Tag: ಹಿಂದೂ ಸಂಘಟನೆಗಳು

  • ಕೆರಗೋಡು ಬಂದ್‌ಗೆ ಉತ್ತಮ ಪ್ರತಿಕ್ರಿಯೆ – ಶಾಸಕ ಗಣಿಗ ರವಿ ಮನೆಗೆ ಭದ್ರತೆ ಹೆಚ್ಚಳ

    ಕೆರಗೋಡು ಬಂದ್‌ಗೆ ಉತ್ತಮ ಪ್ರತಿಕ್ರಿಯೆ – ಶಾಸಕ ಗಣಿಗ ರವಿ ಮನೆಗೆ ಭದ್ರತೆ ಹೆಚ್ಚಳ

    ಮಂಡ್ಯ: ಹನುಮ ಧ್ವಜವನ್ನು (Hanuman Dhwaja) ತೆರವುಗೊಳಿಸಿದ್ದನ್ನು ಖಂಡಿಸಿ ಹಿಂದೂ ಸಂಘಟನೆಗಳು (Hindu Organisation) ಕರೆ ನೀಡಿದ ಕೆರಗೋಡು ಬಂದ್‌ಗೆ (Keregodu Bandh) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಬಂದ್‌ಗೆ ವರ್ತಕರು, ಹೊಟೇಲ್ ಮಾಲೀಕರು ಬೆಂಬಲ ವ್ಯಕ್ತಪಡಿಸಿದ ಪರಿಣಾಮ ಅಂಗಡಿ, ಹೋಟೆಲ್‌ಗಳು ಮುಚ್ಚಿವೆ. ಕೆರಗೋಡಿನಲ್ಲಿ ಬಿಗಿ ಪೊಲೀಸ್ (Police) ಬಂದೋಬಸ್ತ್ ಮಾಡಲಾಗಿದೆ. ಗ್ರಾಮಕ್ಕೆ ಎಎಸ್ಪಿ ತಿಮ್ಮಯ್ಯ ಭೇಟಿ ನೀಡಿ ಭದ್ರತೆ ಪರಿಶೀಲಿಸಿ ಸಿಬ್ಬಂದಿಗೆ ಕೆಲ ಸೂಚನೆ ನೀಡಿದ್ದಾರೆ.   ಇದನ್ನೂ ಓದಿ: ಉತ್ತರಾಖಂಡ ಅಕ್ರಮ ಮಸೀದಿ ತೆರವು ವೇಳೆ ಹಿಂಸಾಚಾರ – 4 ಸಾವು, 250 ಮಂದಿಗೆ ಗಾಯ

    ಧ್ವಜಸ್ತಂಭದ ಬಳಿ ಪೊಲೀಸ್ ಭದ್ರತೆ ಹೆಚ್ಚಾಗಿದೆ. 9 ಗಂಟೆಗೆ ಕೆರಗೋಡಿನಿಂದ ಮಂಡ್ಯದ (Mandya) ಜಿಲ್ಲಾಧಿಕಾರಿ ಕಚೇರಿಯವರೆಗೆ ರ‍್ಯಾಲಿ ನಡೆಯಲಿದೆ. ಆಂಜನೇಯ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಪ್ರತಿಭಟನಾ ರ‍್ಯಾಲಿ ನಡೆಯಲಿದೆ. ಮಂಡ್ಯದಲ್ಲಿ ಬಂದ್‌ ಬಿಸಿ ತಟ್ಟಿಲ್ಲ. ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಕೆಲ ವರ್ತಕರು ಅಂಗಡಿ ತೆರೆದಿದ್ದರೆ ಕೆಲವರು  ಮುಚ್ಚಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

    ಹನುಮಧ್ವಜ ತೆರವು ಮಾಡುವಲ್ಲಿ ಶಾಸಕರ ಪಾತ್ರ ಇದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಂಡ್ಯ ಕಾಂಗ್ರೆಸ್‌ ಶಾಸಕ ಗಣಿಗ ರವಿಕುಮಾರ್ (Ganiga Ravikumar) ಮನೆಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.   ಇದನ್ನೂ ಓದಿ: ಯುಪಿಎ Vs ಎನ್‌ಡಿಎ – ಯಾರ ಅವಧಿಯಲ್ಲಿ ಎಷ್ಟು ಸಾಧನೆ? ಶ್ವೇತ ಪತ್ರದಲ್ಲಿ ಏನಿದೆ? ಇಲ್ಲಿದೆ ಸಂಖ್ಯಾ ಮಾಹಿತಿಗಳು

    ಶಾಸಕ ರವಿಕುಮಾರ್ ಫ್ಲೆಕ್ಸ್ ಹರಿದು ಕೆರಗೋಡು ಗ್ರಾಮಸ್ಥರು ಕಿಡಿಕಾರಿದ್ದರು. ಹೀಗಾಗಿ ಮಂಡ್ಯದ ಬಂದೀಗೌಡ ಬಡಾವಣೆಯಲ್ಲಿರುವ ರವಿಕುಮಾರ್‌ ನಿವಾಸಕ್ಕೆ 10 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

  • ಹುಬ್ಬಳ್ಳಿ ಈದ್ಗಾದಲ್ಲಿ ಬೆಳ್ಳಂಬೆಳಗ್ಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ

    ಹುಬ್ಬಳ್ಳಿ ಈದ್ಗಾದಲ್ಲಿ ಬೆಳ್ಳಂಬೆಳಗ್ಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ

    ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್‌ ಮಧ್ಯರಾತ್ರಿ ಗ್ರೀನ್‌ ಸಿಗ್ನಲ್‌ ಕೊಟ್ಟ ಬೆನ್ನಲ್ಲೇ, ಹಿಂದೂಪರ ಸಂಘಟನೆಗಳು ಬುಧವಾರ ಬೆಳ್ಳಂಬೆಳಗ್ಗೆ ಈದ್ಗಾದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.

    ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಅಂಜುಮಾನ್‌ ಇಸ್ಲಾಂ ಸಂಸ್ಥೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಸುಪ್ರೀಂ ವಿಚಾರಣೆಗೂ ಮುನ್ನವೇ ಹಿಂದೂ ಸಂಘಟನೆಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಸಮಯ ಬದಲಾವಣೆ ಮಾಡಿಕೊಂಡಿವೆ. ಇಂದು ಮಧ್ಯಾಹ್ನ 12 ಗಂಟೆ ಬದಲಿಗೆ ಬೆಳಗ್ಗೆ 7:30ಕ್ಕೆ 4 ಅಡಿ ಇರುವ ಸಿಂಹಾಸನಾರೂಢ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿವೆ. ಉತ್ಸವ ಮೂರ್ತಿ ಬಿಟ್ಟು, ಸಣ್ಣ ಗಣಪತಿ ಮೂರ್ತಿ ಪ್ರತಿಷ್ಟಾಪಿಸಲಾಗಿದೆ. ಇದನ್ನೂ ಓದಿ: ಮಧ್ಯರಾತ್ರಿ ತುರ್ತು ವಿಚಾರಣೆ – ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ

    ಧಾರವಾಡ ಮೂಲದ ವ್ಯಕ್ತಿ ದೇಣಿಗೆ ನೀಡಿರುವ ಮೂರ್ತಿಯನ್ನು ಉತ್ಸವ ಸಮಿತಿ ಅಧ್ಯಕ್ಷ ಸಂಜೀವ್ ಬಡೆಸ್ಕರ್ ನೇತೃತ್ವದಲ್ಲಿ ಪ್ರತಿಷ್ಠಾಪಿಸಲಾಯಿತು. ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಬೆನ್ನಲ್ಲೇ ಪೊಲೀಸ್‌ ಕಮಿಷನರ್‌ ಲಾಭೂರಾಮ್‌ ಸ್ಥಳಕ್ಕೆ ಧಾವಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳಲು ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಿದ್ದಾರೆ.

    ಪೂಜೆಯಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಸಂಜೀವ್ ಬಡೆಸ್ಕರ್, ಪಾಲಿಕೆ ಸದಸನ ಸಮಿತಿ ಅಧ್ಯಕ್ಷ ಸಂತೋಷ ಚೌಹ್ವಾಣ್ ಸೇರಿ ಹಿಂದೂ ಸಂಘಟನೆಗಳ ಹಲವರು ಮುಖಂಡರು ಭಾಗಿಯಾಗಿದ್ದಾರೆ. ಇದನ್ನೂ ಓದಿ: ಶೀತಲ ಸಮರವನ್ನು ಕೊನೆಗೊಳಿಸಿದ್ದ ಸೋವಿಯತ್ ನಾಯಕ ಮಿಖಾಯಿಲ್ ಗೋರ್ಬಚೇವ್ ನಿಧನ

    Live Tv
    [brid partner=56869869 player=32851 video=960834 autoplay=true]

  • ಪ್ರಚೋದನಕಾರಿ ಹೇಳಿಕೆ ನೀಡ್ತಿರುವವರ ಮೇಲೆ ರೆಕಾರ್ಡ್ ಬಿಲ್ಡ್ ಮಾಡ್ತಿದ್ದೇವೆ: ಅಲೋಕ್ ಕುಮಾರ್ ಎಚ್ಚರಿಕೆ

    ಪ್ರಚೋದನಕಾರಿ ಹೇಳಿಕೆ ನೀಡ್ತಿರುವವರ ಮೇಲೆ ರೆಕಾರ್ಡ್ ಬಿಲ್ಡ್ ಮಾಡ್ತಿದ್ದೇವೆ: ಅಲೋಕ್ ಕುಮಾರ್ ಎಚ್ಚರಿಕೆ

    ಬೆಳಗಾವಿ: ರಾಜ್ಯದಲ್ಲಿ ಕಾನೂನು ಉಲ್ಲಂಘನೆ ಮಾಡಿದವರ ಮೇಲೆ ನಾವು ಕ್ರಮ ಜರಗಿಸುತ್ತಿದ್ದು, ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವವರ ಮೇಲೆ ರೆಕಾರ್ಡ್ ಬಿಲ್ಡ್ ಮಾಡ್ತಿದ್ದೇವೆ. ಯಾರು ಹೇಳಿಕೆ ಕೊಡುತ್ತಿದ್ದಾರೆ ಅದನ್ನು ರೆಕಾರ್ಡ್ ಮಾಡುತ್ತಾ ಇದ್ದೇವೆ ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಚೋದನಕಾರಿ ಹೇಳಿಕೆ ನೀಡ್ತಿರುವವರ ಮೇಲೆ ರೆಕಾರ್ಡ್ ಬಿಲ್ಡ್ ಮಾಡ್ತಿದ್ದೇವೆ. ಯಾರು, ಯಾರು ಹೇಳಿಕೆ ಕೊಡುತ್ತಿದ್ದಾರೋ ಅದನ್ನು ರೆಕಾರ್ಡ್ ಮಾಡುತ್ತಾ ಇದ್ದೇವೆ ಎಂದರು. ಇದನ್ನೂ ಓದಿ: ಮದರಸಾ ತೆರವು ಮಾಡದೆ ಇದ್ದರೆ ನಾವೇ ಅವರ ಕೊರಳಪಟ್ಟಿ ಹಿಡಿದು ಹೊರ ಹಾಕ್ತಿವಿ: ಹಿಂದೂ ಸಂಘಟನೆಗಳು

    ಯಾವ ಒಂದು ವರ್ಗಕ್ಕೆ ಮಾತ್ರ ಅಲ್ಲಾ ಎಲ್ಲಾ ಸಮುದಾಯದಯಕ್ಕೂ ಒಂದೇ ಕಾನೂನು ಇರುತ್ತದೆ. ಯಾವ ರೀತಿ ಮಾತನಾಡುತ್ತಾರೆ ಅದನ್ನು ರೆಕಾರ್ಡ್ ಬಿಲ್ಡ್ ಮಾಡಿಕೊಂಡು ಕ್ರಮಜರಗಿಸುತ್ತೇವೆ. ಕೆಲವು ಕಡೆ ಪ್ರಮೋದ್ ಮುತಾಲಿಕ್ ಹೋಗಬಾರದು ಅಲ್ಲಿ 144 ಸೆಕ್ಷನ್ ಹಾಕಿಸಿದ್ದೇವೆ. ಇಂದು ಬೀದರ್ ಹೋಗುತ್ತಿದ್ದರು ಅಲ್ಲಿ ಎಂಟ್ರಿಯಾಗಬಾರದು. ಅನುಭವ ಮಂಟಪ ವಿಚಾರಕ್ಕೆ ಕಾಲಿಡಬಾರದು. ಎಲ್ಲೇಲ್ಲಿ ಏನೂ ಕ್ರಮಜರುಗಿಸಬೇಕು. ಅದನ್ನು ನಾವು ಮಾಡುತ್ತಿದ್ದೇವೆ. ಪೊಲೀಸ್ ಇಲಾಖೆ ಏನೂ ಕೆಲಸ ಮಾಡಬೇಕು. ಅದನ್ನು ಮಾಡುತ್ತಿದೆ. ಸಂಘಟನೆಗಳ ಮೇಲೆ ಕಣ್ಣಿಟ್ಟಿದ್ದೇವೆ. ಆ ಸಂಘಟನೆಗಳ ವಿರುದ್ಧ ರೆಕಾರ್ಡ್ ಬಿಲ್ಡ್ ಮಾಡುತ್ತಿದ್ದೇವೆ. ಸಮಯ ಬಂದಾಗ ಏನು ಮಾಡೋದಿದೆ ಅದನ್ನು ಮಾಡುತ್ತೇವೆ ಎಂದರು. ಇದನ್ನೂ ಓದಿ: ಖಾಕಿ ಚಡ್ಡಿ ಏನು ಈ ದೇಶದ ರಾಷ್ಟ್ರಧ್ವಜವೇ: ಎನ್‍ಎಸ್‍ಯುಐ ಉಪಾಧ್ಯಕ್ಷೆ

    HIJAB (1)

    ಶ್ರೀರಂಗಪಟ್ಟಣ ಚಲೋ ವಿಚಾರಕ್ಕೆ, ಕಾನೂನು ಸುವ್ಯವಸ್ಥೆ ಉಲ್ಲಂಘನೆ ಆಗಲು, ಹದಗೆಡಲು ನಾವು ಆಸ್ಪದ ಕೊಡುವುದಿಲ್ಲ. ಯಾರು ಏನೇ ಹೇಳಿಕೆ ಚಾನಲ್‍ನಲ್ಲಿ ಕೊಡಲಿ ಅಥವಾ ಬೇರೆ ಕಡೆ ಎಲ್ಲಿಯಾದರೂ ಕೊಡಲಿ. ಫೀಲ್ಡನಲ್ಲಿ ಕಾನೂನು ಏನಿದೆ ಅದಕ್ಕೆ ಬದ್ಧವಾಗಿರಬೇಕು. ಯಾರು ಉಲ್ಲಂಘನೆ ಮಾಡಬಾರದು. ಇವತ್ತು ಶ್ರೀರಂಗಪಟ್ಟಣದಲ್ಲಿ ಬಂದೋಬಸ್ತ್ ನಡೆಯುತ್ತಿದೆ. ನಾವು ಅಲ್ಲಿಯೂ ಕೂಡ 144 ಸೆಕ್ಷನ್ ಜಾರಿ ಮಾಡಿದ್ದೇವೆ. ಅಲ್ಲಿ ಕಾನೂನು ಅವಹೇಳನ ಮಾಡಿದರೆ ಅವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸುತ್ತೇವೆ ಎಂದು ಹೇಳಿದರು.

    ಹಿಜಾಬ್‍ಗೆ ಪೊಲೀಸ್ ಇಲಾಖೆಗೆ ನೇರವಾಗಿ ಯಾವುದೇ ಸಂಬಂಧ ಇಲ್ಲ. ಹಿಜಾಬ್ ವಿಚಾರ ಸ್ಕೂಲ್ ಮ್ಯಾನೆಜ್‍ಮೆಂಟ್‍ಗೆ ಇದೆ. ಶಿಕ್ಷಣ ಇಲಾಖೆಗೆ, ಡಿಸಿ ಅವರಿಗೆ ಸಂಬಂಧ ಇದೆ. ಪೊಲೀಸರಿಗೆ ಅದು ನೇರವಾಗಿ ಯಾವುದೇ ಸಂಬಂಧ ಇಲ್ಲ. ಕಾನೂನು ಸುವ್ಯವಸ್ಥೆ ಭಂಗ ಮಾಡಲು ಪ್ರಯತ್ನಪಟ್ಟರೆ ಅವರ ಮೇಲೆ ನಾವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತೇವೆ. ಆ ಸಮಯದಲ್ಲಿ ಅವರ ಮುಖ ಕೂಡ ನಾವು ನೋಡುವುದಿಲ್ಲ ಎಂದು ತಿಳಿಸಿದ್ದಾರೆ.

    ಮಾಧ್ಯಮದವರು ತಾಂಬೂಲ ಪ್ರಶ್ನೆಯಂತಹ ಸುದ್ದಿಗಳನ್ನು ಹೆಚ್ಚಾಗಿ ತೋರಿಸಬೇಡಿ. ನಿಮಗೂ ಕೂಡ ಜವಾಬ್ದಾರಿ ಇರುತ್ತದೆ. ಹೀಗಾಗಿ ಕೆಲವು ಜನರು ಪ್ರಚಾರ ಬಯಸಿ ಮಾಧ್ಯಮಗಳಲ್ಲಿ ಹೆಚ್ಚಾಗಿ ಮಾತನಾಡ್ತಿದ್ದಾರೆ. ಅವರ ಕವರೇಜ್ ಬಂದ್ ಮಾಡಿದರೆ ಮಾರನೇ ದಿನ ಮಾತನಾಡುವುದನ್ನು ತಾವೇ ಬಂದ್ ಮಾಡ್ತಾರೆ. ಎಷ್ಟು ಕವರೇಜ್ ಮಾಡಬೇಕು ಅಷ್ಟು ಮಾತ್ರ ಕವರ್ ಮಾಡಿ ಎಂದರು.

     

  • ಇಂದು ಹಿಂದೂ ಸಂಘಟನೆಗಳಿಂದ ಶ್ರೀರಂಗಪಟ್ಟಣ ಚಲೋ – 144 ಸೆಕ್ಷನ್ ಜಾರಿ

    ಇಂದು ಹಿಂದೂ ಸಂಘಟನೆಗಳಿಂದ ಶ್ರೀರಂಗಪಟ್ಟಣ ಚಲೋ – 144 ಸೆಕ್ಷನ್ ಜಾರಿ

    ಮಂಡ್ಯ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಅಲ್ಲ, ಹನುಮಾನ್ ಮಂದಿರ ಅಂತ ಪಟ್ಟು ಹಿಡಿದಿರುವ ಹಿಂದೂ ಸಂಘಟನೆಗಳು ಇಂದು `ಶ್ರೀರಂಗಪಟ್ಟಣ ಚಲೋ’ ಹಮ್ಮಿಕೊಂಡಿವೆ.

    ಬೆಳಗ್ಗೆ 10:30ಕ್ಕೆ ಶ್ರೀರಂಗಪಟ್ಟಣದ ಕುವೆಂಪು ಪ್ರತಿಮೆಯಿಂದ ಜಾಮಿಯಾ ಮಸೀದಿವರಗೆ ಶಾಂತಿಯುತವಾಗಿ ಮೆರವಣಿಗೆ ನಡೆಸ್ತೇವೆ. ಮಸೀದಿಯ ಒಳಭಾಗಕ್ಕೆ ಹನುಮ ಭಕ್ತರು ಹೋಗಿ ಆಂಜನೇಯಸ್ವಾಮಿಯ ಪೂಜೆ ಮಾಡ್ತೇವೆ ಎಂದು ಹಿಂದೂ ಸಂಘಟನೆ ನಾಯಕರು ಹೇಳ್ತಿದ್ದಾರೆ. ಒಂದೊಮ್ಮೆ, ಮೆರವಣಿಗೆ ಮಾಡಲು ಪೊಲೀಸರು ಅವಕಾಶ ನೀಡದಿದ್ದಲ್ಲಿ ಕುವೆಂಪು ಪ್ರತಿಮೆಯ ಬಳಿ ಕೂತು ಹನುಮಾನ್ ಚಾಲಿಸ್ ಪಠಣೆ ಮಾಡುವುದಾಗಿಯೂ ನಿರ್ಧಾರ ಮಾಡಿವೆ.

    ಈ ಹೋರಾಟದಲ್ಲಿ ಮಂಡ್ಯ, ಮೈಸೂರು ಭಾಗದಿಂದ ಸಾವಿರಾರು ಹನುಮ ಭಕ್ತರು ಮಾಲೆ ಧರಿಸಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದೆಂದು ಜಿಲ್ಲಾಡಳಿತ ಶ್ರೀರಂಗಪಟ್ಟಣದಾದ್ಯಂತ 144 ಸೆಕ್ಷನ್ ಜಾರಿ ಮಾಡಿದೆ. ಭಾರೀ ಪ್ರಮಾಣದಲ್ಲಿ ಪೊಲೀಸ್ ನಿಯೋಜನೆ ಮಾಡಲಾಗಿದೆ. ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವರ್ ತಡರಾತ್ರಿ ಶ್ರೀರಂಗಪಟ್ಟಣಕ್ಕೆ ಭೇಟಿ ಕೊಟ್ಟು, ಎಸ್‍ಪಿ ಯತೀಶ್‍ರಿಂದ ಭದ್ರತಾ ವ್ಯವಸ್ಥೆಯ ಮಾಹಿತಿ ಪಡೆದರು. ಇದನ್ನೂ ಓದಿ: ಶ್ರೀರಂಗಪಟ್ಟಣದಲ್ಲಿ ಹೈ ಅಲರ್ಟ್ – ಜಾಮೀಯಾ ಮಸೀದಿ ಸುತ್ತ 144 ನಿಷೇಧಾಜ್ಞೆ ಜಾರಿ

    ಸದ್ಯ ಶ್ರೀರಂಗಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ವಿಎಚ್‍ಪಿಯಿಂದ ಪ್ರತಿಭಟನಾ ಮೆರವಣಿಗೆ ವಿಫಲಗೊಳಿಸಲು ಪೊಲೀಸರ ಸನ್ನದ್ದ ಮಾಡಿಕೊಂಡಿದ್ದಾರೆ. ಎಸ್‍ಪಿ, ಇಬ್ಬರು ಡಿವೈಎಸ್‍ಪಿ, 5 ಸಿಪಿಐ, 10 ಪಿಎಸ್‍ಐ ಸೇರಿದಂತೆ 300 ಮಂದಿ ಪೊಲೀಸ್ ಪೇದೆ, 2 ಕೆಎಸ್‍ಆರ್‍ಪಿ, 4 ಡಿಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ನಿಷೇದಾಜ್ಞೆ ನಡುವೆಯು ಶ್ರೀರಂಗಪಟ್ಟಣ ಚಲೋ ಮಾಡೇ ಮಾಡ್ತೀವಿ ಎಂದು ಹೇಳ್ತಿರುವ ವಿಎಚ್‍ಪಿ ಮುಖಂಡರು ಪಟ್ಟುಹಿಡಿದಿದ್ದಾರೆ.

    ಹಿಂದೂ ಕಾರ್ಯಕರ್ತರು ಈಗಾಗಲೇ ಹಳ್ಳಿ ಹಳ್ಳಿಗಳಲ್ಲಿ ಕರ ಪತ್ರ ಹಂಚಿದ್ದಾರೆ. 144 ಸೆಕ್ಷನ್ ಜಾರಿ ಹಿನ್ನೆಲೆ, ಒಂದೆಡೆ ಹಿಂದೂ ಕಾರ್ಯಕರ್ತರು ಸೇರಿದರೆ ಬಂಧಿಸುವ ಸಾಧ್ಯತೆ ಇದೆ. ಪ್ರತಿಭಟನೆಗೆ ಮುಂದಾದ್ರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಮಂಡ್ಯ ಎಸ್‍ಪಿ ಎಚ್ಚರಿಕೆ ನೀಡಿದ್ದಾರೆ.

  • ತಾಂಬೂಲ ಪ್ರಶ್ನೆ ಅಂತಾ ಬರೋರನ್ನು ಒದ್ದು ಒಳಗೆ ಹಾಕ್ಬೇಕು: ಅಬ್ದುಲ್ ವಾಜೀದ್ ವಿವಾದಾತ್ಮಕ ಹೇಳಿಕೆ

    ತಾಂಬೂಲ ಪ್ರಶ್ನೆ ಅಂತಾ ಬರೋರನ್ನು ಒದ್ದು ಒಳಗೆ ಹಾಕ್ಬೇಕು: ಅಬ್ದುಲ್ ವಾಜೀದ್ ವಿವಾದಾತ್ಮಕ ಹೇಳಿಕೆ

    ಮಂಗಳೂರು: ಎಸ್‍ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ವಾಜೀದ್ ಅವರು ತಾಂಬೂಲ ಪ್ರಶ್ನೆ ಅಂತಾ ಬರೋರನ್ನು ಒದ್ದು ಒಳಗೆ ಹಾಕಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಮಳಲಿ ಮಸೀದಿಯಲ್ಲಿ ಹಿಂದೂ ದೇವರ ಕುರುಹು ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಕಣ್ಣೂರಿನಲ್ಲಿ ನಡೆದ ಎಸ್‍ಡಿಪಿಐ ಜನಾಧಿಕಾರ ಸಮಾವೇಶದಲ್ಲಿ ಮಾತನಾಡಿದ ಅವರು, ಮಳಲಿ ಮಸೀದಿಯ ಒಂದು ಹಿಡಿ ಮರಳು ಕೊಡಲಾರೆವು. ಮಸೀದಿ ಬಿಟ್ಟುಕೊಡುತ್ತಾರೆ ಅನ್ನೋ ಕನಸು ಕಾಣಬೇಡಿ. ಈ ದೇಶ ನಮ್ಮದು, ಇದಕ್ಕಾಗಿ ರಕ್ತ ಹರಿಸಿದ್ದೇವೆ ಎಂದು ಹೇಳಿದ್ದಾರೆ.

    ತಾಂಬೂಲ ಪ್ರಶ್ನೆ ಎಂದು ಬರುವವರನ್ನು ಪೊಲೀಸರು ಒದ್ದು ಒಳಗೆ ಹಾಕಬೇಕು. ‘ಪೂಜಾ ಸ್ಥಳ ಕಾಯ್ದೆ 1991’ ಪ್ರಕಾರ ಮೂರು ವರ್ಷ ಜೈಲಿಗೆ ಹಾಕಬೇಕು. ಈ ಆಕ್ಟ್ ಅನ್ನು ಪೊಲೀಸರು ಓದಿಲ್ವೇ?. 2006ರಲ್ಲಿ ಸಂಡೂರಿನ ಸುಗ್ಗುಲಮ್ಮ ದೇವಾಲಯ ಒಡೆದು ಹಾಕಿದ್ದರಲ್ಲ. ಸಂಘಪರಿವಾರದ ಕಾರ್ಯಕರ್ತರು ತಾಕತ್ತಿದ್ದರೆ ಅದರ ಬಗ್ಗೆ ತಾಂಬೂಲ ಪ್ರಶ್ನೆ ಇಡಲಿ ಎಂದು ಕಿಡಿಕಾರಿದ್ದಾರೆ. ಇದೇ ವೇಳೆ ಮಾಜಿ ಸಚಿವ ಜನಾರ್ದನ ರೆಡ್ಡಿ, ಸಚಿವ ಶ್ರೀರಾಮುಲು ಧ್ವಂಸಗೊಳಿಸಿದ್ದರಲ್ಲ. ತಾಕತ್ತಿದ್ದರೆ ಜನಾರ್ದನ ರೆಡ್ಡಿ ಮನೆಗೆ ಮಾರ್ಚ್ ಮಾಡಲಿ ಎಂದು ಸವಾಲೆಸೆದರು.

    ಇದೀಗ ವಾಜೀದ್ ಹೇಳಿಕೆ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಅಬ್ದುಲ್ ವಾಜೀದ್ ಅವರು ಕೋಮು ಭಾವನೆಯನ್ನು ಕೆರಳಿಸುವಂತೆ ಭಾಷಣ ಮಾಡಿದ್ದಾರೆ. ಮಳಲಿ ಮಸೀದಿ ಬಗ್ಗೆ ಪೂರ್ಣ ಪ್ರಕ್ರಿಯೆ ನಡೆಯಬೇಕಿದೆ ಇಂತಹ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಸರಿಯಲ್ಲ. ಈಗಾಗಲೇ ನಗರದಲ್ಲಿ 144 ಸೆಕ್ಷನ್ ಜಾರಿ ಇದೆ ಕೋಮು ಗಲಭೆ ಸೃಷ್ಟಿಸುವಂತಹ ಹೇಳಿಕೆ ಕೂಡ ನೀಡೋ ಹಾಗಿಲ್ಲ. ಆದರೆ ಅವರ ಭಾಷಣ ಹಿಂದೂಗಳನ್ನು ಪ್ರಚೋದಿಸಿದಂತೆ ಇದೆ.

    ಅವರ ಪ್ರಚೋದನಾಕಾರಿ ಭಾಷಣಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಖಂಡಿಸಿದ್ದಾರೆ. ಹಿಂದೂಗಳ ಆಚಾರ, ವಿಚಾರ ಪೂಜೆ ಪುನಸ್ಕಾರಗಳನ್ನು ಕೆದಕಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಹಿಂದೂಗಳ ನಂಬಿಕೆಗೆ ಧಕ್ಕೆ ಬರುವ ಹಾಗೇ ಭಾಷಣ ಮಾಡಿದ್ದಾರೆ. ತಾಂಬೂಲ ಪ್ರಶ್ನೆ ಅಂತಾ ಬರುವವರನ್ನ ಒದ್ದು ಒಳಗಾಗಬೇಕು ಎನ್ನುವ ಅವರ ವಿವಾದಾತ್ಮಕ ಹೇಳಿಕೆಗೆ ಕಾನೂನು ಹೋರಾಟ ಮಾಡಿ ಇವರಿಗೆ ಪಾಠ ಕಲಿಸಬೇಕು.

    ಮಳಲಿ ಮಸೀದಿಯಲ್ಲಿ ಕೂರುಹು ಪತ್ತೆಯ ಬಗ್ಗೆ ಉತ್ಖನನ ಪ್ರಕ್ರಿಯೆ ನಡೆಯುತ್ತಾ ಇದೆ. ಈ ಸಂದರ್ಭದಲ್ಲಿ ಅವರು ಈ ರೀತಿಯ ಭಾಷಣ ಮಾಡಿರುವುದು ಸರಿಯಲ್ಲ ಎಂದು ಹಿಂದೂ ಸಂಘಟನೆಯವರು ಕಿಡಿಕಾರಿದ್ದಾರೆ.

  • ಪ್ರಯಾಣಿಕರೇ ನಮಗೆ ದೇವರು.. ಈ ಧರ್ಮ-ಜಾತಿ ಯುದ್ಧ ಬೇಕಾಗಿಲ್ಲ: ಬಸ್ ಚಾಲಕರು

    ಪ್ರಯಾಣಿಕರೇ ನಮಗೆ ದೇವರು.. ಈ ಧರ್ಮ-ಜಾತಿ ಯುದ್ಧ ಬೇಕಾಗಿಲ್ಲ: ಬಸ್ ಚಾಲಕರು

    ಬೆಂಗಳೂರು: ರಾಜ್ಯದಲ್ಲಿ ಹಿಂದೂ ಮುಸ್ಲಿಂ ನಡುವಿನ ಧರ್ಮದ ವಾರ್ ಒಂದಿಲ್ಲೊಂದು ರೂಪ ಪಡೆದುಕೊಳ್ಳುತ್ತಿದೆ. ಹಿಜಬ್‍ನಿಂದ ಶುರುವಾದ ಈ ಧರ್ಮದ ದಂಗಲ್ ಈಗ ವ್ಯಾಪಾರ ವಹಿವಾಟಗಳ ಮೇಲೆ ಪ್ರಭಾವ ಬೀರುವುದಕ್ಕೆ ಶುರು ಮಾಡಿದೆ. ಹಿಂದೂ ಸಂಘಟನೆಗಳು ಒಂದೊಂದೇ ಅಭಿಯಾನಕ್ಕೆ ಕೈಹಾಕುತ್ತಿವೆ. ಈಗ ಖಾಸಗಿ ಬಸ್ ಪ್ರಯಾಣದ ಮೇಲೆ ಅಭಿಯಾನ ಶುರುವಾಗಿದೆ.

    ನಿನ್ನೆಯಿಂದ ಹಿಂದೂ ಸಂಘಟನೆಗಳು ಹೊಸ ಆಂದೋಲನ ಶುರು ಮಾಡಿವೆ. ಹಿಂದೂಗಳು ತಾವೂ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಮಾಡುವಾಗ ಮುಸ್ಲಿಂ ಚಾಲಕರ ಮತ್ತು ಮುಸ್ಲಿಂ ಮಾಲೀಕರ ವಾಹನಗಳನ್ನ ಬಳಸಬೇಡಿ ಅಂತಾ ಅಭಿಯಾನ ಶುರು ಮಾಡಿದ್ದಾರೆ. ಅನ್ಯಧರ್ಮೀಯರು ನಮ್ಮ ಧರ್ಮವನ್ನ ನಂಬುವುದಿಲ್ಲ. ಅವರ ಜೊತೆಗೆ ಪ್ರಯಾಣ ಮಾಡುವ ಬದಲು ಹಿಂದೂ ಚಾಲಕರ ಮತ್ತು ಹಿಂದೂ ಮಾಲೀಕರ ವಾಹನಗಳನ್ನೇ ಬಳಸಿ ಅಂತಾ ಹೊಸ ವಾದವನ್ನು ಸೃಷ್ಟಿ ಮಾಡಿದ್ದಾರೆ. ಇದನ್ನೂ ಓದಿ: ಲವ್ ಜಿಹಾದ್‍ಗೆ ಮುಂದಾದವರ ಮನೆ ಹೊಕ್ಕು ಹೊಡೆಯಬೇಕು: EX MLC ನಾರಾಯಣಸಾ ಭಾಂಡಗೆ

    ಇದಕ್ಕೆ ಚಾಲಕರ ವರ್ಗದಲ್ಲಿ ಭಾರೀ ವಿರೋಧ ಶುರುವಾಗಿದೆ. ನಮಗೆ ಪ್ರಯಾಣಿಕರೇ ದೇವರು, ಅವರ ಜಾತಿ, ಧರ್ಮ ಯಾವುದಾದರೇ ನಮಗೇನು. ನಮ್ಮ ಬಸ್ ಹತ್ತುವ ಪ್ರಯಾಣಿಕರನ್ನು ಅವರ ಸ್ಥಳಕ್ಕೆ ಬಿಡುವ ಕಾರ್ಯ ಮಾಡುವವರು ನಾವು. ನಮ್ಮಲ್ಲಿ ಎಲ್ಲ ಜಾತಿಯ ಎಲ್ಲ ಧರ್ಮದವರು ಇದ್ದಾರೆ. ನಾವೂ ಕೆಲಸ ಮಾಡುವ ಜಾಗದಲ್ಲಿ ಧರ್ಮವನ್ನು ತರುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ಭಾರತ ಮಾಡೋಕೆ ಯಾರಪ್ಪನ ಕೈಯಲ್ಲೂ ಆಗಲ್ಲ: ನಲಪಾಡ್

    ಇದು ಕೆಲಸಕ್ಕೆ ಬಾರದವರು ಮಾಡುತ್ತಿರುವ ಕುತಂತ್ರ. ರಾಜ್ಯದಲ್ಲಿ ಏನ್ ಆಗುತ್ತಿದೆ. ಎಲ್ಲ ಬೆಲೆಗಳು ಗಗನಕ್ಕೆ ಏರಿಕೆಯಾಗುತ್ತಿವೆ. ಜನ ಜೀವನ ಮಾಡುವುದೇ ಕಷ್ಟಕರವಾಗಿದೆ. ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆಯಾಗುತ್ತಿದೆ. ಇತಂಹ ಸಮಯದಲ್ಲಿ ಬೇಡದ ವಿಚಾರವನ್ನು ತಂದು ಜನರ ದಿಕ್ಕು ತಪ್ಪಿಸೋ ಕೆಲಸ ಆಗುತ್ತಿದೆ. ನಾವೆಲ್ಲ ಒಂದೇ ಭಾವನೆಯಿಂದ ಕೆಲಸ ಮಾಡುವ ಜನ. ನಮಗೆ ಕಷ್ಟ ಬಂದಾಗ ಹಿಂದೂಗಳು ಬರ್ತಾರೆ. ನಾವೂ ಅವ್ರ ಕಷ್ಟಕ್ಕೆ ಹೋಗ್ತೀವಿ. ಇಲ್ಲಿ ಧರ್ಮದ ಹೆಸರಿನಲ್ಲಿ ನಮ್ಮ ನಡುವೆ ಬಿರುಕು ತರುವ ಕೆಲಸ ನಡೆಯುತ್ತಿದೆ ಎಂದು ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    BRIBE

    ಒಟ್ಟಿನಲ್ಲಿ ರಾಜ್ಯದ ಶಾಂತಿಯನ್ನು ಕೆಡಿಸುವ ಕೆಲಸಕ್ಕೆ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಹಿಂದೂ, ಮುಸ್ಲಿಂ ಅನ್ನುವ ವಿಷ ಬೀಜ ಭಿತ್ತನೆ ಮಾಡಿ ಅದರ ಲಾಭ ಮಾಡಿಕೊಳ್ಳಲು ಒಂದಿಲ್ಲೊಂದು ತಂತ್ರಗಳನ್ನು ಕೆಲವರು ಮಾಡುತ್ತಿದ್ದಾರೆ. ಜನ ಮಾತ್ರ ಇದೆಲ್ಲ ಬೇಕಾ ಅಂತ ತಮ್ಮ ಪಾಡಿಗೆ ತಾವು ಕೆಲಸಗಳನ್ನು ಮಾಡಿಕೊಂಡು ಹೋಗುತ್ತಿದ್ದಾರೆ. ಇನ್ನಾದರೂ ಈ ಅಭಿಯಾನಗಳು ಕೊನೆಯಾಗಿ ಜನ ನೆಮ್ಮದಿಯಿಂದ ಸಹಬಾಳ್ವೆ ಮಾಡುವಂತೆ ಆಗಲಿ.

  • ಹಲಾಲ್ ದಂಗಲ್ ಇದು ಅಂತ್ಯವಲ್ಲ ಆರಂಭ

    ಹಲಾಲ್ ದಂಗಲ್ ಇದು ಅಂತ್ಯವಲ್ಲ ಆರಂಭ

    ಬೆಂಗಳೂರು: ಹಲಾಲ್ ಬಾಯ್ಕಾಟ್‍ಗೆ ಭರ್ಜರಿ ಪ್ರತಿಕ್ರಿಯೆ ದೊರೆತಿದ್ದು, ಈ ಹಿನ್ನೆಲೆಯಲ್ಲಿ ಹಲಾಲ್ ದಂಗಲ್‍ನ್ನು ಒಂದು ದಿನಗಷ್ಟೇ ಸಿಮೀತವಾಗಿಸದೇ ಇದನ್ನು ದೊಡ್ಡ ಮಟ್ಟದಲ್ಲಿ ಆರಂಭ ಮಾಡಲು ಹಿಂದೂ ಸಂಘಟನೆಗಳು ಈಗ ಸಜ್ಜಾಗಿದೆ.

    ಯಗಾದಿ ಮರು ದಿನವಾದ ಹೊಸತೊಡಕು ವೇಳೆ ಗ್ರಾಹಕರು ಹಿಂದೂ ಅಂಗಡಿಗಳ ಮುಂದೆ ಸಾಲು ಸಾಲು ನಿಂತಿದ್ದರು. ಜಟ್ಕಾ ಕಟ್ ಖರೀದಿಗಾಗಿಯೇ ಬೇರೆ ಜಾಗಗಳಿಂದ ಬಂದಿದ್ದರು. ಭಾನುವಾರ ಒಂದೇ ದಿನಕ್ಕೆ ಜಟ್ಕಾ ಕಟ್ ಅಂಗಡಿಗಳಲ್ಲಿ ಲಕ್ಷಾಂತರ ರೂ. ಮೌಲ್ಯದ ವ್ಯಾಪಾರವಾಗಿತ್ತು. ಇದರಿಂದಾಗಿ ಹಿಂದೂಪರ ಸಂಘಟನೆಗಳು ಫುಲ್ ಉತ್ಸಾಹದಲ್ಲಿದ್ದಾರೆ.

    ರಾಜ್ಯಾದ್ಯಂತ ಜಟ್ಕಾ ಕಟ್‍ಗೆ ಜನರು ಬಾರಿ ಬೆಂಬಲ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳು ರಾಜ್ಯದ ಪ್ರತಿ ಜಿಲ್ಲೆ, ತಾಲೂಕು, ವಾರ್ಡ್ ಮಟ್ಟದಲ್ಲಿ ಜಟ್ಕಾ ಕಟ್ ಓಪನ್‍ಗೆ ಸಿದ್ಧತೆ ನಡೆಸಿವೆ. ಅಷ್ಟೇ ಅಲ್ಲದೇ ರಾಜ್ಯ ರಾಜಧಾನಿ ಬೆಂಗಳೂರಿನ 198 ವಾರ್ಡ್‍ಗಳಲ್ಲೂ ಜಟ್ಕಾ ಕಟ್ ಅಂಗಡಿ ತೆರೆಯಲು ಮುಂದಾಗಿವೆ. ಇದನ್ನೂ ಓದಿ: ನಾನು ಮಾಡಿರುವ ಕೆಲಸಕ್ಕೆ ನಿಮಗೆ ಪ್ರೀತಿ ಬಂದ್ರೆ ಓಟ್ ಹಾಕಿ ಕೂಲಿ ಕೊಡಿ: ಪ್ರೀತಂಗೌಡ

    ಸದ್ಯಕ್ಕೆ ಬಿಬಿಎಂಪಿ ತಾತ್ಕಾಲಿಕ ಜಟ್ಕಾ ಕಟ್ ಶಾಪ್‍ಗಳನ್ನು ತೆರೆಯಲು ಅನುಮತಿ ನೀಡಿರಲಿಲ್ಲ. ಮುಂದಿನ ದಿನಗಳಲ್ಲಿ ಶಾಶ್ವತವಾಗಿ ಅನುಮತಿ ಪಡೆದು ಜಟ್ಕಾ ಕಟ್‍ಗಳ ಓಪನ್ ಮಾಡಲು ಹಿಂದೂಪರ ಸಂಘಟನೆಗಳು ಚಿಂತನೆ ನಡೆಸಿವೆ. ಈಗಾಗಲೇ ಆಸಕ್ತ ಯುವಕರಿಗೆ ಜಟ್ಕಾ ಕಟ್ ಟ್ರೈನಿಂಗ್ ನೀಡಲಾಗುತ್ತಿದೆ.

    ಇನ್ಮುಂದೆ ಪ್ರತಿ ಭಾನುವಾರ ಪ್ರತಿಹಬ್ಬಕ್ಕೂ ಹಲಾಲ್ ಬಾಯ್ಕಾಟ್ ಅಭಿಯಾನ ಮಾಡಲು ಪ್ಲ್ಯಾನ್ ನಡೆಸಿವೆ. ಅಷ್ಟೇ ಅಲ್ಲದೇ, ಸಭೆ, ಸಮಾರಂಭ ಬಾಡೂಟಕ್ಕೆ ಜಟ್ಕಾ ಕಟ್ ಬಳಸುವಂತೆ ಜಾಗೃತಿ ಮೂಡಿಲು ಹಿಂದೂ ಸಂಘಟನೆಗಳು ತಯಾರಿ ನಡೆಸುತ್ತಿವೆ. ಹಿಂದೂಗಳು, ಹಿಂದೂ ವ್ಯಕ್ತಿಗಳಿಂದಲೇ ಮಾಂಸ ಖರೀದಿ ಮಾಡುವಂತೆ ಮನವಿಯನ್ನು ಮಾಡಲಾಗುತ್ತದೆ. ಇದನ್ನೂ ಓದಿ: ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಮುಂದಾದ ಹಿಂದೂ ಸಂಘಟನೆಗಳು

    NONVEG

    ಹಿಜಬ್‍ಗೆ ಆಗ್ರಹಿಸಿ ಕರ್ನಾಟಕ ಬಂದ್‍ಗೆ ಕರೆ ನೀಡಿದ್ದಕ್ಕೆ ಅಂಗಡಿಗಳನ್ನು ಬಂದ್ ಮಾಡಿದ್ದ ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಹೊಡೆತ ನೀಡಲು ಆರಂಭಗೊಂಡ ಜಟ್ಕಾ ಕಟ್ ಅಭಿಯಾನ ಯಶಸ್ವಿಯಾಗುತ್ತಾ ಎನ್ನವುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ. ಜಟ್ಕಾ ಕಟ್ ಮೂಲಕ ದೊಡ್ಡದಾಗಿ ಮುಸ್ಲಿಂ ವ್ಯಾಪಾರಿಗಳಿಗೆ ಠಕ್ಕರ್ ನೀಡಲು ಹಿಂದೂ ಸಂಘಟನೆಗಳು ಸಕಲ ಸಿದ್ಧತೆ ನಡೆಸುತ್ತಿವೆ.

  • ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಆರೋಪಿ ಅರೆಸ್ಟ್

    ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಆರೋಪಿ ಅರೆಸ್ಟ್

    ಲಕ್ನೋ: ಅಪ್ರಾಪ್ತ ದಲಿತ ಬಾಲಕಿಯೊಬ್ಬಳನ್ನು ಗ್ರಾಮದ ಸಮುದಾಯದ ಯುವಕನೊಬ್ಬ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಬುಲಂದ್‍ಶಹರ್ ಜಿಲ್ಲೆಯಲ್ಲಿ ನಡೆದಿದೆ.

    ಘಟನೆ ಕುರಿತು ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಅಪಹರಣದ ದೂರು ದಾಖಲಿಸಿದ್ದಾರೆ. ಘಟನೆಯ ಕುರಿತು ಬಾಲಕಿಯು ಮ್ಯಾಜಿಸ್ಟ್ರೆಟ್ ಮುಂದೆ ಸಂಪೂರ್ಣ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಶಿಕ್ಷಕನಿಂದ ಲೈಂಗಿಕ ಕಿರುಕುಳ – ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

    ತಲೆಮರೆಸಿಕೊಂಡಿದ್ದ ಹುಡುಗ ಮತ್ತು ಆತನ ಇಬ್ಬರು ಸಹಚರರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾಳೆ. ಹೇಳಿಕೆ ಆಧರಿಸಿ ಮೂವರು ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಘಟನೆಗೆ ಹಿಂದೂ ಸಂಘಟನೆಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳ ಬಂಧನಕ್ಕೆ ಹಿಂದೂ ಸಂಘಟನೆಗಳು ಮನವಿ ಪತ್ರವನ್ನೂ ಸಲ್ಲಿಸಿವೆ. ಇದನ್ನೂ ಓದಿ: ಹಸ್ತಮೈಥುನದ ವೀಡಿಯೋ ಕಳುಹಿಸಿ ಯುವತಿಯನ್ನು ಮಂಚಕ್ಕೆ ಕರೆದ ಎಂಬಿಎ ವಿದ್ಯಾರ್ಥಿ ಅರೆಸ್ಟ್

    ಪಹಸು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಮಾರ್ಚ್ 26 ರಂದು, ಗ್ರಾಮದ ಹುಡುಗನೊಬ್ಬ ಅಪ್ರಾಪ್ತ ದಲಿತ ಬಾಲಕಿಯನ್ನು ಮೋಹಿಸಿ ಕರೆದುಕೊಂಡು ಹೋಗಿದ್ದಾನೆ. ಇದಾದ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ವಿಚಾರ ತಿಳಿದ ಹಿಂದೂ ಸಂಘಟನೆಗಳು ಆಕ್ರೋಶಗೊಂಡು ಪಹಾಸು ಪೊಲೀಸ್ ಠಾಣೆಗೆ ಬಂದು ಮನವಿ ಪತ್ರ ಸಲ್ಲಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಎಸ್‍ಎಸ್‍ಪಿ ಸುರೇಂದ್ರ ತಿವಾರಿ ಮಾತನಾಡಿ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವುದು ಸ್ಪಷ್ಟವಾಯಿತು. ಘಟನೆಯಲ್ಲಿ ಇನ್ನೂ ಇಬ್ಬರು ಭಾಗಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗುತ್ತಿದೆ.

  • ಮುಸ್ಲಿಂ ಯುವಕರ ಬಿಡುಗಡೆ ಖಂಡಿಸಿ ನಾಳೆ ಕೆಆರ್ ಪೇಟೆ ಬಂದ್

    ಮುಸ್ಲಿಂ ಯುವಕರ ಬಿಡುಗಡೆ ಖಂಡಿಸಿ ನಾಳೆ ಕೆಆರ್ ಪೇಟೆ ಬಂದ್

    ಮಂಡ್ಯ: ಮುಸ್ಲಿಂ ಯುವಕರನ್ನು ಬಂಧನ ಮಾಡಿ, ಜಾಮೀನಿನ ಮೇಲೆ ಬಿಡುಗಡೆಗೊಳಿಸಿರುವುದನ್ನು ಖಂಡಿಸಿ ನಾಳೆ ಹಿಂದೂಪರ ಮತ್ತು ಕನ್ನಡ ಪರ ಸಂಘಟನೆಗಳು ಕೆಆರ್ ಪೇಟೆ ಬಂದ್‍ಗೆ ಕರೆ ನೀಡಿವೆ.

    ಅಕ್ಟೋಬರ್ 27 ರಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಆಲಂಬಾಡಿಕಾವಲು ಬಳಿ ಮುಸ್ಲಿಂ ಯುವಕರು ಅನುಮಾನಾಸ್ಪದವಾಗಿ ಪೇರೆಡ್ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ 16 ಮುಸ್ಲಿಂ ಯುವಕರನ್ನು ಬಂಧಿಸಿದ್ದರು.

    ನಂತರ ಅವರು ಪಿಎಸ್‍ಎಫ್ ಸಂಘಟನೆಯ ಕಾರ್ಯಕರ್ತರು ಎಂದು ತಿಳಿದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಇದೀಗ ಇದನ್ನು ಖಂಡಿಸಿ ನಾಳೆ ಕೆಆರ್ ಪೇಟೆ ಬಂದ್‍ಗೆ ಸಂಘಟನೆಗಳು ಕರೆ ನೀಡಿವೆ. ಕೆಆರ್ ಪೇಟೆ ಭಾಗದಲ್ಲಿ ದೇಶ ವಿರೋಧಿ ಚಟುವಟಿಗಳು ನಡೆಯುತ್ತಿವೆ. ಆದರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದು, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮೂರು ದಿನಗಳ ಹಿಂದೆ ಬಂಧನ ಮಾಡಿ ಬಿಡುಗಡೆ ಮಾಡಿರುವ ಯುವಕರು ಸಹ ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದರು ಎಂದು ಆರೋಪಿಸಿದ್ದಾರೆ.

    ಪೊಲೀಸರು ಯಾರದ್ದೋ ಒತ್ತಡಕ್ಕೆ ಮಣಿದು ಯುವಕರ ಮೇಲೆ ಸಣ್ಣಪುಟ್ಟ ಪ್ರಕರಣಗಳನ್ನು ದಾಖಲಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ. ಬಿಡುಗಡೆ ಮಾಡಿರುವ ಯುವಕರನ್ನು ಮತ್ತೆ ಬಂಧಿಸಿ, ಕೆಆರ್ ಪೇಟೆ ಭಾಗದಲ್ಲಿ ನಡೆಯುತ್ತಿರುವ ದೇಶ ವಿರೋಧಿ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕು ಎಂದು ಹಿಂದೂ ಪರ ಮತ್ತು ಕನ್ನಡ ಪರ ಸಂಘಟನೆಗಳು ಬಂದ್‍ಗೆ ಕರೆ ನೀಡಿವೆ.

    ಕೆಆರ್ ಪೇಟೆಯನ್ನು ಬಂದ್ ಮಾಡಿ ಬೃಹತ್ ಪ್ರತಿಭಟನೆ ಮಾಡಲು ಈಗಾಗಲೇ ಸಂಘಟನೆಗಳು ನಿರ್ಧರಿಸಿವೆ. ಈ ಪ್ರತಿಭಟನೆಯಲ್ಲಿ ಹಲವು ಮಠಗಳ ಮಠಾಧೀಶರುಗಳು ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಪೊಲೀಸರು ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಿದ್ದಾರೆ.