Tag: ಹಿಂದೂ ವಿದ್ಯಾರ್ಥಿ

  • ಹಿಂದೂ ವಿದ್ಯಾರ್ಥಿಯ ಮಣಿಕಟ್ಟಿನಲ್ಲಿದ್ದ ಧಾರ್ಮಿಕ ದಾರ ಕಟ್‌ ಮಾಡಿದ ಶಿಕ್ಷಕ

    ಹಿಂದೂ ವಿದ್ಯಾರ್ಥಿಯ ಮಣಿಕಟ್ಟಿನಲ್ಲಿದ್ದ ಧಾರ್ಮಿಕ ದಾರ ಕಟ್‌ ಮಾಡಿದ ಶಿಕ್ಷಕ

    ಕೇಪ್‌ಟೌನ್: ದಕ್ಷಿಣ ಆಫ್ರಿಕಾದ ಶಿಕ್ಷಕನೊಬ್ಬ ಹಿಂದೂ ವಿದ್ಯಾರ್ಥಿಯ ಮಣಿಕಟ್ಟಿನಿಂದ ಧಾರ್ಮಿಕ ದಾರವನ್ನು ಕತ್ತರಿಸಿರುವ ಘಟನೆ ನಡೆದಿದೆ.

    ಈ ಘಟನೆ ಕಳೆದ ವಾರ ಕ್ವಾಜುಲು-ನಟಾಲ್ ಪ್ರಾಂತ್ಯದ ಡ್ರೇಕೆನ್ಸ್‌ಬರ್ಗ್ ಮಾಧ್ಯಮಿಕ ಶಾಲೆಯಲ್ಲಿ ನಡೆದಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಶಾಲೆಯು ಸಾಂಸ್ಕೃತಿಕ ಅಥವಾ ಧಾರ್ಮಿಕ ಚಿಹ್ನೆಗಳನ್ನು ಧರಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿ, ಶಿಕ್ಷಕಿ ಹಿಂದೂ ವಿದ್ಯಾರ್ಥಿಯ ಮಣಿಕಟ್ಟಿನಿಂದ ಪವಿತ್ರ ದಾರವನ್ನು ಕತ್ತರಿಸಿದ್ದಾರೆ.

    ದಕ್ಷಿಣ ಆಫ್ರಿಕಾದ ಹಿಂದೂ ಮಹಾಸಭಾ (SAHMS) ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಅಧಿಕಾರಿಗಳಿಗೆ ಒತ್ತಾಯಿಸಿದೆ. ಹಿಂದೂ ವಿದ್ಯಾರ್ಥಿಯ ಧಾರ್ಮಿಕ ದಾರವನ್ನು ಕತ್ತರಿಸಿದ ಶಿಕ್ಷಕನ ಅಸಂವೇದನಾಶೀಲ ಮತ್ತು ಬೇಜವಾಬ್ದಾರಿ ಕ್ರಮವನ್ನು SAHMS ಬಲವಾಗಿ ಖಂಡಿಸುತ್ತದೆ ಎಂದು ಸಂಘಟನೆ ತಿಳಿಸಿದೆ.

    ಶಾಲೆಯಲ್ಲಿ ನಡೆದ ಧಾರ್ಮಿಕ ಅಸಹಿಷ್ಣುತೆ ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಸಂಘಟನೆ ಹೇಳಿದೆ.

    ದಕ್ಷಿಣ ಆಫ್ರಿಕಾದ ಅತ್ಯುನ್ನತ ನ್ಯಾಯಾಂಗ ಪ್ರಾಧಿಕಾರವಾದ ಸಾಂವಿಧಾನಿಕ ನ್ಯಾಯಾಲಯವು ಶಾಲೆಯಿಂದ ಹಿಂದೂ ವಿದ್ಯಾರ್ಥಿನಿಯೊಬ್ಬಳು ಮೂಗುತಿಯನ್ನು ಧರಿಸುವುದನ್ನು ನಿಷೇಧಿಸಿತ್ತು. ಈ ಪ್ರಕರಣವನ್ನು ತ್ರಿಕಾಮ್ಜಿ ನೆನಪಿಸಿಕೊಂಡಿದ್ದಾರೆ.

  • ಜೈಶ್ರೀರಾಮ್‌ ಹಾಡು ಹಾಕಿದ್ದಕ್ಕೆ ಮಾರಾಮಾರಿ – ಹಿಂದೂ ವಿದ್ಯಾರ್ಥಿಗಳ ಮೇಲಿನ FIR ಕೈಬಿಡುವಂತೆ ಆಗ್ರಹ!

    ಜೈಶ್ರೀರಾಮ್‌ ಹಾಡು ಹಾಕಿದ್ದಕ್ಕೆ ಮಾರಾಮಾರಿ – ಹಿಂದೂ ವಿದ್ಯಾರ್ಥಿಗಳ ಮೇಲಿನ FIR ಕೈಬಿಡುವಂತೆ ಆಗ್ರಹ!

    – ಹಿಂದೂಪರ ಸಂಘಟನೆ, ಬಿಜೆಪಿ ಕಾರ್ಯಕರ್ತರಿಂದ ಶಕ್ತಿ ಪ್ರದರ್ಶನ

    ಬೀದರ್: ಇಲ್ಲಿನ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಜೈ ಶ್ರೀರಾಮ್ (Jai SriRam) ಹಾಡು ಹಾಕಿದ್ದಕ್ಕೆ 2 ವಿದ್ಯಾರ್ಥಿ‌ ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ಹಿಂದೂ ವಿದ್ಯಾರ್ಥಿಗಳ (Hindu Students) ಮೇಲೆ ದಾಖಲಾಗಿರುವ ಎಫ್‌ಐಆರ್‌ ಅನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಹಿಂದೂ ಪರ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳಿಂದ ಬೀದರ್‌ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

    ನಗರದ ಪ್ರವಾಸಿ ಮಂದಿರದ ಬಳಿ ಸೇರಿದ್ದ 300ಕ್ಕೂ ಅಧಿಕ ಹಿಂದೂ ಸಂಘಟನೆ ಕಾರ್ಯಕರ್ತರು ಅಂಬೇಡ್ಕರ್ ವೃತದಿಂದ ಡಿಸಿ ಕಚೇರಿ ವರೆಗೆ ಬೃಹತ್ ಪ್ರತಿಭಟನೆ (Protest) ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ರ‍್ಯಾಲಿಯಲ್ಲಿ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ‘ವಿಕೃತ ಕಾಮಿ, ಕೊನೆಯ ಉಸಿರಿರೋವರೆಗೂ ಶಿಕ್ಷೆ ನೀಡೋ ಕೇಸ್’- ಕೋರ್ಟ್‍ನಲ್ಲಿ ವಾದ, ಪ್ರತಿವಾದ ಹೇಗಿತ್ತು?

    ಈ ವೇಳೆ ಪ್ರತಿಭಟನಾಕಾರರನ್ನು ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ದ್ವಾರದ ಬಳಿಯೇ ತಡೆದ ಪೊಲೀಸರು ಇಲ್ಲೇ ಮನವಿ ಸಲ್ಲಿಸುವಂತೆ ತಾಕೀತು ಮಾಡಿದರು. ಬಳಿಕ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ಪ್ರತಿಭಟನಾಕಾರರು, ಡಿಸಿ ಕಚೇರಿ ಮುಖ್ಯದ್ವಾರದ ಬಳಿಯೇ ಪ್ರತಿಭಟನೆ ನಡೆಸಲು ಮುಂದಾದರು. ಹಿಂದೂ ವಿದ್ಯಾರ್ಥಿಗಳ ಮೇಲಿನ ಎಫ್‌ಐಆರ್‌ ರದ್ದುಗೊಳಿಸದೇ ಇದ್ದರೆ ಜಿಲ್ಲೆಯಲ್ಲಿ ನಾವು ಶ್ರೀರಾಮನ ಅಭಿಯಾನ ಪ್ರಾರಂಭ ಮಾಡುತ್ತೇವೆ ಎಂದು ಪಟ್ಟು ಹಿಡಿದರು. ಬಳಿಕ ಡಿಸಿ ಗೋವಿಂದ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು. ಇದನ್ನೂ ಓದಿ: ಕಾಲೇಜಿನಲ್ಲಿ ಜೈ ಶ್ರೀರಾಮ್‌ ಹಾಡು ಹಾಕಿದ್ದಕ್ಕೆ ಮಾರಾಮಾರಿ- 17ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ FIR

    ಪ್ರತಿಭಟನಾ ಮೆರವಣಿಗೆಯಲ್ಲಿ ಶಾಸಕ ಶರಣು ಸಲಗರ್, ಎಂಎಲ್‌ಸಿ ರಘುನಾಥ್ ಮಲ್ಕಾಪೂರೆ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್ ಸೇರಿ ಹಿಂದೂ ಸಂಘಟನೆಯ ಪ್ರಮುಖರು ಭಾಗಿಯಾಗಿದ್ದರು. ಇದನ್ನೂ ಓದಿ: ನಿರೀಕ್ಷೆಗೂ ಮೀರಿ ಜಿಡಿಪಿ ಅಭಿವೃದ್ಧಿ – 4ನೇ ತ್ರೈಮಾಸಿಕದಲ್ಲಿ 7.8% , 2023-24 ಹಣಕಾಸು ವರ್ಷದಲ್ಲಿ 8.2% ಪ್ರಗತಿ

    ಏನಿದು ಪ್ರಕರಣ?
    ಬೀದರ್‌ ನಗರದ ಕಾಲೇಜು ಒಂದರಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ವೇಳೆ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಮಾರಾಮಾರಿ ನಡೆದು, ಹಿಂದೂ-ಮುಸ್ಲಿಂ ಸೇರಿದಂತೆ 17 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.