Tag: ಹಿಂದೂ ಕಾರ್ಯಕರ್ತ

  • ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ NIA ತನಿಖೆ ಆಗಲಿ: ಸದಾನಂದ ಗೌಡ

    ಮಂಗಳೂರು ಸುಹಾಸ್ ಶೆಟ್ಟಿ ಕೊಲೆ ಕೇಸ್ NIA ತನಿಖೆ ಆಗಲಿ: ಸದಾನಂದ ಗೌಡ

    ಬೆಂಗಳೂರು: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಕೇಸ್ (Suhas Shetty Case) ಅನ್ನು ಎನ್‌ಐಎಗೆ ವಹಿಸಬೇಕು ಎಂದು ಮಾಜಿ ಸಿಎಂ ಸದಾನಂದ ಗೌಡ (Sadananda Gowda) ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದೊಂದು ಟೋಟಲ್ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹೇಗೆ ಹದಗೆಟ್ಟಿದೆ ಎಂಬುದಕ್ಕೆ ಹಿಡಿದ ಕೈಗನ್ನಡಿ. ಒಂದೆರೆಡು ಕೇಸ್ ಅಲ್ಲ. ಬ್ಯಾಂಕ್ ದರೋಡೆ ಸೇರಿ ಅನೇಕ ಕೇಸ್ ಆಗಿವೆ. ಸರ್ಕಾರ ಕೊಲೆ ಮಾಡೋ ಇಂತಹವರಿಗೆ ಬೆಂಬಲ ಕೊಡುವ ರಾಜನೀತಿ ಮಾಡುತ್ತಿದೆ. ಹಿಂದೂಗಳನ್ನು ಎರಡನೇ ದರ್ಜೆ ರೀತಿ ನೋಡುತ್ತಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ. ಯುದ್ಧ ಮಾಡಬೇಡಿ ಎನ್ನುತ್ತಾರೆ. ಇವತ್ತು ಹೋಗಿ ಗೃಹ ಸಚಿವರು ಸಭೆ ಮಾಡುತ್ತಿದ್ದಾರೆ. ಕೇವಲ ಮುಸ್ಲಿಂ ಸಂಘಟನೆಗಳನ್ನು ಕರೆದು ಸಭೆ ಮಾಡುತ್ತಿದ್ದಾರೆ. ಸ್ಥಳೀಯ ಶಾಸಕರನ್ನು ಕರೆದಿಲ್ಲ. ಇದು ಯಾವ ಸರ್ಕಾರದ ನೀತಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆ ವೇಳೆ ಕಾಣಿಸಿಕೊಂಡಿದ್ದ ಬುರ್ಖಾಧಾರಿ ಮಹಿಳೆಯರ ಬಗ್ಗೆ ಪೊಲೀಸ್‌ ಕಮಿಷನರ್ ಹೇಳಿದ್ದೇನು?

    ಸುಹಾಸ್ ಕೇಸ್‌ನಲ್ಲಿ 8 ಜನರ ಬಂಧನ ಆಗಿದೆ. ಆದರೆ ಅಶ್ರಫ್ ಕೊಲೆ ಕೇಸ್‌ನಲ್ಲಿ 25 ಜನ ಅರೆಸ್ಟ್ ಮಾಡ್ತಾರೆ. ಆದರೆ ಈ ಕೇಸ್ ನಲ್ಲಿ ಅಲ್ಲೇ 25 ಜನ ಇದ್ದರು,ಬುರ್ಕಾ ಹಾಕಿರೋ ವಿಡಿಯೋ ಇದ್ದರು ಅರೆಸ್ಟ್ ಆಗಿಲ್ಲ. ಈ ಸರ್ಕಾರ ಮೈನಾರಿಟಿ ಪರ ಅಂತ ತೋರಿಸಿಸೋಕೆ ಹೋಗ್ತಿದೆ.ಈ ಸರ್ಕಾರ ಈ ಕೇಸ್ ನಲ್ಲಿ ಏನು ಮಾಡೊಲ್ಲ. ಜನರು ಬೀದಿಗೆ ಇಳಿಯಬೇಕು. ಹೀಗಾಗಿ ಈ ಕೇಸ್ ಎನಐಎಗೆ ತನಿಖೆಗೆ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣ – 8 ಆರೋಪಿಗಳ ಬಂಧನ

    ಕರಾವಳಿ ಭಾಗದಲ್ಲಿ ಇಂತಹ ಕೇಸ್ ಹೆಚ್ಚು ಆಗುತ್ತಿದೆ. ಹೀಗಾಗಿ ಎನ್‌ಐಎ (NIA) ಬ್ರ‍್ಯಾಂಚ್ ಈ ಭಾಗದಲ್ಲಿ ಪ್ರಾರಂಭ ಮಾಡಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಿದರು. ಈ ಸರ್ಕಾರ ಕಣ್ಣಾಮುಚ್ಚಾಲೆ ಆಟ ಆಡುತ್ತಿದೆ. ಕೇವಲ ಸಚಿವರು ಮೈನಾರಿಟಿ ಅವರನ್ನು ಕರೆದು ಸಭೆ ಮಾಡುತ್ತಿದ್ದಾರೆ. ಜನಪ್ರತಿನಿಧಿಗಳನ್ನು ಕರೆದಿಲ್ಲ. ಇಂತಹ ಘಟನೆ ಆದರೆ ಆರ್‌ಎಸ್‌ಎಸ್, ಬಿಜೆಪಿ ಬಿಟ್ಟರೆ ಇವರು ಬೇರೆ ಯಾರ ಮೇಲೂ ಹೇಳಲ್ಲ. ಇಂತಹ ರಾಜನೀತಿ ಸಮಾಜಕ್ಕೆ ದೊಡ್ಡ ಮಾರಕ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪಾಕಿಸ್ತಾನದ ಬೇಹುಗಾರಿಕಾ ಏಜೆನ್ಸಿಯಿಂದ ಕದಂಬ ನೌಕಾ ನೆಲೆಯ ಯುದ್ಧ ಹಡಗುಗಳ ಮಾಹಿತಿ ಪಡೆಯಲು ಯತ್ನ!

    ಕೊಲೆಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಮಾಡುವ ಪೋಸ್ಟರ್ ಹರಿದಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸುಹಾಸ್ ಶೆಟ್ಟಿಗೆ ರಕ್ಷಣೆ ಕೊಡಬೇಕಿತ್ತು. ಬೇರೆ ಕೇಸ್‌ನಲ್ಲಿ ಆರೋಪಿ ಆಗಿದ್ದ. ಸರ್ಕಾರ ಆತನ ಜೀವ ರಕ್ಷಣೆ ಮಾಡಬೇಕಿತ್ತು. ಇದನ್ನ ಮಾಡದೇ ಇರುವುದರಿಂದ ಇದಕ್ಕೆ ಒಂದು ಹಂತದಲ್ಲಿ ಸರ್ಕಾರದ ಲೋಪ ಇದೆ. ಒಲೈಕೆ ರಾಜಕೀಯ ಜಾಸ್ತಿ ಆಗುತ್ತಿದೆ. ಸರ್ಕಾರ ಇದನ್ನ ಬಿಡಬೇಕು. ಸರ್ಕಾರ ಒಂದು ಸಮುದಾಯಕ್ಕೆ ಬೆಂಬಲ ಕೊಡುತ್ತಿದೆ. ಕರಾವಳಿ ಭಾಗದಲ್ಲಿ ಎಲ್ಲಾ ಹಿಂದೂಗಳು ಬೀದಿಗೆ ಇಳಿದರೆ ಏನು ಆಗಬಹುದು. ಸರ್ಕಾರ ಇದನ್ನು ಅರ್ಥ ಮಾಡಿಕೊಳ್ಳಬೇಕು. ಈ ಸರ್ಕಾರ ಕೇವಲ ಅಲ್ಪಸಂಖ್ಯಾತರಿಗೆ ಮಾತ್ರ ರಕ್ಷಣೆ ಕೊಡೋದಲ್ಲ ಬಹುಸಂಖ್ಯಾತರ ರಕ್ಷಣೆಯೂ ಮಾಡಬೇಕು ಎಂದು ಹರಿಹಾಯ್ದರು. ಇದನ್ನೂ ಓದಿ: ಎಲ್ಲಾ ಸಮುದಾಯಗಳಿಗೆ ನ್ಯಾಯ ಕೊಡಲು ಕೇಂದ್ರದಿಂದ ಜಾತಿಗಣತಿ: ಸದಾನಂದಗೌಡ

    ಅಲ್ಪಸಂಖ್ಯಾತರಿಂದ ಕಾಂಗ್ರೆಸ್ 15 ಸೀಟು ಗೆದ್ದಿರಬಹುದು. ಉಳಿದ ಸೀಟು ಯಾರಿಂದ ಗೆದ್ದಿರಿ. ಜೆಡಿಎಸ್ ಈಗ ಎನ್‌ಡಿಎ ಜೊತೆ ಬಂದಿದೆ. ಅವರ ಜೊತೆ ಇದ್ದ ಅಲ್ಪಸಂಖ್ಯಾತರ ಮತಗಳ ಒಲೈಕೆ ಮಾಡೋಣ ಎಂದು ಹೋಗುತ್ತಿದ್ದಾರೆ. ಕ್ರಿಶ್ಚಿಯನ್ನರು ಕರಾವಳಿ ಭಾಗದಲ್ಲಿ ಇದ್ದಾರೆ. ಅವರು ಹೀಗೆ ಮಾಡುತ್ತಾರೆ. ಕಾಂಗ್ರೆಸ್ ಅವರು ಸತ್ಯ ಹರಿಶ್ಚಂದ್ರರ ರೀತಿ ಮಾತನಾಡುತ್ತಾರೆ. ಆದರೆ ಅವರು ಮಾಡುವುದೆಲ್ಲಾ ದುರ್ಯೋಧನನ ಪಾತ್ರವೇ ಎಂದು ಗುಡುಗಿದರು. ಇದನ್ನೂ ಓದಿ: ಜಮೀರ್ ಪಾಕಿಸ್ತಾನದಲ್ಲಿ ಬೇಡ, ತಮ್ಮ ಕ್ಷೇತ್ರದಲ್ಲೇ ಸೂಸೈಡ್ ಬಾಂಬರ್ ಆಗಿ ಆತ್ಮಾಹುತಿ ಮಾಡಿಕೊಳ್ಳಲಿ – ಸದಾನಂದಗೌಡ

  • ಫಾಜಿಲ್ ಫೋಟೊ ಜೊತೆಗೆ ಸುಹಾಸ್ ಫೋಟೊ ಹಾಕಿ ಟಾರ್ಗೆಟ್ ಫಿಕ್ಸ್ ಮಾಡಿದ್ದ ಹಂತಕರು!

    ಫಾಜಿಲ್ ಫೋಟೊ ಜೊತೆಗೆ ಸುಹಾಸ್ ಫೋಟೊ ಹಾಕಿ ಟಾರ್ಗೆಟ್ ಫಿಕ್ಸ್ ಮಾಡಿದ್ದ ಹಂತಕರು!

    – ಮಾರ್ಚ್ ಅಂತ್ಯದಲ್ಲೇ ಹತ್ಯೆಗೆ ನಡೆದಿತ್ತು ಪ್ಲ್ಯಾನ್; ರಿವೇಂಜ್ ಸೂನ್ ಎಂದು ಪೋಸ್ಟ್

    ಮಂಗಳೂರು: ಮಾರ್ಚ್ ಅಂತ್ಯದಲ್ಲೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆಗೆ ಹಂತಕರು ಪ್ಲ್ಯಾನ್ ಮಾಡಿದ್ದರು ಎಂಬ ವಿಚಾರ ಸೋಷಿಯಲ್ ಮೀಡಿಯಾ ಪೋಸ್ಟ್ಗಳಿಂದ ಬಹಿರಂಗವಾಗಿದೆ.

    2025ರ ಮಾರ್ಚ್ 31 ರಂದೇ ಸುಹಾಸ್ ಹತ್ಯೆಗೆ ಮುಹೂರ್ತ ಫಿಕ್ಸ್ ಆಗಿತ್ತು. ಸುಹಾಸ್ ಫೋಟೊ ಸಹಿತ ಸೋಶಿಯಲ್ ಮೀಡಿಯಾದಲ್ಲಿ ಟಾರ್ಗೆಟ್ ಫಿಕ್ಸ್ ಫೋಟೊವನ್ನು ಹಂತಕರು ಹಂಚಿಕೊಂಡಿದ್ದರು. ಇದನ್ನೂ ಓದಿ: ಹಿಂದುತ್ವಕ್ಕಾಗಿ ಪ್ರಾಣವನ್ನೇ ಕೊಡ್ತೇನೆ ಅಂತಿದ್ದವನ ಜೀವವನ್ನೇ ತೆಗೆದ್ರು: ಸುಹಾಸ್ ಶೆಟ್ಟಿ ತಾಯಿ ಕಣ್ಣೀರು

    ಟಾರ್ಗೆಟ್ ಫಿಕ್ಸ್ ಮಾಡಿ ಸ್ವತಃ ಸುಹಾಸ್‌ಗೆ ಹಂತಕರ ತಂಡ ಟ್ಯಾಗ್ ಮಾಡಿತ್ತು. ಆಗಲೇ ಆ ಟ್ಯಾಗ್ ಮಾಡಿದ್ದ ವೀಡಿಯೋ ಸುಹಾಸ್ ಶೆಟ್ಟಿ ಡೌನ್‌ಲೋಡ್ ಮಾಡಿಕೊಂಡಿದ್ದರು. ಟಾರ್ಗೆಟ್ ಕಿಲ್ಲರ್ ಹೆಸರಿನ ಇನ್ಸ್ಟಾಗ್ರಾಂ ಪೇಜ್‌ನಲ್ಲಿ ಸುಹಾಸ್‌ಗೆ ಟಾರ್ಗೆಟ್ ಫಿಕ್ಸ್ ಎಂದು ಹಾಕಲಾಗಿತ್ತು. ಫಾಜಿಲ್ ಫೋಟೊ ಜೊತೆಗೆ ಸುಹಾಸ್ ಫೋಟೊ ಹಾಕಿ ಟಾರ್ಗೆಟ್ ದಿನಾಂಕ ನಿಗದಿಪಡಿಸಿದ್ದರು. ರಿವೇಂಜ್ ಸೂನ್ ಎಂದು ಸುಹಾಸ್ ಫೋಟೋ ಹಾಕಿ ಪೋಸ್ಟ್ ಮಾಡಿದ್ದರು.

    ಮಂಗಳೂರಿನಲ್ಲಿ ನಡೆದ ಬಶೀರ್ ಹತ್ಯೆ ಆರೋಪಿ ರಿವೇಂಜ್ ಬಗ್ಗೆಯೂ ಪೋಸ್ಟ್ ಹಾಕಲಾಗಿತ್ತು. ಬಶೀರ್ ಹತ್ಯೆ ಪ್ರಕರಣ 2018ರ ಜ.3 ರಂದು ನಡೆದಿತ್ತು. ಬಶೀರ್ ಹತ್ಯೆ ಆರೋಪಿ ಶ್ರೀಜಿತ್ ಫೋಟೋ ಕೂಡ ಬಳಸಿ ರಿವೇಂಜ್ ಸೂನ್ ಎಂದು ಪೋಸ್ಟ್ ಹಾಕಲಾಗಿತ್ತು. ಆದರೆ, ಹೇಳಿದಂತೆ ಫಾಜಿಲ್ ಹತ್ಯೆ ಆರೋಪಿ ಸುಹಾಸ್‌ನನ್ನು ಆರೋಪಿಗಳು ಹತ್ಯೆ ಮಾಡಿದ್ದಾರೆ. 2022ರ ಜು.28 ರಂದು ನಡೆದಿದ್ದ ಸುರತ್ಕಲ್‌ನ ಫಾಜಿಲ್ ಹತ್ಯೆಗೆ ಪ್ರತೀಕಾರ ಎಂದು ಹೇಳಲಾಗಿದೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆಗೆ ಪಾಕಿಸ್ತಾನ್ ಜಿಂದಾಬಾದ್ ಕಾರಣ: ಆರ್.ಅಶೋಕ್ ಕಿಡಿ

  • ಸುಹಾಸ್‌ಗೆ ಆತ್ಮರಕ್ಷಣೆಗೆ ಒಂದು ದೊಣ್ಣೆಯನ್ನೂ ಇಟ್ಟುಕೊಳ್ಳಲು ಪೊಲೀಸರು ಅವಕಾಶ ನೀಡಲಿಲ್ಲ: ಹರೀಶ್ ಪೂಂಜಾ

    ಸುಹಾಸ್‌ಗೆ ಆತ್ಮರಕ್ಷಣೆಗೆ ಒಂದು ದೊಣ್ಣೆಯನ್ನೂ ಇಟ್ಟುಕೊಳ್ಳಲು ಪೊಲೀಸರು ಅವಕಾಶ ನೀಡಲಿಲ್ಲ: ಹರೀಶ್ ಪೂಂಜಾ

    – ಪೊಲೀಸ್ ಇಲಾಖೆಯಲ್ಲಿ ಮುಸಲ್ಮಾನ್ ಅಧಿಕಾರಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ: ಬಿಜೆಪಿ ಶಾಸಕ
    – ಇದು ಪೊಲೀಸ್ ಇಲಾಖೆ ವೈಫಲ್ಯ ಎಂದು ಆರೋಪ

    ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ ವೈಫಲ್ಯ ಇದೆ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ಅಸಮಾಧಾನ ಹೊರಹಾಕಿದರು.

    ಸುಹಾಸ್ ಶೆಟ್ಟಿ ಮೇಲೆ ದಾಳಿಯಾಗುತ್ತೆ ಅನ್ನೋ ಮಾಹಿತಿ ಪೊಲೀಸ್ ಇಲಾಖೆಗೆ ಮೊದಲೇ ಇತ್ತು. ಸುಹಾಸ್ ಶೆಟ್ಟಿ ಆತ್ಮರಕ್ಷಣೆಗೂ ಪೊಲೀಸರು ಯಾವುದೇ ಆಯುಧಗಳನ್ನು ಇಟ್ಟುಕೊಳ್ಳಲು ಅವಕಾಶ ನೀಡಲಿಲ್ಲ. ಆತನ ಬಳಿ ಯಾವುದೇ ಆಯುಧವಿಲ್ಲ ಅನ್ನೋ ವಿಚಾರ ಹಂತಕರಿಗೆ ಗೊತ್ತಾಗಿದ್ದು ಹೇಗೆ? ಈ ಮಾಹಿತಿ ಸೋರಿಕೆಯಾಗಿದ್ದು ಯಾರಿಂದ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ ಪರಿಸ್ಥಿತಿ ನಿರ್ಮಾಣ ಮಾಡಲು ಹೊರಟಂತೆ ಕಾಣ್ತಿದೆ: ಬಿವೈವಿ ಕಿಡಿ

    ಪೊಲೀಸ್ ಇಲಾಖೆಯಲ್ಲಿ ಮುಸಲ್ಮಾನ್ ಅಧಿಕಾರಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಯಾವುದೇ ಮಾರಾಕಸ್ತ್ರ ಇಲ್ಲ ಅನ್ನೋ ಮಾಹಿತಿ ಪೊಲೀಸ್ ಇಲಾಖೆಗೆ ಗೊತ್ತಿತ್ತು. 6 ಜನ ಇದ್ದಾಗಲೇ ದಾಳಿ ಮಾಡುತ್ತಾರೆ ಎಂದಾಗ ಮಾಹಿತಿ ಕೊಟ್ಟವರು ಯಾರು? ಇದು ಪೊಲೀಸ್ ಇಲಾಖೆಯ ವೈಫಲ್ಯ. ಮಾಹಿತಿ ಸೋರಿಕೆಯಾಗಿ ಈ ರೀತಿಯ ಹತ್ಯೆಯಾಗಿದೆ. ಇಲಾಖೆಯ ಒಳಗಿನಿಂದಲೇ ಮಾಹಿತಿ ಹೋಗಿದೆ ಎಂದು ಆರೋಪಿಸಿದರು.

    ಆತ್ಮರಕ್ಷಣೆಗೆ ಒಂದು ದೊಣ್ಣೆಯನ್ನೂ ಜೊತೆಗಿಟ್ಟುಕೊಳ್ಳಲು ಪೊಲೀಸರು ಅವಕಾಶ ನೀಡಲಿಲ್ಲ. ಪೊಲೀಸ್ ಇಲಾಖೆ ರಕ್ಷಣೆ ಕೊಡಬೇಕಿತ್ತು. ವಾಹನ ತಪಾಸಣೆ ಮಾಡಿ ಆತ್ಮರಕ್ಷಣೆಗೂ ವ್ಯವಸ್ಥೆ ಇಲ್ಲದ ಹಾಗೆ ನೋಡಿಕೊಂಡವರು ಯಾರು? ನನಗೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ. ಈ ಪ್ರಕರಣದ ತನಿಖೆಯನ್ನ ಎನ್‌ಐಎಗೆ ವಹಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಸುಹಾಸ್‌ ಹತ್ಯೆ ಖಂಡಿಸಿ ಇಂದು ದ.ಕನ್ನಡ ಜಿಲ್ಲೆ ಬಂದ್‌ಗೆ ಕರೆ

  • Mangaluru | ಕಾರಿಗೆ ಮೀನಿನ ಟೆಂಪೋ ಗುದ್ದಿಸಿ ಸಾರ್ವಜನಿಕವಾಗಿ ಸುಹಾಸ್ ಶೆಟ್ಟಿ ಹತ್ಯೆ

    Mangaluru | ಕಾರಿಗೆ ಮೀನಿನ ಟೆಂಪೋ ಗುದ್ದಿಸಿ ಸಾರ್ವಜನಿಕವಾಗಿ ಸುಹಾಸ್ ಶೆಟ್ಟಿ ಹತ್ಯೆ

    -ಗುದ್ದಿದ ರಭಸಕ್ಕೆ ಸಲೂನ್‌ ಶಾಪ್‌ಗೆ ನುಗ್ಗಿದ ಕಾರು

    ಮಂಗಳೂರು: ಬಜ್ಪೆ ಕಿನ್ನಿಪದವು (Bajpe Kinnipadavu) ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty)  ಸ್ನೇಹಿತರೊಂದಿಗೆ ಬರುತ್ತಿದ್ದ ಇನ್ನೋವಾ ಕಾರಿಗೆ ಮೀನಿನ ಟೆಂಪೋ ಗುದ್ದಿಸಿ ಬಳಿಕ ಬರ್ಬರವಾಗಿ ಕೊಲೆ ಮಾಡಲಾಗಿದೆ.

    ಸುಹಾಸ್ ಶೆಟ್ಟಿ ಬರುತ್ತಿದ್ದ ಇನ್ನೋವಾ ಕಾರನ್ನು ಮೀನಿನ ಟೆಂಪೋ ಹಾಗೂ ಒಂದು ಸ್ವಿಫ್ಟ್ ಕಾರು ಹಿಂಬಾಲಿಸಿಕೊಂಡು ಬಂದಿತ್ತು. ನಂತರ ಮೀನಿನ ಟೆಂಪೋವನ್ನು ಸುಹಾಸ್ ಇದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇನ್ನೋವಾ ಕಾರು ಸಲೂನ್‌ಗೆ ನುಗ್ಗಿದೆ. ಬಳಿಕ ಸ್ವಿಫ್ಟ್ ಕಾರಿನಲ್ಲಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಸಾರ್ವಜನಿಕ ರಸ್ತೆಯಲ್ಲೇ ಸುಹಾಸ್‌ನನ್ನು ಬರ್ಬರವಾಗಿ ಕೊಲೆಗೈದು ಅಲ್ಲಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ

    ಘಟನೆ ಬಳಿಕ ಸುಹಾಸ್‌ನನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ. ಘಟನೆಯ ಬಳಿಕ ಆಸ್ಪತ್ರೆ ಮುಂಭಾಗ ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಅಲ್ಲದೇ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಭರತ್ ಶೆಟ್ಟಿ ಕೂಡ ಆಗಮಿಸಿದ್ದಾರೆ. ಸದ್ಯ ಸುಹಾಸ್ ಪೋಷಕರು ಬೆಳ್ತಂಗಡಿಯಲ್ಲಿದ್ದಾರೆ. ಸುಹಾಸ್ ಶೆಟ್ಟಿ ಸ್ಥಳೀಯವಾಗಿ ಸಾಕಷ್ಟು ಕಾರ್ಯಕರ್ತರನ್ನು ಹೊಂದಿದ್ದ. ಇದನ್ನೂ ಓದಿ: ಆರತಿ ವೇಳೆ ಬೆಂಕಿ ತಗುಲಿ ತೀವ್ರ ಗಾಯ – ಕೇಂದ್ರ ಮಾಜಿ ಸಚಿವೆ ಗಿರಿಜಾ ವ್ಯಾಸ್ ನಿಧನ

    ಘಟನೆ ಬಳಿಕ ಮಂಗಳೂರಿನ ಹಲವೆಡೆ ಪೊಲೀಸರು ನಾಕಾ ಬಂದಿ ಹಾಕಿದ್ದಾರೆ. ಸೂಕ್ಷ್ಮ ಪ್ರದೇಶದಲ್ಲಿ ರಾತ್ರಿ ಇಡೀ ಗಸ್ತು ತಿರುಗಲು ಸೂಚನೆ ನೀಡಲಾಗಿದೆ. ಅಲ್ಲದೇ ಮಂಗಳೂರು ನಗರಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಪ್ರೇಮ ವಿವಾಹವಾದ ಹಿಂದೂ, ಮುಸ್ಲಿಮ್‌ ಜೋಡಿ – ಈಗ ರಕ್ಷಣೆಗೆ ಪೊಲೀಸರ ಮೊರೆ

    ಘಟನೆ ಸಂಬಂಧ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ಮಾಧ್ಯಮಗಳೊಂದಿಗೆ ಮಾತನಾಡಿ, ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ. ರಾತ್ರಿ 8:30ರ ಸುಮಾರಿಗೆ ರೌಡಿಶೀಟರ್ ಸುಹಾಸ್ ಶೆಟ್ಟಿ ಮೇಲೆ ಹಲ್ಲೆ ಆಗಿದೆ. ಇನ್ನೋವಾ ಕಾರಿನಲ್ಲಿ ಬರುತ್ತಿದ್ದ ಸುಹಾಸ್ ಶೆಟ್ಟಿಯನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸುಹಾಸ್ ಶೆಟ್ಟಿ ಸಾವನಪ್ಪಿದ್ದಾರೆ. ಸುಹಾಸ್ ಜೊತೆ ಇದ್ದ ಸ್ನೇಹಿತರಿಗೂ ಗಾಯವಾಗಿದೆ. ದುಷ್ಕರ್ಮಿಗಳನ್ನು ಪತ್ತೆ ಮಾಡಿ ಬಂಧಿಸಲಾಗುವುದು. ಪ್ರತಿಕಾರದ ಹತ್ಯೆ ಎಂಬುದು ತನಿಖೆ ಬಳಿಕ ತಿಳಿಯಲಿದೆ ಎಂದರು. ಇದನ್ನೂ ಓದಿ: ಯುದ್ಧ ಭೀತಿ – ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 10 ದಿನ ಮದರಸಾ ಬಂದ್!

    ಸುಹಾಸ್ ಶೆಟ್ಟಿ ಸುರತ್ಕಲ್‌ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ ನಡೆದಿತ್ತು. ಈ ಹತ್ಯೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಮತ್ತು ಇತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದ ಸುಹಾಸ್ ಶೆಟ್ಟಿಗೆ ಜೈಲಿನಿಂದ ಹೊರ ಬಂದ ನಂತರ ಯಾವುದೇ ಜವಾಬ್ದಾರಿ ಇರಲಿಲ್ಲ. ಇದನ್ನೂ ಓದಿ: Bengaluru | ಮಳೆಗೆ ಆಟೋದ ಮೇಲೆ ಬಿದ್ದ ಮರ – ಚಾಲಕ ಸಾವು

  • ವಿಚಾರಣೆ ನೆಪದಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಎಸ್‌ಪಿ ಹಲ್ಲೆ ಆರೋಪ – ಭಟ್ಕಳದಲ್ಲಿ ಹೆದ್ದಾರಿ ತಡೆದು ಠಾಣೆಗೆ ಮುತ್ತಿಗೆ

    ವಿಚಾರಣೆ ನೆಪದಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಎಸ್‌ಪಿ ಹಲ್ಲೆ ಆರೋಪ – ಭಟ್ಕಳದಲ್ಲಿ ಹೆದ್ದಾರಿ ತಡೆದು ಠಾಣೆಗೆ ಮುತ್ತಿಗೆ

    – ಶಿರಸಿಯಲ್ಲಿ ತನಿಖೆ ನೆಪದಲ್ಲಿ ಹಲ್ಲೆ ನಡೆಸಿದ್ರಾ ಎಸ್‌ಪಿ?

    ಕಾರವಾರ: ವಿಚಾರಣೆ ನೆಪದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನನ್ನು ಠಾಣೆಗೆ ಕರೆಸಿ ಎಸ್.ಪಿ ಎಂ.ನಾರಾಯಣ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಭಟ್ಕಳದಲ್ಲಿ (Bhatkal) ಬಿಜೆಪಿ ಮುಖಂಡರು ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಹೆದ್ದಾರಿ ತಡೆದು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದಾರೆ.

    ಭಟ್ಕಳದ ಹನುಮ ನಗರದ ಹಿಂದೂ ಸಂಘಟನೆ ಕಾರ್ಯಕರ್ತ ಶ್ರೀನಿವಾಸ್ ನಾಯ್ಕ ಹಲ್ಲೆಗೊಳಗಾಗಿದ್ದು, ಭಟ್ಕಳ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮಲಯಾಳಂ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ – ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

    ಮಂಗಳವಾರ ಶಿರಸಿಯಲ್ಲಿ ರೌಡಿಶೀಟರ್ ಪೆರೇಡ್ ಮಾಡಿದ್ದ ಎಸ್.ಪಿ ಎಂ.ನಾರಾಯಣ್‌ರವರು 6 ಪ್ರಕರಣದಲ್ಲಿ ಆರೋಪಿಯಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಗಡಿಪಾರಾಗಿದ್ದ ಆಟೋ ಚಾಲಕ ಶ್ರೀನಿವಾಸ ನಾಯ್ಕರನ್ನು ಮಂಗಳವಾರ ಬೆಳಗ್ಗೆ ಭಟ್ಕಳ ಪೊಲೀಸರು ಶಿರಸಿಗೆ ಕರೆದೊಯ್ದಿದ್ದರು. ಶಿರಸಿ ನಗರ ಠಾಣೆಯಲ್ಲಿ ಇದ್ದ ಎಸ್.ಪಿ ಎಂ.ನಾರಾಯಣ್‌ರವರು ತನಿಖೆ ನೆಪದಲ್ಲಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಡೀಸೆಲ್ ಬೆಲೆ ಏರಿಕೆ – ಖಾಸಗಿ ಬಸ್ ಪ್ರಯಾಣ ದರ ದುಬಾರಿ!

    ಈ ಆರೋಪದ ಬೆನ್ನಲ್ಲೇ ಬಿಜೆಪಿ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ವಿವಿಧ ಸಂಘಟನೆಗಳು ಭಟ್ಕಳ ಶಹರಾ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು. ಪ್ರತಿಭಟನೆಯಲ್ಲಿ ಮಾಜಿ ಬಿಜೆಪಿ ಶಾಸಕ ಸುನೀಲ್ ನಾಯ್ಕ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು. ಪ್ರತಿಭಟನಾ ಸ್ಥಳಕ್ಕೆ ಎಸ್.ಪಿ ಆಗಮಿಸಿ ಕ್ಷಮೆ ಕೋರುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ಈ ವೇಳೆ ಭಟ್ಕಳದ ಡಿವೈಎಸ್‌ಪಿ ಮಹೇಶ್ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು.

  • ದುಷ್ಕರ್ಮಿಗಳಿಂದ ಭಯ ಹುಟ್ಟಿಸೋ ಪ್ರಕರಣ- ನಮಗೆ ಸೂಕ್ತ ರಕ್ಷಣೆ ಬೇಕು: ಹರ್ಷ ಸಹೋದರಿ

    ದುಷ್ಕರ್ಮಿಗಳಿಂದ ಭಯ ಹುಟ್ಟಿಸೋ ಪ್ರಕರಣ- ನಮಗೆ ಸೂಕ್ತ ರಕ್ಷಣೆ ಬೇಕು: ಹರ್ಷ ಸಹೋದರಿ

    ಶಿವಮೊಗ್ಗ: ದುಷ್ಕರ್ಮಿಗಳಿಂದ ಭಯ ಹುಟ್ಟಿಸುವ ಪ್ರಕರಣ ಹಿನ್ನೆಲೆಯಲ್ಲಿ ಇದೀಗ ನಮಗೆ ಸೂಕ್ತ ರಕ್ಷಣೆ ಬೇಕು ಎಂದು ಹಿಂದೂ ಕಾರ್ಯಕರ್ತ ದಿ. ಹರ್ಷ (Harsha) ಸಹೋದರಿ ಅಶ್ವಿನಿ (Ashwini) ಆಗ್ರಹಿಸಿದ್ದಾರೆ.

    ಪಬ್ಲಿಕ್ ಟಿವಿಗೆ ಹರ್ಷ ತಾಯಿ ಪದ್ಮಾವತಿ ಹಾಗೂ ಹರ್ಷ ಸಹೋದರಿ ಅಶ್ವಿನಿ ಮಾತನಾಡಿ, ರಾತ್ರಿ 11.15 ರ ಸಮಯಕ್ಕೆ 3-4 ಬೈಕ್ ನಲ್ಲಿ ಯುವಕರು ಬಂದಿದ್ದರು. ಮಾರಕಾಸ್ತ್ರ ಹಿಡಿದುಕೊಂಡು ಓಡಾಡುತ್ತಿದ್ದರು ಎಂದು ಹೇಳಿದರು.

    ಹರ್ಷನ ತೆಗೆದಿದ್ದು ಸಾಲದಾ, ನಿಮ್ಮನ್ನೂ ತೆಗೆಯಬೇಕಾ. ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಯುವಕರ ಗುಂಪು ಅವಾಜ್ ಹಾಕಿದ್ದಾರೆ. ಇನ್ನು ಎಷ್ಟು ಮಂದಿ ಹಿಂದೂ ಯುವಕರ ಬಲಿಯಾಗಬೇಕು..?. ನನ್ನ ಸಹೋದರ ಹರ್ಷ ಹೋದ, ಪ್ರವೀಣ್ ನೆಟ್ಟಾರ್ (Praveen Nettar) ಹೋದ. ಆದರೂ ಅವರ ದಾಹ ಇನ್ನೂ ತೀರಿಲ್ಲ. ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ನಮಗೆ ಸೂಕ್ತ ರಕ್ಷಣೆ ಕೊಡಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಆಜಾದ್ ನಗರದಲ್ಲಿ ಕಾರು ಜಖಂ – ಹರ್ಷ ಸಹೋದರಿ ಅಶ್ವಿನಿ ವಿರುದ್ಧ FIR

    ಸೀಗೆಹಟ್ಟಿಯ ನಿವಾಸ, ರವಿ ವರ್ಮ ಬೀದಿ, ಕೆ.ಆರ್ ಪುರಂ ರಸ್ತೆ ಮುಂತಾದೆಡೆ 2 ಬೈಕ್‍ಗಳಲ್ಲಿ ಬಂದ 6 ಮಂದಿ ಮುಸ್ಲಿಂ ಯುವಕರು ಮಚ್ಚು-ಲಾಂಗ್ ಹಿಡಿದು ಭಯ ಹುಟ್ಟಿಸಿದ್ದಾರೆ. ಮುಸ್ಲಿಂ ಪರ ಘೋಷಣೆ ಕೂಗುತ್ತಾ, ಲಾಂಗ್ ಬೀಸಿದ್ದಾರೆ. ಮತ್ತೊಂದೆಡೆ ಸಿಗೇಹಟ್ಟಿಯಲ್ಲಿ ದುಷ್ಕರ್ಮಿಗಳಿಂದ ಕಲ್ಲು ತೂರಾಟ ನಡೆದಿದ್ದು, ಪ್ರಕಾಶ್ (25) ಎಂಬಾತ ಗಾಯಗೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಘಟನೆಗೆ ಸಂಬಂಧಿಸಿ ಹರ್ಷನ ಸಹೋದರಿ ಅಶ್ವಿನಿ ಸೇರಿ 10-15 ಜನರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ. ಫೆ.20ರಂದು ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆಗೀಡಾಗಿದ್ದ.

    Live Tv
    [brid partner=56869869 player=32851 video=960834 autoplay=true]

  • ಮಂಡ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಬೀದಿಗಿಳಿದ ಹಿಂದೂ ಕಾರ್ಯಕರ್ತರು, ಅನ್ನದಾತರು!

    ಮಂಡ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಬೀದಿಗಿಳಿದ ಹಿಂದೂ ಕಾರ್ಯಕರ್ತರು, ಅನ್ನದಾತರು!

    ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಸಾವಿರಾರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಅನ್ನದಾತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಡಿಸಿದ್ದಾರೆ. ಪ್ರವೀಣ್ ಹತ್ಯೆ ಖಂಡಿಸಿ ಹಿಂದೂ ಸಂಘಟನೆ ಮಾಡಿದ್ರೆ, ಜಿಎಸ್‍ಟಿ ವಿರುದ್ಧ ಅನ್ನದಾತರು ಪ್ರತಿಭಟಿಸಿದ್ರು. ಇಂದು ಮಂಡ್ಯದಲ್ಲಿ ನಡೆದ ನಾಲ್ಕು ಪ್ರತಿಭಟನೆಯಿಂದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಕೂಡ ಆಗಿತ್ತು.

    ಮಂಡ್ಯದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮತ್ತು ಪಿಎಫ್‍ಐ ಹಾಗೂ ಎಸ್‍ಟಿಪಿಐ ಸಂಘಟನೆಗಳನ್ನು ಬ್ಯಾನ್ ಮಾಡಬೇಕೆಂದು ಆಗ್ರಹಿಸಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 10 ಸಾವಿರಕ್ಕೂ ಅಧಕ ಮಂದಿ ಮಂಡ್ಯದ ಮಹಿಳಾ ಕಾಲೇಜಿನಿಂದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ, ಹೀಗಿದ್ದರೂ ಹಿಂದೂಗಳ ಕೊಲೆಯಾಗುತ್ತಿದೆ. ಹಿಂದೂಗಳ ರಕ್ಷಣೆ ನಮ್ಮ ಧ್ಯೇಯ ಎಂದು ಕೊಂಡು ಅಧಿಕಾರಕ್ಕೆ ಬಂದವರು ಇದೀಗ ಹತ್ಯೆಗಳಾದ್ರು ಇದೀಗ ಕಠಿಣ ಕ್ರಮ ಕೈಗೊಳ್ಳಲು ಹಿಂದೆ ಮುಂದೆ ನೋಡುತ್ತಿದ್ದಾರೆ. ಅಧಿಕಾರಕ್ಕೆ ಬಂದ ಗಂಟೆಯಲ್ಲೇ ಪಿಎಫ್‍ಐ ಮತ್ತು ಎಸ್‍ಟಿಪಿಐ ಸಂಘಟನೆಗಳನ್ನು ಬ್ಯಾನ್ ಮಾಡುತ್ತೇವೆ ಎಂದವರು ಇದೀಗ ತುಟಿ ಬಿಚ್ಚುತ್ತಿಲ್ಲ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಬಿಜೆಪಿ ವಿರುದ್ಧ ಆಕ್ರೋಶ ವ್ಯಪಡಿಸಿದರು.

    ಒಂದು ಕಡೆ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ರೆ ಮತ್ತೊಂದೆಡೆ ಕರ್ನಾಟಕ ರಾಜ್ಯ ರೈತ ಸಂಘಟವೂ ಸಹ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾ ಮೆರವಣಿಗೆ ನಡೆಸಿತು. ಬೆಲ್ಲದ ಮೇಲಿನ ಜಿಎಸ್‍ಟಿ ವಾಪಸ್ ಪಡೆಯುವಂತೆ, ಕಬ್ಬಿಗೆ ಟನ್‍ಗೆ 4500 ರೂ ಬೆಲೆ ನಿಗಧಿ ಮಾಡುವಂತೆ, ಬೆಲ್ಲಕ್ಕೆ ವೈಜ್ಞಾನಿಕ ಬೆಲೆ ನಿಗಧಿಪಡಿಸಬೇಕು ಹಾಗೂ ಎಪಿಎಂಸಿಯನ್ನು ಪಾರದರ್ಶಕಗೊಳಿಸಬೇಕೆಂದು ಪ್ರತಿಭಟನೆ ನಡೆಸಿದರು. ಮಂಡ್ಯದ ಕಾಳಮ್ಮ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಎತ್ತಿನಗಾಡಿ, ಟ್ರಾಕ್ಟರ್ ಹಾಗೂ ಟಿಲ್ಲರ್ ಗಳ ಮೂಲಕ ಮೆರವಣಿಗೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಫಾಝಿಲ್ ಹತ್ಯೆ ಪ್ರಕರಣ- ಪರಾರಿಯಾಗುವ ರಸ್ತೆ ಮಾರ್ಗ ಬದಲಿಸಲು ಹೇಳಿರುವ ರೌಡಿ ಸುಹಾಸ್

    ಇತ್ತ ಸಿಐಟಿಯು ಸಂಘಟೆಯಿಂದ ಸಾವರಿರಾರು ಕಾರ್ಯಕರ್ತರು ಸಿಲ್ವರ್ ಜ್ಯೂಬಿಲಿ ಪಾರ್ಕ್‍ನಿಂದ ಡಿಸಿ ಆಫೀಸ್ ವರೆಗೆ ಕೂಲಿ ಕಾರ್ಯಕರ್ತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ಇನ್ನೂ ಅಖಿಲ ಭಾರತ ವಿರಶೈವ ಲಿಂಗಾಯತ ಮಹಾಸಭಾದಿಂದ ವಿರಶೈವ ಲಿಂಗಾಯತ ಸಮೂದಾಯವನ್ನು ಓಬಿಸಿ ಪಟ್ಟಿಗೆ ಸೇರಿಸಬೇಕೆಂದು ಸಂಜಯ್ ಸರ್ಕಲ್‍ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ಮಂಡ್ಯದಲ್ಲಿ ನಡೆದ ಈ ಸರಣಿ ಪ್ರತಿಭಟನೆಯಿಂದ ಮಂಡ್ಯ ನಗರದ ಜನರು ಪರದಾಡುವ ಸ್ಥಿತಿ ನಿರ್ಮಾಣವಾದ್ರೆ, ಇನ್ನೊಂದೆಡೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡುವ ಸ್ಥತಿ ನಿರ್ಮಾಣವಾಯಿತು.

    ಒಟ್ಟಾರೆ ಮಂಡ್ಯ ಇಂದು ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶದ ಸ್ವರೂಪದಲ್ಲಿ ನಡೆದ ಪ್ರತಿಭಟನೆಗಳಿಗೆ ಸಾಕ್ಷಿಯಾಯಿತು. ಇತ್ತ ಈ ಪ್ರತಿಭಟನೆಗಳಿಂದ ಜನ ಸಾಮಾನ್ಯರು ಪರದಾಡಿದರು.

    Live Tv
    [brid partner=56869869 player=32851 video=960834 autoplay=true]

  • ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಹಲ್ಲೆ, ಶಿವಾಜಿ ಮೂರ್ತಿ ಭಗ್ನ

    ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಹಲ್ಲೆ, ಶಿವಾಜಿ ಮೂರ್ತಿ ಭಗ್ನ

    ಬೀದರ್: ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ದಂಗಲ್ ಮಧ್ಯೆ ಅನ್ಯ ಕೋಮಿನ ಗುಂಪೊಂದು ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ನೂರ್ ಖಾನ್ ಕಾಲೋನಿಯ ಜೈ ಭವಾನಿ ಪಾಸ್‍ಫುಡ್ ಹೋಟೆಲ್‍ನಲ್ಲಿ ನಡೆದಿದೆ.

    ಗೋ ರಕ್ಷಣೆ ಸೇರಿದಂತೆ ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿದ್ದ ಎಂಬ ಕಾರಣಕ್ಕೆ ಬಜರಂಗದಳದ ಕಾರ್ಯಕರ್ತನ ಮೇಲೆ ಗಂಭೀರವಾಗಿ ಅನ್ಯಕೋಮಿನ ಜನರು ಹಲ್ಲೆ ಮಾಡಿದ್ದಾರೆ. ಉದ್ದೇಶಪೂರ್ವಕವಾಗಿ ತಡರಾತ್ರಿ ಹೋಟೆಲ್‍ಗೆ ಬಂದು ಊಟದ ವಿಚಾರಕ್ಕೆ ಗಲಾಟೆ ಮಾಡಿ ಅನ್ಯಕೋಮಿನ ಗುಂಪು ಹಿಂದೂ ಕಾರ್ಯಕರ್ತ ಬಲರಾಮ್ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದೆ.

    ಹಲ್ಲೆ ಮಾಡುವ ಜೊತೆಗೆ ಹೋಟೆಲ್‍ನಲ್ಲಿ ಇದ್ದ ಶಿವಾಜಿ ಮೂರ್ತಿಯನ್ನು ಅನ್ಯ ಕೋಮಿನ ಗುಂಪು ಭಗ್ನ ಮಾಡಿದ್ದಾರೆ. ಘಟನೆಯಲ್ಲಿ ಹಿಂದೂ ಕಾರ್ಯಕರ್ತ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಹುಮ್ನಾಬಾದ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್ ಅವಘಡ: ಮಕ್ಕಳನ್ನು ಉಳಿಸಲು ಹೋಗಿ ತಾಯಿಯೂ ಬಲಿ – ಒಂದೇ ಮನೆಯಲ್ಲಿ 3 ಸಾವು

  • ಶಿವಮೊಗ್ಗದಲ್ಲಿ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು – ಮೂವರು ಅರೆಸ್ಟ್

    ಶಿವಮೊಗ್ಗದಲ್ಲಿ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು – ಮೂವರು ಅರೆಸ್ಟ್

    ಶಿವಮೊಗ್ಗ: ನಗರದಲ್ಲಿ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು ರೂಪಿಸಿದ್ದ ಮೂವರು ಅನ್ಯಕೋಮಿನ ಯುವಕರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಸಲ್ಮಾನ್, ಅಬ್ಬಾಸ್, ಉಸ್ಮಾನ್ ಬಂಧಿತ ಆರೋಪಿಗಳು. ಯುವಕರು ಹಿಂದೂಪರ ಸಂಘಟಿತ ಕಾರ್ಯಕರ್ತ ಭರತ್ ಎಂಬಾತನ ಕೊಲೆಗೆ ಸಂಚು ರೂಪಿಸಿದ್ದರು. ಈ ಮೂವರ ಗುಂಪು ನಗರದ ನ್ಯೂ ಮಂಡ್ಲಿ ಬಡಾವಣೆ ಬಳಿ ಭರತ್ ಸಹೋದರನನ್ನು ಅಡ್ಡ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಭರತ್ ಎಲ್ಲಿದ್ದಾನೆ ಎಂಬುದರ ಬಗ್ಗೆ ಪ್ರಶ್ನಿಸಿದ್ದಾರೆ.

    ಈ ಕುರಿತು ಭರತ್ ಸಹೋದರ ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದಾರೆ. ಕಾರ್ಯ ಪ್ರವೃತ್ತರಾದ ಪೊಲೀಸರಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಯುವಕರ ತಂಡವು ಈ ಹಿಂದೆ ಸಹ ಹರ್ಷ್‍ನ ಹತ್ಯೆ ಪ್ರತೀಕಾರವಾಗಿ ಅನ್ಯಕೋಮಿನ ಯುವಕನ ಹತ್ಯೆಗೆ ಸಂಚು ರೂಪಿಸಿದ್ದರು. ಪೊಲೀಸರ ಕಾರ್ಯಾಚರಣೆಯಿಂದ ಎರಡು ಹತ್ಯೆಯ ಸಂಚು ವಿಫಲವಾಗಿವೆ.

  • ಹರ್ಷನ ಕೊಲೆ ವೈಯಕ್ತಿಕ ಕಾರಣಗಳಿಂದಲ್ಲ: ಸಿಟಿ ರವಿ

    ಹರ್ಷನ ಕೊಲೆ ವೈಯಕ್ತಿಕ ಕಾರಣಗಳಿಂದಲ್ಲ: ಸಿಟಿ ರವಿ

    ಚಿಕ್ಕಮಗಳೂರು: ಶಿವಮೊಗ್ಗದ ಸಿಗೇಹಟ್ಟಿಯಲ್ಲಿ ಆದ ಹಿಂದೂ ಕಾರ್ಯಕರ್ತ ಹರ್ಷನ ಕೊಲೆ ವೈಯಕ್ತಿಕ ಕಾರಣಗಳಿಂದಲ್ಲ ಎಂದು ಎನ್‌ಐಎ ದೃಢೀಕರಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದರು.

    ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಹರ್ಷನ ಕೊಲೆ ಪ್ರಕರಣದ ಬಗ್ಗೆ ಎನ್‌ಐಎ ತನಿಖೆ ನಡೆಸುತ್ತಿದೆ. ಶಿವಮೊಗ್ಗಕ್ಕೆ ಆಗಮಿಸಿರುವ ಎನ್‌ಐಎ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಹರ್ಷನ ಕೊಲೆ ಹಿಂದೆ ಕೋಮು ದಳ್ಳುರಿಯ ಉದ್ದೇಶವಿದೆ ಎನ್ನುವ ಅಂಶ ಬಹಿರಂಗವಾಗಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಹರ್ಷನ ಕೊಲೆ ಹಿಂದೆ ವ್ಯವಸ್ಥಿತ ಜಾಲ ಕೆಲಸ ಮಾಡುತ್ತಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿಯ ಹಿಂದುತ್ವದ ಅಸ್ತ್ರಗಳನ್ನು ಮುಲಾಜಿಲ್ಲದೇ ಖಂಡಿಸಲು ಮುಂದಾದ ಕಾಂಗ್ರೆಸ್ ನಾಯಕರು

    ಹರ್ಷನ ಕೊಲೆ ವೈಯಕ್ತಿಕ ಕಾರಣಗಳಿಂದ ಆಗಿಲ್ಲ ಎಂದು ಅಂದೇ ಮೇಲ್ನೋಟಕ್ಕೆ ಕಾಣಿಸಿತ್ತು. ಹರ್ಷನ ಕೊಲೆ ಹರ್ಷನಿಗಾಗಲಿ-ಆಪಾದಿತರಿಗಾಗಲಿ ಇದ್ದ ಹಳೇ ವೈಷಮ್ಯದಿಂದ ಅಲ್ಲ ಎಂಬುದನ್ನ ಎನ್‌ಐಎ ದೃಢೀಕರಿಸಿದೆ. ಈ ಕಾರಣಕ್ಕಾಗಿ ಸರ್ಕಾರ ಸಮಗ್ರ ತನಿಖೆಗೆ ಆದೇಶ ಮಾಡಿತ್ತು. ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಬೇಕೆಂಬ ಸಂಚಿನಲ್ಲೇ ಹತ್ಯೆ ಮಾಡಿದ್ದು, ಇದು ಯಾರೋ ವೈಯಕ್ತಿಕವಾಗಿ ತೆಗೆದುಕೊಂಡ ನಿರ್ಧಾರ ಅಲ್ಲ ಎಂದು ತಮ್ಮ ಅಭಿಪ್ರಾಯ ತಿಳಿಸಿದರು. ಇದನ್ನೂ ಓದಿ: ನೇಪಾಳದ ಪ್ರಧಾನಿಗೆ ವಿಶಿಷ್ಟ ಉಡುಗೊರೆ ನೀಡಿದ ಪ್ರಧಾನಿ ಮೋದಿ

    ನಿನ್ನೆ ಪರೇಶ್ ಮೇಸ್ತಾ, ಇಂದು ಹರ್ಷ, ನಾಳೆ ಮತ್ತೊಬ್ಬರು ಎಂಬ ಪರಿಸ್ಥಿತಿ ಬರಬಾರದು. ಅದೇ ಕಾರಣಕ್ಕೆ ಸರ್ಕಾರ ಎನ್‌ಐಎ ತನಿಖೆಗೆ ಕೇಸ್ ಒಪ್ಪಿಸಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಿ ಸತ್ಯಾಂಶ ಹೊರಬರಲಿ ಎಂದಿದ್ದಾರೆ. ಈ ಕೊಲೆ ಹಿಂದೆ ವ್ಯವಸ್ಥಿತಿ ಜಾಲ ಕೆಲಸ ಮಾಡಿರುವ ಸಾಧ್ಯತೆ ಇದೆ. ಈ ಹತ್ಯೆಗೆ ಫೈನಾನ್ಸ್ ಮಾಡುವವರು ಯಾರು? ಪ್ರಚೋದನೆ ಕೊಟ್ಟವರು ಯಾರು? ಹಣದ ವ್ಯವಸ್ಥೆ ಮಾಡುವವರು ಯಾರು? ನ್ಯಾಯಾಲಯದಲ್ಲಿ ಬೆಂಬಲ ಕೊಡುವವರು ಯಾರು ಎಂಬುದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದರು.

    ಈ ಹತ್ಯೆಯ ಹಿಂದೆ ಯಾವ ನೆಟ್ವರ್ಕ್ ಇದೆ ಎನ್ನುವುದನ್ನು ನೋಡಬೇಕು. ಅದು ರಾಜ್ಯದ್ದೋ ಅಥವ ಹೊರರಾಜ್ಯದ್ದೋ ಗೊತ್ತಾಗಲಿ ಎಂದು ಹೇಳಿದರು.