಕೆಟ್‌ಗೆ ಹೆಚ್ಚುವರಿಯಾಗಿ 50 ಎಂಎಲ್ ಹೆಚ್ಚಿಸಿ, ಎರಡು ರೂ. ಹೆಚ್ಚಳ ಮಾಡುವುದಾಗಿ ಹೇಳಿತ್ತು. ಆದರೆ ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಹಾಲು ಒಕ್ಕೂಟದಿಂದ ಗ್ರಾಹಕರಿಗೆ ಶಾಕ್ ನೀಡಲಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದನ್ನೂ ಓದಿ: ಬ್ರಿಟಿಷರ ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಗುಡ್‌ಬೈ – ಇಂದಿನಿಂದ 3 ದೇಶಿ ಕಾನೂನು ಜಾರಿ

    ಹಾಲಿನ ದರ ಏರಿಕೆ ವಿಚಾರದಲ್ಲಿ ಕೆಎಂಎಫ್ ಹಾಗೂ ಸರ್ಕಾರ ಸುಳ್ಳು ಹೇಳಿದ್ದು, ನಂದಿನಿ ಶುಭಂ ಗೋಲ್ಡ್ ಹಾಲಿನ ಮೇಲೆ ಲೀಟರ್‌ಗೆ ನಾಲ್ಕು ರೂ. ದರ ಏರಿಕೆ ಮಾಡಿ, ರಾಜ್ಯದ ಜನರಿಗೆ ಮೋಸ ಮಾಡಿರೋದು ಬಟಾಬಯಲಾಗಿದೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಭಾರೀ ಮಳೆಗೆ ಕುಸಿದ ರಸ್ತೆ – ಮೋದಿ ತವರಲ್ಲಿ ಇದೆಂಥಾ ಘಟನೆ ಅಂತ ಕಾಂಗ್ರೆಸ್‌ ತೀವ್ರ ತರಾಟೆ

    ಹೌದು. ಶುಭಂ ಗೋಲ್ಡ್ (Shubham Gold) ಅರ್ಧ ಲೀಟರ್ ಪ್ಯಾಕೆಟ್ ಖರೀದಿ ಮಾಡಿದರೆ ಇನ್ನೂ ದುಬಾರಿಯಾಗಲಿದೆ. ಯಾಕೆಂದರೆ ಒಂದು ಲೀಟರ್ ಹಳೇ ದರ 49 ರೂ. ಇದ್ದು, ಹೊಸ ದರ 53 ರೂ. ಆಗಿದೆ. ಅದೇ ನೀವೇನಾದರೂ ಅರ್ಧ ಲೀಟರ್ ಪ್ಯಾಕೆಟ್ ತೆಗೆದುಕೊಂಡರೆ ಹಳೆಯ ದರ 26 ರೂ. ಇದ್ದದ್ದು ಹೊಸ ದರ 29 ರೂ. ಆಗಿದೆ. ಅರ್ಧ ಲೀಟರ್‌ನ ಎರಡು ಪ್ಯಾಕೇಟ್ ಖರೀದಿಸಿದರೆ 6 ರೂ. ಹೆಚ್ಚಾದಂತಾಗುತ್ತದೆ. ಸರ್ಕಾರ ಏಕಾಏಕಿ ದರ ಹೆಚ್ಚಳ ಮಾಡಿ ಜೇಬಿಗೆ ಕತ್ತರಿ ಹಾಕುತ್ತಿದೆ. ಕೂಡಲೇ ಈ ಅನ್ಯಾಯದ ದರ ಹೆಚ್ಚಳ ಆದೇಶ ಹಿಂದಕ್ಕೆ ಪಡೆಯಬೇಕು ಎಂದು ಜನರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮೈಸೂರು ಮುಡಾದಲ್ಲೂ ಬ್ರಹ್ಮಾಂಡ ಭ್ರಷ್ಟಾಚಾರ, ಸಾವಿರಾರು ಕೋಟಿ ಆಸ್ತಿ ಕಳ್ಳರ ಪಾಲು – ಸಿ.ಟಿ ರವಿ ಆರೋಪ

    ಇನ್ನು ಸರ್ಕಾರ ಹಾಗೂ ಕೆಎಮ್‌ಎಫ್ ಹೇಳಿದ್ದೇ ಒಂದು ದರ. ಈಗ ಮಾರಟ ಮಾಡುತ್ತಿರುವುದೇ ಒಂದು ದರ. ಹೀಗಾಗಿ ಸರ್ಕಾರ ಹೇಳುವುದೊಂದು, ಮಾಡಿರುವುದು ಒಂದು ಎಂದು ಗ್ರಾಹಕರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: T20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ಆಟಗಾರರಿಗೆ ಬಂಪರ್‌ – ಬರೋಬ್ಬರಿ 125 ಕೋಟಿ ಬಹುಮಾನ ಘೋಷಿಸಿದ ಬಿಸಿಸಿಐ

    ಫ್ಯಾಟ್ ಕಂಟೆಂಟ್ ಜಾಸ್ತಿ ಇರೋ ಈ ಶುಭಂ ಗೋಲ್ಡ್ ಹಾಲಿಗೆ ಜಾಸ್ತಿ ಬೇಡಿಕೆ ಇರುವುದರಿಂದ ಬೆಲೆ ಜಾಸ್ತಿ ಮಾಡಲಾಗಿದೆ ಎನ್ನಲಾಗುತ್ತಿದೆ. ಆದರೆ ನಂದಿನಿ ಶುಭಂ ಗೋಲ್ಡ್ ಹಾಲಿನ ದರ ಹೆಚ್ಚಳಕ್ಕೆ ಅಧಿಕಾರಿಗಳು ವಿಚಿತ್ರ ಸಮಜಾಯಿಷಿ ನೀಡುತ್ತಿದ್ದಾರೆ. ಶುಭಂ ಗೋಲ್ಡ್ ಹಾಲಿನಲ್ಲಿ 5% ಫ್ಯಾಟ್, 9% ಎನ್‌ಎಸ್‌ಎಫ್ ಇದೆ. ಯಾವ ಹಸುವಿನಿಂದಲೂ ಈ ಮಾದರಿ ಹಾಲು ಸಿಗೋದಿಲ್ಲ. ಇಷ್ಟು ಫ್ಯಾಟ್ ಹಾಗೂ ಕೆಎಂಎಫ್ ಬರಬೇಕು ಎಂದರೆ ಜೆರ್ಸಿ ಹಸು ಹಾಗೂ ಎಮ್ಮೆಯಿಂದ ಮಾತ್ರ ಸಾಧ್ಯ. ಬಳ್ಳಾರಿ, ರಾಯಚೂರು, ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಯ ದೂರದ ರೈತರಿಂದ ನಾವು ಖರೀದಿ ಮಾಡುತ್ತಿದ್ದೇವೆ. ಹೀಗಾಗಿ ಸಾಗಾಣಿಕೆ ವೆಚ್ಚ, ಉತ್ಪಾದನಾ ವೆಚ್ಚಗಳು ಹೆಚ್ಚಾಗುತ್ತಿವೆ. ಹೀಗಾಗಿ ದರ ಹೆಚ್ಚು ಮಾಡಿದ್ದೇವೆ ಎಂದು ರಾಬಕೊವಿ ಹಾಲು ಒಕ್ಕೂಟದ ಎಂಡಿ ಪೀರ್ ನಾಯ್ಕ್ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಶುಭಂ ಗೋಲ್ಡ್ ನಂದಿನಿ ಹಾಲಿನ ದರ 2 ರೂ. ಅಲ್ಲ, ಲೀಟರ್‌ಗೆ 4 ರೂ. ಹೆಚ್ಚಳ! 

    ಈಗಾಗಲೇ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ ಜನರ ಬದುಕು ಬರ್ಬಾದ್ ಆಗಿದೆ. ಇದೆಲ್ಲದರ ನಡುವೆ ಇದೀಗ ಸರ್ಕಾರ ಹಾಲಿನ ದರ ಏರಿಕೆ ಮಾಡಿ, ಜನರ ಗಾಯದ ಬರೆ ಎಳೆದು, ಜನರ ಜೇಬಿಗೆ ಕತ್ತರಿ ಹಾಕಿದೆ. ಹೀಗಾಗಿ ಕೂಡಲೇ ಕೆಎಂಎಫ್ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂಬ ಕೂಗು ಕೇಳಿ ಬರುತ್ತಿದ್ದು, ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕಿದೆ. ಇದನ್ನೂ ಓದಿ: ಕೋಟಿ ಕುಳವೆಂದು ಯುವಕನ ಅಪಹರಿಸಿ ತೆಲಂಗಾಣಕ್ಕೆ ಕರೆದೊಯ್ದು ಹಲ್ಲೆಗೈದ ಗ್ಯಾಂಗ್!

  • ರಾಜ್ಯದಲ್ಲಿ ಡಿಸಿಎಂ ಸ್ಥಾನ ಖಾಲಿ ಇಲ್ಲ: ಚಲುವರಾಯಸ್ವಾಮಿ

    ರಾಜ್ಯದಲ್ಲಿ ಡಿಸಿಎಂ ಸ್ಥಾನ ಖಾಲಿ ಇಲ್ಲ: ಚಲುವರಾಯಸ್ವಾಮಿ

    ಬೆಳಗಾವಿ: ರಾಜ್ಯ ಸರ್ಕಾರದಲ್ಲಿ ಹೆಚ್ಚುವರಿ ಡಿಸಿಎಂ ಚರ್ಚೆ ವಿಚಾರಕ್ಕೆ ಬೆಳಗಾವಿಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ (Chaluvarayaswamy) ಪ್ರತಿಕ್ರಿಯೆ ನೀಡಿದ ಅವರು, ನಾನು ಯಾರು ಪರ ಇಲ್ಲ, ಯಾರ ವಿರೋಧವೂ ಇಲ್ಲ. ಸದ್ಯಕ್ಕೆ ಡಿಸಿಎಂ ಸ್ಥಾನ ಖಾಲಿ ಇಲ್ಲ ಖಾಲಿ ಇದ್ದಾಗ ನೋಡ್ತಾರೆ ಎಂದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮದು ಜಾತ್ಯಾತೀತ ನಿಲುವು ಇರುವ ಪಕ್ಷ ಕಾಂಗ್ರೆಸ್.ವೈಯಕ್ತಿಕವಾಗಿ ಕೆಲವರು ಮಾತಾಡಿದ್ದಾರೆ. ಪಕ್ಷ ತೀರ್ಮಾನ ಮಾಡುತ್ತದೆ‌. ಪಕ್ಷದ ಜವಾಬ್ದಾರಿ ಅಧ್ಯಕ್ಷರು, ಮುಖ್ಯಮಂತ್ರಿ ಇದ್ದಾರೆ ಅವರು ನೋಡಿಕೊಳ್ತಾರೆ. ಡಿಸಿಎಂ ಚರ್ಚೆ ವಿಚಾರದ ಕುರಿತು ನಾನು ಮಾತಾಡಲ್ಲ ಎಂದು ಹೇಳಿದರು.

    ಚನ್ನಪಟ್ಟಣದಲ್ಲಿ ಡಿ.ಕೆ ಶಿವಕುಮಾರ್ ವಾಸ್ತವ್ಯ ವಿಚಾರಕ್ಕೆ, ಅವರು ಅಧ್ಯಕ್ಷರು ನೋಡಿಕೊಳ್ಳುತ್ತಿದ್ದಾರೆ. ಚನ್ನಪಟ್ಟಣಕ್ಕೆ ಯಾವಾಗ ಬೇಕಾದರೂ ಚುನಾವಣೆ ಘೋಷಣೆ ಆಗಬಹುದು. ಡಿಕೆಶಿ ಅಥವಾ ಡಿಕೆ ಸುರೇಶ್ ಯಾರು ಅಂತಾ ತೀರ್ಮಾನ ಆಗಿಲ್ಲ. ಈ ಬಗ್ಗೆ ಸಿಎಂ, ಡಿಸಿಎಂ ಕುಳಿತು ಚರ್ಚೆ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮಗಳಿಗೆ ಜಮೀನು ಕೊಡುವುದಾಗಿ ಹೇಳಿದ್ದಕ್ಕೆ ತಾಯಿಯ ಹತ್ಯೆ – ಆರೋಪಿ ಅರೆಸ್ಟ್

    ಮಂಡ್ಯದಲ್ಲಿ (Mandya) ನನ್ನ ಸೋಲಿಸಲು ಯತ್ನಿಸಿದ್ರು ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ‌ ಪ್ರತಿಕ್ರಿಯಿಸಿ, ನಮ್ಮನ್ನ ಸೋಲಿಸಲು ನೋಡಿದ್ರೂ ಆಗ ಜನ ಗೆಲ್ಲಿಸಿದ್ರು. ನಾನು ಜೆಡಿಎಸ್ ನಲ್ಲಿ ಇಲ್ಲಾ ನಮ್ಮ ಪಕ್ಷದ ಪರವಾಗಿ ಕೆಲಸ ಮಾಡಬೇಕು. ನಮ್ಮ ಅಭ್ಯರ್ಥಿ ಗೆಲ್ಲಿಸಲು ಕೆಲಸ ಮಾಡಿದ್ದೇವೆ. ಕುಮಾರಸ್ವಾಮಿ ಅವರು ಕೆಲಸ ಮಾಡಲಿ ಒಂದು ವರ್ಷ ಏನೂ ಮಾತಾಡಲ್ಲ ಎಂದರು.

    ಕುಮಾರಸ್ವಾಮಿ (HD Kumaraswamy) ಹೊಸದಾಗಿ ಕೇಂದ್ರದಲ್ಲಿ ಮಂತ್ರಿ ಆಗಿದ್ದಾರೆ. ತಂದೆ ಮಾಡಲು ಆಗದ್ದನ್ನ ಕೆಲಸ ಮಾಡ್ತೀನಿ ಅಂತಾ ಭರವಸೆ ಕೊಟ್ಟಿದ್ದಾರೆ. ಅವರು ಕೆಲಸ ಮಾಡಿದ್ರೇ ನಾನು ಹೆಚ್ಚು ಖುಷಿಪಡುತ್ತೇನೆ. ಈಗ ಕುಮಾರಸ್ವಾಮಿ ಬಗ್ಗೆ ಟೀಕೆ ಟಿಪ್ಪಣಿ ಮಾಡಲ್ಲ. ದೇವೆಗೌಡರ ಕುಟುಂಬದ ಬಗ್ಗೆ ವೈಯಕ್ತಿಕವಾಗಿ ಮಾತಾಡಿಲ್ಲ. ಕೋರ್ಟ್ ಅದರ ಬಗ್ಗೆ ತೀರ್ಮಾನ ಮಾಡುತ್ತದೆ. ಕುಮಾರಸ್ವಾಮಿ ಅವರು ಡಿವೈಡ್ ಆಗಿದ್ದೇವೆ ಅಂತಾ ಹೇಳ್ತಿದ್ದಾರೆ. ಆದರೆ ಹೀಗಾಗಬಾರದಿತ್ತು ಅದನ್ನ ಕಾನೂನು ನೋಡುತ್ತದೆ ಎಂದರು.

  • ನನ್ನ ಪ್ರಕಾರ ಹಾಲಿನ ದರ ಇನ್ನೂ ಜಾಸ್ತಿ ಮಾಡಬೇಕಿತ್ತು: ಡಿಕೆಶಿ

    ನನ್ನ ಪ್ರಕಾರ ಹಾಲಿನ ದರ ಇನ್ನೂ ಜಾಸ್ತಿ ಮಾಡಬೇಕಿತ್ತು: ಡಿಕೆಶಿ

    ಬೆಂಗಳೂರು: ನನ್ನ ಪ್ರಕಾರ ಇನ್ನೂ ಬೆಲೆ ಏರಿಕೆ ಜಾಸ್ತಿ ಮಾಡಬೇಕಿತ್ತು. ಯಾರು ಬೇಕಾದ್ರು ವಿವಾದ ಮಾಡಲಿ, ಯಾರು ಬೇಕಾದ್ರು ಬೈಯಲಿ. ವಿರೋಧ ಮಾಡೋರು ಮಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹಾಲಿನ ದರ (Milk Price Hike) ಏರಿಕೆಯನ್ನು ಮತ್ತೆ ಸಮರ್ಥನೆ ಮಾಡಿಕೊಂಡರು. ಇದೇ ವೇಳೆ ಹಾಲಿನ ದರ ಏರಿಕೆಗೆ ಬಿಜೆಪಿ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವಿರೋಧ ವ್ಯಕ್ತಪಡಿಸುವುದರಿಂದಲೇ ಬಿಜೆಪಿಯವರು ರೈತರ ವಿರೋಧಿಗಳು ಎಂಬುದು ಅರ್ಥ ಆಗುತ್ತದೆ. 2 ರೂ. ಜಾಸ್ತಿ ಅಗಿರೋದು ರೈತರಿಗೆ ತಲುಪುತ್ತದೆ. ರೈತರು ಎಷ್ಟು ಕಷ್ಟ, ಎಷ್ಟು ಸಂಕಷ್ಟದಲ್ಲಿ ಇದ್ದಾರೆ ಅಂತ ಬಿಜೆಪಿ ಅವರಿಗೆ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

    ರೈತರಿಗೆ ಹಣ ಹೋಗಲ್ಲ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಯಾರು ಹೇಳಿದ್ದು ಕೆಎಂಎಫ್ ಅಂದರೆ ರೈತರ ಒಕ್ಕೂಟ. ಕೆಎಂಎಫ್ ಅಧ್ಯಕ್ಷರದ್ದು ಅಲ್ಲ. ಮೊದಲು ಏರಿಕೆ ಮಾಡಿದ ಹಣ ಮತ್ತು ಮಂಗಳವಾರ ಜಾಸ್ತಿ ಮಾಡಿರೋ ಹಣ ರೈತರಿಗೆ ಹೋಗುತ್ತದೆ. ಕೆಎಂಎಫ್ ಉಳಿಬೇಕು. ಕೆಎಂಎಫ್ ಅಂದರೆ ರೈತರ ಒಕ್ಕೂಟ. ರೈತರೇ ಅಲ್ಲಿ ಇರೋದು. ರೈತರು ಬಿಟ್ಟು ವರ್ತಕರು ಯಾರೂ ಇಲ್ಲ. ರೈತರಿಗೋಸ್ಕರ ಇವತ್ತು ಸಹಾಯ ಆಗ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸಿಬಿಐನಿಂದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಬಂಧನ

    ನನ್ನ ಪ್ರಕಾರ ಇನ್ನು ಬೆಲೆ ಏರಿಕೆ ಜಾಸ್ತಿ ಮಾಡಬೇಕಿತ್ತು. ಯಾರು ಬೇಕಾದ್ರು ವಿವಾದ ಮಾಡಲಿ, ಯಾರು ಬೇಕಾದ್ರು ಬೈಯಲಿ. ವಿರೋಧ ಮಾಡೋರು ಮಾಡಲಿ. ರೈತರನ್ನು ಕೇಳಲಿ ರೈತರ ಪರಿಸ್ಥಿತಿ ಏನು ಅಂತ. ಅವರು ಸಾಕಲು ಆಗದೇ ಹಸುಗಳನ್ನು ಮಾರಿಕೊಳ್ಳುತ್ತಿದ್ದಾರೆ. ಬಿಜೆಪಿ ಅವರ ರೈತ ವಿರೋಧಿ ಧೋರಣೆ ಇದರಲ್ಲಿ ಎದ್ದು ಕಾಣ್ತಿದೆ. ಅವರೇ ಒತ್ತಾಯ ಮಾಡಬೇಕಿತ್ತು. ಅಮೂಲ್ ನಲ್ಲಿ ಎಷ್ಟು ಇದೆ?, ಮಹಾರಾಷ್ಟ್ರ ಬೇರೆ ರಾಜ್ಯದಲ್ಲಿ ಎಷ್ಟು ಇದೆ? ಅದನ್ನ ತಂದು ಮೊದಲು ನೋಡಲಿ. ಮೊದಲು ರೈತರನ್ನು ಬದುಕಿಸೋ ಕೆಲಸ ಬಿಜೆಪಿ ಅವರು ಮಾಡಲಿ ಎಂದು ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.

  • ಮದರ್ ಡೈರಿ ಶಾಕ್‌ – ಇಂದಿನಿಂದ ಪ್ರತಿ ಲೀಟರ್‌ ಹಾಲಿನ ದರ 2 ರೂ. ಹೆಚ್ಚಳ!

    ಮದರ್ ಡೈರಿ ಶಾಕ್‌ – ಇಂದಿನಿಂದ ಪ್ರತಿ ಲೀಟರ್‌ ಹಾಲಿನ ದರ 2 ರೂ. ಹೆಚ್ಚಳ!

    ನವದೆಹಲಿ: ಅಮುಲ್‌ ಹಾಲಿನ ದರ ಏರಿಕೆ ಬೆನ್ನಲ್ಲೇ ಮದರ್ ಡೈರಿ (Mother Dairy) ಸಹ ಹಸು ಹಾಗೂ ಎಮ್ಮೆ ಹಾಲು ಸೇರಿದಂತೆ ವಿವಿಧ ಮಾದರಿಯ ಹಾಲಿನ ಬೆಲೆಯನ್ನು (Milk Prices) ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ.

    ಜೂನ್‌ 3ರಿಂದಲೇ (ಇಂದು) ನಿಗದಿತ ಬೆಲೆ ಜಾರಿಗೆ ಬರಲಿದೆ ಎಂದು ಮದರ್ ಡೈರಿ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಸಕ್ತ ವರ್ಷದಲ್ಲಿ ಇದು ಮೊದಲ ಬಾರಿಗೆ ಬೆಲೆ ಏರಿಕೆಯಾಗಿದೆ. ಇದನ್ನೂ ಓದಿ: ಪುಲ್ವಾಮಾದಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಸಿಕ್ಕಿಬಿದ್ದ ಲಷ್ಕರ್‌ ಟಾಪ್‌ ಕಮಾಂಡರ್ಸ್‌

    ಯಾವ ಮಾದರಿಯ ಹಾಲಿಗೆ ಎಷ್ಟು ಬೆಲೆ ಏರಿಕೆ?
    ಟೋಕನ್‌ ಮಿಲ್ಕ್‌ 52 ರೂ. ನಿಂದ 54 ರೂ.ಗೆ ಹೆಚ್ಚಿಸಲಾಗಿದೆ. ಇನ್ನುಳಿದಂತೆ ಟೋನ್ಡ್‌ ಮಿಲ್ಕ್‌ (ಟೆಟ್ರಾ ಪ್ಯಾಕ್‌) 54 ರೂ. ನಿಂದ 56 ರೂ.ಗೆ, ಹಸುವಿನ ಹಾಲು 56 ರಿಂದ 58 ರೂ.ಗೆ, ಕೆನೆ ಹಾಲು 66 ರೂ. ನಿಂದ 68 ರೂ.ಗೆ. ಎಮ್ಮೆ ಹಾಲು 70 ರೂ. ನಿಂದ 72 ರೂ. ಹಾಗೂ ಡಬಲ್‌ ಟೋನ್ಡ್‌ ಪ್ಯಾಕೆಟ್‌ ಹಾಲಿನ ದರ 48 ರೂ. ನಿಂದ 50 ರೂ.ಗಳಿಗೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಸೆನ್ಸೆಕ್ಸ್, ನಿಫ್ಟಿ ಸಾರ್ವಕಾಲಿಕ ದಾಖಲೆ – Zerodha, CDSL ಸರ್ವರ್‌ ಡೌನ್‌, ಹೂಡಿಕೆದಾರರ ಆಕ್ರೋಶ

    ದೆಹಲಿ ಎನ್‌ಸಿಆರ್‌ನಲ್ಲಿ ಪ್ರತಿದಿನ ಸುಮಾರು 35 ಲಕ್ಷ ಲೀಟರ್‌ ತಾಜಾ ಹಾಲು ಮಾರಾಟ ಮಾಡುತ್ತಿರುವ ಮದರ್‌ ಡೈರಿ 2023ರ ಫೆಬ್ರವರಿಯಲ್ಲಿ ಕೊನೆಯಬಾರಿಗೆ ಹಾಲಿನ ದರವನ್ನು ಹೆಚ್ಚಿಸಿತ್ತು.

    ಕಳೆದ ಕೆಲವು ತಿಂಗಳಲ್ಲಿ ಹಾಲಿನ ಸಂಗ್ರಹಣೆಗೆ ಹೆಚ್ಚಿನ ಬೆಲೆ ಪಾವತಿಸಿದ್ದರೂ ದರ ಏರಿಕೆ ಮಾಡಿರಲಿಲ್ಲ. ಇತ್ತೀಚೆಗೆ ಕೆಲವೆಡೆ ಬಿಸಿಲಿನ ತಾಪ ಏರಿಕೆಯಿಂದ ಹಾಲಿನ ಉತ್ಪಾದನೆ ಮೇಲೆ ಮತ್ತಷ್ಟು ಪರಿಣಾಮ ಬೀರುವ ಸಾಧ್ಯತೆಯಿದೆ. ಆದ್ದರಿಂದ ಬೆಲೆ ಏರಿಕೆ ಮಾಡಿರುವುದಾಗಿ ಮದರ್‌ ಡೈರಿ ಹೇಳಿದೆ. ಇದನ್ನೂ ಓದಿ: Election Results – ಟ್ರೆಂಡ್‌ ಬೇಗನೇ ಗೊತ್ತಾದ್ರೂ ತಡವಾಗಲಿದೆ ಅಧಿಕೃತ ಫಲಿತಾಂಶ

  • ಲೀಟರ್ ಹಾಲಿಗೆ 1.50 ರೂ. ಇಳಿಸಿ ಮನ್ಮುಲ್ ಆದೇಶ

    ಲೀಟರ್ ಹಾಲಿಗೆ 1.50 ರೂ. ಇಳಿಸಿ ಮನ್ಮುಲ್ ಆದೇಶ

    ಮಂಡ್ಯ: ಬರದ ನಡುವೆಯೇ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (Manmul) ರೈತರಿಗೆ ಶಾಕ್‌ ನೀಡಿದೆ. ಲೀಟರ್‌ ಹಾಲಿಗೆ 1.50 ರೂ. ಇಳಿಕೆ ಮಾಡಿ ಆದೇಶ ಹೊರಡಿಸಿದೆ.

    ಇತ್ತ ಮನ್ಮುಲ್‌ ಹಾಲಿನ ದರ (Milk Price) ಇಳಿಕೆ ಮಾಡಿದೆ. ಆದರೆ ಅತ್ತ ಪಶು ಆಹಾರದ ಬೆಲೆ ಏರಿಕೆಯಾಗಿದೆ. ಇದರಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಹೈನುಗಾರಿಕೆ ನಂಬಿಕೊಂಡಿರುವ ಮಂಡ್ಯ ರೈತರು ಕಂಗಾಲಾಗಿದ್ದಾರೆ. ಇದನ್ನೂ ಓದಿ: ಹಿಜಬ್ ಕುರಿತು ಎಚ್ಚರಿಕೆ ಹೆಜ್ಜೆ ಇಡಲು ಕೆಪಿಸಿಸಿ ನಿರ್ಧಾರ- ಸಿಎಂಗೆ ಹಿರಿಯರ ಸಲಹೆ ಏನು..?

    ಮನ್ಮುಲ್ ಆಡಳಿತ ಮಂಡಳಿ ನಿರ್ಧಾರಕ್ಕೆ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ KMF ಪಶು ಆಹಾರದ ಬೆಲೆ ಚೀಲಕ್ಕೆ 50 ರೂ. ಏರಿಕೆ ಮಾಡಿದೆ. ಡಿಸೆಂಬರ್ 1 ರಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದೆ.

    ಈ ಹಿಂದೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 33.50 ರೂ. ನೀಡಲಾಗುತ್ತಿತ್ತು. ಇದೀಗ 1.50 ಕಡಿತಗೊಳಿಸಿದ್ದು, 32 ರೂ.ಗೆ ಇಳಿಕೆಯಾಗಿದೆ. ಬರಗಾಲದಲ್ಲಿ ಹಾಲಿನ ದರ ಕಡಿತಗೊಳಿಸಿರುವುದಕ್ಕೆ ರೈತ ಸಂಘ ಕಿಡಿಕಾರಿದೆ. ಕೂಡಲೇ ದರ ಹೆಚ್ಚಳ ಮಾಡದಿದ್ರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ದತ್ತಜಯಂತಿಯ ಶೋಭಾಯಾತ್ರೆಯಲ್ಲಿ 25 ಸಾವಿರಕ್ಕೂ ಹೆಚ್ಚು ಭಕ್ತರು ಭಾಗಿ

  • ಆ.1 ರಿಂದ ಹಾಲಿನ ದರ 3 ರೂ. ಹೆಚ್ಚಳ- ಯಾವುದಕ್ಕೆ ಎಷ್ಟು?

    ಆ.1 ರಿಂದ ಹಾಲಿನ ದರ 3 ರೂ. ಹೆಚ್ಚಳ- ಯಾವುದಕ್ಕೆ ಎಷ್ಟು?

    ಬೆಂಗಳೂರು: ಹಾಲಿನ ದರ  (Milk Rate) 3 ರೂ. ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದ್ದು, ಆಗಸ್ಟ್ 1 ರಿಂದ ಈ ದರ ಜಾರಿಯಾಗಲಿದೆ.

    ಹೆಚ್ಚಳವಾಗಿರುವ ಹಾಲಿನ ದರವನ್ನು ರೈತರಿಗೆ (Farmer) ನೀಡಲು ತೀರ್ಮಾನ ಮಾಡಲಾಗಿದೆ. ಪ್ರತಿ ಲೀಟರ್ ಹಾಲಿನ ದರ 3 ರೂಪಾಯಿ ಏರಿಕೆಯಾಗಲಿದೆ. ಕೆಎಂಎಫ್ 5 ರೂಪಾಯಿ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಸಚಿವ ಸಂಪುಟ ಸಭೆಯಲ್ಲಿ 3 ರೂ. ಹೆಚ್ಚಳಕ್ಕೆ ತೀರ್ಮಾನ ಮಾಡಲಾಗಿದೆ. ಹೀಗಾಗಿ ಆಗಸ್ಟ್ 1 ರಿಂದ ನೂತನ ಹಾಲಿನ ದರ ಜಾರಿಯಾಗಲಿದೆ.

    ಯಾವುದಕ್ಕೆ ಎಷ್ಟು ದರ..?
    ಟೋನ್ಡ್ ಹಾಲು- 39- 42 ರೂ.
    ಹೋಮೋಜಿನೈಸ್ಟ್ ಟೋನ್ಡ್ ಹಾಲು (ನೀಲಿ ಪ್ಯಾಕೇಟ್) 40- 43 ರೂ.
    ಸ್ಪೇಷಲ್ ಹಾಲು (ಆರೆಂಜ್) 45- 48 ರೂ.
    ಶುಭಂ ಹಾಲು (ಹಸಿರು)- 45-48 ರೂ.
    ಸಮೃದ್ದಿ ಹಾಲು (ನೇರಳೆ ಪ್ಯಾಕೆಟ್) -50-53 ರೂ.
    ಸಂತೃಪ್ತಿ ಹಾಲು- 52-55 ರೂ.
    ಮೊಸರು- 47- 50 ರೂ.

    ಒಟ್ಟಿನಲ್ಲಿ ಹಾಲಿನ ದರ ಏರಿಕೆಯಾಗುತ್ತಿರುವ ಸುದ್ದಿ ಕೇಳುತ್ತಿದಂತೆಯೇ ಜನ ಕಿಡಿಕಾರಿದ್ದಾರೆ. ಈ ಸರ್ಕಾರ ಬಂದ್ಮೇಲೆ ಎಲ್ಲ ರೇಟ್ ಜಾಸ್ತಿ ಆಗುತ್ತಿದೆ. ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿದೆ. ಈಗ ಹಾಲಿನ ದರ ಕೂಡ ಜಾಸ್ತಿ ಮಾಡ್ತ ಇದ್ದಾರೆ. ಒಂದು ಕಡೆ ಫ್ರೀ ಕೊಟ್ಟು ಹೀಗೆ ರೇಟ್ ಜಾಸ್ತಿ ಮಾಡಿ ಜನರಿಗೆ ತೊಂದರೆಯಾಗುವಂತೆ ಮಾಡುತ್ತಿದ್ದಾರೆ. ಫ್ರೀ ಸ್ಕೀಮ್ ಬೇಡ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಬೇಡಿ ಎಂದು ಸಾರ್ವಜನಿಕರು ಮನವಿ ಮಾಡುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]