Tag: ಹಾಸನಾಂಬೆ ದೇವಾಲಯ

  • ಹಾಸನಾಂಬೆ ದರ್ಶನ ಪಡೆದ ಶಿವರಾಜ್‌ಕುಮಾರ್, ರಿಷಬ್ ಶೆಟ್ಟಿ ದಂಪತಿ

    ಹಾಸನಾಂಬೆ ದರ್ಶನ ಪಡೆದ ಶಿವರಾಜ್‌ಕುಮಾರ್, ರಿಷಬ್ ಶೆಟ್ಟಿ ದಂಪತಿ

    ಹಾಸನ: 10ನೇ ದಿನವೂ ಹಾಸನಾಂಬ ದೇವಿ (Hasanamba Temple) ಸಾರ್ವಜನಿಕ ದರ್ಶನಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ. ನಟ ಶಿವರಾಜ್ ಕುಮಾರ್ (Shivarajkumar) ದಂಪತಿ ಕೂಡ ದೇವಿ ದರ್ಶನ ಪಡೆದಿದ್ದಾರೆ. ಇತ್ತ ಕಾಂತಾರ-1 ಸಕ್ಸಸ್ ಬೆನ್ನಲ್ಲೇ ರಿಷಬ್ ಶೆಟ್ಟಿ (Rishab Shetty) ದಂಪತಿ ಕೂಡ ವಿಶೇಷ ಪೂಜೆ ಸಲ್ಲಿಸಿ ದೇವಿ ದರ್ಶನ ಪಡೆದರು.

    ಲೋಕಾಯುಕ್ತ ಬಿ.ಎಸ್.ಪಾಟೀಲ್, ಮಾಜಿ ಸಚಿವೆ ಉಮಾಶ್ರೀ, ದೇವೇಗೌಡರು ಪುತ್ರಿ ಅನಸೂಯ ಕೂಡ ದೇವಿ ದರ್ಶನ ಪಡೆದಿದ್ದಾರೆ. ಇಂದು ಭಾನುವಾರ ಆದರೂ ಧರ್ಮ ದರ್ಶನ ಸಾಲಿನಲ್ಲಿ ಭಕ್ತರ ಸಂಖ್ಯೆ ಇಳಿಕೆಯಾಗಿದೆ. 1 ಸಾವಿರ, 300 ರೂ ಟಿಕೆಟ್ ಸಾಲುಗಳು ಸಂಪೂರ್ಣ ಖಾಲಿಯಾಗಿವೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಯಾವ ಕ್ರಾಂತಿಯೂ ನಡೆಯೋದಿಲ್ಲ: ಹೆಚ್‌ಡಿಕೆ ಭವಿಷ್ಯ

    ಕಳೆದ ಎರಡು ದಿನಗಳಿಂದ ಭಾರೀ ಭಕ್ತರ ಆಗಮನದಿಂದ ಹೆಚ್ಚಾಗಿದ್ದು, ದರ್ಶನಕ್ಕೆ ಬರಲು ಭಕ್ತರ ಹಿಂದೇಟು ಹಾಕಿದ್ದಾರೆ. ಜೊತೆಗೆ ವಿಶೇಷ ಬಸ್‌ಗಳ ಸಂಖ್ಯೆ ಕೂಡ ಕಡಿಮೆ ಮಾಡಿದ ಕಾರಣ ಭಕ್ತರ ಸಂಖ್ಯೆ ತಗ್ಗಿದೆ. ಹಾಸನಾಂಬ ದೇವಾಲಯದಲ್ಲಿಯೇ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಮೊಕ್ಕಾಂ ಹೂಡಿದ್ದಾರೆ. ಇದನ್ನೂ ಓದಿ: ಶ್ರೀರಾಮನಗರಿಯಲ್ಲಿ ಝಗಮಗಿಸಿದ ದೀಪೋತ್ಸವ – 26 ಲಕ್ಷ ದೀಪಗಳಿಂದ ಕಂಗೊಳಿಸಿದ ಅಯೋಧ್ಯೆ

    ಇನ್ನು ಡಿಸಿ ಲತಾ ಕುಮಾರಿಗೆ ಎಸ್ಪಿ ಮೊಹಮ್ಮದ್ ಸುಜೀತಾ ಪತ್ರ ಬರೆದು, ಭಕ್ತರನ್ನು ನಿಯಂತ್ರಿಸಲು ಕ್ರಮ ವಹಿಸದೇ ಇದ್ದಲ್ಲಿ ಅಹಿತಕರ ಘಟನೆ ಸಂಭವಿಸಿದರೆ ಪೊಲೀಸ್ ಇಲಾಖೆ ಜವಾಬ್ದಾರಿಯಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅತಿವೃಷ್ಟಿಯಿಂದ ಹಾನಿ – ಕರ್ನಾಟಕಕ್ಕೆ SDRFನಿಂದ 384 ಕೋಟಿ ರೂ. ಬಿಡುಗಡೆ

  • ಹಾಸನಾಂಬೆ ದರ್ಶನ ಪಡೆದ 19 ಲಕ್ಷ ಜನ, ಇದು ಸರ್ಕಾರದ ‘ಶಕ್ತಿ ಯೋಜನೆ’ಯ ಸಾಧನೆ: ಡಿ.ಕೆ.ಶಿವಕುಮಾರ್

    ಹಾಸನಾಂಬೆ ದರ್ಶನ ಪಡೆದ 19 ಲಕ್ಷ ಜನ, ಇದು ಸರ್ಕಾರದ ‘ಶಕ್ತಿ ಯೋಜನೆ’ಯ ಸಾಧನೆ: ಡಿ.ಕೆ.ಶಿವಕುಮಾರ್

    – ಪ್ರಸಾದ, ವಿಶೇಷ ದರ್ಶನದ ಟಿಕೆಟ್‌ನಿಂದ 9 ಕೋಟಿ ರೂ. ಸಂಗ್ರಹ

    ಬೆಂಗಳೂರು: ಶಕ್ತಿ ದೇವತೆ ಹಾಸನಾಂಬೆ ಜಾತ್ರೆ ಈ ಬಾರಿ ಅಭೂತಪೂರ್ವ ದಾಖಲೆಯನ್ನು ಬರೆದಿದೆ. 9 ದಿನಗಳ ಉತ್ಸವದಲ್ಲಿ 19 ಲಕ್ಷ ಭಕ್ತಾದಿಗಳು ದರ್ಶನ ಪಡೆದಿದ್ದಾರೆ. 9 ಕೋಟಿ ರೂಪಾಯಿ ಲಾಡು ಪ್ರಸಾದ ಮತ್ತು ಟಿಕೆಟ್‌ನಿಂದ ಸಂಗ್ರಹವಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ಭಕ್ತರು ಹರಿದುಬಂದಿರುವುದು ‘ಶಕ್ತಿ ಯೋಜನೆ’ಯ ಪರಿಣಾಮ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

    ಪತ್ರಿಕಾ ಹೇಳಿಕೆ ನೀಡಿರುವ ಅವರು, 24 ಗಂಟೆ ದೇವಿಯ ದರ್ಶನದ ವ್ಯವಸ್ಥೆ ಅದ್ಬುತವಾಗಿತ್ತು. ಬೀದರ್‌ನಿಂದ ಚಾಮರಾಜನಗರದ ವರೆಗೆ ಬಳ್ಳಾರಿಯಿಂದ ಕೋಲಾರದ ವರೆಗೆ ಮಾತ್ರವಲ್ಲ ವಿವಿಧ ರಾಜ್ಯಗಳ ಭಕ್ತರು, ಬೇರೆ ದೇಶಗಳ ಭಕ್ತರೂ ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡಿಕೊಂಡು ಬಂದಿದ್ದರು. ಉಚಿತ ಬಸ್ ಪ್ರಯಾಣ ಇರುವುದರಿಂದ ಇಷ್ಟು ಭಕ್ತರು ಬರಲು ಸಾಧ್ಯವಾಗಿದೆ. ಇದನ್ನು ನೋಡಿ ಸರ್ಕಾರಕ್ಕೆ ಹೆಮ್ಮೆಯಾಗುತ್ತಿದೆ. ಸಾರ್ಥಕ ಭಾವ ಮೂಡುತ್ತಿದೆ ಎಂದು ತಿಳಿಸಿದರು.

    ಶಕ್ತಿ ಯೋಜನೆ ಮಹಿಳೆಯರ ಶಕ್ತಿ ವೃದ್ಧಿ ಮಾಡಿರುವುದರ ಜತೆಗೆ ನಮ್ಮ ಧಾರ್ಮಿಕ ಶಕ್ತಿಯನ್ನೂ ಹೆಚ್ಚಿಸಿದೆ ಎಂಬುದು ಸಾಕ್ಷಿ. ಜೊತೆಗೆ ಹಾಸನಾಂಬೆ ದರ್ಶನಕ್ಕೆ ಜಿಲ್ಲಾಡಳಿತ ಅಷ್ಟು ಸಮರ್ಪಕ ವ್ಯವಸ್ಥೆ ಮಾಡಿದೆ. 9 ದಿನಗಳಲ್ಲಿ 19 ರಿಂದ 20 ಲಕ್ಷ ಜನ ದೇವಿಯ ದರ್ಶನ ಪಡೆದಿದ್ದಾರೆ ಎಂಬುದು ಸಣ್ಣ ವಿಚಾರವಲ್ಲ ಎಂದರು.

    ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ, ಬಹುತೇಕ ಉತ್ಸವ ಯಶಸ್ವಿಯಾಗಿದೆ‌. ಅದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಡಳಿತ ಹಾಗೂ ಶ್ರಮಿಸಿದ ಪೌರ ಕಾರ್ಮಿಕರು,‌ ಪೊಲೀಸರು, ಕಂದಾಯ ಅಧಿಕಾರಿಗಳು ಹಾಗೂ ಇತರ ಇಲಾಖೆ ಸಿಬ್ಬಂದಿ, ಸ್ವಯಂ ಸೇವಕರು, ಹಾಸನದ ನಾಗರಿಕರು, ಎಲ್ಲ ಭಕ್ತರಿಗೂ ಕೃತಜ್ಞರಾಗಿದ್ದೇವೆ ಎಂದು ತಿಳಿಸಿದರು.

    ಇಷ್ಟು ದೊಡ್ಡ ಸಂಖ್ಯೆಯ ಭಕ್ತರ ಭೇಟಿ ಐತಿಹಾಸಿಕ ದಾಖಲೆ. ಎಲ್ಲರಿಗೂ ನಾವು ವೈಯಕ್ತಿಕವಾಗಿ, ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ. ಮುಂದಿನ ದಿನಗಳಲ್ಲಿ ಸಣ್ಣಪುಟ್ಟ ಅಹಿತಕರ ಘಟನೆಗಳೂ ನಡೆಯದಂತೆ ಸರ್ಕಾರ ಸೂಕ್ತ ಮುನ್ನೆಚ್ಚರಿಕ ಕೈಗೊಳ್ಳಲಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

  • ಹಾಸನಾಂಬೆ ದೇವಿ ದರ್ಶನ – ಎರಡನೇ ದಿನವೂ ಭಕ್ತರ ದಂಡು

    ಹಾಸನಾಂಬೆ ದೇವಿ ದರ್ಶನ – ಎರಡನೇ ದಿನವೂ ಭಕ್ತರ ದಂಡು

    ಹಾಸನ: ಹಾಸನಾಂಬೆ ದೇವಿ (Hasanamba Temple) ದರ್ಶನಕ್ಕೆ ಎರಡನೇ ದಿನವಾದ ಶನಿವಾರದಂದು ಭಕ್ತರ ದಂಡು ಹರಿದು ಬರುತ್ತಿದೆ.

    ನಸುಕಿನ ನಾಲ್ಕು ಗಂಟೆಯಿಂದಲೇ ಹಾಸನ (Hassan) ದೇವಿ ದರ್ಶನ ಆರಂಭಗೊಂಡಿದೆ. ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಉಪಚುನಾವಣೆ ಬ್ಯುಸಿಯಲ್ಲೂ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿ ದರ್ಶನ ಪಡೆದ ಡಿಕೆಶಿ

    ವೀಕೆಂಡ್ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಸಾವಿರ ರೂ., ಮುನ್ನೂರು ರೂ. ಪಾವತಿಸಿದರೆ ವಿಶೇಷ ದರ್ಶನವಿರುತ್ತದೆ. ಈ ಸಾಲಿನಲ್ಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರಿದ್ದಾರೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆಯುತ್ತಿದ್ದಾರೆ.

    ಹೊರ ಜಿಲ್ಲೆ, ಹೊರ ರಾಜ್ಯಗಳಿಂದಲೂ ಭಕ್ತರು, ರಾಜಕೀಯ ಗಣ್ಯರು, ಸೆಲೆಬ್ರಿಟಿಗಳು ಆಗಮಿಸಿ ದೇವಿಯ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇದನ್ನೂ ಓದಿ: ಇಂದಿನಿಂದ ಸಾರ್ವಜನಿಕರಿಗೆ ಹಾಸನಾಂಬೆ ದರ್ಶನ – ಶಕ್ತಿದೇವತೆ ದರ್ಶನಕ್ಕೆ ಹರಿದು ಬಂದ ಭಕ್ತರ ದಂಡು

    ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲನ್ನು ಗುರುವಾರ ಶಾಸ್ತ್ರೋಕ್ತವಾಗಿ ತೆರೆಯಲಾಯಿತು.

  • ಇಂದಿನಿಂದ ಸಾರ್ವಜನಿಕರಿಗೆ ಹಾಸನಾಂಬೆ ದರ್ಶನ – ಶಕ್ತಿದೇವತೆ ದರ್ಶನಕ್ಕೆ ಹರಿದು ಬಂದ ಭಕ್ತರ ದಂಡು

    ಇಂದಿನಿಂದ ಸಾರ್ವಜನಿಕರಿಗೆ ಹಾಸನಾಂಬೆ ದರ್ಶನ – ಶಕ್ತಿದೇವತೆ ದರ್ಶನಕ್ಕೆ ಹರಿದು ಬಂದ ಭಕ್ತರ ದಂಡು

    ಹಾಸನ: ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ಕರುಣಿಸುವ ಹಾಸನಾಂಬೆ ದೇವಿಯ (Hasanamba Tempel) ಗರ್ಭಗುಡಿ ಗುರುವಾರ ತೆರೆದಿದ್ದು, ಇಂದಿನಿಂದ (ಶುಕ್ರವಾರ) ಸಾರ್ವಜನಿಕರು ಶಕ್ತಿದೇವತೆಯ ದರ್ಶನ ಪಡೆಯಬಹುದಾಗಿದೆ.

    ಇಂದಿನಿಂದ 10 ದಿನ ಹಾಸನಾಂಬೆ ದೇವಿ ತನ್ನ ಭಕ್ತರಿಗೆ ದರ್ಶನ ನೀಡಲಿದ್ದಾಳೆ. ಇಂದು ಮುಂಜಾನೆ 4 ಗಂಟೆಗೆ ದರ್ಶನ ಆರಂಭವಾಗಿದ್ದು, ಇಂದು ಶಕ್ತಿದೇವತೆಯ ದರ್ಶನ ಪಡೆಯಲು ಭಕ್ತರ ದಂಡೇ ಹರಿದು ಬಂದಿದೆ. ಗುರುವಾರ ಮಧ್ಯರಾತ್ರಿಯಿಂದಲೇ ದೇವಿ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮಕ್ಕಳ ಕಳ್ಳರ ಮೇಲೆ ಅಥಣಿ ಪೊಲೀಸರಿಂದ ಫೈರಿಂಗ್- ತಾಯಿ ಮಡಿಲು ಸೇರಿದ ಮಕ್ಕಳು

    ಒಂದು ವರ್ಷದ ಬಳಿಕ ಶಕ್ತಿ ದೇವತೆ ಹಾಸನಾಂಬೆಯ ದರ್ಶನ ಪಡೆದು ಭಕ್ತರು ಶಕ್ತಿದೇವತೆಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಇಂದು ರಾತ್ರಿ 11 ಗಂಟೆಯವರೆಗೂ ದೇವಿಯ ದರ್ಶನಕ್ಕೆ ಅವಕಾಶವಿರುತ್ತದೆ. ನವೆಂಬರ್ 3ಕ್ಕೆ ಹಾಸನಾಂಬ ಜಾತ್ರಾ ಮಹೋತ್ಸವ ಜರುಗಲಿದ್ದು, ಕೊನೆಯ ದಿನ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಉಳಿದ ಒಂಭತ್ತು ದಿನ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶವಿರುತ್ತದೆ. ಇದನ್ನೂ ಓದಿ: ಬಿಬಿಎಂಪಿಗೆ ಡಿಸಿಎಂ ಖಡಕ್ ವಾರ್ನಿಂಗ್ – ಸೋಮವಾರದಿಂದ ಅನಧಿಕೃತ ಕಟ್ಟಡಗಳ ಸರ್ವೆ ಆರಂಭ

  • ಹಾಸನಾಂಬೆ ದೇಗುಲಕ್ಕೆ ದಾಖಲೆಯ ಆದಾಯ- 9 ದಿನಗಳಲ್ಲಿ 4,56,22,580 ರೂ. ಸಂಗ್ರಹ

    ಹಾಸನಾಂಬೆ ದೇಗುಲಕ್ಕೆ ದಾಖಲೆಯ ಆದಾಯ- 9 ದಿನಗಳಲ್ಲಿ 4,56,22,580 ರೂ. ಸಂಗ್ರಹ

    ಹಾಸನ: ವರ್ಷಕ್ಕೆ ಒಂದು ಬಾರಿ ದರ್ಶನ ನೀಡುವ ಹಾಸನಾಂಬೆಯ (Hasanambe) ಜಾತ್ರಾ ಮಹೋತ್ಸವ ಇತಿಹಾಸದಲ್ಲೇ ದಾಖಲೆ ಬರೆದಿದ್ದು, ದಾಖಲೆಯ ಆದಾಯ (Income) ಗಳಿಸಿದೆ.

    9 ದಿನಗಳ ದರ್ಶನದಲ್ಲಿ ಒಟ್ಟು 4,56,22,580 ರೂ. ಸಂಗ್ರಹವಾಗಿದೆ. ವಿಶೇಷ ದರ್ಶನದ ಪಾಸ್ ಹಾಗೂ ಲಡ್ಡು ಪ್ರಸಾದ ಮಾರಾಟದಿಂದ ಕೋಟಿ ಕೋಟಿ ಆದಾಯ ಗಳಿಸಿದೆ. ನ.3ರಿಂದ ಪ್ರಾರಂಭವಾಗಿ ನ.11ರ ಮಧ್ಯಾಹ್ನ 2ಗಂಟೆಯವರೆಗೆ ಒಟ್ಟು 4,56,22,580 ರೂ. ಆದಾಯ ಬಂದಿದೆ. ಸಾವಿರ ರೂ. ಟಿಕೆಟ್ ಮಾರಾಟದಿಂದ 2,30,91,000 ರೂ. ಸಂಗ್ರಹವಾಗಿದ್ದು, 300 ರೂ. ಟಿಕೆಟ್ ಮಾರಾಟದಿಂದ 1,79,65,500 ರೂ. ಸಂಗ್ರಹವಾಗಿದೆ. ಇದನ್ನೂ ಓದಿ: ಅತಿವೃಷ್ಠಿಯಲ್ಲಿ ಬಿಎಸ್‍ವೈ ಭಿಕ್ಷೆ ಬೇಡಿದ್ದರು, ಸಿದ್ದರಾಮಯ್ಯರಂತೆ ಡ್ಯಾನ್ಸ್ ಮಾಡಿರಲಿಲ್ಲ: ಆರಗ ಜ್ಞಾನೇಂದ್ರ ವ್ಯಂಗ್ಯ

    ಲಡ್ಡು ಪ್ರಸಾದ ಮಾರಾಟದಿಂದ ಕೂಡ 45,66,080 ಹಣ ಸಂಗ್ರಹವಾಗಿದ್ದು, ಒಟ್ಟು 4,56,22,580 ರೂ. ಆದಾಯವನ್ನು ಹಾಸನಾಂಬ ದೇವಾಲಯ ಗಳಿಸಿದೆ. ಹಾಸನಾಂಬೆ ದರ್ಶನೋತ್ಸವ ಇತಿಹಾಸದಲ್ಲೇ ಅತಿ ಹೆಚ್ಚಿನ ಆದಾಯ ಗಳಿಸಿದ್ದು, ಇನ್ನೂ ಮೂರು ದಿನ ಬಾಕಿ ಇರುವಾಗಲೇ ಕೋಟಿ ಕೋಟಿ ಆದಾಯ ಗಳಿಸಿದೆ. ಇದನ್ನೂ ಓದಿ: ನ.15ಕ್ಕೆ ವಿಜಯೇಂದ್ರ ಪದಗ್ರಹಣ

  • ಹಾಸನಾಂಬೆ ದರ್ಶನದ ವೇಳೆ ಕರೆಂಟ್‌ ಶಾಕ್‌ – ನೂಕುನುಗ್ಗಲು, ಎದ್ನೋ ಬಿದ್ನೋ ಓಡಿದ ಮಹಿಳೆಯರು

    ಹಾಸನಾಂಬೆ ದರ್ಶನದ ವೇಳೆ ಕರೆಂಟ್‌ ಶಾಕ್‌ – ನೂಕುನುಗ್ಗಲು, ಎದ್ನೋ ಬಿದ್ನೋ ಓಡಿದ ಮಹಿಳೆಯರು

    ಬೆಂಗಳೂರು: ಕರೆಂಟ್ ಶಾಕ್‌ನಿಂದ (Electrocuted) ದಿಢೀರ್ ನೂಕು ನುಗ್ಗಲು ಸೃಷ್ಟಿಯಾದ ಘಟನೆ ಹಾಸನಾಂಬೆ ದೇವಸ್ಥಾನದಲ್ಲಿ(Hasanamba Temple) ಬಳಿ ನಡೆದಿದೆ.

    ವರ್ಷಕ್ಕೆ ಒಂದು ಬಾರಿ ತೆರೆಯಲ್ಪಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್‌ 2 ರಿಂದ ತೆರೆದಿದ್ದು ಇಂದು ಬೆಳಗ್ಗೆಯಿಂದಲೂ ಸಾವಿರಾರು ಸಂಖ್ಯೆಯ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸಿದ್ದರು.

    ಮಧ್ಯಾಹ್ನ 12.30ರ ವೇಳೆ ಉಚಿತ ದರ್ಶನದ ಸಾಲಿ ಹಾಕಿದ್ದ ಬ್ಯಾರಿಕೇಡ್‌ನಲ್ಲಿ ವಿದ್ಯುತ್‌ ಪ್ರವಹಿಸಿದೆ. ಬ್ಯಾರಿಕೇಡ್‌ ವಿದ್ಯುತ್‌ ಪ್ರವಹಿಸಿದ್ದನ್ನು ಕಂಡು ಸಾಲಿನಲ್ಲಿದ್ದ ಭಕ್ತರು ಜೀವ ಉಳಿಸಿಕೊಳ್ಳಲು ಎದ್ನೋ ಬಿದ್ನೋ ಎಂದು ಸ್ಥಳದಿಂದ ಓಡಿದ್ದಾರೆ. ಈ ವೇಳೆ ಒಬ್ಬರ ಮೇಲೆ ಒಬ್ಬರು ಬಿದ್ದಿದ್ದಾರೆ. ಇದನ್ನೂ ಓದಿ: PSI Scam: ಪಿಎಸ್‌ಐ ಮರುಪರೀಕ್ಷೆಗೆ ಹೈಕೋರ್ಟ್‌ ಆದೇಶ – ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಜಾ

    ಕೂಡಲೇ ಅಲ್ಲಿದ್ದ ಸ್ವಯಂಸ್ವೇವಕರು ಮತ್ತು ಸ್ಥಳೀಯರು ಕೆಲವರನ್ನು ಹೊರಗೆಳೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. 20 ಮಂದಿಗೆ ಕರೆಂಟ್‌ ಶಾಕ್‌ ಹೊಡೆದಿದ್ದು, ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.

     

  • ಧರ್ಮಸ್ಥಳ, ಹಾಸನಾಂಬೆ ದರ್ಶನ ಮುಗಿಸಿ ವಾಪಸಾಗುತ್ತಿದ್ದಾಗ ಭೀಕರ ಅಪಘಾತ – ಮಕ್ಕಳು ಸೇರಿ 9 ಮಂದಿ ದುರ್ಮರಣ

    ಧರ್ಮಸ್ಥಳ, ಹಾಸನಾಂಬೆ ದರ್ಶನ ಮುಗಿಸಿ ವಾಪಸಾಗುತ್ತಿದ್ದಾಗ ಭೀಕರ ಅಪಘಾತ – ಮಕ್ಕಳು ಸೇರಿ 9 ಮಂದಿ ದುರ್ಮರಣ

    ಹಾಸನ: ಟೆಂಪೋ ಟ್ರಾವೆಲರ್, ಹಾಲಿನ ಲಾರಿ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂಭತ್ತು ಮಂದಿ ಸಾವನ್ನಪ್ಪಿದ್ದು, ಹನ್ನೆರಡು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಗಾಂಧಿನಗರದಲ್ಲಿ ನಡೆದಿದೆ.‌

    ಹಳ್ಳಿಕೆರೆ ಗ್ರಾಮದ ಹದಿನಾಲ್ಕು ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ತೆರಳಿ, ಅಲ್ಲಿಂದ ಹಾಸನಕ್ಕೆ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದು ಗ್ರಾಮಕ್ಕೆ ತೆರಳುತ್ತಿದ್ದರು. ಊರಿಗೆ ತಲುಪಲು ಎರಡರಿಂದ ಮೂರು ನಿಮಿಷವಿರುವಾಗಲೇ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು: ಆಡಿಯೋ ವೈರಲ್

    ಅರಸೀಕೆರೆ ತಾಲ್ಲೂಕಿನ, ಹಳ್ಳಿಕೆರೆ ಗ್ರಾಮದ ಹದಿನಾಲ್ಕು ಮಂದಿ ಟೆಂಪೋ ಟ್ರಾವೆಲ‌ರ್ ವಾಹನದಲ್ಲಿ ನಿನ್ನೆ ಧರ್ಮಸ್ಥಳಕ್ಕೆ ತೆರಳಿದ್ದರು. ಮಕ್ಕಳು ಸೇರಿದಂತೆ ಪುರುಷರು ಮುಡಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಿ, ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ದೇವಿ ದರ್ಶನ ಪಡೆದು ಎಲ್ಲರೂ ಹಳ್ಳಿಕೆರೆ ಗ್ರಾಮಕ್ಕೆ ತೆರಳುತ್ತಿದ್ದರು. ಸ್ವಗ್ರಾಮ ತಲುಪಲು ಎರಡು ಕಿಲೋಮೀಟರ್ ಇದ್ದು, ಐದು ನಿಮಿಷದಲ್ಲಿ ಮನೆ ಸೇರಿಕೊಳ್ಳತ್ತಿದ್ದರು.

    ಅರಸೀಕೆರೆ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಕಾಮಗಾರಿ ನಡೆಯುತ್ತಿದ್ದು, ಟಿಟಿ ವಾಹನದ ಹಿಂದೆ ಸಾರಿಗೆ ಬಸ್ ಬರುತ್ತಿತ್ತು. ಶಿವಮೊಗ್ಗ ಕಡೆಯಿಂದ ಅರಸೀಕೆರೆ ಕಡೆಗೆ ಬರುತ್ತಿದ್ದ ಯಮಸ್ವರೂಪಿ ಹಾಲಿನ ಲಾರಿ ಚಾಲಕನಿಗೆ ತಿರುವು ಗೊತ್ತಾಗದೆ ಎರಡು ವಾಹನಗಳು ಬರುತ್ತಿದ್ದ ಕಡೆಗೆ ಏಕಮುಖವಾಗಿ ಬಂದಿದೆ. ಈ ವೇಳೆ ವೇಗವಾಗಿದ್ದ ಟಿಟಿ ವಾಹನ ಹಾಲಿನ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಇದೇ ವಾಹನದ ಹಿಂಬದಿಯಿದ್ದ ಸಾರಿಗೆ ಬಸ್ ಪಲ್ಟಿಯಾಗಿದ್ದ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದಿದೆ.‌ ಇದನ್ನೂ ಓದಿ: RSS ಬಗ್ಗೆ ಹೊಟ್ಟೆ ಕಿಚ್ಚಿದ್ದವರಿಗೆ ಮದ್ದಿಲ್ಲ: ಪ್ರಮೋದ್ ಮಧ್ವರಾಜ್

    ಟಿಟಿ ವಾಹನದಲ್ಲಿದ್ದ ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ದ್ರುವ (2), ವಂದನಾ (20), ದೊಡ್ಡಯ್ಯ (60), ಭಾರತಿ (50) ಸೇರಿ ಒಂಭತ್ತು ಮಂದಿ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿದ್ದು, 12 ಮಂದಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಹತ್ತು ಮಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರು ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಕ್ರೇನ್ ಮೂಲಕ ಟಿಟಿ ವಾಹನವನ್ನು ತೆರುವುಗೊಳಿಸಲಾಯಿತು.‌

    ಒಂದೇ ಗ್ರಾಮದ ನಾಲ್ವರು ಮಕ್ಕಳು, ಮೂವರು ಮಹಿಳೆಯರು, ಓರ್ವ ಪುರುಷ ಸಾವನ್ನಪ್ಪಿದ್ದು, ಮೃತದೇಹಗಳನ್ನು ಅರಸೀಕೆರೆ ತಾಲ್ಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.‌ ಸ್ಥಳಕ್ಕೆ ಅರಸೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ.

    Live Tv
    [brid partner=56869869 player=32851 video=960834 autoplay=true]

  • ಹೆಚ್.ಡಿ ರೇವಣ್ಣ ಕುಟುಂಬಸ್ಥರು ಜನರ ಪ್ರಾಣ ಹಿಂಡ್ತಿದ್ದಾರೆ – ಹಾಸನಾಂಬೆಗೆ ಪತ್ರ

    ಹೆಚ್.ಡಿ ರೇವಣ್ಣ ಕುಟುಂಬಸ್ಥರು ಜನರ ಪ್ರಾಣ ಹಿಂಡ್ತಿದ್ದಾರೆ – ಹಾಸನಾಂಬೆಗೆ ಪತ್ರ

    ಹಾಸನ: ಹೆಚ್.ಡಿ ರೇವಣ್ಣ ಕುಟುಂಬದವರು ಜನರ ಪ್ರಾಣ ಹಿಂಡುತ್ತಿದ್ದಾರೆ. ಅವರನ್ನು ಸೋಲಿಸಿಬಿಡು ಎಂದು ಹಾಸನಂಬೆ ದೇವಿಗೆ ಭಕ್ತರೊಬ್ಬರು ಪತ್ರ ಬರೆಯುವ ಮೂಲಕ ಕೋರಿಕೊಂಡಿದ್ದಾರೆ.

    Revanna

    ವರ್ಷಕ್ಕೊಮ್ಮೆ ತೆರೆಯುವ ಹಾಸನಾಂಬೆ ದೇವಾಲಯಕ್ಕೆ ರಾಜ್ಯದ ಮೂಲೆ ಮೂಲಗಳಿಂದ ಜನರು ಆಗಮಿಸಿ ದೇವಿಯ ದರ್ಶನ ಪಡೆದು, ಪತ್ರ ಬರೆಯುವ ಮೂಲಕ ತಮ್ಮ ಕೋರಿಕೆಗಳನ್ನು ನೆರವೇರಿಸುವಂತೆ ಬೇಡಿಕೊಳ್ಳುತ್ತಾರೆ. ಇದನ್ನೂ ಓದಿ: ಪದ್ಮಶ್ರೀ ಅಲ್ಲ, ಪುನೀತ್ ಅಮರಶ್ರೀ: ಶಿವರಾಜ್‍ಕುಮಾರ್

    ಪ್ರತಿವರ್ಷದಂತೆ ಈ ವರ್ಷವು ಭಕ್ತರು ಅನೇಕ ಪತ್ರಗಳನ್ನು ದೇವರಿಗೆ ಬರೆದು ಪ್ರಾರ್ಥಿಸಿದ್ದಾರೆ. ಹಲವಾರು ಪತ್ರಗಳ ಮಧ್ಯೆ ಭಕ್ತರೊಬ್ಬರು, ತಾಯಿ ಹಾಸನಾಂಬೆ, ನಿನ್ನ ಕೃಪೆಯಿಂದ ಹೊಳೆನರಸಿಪುರದ ಎಂಎಲ್‍ಎ ಬದಲಾಗಬೇಕು. ಜನರನ್ನು ಕಷ್ಟದಿಂದ ಪಾರುಮಾಡಬೇಕು. ಹೆಚ್. ಡಿ ರೇವಣ್ಣ ಕುಟುಂಬದ ಸದಸ್ಯರು ಜನರ ಪ್ರಾಣ ಹಿಂಡುತ್ತಿದ್ದಾರೆ. ಅವರ ಕುಟುಂಬದವರೆಲ್ಲರನ್ನು ಸೋಲಿಸಿ ಬಿಡು ತಾಯಿ. ಅವರು ಮುಂದೆ ಯಾರನ್ನು ಬರಲು ಬಿಡುತ್ತಿಲ್ಲ. ಒಳ್ಳೆಯದು ಮಾಡು ತಾಯಿ ಎಂದು ಹೆಚ್.ಎನ್ ಪುರ ಜನತೆ ಪರವಾಗಿ ಬರೆದಿದ್ದಾರೆ. ಇದನ್ನೂ ಓದಿ: ಹೊಸ ಸಿನಿಮಾ ಅನೌನ್ಸ್ ಮಾಡಿದ ಬಾಹುಬಲಿ ಬೆಡಗಿ ಅನುಷ್ಕಾ ಶೆಟ್ಟಿ

    ಮತ್ತೋರ್ವ ಭಕ್ತ, ಅಮ್ಮ ಆ ಧರ್ಮಾತ್ಮ ಪುನೀತ್ ರಾಜ್‍ಕುಮಾರ್ ಸಾಯುವುದರ ಬದಲು, ಈ ರಾಜಕೀಯದಲ್ಲಿ ನಾಟಕವಾಡಿ ಅವರು ತಿಂದು, ಅವರ ಮರಿಮೊಮ್ಮಕ್ಕಳು ತಿಂದು ತೇಗಿದರು ಕರಗದ ಆಸ್ತಿ ಮಾಡಿದ್ದಾರಲ್ಲ ಅವರು ಸಾಯಬೇಕಿತ್ತು. ಸಭೆಗಳಲ್ಲಿ ನಾಟಕವಾಡುತ್ತಾರಲ್ಲಾ ಅಂಥಾ ಬೇ.. ರಾಜಕಾರಣಿಗಳನ್ನು ಸಾಯಿಸು. ಆಗ ನಮ್ಮ ಕರ್ನಾಟಕ ರಾಜ್ಯ ಮುಂದುವರಿಯುತ್ತದೆ.  ಇದನ್ನೂ ಓದಿ:  ಭ್ರಷ್ಟ ರಾಜಕಾರಣಿಗಳು ಸಾಯಬೇಕಿತ್ತು – ಹಾಸನಾಂಬೆಗೆ ಪತ್ರ ಬರೆದ ಅಪ್ಪು ಅಭಿಮಾನಿ

    ಬಡವರು ಕರ್ನಾಟಕದಲ್ಲಿ ಸುಖವಾಗಿರುತ್ತಾರೆ. ನಿನ್ನೆ, ಮೊನ್ನೆ ಬಂದ ಈ ಕೆಲ ರಾಜಕಾರಣಿಗಳು ಕೋಟಿ ಕೋಟಿ ಆಸ್ತಿ ಮಾಡಿಕೊಂಡು ಬೀಗುತ್ತಾರಲ್ಲ ಅವರಿಗೆ ಕರ್ಮದ ಸಾವು ಬರಲಿ. ಪಾಪ ಪುನೀತ್ ಇದ್ದಿದ್ದರೆ ನಾಲ್ಕು ಜನ ನೆಮ್ಮದಿಯಿಂದ ಇರುತ್ತಿದ್ದರು ತಾಯಿ ಎಂದು ಭಕ್ತ ಪತ್ರದಲ್ಲಿ ಬರೆದಿದ್ದಾನೆ.

  • ಹಾಸನಾಂಬೆ ದೇವಾಲಯ ಓಪನ್- ಕೇವಲ ವಿವಿಐಪಿಗಳಿಗಷ್ಟೇ ದರ್ಶನ

    ಹಾಸನಾಂಬೆ ದೇವಾಲಯ ಓಪನ್- ಕೇವಲ ವಿವಿಐಪಿಗಳಿಗಷ್ಟೇ ದರ್ಶನ

    -ಜಿಲ್ಲಾಡಳಿತ ಕ್ರಮಕ್ಕೆ ಸಾರ್ವಜನಿಕರ ಆಕ್ರೋಶ

    ಹಾಸನ: ವರ್ಷಕ್ಕೆ ಒಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಿ ದೇಗುಲದ ಬಾಗಿಲು ತೆರೆಯಲಾಗಿದ್ದು, ದೇವಾಲಯದ ಎದುರು ಬಾಳೆಕಂದು ಕಡಿದ ತಕ್ಷಣ ಗರ್ಭಗುಡಿಯ ಬಾಗಿಲನ್ನು ಇಂದು ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ತೆರೆಯಲಾಯಿತು.

    ಕೊರೊನಾ ವೈರಸ್ ಸೋಂಕಿನ ಕಾರಣದಿಂದ ಹಾಸನಾಂಬೆ ದರ್ಶನಕ್ಕೆ ಭಕ್ತಾದಿಗಳಿಗೆ ಜಿಲ್ಲಾಡಳಿತ ಅವಕಾಶ ನೀಡಿರಲಿಲ್ಲ. ದೇವರ ದರ್ಶನಕ್ಕೆ ಕೇವಲ ವಿವಿಐಪಿಗಳಿಗೆ ಅವಕಾಶ ನೀಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಕರವೇ ಹಾಸನಾಂಬ ದೇವಾಲಯದ ಎದುರು ಮೌನ ಪ್ರತಿಭಟನೆ ನಡೆಸಿತು. ಭೇದಭಾವ ಮಾಡದೇ ಎಲ್ಲರಿಗೂ ದರ್ಶನದ ವ್ಯವಸ್ಥೆ ಮಾಡಿಕೊಡಿ. ಇಲ್ಲದಿದ್ದರೆ ಯಾರಿಗೂ ದರ್ಶನಕ್ಕೆ ಅವಕಾಶ ಕೊಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನಾಳೆ ದೇವಿಗೆ ಆಭರಣ ಧಾರಣೆ ನಂತರ 11 ದಿನಗಳ ಕಾಲ ನಿರಂತರ ಪೂಜೆ ನಡೆಸಲಾಗುತ್ತದೆ. ಈಗಾಗಲೇ ಜಿಲ್ಲಾಡಳಿತ ಖಜಾನೆಯಿಂದ ತರಲಾಗಿರುವ ಅಮ್ಮನವರ ಒಡವೆ ತರಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದೆ. ದೇಗುಲದ ಬಾಗಿಲು ಓಪನ್ ಮಾಡುವ ವೇಳೆ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತಿ ಇದ್ದರು.

    ಹಾಸನಾಂಬೆ ದರ್ಶನ ಬಳಿಕ ಮಾತನಾಡಿದ ಸಚಿವ ಗೋಪಾಲಯ್ಯ ಅವರು, ಇಂದು ಹಾಸನಾಂಬೆ ದರ್ಶನ ಪಡೆದಿದ್ದೇನೆ. ನಾನು ನೋಡಿದಾಗ ದೇವಾಲಯದ ಗರ್ಭಗುಡಿಯಲ್ಲಿ ಎರಡೂ ದೀಪಗಳು ಉರಿಯುತ್ತಿತ್ತು. ನಾನು ಪ್ರತಿವರ್ಷ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡುತ್ತೇನೆ. ಆದರೆ ಈ ಬಾರಿ ನಾನೇ ಸಚಿವನಾಗಿದ್ದು ದೇವಾಲಯದ ಬಾಗಿಲು ತೆರೆಯುವಾಗ ಇದ್ದಿದ್ದು ನನ್ನ ಪುಣ್ಯ. ಮುಖ್ಯಮಂತ್ರಿಗಳು ನನಗೆ ಈ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದು ತಿಳಿಸಿದರು.

    ಕೋವಿಡ್ ಕಾರಣದಿಂದ ಭಕ್ತರಿಗೆ ಅವಕಾಶ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ದೇವಿಯ ದರ್ಶನ ಮಾಡಲು ಹಾಸನದ 10 ಕಡೆ ಎಲ್‍ಇಡಿ ಪರದೆ ಅಳವಡಿಸಲಾಗಿದೆ. ಅಲ್ಲಿ ಭಕ್ತರು ದೇವಿಯ ದರ್ಶನ ಪಡೆಯಬಹುದು. ಉಳಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಭಕ್ತರು http://hasanambalive2020.com/Home.aspx ಲಿಂಗ್ ಮೂಲಕ ಆನ್‍ಲೈನ್‍ನಲ್ಲಿ ದೇವಿಯ ದರ್ಶನ ಪಡೆಯಬಹುದಾಗಿದೆ.

  • ಹಾಸನಾಂಬೆ ದೇವಾಲಯಕ್ಕೆ ಭಕ್ತರಿಂದ ಹರಿದು ಬಂತು ದಾಖಲೆ ಪ್ರಮಾಣದ ಹಣ

    ಹಾಸನಾಂಬೆ ದೇವಾಲಯಕ್ಕೆ ಭಕ್ತರಿಂದ ಹರಿದು ಬಂತು ದಾಖಲೆ ಪ್ರಮಾಣದ ಹಣ

    ಹಾಸನ: ಭಾನುವಾರ ಬೆಳಗ್ಗೆ ಆರಂಭಗೊಂಡಿದ್ದ ಹಾಸನಾಂಬೆ ದೇವಾಲಯದ ಹುಂಡಿ ಎಣಿಕೆ ಕಾರ್ಯ ಸಂಜೆ ವೇಳೆ ಮುಕ್ತಾಯಗೊಂಡಿದ್ದು, ದಾಖಲೆ ಪ್ರಮಾಣದ ಆದಾಯ ಹರಿದು ಬಂದಿದೆ. ಅಲ್ಲದೇ ಹುಂಡಿ ಎಣಿಕೆ ವೇಳೆ ಭಕ್ತರ ವಿಚಿತ್ರ ಪತ್ರಗಳು ಸಿಕ್ಕಿವೆ.

    ಒಂದು ಸಾವಿರ ಬೆಲೆಯ ಟಿಕೆಟ್‍ನಿಂದ 1.3 ಕೋಟಿ ರೂಪಾಯಿ, 300 ರೂಪಾಯಿ ಟಿಕೆಟ್‍ನಿಂದ 1.2ಕೋಟಿ ರೂಪಾಯಿ ಆದಾಯ ಬಂದಿದೆ. ಇನ್ನೂ ಪ್ರಸಾದದ ಆದಾಯ 70 ಲಕ್ಷ ರೂಪಾಯಿ ಬಂದಿದೆ. ಒಟ್ಟು ಈ ಬಾರಿಯ ಜಾತ್ರೆಯಲ್ಲಿ 4.14 ಕೋಟಿ ರೂ. ಆದಾಯ ಬಂದಿದೆ.

    ಬ್ಯಾಂಕ್ ಸಿಬ್ಬಂದಿ ಸೇರಿದಂತೆ ಒಟ್ಟು 50 ಜನ ಹುಂಡಿ ಎಣಿಕೆ ಮಾಡಿದ್ದರು. 4 ಸಿಸಿ ಕ್ಯಾಮರಾವನ್ನು ಅಳವಡಿಸಲಾಗಿತ್ತು. ಚಿಕ್ಕದು, ದೊಡ್ಡದು ಸೇರಿ ಒಟ್ಟು 16 ಹುಂಡಿಗಳಿದ್ದು, ಎಲ್ಲಾ ಹುಂಡಿಗಳ ಎಣಿಕಾ ಕಾರ್ಯ ಮುಕ್ತಾಯವಾಗಿದೆ. ಅಹೋರಾತ್ರಿ ಹಾಸನಾಂಬೆ ದರ್ಶನ ಮತ್ತು ಶೀಘ್ರ ದರ್ಶನಕ್ಕೆ 300 ರೂ. ಜೊತೆಗೆ 1 ಸಾವಿರ ರೂ. ಶುಲ್ಕ ನಿಗದಿ ಮಾಡಿದ್ದರಿಂದ ಈ ಬಾರಿ ಸುಮಾರು 5 ಕೋಟಿ ರೂ. ಅಧಿಕ ಆದಾಯವನ್ನು ನಿರೀಕ್ಷಿಸಲಾಗಿತ್ತು.

    ಕಳೆದ ವರ್ಷ ಹಾಸನಾಂಬೆ ಜಾತ್ರೆಯಲ್ಲಿ ಸಂಗ್ರಹವಾಗಿದ್ದ 2.36 ಕೋಟಿ ರೂ. ಈವರೆಗಿನ ಅತ್ಯಧಿಕ ಆದಾಯವಾಗಿತ್ತು. ಈ ಬಾರಿ ಒಟ್ಟು 10 ದಿನಗಳ ಕಾಲ 6 ರಿಂದ 7 ಲಕ್ಷ ಭಕ್ತರು, ದೇವಿಯ ದರ್ಶನ ಪಡೆದಿದ್ದಾರೆ ಎಂದು ಅಂದಾಜಿಸಲಾಗಿದೆ.

    ವಿಶೇಷವಾಗಿ ಹುಂಡಿ ಎಣಿಕೆ ವೇಳೆ ಭಕ್ತರ ವಿಚಿತ್ರ ಪತ್ರಗಳು ಸಿಕ್ಕಿದ್ದು, ನಾನು ಪ್ರೀತಿಸುವ ಹುಡುಗಿ ನನಗೆ ಸಿಗುವಂತೆ ಮಾಡು. ನನ್ನ ಮುಖದ ಮೊಡವೆಗಳನ್ನ ನಿವಾರಣೆ ಮಾಡು. ನನ್ನ ಸೌಂದರ್ಯವನ್ನ ಹೆಚ್ಚಿಸು. ಅತ್ತೆ ಮನೆ ಕಿರುಕುಳದಿಂದ ಪಾರು ಮಾಡು. ನನ್ನ ರೋಗ ನಿವಾರಿಸು ಎಂಬ ನಾನಾ ಕೋರಿಕೆಗಳನ್ನು ದೇವಿ ಬಳಿ ಭಕ್ತರು ಕೇಳಿಕೊಂಡಿದ್ದಾರೆ.