Tag: ಹಿನಾ ಖಾನ್

  • ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ಹಿನಾ ಖಾನ್ ರ‍್ಯಾಂಪ್ ವಾಕ್- ಮದುಮಗಳಂತೆ ಮಿಂಚಿದ ನಟಿ

    ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ಹಿನಾ ಖಾನ್ ರ‍್ಯಾಂಪ್ ವಾಕ್- ಮದುಮಗಳಂತೆ ಮಿಂಚಿದ ನಟಿ

    ‘ಬಿಗ್ ಬಾಸ್’ ಖ್ಯಾತಿಯ ಹಿನಾ ಖಾನ್ (Hina Khan) 3ನೇ ಹಂತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಕಿಮೋಥೆರಪಿ ಚಿಕಿತ್ಸೆ ಪಡೆಯುತ್ತಿರುವ ಹಿನಾ ಇದೀಗ ಕಾರ್ಯಕ್ರಮವೊಂದರಲ್ಲಿ ರ‍್ಯಾಂಪ್ ವಾಕ್ ಮಾಡಿದ್ದಾರೆ. ಈ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:‘ಮಾಂತ್ರಿಕ’ನ ಸಸ್ಪೆನ್ಸ್ ಜರ್ನಿ: ಆತ್ಮಗಳ ಬೆನ್ನತ್ತಿದ ಟೀಮ್

    ಕೆಂಪು ಬಣ್ಣದ ಲೆಹೆಂಗಾ ಧರಿಸಿ ನಟಿ ಹಿನಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಮದುಮಗಳಂತೆ ನಗು ಮುಖದಿಂದ ವೇದಿಕೆಗೆ ಎಂಟ್ರಿ ಕೊಟ್ಟು ನಟಿ ರ‍್ಯಾಂಪ್ ವಾಕ್ ಮಾಡಿರೋದು ನೋಡಿ ಫ್ಯಾನ್ಸ್ ಭೇಷ್ ಎಂದಿದ್ದಾರೆ. ನಟಿಯ ವೃತ್ತಿಪರತೆಯನ್ನು ಅಭಿಮಾನಿಗಳು ಹೊಗಳಿದ್ದಾರೆ. ಇದನ್ನೂ ಓದಿ:‘ಮಾಂತ್ರಿಕ’ನ ಸಸ್ಪೆನ್ಸ್ ಜರ್ನಿ: ಆತ್ಮಗಳ ಬೆನ್ನತ್ತಿದ ಟೀಮ್

    ಅಂದಹಾಗೆ, ಇತ್ತೀಚೆಗೆ ತಮಗಿರುವ ಸ್ತನ ಕ್ಯಾನ್ಸರ್ ಕಾಯಿಲೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದರು. ಈ ಕಾಯಿಲೆ ಇದ್ದಾಗಿಯೂ ನಾನು ಉತ್ತಮವಾಗಿದ್ದೇನೆ. ನಾನು ಬಲಶಾಲಿ ಮತ್ತು ಈ ರೋಗವನ್ನು ಜಯಿಸಲು ನಿಜವಾಗಿಯೂ ಬದ್ಧನಾಗಿದ್ದೇನೆ ಎಂದು ಎಲ್ಲರಿಗೂ ಭರವಸೆ ನೀಡಲು ನಾನು ಬಯಸುತ್ತೇನೆ. ನನ್ನ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ. ಇದರಿಂದ ಇನ್ನಷ್ಟು ಬಲವಾಗಿ ಹೊರಹೊಮ್ಮಲು ಅಗತ್ಯವಿರುವ ಎಲ್ಲವನ್ನೂ ಮಾಡಲು ನಾನು ಸಿದ್ಧಳಿದ್ದೇನೆ ಎಂದು ಹಿನಾ ಖಾನ್ ಹೇಳಿಕೊಂಡಿದ್ದರು.

    ಈ ಸಮಯದಲ್ಲಿ ನನ್ನ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ನಾನು ಭಾವಿಸುತ್ತೇನೆ. ನಿಮ್ಮ ಪ್ರೀತಿ, ಶಕ್ತಿ ಮತ್ತು ಆಶೀರ್ವಾದವನ್ನು ನಾನು ಆಳವಾಗಿ ಪ್ರಶಂಸಿಸುತ್ತೇನೆ. ನಾನು, ನನ್ನ ಕುಟುಂಬ ಮತ್ತು ಪ್ರೀತಿಪಾತ್ರರ ಜೊತೆಗೆ ಧನಾತ್ಮಕವಾಗಿ ಇರುತ್ತೇನೆ. ಸರ್ವಶಕ್ತನ ಅನುಗ್ರಹದಿಂದ, ನಾನು ಈ ಸವಾಲನ್ನು ಜಯಿಸುತ್ತೇನೆ ಮತ್ತು ಸಂಪೂರ್ಣವಾಗಿ ಆರೋಗ್ಯವಾಗಿರುತ್ತೇನೆ ಎಂದು ನಾನು ನಂಬಿದ್ದೇನೆ. ದಯವಿಟ್ಟು ನಿಮ್ಮ ಪ್ರಾರ್ಥನೆ, ಆಶೀರ್ವಾದ ಮತ್ತು ಪ್ರೀತಿ ನನ್ನ ಮೇಲೆ ಇರಲಿ ಎಂದು ನಟಿ ಮನವಿ ಮಾಡಿದ್ದರು.

  • ಸ್ತನ ಕ್ಯಾನ್ಸರ್ ಚಿಕಿತ್ಸೆ ನಡುವೆ ತಲೆಬೋಳಿಕೊಂಡ ಹಿನಾ ಖಾನ್- ಫ್ಯಾನ್ಸ್ ಶಾಕ್

    ಸ್ತನ ಕ್ಯಾನ್ಸರ್ ಚಿಕಿತ್ಸೆ ನಡುವೆ ತಲೆಬೋಳಿಕೊಂಡ ಹಿನಾ ಖಾನ್- ಫ್ಯಾನ್ಸ್ ಶಾಕ್

    ‘ಬಿಗ್ ಬಾಸ್’ (Bigg Boss Hindi) ಖ್ಯಾತಿಯ ಹಿನಾ ಖಾನ್ (Hina Khan) ಸ್ತನ ಕ್ಯಾನ್ಸರ್‌ನಿಂದ (Breast Cancer) ಬಳಲುತ್ತಿದ್ದು, ಸೂಕ್ತ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ. ಇದೀಗ ಟ್ರಿಮ್ಮರ್ ಹಿಡಿದು ನಟಿ ತಲೆಬೋಳಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ಹಿನಾ, ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ನಟಿಯ ನಡೆ ನೋಡಿ ಫ್ಯಾನ್ಸ್ ಶಾಕ್ ಆಗಿದ್ದಾರೆ. ಇದನ್ನೂ ಓದಿ:ಕಾಪಿರೈಟ್ ಉಲ್ಲಂಘನೆ ಕೇಸ್- ಕೋರ್ಟ್‌ನಲ್ಲಿ ಹೋರಾಟ ಮಾಡ್ತೀನಿ ಎಂದ ರಕ್ಷಿತ್ ಶೆಟ್ಟಿ

    ತಲೆಬೋಳಿಸುವ ಮುನ್ನ ನಟಿ ಮಾತನಾಡಿ, ಅನಾರೋಗ್ಯವನ್ನು ಎದುರಿಸಬೇಕು ಎಂದರೆ ಮಾನಸಿಕವಾಗಿ ಗಟ್ಟಿಯಾಗಿ ನಿಲ್ಲಬೇಕು. ಹೀಗೆ ಮಾಡಿದಾಗ ಚಿಕಿತ್ಸೆಗೆ ಇನ್ನೊಂದು ಹೆಜ್ಜೆ ಹತ್ತಿರ ಬರುತ್ತೀರಿ ಎಂದು ನಾನು ಭಾವಿಸುತ್ತೇನೆ ಎಂದು ಮಾತನಾಡಿದ್ದಾರೆ. ನಟಿಯ ವಿಡಿಯೋದಲ್ಲಿನ ಮಾತುಗಳನ್ನು ಕೇಳಿ ಫ್ಯಾನ್ಸ್, ನೀವು ಆದಷ್ಟು ಬೇಗ ಗುಣಮುಖರಾಗಬೇಕು ಎಂದು ಹಾರೈಸಿದ್ದಾರೆ.

    ಕ್ಯಾನ್ಸ್‌ರ್‌ ಚಿಕಿತ್ಸೆ ಪಡೆಯುವಾಗ ಪ್ರತಿ ದಿನ ಕೂದಲು ಉದುರಲು ಆರಂಭವಾಗುತ್ತದೆ. ಇದೆಲ್ಲಾ ಕಿರಿ ಕಿರಿ ಆಗೋದು ಸಹಜ. ಅದರಲ್ಲೂ ಮಹಿಳೆಯರಿಗೆ ಹೆಚ್ಚು ಕೂದಲು ಉದುರಿದರೆ ಹೆಚ್ಚು ಬೇಸರ ಆಗುತ್ತದೆ. ಹಾಗಾಗಿ ಮಾನಸಿಕ ಆರೋಗ್ಯಕ್ಕಾಗಿ ಈ ನಿರ್ಧಾರವನ್ನು ನಟಿ ಕೈಗೊಂಡಿದ್ದಾರೆ.

    ಕಳೆದ 16 ವರ್ಷಗಳಿಂದ ಕಿರುತೆರೆಯಲ್ಲಿ ನಟಿ ಆಕ್ಟಿವ್ ಆಗಿದ್ದಾರೆ. ಸಿನಿಮಾ, ಸಾಲು ಸಾಲು ಸೀರಿಯಲ್‌ಗಳಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ಹಿನಾಗೆ ಭಾರೀ ಜನಪ್ರಿಯತೆ ನೀಡಿತ್ತು.

  • ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟಿ ಹಿನಾ ಖಾನ್ ಕೂದಲಿಗೆ ಬಿತ್ತು ಕತ್ತರಿ

    ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿರುವ ನಟಿ ಹಿನಾ ಖಾನ್ ಕೂದಲಿಗೆ ಬಿತ್ತು ಕತ್ತರಿ

    ಹಿಂದಿ ಕಿರುತೆರೆ ನಟಿ ಹಿನಾ ಖಾನ್‌ಗೆ (Hina Khan) ಸ್ತನ ಕ್ಯಾನ್ಸರ್ (Breast Cancer) ಮೂರನೇ ಹಂತದಲ್ಲಿದೆ. ಅದಕ್ಕೆ, ನಟಿ ಸೂಕ್ತ ಚಿಕಿತ್ಸೆ ಕೂಡ ಪಡೆದುಕೊಳ್ತಿದ್ದಾರೆ. ಇದರ ನಡುವೆ ನಟಿ ತಮ್ಮ ಕೂದಲನ್ನು ಚಿಕ್ಕದಾಗಿ ಕತ್ತರಿಸಿದ್ದಾರೆ. ಈ ವಿಡಿಯೋವನ್ನು ನಟಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಪ್ರಜ್ವಲ್ ದೇವರಾಜ್ ನಟನೆಯ ‘ಮಾಫಿಯಾ’ ಚಿತ್ರದ ಟೀಸರ್ ಔಟ್

    ಕುಟುಂಬಸ್ಥರು, ಆತ್ಮೀಯರು, ಸ್ನೇಹಿತರು ನನ್ನ ಹೋರಾಟಕ್ಕೆ ದೊಡ್ಡ ಭರವಸೆ. ನಾನು ಗೆದ್ದು ಬರುತ್ತೇನೆ ಎಂದು ಕೂದಲನ್ನು ಕಟ್ ಮಾಡಿಸಿಕೊಳ್ಳುತ್ತಿರುವ ವಿಡಿಯೋವನ್ನು ನಟಿ ಹಂಚಿಕೊಂಡಿದ್ದಾರೆ. ಹಿನಾ ಕೂದಲನ್ನು ಕತ್ತರಿಸುವಾಗ ಅವರ ತಾಯಿ ಭಾವುಕರಾಗಿದ್ದಾರೆ. ಈ ವಿಡಿಯೋ ನೋಡಿದ ನಟಿಯ ಫ್ಯಾನ್ಸ್‌, ಬೇಗ ಗುಣಮುಖರಾಗಿ ಬರಲಿ ಎಂದು ಆಶಿಸುತ್ತಿದ್ದಾರೆ.

    ಅಂದಹಾಗೆ, ಕಳೆದ ವಾರ ನಟಿ ಆರೋಗ್ಯದ ಬಗ್ಗೆ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಇತ್ತೀಚೆಗೆ ಕೇಳಿಬಂದ ಕೆಲವು ವದಂತಿಗಳನ್ನು ಪರಿಹರಿಸಲು ನಾನು ಬಯಸುತ್ತೇನೆ. ನನ್ನನ್ನು ಪ್ರೀತಿಸುವ ಮತ್ತು ಕಾಳಜಿ ವಹಿಸುವ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಹಂಚಿಕೊಳ್ಳಲು ಇಷ್ಟಪಡುತ್ತೇನೆ. ನನಗೆ 3ನೇ ಹಂತದ ಸ್ತನ ಕ್ಯಾನ್ಸರ್ ಇರುವುದು ತಿಳಿದು ಬಂದಿದೆ ಎಂದಿದ್ದರು. ಈ ಕಾಯಿಲೆ ಇದ್ದರೂ ನಾನು ಉತ್ತಮವಾಗಿದ್ದೇನೆ. ನನ್ನ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ. ಇದರಿಂದ ಹೊರಬರಲು ಅಗತ್ಯವಿರುವ ಎಲ್ಲ ಕೆಲಸವನ್ನು ಮಾಡಲು ನಾನು ಸಿದ್ಧಳಿದ್ದೇನೆ ಎಂದು ಹಿನಾ ಖಾನ್ ಹೇಳಿದ್ದರು.

    ಈ ಸಮಯದಲ್ಲಿ ನನ್ನ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ನಾನು ಭಾವಿಸುತ್ತೇನೆ. ನಿಮ್ಮ ಪ್ರೀತಿ, ಶಕ್ತಿ ಮತ್ತು ಆಶೀರ್ವಾದವನ್ನು ನಾನು ಆಳವಾಗಿ ಪ್ರಶಂಸಿಸುತ್ತೇನೆ. ನಾನು, ನನ್ನ ಕುಟುಂಬ ಮತ್ತು ಪ್ರೀತಿಪಾತ್ರರ ಜೊತೆಗೆ ಧನಾತ್ಮಕವಾಗಿ ಇರುತ್ತೇನೆ. ಸರ್ವಶಕ್ತನ ಅನುಗ್ರಹದಿಂದ, ನಾನು ಈ ಸವಾಲನ್ನು ಜಯಿಸುತ್ತೇನೆ ಮತ್ತು ಸಂಪೂರ್ಣವಾಗಿ ಆರೋಗ್ಯವಾಗಿರುತ್ತೇನೆ ಎಂದು ನಾನು ನಂಬಿದ್ದೇನೆ ಎಂದು ನಟಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು.

    ಕಳೆದ 16 ವರ್ಷಗಳಿಂದ ಕಿರುತೆರೆಯಲ್ಲಿ ನಟಿ ಗುರುತಿಸಿಕೊಂಡಿದ್ದಾರೆ. ಸಿನಿಮಾ, ಸಾಲು ಸಾಲು ಸೀರಿಯಲ್‌ಗಳಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

  • ‘ಬಿಗ್ ಬಾಸ್’ ಖ್ಯಾತಿಯ ಹಿನಾ ಖಾನ್‌ಗೆ ಸ್ತನ ಕ್ಯಾನ್ಸರ್

    ‘ಬಿಗ್ ಬಾಸ್’ ಖ್ಯಾತಿಯ ಹಿನಾ ಖಾನ್‌ಗೆ ಸ್ತನ ಕ್ಯಾನ್ಸರ್

    ‘ಬಿಗ್ ಬಾಸ್’ ಸ್ಪರ್ಧಿ(Bigg Boss) ಹಿನಾ ಖಾನ್ (Hina Khan) ಅಭಿಮಾನಿಗಳಿಗೆ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. 3ನೇ ಹಂತದ ಸ್ತನ ಕ್ಯಾನ್ಸರ್‌ಗೆ ಒಳಗಾಗಿದ್ದಾರೆ.ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನಟಿ ಹಂಚಿಕೊಂಡಿದ್ದಾರೆ. ಸದ್ಯ ನಟಿಯ ಆರೋಗ್ಯದ ಸಮಸ್ಯೆ ಕೇಳಿ ಫ್ಯಾನ್ಸ್‌ ನೋವಾಗಿದೆ. ಇದನ್ನೂ ಓದಿ:‘ಕಂಗುವ’ ಚಿತ್ರದ ರಿಲೀಸ್ ಡೇಟ್ ಅನೌನ್ಸ್- ದೇವರ, ಮಾರ್ಟಿನ್ ಜೊತೆ ಕ್ಲ್ಯಾಶ್

    ಎಲ್ಲರಿಗೂ ನಮಸ್ಕಾರ, ಇತ್ತೀಚೆಗೆ ಕೇಳಿಬಂದ ಕೆಲವು ವದಂತಿಗಳನ್ನು ಪರಿಹರಿಸಲು ನಾನು ಬಯಸುತ್ತೇನೆ. ನನ್ನನ್ನು ಪ್ರೀತಿಸುವ ಮತ್ತು ಕಾಳಜಿ ವಹಿಸುವ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಹಂಚಿಕೊಳ್ಳಲು ಇಷ್ಟಪಡುತ್ತೇನೆ. ಈಚೆಗೆ ನನಗೆ 3ನೇ ಹಂತದ ಸ್ತನ ಕ್ಯಾನ್ಸರ್ (Breast Cancer) ಇರುವುದು ತಿಳಿದು ಬಂದಿದೆ ಎಂದು ಫ್ಯಾನ್ಸ್‌ಗೆ ‘ಬಿಗ್ ಬಾಸ್’ ಸ್ಪರ್ಧಿ ಹಿನಾ ಖಾನ್ ಸಂದೇಶ ರವಾನೆ ಮಾಡಿದ್ದಾರೆ.

    ಈ ಕಾಯಿಲೆ ಇದ್ದಾಗಿಯೂ ನಾನು ಉತ್ತಮವಾಗಿದ್ದೇನೆ. ನಾನು ಬಲಶಾಲಿ ಮತ್ತು ಈ ರೋಗವನ್ನು ಜಯಿಸಲು ನಿಜವಾಗಿಯೂ ಬದ್ಧನಾಗಿದ್ದೇನೆ ಎಂದು ಎಲ್ಲರಿಗೂ ಭರವಸೆ ನೀಡಲು ನಾನು ಬಯಸುತ್ತೇನೆ. ನನ್ನ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ. ಇದರಿಂದ ಇನ್ನಷ್ಟು ಬಲವಾಗಿ ಹೊರಹೊಮ್ಮಲು ಅಗತ್ಯವಿರುವ ಎಲ್ಲವನ್ನೂ ಮಾಡಲು ನಾನು ಸಿದ್ಧಳಿದ್ದೇನೆ ಎಂದು ಹಿನಾ ಖಾನ್ ಹೇಳಿಕೊಂಡಿದ್ದಾರೆ.

    ಈ ಸಮಯದಲ್ಲಿ ನನ್ನ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ನಾನು ಭಾವಿಸುತ್ತೇನೆ. ನಿಮ್ಮ ಪ್ರೀತಿ, ಶಕ್ತಿ ಮತ್ತು ಆಶೀರ್ವಾದವನ್ನು ನಾನು ಆಳವಾಗಿ ಪ್ರಶಂಸಿಸುತ್ತೇನೆ. ನಾನು, ನನ್ನ ಕುಟುಂಬ ಮತ್ತು ಪ್ರೀತಿಪಾತ್ರರ ಜೊತೆಗೆ ಧನಾತ್ಮಕವಾಗಿ ಇರುತ್ತೇನೆ. ಸರ್ವಶಕ್ತನ ಅನುಗ್ರಹದಿಂದ, ನಾನು ಈ ಸವಾಲನ್ನು ಜಯಿಸುತ್ತೇನೆ ಮತ್ತು ಸಂಪೂರ್ಣವಾಗಿ ಆರೋಗ್ಯವಾಗಿರುತ್ತೇನೆ ಎಂದು ನಾನು ನಂಬಿದ್ದೇನೆ. ದಯವಿಟ್ಟು ನಿಮ್ಮ ಪ್ರಾರ್ಥನೆ, ಆಶೀರ್ವಾದ ಮತ್ತು ಪ್ರೀತಿ ನನ್ನ ಮೇಲೆ ಇರಲಿ ಎಂದು ನಟಿ ಹೇಳಿದ್ದಾರೆ. ಅಂದಹಾಗೆ, ಸ್ತನ ಕ್ಯಾನ್ಸರ್‌ಗೆ ನಟಿ ಸೂಕ್ತ ಚಿಕಿತ್ಸೆ ಪಡೆದುಕೊಳ್ತಿದ್ದಾರೆ.

    ಕಳೆದ 16 ವರ್ಷಗಳಿಂದ ಕಿರುತೆರೆಯಲ್ಲಿ ನಟಿ ಆಕ್ಟಿವ್ ಆಗಿದ್ದಾರೆ. ಸಿನಿಮಾ, ಸಾಲು ಸಾಲು ಸೀರಿಯಲ್‌ಗಳಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ’ ಹಿನಾಗೆ ಭಾರೀ ಜನಪ್ರಿಯತೆ ನೀಡಿತ್ತು.