Tag: ಹಿಂದೂಗಳು

  • ವಕ್ಫ್‌ ಕಾಯ್ದೆ ವಿರೋಧಿಸಿ ಹಿಂಸಾಚಾರ – ಹಿಂದೂಗಳು ಮನೆಬಿಟ್ಟು ಓಡಿಹೋಗುತ್ತಿದ್ದಾರೆಂದು ಬಿಜೆಪಿ ಆರೋಪ

    ವಕ್ಫ್‌ ಕಾಯ್ದೆ ವಿರೋಧಿಸಿ ಹಿಂಸಾಚಾರ – ಹಿಂದೂಗಳು ಮನೆಬಿಟ್ಟು ಓಡಿಹೋಗುತ್ತಿದ್ದಾರೆಂದು ಬಿಜೆಪಿ ಆರೋಪ

    – ಪಶ್ಚಿಮ ಬಂಗಾಳದಲ್ಲಿ ಪರಿಸ್ಥಿತಿ ಉದ್ವಿಗ್ನ; 150 ಜನರ ಬಂಧನ

    ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ (West Bengal) ವಕ್ಫ್‌ ಕಾಯ್ದೆ (Waqf Act) ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಇವರೆಗೂ 150 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಿಂಸಾಚಾರ ಪೀಡಿತ ಮುರ್ಷಿದಾಬಾದ್‌ ಜಿಲ್ಲೆಯಾದ್ಯಂತ ವಿನಾಶದ ದೃಶ್ಯಗಳು ಕಂಡುಬಂದವು.

    ವಕ್ಫ್‌ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದು, ಹಿಂಸಾತ್ಮಕ ಘಟನೆಗಳಿಂದ ಜಿಲ್ಲೆ ಉದ್ವಿಗ್ನಗೊಂಡಿದೆ. ಅರೆಸೈನಿಕ ಪಡೆಗಳು ನಿರ್ಜನ ಬೀದಿಗಳಲ್ಲಿ ಗಸ್ತು ತಿರುಗುತ್ತಿವೆ. ಇದನ್ನೂ ಓದಿ: ವಕ್ಫ್‌ ಕಾಯ್ದೆಗೆ ವಿರೋಧ, ಬಂಗಾಳ ಧಗಧಗ – 150ಕ್ಕೂ ಹೆಚ್ಚು ಮಂದಿ ಬಂಧನ

    ಹೆಚ್ಚುತ್ತಿರುವ ಅಶಾಂತಿ ನಿಯಂತ್ರಣಕ್ಕೆ ಕೋಲ್ಕತ್ತಾ ಹೈಕೋರ್ಟ್ ಜಿಲ್ಲೆಯ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೈನಿಕ ಪಡೆಗಳನ್ನು ನಿಯೋಜಿಸಲು ಆದೇಶಿಸಿತು. ಹಲವಾರು ಜಿಲ್ಲೆಗಳಲ್ಲಿ ವ್ಯಾಪಕವಾದ ವಿಧ್ವಂಸಕ ಕೃತ್ಯಗಳನ್ನು ಉಲ್ಲೇಖಿಸಿದ ಕೋರ್ಟ್‌, ಪರಿಸ್ಥಿತಿ ನಿಯಂತ್ರಣಕ್ಕೆ ಆದೇಶಿಸಿದೆ.

    ಹಿಂಸಾತ್ಮಕ ಪ್ರತಿಭಟನೆಗಳಿಂದಾಗಿ ಸ್ಥಳೀಯ ನಿವಾಸಿಗಳು ಮುರ್ಷಿದಾಬಾದ್‌ನಿಂದ ದೋಣಿ ಮೂಲಕ ಪಲಾಯನ ಮಾಡುತ್ತಿದ್ದಾರೆ. ಸುರಕ್ಷತೆಗಾಗಿ ನೆರೆಯ ಮಾಲ್ಡಾಕ್ಕೆ ನದಿಯನ್ನು ದಾಟಲು ಪ್ರಯತ್ನಿಸುತ್ತಿರುವ ದೃಶ್ಯಗಳು ಕಾಣಿಸಿಕೊಂಡವು. ಇದನ್ನೂ ಓದಿ: ಬಂಗಾಳದಲ್ಲಿ ವಕ್ಫ್‌ ಕಾಯ್ದೆ ವಿರೋಧಿಸಿ ಪ್ರತಿಭಟನೆ – ಘರ್ಷಣೆಯಲ್ಲಿ ಮೂವರು ಸಾವು

    ಶುಕ್ರವಾರದ ಪ್ರಾರ್ಥನೆಯ ನಂತರ ಪ್ರಾರಂಭವಾದ ಹಿಂಸಾಚಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಘರ್ಷಣೆಯಲ್ಲಿ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಭಾನುವಾರ, ಅಧಿಕಾರಿಗಳು ರಾತ್ರಿಯಿಡೀ ನಡೆಸಿದ ದಾಳಿಯ ನಂತರ ಹನ್ನೆರಡು ಜನರನ್ನು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ 150 ಕ್ಕೆ ಏರಿದೆ. ಸುಟಿ, ಧುಲಿಯನ್, ಸಂಸೇರ್‌ಗಂಜ್ ಮತ್ತು ಜಂಗಿಪುರ ಪ್ರದೇಶಗಳಲ್ಲಿ ಪರಿಸ್ಥಿತಿ ಶಾಂತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಮಮತಾ ಬ್ಯಾನರ್ಜಿ ಅವರದ್ದು ಓಲೈಕೆ ರಾಜಕಾರಣ ಎಂದು ಟೀಕಿಸಿದ್ದಾರೆ. ಹಿಂಸಾಚಾರದ ನಡುವೆ 400 ಕ್ಕೂ ಹೆಚ್ಚು ಹಿಂದೂಗಳನ್ನು ಮುರ್ಷಿದಾಬಾದ್‌ನಿಂದ ಹೊರಹಾಕಲಾಗಿದೆ ಎಂದು ಆರೋಪಿಸಿದ್ದಾರೆ.

  • ಅಮೆರಿಕಾ ಚುನಾವಣೆಯಲ್ಲೂ ಹಿಂದೂ ಅಸ್ತ್ರ ಪ್ರಯೋಗ – ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ಖಂಡಿಸಿದ ಟ್ರಂಪ್

    ಅಮೆರಿಕಾ ಚುನಾವಣೆಯಲ್ಲೂ ಹಿಂದೂ ಅಸ್ತ್ರ ಪ್ರಯೋಗ – ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ಖಂಡಿಸಿದ ಟ್ರಂಪ್

    ನ್ಯೂಯಾರ್ಕ್: ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹಿಂದೂ ಅಸ್ತ್ರ ಪ್ರಯೋಗಿಸಿದ್ದಾರೆ.

    ಅಮೆರಿಕಾದ ಹಿಂದೂಗಳಿಗೆ ದೀಪಾವಳಿ ಶುಭಾಶಯ ತಿಳಿಸಿದ ಟ್ರಂಪ್, ಇತ್ತೀಚಿಗೆ ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿದ್ದಾರೆ. ತಾನು ಅಧ್ಯಕ್ಷನಾದ್ರೆ ಭಾರತದ ಜೊತೆಗಿನ ಸಂಬಂಧವನ್ನು ಮತ್ತಷ್ಟು ಬಲಗೊಳಿಸುವ ಭರವಸೆ ನೀಡಿದ್ದಾರೆ.

    ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್‌ಗೆ ಹಿಂದೂಗಳ ಬಗ್ಗೆ ಕಾಳಜಿ ಇಲ್ಲ ಎಂದು ಟ್ರಂಪ್ ಟೀಕಿಸಿದ್ದಾರೆ. ಅಂದಹಾಗೇ, ಅಮೆರಿಕಾದಲ್ಲಿ ಈವರೆಗೂ 6.1 ಕೋಟಿ ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

  • ಬಾಂಗ್ಲಾದಿಂದ ಭಾರತಕ್ಕೆ ಹಿಂದೂಗಳೇ ಬರ್ತಿಲ್ಲ, ಆದ್ರೆ 35 ಮುಸ್ಲಿಂ ನುಸುಳುಕೋರರನ್ನು ಬಂಧಿಸಿದ್ದೇವೆ: ಅಸ್ಸಾಂ ಸಿಎಂ

    ಬಾಂಗ್ಲಾದಿಂದ ಭಾರತಕ್ಕೆ ಹಿಂದೂಗಳೇ ಬರ್ತಿಲ್ಲ, ಆದ್ರೆ 35 ಮುಸ್ಲಿಂ ನುಸುಳುಕೋರರನ್ನು ಬಂಧಿಸಿದ್ದೇವೆ: ಅಸ್ಸಾಂ ಸಿಎಂ

    ಗುವಾಹಟಿ: ಬಾಂಗ್ಲಾದೇಶದಿಂದ ಭಾರತಕ್ಕೆ ಹಿಂದೂಗಳು ಪ್ರವೇಶಿಸುವ ಪ್ರಯತ್ನ ಮಾಡಿಲ್ಲ. ಆದರೆ ನಾವು ಇದುವರೆಗೂ 35 ಮುಸ್ಲಿಂ ನುಸುಳುಕೋರರನ್ನು ಬಂಧಿಸಿದ್ದೇವೆ ಎಂದು ಬಾಂಗ್ಲಾ ಬಿಕ್ಕಟ್ಟಿನ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Sarma) ಹೇಳಿದ್ದಾರೆ.

    ಬಾಂಗ್ಲಾದೇಶದ ಬಿಕ್ಕಟ್ಟಿನ ಕುರಿತು ಟ್ವೀಟ್‌ ಮಾಡಿರುವ ಅವರು, ಬಾಂಗ್ಲಾದೇಶದಲ್ಲಿ ಹಿಂದೂಗಳು (Hindus) ಹೋರಾಡುತ್ತಿದ್ದಾರೆ. ಅಲ್ಲೇ ಉಳಿದುಕೊಂಡಿದ್ದಾರೆ. ಕಳೆದ ಒಂದು ತಿಂಗಳಲ್ಲಿ, ನಾವು ಒಬ್ಬ ಹಿಂದೂ ವ್ಯಕ್ತಿ ಭಾರತಕ್ಕೆ ಬಂದಿದ್ದನ್ನು ಪತ್ತೆ ಮಾಡಿಲ್ಲ. ಆದರೆ ಕಳೆದ ತಿಂಗಳಲ್ಲಿ ನಾವು 35 ಮುಸ್ಲಿಂ ನುಸುಳುಕೋರರನ್ನು ಬಂಧಿಸಿದ್ದೇವೆ. ಇಂದು ಕೂಡ ನಾವು ಕರೀಂಗಂಜ್‌ನಲ್ಲಿ ಇಬ್ಬರನ್ನು ಬಂಧಿಸಿದ್ದೇವೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ಬರೋಬ್ಬರಿ 2,100 ಕೋಟಿ ರೂ. ಚೆಕ್‌ ಕೊಟ್ಟ ದಾನಿ

    ಬಾಂಗ್ಲಾದೇಶದಿಂದ ಹಿಂದೂಗಳು ಅಸ್ಸಾಂಗೆ ಪ್ರವೇಶಿಸಿದ ಬಗ್ಗೆ ಯಾವುದೇ ದಾಖಲೆಗಳಿಲ್ಲ ಎಂದು ತಿಳಿಸಿದ್ದಾರೆ. ನಾವು ಅವರನ್ನು ತಡೆದು ವಾಪಸ್‌ ಕಳಿಸಿದ್ದೇವೆ. ಅದೃಷ್ಟವಶಾತ್ ಅಥವಾ ದುರದೃಷ್ಟವಶಾತ್, ಅವರು ಒಂದೇ ಸಮುದಾಯಕ್ಕೆ ಸೇರಿದವರು. ಅವರ‍್ಯಾರು ಹಿಂದೂ ಅಲ್ಲ. ಯಾವುದೇ ಹಿಂದೂಗಳು ಭಾರತಕ್ಕೆ ಬರಲು ಪ್ರಯತ್ನಿಸುತ್ತಿಲ್ಲ. ಬಾಂಗ್ಲಾದಲ್ಲೇ ಇದ್ದು ಹೋರಾಟ ಮಾಡುತ್ತಿದ್ದಾರೆ. ಹಿಂದೂಗಳು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದ ಸರ್ಕಾರದ ಮೇಲೆ ಪ್ರಭಾವ ಬೀರಲು ನಮ್ಮ ಪ್ರಧಾನಿಯನ್ನು ವಿನಂತಿಸುತ್ತಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

    ಅಸ್ಸಾಂ ಮುಖ್ಯಮಂತ್ರಿ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳನ್ನು ಅಸ್ಸಾಂ ಪೊಲೀಸರು ಬದರ್‌ಪುರ ರೈಲು ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: J&K Poll Manifesto | ಪಿಡಿಪಿ ಅಧಿಕಾರಕ್ಕೆ ಬಂದ್ರೆ 200 ಯೂನಿಟ್ ವಿದ್ಯುತ್‌ ಉಚಿತ – ಮೆಹಬೂಬಾ ಮುಫ್ತಿ

  • ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಹಿಂಸಾಚಾರ: ಕೇಂದ್ರ ಸರ್ಕಾರದ ವಿರುದ್ಧ ಮುತಾಲಿಕ್ ಕೆಂಡಾಮಂಡಲ

    ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಹಿಂಸಾಚಾರ: ಕೇಂದ್ರ ಸರ್ಕಾರದ ವಿರುದ್ಧ ಮುತಾಲಿಕ್ ಕೆಂಡಾಮಂಡಲ

    ಬೆಂಗಳೂರು: ಬಾಂಗ್ಲಾದೇಶದಲ್ಲಿ ಹಿಂದೂಗಳ (Bangla Hindus) ಮೇಲೆ ಹಿಂಸಾಚಾರ ವಿಚಾರದಲ್ಲಿ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ ಎಂದು ಶ್ರೀರಾಮಸೇನೆ ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

    ಪ್ರಮೋದ್ ಮುತಾಲಿಕ್ (Pramod Muthalik) ನೇತೃತ್ವದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರ ನಿಯೋಗ ಬಿಜೆಪಿ ಕಚೇರಿ ಮುಂಭಾಗ ಜಮಾಯಿಸಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಭಿತ್ತಿ ಚಿತ್ರ ಹಿಡಿದು ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ಯಪಡಿಸಿದ್ದು, ಬಿಜೆಪಿ ನಾಯಕರೇ, ಬಾಂಗ್ಲಾ ಹಿಂದೂಗಳ ಪರ ಬಾಯಿ ಬಿಡಿ. ಕ್ರೂರ ಬಾಂಗ್ಲಾ ಮುಸ್ಲಿಂ ಜಿಹಾದಿಗಳಿಂದ ಹಿಂದೂಗಳನ್ನ ರಕ್ಷಿಸಿ. ಬಾಂಗ್ಲಾ ಮುಸ್ಲಿಂ ಹಾಗೂ ರೋಹಿಂಗ್ಯಾಗಳನ್ನ ಭಾರತದಿಂದ ಓಡಿಸಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಸುಳ್ಳು ವರದಿ ಪ್ರಕಟಿಸಿದ್ರೆ ಮಾಧ್ಯಮಗಳನ್ನು ಮುಚ್ಚುತ್ತೇವೆ: ಬಾಂಗ್ಲಾ ಸರ್ಕಾರ ಬೆದರಿಕೆ

    ಇದೇ ವೇಳೆ ಮಾತನಾಡಿದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಹಿಂದೂ ಹೆಣ್ಮಕ್ಕಳನ್ನು ಬಾಂಗ್ಲಾ ಮುಸ್ಲಿಮರು ಕ್ರೂರವಾಗಿ ನಡೆದುಕೊಳ್ಳುತ್ತಿರುವುದು ಕೇಂದ್ರ ಸರ್ಕಾರಕ್ಕೆ ಕಾಣಿಸ್ತಿಲ್ಲ. ಹಿಂದೂಗಳ ಮೇಲೆ ದಾಳಿಯಾಗುತ್ತಿದೆ. ದೇವಸ್ಥಾನಗಳನ್ನ ಒಡೆಯುತ್ತಿದ್ದಾರೆ. ರವೀಂದ್ರನಾಥ್ ಟ್ಯಾಗೂರ್‌ ಮೂರ್ತಿ ಒಡೆದು ಹಾಕುತ್ತಿದ್ದಾರೆ. ಇದನ್ನ ನೋಡಿ ಬಿಜೆಪಿ ಬಾಯಿ ಮುಚ್ಚಿ ಕುಳಿತಿದೆ ಎಂದು ಆಕ್ರೋಶ ವ್ಯಕ್ಯಪಡಿಸಿದರು.

    ಇದೊಂದೇ ಅಲ್ಲ, ಇಂತಹ ಅನೇಕ ಘಟನೆ ನಡೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೆಣ್ಮಕ್ಕಳ ಮೇಲೆ ಅತ್ಯಾಚಾರ ಮಾಡುತ್ತಿದ್ದಾರೆ. ಅಲ್ಲಿ ಪೊಲೀಸರು ಇಲ್ಲ, ಮಿಲಿಟರಿ ಅವರಿಗೆ ಸಪೋರ್ಟ್ ಮಾಡುತ್ತಿದೆ. ಅವರ ಕ್ರೌರ್ಯ ನೋಡಿ ನಮ್ಮ ರಕ್ತ ಕುದಿಯುತ್ತಿದೆ. ಪಕ್ಕದ ಪುಟಗೋಸಿ ದೇಶಕ್ಕೆ ಎಚ್ಚರಿಕೆ ಕೊಡೋಕೆ ಆಗ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಅಫ್ಘಾನ್‌, ಪಾಕ್‌, ಶ್ರೀಲಂಕಾ ಆಯ್ತು.. ಈಗ ಬಾಂಗ್ಲಾ; ಭಾರತದ ಸುತ್ತ ಏನಾಗ್ತಿದೆ?

    ಮೋದಿಯವರೇ ಕೂಡಲೇ ಕ್ರಮಕೈಗೊಳ್ಳಬೇಕು. ಬಿಜೆಪಿ ಕಚೇರಿಯ ಪದಾಧಿಕಾರಿಗಳ ಮೂಲಕ ನಾನು ಮನವಿ ಸಲ್ಲಿಸುತ್ತೇನೆ. ಬಿಜೆಪಿ ಸಂಸದರು, ಶಾಸಕರು ಕತ್ತೆ ಕಾಯುತ್ತಿದ್ದಾರಾ? ನಿಮ್ಮನ್ನ ಗೆಲ್ಲಿಸಿದ್ದು ಲೂಟಿ ಮಾಡೋದಕ್ಕಾ? ಬಾಯಿ ಮುಚ್ಚಿಕೊಂಡಿರೋದಕ್ಕಾ? ಬೆಂಗಳೂರಿನ ಹಲವು ಭಾಗದಲ್ಲಿ ಬಾಂಗ್ಲಾ ನುಸುಳುಕೋರರನ್ನ ಒದ್ದು ಓಡಿಸಿ ಎಂದು ಕೆಂಡಕಾರಿದರು.

  • ಹಿಂದೂಗಳಿಗೆ ದೊಡ್ಡ ಗೆಲುವು – ಜ್ಞಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ

    ಹಿಂದೂಗಳಿಗೆ ದೊಡ್ಡ ಗೆಲುವು – ಜ್ಞಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ

    ಲಕ್ನೋ: ಕಾಶಿ (Kashi) ಜ್ಞಾನವ್ಯಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಗಳು ನಡೆಸಿದ್ದ ಕಾನೂನು ಹೋರಾಟಕ್ಕೆ ಮಹತ್ವದ ಜಯ ಸಿಕ್ಕಿದೆ.

    ಪುರಾತತ್ವ ಇಲಾಖೆ ನಡೆಸಿದ ವೈಜ್ಞಾನಿಕ ಸಮೀಕ್ಷೆಯಲ್ಲಿ ಮಸೀದಿ (Varanasi Gyanvapi Mosque) ನಿರ್ಮಾಣ ಆಗಿರುವುದು ಮಂದಿರದ ಮೇಲೆ ಎಂಬ ಸತ್ಯ ಬಯಲಾದ ಬೆನ್ನಲ್ಲೇ ಹಿಂದೂಗಳಿಗೆ ಈಗ ಪೂಜಾಧಿಕಾರ ದಕ್ಕಿದೆ. ಈ ಪ್ರಾರ್ಥನಾ ಮಂದಿರದಲ್ಲಿ ಸೀಲ್ ಮಾಡಿರುವ ಬೇಸ್‌ಮೆಂಟ್‌ನಲ್ಲಿ ಇರುವ ಹಿಂದೂ ವಿಗ್ರಹಗಳಿಗೆ ಪೂಜೆ ಮಾಡಲು ವಾರಣಾಸಿ ಕೋರ್ಟ್ (Varanasi Court) ಅನುಮತಿ ನೀಡಿದೆ.  ಇದನ್ನೂ ಓದಿ: ಮೈಸೂರಿಗೂ ಕಾಲಿಟ್ಟ ಧ್ವಜ ದಂಗಲ್- ಪ್ರತಾಪ್ ಸಿಂಹ ವಿರೋಧದ ಬೆನ್ನಲ್ಲೇ ಟಿಪ್ಪು ಬಾವುಟ ತೆರವು

     

    ಮುಂದಿನ ಒಂದು ವಾರದಲ್ಲಿ ಪೂಜೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು. ಕಾಶಿ ವಿಶ್ವನಾಥ ಮಂದಿರಕ್ಕೆ ಸೇರಿದ ಅರ್ಚಕರನ್ನು ಗುರುವಾರ ನೇಮಿಸಬೇಕು. ಹಿಂದೂ ಅರ್ಚಕರು ಪೂಜೆ ಮಾಡಲು ಬ್ಯಾರಿಕೇಡ್ ತೆರವು ಮಾಡಬೇಕು ಎಂದು ಸ್ಥಳೀಯ ಆಡಳಿತಕ್ಕೆ ವಾರಣಾಸಿ ಕೋರ್ಟ್ ನಿರ್ದೇಶನ ನೀಡಿದೆ.

    ಈ ಐತಿಹಾಸಿಕ ತೀರ್ಪು ನೀಡಿದ ವಾರಾಣಸಿ ನ್ಯಾಯಾಲಯದ ನ್ಯಾಯಮೂರ್ತಿ ಎ.ಕೆ. ವಿಶ್ವೇಶ ಅವರು ಇವತ್ತೇ ನಿವೃತ್ತರಾಗಿದ್ದಾರೆ. ಇದನ್ನೂ ಓದಿ: ಭಾರೀ ಬಿಗಿ ಭದ್ರತೆಯಲ್ಲಿ ನಕ್ಸಲ್ ನಾಯಕ ಬಿ.ಜಿ ಕೃಷ್ಣಮೂರ್ತಿ ಕೋರ್ಟ್‍ಗೆ ಹಾಜರು

    ವಾರಣಾಸಿ ಕೋರ್ಟ್ ತೀರ್ಪು ಹಿಂದೂಗಳಲ್ಲಿ ಸಂತಸ ತಂದಿದೆ. ಈ ತೀರ್ಪನ್ನು, 1983ರಲ್ಲಿ ಅಯೋಧ್ಯೆ ರಾಮಮಂದಿರದ ಬೀಗ ತೆರೆಯಲು ಜಸ್ಟೀಸ್ ಕೃಷ್ಣಮೋಹನ್ ಪಾಂಡೆ ನೀಡಿದ್ದ ಆದೇಶಕ್ಕೆ ಹೋಲಿಕೆ ಮಾಡಲಾಗುತ್ತಿದೆ. ಮುಂದೊಂದು ದಿನ ಈ ಮಸೀದಿ ಕೂಡ, ಅಯೋಧ್ಯೆ ರಾಮಮಂದಿರದ ರೀತಿಯಲ್ಲಿ ಹಿಂದೂಗಳಿಗೆ ದಕ್ಕಬಹುದು ಎಂದು ವ್ಯಾಖ್ಯಾನಿಸಲಾಗುತ್ತಿದೆ.

     

    ಇದು ಹಿಂದೂಗಳಿಗೆ ದಕ್ಕಿದ ದೊಡ್ಡ ಗೆಲುವು.ಒಂದು ವಾರದಲ್ಲಿ ಪೂಜೆ ಆರಂಭಿಸುತ್ತೇವೆ ಎಂದು ಕಾಶಿವಿಶ್ವನಾಥ ಮಂದಿರ ಟ್ರಸ್ಟ್ ತಿಳಿಸಿದೆ. ಆದರೆ ಈ ಆದೇಶ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ಮೇಲ್ಮನವಿ ಹೋಗಲು ಮಸೀದಿ ಆಡಳಿತ ಮಂಡಳಿ ನಿರ್ಧರಿಸಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

    ಹಿಂದೂಗಳ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಪ್ರತಿಕ್ರಿಯಿಸಿ, ಜ್ಞಾನವಾಪಿ ಪ್ರಕರಣದಲ್ಲಿ ಹಿಂದೂಗಳಿಗೆ ಸಿಕ್ಕಿದ ಮೊದಲ ದೊಡ್ಡ ಗೆಲುವು ಎಂದು ಬಣ್ಣಿಸಿದ ಅವರು ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ 31 ವರ್ಷದ ಬಳಿಕ ಪೂಜೆ ಮಾಡಲು ಅವಕಾಶ ಸಿಕ್ಕಿದೆ ಎಂದು ತಿಳಿಸಿದರು.

  • 20 ವರ್ಷಗಳ ಹಿಂದೆ ಮದರಸಾದಲ್ಲಿ ಹಿಂದೂಗಳು ಪೂಜೆ ಮಾಡಿದ ವೀಡಿಯೋ ವೈರಲ್

    20 ವರ್ಷಗಳ ಹಿಂದೆ ಮದರಸಾದಲ್ಲಿ ಹಿಂದೂಗಳು ಪೂಜೆ ಮಾಡಿದ ವೀಡಿಯೋ ವೈರಲ್

    ಬೀದರ್: ಮದರಸಾಗೆ (Mosque) ನುಗ್ಗಿ ಪೂಜೆ ಮಾಡಿದ 9 ಹಿಂದೂಗಳ (Hindu) ಮೇಲೆ ಎಫ್‍ಐಆರ್ (FIR) ಆಗಿ ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ 20 ವರ್ಷಗಳ ಹಿಂದೆ ವಿವಾದಿತ ಮದರಸಾದಲ್ಲಿ ಹಿಂದೂಗಳು ಪೂಜೆ ಮಾಡುವ ವೀಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಬೀದರ್‌ನ (Bidar) ಒಳಕೋಟೆಯಿಂದ ಚೌಬಾರ್, ಗವಾನ್ ಚೌಕ್, ನಗರ ಠಾಣೆ, ಮಹ್ಮದ್ ಗವಾನ್ ಮದರಸಾ ರಸ್ತೆಯಲ್ಲಿ ಭವಾನಿ ಭವ್ಯ ಮೆರವಣಿಗೆ ಮಾಡುತ್ತಾ ಸಾಗುತ್ತಿರುವ ಹಾಗೂ ಮದರಸಾ ಸೇರಿದಂತೆ ವಿವಿಧ ಕಡೆಗಳಲ್ಲಿ ಹಿಂದೂಗಳು ಪೂಜೆ ಸಲ್ಲಿಸುತ್ತಿರುವ ಹಳೆಯ ಪಾರಂಪರಿಕ ವೀಡಿಯೋ ತುಣುಕುಗಳು ಹರಿದಾಡುತ್ತಿದೆ. ಇದನ್ನೂ ಓದಿ: ಮದರಸಾದಲ್ಲಿ 1985ರಿಂದಲೂ ಪೂಜೆ ಇತ್ತು, ಪೊಲೀಸರ ಅನುಮತಿ ಸಿಕ್ಕಿತ್ತು: ಹಿಂದೂ ಮುಖಂಡರ ಸ್ಪಷ್ಟನೆ

    ಮದರಸಾ ವಿವಾದದ ಬೆನ್ನಲ್ಲೇ ಹಲವು ಅನ್ಯಕೋಮಿನ ಜನರು ಮದರಸಾದಲ್ಲಿ ಹಿಂದೂಗಳು ಪೂಜೆ ಮಾಡುತ್ತಿರಲಿಲ್ಲ ಎಂದು ಹೇಳಿದ್ದರು. ಈ ಹಿನ್ನೆಲೆ ಮದರಸಾದಲ್ಲಿ ಹಿಂದೂಗಳ ಪೂಜೆ ಮಾಡುವ ಹಳೆಯ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಕೆಲ ದಿನಗಳ ಹಿಂದೆ ದಸರಾ (Dasara) ಮೆರವಣಿಗೆ ವೇಳೆ ಹಿಂದೂ ಸಮುದಾಯದ ಗುಂಪೊಂದು ಮದರಸಾಗೆ (Madrasa) ನುಗ್ಗಿ ಪೂಜೆ ಮಾಡಿರುವ ಘಟನೆ ಬೀದರ್ ನಗರದ ಓಲ್ಡ್ ಸಿಟಿಯಲ್ಲಿರುವ ಐತಿಹಾಸಿಕ ಮೊಹಮ್ಮದ್ ಗವಾನ್ ಮದರಸಾದಲ್ಲಿ ನಡೆದಿತ್ತು. ಇದನ್ನೂ ಓದಿ: ದಸರಾ ಮೆರವಣಿಗೆ ವೇಳೆ ಮದರಸಾಗೆ ನುಗ್ಗಿ ಪೂಜೆ – 9 ಜನರ ವಿರುದ್ಧ ಎಫ್‌ಐಆರ್

    Live Tv
    [brid partner=56869869 player=32851 video=960834 autoplay=true]

  • ಹಿಂದೂಗಳ ಬಗ್ಗೆ ಅವಹೇಳನಕಾರಿ ಭಾಷಣ – ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸ್ ಅಧಿಕಾರಿಗಳು

    ಹಿಂದೂಗಳ ಬಗ್ಗೆ ಅವಹೇಳನಕಾರಿ ಭಾಷಣ – ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸ್ ಅಧಿಕಾರಿಗಳು

    ಕೊಪ್ಪಳ: ಹಿಂದೂಗಳ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿರುವ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ನಗರದ ಗಂಗಾವತಿ ತಾಲೂಕಿನ ಲಕ್ಷ್ಮೀ ಕ್ಯಾಂಪ್ ಏರಿಯಾದಲ್ಲಿ ನಡೆದಿದೆ.

    ಲಕ್ಷ್ಮೀ ಕ್ಯಾಂಪ್‍ನಲ್ಲಿರುವ ಉದ್ಯಾನವನದ ಜಾಗದಲ್ಲಿ ಮಸೀದಿ ನಿರ್ಮಿಸಿಕೊಂಡು ಹಿಂದೂಗಳ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿ, ಕೋಮುಗಲಭೆಗೆ ಪ್ರಚೋದನೆ ಮಾಡಲಾಗುತ್ತಿದೆ ಎಂದು ಹಿಂದೂ ಪರ ಸಂಘಟನೆಗಳ ಮುಖಂಡರು ಭಾಷಣವನ್ನು ಖಂಡಿಸಿ, ಪ್ರತಿಭಟನೆಗೆ ಮುಂದಾಗಿದ್ದರು. ಇದನ್ನೂ ಓದಿ: ವಿದ್ಯಾಭ್ಯಾಸ ಕೊಡಿಸಲು ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು ಯುಪಿಎಸ್‍ಸಿಯಲ್ಲಿ ಟಾಪರ್ 

    ಘಟನೆ ಕುರಿತು ಸ್ಥಳಕ್ಕೆ ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಯಾವುದೇ ರೀತಿಯ ಪ್ರಕರಣ ದಾಖಲಾಗಿಲ್ಲ. ಇದನ್ನೂ ಓದಿ:  ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್ 

  • ಪ್ರೀತಿಗೆ ಪ್ರೀತಿ ಹರಿಸುವವರು ಹಿಂದೂಗಳು, ಪ್ರೀತಿಗೆ ರಕ್ತ ಹರಿಸುವವರು ಮುಸ್ಲಿಂ ಗೂಂಡಾಗಳು: ಶಿವಚಾರ್ಯ ಸ್ವಾಮೀಜಿ

    ಪ್ರೀತಿಗೆ ಪ್ರೀತಿ ಹರಿಸುವವರು ಹಿಂದೂಗಳು, ಪ್ರೀತಿಗೆ ರಕ್ತ ಹರಿಸುವವರು ಮುಸ್ಲಿಂ ಗೂಂಡಾಗಳು: ಶಿವಚಾರ್ಯ ಸ್ವಾಮೀಜಿ

    ಕಲಬುರಗಿ: ಪ್ರೀತಿಗೆ ಪ್ರೀತಿ ಹರಿಸುವವರು ಹಿಂದೂಗಳು, ಪ್ರೀತಿಗೆ ರಕ್ತ ಹರಿಸುವವರು ಮುಸ್ಲಿಂ ಗೂಂಡಾಗಳು ಎಂದು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಶ್ರೀ ಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿ ಕಿಡಿಕಾರಿದ್ದಾರೆ.

    ಮೇ 26ರಂದು ನಗರದ ವಾಡಿ ಪಟ್ಟಣದಲ್ಲಿ ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಹಿಂದೂ ಯುವಕನ ಕೊಲೆ ಪ್ರಕರಣದ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಕ್ಕಳು ಓಡಿ ಹೋಗದಂತೆ ತಡೆಯಲು ಕಾಲಿಗೆ ಕಬ್ಬಿಣ ಸರಪಳಿ ಕಟ್ಟಿದ ಮೌಲಾನಾ

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರೀತಿಗೆ ಪ್ರೀತಿ ಹರಿಸುವವರು ಹಿಂದೂಗಳು. ಪ್ರೀತಿಗೆ ರಕ್ತ ಹರಿಸುವವರು ಮುಸ್ಲಿಂ ಗೂಂಡಾಗಳು. ಲವ್ ಜಿಹಾದ್ ಮಾಡಿ ಹಿಂದೂ ಯುವತಿಯರನ್ನು ಹಾಳು ಮಾಡುತ್ತಾರೆ. ಅದೇ ಹಿಂದೂ ಯುವಕ ಮುಸ್ಲಿಂ ಯುವತಿಯನ್ನ ಪ್ರೀತಿಸಿದರೆ, ಅವರ ಮೇಲೆ ದೌರ್ಜನ್ಯ ಎಸಗಿ ಕೊಲೆ ಮಾಡುತ್ತಾರೆ ಎಂದು ಸಿಡಿದರು. ಇದನ್ನೂ ಓದಿ: ಸಿಲಿಂಡರ್ ಸ್ಫೋಟದಿಂದ ಕಟ್ಟಡ ಕುಸಿದು ಮಗು ಸೇರಿದಂತೆ 4 ಮಂದಿ ಸಾವು

    ಈವರೆಗೆ ಚಿತ್ತಾಪುರ ತಾಲೂಕಿನಲ್ಲಿ ಮೂರು ತಿಂಗಳಲ್ಲಿ 3 ಕೊಲೆಗಳಾಗಿವೆ. ಆದರೂ ಶಾಸಕ ಪ್ರಿಯಾಂಕ್ ಖರ್ಗೆ ಇಲ್ಲಿಯ ತನಕ ಸಾಂತ್ವನ ಹೇಳಿಲ್ಲ. ಅದೇ ನಾವು ಹಿಂದೂ ಕಾರ್ಯಕರ್ತರ ಮನೆಗೆ ಹೊರಟರೆ ಬಂಧಿಸುತ್ತಾರೆ.

  • ಗೋಮಾಂಸವನ್ನು ಹಿಂದೂಗಳು, ಕ್ರಿಶ್ಚಿಯನ್ ಕೂಡ ತಿನ್ನುತ್ತಾರೆ: ಸಿದ್ದರಾಮಯ್ಯ

    ಗೋಮಾಂಸವನ್ನು ಹಿಂದೂಗಳು, ಕ್ರಿಶ್ಚಿಯನ್ ಕೂಡ ತಿನ್ನುತ್ತಾರೆ: ಸಿದ್ದರಾಮಯ್ಯ

    ತುಮಕೂರು: ಗೋಮಾಂಸವನ್ನು ಹಿಂದೂಗಳು, ಕ್ರಿಶ್ಚಿಯನ್ ಕೂಡ ತಿನ್ನುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

    ನಗರದಲ್ಲಿ ನಡೆದ ಮಡಿವಾಳ-ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಯಾವ ಧರ್ಮದಲ್ಲಿ ಹುಟ್ಟಿದ್ದೇನೆ ಎಂಬುದು ಮುಖ್ಯವಲ್ಲ. ನಾವ್ಯಾರೂ ಇಂತಹ ಧರ್ಮ, ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟಿದವರಲ್ಲ. ಆದರೆ ನಾವೆಲ್ಲರೂ ಭಾರತೀಯರು ಎಂಬುದನ್ನು ಮರೆಯಬಾರದು. ಈ ದೇಶ ಒಂದು ಧರ್ಮಕ್ಕೆ ಸೇರಿದ್ದಲ್ಲ, ಎಲ್ಲರಿಗೂ ಸಮಾನ ಅವಕಾಶವಿದೆ. ಭಾರತದಲ್ಲಿರುವ ಎಲ್ಲಾ ಧರ್ಮಗಳ ಜನರ ನಡುವೆ ಸಹಬಾಳ್ವೆ ಅಗತ್ಯ. ಇದನ್ನೇ ನಮ್ಮ ಸಂವಿಧಾನವೂ ಪ್ರತಿಪಾದಿಸುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಟಿಪ್ಪು ದೇಶ ಭಕ್ತ – ಮತಾಂಧ ಆಗಿದ್ದರೆ ಹಿಂದೂ ದೇವಾಲಯಗಳು ಉಳೀತಿತ್ತಾ?: ಸಿದ್ದರಾಮಯ್ಯ

    tippu

    ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಹಲವು ಭಾವನಾತ್ಮಕ ವಿಚಾರಗಳ ಮೂಲಕ ಸಮಾಜವನ್ನು ಒಡೆಯುವ, ಮನುಷ್ಯರ ನಡುವೆ ಗೋಡೆಕಟ್ಟುವ ಕೆಲಸವನ್ನು ಸಂಘ ಪರಿವಾರದ ಮುಖಂಡರು ಮಾಡುತ್ತಿದ್ದಾರೆ. ಸಂವಿಧಾನದ ಪರವಾಗಿರುವ ನಾವೆಲ್ಲರೂ ದೇಶ ಒಡೆಯುವವರ ಕೈಗೆ ಅಧಿಕಾರ ಸಿಗದಂತೆ ನೋಡಿಕೊಳ್ಳಬೇಕಿದೆ. ರಾಜ್ಯದಲ್ಲಿ 2008ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ 1964 ರಿಂದಲೂ ಜಾರಿಯಲ್ಲಿದ್ದ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಒಂದು ವರ್ಗವನ್ನು ಟಾರ್ಗೆಟ್ ಮಾಡಿದರು. ಈಗ ಮತಾಂತರ ನಿಷೇಧ ಕಾಯ್ದೆ ಮೂಲಕ ಮತ್ತಷ್ಟು ಕಿರುಕುಳ ನೀಡುತ್ತಿದೆ. ಹುಸಿ ಜಾತ್ಯತೀತತೆ ಪ್ರದರ್ಶಿಸುತ್ತಿರುವ ಜೆಡಿಎಸ್ ಈ ಎರಡು ಮಹತ್ವದ ಕಾಯ್ದೆಗಳ ಚರ್ಚೆಯ ವೇಳೆ ಸಭಾತ್ಯಾಗ ಮಾಡಿ, ಕಾಯ್ದೆ ಪಾಸಾಗುವಂತೆ ಮಾಡಿ, ಈಗ ನಾಟಕವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಭಿಮಾನಿ ಮಗುವಿಗೆ ತಮ್ಮದೇ ಹೆಸರನ್ನಿಟ್ಟ ಸಿದ್ದರಾಮಯ್ಯ

    ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಜಾರಿಗೆ ತಂದ ಶಾದಿ ಭಾಗ್ಯ, ಟಿಪ್ಪು ಜಯಂತಿ ಮತಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು ಮಾಡಿದ ಕಾರ್ಯಕ್ರಮಗಳಲ್ಲ. ಬಿಜೆಪಿ, ಆರ್‍ಎಸ್‍ಎಸ್‍ನವರು ದೂರುವಂತೆ ಟಿಪ್ಪು ಮತಾಂಧನಾಗಿದ್ದರೆ ಶ್ರೀರಂಗಪಟ್ಟಣ ಹಾಗೂ ಇತರೆ ಕಡೆಗಳಲ್ಲಿ ಅಷ್ಟೊಂದು ಹಿಂದೂ ದೇವಾಲಯಗಳಿರಲು, ಅವರ ಆಸ್ಥಾನದಲ್ಲಿ ಹಿಂದೂ ಅಧಿಕಾರಿಗಳು ಕೆಲಸ ಮಾಡಲು ಸಾಧ್ಯವಿತ್ತೇ ಎಂದು ಪ್ರಶ್ನಿಸಿದರು.

  • ಗೋಮಾಂಸ ತಿನ್ನುವವರ ಜೊತೆ ಬೇಡ, ಹಿಂದೂಗಳು ಹಿಂದೂ ಡ್ರೈವರ್ ಜೊತೆ ದೇವಾಲಯಕ್ಕೆ ಹೋಗಲಿ: ಭಾರತ್ ರಕ್ಷಣ್ ವೇದಿಕೆ

    ಗೋಮಾಂಸ ತಿನ್ನುವವರ ಜೊತೆ ಬೇಡ, ಹಿಂದೂಗಳು ಹಿಂದೂ ಡ್ರೈವರ್ ಜೊತೆ ದೇವಾಲಯಕ್ಕೆ ಹೋಗಲಿ: ಭಾರತ್ ರಕ್ಷಣ್ ವೇದಿಕೆ

    ಬೆಂಗಳೂರು: ಹಿಜಬ್‍ಗೆ ಆಗ್ರಹಿಸಿ ಕರ್ನಾಟಕ ಬಂದ್ ನಡೆಸಿದ ಬಳಿಕ ದೇವಾಲಯಗಳಲ್ಲಿ ಅನ್ಯಧರ್ಮದ ವ್ಯಾಪಾರಿಗಳನ್ನು ನಿರ್ಬಂಧಿಸಲಾಯ್ತು, ಬಳಿಕ ಹಲಾಲ್‍ಗೆ ಜಟ್ಕಾ ಕಟ್ ಬಂತು. ಈಗ ಡ್ರೈವರ್‌ಗಳಿಗೂ ಬಿಸಿ ತಟ್ಟಿದೆ. ಹಿಂದೂಗಳು, ಹಿಂದೂಗಳ ವಾಹನದಲ್ಲೇ ದೇವಾಲಯಕ್ಕೆ ಹೋಗಲಿ ಎಂದು ಭಾರತ್ ರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಬಂಗೇರಾ ಹೊಸ ಅಭಿಯಾನಕ್ಕೆ ಕರೆ ಕೊಟ್ಟಿದ್ದಾರೆ.

    Hinduism flag for sale, hindu Flag

    ಹಿಂದೂಗಳು, ಹಿಂದೂಗಳ ವಾಹನದಲ್ಲೇ ದೇವಾಲಯಕ್ಕೆ ಹೋಗಬೇಕು. ಈಗಾಗಲೇ ಹಿಂದೂ ಸಮಾಜ ಒಂದಾಗಿ ಸಾಕಷ್ಟು ಅಭಿಯಾನ ಮಾಡಿ ಯಶಸ್ವಿಯಾಗಿದೆ. ನಾವು ಮತ್ತೊಂದು ಹೊಸ ಅಭಿಯಾನ ಆರಂಭ ಮಾಡಬೇಕಿದೆ ಎಂದು ಹೇಳಿ ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: 2 ಕೋಟಿ ದರೋಡೆ ಕೇಸ್ – ಪತ್ನಿ ಸಾಲ ತೀರಿಸಲು ಕನ್ನ ಹಾಕಿದ ಇಬ್ಬರು ಪತ್ನಿಯರ ಮುದ್ದಿನ ಗಂಡ

    ಯಾರು ನಮ್ಮ ದೇವರನ್ನು ನಂಬುವುದಿಲ್ಲ. ನಮ್ಮ ದೇಶದ ಕಾನೂನಿಗೆ ಬೆಲೆ ಕೊಡುವುದಿಲ್ಲವೋ ಅವರ ವಾಹನದಲ್ಲಿ ಹೋಗಿ ನಮ್ಮ ದೇವರಿಗೆ ಹರಕೆ ಪೂಜೆ ಸಲ್ಲಿಸುತ್ತಿದ್ದೇವೆ. ಆದರೆ ಇಂದಿನಿಂದ ಹಿಂದೂ ಮಾಲೀಕರು ಮತ್ತು ಡ್ರೈವರ್‌ಗಳ ಜೊತೆಯಲ್ಲೇ ನಮ್ಮ ಧಾರ್ಮಿಕ ಕ್ಷೇತ್ರಕ್ಕೆ ಹೋಗಬೇಕು. ಈ ಮೂಲಕ ಹಿಂದೂ ಚಾಲಕರಿಗೆ ನಾವು ಆರ್ಥಿಕವಾಗಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ.

    ಗೋಮಾಂಸ ತಿನ್ನುವ ಚಾಲಕರೊಂದಿಗೆ ಧರ್ಮ ಕ್ಷೇತ್ರಕ್ಕೆ ಹೋಗುವ ಬದಲು, ನಮ್ಮ ಹಿಂದೂ ಸಮಾಜದ ಚಾಲಕರ ವಾಹನದಲ್ಲಿ ಯಾತ್ರೆಗೆ ಹೋಗೋಣ. ಹಿಂದೂ ಸಮಾಜದ ಚಾಲಕರು ಈಗಾಗಲೇ ಬೀದಿಗೆ ಬಿದ್ದಿದ್ದಾರೆ. ಇದರಿಂದ ನಮ್ಮ ಸಮಾಜದ ಚಾಲಕರು ಆರ್ಥಿಕ ಸಹಾಯ ಮಾಡೋಣ. ಈ ಅಭಿಯಾನಕ್ಕೆ ಹಿಂದೂ ಸಂಘಟನೆಗಳು ಬೆಂಬಲ ನೀಡಿ ಯಶಸ್ವಿಗೊಳಿಸಬೇಕು ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಮದ್ಯದ ಬಾಟಲಿಯಿಂದ ಸಿಕ್ಕಿ ಬಿದ್ರು 2 ಕೋಟಿ ಕದ್ದ ಖದೀಮರು