Tag: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

  • ಮಳೆಯಿಂದ ಹಾಸ್ಟೆಲ್ ಜಲಾವೃತ: ರಾತ್ರಿಯಿಡೀ ಛಾವಣಿ ಹತ್ತಿ ಕುಳಿತ ವಿದ್ಯಾರ್ಥಿಗಳು

    ಮಳೆಯಿಂದ ಹಾಸ್ಟೆಲ್ ಜಲಾವೃತ: ರಾತ್ರಿಯಿಡೀ ಛಾವಣಿ ಹತ್ತಿ ಕುಳಿತ ವಿದ್ಯಾರ್ಥಿಗಳು

    ಕಲಬುರಗಿ: ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಚಿತ್ತಾಪುರ ತಾಲೂಕಿನ ಶಹಾಬಾದ್ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯಗಳಿಗೆ ನೀರು ನುಗ್ಗಿ ವಿದ್ಯಾರ್ಥಿಗಳು ರಾತ್ರಿಯಿಡೀ ಪರದಾಡಿದರು.

    ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿ, ನಾಗಾವಿ ಹಳ್ಳದ ಪ್ರವಾಹದಿಂದ ಈ ವಸತಿ ನಿಲಯ ಸಂಪೂರ್ಣ ಜಲಾವೃತವಾಗಿದೆ. ವಸತಿ ನಿಲಯದಲ್ಲಿ ಒಟ್ಟು 8 ವಿದ್ಯಾರ್ಥಿಗಳು, ಮಹಿಳಾ ಕಾವಲುಗಾರರು ಸೇರಿ ಎಲ್ಲರೂ ವಸತಿ ನಿಲಯದ ಕಟ್ಟಡದ ಛಾವಣಿ ಹತ್ತಿ ಕುಳಿತುಕೊಂಡಿದ್ದರು. ಇದನ್ನೂ ಓದಿ: ಭಾರತ್ ಬಂದ್ ಮಾಡಿದ್ದು ರೈತರಲ್ಲ, ಮಧ್ಯವರ್ತಿಗಳು: ನಾರಾಯಣಗೌಡ

    ವಸತಿ ನಿಲಯದಲ್ಲಿ 3 ರಿಂದ 4 ಅಡಿವರೆಗೆ ನೀರು ಸಂಗ್ರಹವಾದ ಹಿನ್ನೆಲೆ, ಪಠ್ಯಪುಸ್ತಕ ಹಾಗೂ ಪೀಠೋಪಕರಣಗಳು ಕೊಚ್ಚಿ ಹೋಗಿವೆ. ಇನ್ನು ಕೆಲ ಪೀಠೋಪಕರಣಗಳು ನೀರಿನಲ್ಲಿ ಜಲಾವೃತಗೊಂಡಿವೆ. ಮಕ್ಕಳ ಪಠ್ಯ ಪುಸ್ತಕವೆಲ್ಲ ನೀರಿನಲ್ಲಿ ಮುಳುಗಿದ್ದರಿಂದ ಮುಂದಿನ ವಿದ್ಯಾಭ್ಯಾಸಕ್ಕೆ ಪಠ್ಯ ಪುಸ್ತಕಗಳು ಇಲ್ಲದೆ ಮಕ್ಕಳು ಕಂಗಾಲಾಗಿದ್ದಾರೆ. ಇದನ್ನೂ ಓದಿ: ಭಾರತ್ ಬಂದ್ ನಡುವೆ ಕಾರ್ಖಾನೆಗೆ ಬೀಗ ಹಾಕಲು ರೈತರ ಯತ್ನ

    ಇಂದು ಬೆಳಗ್ಗೆ ಮಳೆ ಕಡಿಮೆಯಾಗುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿದ್ದಾರೆ. ಕಳೆದ ಬಾರಿ ಕೂಡ ಮಳೆಗಾಲದಲ್ಲಿ ಇದೇ ರೀತಿ ವಸತಿ ನಿಲಯಗಳು ಜಲಾವೃತವಾಗಿದ್ದವು. ಪ್ರತಿ ಬಾರಿ ಧಾರಾಕಾರ ಮಳೆ ಸುರಿದರೆ ಸಾಕು ಈ ವಸತಿ ನಿಲಯಕ್ಕೆ ನೀರು ಹರಿದು ಬರುತ್ತದೆ. ಹೀಗಾಗಿ ಇದಕ್ಕೆ ಮುಕ್ತಿ ಕೊಡಿಸಬೇಕಾದ ಕೆಲಸವನ್ನು ಸರ್ಕಾರ ಇನ್ನಾದರೂ ಮಾಡಬೇಕಾಗಿದೆ.

  • ನನಗೆ ಈಗಲೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳು: ಸಚಿವ ಪುಟ್ಟರಂಗ ಶೆಟ್ಟಿ

    ನನಗೆ ಈಗಲೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳು: ಸಚಿವ ಪುಟ್ಟರಂಗ ಶೆಟ್ಟಿ

    ದಾವಣಗೆರೆ: ನನಗೆ ಈಗಲೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಪುಟ್ಟರಂಗಶೆಟ್ಟಿ ನಗರದಲ್ಲಿ ಹೇಳಿಕೆ ನೀಡಿದ್ದಾರೆ.

    ನಗರದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯನವರು ನನಗೆ ಪಕ್ಷದಲ್ಲಿ ಟಿಕೆಟ್ ಕೊಡಿಸಿ ಗೆಲ್ಲುವಂತೆ ಮಾಡಿದ್ದಾರೆ. ಅವರು ಉಪ್ಪಾರ ಜನಾಂಗಕ್ಕೆ ಹಲವು ಸೌಲಭ್ಯಗಳನ್ನು ಸಹ ಕಲ್ಪಿಸಿಕೊಟ್ಟಿರುವುದರಿಂದ ನನಗೆ ಯಾವಾಗಲೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳು ಎಂದು ಹೇಳಿದರು.

    ಕೇವಲ ನಾನು ಜಿಲ್ಲಾ ಪಂಚಾಯತ್ ಅಧ್ಯಕ್ಷ ಹುದ್ದೆ ಸಾಕು ಎಂದುಕೊಂಡಿದ್ದ ನನಗೆ ಅವರು, ಸಚಿವರನ್ನಾಗಿ ಮಾಡಿದ್ದಾರೆ. ನಾನು ಸಚಿವನಾದ ಕೀರ್ತಿಯು ಕೇವಲ ಸಿದ್ದರಾಮಯ್ಯನವರಿಗೆ ಸಲ್ಲಿಸುತ್ತದೆ. ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದರೆ ನನಗೆ ಎಂದಿಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳು ಎಂದು ತಿಳಿಸಿದರು.

    ಇಂದು ರಾಜ್ಯದಲ್ಲಿ ಹಿಂದುಳಿದ ಜನಾಂಗದವರು ಮುಂದುವರಿಯುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ನಮ್ಮ ನಾಯಕರಾದ ಸಿದ್ದರಾಮಯ್ಯನವರ ಅಭಿವೃದ್ಧಿ ಕಾರ್ಯಗಳೇ. ನಾನು ಹಿಂದುಳಿದ ಇಲಾಖೆಯಲ್ಲಿ ಸಲ್ಲಿಸುವ ಪ್ರತಿಯೊಂದು ಸೇವೆಯ ಕೀರ್ತಿಯು ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಹಾಡಿ ಹೊಗಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews