Tag: ಹಿಜಬ್‌ ತೀರ್ಪು

  • ಹಿಜಬ್‌ ತೀರ್ಪು ಪ್ರಕಟಿಸಿದ ಜಡ್ಜ್‌ಗಳಿಗೆ ಕೊಲೆ ಬೆದರಿಕೆ – ಕೇಸ್‌ ದಾಖಲು

    ಹಿಜಬ್‌ ತೀರ್ಪು ಪ್ರಕಟಿಸಿದ ಜಡ್ಜ್‌ಗಳಿಗೆ ಕೊಲೆ ಬೆದರಿಕೆ – ಕೇಸ್‌ ದಾಖಲು

    ಬೆಂಗಳೂರು: ಹಿಜಬ್‌ ತೀರ್ಪು ಪ್ರಕಟಿಸಿದ ಹೈಕೋರ್ಟ್‌ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆಯೊಂದು ಕೊಲೆ ಬೆದರಿಕೆ ಹಾಕಿದೆ.

    ತೌಹೀದ್‌ ಜಮಾತ್‌ ಸಂಘಟನೆ ಬೆದರಿಕೆ ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಿಡಿಯೋ ವೈರಲ್‌ ಬೆನ್ನಲೇ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಸಂಘಟನೆ ವಿರುದ್ಧ ಪ್ರಕರಣ ದಾಖಲಾಗಿದೆ.

    ಜಡ್ಜ್‌ಗೆ ಬೆದರಿಕೆ ಹಾಕಿದ ಸಂಬಂಧ ತನಿಖೆ ನಡೆಸುವಂತೆ ಒತ್ತಾಯಿಸಿ ಹೈಕೋರ್ಟ್‌ ರಿಜಿಸ್ಟ್ರಾರ್‌ ಅವರಿಗೆ ಸಾಮಾಜಿಕ ಕಾರ್ಯಕರ್ತ ಗಿರೀಶ್‌ ಭಾರದ್ವಾಜ್‌ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಹಳೆಯ ಘಟನೆ ರಿವೀಲ್ – ಬೆಂಗಳೂರಿನಲ್ಲಿ ಕಾಶ್ಮೀರ ಭವನಕ್ಕೆ ಬೆಂಕಿ ಹಚ್ಚಿ ಅಡ್ಡಿ

    ತೌಹೀದ್‌ ಜಮಾತ್‌ ಸಂಘಟನೆಯ ಮುಖಂಡ ಆರ್‌.ರೆಹ್ಮತ್‌ವುಲ್ಲಾ ಮಧುರೈನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹಿಜಬ್‌ ತೀರ್ಪಿಗೆ ಆಕ್ಷೇಪ ವ್ಯಕ್ತಪಡಿಸಿ ಪರೋಕ್ಷವಾಗಿ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಈ ವಿಡಿಯೋ ಆಧಾರಿಸಿ ವಕೀಲ, ಸುಧಾ ಕಟ್ವ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್‌ 506(ಬೆದರಿಕೆ), 501(1)(ಮಾನಹಾನಿ), 503(ಕ್ರಿಮಿನಲ್‌ ಬೆದರಿಕೆ), 109(ಪ್ರಚೋದನೆ), 504(ಶಾಂತಿ ಭಂಗ), 505(ಸಾರ್ವಜನಿಕ ಕಿಡಿಗೇಡಿತನ) ಸೇರಿದಂತೆ ವಿವಿಧ ಸೆಕ್ಷನ್‌ಗಳಲ್ಲಿ ಎಫ್‌ಐಆರ್‌ ದಾಖಲಾಗಿದೆ. ಈ ಪ್ರಕರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಮುಂದಿನ ಐದು ವರ್ಷಗಳಲ್ಲಿ ಜಪಾನ್ 3.2 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಿದೆ: ಮೋದಿ

    ಗಿರೀಶ್‌ ಪತ್ರದಲ್ಲಿ ಏನಿದೆ:
    ತೌಹೀದ್‌ ಜಮಾತ್‌ ಸಂಘಟನೆಯ ಮುಖಂಡ ಆರ್‌.ರಹ್ಮತ್‌ವುಲ್ಲಾ ಅವರು, ಸಾರ್ವಜನಿಕ ಭಾಷಣದಲ್ಲಿ ಹಿಜಬ್‌ ಕುರಿತು ತೀರ್ಪು ನೀಡಿರುವ ‘ ಅವರೇ ನೇರ ಹೊಣೆಯಾಗಲಿದ್ದಾರೆ ಎಂದು ಹೇಳಿದ್ದಾರೆ. ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆ ನಾಯಕರು ತೀರ್ಪು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.

    ಹೊಸಪೇಟೆಯಲ್ಲಿ ಹಿಜಬ್‌ ಧರಿಸುವುದನ್ನು ಸಮರ್ಥಿಸಿ ಗೋಡೆಗಳ ಮೇಲೆ ಬರಹಗಳನ್ನು ಬರೆಯಲಾಗಿದೆ. ಅಮೀರ್‌- ಇ-ಶರಿತ್‌ ಎಂಬ ಸಂಘಟನೆ ತೀರ್ಪು ಖಂಡಿಸಿ ಬಂದ್‌ಗೆ ಕರೆ ನೀಡಿದೆ. ಈ ಎಲ್ಲ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

  • ಮೊದಲು ಮಕ್ಕಳ ಭವಿಷ್ಯ ಮುಖ್ಯ, ಆಮೇಲೆ ರಾಜಕೀಯ: ಡಿಕೆಶಿ

    ಮೊದಲು ಮಕ್ಕಳ ಭವಿಷ್ಯ ಮುಖ್ಯ, ಆಮೇಲೆ ರಾಜಕೀಯ: ಡಿಕೆಶಿ

    ಚಿಕ್ಕಬಳ್ಳಾಪುರ: ಮೊದಲು ಮಕ್ಕಳ ವಿದ್ಯಾಭ್ಯಾಸ ಅವರ ಭವಿಷ್ಯ ಮುಖ್ಯ. ರಾಜಕೀಯ ಆಮೇಲೆ ಎಂದು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

    ದೆಹಲಿಯಿಂದ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಡಿಕೆಶಿವಕುಮಾರ್ ಅವರು ಹಿಜಬ್ ತೀರ್ಪು ಕುರಿತಂತೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿ, ತೀರ್ಪಿನ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಬೇಕಿದೆ. ಯಾವುದೇ ರಾಜಕೀಯ ಪಕ್ಷ ತೀರ್ಪುನ್ನು ತಮ್ಮದೇ ರೀತಿಯಲ್ಲಿ ವ್ಯಾಖ್ಯಾನ ಮಾಡಬಹುದು. ಆದರೆ ತೀರ್ಪು ತೀರ್ಪೆ. ತೀರ್ಪನ್ನು ಎಲ್ಲರೂ ಕೂಡ ಗೌರವದಿಂದ ಸ್ವೀಕಾರ ಮಾಡಬೇಕು ಎಂದಿದ್ದಾರೆ.

    ತೀರ್ಪಿನಲ್ಲಿ ಮಾಡಿರುವ ಸಂಪೂರ್ಣವಾದ ಉಲ್ಲೇಖಗಳನ್ನು ನೋಡದೇ ನಾನು ರಾಜಕೀಯ ಪಕ್ಷದ ರಾಜ್ಯಾಧ್ಯಕ್ಷನಾಗಿ ಪ್ರತಿಕ್ರಿಯೆ ನೀಡಲಾರೆ. ನಮ್ಮ ಹಿರಿಯ ನಾಯಕರ ಜೊತೆ ಚರ್ಚೆ ಮಾಡಿ ಪ್ರತಿಕ್ರಿಯೆ ನೀಡುತ್ತೇನೆ. ನಮಗೆ ಶಾಂತಿ ಬೇಕು, ಮಕ್ಕಳ ವಿದ್ಯಾಭ್ಯಾಸ ಮುಖ್ಯವೇ ಹೊರತು ರಾಜಕೀಯ ಎಲ್ಲ ಆಮೇಲೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್‌ ಕುರಿತ ಹೈಕೋರ್ಟ್‌ ತೀರ್ಪನ್ನು ನಾನು ಒಪ್ಪಲ್ಲ: 15 ಟ್ವೀಟ್‌ ಮಾಡಿದ ಓವೈಸಿ

    ಮತ್ತೊಂದೆಡೆ ಹಿಜಬ್ ಕುರಿತಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಿಜಬ್ ವಿವಾದದಲ್ಲಿ ನನ್ನ ಪ್ರಮುಖ ಕಾಳಜಿ ಶಿಕ್ಷಣ, ಕಾನೂನು ಮತ್ತು ಸುವ್ಯವಸ್ಥೆಯಾಗಿದೆ. ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಆದರೆ ಶಿಕ್ಷಣ, ಕಾನೂನು ಮತ್ತು ಸುವ್ಯವಸ್ಥೆ, ಕೋಮು ಸೌಹಾರ್ದತೆಯ ಜವಾಬ್ದಾರಿ ಇನ್ನೂ ಕರ್ನಾಟಕ ಸರ್ಕಾರದ ಮೇಲಿದೆ ಎಂದಿದ್ದಾರೆ. ಇದನ್ನೂ ಓದಿ: ಕೋರ್ಟ್ ತೀರ್ಪು ಬೆನ್ನಲ್ಲೇ ಪರೀಕ್ಷೆ ಬಿಟ್ಟು ಹೊರ ನಡೆದ ವಿದ್ಯಾರ್ಥಿನಿಯರು

    ನಾನು ಕರ್ನಾಟಕ ಸರ್ಕಾರಕ್ಕೆ ಪ್ರಬುದ್ಧ ನಾಯಕತ್ವವನ್ನು ಪ್ರದರ್ಶಿಸಲು ಮತ್ತು ಖಚಿತಪಡಿಸಿಕೊಳ್ಳಲು ಮನವಿ ಮಾಡುತ್ತೇನೆ.
    1) ಶಾಲೆಗಳು ಮತ್ತು ಕಾಲೇಜುಗಳ ಸುತ್ತಮುತ್ತ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸಬೇಕಾಗುತ್ತದೆ.
    2) ಧರ್ಮ ಮತ್ತು ಲಿಂಗದ ಲೆಕ್ಕದ ಮೇಲೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗುವುದಿಲ್ಲ.
    3) ಕೋಮು ಸೌಹಾರ್ದತೆ ಇದೆ.

     

  • ಇವತ್ತಿನ ತೀರ್ಪು ನ್ಯಾಯಯುತವಾಗಿದೆ: ನಟಿ ತಾರಾ

    ಇವತ್ತಿನ ತೀರ್ಪು ನ್ಯಾಯಯುತವಾಗಿದೆ: ನಟಿ ತಾರಾ

    ಗದಗ: ಶಾಲೆಯಲ್ಲಿ ಎಲ್ಲವನ್ನು ಸಮನಾಗಿ ಕಾಣುವುದೇ ಸಮವಸ್ತ್ರ. ಇವತ್ತಿನ ತೀರ್ಪು ನ್ಯಾಯಯುತವಾಗಿದೆ ಎಂದು ಚಿತ್ರನಟಿ ತಾರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಹಿಜಬ್ ತೀರ್ಪು ಕುರಿತಂತೆ ಗದಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ನಮ್ಮ ಜಾತಿ, ಧರ್ಮ ಆಚರಣೆ ಮಾಡಲಿ. ಎಲ್ಲಾ ಜಾತಿ ಧರ್ಮ ಒಗ್ಗೂಡಿ ಹೋಗುವುದು ಅಂದರೆ ಅದೇ ಭಾರತ ದೇಶ. ಶಾಲೆಯಲ್ಲಿ ಸಮವಸ್ತ್ರ ಅಂದರೆ ಬಡವ, ಶ್ರೀಮಂತ, ಜಾತಿ ಮತ ಬೇಧ ಏನೂ ಇಲ್ಲದೆ ಕೂತು ಪಾಠ ಕಲಿಯುವ ಒಂದು ದೇವಾಲಯವಾಗಿದೆ. ಒಂದು ದೇವಾಲಯದಲ್ಲಿ ಜಾತಿ-ಧರ್ಮ ಪಾಲಿಸಬಾರದು. ಶಾಲೆಯಲ್ಲಿ ಎಲ್ಲವನ್ನು ಸಮನಾಗಿ ಕಾಣುವುದೇ ಸಮವಸ್ತ್ರ. ಇವತ್ತಿನ ತೀರ್ಪು ನ್ಯಾಯಯುತವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನವರ ಪ್ರಚೋದನೆ ಮಾತುಗಳನ್ನು ಕೇಳ್ಬೇಡಿ, ನಿಮಗೆ ನಿಮ್ಮ ಭವಿಷ್ಯ ಮುಖ್ಯ: ರೇಣುಕಾಚಾರ್ಯ

    ಇದೇ ವೇಳೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತಂತೆ ಪ್ರತಿಕ್ರಿಯಿಸಿದ ಅವರು, ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡಿದೆ. ಹಿಂದೂ ರಾಷ್ಟ್ರ ಎಂದು ಇಡೀ ಪ್ರಪಂಚದಲ್ಲಿ ಇರುವ ಏಕೈಕ ರಾಷ್ಟ್ರ ಭಾರತ. ಈಗಲೂ ನಾವು ಎಚ್ಚೆತ್ತುಕೊಳ್ಳದೇ ಹೋದರೆ ನಮಗೆ ಕಾಶ್ಮೀರದ ಒಂದು ಘೋರವಾದ ನಿಜ ಇಡೀ ರಾಷ್ಟ್ರಕ್ಕೆ ಹಬ್ಬುತ್ತಿತ್ತೇನೋ.. ಸದ್ಯ ನಮ್ಮ ಪುಣ್ಯ ನಾವು ಎಚ್ಚೆತ್ತುಕೊಂಡಿದ್ದೇವೋ ಎನಿಸುತ್ತದೆ. ಇಂದಿಗೂ ಸಹ ಮಹಿಳೆಯ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ನೋಡಿದರೆ, ನಾವು ಇನ್ನೂ ಸಂಪೂರ್ಣವಾಗಿ ಎಚ್ಚೆತ್ತುಕೊಳ್ಳಬೇಕು ಅನಿಸುತ್ತದೆ. ದಯವಿಟ್ಟು ಸಿನಿಮಾವನ್ನು ರಾಜಕೀಯ ಮಾಡಬೇಡಿ ಎಂದಿದ್ದಾರೆ. ಇದನ್ನೂ ಓದಿ: ಮಂಗಳವಾರ ಬೆಳಗ್ಗೆ 10:30ಕ್ಕೆ ಹಿಜಬ್‌ ಹೈಕೋರ್ಟ್‌ ತೀರ್ಪು

    ಸಿನಿಮಾ ಎನ್ನುವುದು ಒಂದು ಕಲೆ. ಸಾಹಸ, ಸಂಗೀತ, ನೃತ್ಯ, ಮಾತುಕತೆ, ಸತ್ಯ ಎಲ್ಲವೂ ಒಂದುಗೂಡಿದರೆ ಸಿನಿಮಾವಾಗುತ್ತದೆ. ಕಲೆಗೆ ಎಲ್ಲರನ್ನು ಒಟ್ಟಿಗೆ ಕೂರಿಸಿಕೊಂಡು ಒಟ್ಟಿಗೆ ಕರೆದುಕೊಂಡು ಹೋಗುವ ದೊಡ್ಡ ಶಕ್ತಿ ಇದೆ. ಸಿನಿಮಾಕ್ಕೆ ಜಾತಿ, ಮತ, ಧರ್ಮ, ರಾಜಕೀಯವನ್ನು ಸೇರಿಸಬೇಡಿ. ದಿ ಕಾಶ್ಮೀರ್ ಫೈಲ್ಸ್ ರಾಜಕೀಯ ಸಿನಿಮಾವಲ್ಲ. ಇದೊಂದು ಸತ್ಯ ಘಟನೆಗಳ ಬಿಚ್ಚಿಟ್ಟ ಸಿನಿಮಾವಾಗಿದೆ. ಯಾವುದೇ ರೀತಿಯ ಸುಳ್ಳನ್ನು ತೋರಿದೇ, ಯಾವುದನ್ನು ಹೆಚ್ಚಿಗೆ ತೋರಿಸದೇ ಆ ಕ್ಷಣದಲ್ಲಿ ಏನು ನಡೆದಿದೆ ಅದನ್ನು ಮಾತ್ರ ಸಿನಿಮಾದಲ್ಲಿ ಬಿಚ್ಚಿಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

  • ಮಂಗಳವಾರ ಬೆಳಗ್ಗೆ 10:30ಕ್ಕೆ ಹಿಜಬ್‌ ಹೈಕೋರ್ಟ್‌ ತೀರ್ಪು

    ಮಂಗಳವಾರ ಬೆಳಗ್ಗೆ 10:30ಕ್ಕೆ ಹಿಜಬ್‌ ಹೈಕೋರ್ಟ್‌ ತೀರ್ಪು

    ಬೆಂಗಳೂರು: ತರಗತಿಗಳಲ್ಲಿ ಹಿಜಬ್ ಧರಿಸಬೇಕೇ?ಬೇಡವೇ ಎನ್ನುವ ವಿವಾದದ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ್ದ ಹೈಕೋರ್ಟ್‍ ಮಂಗಳವಾರ ಬೆಳಗ್ಗೆ 10:30ಕ್ಕೆ ತೀರ್ಪು ಪ್ರಕಟಿಸಲಿದೆ.

    ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ತೀರ್ಪು ಪ್ರಕಟಿಸಲಿದೆ.

    ಹಿಜಬ್‌ ನಿಷೇಧಕ್ಕೆ ಸಂಬಂಧಿಸಿದಂತೆ  11 ದಿನಗಳ ಕಾಲ ಎರಡು ಕಡೆಯ ವಾದ ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಫೆ.25 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.