ಕೊಪ್ಪಳ: ಜಿಲ್ಲೆಯ ಲಾಡ್ಜ್‌ವೊಂದರಲ್ಲಿ ಹಾಸ್ಟೆಲ್ ವಾರ್ಡನ್ (Hostel Warden) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಗದಗ ಜಿಲ್ಲೆಯ ನಿವಾಸಿಯಾಗಿರುವ ಹಾಮೇಶ್ ಲಮಾಣಿ (39) ಎಂದು ಗುರುತಿಸಲಾಗಿದ್ದು, ಹಾಸ್ಟೆಲ್ ವಾರ್ಡನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.ಇದನ್ನೂ ಓದಿ: ಸಿಎಂ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು – 11ಕ್ಕೂ ಹೆಚ್ಚು ಜನ ಅಸ್ವಸ್ಥ
ಭಾನುವಾರ (ಅ.20) ಕೊಪ್ಪಳದ ಲಾಡ್ಜ್ವೊಂದಕ್ಕೆ ಹಾಮೇಶ್ ಬಂದಿದ್ದರು. ಈ ವೇಳೆ ಬೆಡ್‌ಶೀಟ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕೊಪ್ಪಳ ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಸದ್ಯ ಹಾಸ್ಟೆಲ್ ವಾರ್ಡನ್ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರಗೆ ರವಾನಿಸಲಾಗಿದೆ.ಇದನ್ನೂ ಓದಿ: ಶಿವಮೊಗ್ಗ | ಕಾರ್ಗಲ್ ಬಳಿ ಪ್ರವಾಸಿಗರ ಬಸ್ ಪಲ್ಟಿ – 18 ಮಂದಿಗೆ ಗಾಯ








