Tag: ಹಿಂಡಲಗಾ

  • ರೇಣುಕಾಸ್ವಾಮಿ ಕೊಲೆ ಪ್ರಕರಣ – A14 ಆರೋಪಿ ಪ್ರದೋಶ್ ಬೆಳಗಾವಿಯಿಂದ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

    ರೇಣುಕಾಸ್ವಾಮಿ ಕೊಲೆ ಪ್ರಕರಣ – A14 ಆರೋಪಿ ಪ್ರದೋಶ್ ಬೆಳಗಾವಿಯಿಂದ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

    ಬೆಳಗಾವಿ: ಚಿತ್ರದುರ್ಗದ (Chitradurga) ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) 14ನೇ ಆರೋಪಿ ಪ್ರದೋಶ್‌ನನ್ನು ಪೊಲೀಸರು ಬೆಳಗಾವಿ ಹಿಂಡಲಗಾ ಜೈಲಿನಿಂದ (Hindalaga Jail) ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ.

    ಹೈಕೋರ್ಟ್ ಆದೇಶ ಹಿನ್ನೆಲೆ ಗುರುವಾರ ಬಿಗಿ ಭದ್ರತೆಯಲ್ಲಿ ಪ್ರದೋಶ್‌ನನ್ನು ಪೊಲೀಸರು ಬೆಂಗಳೂರು ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಆಗಸ್ಟ್ 28ರಂದು ಬೆಳಗಾವಿ ಹಿಂಡಲಗಾ ಜೈಲಿಗೆ ಪೊಲೀಸರು ಆರೋಪಿಯನ್ನು ಕರೆತಂದಿದ್ದರು. 44 ದಿನಗಳ ಬಳಿಕ ಮತ್ತೆ ಪರಪ್ಪನ ಅಗ್ರಹಾರಕ್ಕೆ (Parappana Agrahara) ಪ್ರದೋಶ್‌ನನ್ನು ರವಾನಿಸಲಾಗಿದೆ. ಇದನ್ನೂ ಓದಿ: ಮಾನಸಿಕ ಅಸ್ವಸ್ಥೆಯ ಹತ್ಯೆಗೈದು ಅತ್ಯಾಚಾರ – ಸೈಕೋ ಕಿಲ್ಲರ್ ಅರೆಸ್ಟ್

    ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ರಾಜ್ಯಾತಿಥ್ಯ ವಿಚಾರವಾಗಿ ದರ್ಶನ್ ಸೇರಿ ಹಲವರನ್ನು ರಾಜ್ಯದ ವಿವಿಧ ಜೈಲಿಗೆ ಪೊಲೀಸರು ಶಿಫ್ಟ್ ಮಾಡಿದ್ದರು. ಬೆಳಗಾವಿಯಿಂದ ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋಗುವ ವೇಳೆ ಪ್ರದೋಶ್ ಪೊಲೀಸ್ ವಾಹನದಲ್ಲಿ ಕುಳಿತು ನಗೆ ಬೀರಿದ್ದಾನೆ. ಇದನ್ನೂ ಓದಿ: ರತನ್‌ ಟಾಟಾ ಅಂತಿಮ ದರ್ಶನ ಪಡೆದ ಕ್ರಿಕೆಟ್‌ ದೇವರು

  • ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಪ್ರಕರಣ- ಬೆಳಗಾವಿ ಹಿಂಡಲಗಾ ಜೈಲಿನ ಕೈದಿ ವಶಕ್ಕೆ

    ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಪ್ರಕರಣ- ಬೆಳಗಾವಿ ಹಿಂಡಲಗಾ ಜೈಲಿನ ಕೈದಿ ವಶಕ್ಕೆ

    ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಗೆ (Nitin Gadkari) ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ (Belagavi) ಹಿಂಡಲಗಾ (Hindalga) ಜೈಲಿನ ಕೈದಿಯನ್ನು ಮಹಾರಾಷ್ಟ್ರ (Maharashtra) ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.

    ಜಯೇಶ್ ಕಾಂತಾ ಅಲಿಯಾಸ್ ಜಯೇಶ್ ಪೂಜಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾ.21ರಂದು ಮಹಾರಾಷ್ಟ್ರದ ನಾಗ್ಪುರದ (Nagpura) ಸಚಿವರ ಕಚೇರಿಗೆ ಕರೆ ಮಾಡಿ ಕೈದಿಯ ಹೆಸರಿನಲ್ಲಿ ಜೀವ ಬೆದರಿಕೆ ಒಡ್ಡಲಾಗಿತ್ತು. ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೆ ಮುಗಿಸಿದ ಪತ್ನಿ- ತನಿಖೆಯಲ್ಲಿ ಸತ್ಯ ಬಯಲು

    ಈ ಹಿಂದೆ ಸಹ ಜ.14ರಂದು ಸಚಿವರ ಕಚೇರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿ 10 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಹಿಂಡಲಗಾ ಜೈಲಿಗೆ ಭೇಟಿ ನೀಡಿ ಹಲವು ಬಾರಿ ತನಿಖೆ ನಡೆಸಿದ್ದರು. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ 4.3 ತೀವ್ರತೆಯ ಭೂಕಂಪನ

  • ಹಿಂಡಲಗಾ ಕೈದಿ ಹೆಸರಲ್ಲಿ ನಿತಿನ್ ಗಡ್ಕರಿ ಕಚೇರಿಗೆ ಮತ್ತೊಮ್ಮೆ ಜೀವಬೆದರಿಕೆ ಕರೆ

    ಹಿಂಡಲಗಾ ಕೈದಿ ಹೆಸರಲ್ಲಿ ನಿತಿನ್ ಗಡ್ಕರಿ ಕಚೇರಿಗೆ ಮತ್ತೊಮ್ಮೆ ಜೀವಬೆದರಿಕೆ ಕರೆ

    ಬೆಳಗಾವಿ: ತಾಲೂಕಿನ ಹಿಂಡಲಗಾ ಜೈಲಿನಲ್ಲಿರುವ (Hindalaga Jail) ಕೈದಿಯ (Prisoner) ಹೆಸರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಮತ್ತೊಮ್ಮೆ ಜೀವಬೆದರಿಕೆ ಕರೆ (Life threatening Call) ಮಾಡಲಾಗಿದ್ದು ಈ ಬಗ್ಗೆ ಮಹಾರಾಷ್ಟ್ರ (Maharashtra) ಎಟಿಎಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

    ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ಜಯೇಶ್ ಕಾಂತಾ ಅಲಿಯಾಸ್ ಜಯೇಶ್ ಪೂಜಾರಿ ಹೆಸರು ಬಳಸಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಮತ್ತೊಮ್ಮೆ ಜೀವಬೆದರಿಕೆ ಕರೆ ಮಾಡಲಾಗಿದೆ. ಮಹಾರಾಷ್ಟ್ರದ ನಾಗ್ಪುರದ ನಿತಿನ್ ಗಡ್ಕರಿ ಜನಸಂಪರ್ಕ ಕಚೇರಿಯ ಲ್ಯಾಂಡ್‌ಲೈನ್‌ಗೆ ಕರೆ ಮಾಡಲಾಗಿದ್ದು 10 ಕೋಟಿ ರೂ. ನೀಡುವಂತೆ ಬೇಡಿಕೆ ಇಡಲಾಗಿದೆ. ಈ ಹಿನ್ನೆಲೆ ನಾಗ್ಪುರದ ನಿತಿನ್ ಗಡ್ಕರಿ ಕಚೇರಿ ಬಳಿ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ. ಇದನ್ನೂ ಓದಿ: ದೆಹಲಿ ಹೊಸ ಮದ್ಯ ನೀತಿ ಹಗರಣ – ಕೆ. ಕವಿತಾ ಮೊಬೈಲ್ ವಶಕ್ಕೆ ಪಡೆದ ಇಡಿ

    ಮಹಾರಾಷ್ಟ್ರ ಎಟಿಎಸ್ ಅಧಿಕಾರಿಗಳಿಂದ ತನಿಖೆ ಮುಂದುವರಿದ್ದು ಈ ಹಿಂದೆ ಬೆಳಗಾವಿ ಹಿಂಡಲಗಾ ಜೈಲಿನ ಕೈದಿ ಜಯೇಶ್ ಕಾಂತಾ ಹೆಸರಿನಿಂದ ಜನವರಿ 14 ರಂದು ನಿತಿನ್ ಗಡ್ಕರಿ ಕಚೇರಿಗೆ ಜೀವ ಬೆದರಿಕೆ ಕರೆ ಬಂದಿತ್ತು. ಆಗ ಹಿಂಡಲಗಾ ಜೈಲಿಗೆ ಭೇಟಿ ನೀಡಿದ್ದ ಮಹಾರಾಷ್ಟ್ರದ ಅಧಿಕಾರಿಗಳ ತಂಡ ತನಿಖೆ ನಡೆಸಿದ್ದರು. ಈಗ ಮತ್ತೆ ಕೈದಿ ಜಯೇಶ್ ಕಾಂತಾ ಹೆಸರಿನಲ್ಲಿ ಜೀವ ಬೆದರಿಕೆ ಹಾಕಲಾಗಿದ್ದು, ಈ ಕರೆ ಎಲ್ಲಿಂದ ಬಂದಿದೆ ಎಂಬ ಬಗ್ಗೆ ತನಿಖೆಯನ್ನು ಮಹಾರಾಷ್ಟ್ರ ಎಟಿಎಸ್ ಅಧಿಕಾರಿಗಳು ನಡೆಸುತ್ತಿದ್ದಾರೆ. ಇದನ್ನೂ ಓದಿ: 80 ಸಾವಿರ ಪೊಲೀಸರು ಏನ್ ಮಾಡ್ತಿದ್ದಾರೆ – ಅಮೃತ್‌ಪಾಲ್ ಸಿಂಗ್ ಬಂಧಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ

  • ಹಿಂಡಲಗಾ ಗ್ರಾ.ಪಂ. ಅಧ್ಯಕ್ಷರಿಗೆ, ಸದಸ್ಯರಿಗೆ ಲೆಟರ್ ಕೊಟ್ಟಿದ್ದು ನಿಜ: ಆಶಾ ಐಹೊಳೆ

    ಹಿಂಡಲಗಾ ಗ್ರಾ.ಪಂ. ಅಧ್ಯಕ್ಷರಿಗೆ, ಸದಸ್ಯರಿಗೆ ಲೆಟರ್ ಕೊಟ್ಟಿದ್ದು ನಿಜ: ಆಶಾ ಐಹೊಳೆ

    ಬೆಳಗಾವಿ: ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ, ಸದಸ್ಯರಿಗೆ ನಾನು ಲೇಟರ್ ಕೊಟ್ಟಿದ್ದು ನಿಜ ಎಂದು ಮಾಜಿ ಬೆಳಗಾವಿ ಜಿ.ಪಂ. ಅಧ್ಯಕ್ಷೆ ಆಶಾ ಐಹೊಳೆ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2021ರಲ್ಲಿ ಹಿಂಡಲಗಾ ಗ್ರಾಮದ ಲಕ್ಷ್ಮಿದೇವಿ ಜಾತ್ರೆ ಇತ್ತು. ಜಾತ್ರೆಯ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರು ನನ್ನ ಬಳಿ ಬಂದಿದ್ದರು. ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಲೆಟರ್ ನೀಡುವಂತೆ ಕೋರಿದ್ದರು. ಆ ಪ್ರಕಾರ ಗ್ರಾಪಂ ಅಧ್ಯಕ್ಷರಿಗೆ, ಸದಸ್ಯರಿಗೆ ನಾನು ಲೇಟರ್ ಕೊಟ್ಟಿದ್ದು ನಿಜ. ಆದರೆ ನಾನು ಕೊಟ್ಟ ಲೆಟರ್‍ಗೆ ಏನು ಆಕ್ಷನ್ ಆಗಿದೆ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ತಮ್ಮದೇ ಪಕ್ಷದ ಸಂಸದರ ವಿರುದ್ಧವೇ ಕಿಡಿಕಾರಿದ ಸಚಿವ ಎಂಟಿಬಿ

    ಆರ್ ಡಿಪಿಆರ್ ಇಲಾಖೆ ಅನುಮೋದನೆ ನೀಡಿರುವ ವಿಷಯ ನನಗೆ ಇವತ್ತಷ್ಟೇ ಗೊತ್ತಾಗಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ್, ನಾನು ಮುಖಾಮುಖಿಯಾಗಿ ಎಂದೂ ಭೇಟಿಯಾಗಿಲ್ಲ. ಅವರ ಆತ್ಮಹತ್ಯೆ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಆದರೆ ಸಂತೋಷ್ ಆತ್ಮಹತ್ಯೆಯ ದುರಂತ ಮಾಡಿಕೊಳ್ಳಬಾರದಿತ್ತು. ಆರ್ಡಿಪಿಆರ್ ಇಲಾಖೆಯಿಂದ ಬಂದಿರುವ ರಿಸೀವ್ ಕಾಪಿನೂ ನನಗೆ ಸಿಕ್ಕಿಲ್ಲ ಎಂದರು. ಇದನ್ನೂ ಓದಿ: ಸಂತೋಷ್‌ ಪಾಟೀಲ್‌ ಕೇಸ್‌ಗೆ ಟ್ವಿಸ್ಟ್‌ – 2021ರಲ್ಲಿ ಬೆಳಗಾವಿ ZP ಅಧ್ಯಕ್ಷೆ ಬರೆದ ಪತ್ರ ಔಟ್‌

    ಜಿ.ಪಂ. ಅಧಿಕಾರಿಗಳು ಅದನ್ನು ಕಡತದಲ್ಲಿ ಇಟ್ಟಿರುತ್ತಾರೆ. ಕಾಮಗಾರಿಗಳ ಮಂಜೂರಾತಿಗೆ ನನ್ನ ಬಳಿ ಹಿಂಡಲಗಾ ಗ್ರಾ.ಪಂ. ಸದಸ್ಯರು ಬಂದಿದ್ದರು. ಕೆಲಸ ಆದ ಬಗ್ಗೆ ನನಗೇನೂ ಮಾಹಿತಿ ನೀಡಿಲ್ಲ. ಆ ಬಗ್ಗೆ ಗೊತ್ತೂ ಇಲ್ಲ. ನನ್ನ ಪತ್ರಕ್ಕೆ ಅನುಮೋದನೆ ನೀಡಿರುವ ಪತ್ರವೂ ಇವತ್ತಷ್ಟೇ ಸಿಕ್ಕಿದೆ. 17.ಫೆ.2021ಕ್ಕೆ ಅನುಮೋದನೆ ಆಗಿರುವುದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಶಾಲ್‌, ನನ್ನ ಮದ್ವೆ ಫಿಕ್ಸ್ ಆಗಿದೆ ಓಡೋಗೋಣ ಬಾ- 10 ರೂ. ನೋಟಲ್ಲಿನ ಲವ್ವರ್ ಸಂದೇಶ ವೈರಲ್

    ಸಂತೋಷ್ ಪಾಟೀಲ್ ನನಗೆ ಗೊತ್ತೇ ಎಂಬ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ, ಈ ಬಗ್ಗೆ ತನಿಖಾಧಿಕಾರಿಗಳು ಡೀಪ್ ಸ್ಟಡಿ ಮಾಡಬೇಕು. ನಾನು ಕೊಟ್ಟಿರುವ ಲೆಟರ್ ಬಗ್ಗೆ ಮೇಲಾಧಿಕಾರಿಗಳಿಗೆ ಎಷ್ಟು ಮಾಹಿತಿ ಇದೆ ಎಂಬುದು ನನಗೆ ಗೊತ್ತಿಲ್ಲ. ಆದರೆ ನಾನು ಪತ್ರ ಬರೆದಿದ್ದು ನಿಜ ಎಂದು ಬೆಳಗಾವಿಯಲ್ಲಿ ನಿಕಟಪೂರ್ವ ಜಿಪಂ ಅಧ್ಯಕ್ಷೆ ಆಶಾ ಐಹೊಳೆ ಮಾಹಿತಿ ನೀಡಿದ್ದಾರೆ.