Tag: ಹಿಜಬ್ ವಿವಾದ

  • ಇರಾನ್‌ನಲ್ಲಿ ಹಿಜಬ್‌ ವಿವಾದ ಮತ್ತೆ ಮುನ್ನೆಲೆಗೆ – ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದ ಯುವತಿ ಅರೆಸ್ಟ್‌

    ಇರಾನ್‌ನಲ್ಲಿ ಹಿಜಬ್‌ ವಿವಾದ ಮತ್ತೆ ಮುನ್ನೆಲೆಗೆ – ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದ ಯುವತಿ ಅರೆಸ್ಟ್‌

    ಟೆಹ್ರಾನ್‌: ಕಡ್ಡಾಯವಾಗಿ ಹಿಜಬ್‌ ಧರಿಸಬೇಕೆಂಬ ವಸ್ತ್ರ ಸಂಹಿತೆ ವಿರುದ್ಧ ಇರಾನ್ ವಿಶ್ವವಿದ್ಯಾನಿಲಯದ‌ (Islamic Azad University) ಆವರಣದಲ್ಲಿ ಒಳ ಉಡುಪು ಧರಿಸಿ ಪ್ರತಿಭಟನೆ (Iranian Woman Protest) ನಡೆಸಿದ್ದ ಇರಾನ್‌ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಟೆಹ್ರಾನ್‌ನ ಇಸ್ಲಾಮಿಕ್‌ ಆಜಾಜ್‌ ವಿವಿಯಲ್ಲಿ ಒಳಉಡುಪು ಧರಿಸಿಕೊಂಡು ಸುತ್ತಾಡುವ ಮೂಲಕ ವಿಭಿನ್ನವಾಗಿ ಪ್ರತಿಭಟಿಸಿದ್ದ ಯುವತಿಯ ವೀಡಿಯೋ ಒಂದು ದಿನದ ಹಿಂದೆಯಷ್ಟೇ ವೈರಲ್‌ ಆಗಿತ್ತು. ಈ ಬೆನ್ನಲ್ಲೇ ಯುವತಿಯ ಪರ – ವಿರೋಧ ಚರ್ಚೆಗಳೂ ಹುಟ್ಟಿಕೊಂಡಿವೆ. ಇದನ್ನೂ ಓದಿ: US Election 2024 | 7 ಕೋಟಿಗೂ ಹೆಚ್ಚು ಜನರಿಂದ ಮೊದಲೇ ಮತದಾನ – Swing ರಾಜ್ಯಗಳಲ್ಲಿ ಟ್ರಂಪ್‌ ಮುನ್ನಡೆ

    ಇರಾನ್‌ನಲ್ಲಿ ಮುಸ್ಲಿಂ ಸಮುದಾಯದ (Muslim Community) ಮೂಲಭೂತವಾದಿಗಳು ಆಚರಣೆಯಲ್ಲಿಟ್ಟಿರುವ ಕಟ್ಟುನಿಟ್ಟಾದ ವಸ್ತ್ರಸಂಹಿತೆ ಹಾಗೂ ನೈತಿಕ ಪೊಲೀಸ್‌ಗಿರಿ ವಿರುದ್ಧ ಪ್ರತಿಭಟಿಸಲೆಂದೇ ಯುವತಿ ಒಳ ಉಡುಪಿನಲ್ಲಿ ಸಾರ್ವಜನಿಕವಾಗಿ ತಿರುಗಾಡಿದ್ದಾರೆ ಎಂದು ವರದಿಯಾಗಿತ್ತು. ಆದ್ರೆ ಇಸ್ಲಾಮಿಕ್‌ ವಿಶ್ವವಿದ್ಯಾಲಯದ ವಕ್ತಾರ ಅಮೀರ್‌ ಮಹಜೋಬ್, ಕ್ಯಾಂಪಸ್‌ನಲ್ಲಿ ಒಳ ಉಡುಪಿನಲ್ಲಿ ತಿರುಗಾಡಿರುವ ಯುವತಿ ಮಾನಸಿಕ ಅಸ್ವಸ್ಥಳಾಗಿದ್ದಾಳೆ ಎಂದು ಹೇಳಿದ್ದರು. ಇದನ್ನೂ ಓದಿ: Canada | ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ಖಲಿಸ್ತಾನಿ ಗುಂಪು ಅಟ್ಯಾಕ್‌ – ಜಸ್ಟಿನ್‌ ಟ್ರುಡೋ ಖಂಡನೆ

    ಯುವತಿಯೊಬ್ಬಳು ಸಾರ್ವಜನಿಕವಾಗಿ ಒಳ ಉಡುಪಿನಲ್ಲಿ ಕಾಣಿಸಿಕೊಳ್ಳುವುದು ಇರಾನ್‌ ಮಹಿಳೆಯರಿಗೆ ಊಹಿಕೊಳ್ಳಲು ಅಸಾಧ್ಯವಾದ ಕೆಲಸ. ಆದರೆ, ಹಿಜಬ್‌ ಕಡ್ಡಾಯ ಎಂಬ ಮೂರ್ಖತನಕ್ಕೆ ಇದು ಸರಿಯಾದ ಪ್ರತಿಕ್ರಿಯೆಯಾಗಿದೆ ಎಂದು ಲೈಲಾ ಎನ್ನುವ ಇರಾನ್‌ ನಿವಾಸಿಯ ʻಎಕ್ಸ್‌ʼ ಖಾತೆಯಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದರು. ಇದನ್ನೂ ಓದಿ: ಇರಾನ್‌ನಲ್ಲಿ ಹಿಜಬ್‌ ವಿರೋಧಿಸಿ ಪ್ರತಿಭಟನೆ – 6 ವಾರಗಳಲ್ಲಿ 14,000 ಮಂದಿ ಬಂಧನ

    2 ವರ್ಷಗಳ ಹಿಂದಿನ ಹಿಂಸಾಚಾರ ನೆನಪಿದೆಯೆ?
    2022ರಲ್ಲಿ ಇರಾನ್‌ ಪೊಲೀಸರ ವಶದಲ್ಲಿದ್ದ ಮಹ್ಸಾ ಅಮಿನಿಯಾ ಎಂಬ ಇರಾನ್‌ ಮೂಲದ ಯುವತಿಯು (ಹಿಜಬ್‌ ಧರಿಸದ ಅಪರಾಧ ಹಿನ್ನೆಲೆಯಲ್ಲಿ ಬಂಧಿತೆ) ಮೃತಪಟ್ಟ ಘಟನೆಯ ನಂತರ ಹಿಜಬ್‌ ವಿರುದ್ಧದ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿತ್ತು. ಪ್ರತಿಭಟನಾಕಾರರ ಮೇಲೆ ಗುಂಡಿಕ್ಕುವಂತಹ ನಿರ್ದಾಕ್ಷಿಣ್ಯ ಕ್ರಮಗಳ ಮೂಲಕ ಕ್ರಮೇಣ ಜನರ ಆಕ್ರೋಶವನ್ನು ತಣ್ಣಗಾಗಿಸಲಾಗಿತ್ತು. ಸಾವಿರಾರು ಮಂದಿಯನ್ನು ಬಂಧಿಸಿ ಇರಾನ್‌ ಸರ್ಕಾರ ಜೈಲಿಗಟ್ಟಿತ್ತು. ಆ ಬಳಿಕ ಇರಾನ್‌ನಲ್ಲಿ ಪ್ರತಿಭಟನೆ ಕಾವು ತಣ್ಣಗಾಗಿತ್ತು. ಇದೀಗ ಯುವತಿ ಒಳುಡುಪು ಧರಿಸಿ ತಿರುಗಾಡಿದ ಹಿನ್ನೆಲೆ ಮತ್ತೆ ಹಿಜಬ್‌ ವಿವಾದ ಮುನ್ನೆಲೆಗೆ ಬಂದಿದೆ.

  • ಹಿಜಬ್ ವಿವಾದ ಎಫೆಕ್ಟ್: ಕುಂದಾಪುರ ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರ

    ಹಿಜಬ್ ವಿವಾದ ಎಫೆಕ್ಟ್: ಕುಂದಾಪುರ ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಕ ಪ್ರಶಸ್ತಿ ತಡೆಹಿಡಿದ ಸರ್ಕಾರ

    ಉಡುಪಿ: ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾದ ಪ್ರಾಂಶುಪಾಲನಿಗೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿಗೆ ಆಕ್ಷೇಪ ವ್ಯಕ್ತವಾಗಿದ್ದು, ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ.

    ಇಂದು (ಸೆ.5) ಶಿಕ್ಷಕರ ದಿನಾಚರಣೆ (Teachers Day) ಹಿನ್ನೆಲೆ ವಿವಿಧ ಶಿಕ್ಷಕರಿಗೆ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದೇ ಹಿನ್ನೆಲೆಯಲ್ಲಿ ಕುಂದಾಪುರ (Kundapura) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಈ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಪ್ರಶಸ್ತಿ ನೀಡುವ ಕುರಿತು ಸರ್ಕಾರ ತಡೆ ಹಿಡಿದಿದೆ.ಇದನ್ನೂ ಓದಿ: 2023-24ರಲ್ಲಿ ಅತಿಹೆಚ್ಚು ತೆರಿಗೆ ಪಾವತಿಸಿದ ಸೆಲೆಬ್ರಿಟಿಗಳು ಇವರೇ – ಕಿಂಗ್‌ ಕೊಹ್ಲಿ, ಬಾದ್‌ ಶಾಗೆ ಅಗ್ರಸ್ಥಾನ

    ಎರಡು ವರ್ಷಗಳ ಹಿಂದೆ ನಡೆದಿದ್ದ ಹಿಜಬ್ ವಿವಾದದ (Hijab Contraversy) ಪರಿಣಾಮ ರಾಜ್ಯ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿರುವಾಗ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ ಅವರಿಗೆ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಆದರೆ ಇದೀಗ ಕಾಂಗ್ರೆಸ್ (Congress) ಸರ್ಕಾರ ಇದಕ್ಕೆ ತಡೆ ನೀಡಿದೆ.

    ಏನಿದರ ಹಿನ್ನೆಲೆ:
    ಎರಡು ವರ್ಷಗಳ ಹಿಂದೆ ನಡೆದಿದ್ದ ಹಿಜಬ್ ವಿವಾದದ ಪರಿಣಾಮ ರಾಜ್ಯ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದ್ದು, ಹಿಜಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಕಾಲೇಜು ಗೇಟ್ ಬಳಿ ನಿಲ್ಲಿಸಿದ್ದರು. ಆ ಫೋಟೊ ವೈರಲ್ ಆಗಿತ್ತು. ಪ್ರಾಂಶುಪಾಲರ ಪ್ರಶಸ್ತಿ ಹಿಂಪಡೆಯುವಂತೆ ಕೆಲ ಪ್ರಗತಿಪರರು ಒತ್ತಡ ಹಾಕಿದ್ದರು. ಒತ್ತಡಕ್ಕೆ ಮಣಿದ ಸರ್ಕಾರ ಪ್ರಶಸ್ತಿಯನ್ನು ತಡೆಹಿಡಿದಿದೆ.ಇದನ್ನೂ ಓದಿ: ಅಮೆರಿಕದ ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ – ಇಬ್ಬರು ಶಿಕ್ಷಕರು ಸೇರಿ ನಾಲ್ವರು ಸಾವು

  • ಹಿಜಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ಆಗ ನಮ್ಮ ದೇಶದ ಮಹತ್ವ ಗೊತ್ತಾಗುತ್ತೆ: ಯು.ಟಿ.ಖಾದರ್

    ಹಿಜಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ಆಗ ನಮ್ಮ ದೇಶದ ಮಹತ್ವ ಗೊತ್ತಾಗುತ್ತೆ: ಯು.ಟಿ.ಖಾದರ್

    ಮಂಗಳೂರು: ಹಿಜಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ ಎಂದು ವಿಧಾನಸಭಾ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಹಿಜಬ್ ವಿದ್ಯಾರ್ಥಿನಿಯರಿಗೆ ತಿರುಗೇಟು ನೀಡಿದರು.

    ಮಂಗಳೂರಿನಲ್ಲಿ ಹಿಜಬ್ ವಿವಾದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ಪಾಕಿಸ್ತಾನ, ಸೌದಿಯಂತಹ ದೇಶಗಳಿಗೆ ಹೋಗಲಿ. ಆಗ ಅವರಿಗೆ ನಮ್ಮ ದೇಶದ ಮಹತ್ವ ಗೊತ್ತಾಗುತ್ತೆ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಖಾದರ್ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ, ಅಡ್ಯಾರ್‌ಗೆ ಹೋಗಿ ಕ್ರಿಕೆಟ್ ಆಡ್ತಿದ್ದಾರೆ- ಹಿಜಬ್ ವಿದ್ಯಾರ್ಥಿನಿ ಅಸಮಾಧಾನ

    ನಮ್ಮ ದೇಶದಲ್ಲಿ ಬೇಕಾದ ಹಾಗೆ ಮಾತನಾಡೋದು, ಡಿಸಿಯನ್ನು ಭೇಟಿಯಾಗೋದು, ಪ್ರೆಸ್ ಮೀಟ್ ಎಲ್ಲ ಮಾಡಬಹುದು. ಆದರೆ ಅದನ್ನೇ ವಿದೇಶಕ್ಕೆ ಹೋಗಿ ಮಾತನಾಡಲಿ. ಇಲ್ಲಿ ಹುಲಿಯ ಹಾಗೆ ಇದ್ದವರು ಅಲ್ಲಿ ಬೆಕ್ಕಿನ ತರಹ ಆಗುತ್ತಾರೆ. ನಮ್ಮ ದೇಶದ ಕಾನೂನು ನೀಡಿದ ಅವಕಾಶದ ಮಹತ್ವ ಗೊತ್ತಾಗುತ್ತದೆ. ಇಲ್ಲಿ ಸಿಗುವ ಸ್ವಾತಂತ್ರ್ಯದ ಅರಿವು ಆಗುತ್ತದೆ ಎಂದು ಕಿಡಿಕಾರಿದರು.

  • ತುಮಕೂರಲ್ಲಿ ಮುಸ್ಲಿಂ ಸಮುದಾಯದ ಅಂಗಡಿ ಮುಂಗಟ್ಟು ಬಂದ್

    ತುಮಕೂರಲ್ಲಿ ಮುಸ್ಲಿಂ ಸಮುದಾಯದ ಅಂಗಡಿ ಮುಂಗಟ್ಟು ಬಂದ್

    ತುಮಕೂರು: ಹಿಜಬ್ ವಿವಾದದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಇದರ ಹಿನ್ನೆಲೆಯಲ್ಲಿ ಮುಸ್ಲಿಂ ಸಂಘಟನೆಗಳು ಇಂದು ಕರ್ನಾಟಕ ಬಂದ್‍ಗೆ ಕರೆ ನೀಡಿದ್ದಾರೆ.

    ಹೈಕೋರ್ಟ್ ತೀರ್ಪು ಸಂಬಂಧಿಸಿದಂತೆ ಮುಸ್ಲಿಂ ವ್ಯಾಪಾರಸ್ಥರು ನಗರದಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಮಾಡಿದ್ದಾರೆ. ಕಾಲ್ ಟ್ಯಾಕ್ಸ್ ಸರ್ಕಲ್, ಬಿ.ಜಿ.ಪಾಳ್ಯ ಸರ್ಕಲ್, ಗುಬ್ಬಿ ಗೇಟ್, ಕುಣಿಗಲ್ ರಿಂಗ್ ರಸ್ತೆಗಳಲ್ಲಿನ ಪ್ರಮುಖ ಗ್ಯಾರೇಜ್, ಆಟೋ ಮೊಬೈಲ್ಸ್ ಅಂಗಡಿಗಳು ಬಂದ್ ಆಗಿದ್ದು, ಉಳಿದಂತೆ ಯಥಾಸ್ಥಿತಿಯಲ್ಲಿ ವ್ಯಾಪಾರ ವಹಿವಾಟು ನಡೆಯುತ್ತಿದೆ. ಇದನ್ನೂ ಓದಿ: ಉಕ್ರೇನ್‌ ಮೇಯರ್‌ ಕಿಡ್ನಾಪ್ ಮಾಡಿದ ರಷ್ಯಾ ಸೇನೆ

    ಹಿಜಬ್ ವಿವಾದದ ಬಗ್ಗೆ ಹೈಕೋರ್ಟ್ ತೀರ್ಪು ನೀಡಿದ್ದು, ಸರ್ಕಾರದ ವಸ್ತ್ರ ಸಂಹಿತೆಯನ್ನು ಎತ್ತಿ ಹಿಡಿದಿದೆ. ಹೀಗಾಗಿ ನಮಗೆ ಕಾನೂನಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಮುಸಲ್ಮಾನ್ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಷ್ಯಾದ ಪಡೆಯಿಂದ ಕಿಡ್ನಾಪ್ ಆಗಿದ್ದ ಉಕ್ರೇನ್‍ ಮೇಯರ್ ಬಿಡುಗಡೆ

  • ಹಿಜಬ್‌ ವಿವಾದದ ಹಿಂದೆ ಕಾಣದ ಕೈಗಳ ಕೈವಾಡ: ಹೈಕೋರ್ಟ್‌ ಶಂಕೆ

    ಹಿಜಬ್‌ ವಿವಾದದ ಹಿಂದೆ ಕಾಣದ ಕೈಗಳ ಕೈವಾಡ: ಹೈಕೋರ್ಟ್‌ ಶಂಕೆ

    ಬೆಂಗಳೂರು: ಒಟ್ಟು 129 ಪುಟಗಳ ಹೈಕೋರ್ಟ್ ತೀರ್ಪಿನಲ್ಲಿ ಹಿಜಬ್ ವಿವಾದದ ಹಿಂದೆ ಕಾಣದ ಕೈಗಳ ಕೈವಾಡವಿರುವ ಬಗ್ಗೆಯೂ ಪೂರ್ಣ ಪೀಠ ಶಂಕೆ ವ್ಯಕ್ತಪಡಿಸಿದೆ. ಸಮಾಜದ ಸಾಮರಸ್ಯ ಕದಡುವ ಹುನ್ನಾರ ನಡೆದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ.

    126 ಮತ್ತು 127ನೇ ಪುಟದಲ್ಲಿ ದಿಢೀರ್‌ ಆಗಿ ಈ ವಿವಾದ ಯಾಕೆ ಸೃಷ್ಟಿಯಾಯಿತು ಎಂದು ಹೈಕೋರ್ಟ್‌ಪ್ರಶ್ನಿಸಿದೆ. ಇದನ್ನೂ ಓದಿ: ಹಿಜಬ್‌ ಧರಿಸುವುದು ಇಸ್ಲಾಂ ಧರ್ಮದಲ್ಲಿ ಅತ್ಯಗತ್ಯ: ಹಿರಿಯ ವಕೀಲ ಎ.ಎಂ.ಧಾರ್‌

    ತೀರ್ಪಿನಲ್ಲಿ ಏನಿದೆ?
    2004ರಿಂದಲೂ ಸಮವಸ್ತ್ರ ಕಡ್ಡಾಯ ಆದೇಶವಿದ್ದು ಈ ವಿವಾದ ಇದ್ದಕ್ಕಿದ್ದಂತೆ ಚಾಲ್ತಿಗೆ ಬಂದಿದ್ಯಾಕೆ ಎಂದು ಪ್ರಶ್ನಿಸಿದೆ. ಸಮಾಜದಲ್ಲಿ ಶಾಂತಿ ಕದಡುವ ಯತ್ನದ ಬಗ್ಗೆ ಅನುಮಾನವಿದೆ. ಕಾಣದ ಕೈಗಳ ಕೈವಾಡ ಇರುವ ಬಗ್ಗೆ ಶಂಕೆ ಇದೆ. ಇಡೀ ಪ್ರಕರಣದಲ್ಲಿ ನಮಗೆ ದಿಗ್ಬ್ರಮೆ ಆಗುತ್ತಿದೆ. ಇದನ್ನೂ ಓದಿ: ನಾವು ಕುರಾನ್ ಫಾಲೋ ಮಾಡುತ್ತೇವೆ, ನಮ್ಮ ನಿಲುವಿನಲ್ಲಿ ಕಾಂಪ್ರಮೈಸ್ ಇಲ್ಲ: ಆಲಿಯಾ ಅಸ್ಸಾ

    ಫೆ. 5ರ ಸುತ್ತೋಲೆಗೆ ಮುನ್ನವೇ ವಿದ್ಯಾರ್ಥಿನಿಯರಿಂದ ಪಿಐಎಲ್ ಸಲ್ಲಿಕೆಯಾಗಿದೆ. 2021ರ ಡಿಸೆಂಬರ್ ಮೊದಲ ವಾರದಲ್ಲೇ ಕಾಲೇಜಲ್ಲಿ ಹಿಜಬ್ ವಿವಾದ ಸೃಷ್ಟಿಗೆ ಯತ್ನ ನಡೆದಿದೆ. ಅರ್ಜಿದಾರರ ಕಾಲೇಜಿನ ಪ್ರಾಂಶುಪಾಲರಿಗೆ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದ್ದು ಈ ವಿಷಯದಲ್ಲಿ ಸಂಯಮ ಪಾಲಿಸಲು ಬಯಸುತ್ತೇವೆ.

  • ಹಿಜಬ್ ತೀರ್ಪು ಬಗ್ಗೆ ನಾನು ಮಾತನಾಡಲ್ಲ: ಸಿದ್ದರಾಮಯ್ಯ

    ಹಿಜಬ್ ತೀರ್ಪು ಬಗ್ಗೆ ನಾನು ಮಾತನಾಡಲ್ಲ: ಸಿದ್ದರಾಮಯ್ಯ

    ಬೆಂಗಳೂರು: ರಾಜ್ಯದಲ್ಲಿ ಎದ್ದಿದ್ದ ಹಿಜಬ್ ವಿವಾದಕ್ಕೆ ಹೈಕೋರ್ಟ್ ಬ್ರೇಕ್ ನೀಡಿದೆ. ನಾನು ತೀರ್ಪು ಪೂರ್ತಿ ನೋಡಿಲ್ಲ. ಹೀಗಾಗಿ ಕೋರ್ಟ್ ತೀರ್ಪು ಬಗ್ಗೆ ನಾನು ಮಾತನಾಡಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಖಳಿದ್ದಾರೆ.

    ವಿಧಾನಸೌಧದಲ್ಲಿ ಹೈಕೋರ್ಟ್ ತೀರ್ಪು ಕುರಿತ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ತೀರ್ಪು ಪೂರ್ತಿ ನೋಡಿಲ್ಲ. ಪೂರ್ತಿ ನೋಡಿದ ಮೇಲೆ ಪ್ರತಿಕ್ರಿಯಿಸ್ತೇನೆ. ಹಿಜಬ್ ಹಾಕೋದ್ರಿಂದ ಯಾರಿಗೆ ಸಮಸ್ಯೆ ಅಂತ ನಾವು ಕೇಳಿದ್ದೆವು. ಅಲ್ಲದೆ ಹಾಕುವವರಿಗೆ ಅವಕಾಶ ಕೊಡಿ ಅಂತ ಹೇಳಿದ್ದೆವು ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹಿಜಬ್‌ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್‌ ಐತಿಹಾಸಿಕ ತೀರ್ಪು

    ಈಗ ನ್ಯಾಯಲಯ ತೀರ್ಪು ನೀಡಿದೆ. ಪೂರ್ತಿ ಅಧ್ಯಯನ ಮಾಡಿ ಮಾತನಾಡ್ತೇನೆ. ಹೈಕೋರ್ಟ್ ತೀರ್ಪು ಬಂದಿದೆ. ಕೋರ್ಟ್ ತೀರ್ಪು ಬಗ್ಗೆ ನಾನು ಮಾತಾಡಲ್ಲ. ನಾನು ತೀರ್ಪಿನ ಬಗ್ಗೆ ಪೂರ್ಣ ಓದಿಲ್ಲ ಎಂದರು. ಇದನ್ನೂ ಓದಿ: ಮಂಗಳವಾರ ಬೆಳಗ್ಗೆ 10:30ಕ್ಕೆ ಹಿಜಬ್‌ ಹೈಕೋರ್ಟ್‌ ತೀರ್ಪು

    ಇದೇ ವೇಳೆ ಕಾಂಗ್ರೆಸ್ ಬೇಕು ಅಂತಲೇ ಪ್ರಚೋದನೆ ಮಾಡಿತ್ತು ಅನ್ನೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾವೇನು ಹೇಳಿದ್ದೋ ಹಿಜಬ್ ನಿಂದ ಯಾರಿಗೂ ತೊಂದರೆ ಆಗಲ್ಲ. ಯಾರಿಗೂ ನಷ್ಟ ಕೂಡ ಆಗಲ್ಲ. ಹಾಕಿಕೊಳ್ಳಲಿ ಬಿಡಿ ಅಂತ ಹೇಳಿದ್ದೋ. ಅವರು ಹಿಜಬ್ ಜೊತೆಗೆ ಯೂನಿಫಾರ್ಮ್ ಕೂಡ ಹಾಕೋದಾಗಿ ಹೇಳಿದ್ರು.ಕೋರ್ಟ್ ಆದೇಶ, ಕೋರ್ಟ್ ಆದೇಶ ಅಷ್ಟೇ ಎಂದು ಹೇಳಿದರು.

  • ಹಿಜಬ್ ವಿವಾದ- ಈ ಹಿಂದೆ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಹೇಗಿತ್ತು ವಾದ-ಪ್ರತಿವಾದ..?

    ಹಿಜಬ್ ವಿವಾದ- ಈ ಹಿಂದೆ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಹೇಗಿತ್ತು ವಾದ-ಪ್ರತಿವಾದ..?

    ಬೆಂಗಳೂರು: ರಾಜ್ಯದಲ್ಲಿ ಧರ್ಮ ಸಂಘರ್ಷಕ್ಕೆ ಕಾರಣವಾಗಿದ್ದ ಹಿಜಬ್ ವಿವಾದದ ತೀರ್ಪು ಇಂದು ಪ್ರಕಟವಾಗಲಿದೆ. ಹಿಜಬ್ ಧಾರ್ಮಿಕ ಹಕ್ಕಿಗಾಗಿ ಹೈಕೋರ್ಟ್ ಮೆಟ್ಟಿಲೇರುವ ವಿದ್ಯಾರ್ಥಿಗಳು ಮತ್ತು ಇಡೀ ದೇಶ ಹೈಕೋರ್ಟ್ ತೀರ್ಪಿನ ಮೇಲೆ ಕಣ್ಣಿಟ್ಟಿದೆ.

    ರಾಜ್ಯದಲ್ಲಿ ಹಿಜಬ್ ವಿವಾದದ ಕಿಡಿ ಹೊತ್ತಿದ್ದೇ ಉಡುಪಿಯ ಸರ್ಕಾರಿ ಪಿಯು ಕಾಲೇಜಿನಿಂದ. 2021 ಡಿಸೆಂಬರ್ ತಿಂಗಳಿನಲ್ಲಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಹಿಜಬ್ ಬೇಡಿಕೆ ಶುರುವಾಗಿತ್ತು. ಮನವಿ ಪತ್ರಗಳಿಗೆ ಪುರಸ್ಕಾರ ನೀಡದ ಪ್ರಾಂಶುಪಾಲರು, ಹಿಜಬ್ ಧರಿಸಿದ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರಗೆ ಹಾಕಿದ್ದರು. ಡಿಸೆಂಬರ್ 31ಕ್ಕೆ ವಿದ್ಯಾರ್ಥಿನಿಯರು ಕಾಲೇಜಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

    ಇದಾಗಿ ಒಂದು ತಿಂಗಳ ನಂತರ ಅಂದ್ರೆ ಜನವರಿ 31ರಂದು ಹೈಕೋರ್ಟ್‍ನಲ್ಲಿ ವಿದ್ಯಾರ್ಥಿನಿ ಅಲ್ಮಾಸ್ ದೂರು ನೀಡಿದ್ದರು. ಇದಾದ ಬಳಿಕ ರಾಜ್ಯದಲ್ಲಿ ಧರ್ಮ ಸಂಘರ್ಷವೇ ಶುರುವಾಯ್ತು. ಇಷ್ಟೆಲ್ಲ ವಿವಾದ ಎಬ್ಬಿಸಿರುವ ಹಿಜಬ್ ಕುರಿತ ತೀರ್ಪು ಬರಲಿದೆ. ತೀರ್ಪು ಯಾರ ಪರವೇ ಬಂದರೂ ಸುಪ್ರೀಂಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.

    SUPREME COURT

    ಹೇಗಿತ್ತು ವಾದ- ಪ್ರತಿವಾದ..?
    ಕಾಲೇಜಿಗೆ ದಾಖಲಾದಾಗಿನಿಂದ ಹಿಜಬ್ ಧರಿಸ್ತಿದ್ದಾರೆ. ಸಮವಸ್ತ್ರ ಬಣ್ಣದ ಹಿಜಬ್‍ನ್ನೇ ಧರಿಸ್ತಿದ್ದಾರೆ. ಹಿಜಬ್, ಬುರ್ಖಾ ಧರಿಸಬೇಕು ಎಂದು ಧರ್ಮಗ್ರಂಥದಲ್ಲಿ ಇದೆ. ಶಾಸಕರಿಗೆ ಸಮವಸ್ತ್ರದ ಅಧಿಕಾರ ನೀಡಿದ್ದು ಸರಿಯಲ್ಲ. ಸರ್ಕಾರ ತನ್ನ ಜವಾಬ್ದಾರಿಯನ್ನು ಇತರರಿಗೆ ಹಸ್ತಾಂತರ ಮಾಡುವಂತಿಲ್ಲ. ಕೇರಳ, ಮದ್ರಾಸ್, ಬಾಂಬೆ ಕೋರ್ಟ್‍ಗಳ ತೀರ್ಪನ್ನು ಉಲ್ಲೇಖಿಸಿ ವಿದ್ಯಾರ್ಥಿ ಪರ ವಕೀಲ ದೇವದತ್ ಕಾಮತ್ ವಾದ ಮಂಡಿಸಿದ್ದರು.

    ಕಾಲೇಜು ಅಭಿವೃದ್ಧಿಗೆ ಶಾಸನಬದ್ಧ ಅಧಿಕಾರವಿಲ್ಲ. ಸರ್ಕಾರ ತನ್ನ ಅಧಿಕಾರವನ್ನು ಗೆ ಹಸ್ತಾಂತರಿಸಲು ಸಾಧ್ಯವಿಲ್ಲ. ಶಾಸಕರ ನೇತೃತ್ವದ ಅಭಿವೃದ್ಧಿ ಸಮಿತಿ ಸಮರ್ಥಿಸಿಕೊಂಡಿದ್ದಾರೆ. ಸಿಡಿಸಿಯ ಇತರೆ ಸದಸ್ಯರನ್ನು ಶಾಸಕರೇ ಆಯ್ಕೆ ಮಾಡುತ್ತಾರೆ. ಶಾಸಕರಿಗೆ ಕಾಲೇಜಿನ ಆಡಳಿತ ನೀಡುವುದೇ ಕಾನೂನುಬಾಹಿರ ಎಂದು ಅರ್ಜಿದಾರರ ಪರ ವಕೀಲ ರವಿವರ್ಮ ಕುಮಾರ್ ವಾದಿಸಿದ್ದರು. ಇದನ್ನೂ ಓದಿ: ತೀರ್ಪು ಏನೇ ಬಂದ್ರೂ ಗೌರವಿಸಿ, ಶಾಂತಿ ಕಾಪಾಡಿ: ಗೃಹ ಸಚಿವರ ಮನವಿ

    ಸಿಡಿಸಿ 1983ರ ಶಿಕ್ಷಣ ಕಾಯ್ದೆಯ ಅನುಗುಣವಾಗಿ ಸಮವಸ್ತ್ರ ಜಾರಿಗೆ ತಂದಿದೆ. ಸಮವಸ್ತ್ರ ಜಾರಿಗೆ ತರೋದು ಸಮಾನತೆಗಾಗಿ. ಸಿಡಿಸಿಗೆ ಸಮವಸ್ತ್ರ ಜಾರಿಗೆ ತರುವ ಅವಕಾಶ 2014ರಲ್ಲಿ ಒಪ್ಪಿಗೆ ಇತ್ತು. ಸಿಡಿಸಿಗೆ ಕಾಲೇಜಿನ ಅಭಿವೃದ್ಧಿ ಸಮಿತಿ, ಕಾಲೇಜಿನ ಬಗ್ಗೆ ತೀರ್ಮಾನಿಸುವ ಅಧಿಕಾರವಿದೆ. ಸಿಡಿಸಿಯಲ್ಲಿ ಒಬ್ಬರೇ ಅಧಿಕಾರ ಚಲಾಯಿಸುವುದಿಲ್ಲ. ಶಾಲೆಯ ಮಕ್ಕಳು, ಪೋಷಕರು, ಶಾಸಕರು, ಉಪನ್ಯಾಸಕರು ಎಲ್ಲರೂ ಇರ್ತಾರೆ ಎಂದು ಶಾಲಾ ಆಡಳಿತ ಮಂಡಳಿ ಪರ ವಕೀಲ ಸಜ್ಜನ್ ಪೂವಯ್ಯ ವಾದಿಸಿದ್ದರು.

    ಸರ್ಕಾರಿ ಪರ ವಕೀಲ ಪ್ರಭುಲಿಂಗ ನಾವಡಗಿ ಅವರು, ವಿದ್ಯಾರ್ಥಿನಿಯರು, ಹಿಜಬ್ ಧರಿಸುವುದು ಧಾರ್ಮಿಕ ಆಚರಣೆಯಾಗಿದೆ ಎಂಬುದನ್ನು ಸಾಬೀತುಪಡಿಸಿಲ್ಲ. ಸಮವಸ್ತ್ರ ಸಂಹಿತೆಯ ಸರ್ಕಾರದ ವಾದಕ್ಕೆ ಹೆಚ್ಚಿನ ತೂಕವಿದೆ. ವಿಷಯವು ಧರ್ಮದ ಮೂಲ ಅಂಶದ ಭಾಗವಾಗಿದ್ದರೆ ಮಾತ್ರ ಆಚರಣೆ ಕಡ್ಡಾಯವಾಗುತ್ತದೆ. ಈ ಪ್ರಕರಣದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿ ವಾದ ಮಂಡಿಸಲಾಗ್ತಿದೆ ಎಂದು ಪ್ರತಿವಾದ ಮಾಡಿದ್ದರು.

  • ಹಿಜಬ್‍ಗಾಗಿ ಹೋರಾಟ ಮಾಡ್ತಿರುವವರೇ ಗಮನಿಸಿ – ಶಿಕ್ಷಣ ಇಲಾಖೆಯಿಂದ ಹೊರ ಬಿತ್ತು ಮಹತ್ವದ ಆದೇಶ

    ಹಿಜಬ್‍ಗಾಗಿ ಹೋರಾಟ ಮಾಡ್ತಿರುವವರೇ ಗಮನಿಸಿ – ಶಿಕ್ಷಣ ಇಲಾಖೆಯಿಂದ ಹೊರ ಬಿತ್ತು ಮಹತ್ವದ ಆದೇಶ

    ಬೆಂಗಳೂರು: ಹಿಜಬ್ ಗಾಗಿ ಹೋರಾಟ ಮಾಡುವವರು ಗಮನಿಸಬೇಕಾದಂತಹ ವಿಚಾರವೊಂದು ಶಿಕ್ಷಣ ಇಲಾಖೆಯಿಂದ ಹೊರಬಿದ್ದಿದೆ. ಸರ್ಕಾರದ ಆದೇಶ ಪಾಲನೆ ಮಾಡದೇ ಹೋದ್ರೆ ಪ್ರಾಯೋಗಿಕ ಪರೀಕ್ಷೆಗೆ ಅವಕಾಶ ಇಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟ ಸಂದೇಶ ರವಾನೆ ಮಾಡಿದೆ.

    ಹಿಜಾಬ್ ಸಂಘರ್ಷ ಗೊಂದಲ ಹಿನ್ನೆಲೆಯಲ್ಲಿ ಪರೀಕ್ಷೆ ಹಾಜರಾಗದೇ ಹೋದ್ರೆ ಯಾವ ವಿದ್ಯಾರ್ಥಿಗಳಿಗೂ ವಿನಾಯ್ತಿ ಇಲ್ಲ ಎಂದು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಸಂಬಂಧ ಶಿಕ್ಷಣ ಇಲಾಖೆ ಸ್ಪಷ್ಟ ಮಾಹಿತಿ ನೀಡಿದೆ. ಇದನ್ನೂ ಓದಿ: ನಿಮಗೆ ಹೋರಾಟ ಅಲ್ಲ, ಲೂಟಿ ಹೊಡೆದು ಅಭ್ಯಾಸ ಇದೆ: ರೇಣುಕಾಚಾರ್ಯ ವ್ಯಂಗ್ಯ

    ಫೆಬ್ರವರಿ 17 ರಿಂದ ದ್ವೀತಿಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ಪ್ರಾರಂಭ ಆಗಿವೆ. ಕೆಲ ಜಿಲ್ಲೆಗಳಲ್ಲಿ ನಾಳೆಯಿಂದ ಪ್ರಾರಂಭ ಆಗುತ್ತಿವೆ. ಸರ್ಕಾರದ ಆದೇಶ ಪಾಲನೆ ಮಾಡಿದ್ರೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ಸಿಗುತ್ತದೆ. ಇಲ್ಲದೆ ಹೋದ್ರೆ ಮತ್ತೆ ಪರೀಕ್ಷೆಗೆ ಅವಕಾಶ ನೀಡೋದಿಲ್ಲ. ಹೀಗಾಗಿ ನಿಯಮ ಪಾಲನೆ ಮಾಡಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

    ಹಿಜಾಬ್ ಗಲಾಟೆಯಲ್ಲಿ ಪರೀಕ್ಷೆ ಬರೆಯದೇ ಹೋದ್ರೆ ಮತ್ತೆ ಅವಕಾಶ ಕೊಡುವುದಿಲ್ಲ ಎಂದು ಇಲಾಖೆ ಎಲ್ಲಾ ಕಾಲೇಜುಗಳಿಗೆ ಮಾಹಿತಿ ನೀಡಿದೆ.

  • ಹಿಜಬ್ ವಿವಾದದ ಹಿಂದೆ ಬಿಜೆಪಿ, ಎಸ್‍ಡಿಪಿಐ ಇದೆ: ಡಿಕೆಶಿ ಆರೋಪ

    ಹಿಜಬ್ ವಿವಾದದ ಹಿಂದೆ ಬಿಜೆಪಿ, ಎಸ್‍ಡಿಪಿಐ ಇದೆ: ಡಿಕೆಶಿ ಆರೋಪ

    ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಬ್ ವಿವಾದದ ಹಿಂದೆ ಬಿಜೆಪಿ ಹಾಗೂ ಎಸ್‍ಡಿಪಿಐ ಸಂಘಟನೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

    ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಹಿಜಬ್ ವಿವಾದ ಕೋರ್ಟ್ ನಲ್ಲಿ ಇದೆ. ಹಿಂದೆ ಹೇಗಿತ್ತೋ ಹಾಗೆಯೇ ಯಥಾವತ್ತಾಗಿ ಮುಂದುವರಿಯಬೇಕು ಅನ್ನೋದು ನಮ್ಮ ನಿಲುವು. ಶಿಕ್ಷಣ ಎಲ್ಲರ ಹಕ್ಕು ಅದಕ್ಕೆ ಅಡ್ಡಿಪಡಿಸುವುದು ತಪ್ಪು. ಶಿಕ್ಷಣವೇ ಮೂಲ ಧರ್ಮ ಎಂದರು.

    ಅವರು ಅದು ಹಾಕಿದರೆ, ನಾವು ಇದು ಹಾಕ್ತೀವಿ ಅಂತ ಬಿಜೆಪಿಯವರು ಸೃಷ್ಟಿ ಮಾಡಿದರು. ಫೆಬ್ರವರಿ 5 ರಂದು ಆದೇಶ ಹೊರಡಿಸಿ ಸಮಸ್ಯೆಗಳನ್ನು ಶುರು ಮಾಡಿದರು. ರೈಟು ಟು ಎಜ್ಯುಕೇಶನ್, ರೈಟ್ ಟು ಕಲ್ಚರ್ ಎಲ್ಲದಕ್ಕೂ ಸಂವಿಧಾನದಲ್ಲಿ ಹೇಳಲಾಗಿದೆ. ಅದನ್ನ ಗೌರವಿಸಬೇಕು. ಕೋರ್ಟ್ ಆದೇಶವನ್ನೇ ಗೌರವಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

    ಇದೇ ವೇಳೆ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸಂವಿಧಾನ ಕೊಟ್ಟಿದ್ದು ಕಾಂಗ್ರೆಸ್. ಅದನ್ನು ಉಳಿಸಲು ಹೋರಾಟ ಆರಂಭಿಸಿದ್ದೇವೆ. ಸಿಎಂ ರಾಜ್ಯಪಾಲರು ಈಶ್ವರಪ್ಪ ಅವರನ್ನು ವಜಾ ಮಾಡಬೇಕು ಎಂದು ಡಿಕೆಶಿ ಆಗ್ರಹಿಸಿದರು. ಇದನ್ನೂ ಓದಿ: ಕುಂಕುಮ, ಬಳೆ ಬಗ್ಗೆ ಮಾತಾಡಿದ್ರೆ ನಾಲಿಗೆ ಸೀಳ್ತೀವಿ ಹುಷಾರ್: ಪ್ರಮೋದ್ ಮುತಾಲಿಕ್

    ಇದೇ ತಿಂಗಳು 27 ರಿಂದ ಮೇಕೆದಾಟು ಪಾದಯಾತ್ರೆ ಆರಂಭಿಸುತ್ತಿದ್ದೇವೆ. ಮಾರ್ಚ್ 3ರಂದು ಮುಕ್ತಾಯ ಆಗುತ್ತೆ, 7 ದಿನ ಇದ್ದ ಪಾದಯಾತ್ರೆಯಲ್ಲಿ 2 ದಿನ ಕಡಿತ ಮಾಡಿದ್ದೇವೆ. ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ನಾವು ಪಾದಯಾತ್ರೆ ನಡೆಸುತ್ತೇವೆ. ಮಹದಾಯಿಯಲ್ಲಿ ಗೋವಾ ಕಾಂಗ್ರೆಸ್ ಗೋವಾದವರ ನಿಲುವು ಏನು ಅನ್ನೋದು ನಮಗೆ ಮುಖ್ಯ ಅಲ್ಲ. ಅವರು ಏನು ಬೇಕಾದರು ಹೇಳಲಿ. ನಮ್ಮ ನಿಲುವು ನಮಗೆ. ನಮ್ಮ ನಿಲುವು ಕರ್ನಾಟಕ ರಾಜ್ಯದ ಪರವಾಗಿ ರಾಜ್ಯದ ಹಿತಕ್ಕಾಗಿ ಎಂದು ಹೇಳಿದರು.

  • ಕುಂಕುಮ, ಬಳೆ ಬಗ್ಗೆ ಮಾತಾಡಿದ್ರೆ ನಾಲಿಗೆ ಸೀಳ್ತೀವಿ ಹುಷಾರ್: ಪ್ರಮೋದ್ ಮುತಾಲಿಕ್

    ಕುಂಕುಮ, ಬಳೆ ಬಗ್ಗೆ ಮಾತಾಡಿದ್ರೆ ನಾಲಿಗೆ ಸೀಳ್ತೀವಿ ಹುಷಾರ್: ಪ್ರಮೋದ್ ಮುತಾಲಿಕ್

    – ನಿಮ್ಮ ವೋಟ್ ಬ್ಯಾಂಕ್‍ಗಾಗಿ ಟೆರರಿಸ್ಟ್‍ಗಳನ್ನು ಬೆಳೆಸಬೇಡಿ

    ಬಾಗಲಕೋಟೆ: ಕುಂಕುಮ ಬಳೆ, ವಿಭೂತಿ ನಮ್ಮ ಸಂಸ್ಕೃತಿ ಪರಂಪರೆ. ಈ ಬಗ್ಗೆ ಮಾತನಾಡಿದ್ರೆ ನಾಲಿಗೆ ಸೀಳ್ತೀವಿ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಪ್ರಚೋದನಕಾರಿ ಹೇಳಿಕೆ ನಿಡಿರುವ ಮುತಾಲಿಕ್, ಹಿಜಾಬ್ ವಿವಾದ ಸಂಬಂಧ ಕುಂಕುಮ, ಬಳೆ ಬಗ್ಗೆ ಮುಸ್ಲಿಂ ವಿದ್ಯಾರ್ಥಿನಿಯರ ಪ್ರಶ್ನೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಇಂದು ಕುಂಕುಮ, ಭಸ್ಮ, ಬಳೆ ಬಗ್ಗೆ ಮಾತಾಡುವ ದಾಷ್ಟ್ರ್ಯ ಬೆಳೆದಿದೆ. ಕುಂಕುಮ, ಬಳೆ, ವಿಭೂತಿ ವೈಜ್ಞಾನಿಕವಾಗಿವೆ. ಇದು ಶೋ ಅಲ್ಲ, ಪ್ಯಾಷನ್ ಅಲ್ಲ, ಅಲಂಕಾರವಲ್ಲ. ಇದರಲ್ಲಿ ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ, ಪರಂಪರೆ ಇದೆ. ಈ ಬಗ್ಗೆ ಮಾತಾಡಿದರೆ ನಾಲಿಗೆ ಸೀಳಿ ಬಿಡುತ್ತೇವೆ ಹುಷಾರಾಗಿರಿ. ಅವು ಸಮವಸ್ತ್ರದ ಭಾಗಗಳಲ್ಲ. ಸಮವಸ್ತ್ರ ಅಂದರೆ ಬರೀ ಬಟ್ಟೆ. ಬಟ್ಟೆ ಬಗ್ಗೆ ಮಾತ್ರ ಮಾತಾಡಿ. ಗಣಪತಿ ಪೂಜೆ, ಸರಸ್ವತಿ ಪೂಜೆ, ಕುಂಕುಮ, ಬಳೆ ಬಗ್ಗೆ ಮಾತಾಡಿದರೆ ನಾಲಿಗೆ ಸೀಳಿ ಹಾಕುತ್ತೇವೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಉಕ್ರೇನ್‍ನ ಸಮುದ್ರ, ಭೂ-ಆಧಾರಿತ ಪ್ರದೇಶದ ಮೇಲೆ ರಷ್ಯಾ ದಾಳಿ!

    ಹಿಜಬ್ ಹಿಂದೆ ಇಸ್ಲಾಮೀಕರಣ ಇದೆ. ಬರೀ ಹಿಜಬ್ ಅಷ್ಟೇ ಅಲ್ಲ, ಈಗ ನೇರವಾಗಿ ಬುರ್ಕಾ ಹಾಕಿಕೊಂಡು ಬರುತ್ತಾರೆ. ಮುಂದೆ ನಮಾಜ್ ಮಾಡೋಕೆ ಅವಕಾಶ ಬೇಕು ಅಂತಾರೆ. ಒಂದೊಂದಾಗಿ ಮುನ್ನುಗ್ಗುವ ಪ್ರವೃತ್ತಿ ಇಸ್ಲಾಮ್ ಇತಿಹಾಸ ಹೇಳುತ್ತದೆ ಎಂದು ಮುತಾಲಿಕ್ ವಾಗ್ದಾಳಿ ನಡೆಸಿದರು.

    ಇದೇ ವೇಳೆ ಮುಸ್ಲಿಂ ಸಂಘಟನೆಗಳ ನಿಷೇಧ ಮಾಡಲು ಮುಂದಾಗದ ಬಿಜೆಪಿ ವಿರುದ್ಧವೂ ಮುತಾಲಿಕ್ ಕಿಡಿಕಾರಿದರು. ಈ ಬಗ್ಗೆ ನಮಗೆ ಬಹಳ ದುಃಖ ಆಗುತ್ತೆ, ನೋವಾಗುತ್ತೆ, ಸಿಟ್ಟು ಬರುತ್ತದೆ. ಮುಸ್ಲಿಂ ವೋಟ್ ಒಡೆಯುತ್ತಾರೆ ಅಂತ ಪಿಎಫ್‍ಐ, ಸಿಎಫ್.ಎಮ್ ಐಎಮ್ ಅಂತ ರಾಕ್ಷಸರನ್ನು ಬಿಜೆಪಿಯವರು ಬೆಳೆಸುತ್ತಿದ್ದಾರೆ. ಬಿಜೆಪಿಯವರೇ ಈ ಎಲ್ಲ ಸಂಘಟನೆಗಳನ್ನು ಸಾಕುತ್ತಿದ್ದಾರೆ. ಕಾಂಗ್ರೆಸ್ ಈ ಸಂಘಟನೆಗಳನ್ನು ಬ್ಯಾನ್ ಮಾಡಿ ಅಂತ ಹೇಳುತ್ತಿದೆ. ಕಮ್ಯುನಿಸ್ಟ್ ಪಕ್ಷದವರು ಹೇಳುತ್ತಿದ್ದಾರೆ, ಬಿಜೆಪಿಯವರೇ ನಿಮ್ಮ ವೋಟ್ ಬ್ಯಾಂಕ್‍ಗಾಗಿ ಟೆರರಿಸ್ಟ್ ಗಳನ್ನು ಬೆಳೆಸಬೇಡಿ. ಮುಂದಿನ ದಿನಗಳಲ್ಲಿ ಈ ಎಲ್ಲ ಸಂಘಟನೆಗಳ ವಿರುದ್ಧ ವಿವಿಧ ಹಿಂದೂ ಪರ ಸಂಘಟನೆಗಳು ಸೇರಿ ಹೋರಾಟ ಮಾಡಲಿದ್ದೇವೆ ಎಂದರು. ಇದನ್ನೂ ಓದಿ:  ‘ಫಸಲ್ ಭೀಮಾ ಯೋಜನೆ’ ಲಾಭ ಹೆಚ್ಚಿನ ರೈತರಿಗೆ ದೊರೆಯಲು ಕ್ರಮ ಕೈಗೊಳ್ಳಿ: ಕೆ.ಸಿ.ನಾರಾಯಣಗೌಡ

    ಪಿಎಫ್ ಐ, ಸಿಎಫ್‍ಐ, ಈಗಾಗಲೇ ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿವೆ. ಪಿಎಫ್‍ಐ ಬ್ಯಾನ್ ಮಾಡಿ ಅಂತ ಕೇರಳದ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದರು, ನಾನು ಹೇಳುತ್ತಿಲ್ಲ. ಹಿಂದೆ ಅವರೇ ಪತ್ರವನ್ನು ಬರೆದಿದ್ದರು. ಪಿಎಫ್‍ಐ ದೊಡ್ಡ ರಾಕ್ಷಸಿ ರೂಪವಾಗಿ ದೇಶಕ್ಕೆ ಕಂಟಕವಾಗುತ್ತದೆ. ಕಾಂಗ್ರೆಸ್ ನವರೇ ಇಂದು ಸಿಎಂ ಭೇಟಿಯಾಗಿ ಬ್ಯಾನ್ ಮಾಡಿ ಅಂತ ಹೇಳಿದ್ದಾರೆ. ನಿಮಗೇನಾಗಿದೆ(ಬಿಜೆಪಿ) ಬ್ಯಾನ್ ಮಾಡೋದಕ್ಕೆ, ಎಷ್ಟು ದಾಖಲೆಗಳು ಬೇಕು ಕೊಲೆ ಕೇಸಿನಲ್ಲಿ.. ಪಿಎಫ್‍ಐ ಹೆಸರಲ್ಲಿ 9 ಚಾರ್ಜ್ ಶೀಟ್ ಆಗಿದೆ. ಬ್ಯಾನ್ ಮಾಡುವಂತಹ ಕೆಲಸ ಬಿಜೆಪಿ ಸರ್ಕಾರ ಮಾಡದಿದ್ದರೆ, ಇವು ನಿಮ್ಮನ್ನು ನುಂಗಿ ಹಾಕುತ್ತವೆ ಎಂದು ಎಚ್ಚರಿಕೆ ಕೊಡುತ್ತೇನೆ ಎಂದರು.