Tag: ಹಾಸ್ಟೆಲ್ ಹುಡುಗರು

  • ಸಾಲು ಸಾಲು ಸಿನಿಮಾ ಸಂಭ್ರಮದಲ್ಲಿ ನಟಿ ಅರ್ಚನಾ ಕೊಟ್ಟಿಗೆ

    ಸಾಲು ಸಾಲು ಸಿನಿಮಾ ಸಂಭ್ರಮದಲ್ಲಿ ನಟಿ ಅರ್ಚನಾ ಕೊಟ್ಟಿಗೆ

    ಟಿ ಅರ್ಚನಾ ಕೊಟ್ಟಿಗೆ (Archana Kottige) ಸಿನಿಮಾ ರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ಗುರುತಿಸಿಕೊಳ್ಳುತ್ತಿದ್ದಾರೆ. ಕನ್ನಡ ಚಿತ್ರರಂಗದ (Sandalwood) ಮಟ್ಟಿಗೆ ಇವರು ಭಿನ್ನ ಆಲೋಚನೆಯ ನಟಿ ಅನ್ನೋದರಲ್ಲಿ ಎರಡು ಮಾತಿಲ್ಲ. ಯಾಕೆಂದರೆ, ಅವರಿಗೆ ನಾಯಕಿಯಾಗಿಯೇ ಫೇಮಸ್ ಆಗಬೇಕೆಂಬ ಉದ್ದೇಶವಿಲ್ಲವಂತೆ.

    ಪಾತ್ರ ಯಾವುದಾದರೂ ಅದು ಸವಾಲಿನದ್ದಾಗಿರಬೇಕು, ಪ್ರೇಕ್ಷಕರ ಮನಸಲ್ಲಿ ಅಚ್ಚಳಿಯದೇ ಛಾಪು ಮೂಡಿಸಬೇಕು ಅಂತಾರೆ ಅರ್ಚನಾ. ತಮ್ಮ ಆಲೋಚನೆಯಂತೆಯೇ ಈಗಾಗಲೇ ಸಾಕಷ್ಟು ಅವಕಾಶಗಳು ಸಿಕ್ಕಿದ್ದು, ಇನ್ನೇನು ಅವರು ಅಭಿನಯಿಸಿರುವ ಚಿತ್ರಗಳೆಲ್ಲ ಸಾಲು ಸಾಲಾಗಿ ಬಿಡುಗಡೆಯ ಸರತಿಯಲ್ಲಿವೆ. ಇದನ್ನೂ ಓದಿ:ಮಗಳೊಂದಿಗಿನ ಕ್ಯೂಟ್ ಸೆಲ್ಫಿ ಹಂಚಿಕೊಂಡ ರಾಧಿಕಾ ಪಂಡಿತ್

    ಇತ್ತೀಚೆಗೆ ಹೇಗಾಗಿದೆಯೆಂದರೆ, ಬಿಡುಗಡೆಯಾಗೋ ಸಿನಿಮಾಗಳಲ್ಲೆಲ್ಲ ಅರ್ಚನಾ ಇರುವಿಕೆಯೇ ದಟ್ಟವಾಗಿ ಕಾಣಿಸುತ್ತಿದೆ. ವಾರಗಳ ಹಿಂದೆಯಷ್ಟೇ ಬಿಡುಗಡೆಗೊಂಡು, ಇದೀಗ ರಾಜ್ಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿರುವ ಚಿತ್ರ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ (Hostel Hudugaru). ಅದರಲ್ಲಿಯೂ ಅರ್ಚನಾ ಕೊಟ್ಟಿಗೆ ಒಂದೊಳ್ಳೆ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅದಕ್ಕೆ ಪ್ರೇಕ್ಷಕರ ಕಡೆಯಿಂದ ಮೆಚ್ಚುಗೆ ಕೂಡ ಕೇಳಿ ಬರುತ್ತಿವೆ. ಇದರ ಬೆನ್ನಲ್ಲಿಯೇ ಅರ್ಚನಾ ನಟಿಸಿರುವ ಮತ್ತೊಂದಷ್ಟು ಚಿತ್ರಗಳು ಬಿಡುಗಡೆಗೆ ಸಜ್ಜಾಗಿವೆ.

    ಬಯಲು ಸೀಮೆ, ಎಲ್ಲರ ಕಾಲೆಳೆಯುತ್ತೆ ಕಾಲ, ಜುಗಲ್ಬಂದಿ ಮುಂತಾದ ಚಿತ್ರಗಳೀಗ ಬಿಡುಗಡೆಯ ಹೊಸ್ತಿಲಿನಲ್ಲಿವೆ. ಈ ಎಲ್ಲ ಚಿತ್ರಗಳಲ್ಲಿ ಒಂದಕ್ಕಿಂತ ಒಂದು ವಿಶೇಷ ಪಾತ್ರಗಳಲ್ಲಿ ಅರ್ಚನಾ ನಟಿಸಿದ್ದಾರಂತೆ. ಜುಗಲ್ಬಂದಿ ಚಿತ್ರದಲ್ಲಿ ಅರ್ಚನಾ ನೆಗೆಟಿವ್ ಶೇಡ್ ಪಾತ್ರದಲ್ಲಿ ನಟಿಸಿದ್ದರೆ, ಬಯಲು ಸೀಮೆ ಚಿತ್ರದಲ್ಲಿ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಎಲ್ಲರ ಕಾಲೆಳೆಯುತ್ತೆ ಕಾಲ ಸಿನಿಮಾದಲ್ಲಿ ಚಂದನ್ ಶೆಟ್ಟಿಗೆ ಜೋಡಿಯಾಗಿ ನಟಿಸಿದ್ದಾರೆ. ಇಲ್ಲಿ ಅರ್ಚನಾ ಹಳ್ಳಿ ಸೀಮೆಯ ಬಜಾರಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಎಲ್ಲ ಚಿತ್ರಗಳೂ ಸಾಲು ಸಾಲಾಗಿ ಬಿಡುಗಡೆಗೊಳ್ಳಲು ಸಜ್ಜಾಗಿವೆ.

    2018ರಲ್ಲಿ ‘ಅರಣ್ಯಕಾಂಡ’ ಚಿತ್ರದ ಮೂಲಕ ನಟಿಯಾಗಿ ಎಂಟ್ರಿ ಕೊಟ್ಟವರು ಅರ್ಚನಾ ಕೊಟ್ಟಿಗೆ. ಆ ನಂತರ ವಾಸು ನಾನ್ ಪಕ್ಕಾ ಕಮರ್ಷಿಯಲ್, ಮೇಡ್ ಇನ್ ಬೆಂಗಳೂರು, ಡಿಯರ್ ಸತ್ಯಾ, ಕಟಿಂಗ್ ಶಾಪ್, ಹೊಂದಿಸಿ ಬರೆಯಿರಿ, ಪ್ಯಾನ್ ಇಂಡಿಯಾ ಚಿತ್ರವಾದ ವಿಜಯಾನಂದ ಮುಂತಾದವುಗಳಲ್ಲಿ ನಟಿಸಿ ಸೈ ಅನ್ನಿಸಿಕೊಂಡಿದ್ದಾರೆ.

     

    ಹೀಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿರುವ ಅರ್ಚನಾಗೆ ಒಳ್ಳೆ ನಟಿ ಅನ್ನಿಸಿಕೊಳ್ಳುವ ಹೆಬ್ಬಯಕೆ ಇದೆ. ಇದೀಗ ಮತ್ತೊಂದಷ್ಟು ಅವಕಾಶಗಳೂ ಅವರನ್ನರಸಿ ಬರುತ್ತಿವೆ. ಸದ್ಯ ಒಂದು ಸಿನಿಮಾದಲ್ಲಿ ಬ್ಯುಸಿಯಾಗಿರೋ ಅರ್ಚನಾ, ಆ ಬಗೆಗಿನ ಮಾಹಿತಿಗಳನ್ನು ಸದ್ಯದಲ್ಲಿಯೇ ಪ್ರೇಕ್ಷಕರ ಮುಂದಿಡಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೀಕೆಂಡ್ ನಿಂದ ವಿದೇಶದಲ್ಲಿಯೂ ‘ಹಾಸ್ಟೆಲ್ ಬಾಯ್ಸ್’ ಹಂಗಾಮ

    ವೀಕೆಂಡ್ ನಿಂದ ವಿದೇಶದಲ್ಲಿಯೂ ‘ಹಾಸ್ಟೆಲ್ ಬಾಯ್ಸ್’ ಹಂಗಾಮ

    ಳ್ಳೆಯ ಸಿನಿಮಾಗಳಿಲ್ಲದೇ ಸೊರಗಿದ್ದ ಸ್ಯಾಂಡಲ್ ವುಡ್ ಇಂಡಸ್ಟ್ರೀಗೆ ಹಾಸ್ಟೆಲ್ ಹುಡುಗರು (Hostel Hudugaru) ಬೇಕಾಗಿದ್ದಾರೆ ಚಿತ್ರ ಹೊಸ ಚೈತನ್ಯ ತಂದು ಕೊಟ್ಟಿದೆ. ತುಂಗಾ ಬಾಯ್ಸ್ ಹಾಸ್ಟೆಲ್ ಹುಡುಗರ ಕ್ವಾಟ್ಲೆಗೆ ಪ್ರೇಕ್ಷಕ ಹೊಟ್ಟೆ ಹುಣ್ಣಾಗುವಂತೆ ನಕ್ಕುತ್ತಿದ್ದಾರೆ. ಭರಪೂರ ಮನರಂಜನೆ ಉಣಬಡಿಸಿರುವ ಈ ಸಿನಿಮಾಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಬರೀ ರಾಜ್ಯ ಮಾತ್ರವಲ್ಲ ಹೊರರಾಜ್ಯಗಳಿಗೂ ಹಾಸ್ಟೆಲ್ ಹುಡುಗರ  ಹಾವಳಿ ಹಬ್ಬಿದೆ. ಈಗ ವಿದೇಶದಲ್ಲಿಯೂ ಧಮಾಕ ಎಬ್ಬಿಸಲು ಬಾಯ್ಸ್ ರೆಡಿಯಾಗಿದ್ದಾರೆ.

    ಹಾಸ್ಟೆಲ್ ಹುಡುಗರ ಬೇಕಾಗಿದ್ದಾರೆ ಸಿನಿಮಾ ವಿದೇಶದಲ್ಲಿಯೂ (Abroad) ಬಿಡುಗಡೆಯಾಗುತ್ತಿದೆ. ಕೆನಡಾ, ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ಯುಕೆ ಮತ್ತು ಯೂರೋಪ್ ದೇಶಗಳಲ್ಲಿ ಇದೇ ವೀಕೆಂಡ್ ನಿಂದ ತುಂಗಾ ಹಾಸ್ಟೆಲ್ ಬಾಯ್ಸ್ ಕ್ವಾಟ್ಲೆ ಶುರುವಾಗಲಿದೆ. ಆರಂಭದಿಂದಲೂ ತಮ್ಮ ಚಿತ್ರವನ್ನು ಅತ್ಯಂತ ಕೆಟ್ಟ ಚಿತ್ರ ಎನ್ನುತ್ತಲೇ ಅತ್ಯುತ್ತಮ ಸಿನಿಮಾ ಎಂದು ಪ್ರೇಕ್ಷಕರಿಂದ ಬೆನ್ನು ತಟ್ಟಿಸಿಕೊಂಡಿರುವ ಚಿತ್ರತಂಡ ವಿಶ್ವಾದ್ಯಂತ ತಮ್ಮ ಸಿನಿಮಾವನ್ನು ಸಂಭ್ರಮಿಸುವ ತವಕದಲ್ಲಿದೆ. ಇದನ್ನೂ ಓದಿ:ಮದುವೆ ದಿನ ಹತ್ತಿರ ಬರುತ್ತಿದ್ದಂತೆ ಬಾಲಿಗೆ ಹಾರಿದ ಹರ್ಷಿಕಾ ಪೂಣಚ್ಚ

    ಹೈದರಾಬಾದ್, ಚೆನ್ನೈ, ಕೊಚ್ಚಿ ಸೇರಿದಂತೆ ಹಲವರು ರಾಜ್ಯಗಳಲ್ಲಿ ನಿತಿನ್ ಕೃಷ್ಣಮೂರ್ತಿ (Nitin Krishnamurthy) ಚೊಚ್ಚಲ ಕನಸ್ಸಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ. ವರುಣ್ ಗೌಡ (Varun Gowda), ನಿತಿನ್ ಕೃಷ್ಣಮೂರ್ತಿ, ಪ್ರಜ್ವಲ್ ಬಿ.ಪಿ, ಅರವಿಂದ್ ಎಸ್ ಕಶ್ಯಪ್ ಸಿನಿಮಾಗೆ ಬಂಡವಾಳ ಹೂಡಿದ್ದು, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ನಡಿ ಪ್ರೆಸೆಂಟ್ ಮಾಡಿದ್ದಾರೆ. ರಂಗಭೂಮಿ ಹಿನ್ನೆಲೆ ಹೊಂದಿರುವ ಪ್ರತಿಭಾನ್ವಿತ ತಂಡಕ್ಕೆ ರಿಷಬ್ ಶೆಟ್ಟಿ, ರಮ್ಯಾ, ಪವನ್ ಕುಮಾರ್, ಶೈನ್ ಶೆಟ್ಟಿ ಹಾಗೂ ದಿಗಂತ್ ಕೂಡ ಸಾಥ್ ಕೊಟ್ಟಿದ್ದಾರೆ.

     

    ಇಡೀ ಸ್ಯಾಂಡಲ್ ವುಡ್ ಬೆಂಬಲವಾಗಿ ನಿಂತಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಕನ್ನಡ ಸಿನಿಮಾ ಇಂಡಸ್ಟ್ರೀಗೆ ಹೊಸ ಹುರುಪು ತಂದುಕೊಟ್ಟಿದೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಕಶ್ಯಪ್ ಛಾಯಾಗ್ರಹಣ ಚಿತ್ರಕ್ಕಿದೆ. ಕಳೆದ ಶುರುವಾರ ರಾಜ್ಯಾದ್ಯಂತ ತೆರೆಕಂಡ ಸಿನಿಮಾ ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಪ್ರೇಕ್ಷಕಪ್ರಭುವಿಗೆ ಮನರಂಜನೆ ರಸದೌತಣ ನೀಡುವಲ್ಲಿ ಹೊಸಬರ ತಂಡ ಯಶಸ್ವಿಯಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಸ್ಟೆಲ್ ಹುಡುಗರ ವಿಭಿನ್ನ ಪ್ರಚಾರ : ಖ್ಯಾತ ಸಂಗೀತ ನಿರ್ದೇಶಕನನ್ನೇ ಕಿಡ್ನ್ಯಾಪ್

    ಹಾಸ್ಟೆಲ್ ಹುಡುಗರ ವಿಭಿನ್ನ ಪ್ರಚಾರ : ಖ್ಯಾತ ಸಂಗೀತ ನಿರ್ದೇಶಕನನ್ನೇ ಕಿಡ್ನ್ಯಾಪ್

    ಹಾಸ್ಟೆಲ್ ಹುಡುಗರೆಲ್ಲ (Hostel Boys) ಸೇರಿ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ (Ajanish Loknath) ರನ್ನು ಕಿಡ್ನಾಪ್ (Kidnap) ಮಾಡಿದ್ದಾರೆ. ಎರಡು ವಾರವಾದ್ರು ಇನ್ನೂ ಬಿಡುಗಡೆ ಮಾಡಿಲ್ಲ. ಇಷ್ಟು ದಿನ ಹಾಡು ಬಿಡುಗಡೆ ಮಾಡಿ ಎಂದು ಬೇಡಿಕೆ ಇಟ್ಟಿದ್ದ ಹುಡುಗರು ಈಗ ಬಿಡುಗಡೆಯಾಗಿರುವ ಹಾಡು ಹತ್ತು ಮಿಲಿಯನ್ ವೀವ್ಸ್ ಪಡೆದ ಮೇಲೆ ಬಿಡುಗಡೆ ಮಾಡುತ್ತೇವೆ ಎಂದು ಹಿಂಸೆ ನೀಡುತ್ತಿದ್ದಾರೆ ಎಂದು ಅಜನೀಶ್ ಲೋಕನಾಥ್ ಅಳಲು ತೋಡಿಕೊಂಡಿದ್ದಾರೆ. ಬಿಡುಗಡೆಯಾಗಿರುವ ‘ಪ್ರೊಟೆಸ್ಟ್ ಸಾಂಗ್’ ಹತ್ತು ಮಿಲಿಯನ್ ವೀವ್ಸ್  ಪಡೆಯಲು ಸಹಕರಿಸಿ ಎಂದು ಕರ್ನಾಟಕ ಜನತೆಗೆ  ಪತ್ರ ಬರೆದು ಮನವಿ ಮಾಡಿದ್ದಾರೆ ಅಜನೀಶ್. ಆದ್ರೆ ಇದೆಲ್ಲ ರಿಯಲ್ ಅಲ್ಲ ರೀಲ್ ಅನ್ನೋದು ಮರೆಯೋ ಹಾಗಿಲ್ಲ. ಹೌದು, ಇದು ಬಿಡುಗಡೆಗೆ ಸಜ್ಜಾಗಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಪ್ರಮೋಶನ್ ತಂತ್ರ.

    ಸಖತ್ ಕ್ರಿಯೇಟಿವ್ ಆಗಿ ಸಿನಿಮಾ ಪ್ರಮೋಷನ್ ಮಾಡುತ್ತ ಕಲಾರಸಿಕರುನ್ನು ತನ್ನತ್ತ ಸೆಳೆಯುತ್ತಿರುವ, ಕುತೂಹಲ ಹುಟ್ಟು ಹಾಕಿರುವ ಸಿನಿಮಾ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’. ಕಳೆದ ವಾರ ಚಿತ್ರತಂಡ ‘ಪ್ರೊಟೆಸ್ಟ್ ಸಾಂಗ್’ ಬಿಡುಗಡೆ ಮಾಡಿತ್ತು. ಚಿತ್ರದ ಮೊದಲ ಸಾಂಗ್ ಬಿಡುಗಡೆಯಾಗುತ್ತಿದ್ದಂತೆ ಕೆಲವೇ ಗಂಟೆಗಳಲ್ಲಿ ಒಂದು ಮಿಲಿಯನ್ಗೂ ಅಧಿಕ ವೀವ್ಸ್ ಪಡೆದುಕೊಂಡಿತ್ತು. ಯೋಗರಾಜ್ ಭಟ್ ಕ್ಯಾಚಿ ಲಿರಿಕ್ಸ್, ಅಜನೀಶ್ ಲೋಕನಾಥ್ ಕಿಕ್ ಕೊಡೋ ಮ್ಯೂಸಿಕ್ ಹಾಗೂ ಹಾಡು ಉತ್ತಮ ರೆಸ್ಪಾನ್ಸ್ ಗಿಟ್ಟಿಸಿಕೊಂಡಿತ್ತು. ಇದೀಗ ಈ ಹಾಡು ಹತ್ತು ಮಿಲಿಯನ್ ವೀವ್ಸ್ ಕಾಣಬೇಕೆಂಬುದು ಹಾಸ್ಟೆಲ್  ಹುಡುಗರ ಮಹದಾಸೆ. ಅದಕ್ಕೆಂದೇ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ರಿಂದ ಪತ್ರ ಬರೆಸಿ ಮನವಿ ಮಾಡಿದೆ. ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಇದನ್ನೂ ಓದಿ: ಬಾಲಿವುಡ್ ಸಿನಿಮಾದಲ್ಲಿ ಹಾಟ್ ಹಾಟ್ ಆಗಿ ಕಾಣಿಸಿಕೊಂಡ ರಾಗಿಣಿ

    ಯೂತ್ ಸಬ್ಜೆಕ್ಟ್ ಒಳಗೊಂಡ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ತಾರಾಗಣದಲ್ಲಿರುವ ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಇರಲಿದೆ.  ಪುನೀತ್ ರಾಜ್ ಕುಮಾರ್, ಸುದೀಪ್, ರಮ್ಯಾ, ರಕ್ಷಿತ್ ಶೆಟ್ಟಿ ಹೀಗೆ ಸ್ಟಾರ್ ನಟ ನಟಿಯರು ಈ ಸಿನಿಮಾಗೆ ಸಾಥ್ ನೀಡಿದ್ದಾರೆ. ಯೂನೀಕ್ ಕಾನ್ಸೆಪ್ಟ್ ಮೂಲಕ ಚಿತ್ರದ ಪ್ರಚಾರ ಕಾರ್ಯ ಮಾಡಿ ಅಪಾರ ನಿರೀಕ್ಷೆ ಹುಟ್ಟು ಹಾಕಿರುವ ಈ ಚಿತ್ರವನ್ನು ರಕ್ಷಿತ್ ಶೆಟ್ಟಿ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತ ಪಡಿಸುತ್ತಿದ್ದಾರೆ. ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನವಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k