Tag: ಹಿಂದೂ ಕಾರ್ಯಕರ್ತರು

  • ಸಿದ್ದರಾಮಯ್ಯ ಆಗಮನ ಹಿನ್ನೆಲೆ ಕೇಸರಿ ಧ್ವಜ ತೆರವಿಗೆ ಪೊಲೀಸರು ಸೂಚನೆ; ದಿಢೀರ್​ ಪ್ರತಿಭಟನೆ

    ಸಿದ್ದರಾಮಯ್ಯ ಆಗಮನ ಹಿನ್ನೆಲೆ ಕೇಸರಿ ಧ್ವಜ ತೆರವಿಗೆ ಪೊಲೀಸರು ಸೂಚನೆ; ದಿಢೀರ್​ ಪ್ರತಿಭಟನೆ

    ಕೊಪ್ಪಳ: ಸಿಎಂ ಸಿದ್ದರಾಮಯ್ಯ (Siddaramaiah) ಆಗಮನ ಹಿನ್ನೆಲೆ ಕೇಸರಿ ಧ್ವಜ ತೆರವಿಗೆ ಸೂಚಿಸಿದ ಪೊಲೀಸರ ನಡೆ ಖಂಡಿಸಿ ಕೊಪ್ಪಳ ತಾಲೂಕಿನ ಭಾಗ್ಯನಗರ ಪಟ್ಟಣದಲ್ಲಿ ಇಂದು ರಾತ್ರಿ ಬಿಜೆಪಿ ನಾಯಕರು (BJP Leaders) ಹಾಗೂ ಸಾರ್ವಜನಿಕರು ದಿಢೀರ್​ ಪ್ರತಿಭಟನೆ ನಡೆಸಿದರು.

    ನಾಡಿದ್ದು ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಪ್ಪಳಕ್ಕೆ ಆಗಮಿಸಲಿದ್ದಾರೆ. ಭಾಗ್ಯನಗರದ ಇಂದಿರಾ ಕ್ಯಾಂಟೀನ್​ ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದರ ಅಂಗವಾಗಿ ರಸ್ತೆ ತಗ್ಗು ಮತ್ತು ಗುಂಡಿಗಳನ್ನು ಅವಸರ ಅವಸರವಾಗಿ ಮುಚ್ಚಲಾಗುತ್ತಿದೆ. ನವರಾತ್ರಿ ಅಂಗವಾಗಿ ಅಂಬಾಭವಾನಿ ದೇವಾಲಯ ಮುಂಭಾಗದಲ್ಲಿ ರಸ್ತೆಗೆ ಅಡ್ಡಲಾಗಿ ಕೇಸರಿ ಧ್ವಜಗಳ ತೋರಣ ಕಟ್ಟಲಾಗಿದೆ. ಅದನ್ನು ತೆರವು ಮಾಡುವಂತೆ ಪೊಲೀಸರು ಸೂಚಿಸಿದ್ದಾರೆ. ಇದರಿಂದ ಕೆರಳಿದ ಹಿಂದೂ ಕಾರ್ಯಕರ್ತರು, ಬಿಜೆಪಿ ನಾಯಕರು ಏಕಾಏಕಿ ಪ್ರತಿಭಟನೆ ನಡೆಸಿದರು. ಧ್ವಜ ತೆರವಿಗೆ ಮುಂದಾಗಿದ್ದು ಸರಿಯಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ, ಪೊಲೀಸರ ವಿರುದ್ಧ ಘೋಷಣೆ ಕೂಗಿದರು.

    ವಿಧಾನ ಪರಿಷತ್​ ಸದಸ್ಯೆ ಹೇಮಲತಾ ನಾಯಕ್‌, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್​ ಸ್ಥಳಕ್ಕೆ ಧಾವಿಸಿದರು. ತೆರವು ಮಾಡುವುದಿಲ್ಲವೆಂದು ಹೇಳುವವರೆಗೂ ಸ್ಥಳಬಿಟ್ಟು ಕದಲುವುದಿಲ್ಲವೆಂದು ಪಟ್ಟು ಹಿಡಿದರು. ಹೆಚ್ಚು ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ಪರಿಸ್ಥಿತಿ ಕೈಮೀರುವ ಹಂತ ತಲುಪಿತು. ಇದನ್ನೂ ಓದಿ: ರಾಜ್ಯದಲ್ಲಿ 1.2 ಕೋಟಿ ಮನೆಗಳ ಸಮೀಕ್ಷೆ ಮುಕ್ತಾಯ – ಬೆಂಗಳೂರಲ್ಲಿ ಜಾತಿ ಜನಗಣತಿ ಮೊದಲ ದಿನವೇ ಗೊಂದಲ

    ತಕ್ಷಣ ಸ್ಥಳಕ್ಕೆ ಬಂದ ಕೊಪ್ಪಳ ನಗರಠಾಣೆ ಪಿಐ ಜಯಪ್ರಕಾಶ, ಸಿಎಂ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡುತ್ತಿದ್ದೇವೆ. ರಸ್ತೆಯುದ್ದಕ್ಕೂ ಇದ್ದ ಎಲ್ಲ ಧ್ವಜ, ದಾರ, ಇನ್ನಿತರ ವಸ್ತುಗಳನ್ನು ತೆರವು ಮಾಡಲಾಗುತ್ತಿದೆ. ಅದರಂತೆ ಇವುಗಳನ್ನು ತೆಗೆಯಲು ಹೇಳಿದ್ದೆವು. ಬೇಡವೆಂದರೆ ತೆಗೆಯುವುದು ಬೇಡವೆಂದು ಸಮಜಾಯಿಷಿ ನೀಡಿದರು. ಬಳಿಕ ಜನ ಚದುರಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿರೊ ಇಸ್ರೇಲ್ ರಾಯಭಾರ ಕಚೇರಿ, ಹೈಕೋರ್ಟ್‌ಗೆ RDX ಇಟ್ಟಿರೋದಾಗಿ ಇ-ಮೇಲ್‌ ಬೆದರಿಕೆ

  • ಭಟ್ಕಳ ಅರಣ್ಯದಲ್ಲಿ ಗೋವುಗಳ ನರಮೇಧ? – ನೂರಾರು ಗೋವುಗಳ ಎಲುಬುಗಳು ಪತ್ತೆ; ಪೊಲೀಸರಿಂದ ತನಿಖೆ

    ಭಟ್ಕಳ ಅರಣ್ಯದಲ್ಲಿ ಗೋವುಗಳ ನರಮೇಧ? – ನೂರಾರು ಗೋವುಗಳ ಎಲುಬುಗಳು ಪತ್ತೆ; ಪೊಲೀಸರಿಂದ ತನಿಖೆ

    ಕಾರವಾರ: ಆ ಅರಣ್ಯದಲ್ಲಿ ನೂರಾರು ಬುರುಡೆಗಳು, ಸಾವಿರಾರು ಎಲುಬುಗಳು (Cow Bones) ಪತ್ತೆಯಾಗಿವೆ. ಪೊಲೀಸರು ಇದೀಗ ಇದರ ರಹಸ್ಯ ಹೊರಗೆಳೆಯಲು ತನಿಖೆಗಿಳಿದಿದ್ದಾರೆ.

    ಉತ್ತರ ಕನ್ನಡ (Uttara kannada) ಜಿಲ್ಲೆಯ ಭಟ್ಕಳದ ಮುಗ್ದಮ್ ಕಾಲೋನಿ ಬಳಿಯ ಅರಣ್ಯ ಇಲಾಖೆಗೆ ಸೇರಿದ ಬೆಳ್ನೆ ಅರಣ್ಯದ ಸರ್ವೇ ನಂಬರ್ 74ರ ಜಾಗದಲ್ಲಿ ನೂರಾರು ಗೋವುಗಳ ಕಳೇಬರದ ರಾಶಿಯೇ ಪತ್ತೆಯಾಗಿದೆ. ಸ್ಥಳೀಯರು ಈ ಕಾಡಿನ ಭಾಗದಲ್ಲಿ ರಾಶಿ ರಾಶಿ ಬಿದ್ದ ಗೋವುಗಳ ಅಸ್ಥಿಪಂಜರವನ್ನು ನೋಡಿ ಹಿಂದೂ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಆಗಮಿಸಿ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಇದು ತಿಳಿಯುತ್ತಿದ್ದಂತೆ ರಾಶಿ ರಾಶಿ ಬಿದ್ದಿದ್ದ ಅಸ್ಥಿಪಂಜರಗಳನ್ನ ಆ ಸ್ಥಳದಿಂದ ಅನಾಮಿಕ ವ್ಯಕ್ತಿಗಳು ಬೇರೆಡೆ ಸಾಗಿಸಿದ್ದಾರೆ. ಸಾಗಿಸುವ ವೇಳೆ ಅವಸರದಲ್ಲಿ ಪಕ್ಕದಲ್ಲಿದ್ದ ಪುರಸಭೆಯ ವೇಸ್ಟ್ ಡಂಪಿಂಗ್ ಟ್ಯಾಂಕ್‌ಗೂ ಅಸ್ಥಿಪಂಜರಗಳನ್ನು ಹಾಕಲಾಗಿದೆ.

    ಇನ್ನು ಭಟ್ಕಳದಲ್ಲಿ ನಿರಂತರ ಗೋವಧೆ ನಡೆಯುತ್ತಿರುವ ಬಗ್ಗೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಅಕ್ರಮವಾಗಿ ಗೋವುಗಳನ್ನು ಭಟ್ಕಳಕ್ಕೆ ತಂದು ವಧಿಸಲಾಗುತ್ತಿದೆ, ಇದಕ್ಕೆ ಪೊಲೀಸ್ ಇಲಾಖೆಯೂ ಸೇರಿಕೊಂಡಿದೆ ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ನಮ್ಮ ಮೇಲೆ ಬಂದಿರುವ ಅಪವಾದಗಳು ಓಡಿ ಹೋಗುತ್ತವೆ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

    ಇನ್ನು ಮೊದಲು ಪೊಲೀಸರು ಇದು ಹಳೆಯ ವಿಡಿಯೋ ಎಂದು ಘಟನೆಯನ್ನು ತಳ್ಳಿಹಾಕಿದ್ದರು. ಆದರೆ ಘಟನೆಯ ಸೂಕ್ಷ್ಮತೆ ಅರಿತ ಪೊಲೀಸರು, ಅರಣ್ಯ ಇಲಾಖೆ, ಪುರಸಭೆ ಅಧಿಕಾರಿಗಳು, ಪಶು ವೈದ್ಯಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಇನ್ನು ಇಷ್ಟೊಂದು ದೊಡ್ಡ ಮಟ್ಟದಲ್ಲಿ ಗೋವುಗಳ ವಧೆಯಾಗಿರುವುದನ್ನು ಮನಗಂಡು ಭಟ್ಕಳ ಶಹರ ಠಾಣೆಯಲ್ಲಿ ಉಪ ಅವಲಯ ಅರಣ್ಯಾಧಿಕಾರಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮದ್ದೂರು ಗಣೇಶ ಮೆರವಣಿಗೆಗೆ ಕಲ್ಲು ತೂರಿದ ಕೇಸ್‌ – ಪಾತ್ರವೇ ಇಲ್ಲದ ಪೊಲೀಸ್‌ ಅಧಿಕಾರಿ ವರ್ಗಾವಣೆ

  • ಹಿಂದೂ ಮುಖಂಡ ಸತೀಶ್ ಪೂಜಾರಿ ಬಂಧನ, ಬಿಡುಗಡೆ

    ಹಿಂದೂ ಮುಖಂಡ ಸತೀಶ್ ಪೂಜಾರಿ ಬಂಧನ, ಬಿಡುಗಡೆ

    ದಾವಣಗೆರೆ: ವಿವಾದಿತ ಫ್ಲೆಕ್ಸ್ ತೆರವು ಮಾಡಿದ್ದನ್ನು ಪ್ರಶ್ನಿಸಿ ಪ್ರತಿಭಟಿಸಿದ್ದ ಹಿಂದೂ ಮುಖಂಡ ಸತೀಶ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಮಟ್ಟಿಕಲ್‌ನಲ್ಲಿ ಅಫ್ಜಲ್ ಖಾನ್‌ನನ್ನು ಛತ್ರಪತಿ ಶಿವಾಜಿ ಕೊಂದ ಫ್ಲೆಕ್ಸ್ ಹಾಕಲಾಗಿತ್ತು. ಎಚ್ಚೆತ್ತ ಪೊಲೀಸರು ತಕ್ಷಣ ಫ್ಲೆಕ್ಸ್ ತೆರವುಗೊಳಿಸಿದ್ದಾರೆ. ತೆರವು ಮಾಡಿದ್ದನ್ನು ವಿರೋಧಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅದರಲ್ಲಿ ಹಿಂದೂ ಜಾಗರಣ ವೇದಿಕೆ ರಾಜ್ಯ ದಕ್ಷಿಣ ವಿಭಾಗೀಯ ಸಹ ಸಂಚಾಲಕ ಸತೀಶ್ ಪೂಜಾರಿ ಮುಂಚೂಣಿಯಲ್ಲಿದ್ದ.

    ಪ್ರಚೋದನೆ ಮಾಡಿದ್ದಾರೆ ಎಂದು ಅರೋಪ ಹಿನ್ನೆಲೆ ಸತೀಶ್ ಪೂಜಾರಿಯನ್ನು ದಾವಣಗೆರೆ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಬಂಧನ ಬೆನ್ನಲ್ಲೇ ಠಾಣೆ ಮುಂದೆ ಹಲವಾರು ಹಿಂದೂ ಕಾರ್ಯಕರ್ತರು ಜಮಾಯಿಸಿದ್ದರು.

    ಸತೀಶ್ ಪೂಜಾರಿಯನ್ನು ಬಿಡುಗಡೆ ಮಾಡುವವರೆಗೂ ಸ್ಥಳದಿಂದ ಹೋಗೋದಿಲ್ಲ ಎಂದು ಹಿಂದೂ ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ. ಸ್ಥಳದಲ್ಲಿ ಎಎಸ್ಪಿ ಪರಮೇಶ್ವರಪ್ಪ, ಡಿವೈಎಸ್‌ಪಿ ಬಸವರಾಜ್ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು. ಕೊನೆಗೆ ಸ್ಟೇಷನ್ ಬೇಲ್ ಮೇಲೆ ಸತೀಶ್ ಪೂಜಾರಿಯನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.

  • ಶ್ರೀರಾಮಸೇನೆ ಕಾರ್ಯಕರ್ತರು ನೈತಿಕ ಪೊಲೀಸ್‌ಗಿರಿ ಮಾಡಲು ಹೋಗಿದ್ದು ತಪ್ಪು – ಪರಮೇಶ್ವರ್

    ಶ್ರೀರಾಮಸೇನೆ ಕಾರ್ಯಕರ್ತರು ನೈತಿಕ ಪೊಲೀಸ್‌ಗಿರಿ ಮಾಡಲು ಹೋಗಿದ್ದು ತಪ್ಪು – ಪರಮೇಶ್ವರ್

    – ಹೊಸಬಾಳೆಯವರ ಹೇಳಿಕೆ ಕಾನೂನು ಬಾಹಿರವಾಗಿದ್ರೆ ಎಫ್ಐಆರ್ ಎಚ್ಚರಿಕೆ

    ಬೆಂಗಳೂರು: ಹುಕ್ಕೇರಿಯ ಇಂಗಳಿಯಲ್ಲಿ ಶ್ರೀರಾಮಸೇನೆ (Sri Rama Sena) ಕಾರ್ಯಕರ್ತರನ್ನು ಥಳಿಸಿದವರ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳೋದಾಗಿ ಗೃಹ ಸಚಿವ ಪರಮೇಶ್ವರ್ (G Parameshwar) ತಿಳಿಸಿದರು.

    ಬೆಂಗಳೂರಿನಲ್ಲಿ (Bengaluru) ಮಾತಾಡಿದ ಪರಮೇಶ್ವರ್, ಯಾರೂ ಕಾನೂನು ಕೈಗೆ ತಗೋಬಾರದು. ಕಾನೂನು ಬಾಹಿರ ಚಟುವಟಿಕೆ ಕಂಡು ಬಂದರೆ ಪೊಲೀಸರಿಗೆ ತಿಳಿಸಲಿ. ಪೊಲೀಸರ ಕೆಲಸವೇ ಕಾನೂನು ಕಾಪಾಡೋದು. ಅದು ಬಿಟ್ಟು ಇವರು ಯಾಕೆ ಆ ಕೆಲಸ ಮಾಡೋಕ್ಕೆ ಹೋಗಿದ್ರು? ಅಂತ ಶ್ರೀರಾಮಸೇನೆ ಕಾರ್ಯಕರ್ತರ ನಡೆಯನ್ನು ಪ್ರಶ್ನಿಸಿದರು‌. ಇದನ್ನೂ ಓದಿ: ಗೋ ರಕ್ಷಣೆ ಮಾಡಲು ಮುಂದಾಗಿದ್ದಕ್ಕೆ ಮರಕ್ಕೆ ಕಟ್ಟಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ

    Sri Rama Sena activists tied to a tree and attacked for trying to protect cows hukkeri

    ಇನ್ನು ನೈತಿಕ ಪೊಲೀಸ್ ಗಿರಿ ಮಾಡಬಾರದು. ದ್ವೇಷ ಭಾಷಣ, ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಸರಿಯಲ್ಲ. ಅಂತಹ ಪ್ರಕರಣಗಳನ್ನು ಪೊಲೀಸರು ಇದ್ದಾರೆ, ನೋಡ್ತಾರೆ ಅಂತ ಪರಮೇಶ್ವರ್ ಸ್ಪಷ್ಟ ಪಡಿಸಿದರು.

    ಶಿವಮೊಗ್ಗದಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ಯಾರು ಕೃತ್ಯ ಎಸಗಿದ್ದಾರೋ ಅವರ ಮೇಲೆ ಸೂಮೋಟೋ ಕೇಸ್ ದಾಖಲಿಸಿ ಕ್ರಮ‌ ತಗೋತಾರೆ ಅಂದ್ರು. ಇದನ್ನೂ ಓದಿ: ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಣೆ – ಪಂಚಾಯತ್‌ ಸದಸ್ಯ ಅರೆಸ್ಟ್‌

    ದತ್ತಾತ್ರೇಯ ಹೊಸಬಾಳೆ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ಕೊಟ್ಟ ವಿಚಾರ ಬಗ್ಗೆ ಮಾತಾಡಿ, ಪೊಲೀಸರು ದೂರಿನ ಬಗ್ಗೆ ಪರಿಶೀಲಿಸಿ ಕ್ರಮ ತಗೋತಾರೆ. ಹೇಳಿಕೆ ಕಾನೂನು ವಿರೋಧಿ ಇದೆಯಾ? ಎಫ್ಐಆರ್ ಮಾಡಬೇಕಾ ಅಂತ ಪೊಲೀಸರು ಪರಿಶೀಲಿಸಿ ಕ್ರಮ ತಗೋತಾರೆ. ಕಾನೂನು ಬಾಹಿರ ಅನಿಸಿದರೆ ಎಫ್ಐಆರ್ ಮಾಡ್ತಾರೆ ಅಂದ್ರು.

  • ಗೋ ರಕ್ಷಣೆಗೆ ಹೋದವರ ಮೇಲೆ ಹಲ್ಲೆ ಆರೋಪ; ಹಿಂದೂ – ಮುಸ್ಲಿಂ ಯುವಕರ ನಡುವೆ ಗಲಾಟೆ – ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ!

    ಗೋ ರಕ್ಷಣೆಗೆ ಹೋದವರ ಮೇಲೆ ಹಲ್ಲೆ ಆರೋಪ; ಹಿಂದೂ – ಮುಸ್ಲಿಂ ಯುವಕರ ನಡುವೆ ಗಲಾಟೆ – ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ!

    – ಧಾರವಾಡ ಉಪನಗರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ

    ಧಾರವಾಡ: ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಗೋವುಗಳ ರಕ್ಷಣೆಗೆ ಮುಂದಾಗಿದ್ದ ಬಜರಂಗದಳದ ಕಾರ್ಯಕರ್ತ ಸೋಮಶೇಖರ್ ಎಂಬುವವರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಹೇಳಿಬಂದಿದೆ. ಈ ಬೆನ್ನಲ್ಲೇ ಹಿಂದೂ-ಮುಸ್ಲಿಮ್‌ ಯುವಕರ ನಡುವೆ ಗಲಾಟೆಯೂ ನಡೆದಿದ್ದು ಕೆವಲರಿಗೆ ಗಾಯಗಳಾಗಿರುವ ಘಟನೆ ಧಾರವಾಡ ನಗರದ ಎಪಿಎಂಸಿ ಬಳಿ ನಡೆದಿದೆ.

    ಹಲ್ಲೆಯನ್ನು ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸೋಮಶೇಖರ್ ಅವರ ಮೇಲೆ ಹಲ್ಲೆ ಮಾಡಿದ ಅನ್ಯಕೋಮಿನ ಜನರನ್ನು ಬಂಧಿಸುವಂತೆ ಆಗ್ರಹಿಸಿ ಬಜರಂಗದಳ ಕಾರ್ಯಕರ್ತರು ಉಪನಗರ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರಸಂಗವೂ ನಡೆಯಿತು.

    ಇನ್ನು ಪ್ರತಿಭಟನೆಗೆ ಆಗಮಿಸಿದ ಧಾರವಾಡ ಶಾಸಕ ಅರವಿಂದ ಬೆಲ್ಲದ್, ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದವರನ್ನು ನಾಳೆವರೆಗೆ ಬಂಧಿಸದೇ ಇದ್ದರೆ, ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸದ್ಯ ಪ್ರತಿಭಟನೆ ಹಿಂದಕ್ಕೆ ಪಡೆದಿದ್ದೇವೆ, ನಾಳೆ ಬೆಳಗಿನವರೆಗೂ ನಾವು ಕಾದು ನೋಡುತ್ತೇವೆ, ಆ ಬಳಿಕ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಬೆಲ್ಲದ್ ತಿಳಿಸಿದರು.

    ನಂತರ ಮಾತನಾಡಿದ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್, ಜಾನುವಾರುಗಳ ಸಾಗಾಟಕ್ಕೆ ಸಂಬಂಧಿಸಿದಂತೆ ಎರಡು ಕೋಮಿನವರ ಮಧ್ಯೆ ಗಲಾಟೆಯಾಗಿದೆ. ಇಬ್ಬರು ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆಯಾಗಿದೆ, ಈ ಸಂಬಂಧ ಅವರು ದೂರು ದಾಖಲಿಸಿದ್ದಾರೆ. ಆ ಪ್ರಕಾರ ಎಫ್‌ಐಆರ್ ದಾಖಲಿಸಿಕೊಳ್ಳುತ್ತೇವೆ. ದೂರಿನಲ್ಲಿ ಇಬ್ಬರ ಹೆಸರಿನ ಜೊತೆಗೆ ಇನ್ನಷ್ಟು ಜನ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಾದ ಏರಿಯಾದಲ್ಲಿ ಸಿಸಿಟಿವಿ ಕ್ಯಾಮೆರಾಗಳಿವೆ, ಅದನ್ನೆಲ್ಲ ಪರಿಶೀಲಿಸಿ ನಾವು ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

  • ಅನ್ಯಕೋಮಿನ ಯುವತಿಯೊಂದಿಗೆ ಯುವಕ ಲವ್ ಮ್ಯಾರೇಜ್ – ಹಿಂದೂ ಕಾರ್ಯಕರ್ತರು, ಪೊಲೀಸರ ನಡುವೆ ಘರ್ಷಣೆ!

    ಅನ್ಯಕೋಮಿನ ಯುವತಿಯೊಂದಿಗೆ ಯುವಕ ಲವ್ ಮ್ಯಾರೇಜ್ – ಹಿಂದೂ ಕಾರ್ಯಕರ್ತರು, ಪೊಲೀಸರ ನಡುವೆ ಘರ್ಷಣೆ!

    – ಹಲವರ ಮೇಲೆ ಪೊಲೀಸರಿಂದ ಲಘು ಲಾಠಿ ಚಾರ್ಜ್
    – ಬೂದಿ ಮುಚ್ಚಿದ ಕೆಂಡವಾದ ಬಾಗಲಕೋಟೆ

    ಬಾಗಲಕೋಟೆ: ಅನ್ಯಕೋಮಿನ ಯುವಕ-ಯುವತಿ ನಡುವಿನ ಪ್ರೇಮ ವಿವಾಹವೊಂದು ಹಿಂದೂಪರ ಸಂಘಟನೆ ಹಾಗೂ ಪೊಲೀಸರ ನಡುವೆ ಸಂಘರ್ಷಕ್ಕೆ ಕಾರಣವಾದ ಘಟನೆ ಬಾಗಲಕೋಟೆಯ ನವನಗರದ ನಗರಸಭೆ ಎದುರು ನಡೆದಿದೆ.

    ಬಾದಾಮಿ ಮೂಲದ ಯುವಕ ಮತ್ತು ಯುವತಿ ದೇವಸ್ಥಾನದಲ್ಲಿ ಪ್ರೇಮ ವಿವಾಹವಾಗಿದ್ದು, ರಕ್ಷಣೆ ಕೋರಿ ಎಸ್‌ಪಿ ಕಚೇರಿಗೆ ಧಾವಿಸಿದ್ದಾರೆ. ವಿಷಯ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಎಸ್ಪಿ ಕಚೇರಿಗೆ ದೌಡಾಯಿಸಿದ್ದರು. ಇದೇ ವೇಳೆ ಯುವತಿಯ ಮನೆಯವರೂ ಅಲ್ಲಿಗೆ ಬಂದಿದ್ದಾರೆ. ಈವೇಳೆ ಹಿಂದೂ ಕಾರ್ಯಕರ್ತರು-ಯುವತಿ ಮನೆಯವರ ನಡುವೆ ವಾಗ್ವಾದ ಏರ್ಪಟ್ಟಿತ್ತು. ಈ ವೇಳೆ ಮಧ್ಯೆ ಪ್ರವೇಶಿಸಿದ ನವನಗರ ಸಿಪಿಐ ರಾಮಣ್ಣ ಬಿರಾದಾರ್, ಎರಡೂ ಗುಂಪಿನವರನ್ನ ಚದುರಿಸಲು ಪ್ರಯತ್ನಿಸಿದಾಗ, ಹಿಂದೂ ಕಾರ್ಯಕರ್ತ ಕುಮಾರಸ್ವಾಮಿ ಹಾಗೂ ಸಿಪಿಐ ಬಿರಾದಾರ್ ನಡುವೆ ವಾಗ್ವಾದ ಏರ್ಪದೆ. ಅಲ್ಲದೇ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

    ಈ ವೇಳೆ ಪೊಲೀಸರು ಪರಿಸ್ಥತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. ಆದ್ರೆ ಈ ಮದುವೆಗೆ ಒಪ್ಪದ ಹಿಂದೂ ಕಾರ್ಯಕರ್ತರು ಸಿಪಿಐ ಬಿರಾದಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಆಗ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದರಿಂದ ಸ್ಥಳದಲ್ಲಿ ವಾತಾವರಣ ಉದ್ವಿಗ್ನಗೊಂಡಿದೆ. ನಂತರ ಪೊಲೀಸರು ಕೆಲವರನ್ನ ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಇದರಿಂದ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗಿ, ರೊಚ್ಚಿಗೆದ್ದ ಹಿಂದೂ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ.

    ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಎಸ್‌ಪಿ ಅಮರನಾಥ ರೆಡ್ಡಿ ಹೆಚ್ಚುವರಿ ಪೋಲಿಸ್ ಅಧಿಕಾರಿಗಳನ್ನ ಭದ್ರತೆಗೆ ನಿಯೋಜಿಸಿದ್ದಾರೆ.

  • ನೇಹಾ, ಫಯಾಜ್ ಫೋಟೋದೊಂದಿಗೆ ಜಸ್ಟಿಸ್ ಫಾರ್ ಲವ್ ಅಂದ ಯುವಕರು!

    ನೇಹಾ, ಫಯಾಜ್ ಫೋಟೋದೊಂದಿಗೆ ಜಸ್ಟಿಸ್ ಫಾರ್ ಲವ್ ಅಂದ ಯುವಕರು!

    ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಪ್ರಕರಣ ಸಂಬಂಧ ಒಂದೆಡೆ ರಾಜ್ಯದೆಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿದ್ದರೆ, ಇನ್ನೊಂದೆಡೆ ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಕೂಡ ಆರಂಭವಾಗಿದೆ. ಈ ನಡುವೆ ಕೊಲೆ ಸಮರ್ಥಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಧಾರವಾಡ ನಗರದ ನಿವಾಸಿಗಳಾದ ಸಾದಿಕ್ ತಡಕೋಡ ಹಾಗೂ ಆದಿಲ್ ಎಂಬಿಬ್ಬರು  ನೇಹಾ ಹಾಗೂ ಫಯಾಜ್ ಫೋಟೋ ಹಾಕಿ ಜಸ್ಟಿಸ್ ಫಾರ್ ಲವ್ ಎಂದು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದಾರೆ. ಇದನ್ನು ಗಮನಿಸಿದ ಹಿಂದೂ ಕಾರ್ಯಕರ್ತರು ಇಬ್ಬರು ಯುವಕರನ್ನು ವಿದ್ಯಾಗಿರಿ ಠಾಣೆಗೆ ಒಪ್ಪಿಸಿದ್ದಾರೆ. ಬಳಿಕ ಠಾಣೆ ಎದುರು ಜೈ ಶ್ರೀರಾಮ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.‌ ಇದನ್ನೂ ಓದಿ: ಪ್ರೀತಿ ಹೆಸ್ರಲ್ಲಿ ಅಮಾನುಷ ಕೃತ್ಯ ಎಸಗುವವರಿಗೆ ತಕ್ಕ ಶಿಕ್ಷೆಯಾಗ್ಲಿ- ನೇಹಾ ಹತ್ಯೆಗೆ ದರ್ಶನ್‌ ಕಿಡಿ

    ಪ್ರಕರಣದ ವಿವರ: ಏ.18 ರ ಗುರುವಾರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ ತನ್ನ ಕೈಯಲ್ಲಿ ಚಾಕು ಹಿಡಿದು, ಮಾಸ್ಕ್ ಧರಿಸಿಕೊಂಡು ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಎಂಟ್ರಿ ಕೊಟ್ಟಿದ್ದನು. ಇತ್ತ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ. ನೇಹಾಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ನೇಹಾ ಮೃತಪಟ್ಟಿದ್ದಾಳೆ.

    ಇತ್ತ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿ ಕಿಮ್ಸ್ ಆಸ್ಪತ್ರೆಯ ಹಿಂಬಂದಿ ಅವಿತಿದ್ದ ಫಯಾಜ್‍ನನ್ನು ಬಂಧಿಸಲಾಗಿದೆ. ಸುದ್ದಿ ಹಬ್ಬುತ್ತಿದ್ದಂತೆಯೇ ಹುಬ್ಬಳ್ಳಿಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಇಳಿದವು. ಆರೋಪಿಯನ್ನು ಎನ್ ಕೌಂಟರ್ ಮಾಡಿ ಇಲ್ಲವೇ ಗಲ್ಲಿಗೇರಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇಂದು ಕೂಡ ಪ್ರತಿಭಟನೆ ಮುಂದುವರಿದಿದೆ. ಜೊತೆಗೆ #JusticeForNeha ಎಂಬ ಅಭಿಯಾನ ಕೂಡ ಸಾಮಾಜಿಕ ಜಾಲತಾಣದಲ್ಲಿ ಆರಂಭಿಸಲಾಗಿದೆ. ಈ ಕ್ಯಾಂಪೇನ್‍ಗೆ ಸ್ಯಾಂಡಲ್‍ವುಡ್ ಕೂಡ ಸಾಥ್ ನೀಡಿದೆ.

  • ಧಾರವಾಡದ ತಡಕೋಡ ಧ್ವಜ ಗಲಾಟೆ – ಹಿಂದೂ ಕಾರ್ಯಕರ್ತರಿಗೆ ಜಾಮೀನು ಮಂಜೂರು

    ಧಾರವಾಡದ ತಡಕೋಡ ಧ್ವಜ ಗಲಾಟೆ – ಹಿಂದೂ ಕಾರ್ಯಕರ್ತರಿಗೆ ಜಾಮೀನು ಮಂಜೂರು

    ಧಾರವಾಡ: ತಡಕೋಡ (Tadakod) ಗ್ರಾಮದಲ್ಲಿ ಉಂಟಾಗಿದ್ದ ಧ್ವಜ (Flag) ಗಲಾಟೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಹಿಂದೂ ಕಾರ್ಯಕರ್ತರಿಗೆ (Hindu Activists)  ಜಾಮೀನು (Bail) ಮಂಜೂರಾಗಿದ್ದು, ಎಲ್ಲ ಹಿಂದೂ ಕಾರ್ಯಕರ್ತರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

    ತಡಕೋಡ ಗ್ರಾಮದ ಸದ್ದಾಂಹುಸೇನ್ ಎಂಬಾತ ಅಯೋಧ್ಯೆ ರಾಮಮಂದಿರದ ಫೋಟೋ ಮೇಲೆ ಹಸಿರು ಧ್ವಜ, ಓವೈಸಿ ಫೋಟೋ ಹಾಕಿ, ಇದು ಇಸ್ಲಾಮಿಕ್ ಪವರ್ ಎಂಬ ಸಂದೇಶ ಹಾಕಿ ಎಡಿಟ್ ಮಾಡಿದ್ದ ಫೋಟೋವನ್ನು ವಾಟ್ಸಪ್ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದ. ಇದನ್ನೂ ಓದಿ: ರಾಯಚೂರಿನ ಕೃಷ್ಣಾ ನದಿಯಲ್ಲಿ ಶಿವಲಿಂಗ, ವೆಂಕಟೇಶ್ವರ ಮೂರ್ತಿಗಳು ಪತ್ತೆ

    ಇದರಿಂದ ಆಕ್ರೋಶಗೊಂಡ ಹಿಂದೂ ಕಾರ್ಯಕರ್ತರು ತಡಕೋಡ ಗ್ರಾಮದ ಈದ್ಗಾ ಕಟ್ಟಡದ ಗುಂಬಜ್ ಮತ್ತು ಸದ್ದಾಂ ಮನೆ ಮೇಲೆ ದಾಳಿ ಮಾಡಿ ಮನೆಯಲಿದ್ದ ವಸ್ತುಗಳನ್ನು ಒಡೆದು ಆಕ್ರೋಶ ಹೊರಹಾಕಿದ್ದರು. ಆಗ ಗರಗ ಠಾಣೆ ಪೊಲೀಸರು ಕೆಲ ಹಿಂದೂ ಕಾರ್ಯಕರ್ತರನ್ನ ಬಂಧಿಸಿ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದರು. ಈಗ ಎಲ್ಲ ಹಿಂದೂ ಕಾರ್ಯಕರ್ತರಿಗೆ ಜಾಮೀನು ಮಂಜೂರಾಗಿದ್ದು, ಮಾಜಿ ಶಾಸಕ ಅಮೃತ್ ದೇಸಾಯಿ (Amrut Ayyappa Desai) ಅವರು ಸ್ವತಃ ಕೇಂದ್ರ ಕಾರಾಗೃಹಕ್ಕೆ ತೆರಳಿ ಜೈಲಿನಿಂದ ಬಿಡುಗಯಾದ ಹಿಂದೂ ಕಾರ್ಯಕರ್ತರನ್ನು ಬರಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಸರಣಿ ಬಾಂಬ್‌ ಸ್ಫೋಟಕ್ಕೆ ಸಂಚು – 6 ಮಂದಿ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಕೆ

  • ಹನುಮಧ್ವಜ ತೆರವು ಖಂಡಿಸಿ ಪ್ರತಿಭಟಿಸಿದ್ದ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

    ಹನುಮಧ್ವಜ ತೆರವು ಖಂಡಿಸಿ ಪ್ರತಿಭಟಿಸಿದ್ದ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

    -ಕೆರಗೋಡು ಠಾಣೆಯಲ್ಲಿ 3, ಮಂಡ್ಯ ಪಶ್ಚಿಮ ಠಾಣೆಯಲ್ಲಿ 50 ಮಂದಿ ವಿರುದ್ಧ ಪ್ರಕರಣ

    ಮಂಡ್ಯ: ಧ್ವಜಸ್ತಂಭದಿಂದ ಹನುಮಧ್ವಜ (Hanuma Flag) ತೆರವುಗೊಳಿಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದ ಹಿಂದೂ ಕಾರ್ಯಕರ್ತರ (Hindu Workers) ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

    ಹನುಮಧ್ವಜ ತೆರವು ವೇಳೆ ಪ್ರತಿಭಟನೆ ನಡೆಸಿದ್ದ ಮೂವರು ಹಿಂದೂ ಕಾರ್ಯಕರ್ತರ ವಿರುದ್ಧ ಮಂಡ್ಯ (Mandya) ತಾಲೂಕಿನ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿದೇಗಲು ಗ್ರಾಮದ ಪ್ರತಾಪ್, ಹೊನಗವಳ್ಳಿ ಮಠ ಗ್ರಾಮದ ಅವಿನಾಶ್, ಕೆರಗೋಡು ಗ್ರಾಮದ ಪ್ರಕಾಶ್ ಸೇರಿ ಇತರರ ವಿರುದ್ಧ ಎಫ್‌ಐಆರ್ ಆಗಿದೆ. ಇದನ್ನೂ ಓದಿ: ಕೆರಗೋಡಿನಲ್ಲಿ ತಾರಕಕ್ಕೇರಿದ ಹನುಮ ಧ್ವಜ ಸಂಘರ್ಷ- ಫೆ.9ಕ್ಕೆ ಮಂಡ್ಯ ಬಂದ್‍ಗೆ ಕರೆ

    ಜನವರಿ 28 ರಂದು ಪ್ರತಿಭಟನೆ ನಡೆಸಲಾಗಿತ್ತು. ಹನುಮಧ್ವಜ ತೆರವು ವಿರೋಧಿಸಿ ನೂರಾರು ಮಂದಿಯಿಂದ ಪ್ರತಿಭಟಿಸಿದ್ದರು. ಈ ವೇಳೆ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಎಳೆದಾಡಿ ಕರ್ತವ್ಯಕ್ಕೆ ಅಡ್ಡಿಲಾಗಿತ್ತು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ತಹಸೀಲ್ದಾರ್ ಶಿವಕುಮಾರ್ ಬಿರಾದಾರ್ ದೂರಿನನ್ವಯ, ಐಪಿಸಿ ಸೆಕ್ಷನ್ 143, 304, 353, 149 ಅಡಿ ಪ್ರಕರಣ ದಾಖಲಿಸಲಾಗಿದೆ.

    ಇದಲ್ಲದೇ, ಪ್ರತಿಭಟನಾಕಾರರ ಮೇಲೆ ಮತ್ತೆರಡು ಎಫ್‌ಐಆರ್ ದಾಖಲಿಸಲಾಗಿದೆ. ನಿನ್ನೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದವರ ಮೇಲೂ ಕೇಸ್ ಹಾಕಲಾಗಿದೆ. ಮಂಡ್ಯದ ಪಶ್ಚಿಮ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿವೆ. ಡಿವೈಎಸ್‌ಪಿ ಶಿವಮೂರ್ತಿ ದೂರಿನನ್ವಯ 8 ಹಾಗೂ ಇತರೆ 50 ಮಂದಿ ವಿರುದ್ಧ ಎಫ್‌ಐಆರ್ ಆಗಿದೆ. ಇದನ್ನೂ ಓದಿ: ಹನುಮಂತನ ಕೆಣಕಿದ್ದಕ್ಕೆ ಲಂಕ ದಹನವಾಯ್ತು, ಅದೇ ರೀತಿ ನಿಮ್ಮ ಅವನತಿಯಾಗುತ್ತೆ: ಹೆಚ್‍ಡಿಕೆ ವಾಗ್ದಾಳಿ

    ಪ್ರಕಾಶ್, ಆರಾಧ್ಯ, ಬಸವರಾಜು, ಕಾಂತ, ಅವಿನಾಶ್, ಅಭಿ ಪಾಟೀಲ್, ಶಿವಕುಮಾರ್, ಸೋಮಶೇಖರ್ ಸೇರಿದಂತೆ ಇತರೆ 50 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪಾದಯಾತ್ರೆ ವೇಳೆ ಮಂಡ್ಯದ ಮಹವೀರ ಸರ್ಕಲ್‌ನಲ್ಲಿ ಬ್ಯಾನರ್ ಹಾಗೂ ಸಾರ್ವಜನಿಕರ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಅಕ್ರಮವಾಗಿ ಗುಂಪು ಕಟ್ಟಿಕೊಂಡು ಪೊಲೀಸರ ಕೆಲಸಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.

    ಮತ್ತೊಂದು ಪ್ರಕರಣದಲ್ಲಿ ಜಿಲ್ಲೆ ಕುರುಬರ ಸಂಘದ ಕಾರ್ಯದರ್ಶಿ ಶಶಿಧರ್ ಎಂಬವರ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿದೆ. ಪಾದಯಾತ್ರೆ ವೇಳೆ ಕುರುಬರ ಸಂಘದ ಆವರಣದಲ್ಲಿರುವ ವಿದ್ಯಾರ್ಥಿ ನಿಲಯದ ಕಿಟಕಿ ಗಾಜುಗಳನ್ನ ಕಲ್ಲು, ದೊಣ್ಣೆಗಳಿಂದ ಹೊಡೆದು ಹಾಕಿದ್ದಾರೆ. ಅಕ್ರಮವಾಗಿ ಸಂಘದ ಆವರಣಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆಂದು ದೂರು ನೀಡಲಾಗಿತ್ತು. ಇದನ್ನೂ ಓದಿ: ಹನುಮಧ್ವಜ ಸಂಘರ್ಷ; ರಾಜ್ಯಾದ್ಯಂತ ಹೋರಾಟದ ಕಿಚ್ಚು – ಮಂಡ್ಯದಲ್ಲಿಂದು ಹೆಚ್‌ಡಿಕೆ, ರೆಡ್ಡಿ ಪಾದಯಾತ್ರೆ

  • ಬೊಲೆರೊದಲ್ಲಿ 15 ಗೋವುಗಳ ಸಾಗಾಟ – ಹಿಂದೂ ಕಾರ್ಯಕರ್ತರಿಂದ ಚಾಲಕನಿಗೆ ತರಾಟೆ

    ಬೊಲೆರೊದಲ್ಲಿ 15 ಗೋವುಗಳ ಸಾಗಾಟ – ಹಿಂದೂ ಕಾರ್ಯಕರ್ತರಿಂದ ಚಾಲಕನಿಗೆ ತರಾಟೆ

    ರಾಯಚೂರು: ಒಂದೇ ಬೊಲೆರೊ (Bolero) ವಾಹನದಲ್ಲಿ 15 ಗೋವುಗಳನ್ನು ಸಾಗಾಟ (Cattle Transportation) ಮಾಡುತ್ತಿದ್ದು, ಹಿಂದೂ ಕಾರ್ಯಕರ್ತರು (Hindu Activists) ವಾಹನ ತಡೆದು ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ರಾಯಚೂರಿನ (Raichur) ಲಿಂಗಸುಗೂರಿನ (Lingasugur) ಗುರಗುಂಟಾದಲ್ಲಿ ನಡೆದಿದೆ.

    ಒಂದರ ಮೇಲೆ ಒಂದು ಹಸುಗಳನ್ನು (Cow) ಹಾಕಿ ಚಿತ್ರಹಿಂಸೆ ನೀಡಿ ಸಾಗಾಣಿಕೆ ಮಾಡಿರುವುದಾಗಿ ಆರೋಪಿಸಿ ಹಿಂದೂ ಕಾರ್ಯಕರ್ತರು ವಾಹನ ತಡೆದು ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸುರಪೂರು, ಯಾದಗಿರಿ ಹಾಗೂ ಕಲಬುರಗಿಯಿಂದ ನಿರಂತರ ಗೋವುಗಳ ಸಾಗಾಟ ನಡೆಯುತ್ತಿದ್ದು, ಗೋವುಗಳಿಗೆ ಚಿತ್ರಹಿಂಸೆ ನೀಡಿ ಸಾಗಾಣಿಕೆ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎದೆ, ತಲೆ ಭಾಗಕ್ಕೆ ತುಳಿದ ಆನೆ- ಪಶ್ಚಿಮ ಬಂಗಾಳದ ಕಾರ್ಮಿಕ ಸಾವು

    ರಾತ್ರೋರಾತ್ರಿ ಕಾನೂನು ವಿರುದ್ಧವಾಗಿ ಸಾಗಾಣಿಕೆ ಮಾಡಿರುವುದಾಗಿ ಆರೋಪಿಸಿದ್ದು, ಹಟ್ಟಿ ಠಾಣೆ ಪೊಲೀಸರು ವಾಹನ ಜಪ್ತಿ ಮಾಡಿ ಗೋವುಗಳನ್ನು ರಕ್ಷಿಸಿದ್ದಾರೆ. ಇನ್ನು ಬೊಲೆರೊ ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದು, ಪ್ರಕರಣ ಇನ್ನೂ ದಾಖಲಾಗಿಲ್ಲ. ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಆಸ್ಪತ್ರೆಯಿಂದ ಮಗು ಕದ್ದು ಸಾಗಿಸುತ್ತಿದ್ದ ಮಹಿಳೆ ಅರೆಸ್ಟ್ – ಪೊಲೀಸರ ಕಾರ್ಯಕ್ಕೆ ಸಿಎಂ ಮೆಚ್ಚುಗೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]