ಭಾನುವಾರ ರಾತ್ರಿ ಯುವತಿ ವಿಚಾರಕ್ಕೆ ಗಿರೀಶ್ ಹಾಗೂ ಸೀನನ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಇದರಿಂದ ಗಿರೀಶ್ ಮೇಲೆ ಸೀನ ಕೋಪಗೊಂಡಿದ್ದ. ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್ ಇಂದು ಬೆಳಿಗ್ಗೆ 11 ಗಂಟೆ ಸುಮಾರಿನಲ್ಲಿ ಸಾರಿಗೆ ಬಸ್ ನಿಲ್ದಾಣದಲ್ಲಿರುವ ಶೌಚಾಲಯಕ್ಕೆ ಹೋಗಿ ಹೊರಗೆ ಬಂದಿದ್ದ.
ಈ ವೇಳೆ ಕಾದು ನಿಂತಿದ್ದ ಸೀನ ಮಚ್ಚು ಹಿಡಿದು ಗಿರೀಶ್ ಮೇಲೆ ಅಟ್ಯಾಕ್ ಮಾಡಿ ಮನಬಂದಂತೆ ಕೊಚ್ಚಿ ಎಸ್ಕೇಪ್ ಆಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಿರೀಶ್‌ನನ್ನು ಅಂಬ್ಯುಲೆನ್ಸ್‌ನಲ್ಲಿ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಾಸನ: ಹಾಸನಾಂಬೆ ದೇವಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವ (Hasanamba Jatra) ಹೊಸ ಇತಿಹಾಸ ಬರೆದಿದೆ. ವಿಶೇಷ ದರ್ಶನದ ಟಿಕೆಟ್ ಹಾಗೂ ಲಾಡು ಮಾರಾಟದಿಂದ ದಾಖಲೆಯ ಆದಾಯ ಗಳಿಕೆಯಾಗಿದೆ.
ಕಾಣಿಕೆ ರೂಪದಲ್ಲಿ 75 ಗ್ರಾಂ 300 ಮಿಲಿ ಚಿನ್ನ, 1 ಕೆಜಿ 58 ಗ್ರಾಂ 400 ಮಿಲಿ ಬೆಳ್ಳಿ ವಸ್ತುಗಳನ್ನು ಭಕ್ತರು ಹುಂಡಿಗೆ ಹಾಕಿದ್ದು, ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವದ ಇತಿಹಾಸದಲ್ಲೇ ಈ ಬಾರಿ ಆದಾಯದ ಮೂಲಕ ದಾಖಲೆ ನಿರ್ಮಾಣವಾಗಿದೆ. ಇಂಡೋನೇಷಿಯಾ-263 ರೂ., ನೇಪಾಳ-3.13 ರೂ., ಮಲೇಷಿಯಾ-28.75 ರೂ., ಯುಎಸ್‌ಎ-526 ರೂ., ಮಾಲ್ಡೀವ್ಸ್-57.29 ರೂ., ಕೆನಡಾ-6,259 ರೂ, ಕುವೈತ್-286 ರೂ., ಯುಎಐ-239 ರೂ. ಸೇರಿ ಒಟ್ಟು 7,653 ರೂ. ವಿದೇಶ ಕರೆನ್ಸಿ ಕಾಣಿಕೆಯಾಗಿ ಬಂದಿದೆ.
ಅಲ್ಲದೇ, 42,530 ಹಳೇ ನೋಟುಗಳನ್ನು ಹಾಕಲಾಗಿದೆ. ಸಿದ್ದೇಶ್ವರಸ್ವಾಮಿ ದೇವಾಲಯ ಪ್ರತ್ಯೇಕ ಅಕೌಂಟ್ ಹೊಂದಿದ್ದು, ಅದರ ಹುಂಡಿ ಎಣಿಕೆ ಕಾರ್ಯ ಕೂಡ ನಡೆಯಿತು. ಈ ಬಾರಿ 15,17,785 ರೂ. ಕಾಣಿಕೆಯನ್ನು ಭಕ್ತರು ಹುಂಡಿಗೆ ಹಾಕಿದ್ದಾರೆ ಎಂದು ಉಪವಿಭಾಗಾಧಿಕಾರಿ ಹಾಗೂ ದೇವಾಲಯದ ಆಡಳಿತಾಧಿಕಾರಿ ಮಾರುತಿ ಹೇಳಿದ್ದಾರೆ. ಇದನ್ನೂ ಓದಿ: ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ಕಡೆಗಳಿಗೆಯಲ್ಲೂ ದೇವಿ ಕಣ್ತುಂಬಿಕೊಂಡ ಭಕ್ತಗಣ
– 2026ರ ಅ.29ರಿಂದ ನ.11ರವರೆಗೆ ದರ್ಶನ ನೀಡಲಿರುವ ಹಾಸನಾಂಬೆ
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬೆ ದೇವಿ (Hasanamba Devi) ಗರ್ಭಗುಡಿ ಬಾಗಿಲು ಶಾಸ್ತ್ರೋಕ್ತವಾಗಿ ಬಂದ್ ಆಗಿದೆ.
ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಅಂತಿಮ ಪೂಜೆ ನಡೆದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರ ಸಮ್ಮುಖದಲ್ಲಿ ಗರ್ಭಗುಡಿಗೆ ಅರ್ಚಕರು ಬೀಗ ಹಾಕಿದರು. ಈ ಮೂಲಕ 15 ದಿನಗಳ ಕಾಲ ನಡೆದ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿದೆ.ಇದನ್ನೂ ಓದಿ:ಶಾಸ್ತ್ರೋಕ್ತವಾಗಿ ಮುಚ್ಚಿದ ಕೇದಾರನಾಥ ಧಾಮದ ಬಾಗಿಲು
ಅ.9ರಿಂದ ಆರಂಭವಾಗಿ ಅ.23ರವರೆಗೆ ದರ್ಶನ ಭಾಗ್ಯ ಕರುಣಿಸಿದ ಹಾಸನಾಂಬೆ ಮತ್ತೆ ಒಂದು ವರ್ಷಗಳ ಕಾಲ ಮರೆಗೆ ಸರಿದಳು. ಇಂದು ಮಧ್ಯಾಹ್ನ 1:06ಕ್ಕೆ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲನ್ನು ಮುಚ್ಚಲಾಯಿತು. ಈ ವೇಳೆ ಪಂಜಿನ ಪೂಜೆ, ಮಂಗಳವಾದ್ಯ ಮೊಳಗಿತು.
ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಸರ್ಕಾರದ ಸಚಿವರು, ಶಾಸಕರು, ನಟ, ನಟಿಯರು ವಿವಿಧ ಕ್ಷೇತ್ರದ ಗಣ್ಯರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಈ ಬಾರಿಯ 13 ದಿನಗಳ ಸಾರ್ವಜನಿಕ ದರ್ಶನದಲ್ಲಿ ವಿವಿಐಪಿ ಪಾಸ್‌ಗಳ ರದ್ದು ಮಾಡಿ ಗೋಲ್ಡ್ ಪಾಸ್, ಪ್ರೋಟೋಕಾಲ್‌ಗೆ ಸಮಯ ನಿಗದಿ ಮಾಡಿದ್ದರಿಂದ ಸಾರ್ವಜನಿಕರಿಗೆ ಸುಗಮವಾಗಿ ಹಾಸನಾಂಬ ದೇವಿಯ ದರ್ಶನ ಆಗಿದೆ. ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರಿಂದ ದರ್ಶನ ಸಮಯ ವಿಳಂಬ ಬಿಟ್ಟರೆ ಉಳಿದಂತೆ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ನಡೆದಿದೆ.
ಕಳೆದ ಬಾರಿ ಜಾತ್ರೆ ವೇಳೆ ಅವ್ಯವಸ್ಥೆ ಆಗಿತ್ತು. ಇದನ್ನು ಸರಿಪಡಿಸಿ ಶಾಂತಿಯುತವಾಗಿ ದರ್ಶನ ಆಗಲು ಜಿಲ್ಲಾಡಳಿತ, ಸಚಿವರ ಜಾಣ್ಮೆ ಕಾರ್ಯವೈಖರಿಯಿಂದ ಎಲ್ಲವನ್ನೂ ಕಾಲಕಾಲಕ್ಕೆ ಸರಿಪಡಿಸಿ ಯಶಸ್ವಿಯಾದ ಜಾತ್ರೆ ನಡೆಸಿದ್ದಾರೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಪೌರಕಾರ್ಮಿಕರು, ವಿದ್ಯುತ್ ಇಲಾಖೆ, ಅಗ್ನಿಶಾಮಕದಳ, ಡಿಎಫ್‌ಓ ಸೇರಿ ಎಲ್ಲಾ ಇಲಾಖೆಯವರು ಪ್ರಮಾಣಿಕವಾಗಿ ಕೆಲಸ ಮಾಡಿದ್ದಾರೆ. ಹಗಲು ರಾತ್ರಿ ದುಡಿದಿದ್ದಾರೆ.ಇದನ್ನೂ ಓದಿ: ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ: ಸಚಿವ ಪ್ರಹ್ಲಾದ್ ಜೋಶಿ
ಈ ಬಾರಿಯ ಉತ್ಸವದ ವೇಳೆ ಒಂದು ವಾರಗಳ ಕಾಲ ಪ್ರತಿನಿತ್ಯ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ದೇವಿ ದರ್ಶನ ಪಡೆದಿದ್ದಾರೆ. ಬುಧವಾರ ಸಂಜೆಯವರೆಗೂ 26.13 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಶೀಘ್ರ ದರ್ಶನದ ಟಿಕೆಟ್ ಮಾರಾಟದಿಂದ 21.82 ಕೋಟಿ ರೂ. ಹಣ ಸಂಗ್ರಹವಾಗಿದೆ. ಉಳಿದಂತೆ ಹುಂಡಿ ಎಣಿಕೆ ಕಾರ್ಯ ಬಾಕಿಯಿದ್ದು, 25 ಕೋಟಿ ತಲುಪಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಮುಂದಿನ ವರ್ಷದ ಹಾಸನಾಂಬೆ ಉತ್ಸವಕ್ಕೆ ದಿನಾಂಕ ನಿಗದಿ:
ಈ ಬಾರಿಯ ಹಾಸನಾಂಬೆ ದರ್ಶನೋತ್ಸವ ಇತಿಹಾಸ ನಿರ್ಮಸಿ, ದಾಖಲೆ ಬರೆಯುವ ಜೊತೆಗೆ ಅತ್ಯಂತ ಯಶಸ್ವಿ ಮತ್ತು ಅಚ್ಚುಕಟ್ಟಾಗಿ ನಡೆಯಿತು. ಮುಂದಿನ ವರ್ಷದ ಹಾಸನಾಂಬೆ ಉತ್ಸವ ದಿನಾಂಕವನ್ನು ಪಂಚಾಂಗದ ಪ್ರಕಾರ, ನಿಗದಿ ಮಾಡಲಾಗಿದೆ. 2026ರ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ನಡೆಯಲಿದೆ. ಒಟ್ಟು 14 ದಿನ ಗರ್ಭಗುಡಿ ತೆರೆದಿರಲಿದ್ದು, ಈ ಪೈಕಿ 12 ದಿನ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಒಟ್ಟಿನಲ್ಲಿ ಹಾಸನಾಂಬೆಯ ಈ ಬಾರಿಯ ಉತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. 13 ದಿನಗಳ ಕಾಲ ಜನ ಜಂಗುಳಿಯಿಂದ ತುಂಬಿ ತುಳುಕುತ್ತಿದ್ದ ಹಾಸನಾಂಬೆ ದೇಗುಲ ಆವರಣ ಈಗ ಭಣಗುಡುತ್ತಿದೆ.ಇದನ್ನೂ ಓದಿ: ಚಿತ್ತಾಪುರ RSS ಪಥ ಸಂಚಲನ – ಸರ್ಕಾರದ ಆದೇಶದಂತೆ ಜಿಲ್ಲಾಡಳಿತ ತೀರ್ಮಾನ: ಪರಮೇಶ್ವರ್
ಈಗಾಗಲೇ ಹವಾಮಾನ ಇಲಾಖೆ (IMD) ಅ.29 ರವರೆಗೆ ಮಳೆಯ ಮುನ್ಸೂಚನೆ ನೀಡಿರುವ ಕಾರಣ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬರಲಿದೆ. ಹೀಗಾಗಿ ಹೇಮಾವತಿ ನದಿ ಪಾತ್ರ, ನದಿ ದಂಡೆ, ನದಿಯ ಅಸುಪಾಲಿನಲ್ಲಿರುವ ಎಲ್ಲಾ ಗ್ರಾಮಸ್ಥರು, ಸ್ಥಳೀಯರು ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಲ್ಲಿ ತಕ್ಷಣವೇ ತೆರಳುವಂತೆ ಸೂಚನೆ ನೀಡಲಾಗಿದೆ.
ಕಂದಾಯ ಇಲಾಖೆ, ತಹಸೀಲ್ದಾರ್ ಸೇರಿದಂತೆ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕು. ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವಂತೆ ಹೇಮಾವತಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಜ್ಯೋತಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಹೇಮಾವತಿ ಜಲಾಶಯ 37.103 ಟಿಎಂಸಿ ನೀರಿನ ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 36.620 ಟಿಎಂಸಿ ನೀರು ಸಂಗ್ರಹವಾಗಿದೆ.
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬೆ ದೇವಿ (Hasanamba Temple) ಗರ್ಭಗುಡಿ ಬಾಗಿಲು ಇಂದು ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ಮುಚ್ಚಲಿದೆ.
ಈಗಾಗಲೇ ಹಾಸನಾಂಬ ದೇವಿ ಸಾರ್ವಜನಿಕ ದರ್ಶನ ಅಂತ್ಯಗೊಂಡಿದ್ದು, ಪೂಜೆಗಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ. ಮಧ್ಯಾಹ್ನ 12 ಗಂಟೆಗೆ ವಿಶ್ವರೂಪ ದರ್ಶನದ ಬಳಿಕ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಇಂದು ಬೆಳಗ್ಗೆವರೆಗೂ ಹಾಸನಾಂಬ ದೇವಿ ದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿತ್ತು. ಕಡೆಗಳಿಗೆಯಲ್ಲೂ ಭಕ್ತಗಣ ಹಾಸನಾಂಬ ದೇವಿಯನ್ನು ಕಣ್ತುಂಬಿಕೊಂಡಿದ್ದಾರೆ. ಇದನ್ನೂ ಓದಿ: ಇವಿ ಬಿಎಂಟಿಸಿ ಬಸ್ಸು ಚಾಲಕರಿಂದ ದಿಢೀರ್ ಪ್ರತಿಭಟನೆ
ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಸ್ಥಳೀಯ ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಎಸ್ಪಿ ಮಹಮದ್ ಸುಜಿತಾ, ಎಸಿ ಮಾರುತಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಬಾಗಿಲು ಮುಚ್ಚುವ ಮುನ್ನ ಅರ್ಚಕರು ದೀಪ ಹಚ್ಚಿ, ದೇವಿಯ ಮುಂದೆ ಹೂವು, ನೈವೇದ್ಯ ಇಡಲಿದ್ದಾರೆ. ಅನಂತರ ಶಾಸ್ತ್ರೋಕ್ತವಾಗಿ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಇದನ್ನೂ ಓದಿ: ವಿರೂಪಗೊಳಿಸಿದ ಮಹಾಕಾಳಿ ಮೂರ್ತಿಯನ್ನೇ ವಶಕ್ಕೆ ಪಡೆದ ಪೊಲೀಸ್ – ಬಂಗಾಳದಲ್ಲಿ ರಾಜಕೀಯ ಬಿರುಗಾಳಿ
ಅ.9ರಂದು ಹಾಸನಾಂಬೆ ದೇವಿ ಗರ್ಭಗುಡಿಯ ಬಾಗಿಲು ತೆರೆಯಲಾಗಿತ್ತು. ಇಲ್ಲಿಯವರೆಗೂ 27 ಲಕ್ಷಕ್ಕಿಂತ ಹೆಚ್ಚು ಭಕ್ತರು ದೇವಿ ದರ್ಶನ ಪಡೆದಿದ್ದಾರೆ. 1,000 ರೂ, 300 ರೂ, ಲಾಡು ಪ್ರಸಾದ ಹಾಗೂ ದೇವಿಯ ಸೀರೆ ಮಾರಾಟದಿಂದ 23 ಕೋಟಿಗೂ ಅಧಿಕ ಆದಾಯ ಬಂದಿದ್ದು, ಈ ಬಾರಿಯ ಜಾತ್ರಾ ಮಹೋತ್ಸವ ಇತಿಹಾಸ ಬರೆದಿದೆ. ರಾತ್ರಿಯಿಡೀ ಭಾರೀ ಮಳೆ ಸುರಿದ ಪರಿಣಾಮ ಸಿದ್ದೇಶ್ವರಸ್ವಾಮಿ ಕೆಂಡೋತ್ಸವ ತಡವಾಗಿದೆ. ಕೆಂಡ ಹಾಯಲು ಸಾವಿರಾರು ಮಂದಿ ಭಕ್ತರು ಕಾದು ನಿಂತಿದ್ದರು. ಇದನ್ನೂ ಓದಿ: ಹಾವೇರಿ | ರಾಘವೇಂದ್ರ ಸ್ವಾಮಿ ಮಠದ ಬೀಗ ಮುರಿದು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ
ಹಾಸನ: ವರ್ಷಕ್ಕೊಮ್ಮೆ ದರ್ಶನ ಕರುಣಿಸುವ ಹಾಸನಾಂಬೆ ತಾಯಿ (Hasanambe Temple) ಸಾರ್ವಜನಿಕ ದರ್ಶನಕ್ಕೆ ಇಂದು (ಅ.22) ವಿಧ್ಯುಕ್ತ ತೆರೆ ಬಿದ್ದಿದೆ.
ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆದು ಇಂದಿಗೆ 14 ದಿನ. ಸಾರ್ವಜನಿಕ ದರ್ಶನಕ್ಕೆ ಕಡೆಯ ದಿನವಾಗಿದ್ದರಿಂದ ಮುಂಜಾನೆಯಿಂದಲೂ ದೇವಿ ದರ್ಶನಕ್ಕೆ ಭಕ್ತರ ದಂಡು ಹರಿದು ಬಂದಿತ್ತು. ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆದಿದ್ದಾರೆ. ಹಿಂದೆಂದೂ ಕಾಣದ ರೀತಿಯಲ್ಲಿ ಭಕ್ತರು ಆಗಮಿಸಿ, ಮಳೆಯ ನಡುವೆಯೂ ಜನ ಕಿಕ್ಕಿರಿದು ಸೇರಿದ್ದರ ತಾಯಿಯನ್ನು ಕಣ್ತುಂಬಿಕೊಂಡಿದ್ದಾರೆ. ಇದುವರೆಗೂ 26 ಲಕ್ಷಕ್ಕೂ ಹೆಚ್ಚು ಮಂದಿ ದೇವಿ ದರ್ಶನ ಪಡೆದಿದ್ದಾರೆ.ಇದನ್ನೂ ಓದಿ: ನಿನ್ನೆವರೆಗೂ 23 ಲಕ್ಷ ಜನರಿಂದ ದಾಖಲೆಯ ಹಾಸನಾಂಬೆ ದರ್ಶನ – ಇಂದು ಹರಿದು ಬರುತ್ತಿರುವ ಭಕ್ತಸಾಗರ
ಈ ಬಾರಿ ಕೇವಲ ಹದಿಮೂರು ದಿನಗಳು ಮಾತ್ರ ಹಾಸನಾಂಬ ದೇವಿ ಸಾರ್ವಜನಿಕ ದರ್ಶನಕ್ಕೆ ಅವಕಾಶವಿತ್ತು. ಅ.10 ಸಾರ್ವಜನಿಕ ದರ್ಶನ ಆರಂಭವಾದ ದಿನದಿಂದಲೂ ಪ್ರತಿನಿತ್ಯ ಲಕ್ಷಾಂತರ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿ ದರ್ಶನ ಪಡೆದರು. ಇಂದು ಸಾರ್ವಜನಿಕ ದರ್ಶನಕ್ಕೆ ಕಡೆಯ ದಿನವಾದ್ದರಿಂದ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.
ಇಂದು ನಟರಾದ ಧ್ರುವ ಸರ್ಜಾ, ಹರ್ಷ, ನಟಿ ಮಿಲನ ನಾಗರಾಜ್, ಸೇರಿ ಹಲವರು ದೇವಿ ದರ್ಶನ ಪಡೆದುಕೊಂಡರು. ಇಂದು ಸಂಜೆ 7 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ನೈವೇದ್ಯಕ್ಕಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುವುದು. ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಬೆಳಿಗ್ಗೆ 5 ಗಂಟೆಯವರೆಗೆ ಸ್ಥಳೀಯರಿಗೆ ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಜಾತ್ರೆ ಆರಂಭವಾದ ದಿನದಿಂದಲೂ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಎಸ್ಪಿ ಮಹಮದ್ ಸುಜೀತಾ, ಎಸಿ ಮಾರುತಿ ಹಾಗೂ ಎಎಸ್‌ಪಿಗಳು ಇಂದಿನವರೆಗೂ ದೇವಾಲಯದಲ್ಲಿ ಬೀಡುಬಿಟ್ಟು ಕರ್ತವ್ಯ ನಿರ್ವಹಿಸಿದರು. ಮೈಸೂರಿನ ಅರ್ಜುನ ಅವಧೂತರು ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ದುಡಿದ ಪೌರಕಾರ್ಮಿಕರ ಪಾದ ಪೂಜೆ ಮಾಡಿ ವಸ್ತ್ರ ನೀಡಿದರು. 1000 ರೂ., 300 ರೂ. ವಿಶೇಷ ದರ್ಶನದ ಟಿಕೆಟ್ ಹಾಗೂ ಲಾಡ್ಡು ಮಾರಾಟದಿಂದ ದೇವಾಲಯ ಮಂಡಳಿಗೆ ಈವರೆಗೆ ಒಟ್ಟು 22 ಕೋಟಿ ರೂ. ಆದಾಯ ಬಂದಿದೆ.
ಈ ಮೂಲಕ ಹದಿಮೂರು ದಿನಗಳ ಕಾಲ ಅದ್ಧೂರಿ ಹಾಗೂ ವಿಜೃಂಭಣೆಯಿಂದ ನಡೆದ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದ್ದು, ನಾಳೆ ಮಧ್ಯಾಹ್ನ 12ಗಂಟೆಗೆ ವಿಶ್ವರೂಪ ದರ್ಶನದ ನಂತರ ಶಾಸ್ತ್ರೋಕ್ತವಾಗಿ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಬಂದ್ ಆಗಲಿದೆ. ಇನ್ನೂ ಒಂದು ವರ್ಷ ಕಾಲ ಹಾಸನಾಂಬೆ ತೆರೆಮರೆಗೆ ಸರಿಯಲಿದ್ದಾಳೆ.ಇದನ್ನೂ ಓದಿ: ಗೋಲ್ಡನ್ ಪಾಸ್ ಪಡೆದು, ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಧ್ರುವ ಸರ್ಜಾ
– ಹಾಸನಾಂಬೆ ಸಾರ್ವಜನಿಕ ದರ್ಶನಕ್ಕೆ ಇಂದು ತೆರೆ – ನಾಳೆ ಗರ್ಭಗುಡಿ ಬಾಗಿಲು ಬಂದ್
ಹಾಸನ: ಗೋಲ್ಡನ್ ಪಾಸ್ (Golden Pass) ಪಡೆದು, ಸರತಿ ಸಾಲಿನಲ್ಲಿ ನಿಂತು ನಟ ಧ್ರುವ ಸರ್ಜಾ (Dhruva Sarja) ಹಾಸನಾಂಬೆ ದರ್ಶನ ಪಡೆದಿದ್ದಾರೆ.
ತಂದೆ ಹಾಗೂ ಸ್ನೇಹಿತರ ಜೊತೆ ಹಾಸನಾಂಬ ದೇವಾಲಯಕ್ಕೆ (Hasanamba Temple) ಆಗಮಿಸಿದ ಧ್ರುವ ಸರ್ಜಾ, ಸರತಿ ಸಾಲಿನಲ್ಲಿ ಬಂದು ದೇವಸ್ಥಾನದ ಬಳಿ ಬರುತ್ತಿದ್ದಂತೆ ಸರತಿ ಸಾಲಿನಿಂದ ಹೊರಬಂದು ನಂತರ ಮುಖ್ಯದ್ವಾರದ ಮೂಲಕ ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ: ರಷ್ಯಾದ ತೈಲ ಆಮದು ಕಡಿಮೆಯಾಗಲಿದೆ, ದೀಪಾವಳಿಯಂದು ಮೋದಿ ಜೊತೆ ಮಾತನಾಡಿದ್ದೇನೆ: ಟ್ರಂಪ್
ಇನ್ನು ಹಾಸನಾಂಬ ದೇವಿ ಸಾರ್ವಜನಿಕ ದರ್ಶನಕ್ಕೆ ಇಂದು ಹದಿಮೂರು ಹಾಗೂ ಕಡೆಯ ದಿನವಾಗಿದ್ದು, ಹಿಂದೆಂದೂ ಕಾಣದಷ್ಟು ಭಕ್ತಗಣ ಆಗಮಿಸಿದೆ. ಬೆಳಗ್ಗೆ 6 ಗಂಟೆಯಿಂದ ದೇವಿ ದರ್ಶನ ಆರಂಭವಾಗಿದ್ದು, ಸರತಿ ಸಾಲುಗಳಲ್ಲಿ ನಿಂತು ಸಹಸ್ರಾರು ಭಕ್ತರು ದೇವಿ ದರ್ಶನ ಪಡೆಯುತ್ತಿದ್ದಾರೆ. ಧರ್ಮ ದರ್ಶನ, 1000 ರೂ., 300 ರೂ. ಹಾಗೂ ವಿಶೇಷ ದರ್ಶನದ ಸರತಿ ಸಾಲುಗಳಲ್ಲಿ ಜನಜಂಗುಳಿ ಉಂಟಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮಳೆ – ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಇಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ನಿರಂತರವಾಗಿ ದೇವಿಯ ದರ್ಶನ ಪಡೆದಿದ್ದಾರೆ. ಇಂದು ರಾತ್ರಿ 7ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಗರ್ಭಗುಡಿಯ ಬಾಗಿಲು ಬಂದ್ ಆಗಿರಲಿದೆ. ರಾತ್ರಿ 7 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದೇವಿ ದರ್ಶನ ಇರುವುದಿಲ್ಲ. ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಬೆಳಗ್ಗೆ 5 ಗಂಟೆಯವರೆಗೆ ಸ್ಥಳೀಯರಿಗೆ ಹಾಗೂ ಸಾರ್ವಜನಿಕರಿಗೆ ದರ್ಶನವಿರಲಿದೆ. ನಾಳೆ ಶಾಸ್ತ್ರೋಕ್ತವಾಗಿ ಹಾಸನಾಂಬ ದೇವಿ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಇದನ್ನೂ ಓದಿ: ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿ ಅಮಾನತುಗೊಂಡಿರುವ ಪಿಡಿಒಗೆ ಮತ್ತೊಂದು ಸಂಕಷ್ಟ
– ಇತಿಹಾಸದಲ್ಲೇ ಮೊದಲ ಬಾರಿ ಅಧಿಕ ಭಕ್ತರ ಭೇಟಿ – ದೇಗುಲಕ್ಕೆ 17 ಕೋಟಿ ಆದಾಯ
ಹಾಸನ: ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಅ.10ರಿಂದ ಸೋಮವಾರದವರೆಗೆ ಒಟ್ಟು 23 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದು, ಈ ಮೂಲಕ ಹೊಸ ದಾಖಲೆ ಬರೆದಿದೆ.
ಈವರೆಗೂ ಹಾಸನಾಂಬೆ ದೇವಸ್ಥಾನಕ್ಕೆ 1,000, 300ರೂ. ಟಿಕೆಟ್ ಹಾಗೂ ಲಾಡು ಪ್ರಸಾದದಿಂದ ದೇಗುಲಕ್ಕೆ ಒಟ್ಟು 17 ಕೋಟಿ ರೂ. ಆದಾಯ ಹರಿದುಬಂದಿದ್ದು, ನಾಳೆ (ಅ.22) ಸಂಜೆ 7ಕ್ಕೆ ಸಾರ್ವಜನಿಕ ದರ್ಶನಕ್ಕೆ ಅದ್ಧೂರಿ ತೆರೆ ಬೀಳಲಿದೆ.
ಇಂದು ಬೆಳಗ್ಗೆ 7:30ರ ತನಕ ಸಾಲುಗಳು ಖಾಲಿಯಿದ್ದವು, ಆದರೆ 7.30ರ ಬಳಿಕ ಭಕ್ತರ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿ ಧರ್ಮ ದರ್ಶನದ ಸಾಲು, 1000, 300 ರೂ. ವಿಶೇಷ ದರ್ಶನದ ಸಾಲಿನಲ್ಲೂ ಜನಜಂಗುಳಿ ಉಂಟಾಗಿದೆ. ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸಾಗೋರಾಪಾದಿಯಲ್ಲಿ ಭಕ್ತರು ಹರಿದುಬರುತ್ತಿದ್ದಾರೆ. ಇದನ್ನೂ ಓದಿ: ಹಾಸನಾಂಬೆ ದರ್ಶನ ಪಡೆದ ಶಿವರಾಜ್‌ಕುಮಾರ್, ರಿಷಬ್ ಶೆಟ್ಟಿ ದಂಪತಿ
ಬೆಂಗಳೂರು: ರಾಜ್ಯದಲ್ಲಿ ಮಳೆ (Rain) ಆರ್ಭಟ ಮತ್ತೆ ಮುಂದುವರಿದಿದೆ. ದೀಪಾವಳಿ ಸಂಭ್ರಮದಲ್ಲಿದ್ದ ಜನತೆಗೆ ಮಳೆರಾಯ ಕೊಂಚ ಬೇಸರ ತರಿಸಿದ್ದಾನೆ. ಹಾಸನ, ಚಿಕ್ಕಮಗಳೂರು, ಉಡುಪಿ ಸೇರಿ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಸಾಕಷ್ಟು ಅವಾಂತರ ಸೃಷ್ಟಿಸಿದೆ. ಸತತ ಮಳೆಯಿಂದ ಬೆಳೆನಾಶವಾಗಿದ್ದು, ಬೆಳೆ ಕಳೆದುಕೊಂಡ ರೈತರು ಕಣ್ಣೀರಿಡುವಂತೆ ಮಾಡಿದೆ.
ಹಾಸನ ಜಿಲ್ಲೆಯಲ್ಲಿ ಕಳೆದ ಐದು ದಿನಗಳಿಂದ ಬಹುತೇಕ ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹೊಳೆನರಸೀಪುರ ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಬಾರಿ ಮಳೆಯಿಂದ ಕೆರೆಯ ಕೋಡಿ ಒಡೆದು ನೂರಾರು ಎಕರೆ ಪ್ರದೇಶದ ರೈತರ ಜಮೀನುಗಳು ಜಲಾವೃತಗೊಂಡಿವೆ. ಅಡಿಕೆ, ತೆಂಗಿನ ತೋಟ, ಹೊಲ, ಗದ್ದೆಗಳಲ್ಲಿ ನೀರು ತುಂಬಿಕೊಂಡಿದೆ.
ಅರಸೀಕೆರೆ ತಾಲೂಕಿನ ಚಿಕ್ಕಮ್ಮನಹಳ್ಳಿ ಗ್ರಾಮದ ಶಂಕರಲಿಂಗಪ್ಪ ಎಂಬವರ ಮನೆಗೆ ನೀರು ನುಗ್ಗಿದೆ. ಮನೆಯಲ್ಲಿದ್ದ ವಸ್ತುಗಳೆಲ್ಲಾ ನೀರಿನಲ್ಲಿ ತೇಲಿವೆ. ಹೊಳೆನರಸೀಪುರ ಪಟ್ಟಣದ, ಕಾರ್ಖಾನೆ ಬೀದಿಯಲ್ಲಿರುವ ಮಂಜು ಎಂಬವರ ಮನೆಗೂ ನೀರು ನುಗ್ಗಿ ಅಪಾರ ಹಾನಿ ಆಗಿದೆ. ಚನ್ನರಾಯಪಟ್ಟಣ ತಾಲೂಕಿನಲ್ಲಿ ಮಳೆಗೆ ಹಳ್ಳಕೊಳ್ಳ, ಕೆರೆ ಕಟ್ಟೆಗಳು ತುಂಬಿ ಹರಿದು ಹೊಲ, ಗದ್ದೆಗಳು ಜಲಾವೃತವಾಗಿವೆ.
ಅರಸೀಕೆರೆ ತಾಲೂಕಿನಲ್ಲೂ ಮಳೆ ಅಬ್ಬರಿಸಿದ್ದು, ಮಳೆನೀರು ಆಸ್ಪತ್ರೆ ಒಳಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ರೋಗಿಗಳು ಬೆಡ್‌ನಿಂದ ಕೆಳಗೆ ಇಳಿಯದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ರೋಗಿಗಳ ಕಡೆಯವರು ನೀರಿನಲ್ಲೇ ನಿಲ್ಲಬೇಕಾಗಿದೆ.
ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನವನ್ನ ಅಸವ್ಯಸ್ತಗೊಳಿಸಿದೆ. ದೀಪಾವಳಿ ಹಬ್ಬದಂದೇ ಅಬ್ಬರಿಸಿದ ಮಳೆಗೆ ಮಲೆನಾಡು ಜನರು ಹೈರಾಣಾಗಿದ್ದಾರೆ. ಜಿಲ್ಲೆಯ ಕಳಸ, ಹೊರನಾಡು, ಕುದುರೆಮುಖ ಭಾಗದಲ್ಲಿ ಭಾರೀ ಮಳೆಯಾಗಿದ್ದು. ಹಳ್ಳದಂತಾದ ರಸ್ತೆಗಳಲ್ಲಿ ವಾಹನ ಚಲಾಯಿಸಲು ವಾಹನ ಸವಾರರು ಪರದಾಡಿದ್ದಾರೆ.
ಕರಾವಳಿ ಜಿಲ್ಲೆ ಉಡುಪಿಯಲ್ಲೂ ಮಳೆ ಅಬ್ಬರ ಜೋರಾಗಿದೆ. ಗುಡುಗು, ಮಿಂಚು ಸಹಿತ ಸುರಿದ ಭಾರಿ ಮಳೆಗೆ ಉಡುಪಿ ಜನರು ಹೈರಾಣಾಗಿದ್ದಾರೆ. ಬಿರುಗಾಳಿ ಸಹಿತ ಮಳೆಯಾದ ಕಾರಣ. ಜಿಲ್ಲೆಯ ವಿವಿಧೆಡೆ ವಿದ್ಯುತ್‌ನಲ್ಲಿ ವ್ಯತ್ಯಯವಾಗಿದೆ.
ತುಮಕೂರು ಜಿಲ್ಲಾದ್ಯಂತ ಮಳೆ ಅಬ್ಬರಿಸುತ್ತಿದ್ದು, ಜನಜೀವನಕ್ಕೆ ಬ್ರೇಕ್ ಹಾಕಿದೆ. ತಿಪಟೂರಿನಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ರಸ್ತೆಗೆ ನುಗ್ಗಿದ ಮಳೆ ನೀರು ಕೃತಕ ಕೆರೆ ಸೃಷ್ಟಿಸಿದೆ. ಕೆರೆಯಂತಾದ ಅಂಡರ್‌ಪಾಸ್‌ನಲ್ಲಿ ವಾಹನ ಸವಾರರು ಪರದಾಡುವಂತ ಸ್ಥಿತಿ ನಿರ್ಮಾಣ ಮಾಡಿದೆ. ಅವೈಜ್ಞಾನಿಕ ಕಾಮಗಾರಿಗೆ ವಾಹನ ಸವಾರರು ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ್ದಾರೆ.
ಇನ್ನು ಚಿತ್ರದುರ್ಗ ತಾಲೂಕಿನ ಕಸವನಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗಿದ್ದು, ಶೀತ ಹೆಚ್ಚಾಗಿ ಹೂವಿನ ಗಿಡಗಳು ಕೊಳೆರೋಗಕ್ಕೆ ತುತ್ತಾಗಿ ಕೊಳೆಯುತ್ತಿವೆ. ದೀಪಾವಳಿಗೆ ಭರ್ಜರಿ ಲಾಭ ಗಳಿಸುವ ನಿರೀಕ್ಷೆಯಲ್ಲಿದ್ದ ರೈತರು ಕಂಗಲಾಗಿದ್ದಾರೆ. ಮಳೆಯಿಂದಾಗಿ ಸಕಾಲಕ್ಕೆ ಹೂವು ಕೊಯ್ಲು ಮಾಡಲಾಗದೇ ಕಲರ್ ಫುಲ್ ಸೆಂಟಿಲ್ ಹೂವು ಜಮೀನಲ್ಲೇ ಕೊಳೆಯುತ್ತಿದೆ. ಒಟ್ಟಾರೆ ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಮಳೆ ಸೃಷ್ಟಿಸಿದ ಅವಾಂತರಕ್ಕೆ ಜನರು ಹೈರಾಣಾಗಿದ್ದಾರೆ.
ಹಾಸನ: ಹಾಸನಾಂಬ ದೇವಿಯ (Hasanamba Temple) ದರ್ಶನ ಪಡೆದು ತೆರಳುತ್ತಿದ್ದ ವೇಳೆ ಎರಡು ಬೈಕ್‌ಗಳಿಗೆ (Bike) ಇನ್ನೋವಾ ಕಾರು (Innova Car0 ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ (Hassan) ಜಿಲ್ಲೆ, ಚನ್ನರಾಯಪಟ್ಟಣ (Channarayapatna) ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ನಡೆದಿದೆ.
ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ನೇಹಿತ ಬಸವರಾಜು ಜೊತೆಯಲ್ಲಿ ಬೆಂಗಳೂರಿನಿಂದ ಯಮಹಾ ಬೈಕ್‌ನಲ್ಲಿ ಅನು (19) ಹಾಗೂ ಛಾಯಾ (20) ಬಂದಿದ್ದರು. ಹಾಸನಾಂಬ ದೇವಿ ದರ್ಶನ ಮುಗಿಸಿ ಒಂದೇ ಬೈಕ್‌ನಲ್ಲಿ ಮೂವರು ತೆರಳುತ್ತಿದ್ದರು. ಈ ವೇಳೆ ಚನ್ನರಾಯಪಟ್ಟಣ ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ಹೌಸಿಂಗ್ ಬೋರ್ಡ್ ಬಳಿ ವೇಗವಾಗಿ ಬಂದು ಮೊದಲು ಆಕ್ಟಿವಾಗೆ ಡಿಕ್ಕಿ ಹೊಡೆದು ಬಳಿಕ ಬೈಕ್‌ಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದೆ. ಇದನ್ನೂ ಓದಿ: ನಾಡಿನಾದ್ಯಂತ ದೀಪಾವಳಿ ಸಂಭ್ರಮ – ಕೆಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ಬಸವರಾಜು ಹಾಗೂ ಅನುಶ್ರೀ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೋರ್ವ ಯುವತಿ ಛಾಯಾ ಸ್ಥಿತಿ ಚಿಂತಾಜನಕವಾಗಿದ್ದು, ಚನ್ನರಾಯಪಟ್ಟಣ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಅಪಘಾತದಲ್ಲಿ ಆಕ್ಟಿವಾ ಸವಾರ ಮೊಹಮ್ಮದ್ ಶಾಹಿದ್‌ಗೂ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಊರಿಗೆ ತೆರಳಿದ ಜನ – ಮೆಜೆಸ್ಟಿಕ್ ಬಸ್‌ನಿಲ್ದಾಣ ಖಾಲಿ ಖಾಲಿ