Tag: ಹಾಸನ ಶಾಸಕ

  • ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಬಾಲಕೃಷ್ಣ ಆಸ್ಪತ್ರೆಗೆ ದಾಖಲು

    ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಬಾಲಕೃಷ್ಣ ಆಸ್ಪತ್ರೆಗೆ ದಾಖಲು

    ಹಾಸನ: ಜಿಲ್ಲೆಯ ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಬಾಲಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಕಳೆದ 4 ದಿನಗಳಿಂದ ಕೆಮ್ಮಿನಿಂದ ಬಳಲುತ್ತಿದ್ದ ಕಾರಣ ಶಾಸಕ ಕೊರೊನಾ ಪರೀಕ್ಷೆ ಮಾಡಿಸಿದ್ದರು. ಆದರೆ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. ನಂತರ ವೈದ್ಯರ ಸಲಹೆ ಮೇರೆಗೆ ಮತ್ತೆ ಸಿಟಿ ಸ್ಕ್ಯಾನಿಂಗ್ ಮಾಡಿಸಿದ್ದಾರೆ. ಈ ವೇಳೆ ವೈದ್ಯರು ಹೆಚ್ಚಿನ ಚಿಕಿತ್ಸೆ ಬೇಕಾಗಿದೆ ಎಂದು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕರು ಬೆಂಗಳೂರಿನ ಮಣಿಪಾಲ ಆಸ್ಪತೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಈ ಬಗ್ಗೆ ಮಾಹಿತಿ ನೀಡಿರುವ ಅವರು, ಕ್ಷೇತ್ರದ ಜನರಿಗೆ ತೊಂದರೆಯಾಗಬಾರದೆಂದು ಬೆಂಗಳೂರಿಗೆ ಬಂದಿರುತ್ತೇನೆ. ಆದಷ್ಟು ಬೇಗನೆ ಗುಣಮುಖನಾಗಿ ಕ್ಷೇತ್ರದ ಜನರ ಕಷ್ಟ-ಸುಖಕ್ಕೆ ಭಾಗಿಯಾಗುತ್ತೇನೆ. ನನ್ನ ಆಪ್ತ ಸಹಾಯಕರ ದೂರವಾಣಿಗೆ ಕರೆಮಾಡಿ ನಿಮ್ಮ ಸಮಸ್ಯೆಗಳಿದ್ದರೆ ತಿಳಿಸಿ ಪರಿಹರಿಸಲು ನಿರ್ದೇಶನ ನೀಡಿರುತ್ತೇನೆ ಎಂದಿದ್ದಾರೆ.

  • ಯಾರ್ರೀ ಅವ್ನು ಪ್ರೀತಂ ಗೌಡ: ದೇವೇಗೌಡ ಕೆಂಡಾಮಂಡಲ

    ಯಾರ್ರೀ ಅವ್ನು ಪ್ರೀತಂ ಗೌಡ: ದೇವೇಗೌಡ ಕೆಂಡಾಮಂಡಲ

    ನವದೆಹಲಿ: ಯಾರ್ರೀ ಅವ್ನು ಪ್ರೀತಂಗೌಡ ಎಂದು ಪ್ರಶ್ನಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಿಡಿಕಾರಿದ್ದಾರೆ.

    ಆಪರೇಷನ್ ಆಡಿಯೋ ಕಮಲದ ವಿಚಾರವಾಗಿ ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆ ಶಾಸಕ ಪ್ರೀತಂಗೌಡ ವಿರುದ್ಧ ದೇವೇಗೌಡ ಗರಂ ಆದರು. ನನಗೆ ಯಾವ ಪ್ರೀತಂಗೌಡನೂ ಗೊತ್ತಿಲ್ಲ. ನಾನು ಪಾರ್ಲಿಮೆಂಟ್ ನಿಂದ ಈಗ ಬಂದಿದ್ದೇನೆ. ನನಗೇನು ಗೊತ್ತಿಲ್ಲ. ಯಾರೇ ಆದರೂ ಕಾನೂನು ಪ್ರಕಾರ ಕ್ರಮ ಕೈಗೊಳುತ್ತಾರೆ ಎಂದು ತಿಳಿಸಿದರು.

    ಇಂದು ಬಿಡುಗಡೆಯಾದ ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಲು ದೇವೇಗೌಡ ನಿರಾಕರಿಸಿದರು. ಈ ಕುರಿತು ಕೇಳುವುದಕ್ಕೆ ಪತ್ರಕರ್ತರಿಗೆ ನಾಚಿಕೆ ಆಗಲ್ವಾ ಎಂದು ಪ್ರಶ್ನಿಸಿ ಮಾಧ್ಯಮಗಳ ವಿರುದ್ಧ ಕಿಡಿಕಾರಿದರು. ಆಪರೇಷನ್ ಕಮಲ ಆಡಿಯೋ ಪ್ರಕರಣದ ವಿಚಾರಣೆಗೆ ಸ್ಥಳೀಯ ಪೊಲೀಸರು ಇದ್ದಾರೆ. ನಾನು ಪ್ರತಿಕ್ರಿಯೆ ನೀಡಲ್ಲ ಎಂದು ತಿಳಿಸಿದರು. ಇದನ್ನು ಓದಿ: ಗೌಡರ ಕುಟುಂಬ ಗೂಂಡಾಗಿರಿ ಕುಟುಂಬವಲ್ಲ – ಕಲ್ಲು ತೂರಾಟ ಮಾಡಿದವ್ರನ್ನ ಕ್ಷಮಿಸಲ್ಲ: ಸಿಎಂ ಎಚ್‍ಡಿಕೆ

    ಪ್ರೀತಂ ಗೌಡ ಹೇಳಿದ್ದೇನು?:
    ಸೂರ್ಯ ಚಂದ್ರ ಇರುವವರೆಗೂ ರಾಷ್ಟ್ರೀಯ ಪಕ್ಷ ದೇಶದಲ್ಲಿ ಇರುತ್ತದೆ. ಮಾಜಿ ಪ್ರಧಾನಿ ದೇವೇಗೌಡರ ವಿಕೆಟ್ ಹೋಗುತ್ತೆ. ಸಿಎಂ ಕುಮಾರಸ್ವಾಮಿ ಆರೋಗ್ಯವೂ ಸರಿಯಿಲ್ಲ. ಇದರಿಂದಾಗಿ ಜೆಡಿಎಸ್ ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತದೆ. ಮೈತ್ರಿ ಸರ್ಕಾರ ಈಗಂತೂ ಬಿದ್ದರೆ ಸಾಕು ಎನ್ನುವಂತಿದೆ. ನನಗೂ ಈಗ 35-36ನೇ ವಯಸ್ಸು, ಶಾಸಕನಾಗಿ ಇದ್ದೇನೆ. ನಿನಗೆ 30 ವರ್ಷವಾಗಿದೆ. ಇನ್ನೂ 40 ವರ್ಷ ರಾಜಕಾರಣ ಮಾಡಬೇಕು. ಎಲ್ಲಾ ಒಟ್ಟಿಗೆ ಇರೋಣ ಎಂದು ಅನಾಮಿಕ ವ್ಯಕ್ತಿಯ ಜೊತೆಗೆ ಫೋನಿನಲ್ಲಿ ಪ್ರೀತಂ ಗೌಡ ಮಾತನಾಡುತ್ತಿರುವ ಆಡಿಯೋ ವೈರಲ್ ಆಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv