Tag: ಹಿಮಪಾತ

  • ಸಿಯಾಚಿನ್‍ನಲ್ಲಿ ಮತ್ತೆ ಹಿಮಪಾತ – ಇಬ್ಬರು ಯೋಧರು ಹುತಾತ್ಮ

    ಸಿಯಾಚಿನ್‍ನಲ್ಲಿ ಮತ್ತೆ ಹಿಮಪಾತ – ಇಬ್ಬರು ಯೋಧರು ಹುತಾತ್ಮ

    ನವದೆಹಲಿ: ವಿಶ್ವದ ಅತಿ ಎತ್ತರದ ಯುದ್ಧ ಭೂಮಿ ಸಿಯಾಚಿನ್‍ನ ದಕ್ಷಿಣ ಭಾಗದಲ್ಲಿ ಮತ್ತೆ ಹಿಮಪಾತ ಸಂಭವಿಸಿದ್ದು, ಇಬ್ಬರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ.

    ದಕ್ಷಿಣ ಸಿಯಾಚಿನ್ ಹಿಮ ಪ್ರದೇಶದಲ್ಲಿ ಸುಮಾರು 18,000 ಅಡಿಗಳಷ್ಟು ಎತ್ತರದಲ್ಲಿ ಭಾರತೀಯ ಸೈನ್ಯದ ಗಸ್ತು ತಂಡವು ಕಾರ್ಯನಿರ್ವಹಿಸುತ್ತಿದ್ದು, ಇಂದು ಮುಂಜಾನೆ ಹಿಮಪಾತ ಬಂದು ಅಪ್ಪಳಿಸಿದೆ. ಪರಿಣಾಮ ಇಬ್ಬರು ವೀರ ಯೋಧರು ಹುತಾತ್ಮರಾಗಿದ್ದಾರೆ.

    ವಿಷಯ ತಿಳಿದು ತಕ್ಷಣ ಭಾರತೀಯ ಸೇನೆಯ ರಕ್ಷಣಾ ತಂಡವು ಹೆಲಿಕಾಪ್ಟರ್ ಮೂಲಕ ಬಂದು ಸೈನಿಕರನ್ನು ರಕ್ಷಣೆ ಮಾಡಿದೆ. ಗಾಯಗೊಂಡ ಯೋಧರನ್ನು ಸೇನಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ ಹಿಮಪಾತದಲ್ಲಿ ಸಿಲುಕಿ ತೀವ್ರ ಗಾಯಗೊಂಡಿದ್ದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.

    ಇದೇ ರೀತಿ ಕಳೆದ ನವೆಂಬರ್ 18 ರಂದು ಆಗಿತ್ತು, ಎಂದಿನಂತೆ ಯೋಧರು ಗಸ್ತಿನಲ್ಲಿದ್ದಾಗ ಅಂದು ಮಧ್ಯಾಹ್ನ 3.30ರ ವೇಳೆಗೆ ಅವಘಡ ಸಂಭವಿಸಿತ್ತು. ತಕ್ಷಣ ಸೈನಿಕರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಹಿಮದಡಿ ಸಿಲುಕಿದ ದುರ್ಗ ರೆಜಿಮೆಂಟ್‍ನ 6 ಯೋಧರು ಮತ್ತು ಇಬ್ಬರು ನಾಗರಿಕರನ್ನು ಹೊರ ತೆಗೆದು ಹತ್ತಿರದ ಮಿಲಟರಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಅದರಲ್ಲಿ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದ ಕಾರಣ ಮೃತಪಟ್ಟಿದ್ದರು.

    2016ರಲ್ಲೂ ಹೀಗೆಯೇ ಆಗಿತ್ತು!: 2016ರಲ್ಲಿ ಸಿಯಾಚಿನ್‍ನಲ್ಲಿ ಸಂಭವಿಸಿದ್ದ ಭಾರೀ ಹಿಮಪಾತದಲ್ಲಿ ಸಿಲುಕಿ ಕರ್ನಾಟಕದ ವೀರಯೋಧ ಹನುಮಂತಪ್ಪ ಕೊಪ್ಪದ್ 6 ದಿನಗಳ ಬಳಿಕ ಪತ್ತೆಯಾಗಿದ್ದರು. ಅವರನ್ನು ಜೀವಂತವಾಗಿ ಪತ್ತೆ ಮಾಡಿದ್ದರೂ ಬಹು ಅಂಗಾಂಗ ವೈಫಲ್ಯದಿಂದ ಅವರು ವೀರ ಮರಣ ಹೊಂದಿದ್ದರು. ಸಾವಿಗೆ ಸವಾಲೊಡ್ಡಿ ಮಂಜುಗಡ್ಡೆಗಳ ಮಧ್ಯೆ ಜೀವನ್ಮರಣ ಹೋರಾಟ ನಡೆಸಿದ್ದ ವೀರಯೋಧ ಹನುಮಂತಪ್ಪ ಅವರಿಗೆ ಮರಣೋತ್ತರ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

    1984 ರಲ್ಲೂ ಇದೇ ರೀತಿ ಹಿಮಪಾತವಾಗಿ ಭಾರತ ಸೇನೆಯ ಸಾವಿರಕ್ಕೂ ಹೆಚ್ಚಿನ ಯೋಧರು ಹುತಾತ್ಮರಾಗಿದ್ದರು. ಇದರಲ್ಲಿ 35 ಜನ ಮಿಲಿಟರಿ ಆಫೀಸರ್ ಗಳು ಇದ್ದರು.

  • ಸಿಯಾಚಿನ್‍ನಲ್ಲಿ ಹಿಮಪಾತ – ನಾಲ್ವರು ಯೋಧರು, ಇಬ್ಬರು ನಾಗರಿಕರು ಬಲಿ

    ಸಿಯಾಚಿನ್‍ನಲ್ಲಿ ಹಿಮಪಾತ – ನಾಲ್ವರು ಯೋಧರು, ಇಬ್ಬರು ನಾಗರಿಕರು ಬಲಿ

    ನವದೆಹಲಿ: ವಿಶ್ವದ ಅತಿ ಎತ್ತರದ ಯುದ್ಧ ಭೂಮಿ ಸಿಯಾಚಿನ್ ಉತ್ತರ ಭಾಗದಲ್ಲಿ ಸಂಭವಿಸಿದ ಹಿಮಪಾತಕ್ಕೆ ನಾಲ್ವರು ಯೋಧರು ಹಾಗೂ ಇಬ್ಬರು ನಾಗರಿಕರು ಬಲಿಯಾಗಿದ್ದಾರೆ.

    ಸಿಯಾಚಿನ್‍ನಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಹಿಮಪಾತದಲ್ಲಿ ಸುಮಾರು 8ಕ್ಕೂ ಹೆಚ್ಚು ಯೋಧರು ಸಿಲುಕಿದ್ದಾರೆ ಎಂದು ಸೇನಾ ಮೂಲಗಳು ಮಾಹಿತಿ ನೀಡಿದ್ದವು. ಈ ವೇಳೆ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಹಿಮದಡಿಯಲ್ಲಿ ಸಿಲುಕಿದವರನ್ನು ರಕ್ಷಿಸಿ, ಹೆಲಿಕಾಪ್ಟರ್ ಮೂಲಕ ಮಿಲಿಟರಿ ಆಸ್ಪತ್ರೆಗೆ ರವಾನಿಸಲಾಗಿತ್ತು.

    ಯೋಧರು ಎಂದಿನಂತೆ ಗಸ್ತಿನಲ್ಲಿದ್ದಾಗ ಈ ಅವಘಡ ಸಂಭವಿಸಿದ್ದು, ಸೋಮವಾರ ಮಧ್ಯಾಹ್ನ 3.30ರ ವೇಳೆಗೆ ಘಟನೆ ನಡೆದಿತ್ತು. ತಕ್ಷಣ ಸೈನಿಕರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಹಿಮದಡಿ ಸಿಲುಕಿದ ದುರ್ಗ ರೆಜಿಮೆಂಟ್‍ನ 6 ಯೋಧರು ಮತ್ತು ಇಬ್ಬರು ನಾಗರಿಕರನ್ನು ಹೊರ ತೆಗೆದು ಹತ್ತಿರದ ಮಿಲಟರಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಅದರಲ್ಲಿ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದ ಕಾರಣ ಮೃತಪಟ್ಟಿದ್ದಾರೆ.

    2016ರಲ್ಲೂ ಹೀಗೆಯೇ ಆಗಿತ್ತು!: 2016ರಲ್ಲಿ ಸಿಯಾಚಿನ್‍ನಲ್ಲಿ ಸಂಭವಿಸಿದ್ದ ಭಾರೀ ಹಿಮಪಾತದಲ್ಲಿ ಸಿಲುಕಿ ಕರ್ನಾಟಕದ ವೀರಯೋಧ ಹನುಮಂತಪ್ಪ ಕೊಪ್ಪದ್ 6 ದಿನಗಳ ಬಳಿಕ ಪತ್ತೆಯಾಗಿದ್ದರು. ಅವರನ್ನು ಜೀವಂತವಾಗಿ ಪತ್ತೆ ಮಾಡಿದ್ದರೂ ಬಹು ಅಂಗಾಂಗ ವೈಫಲ್ಯದಿಂದ ಅವರು ವೀರ ಮರಣ ಹೊಂದಿದ್ದರು. ಸಾವಿಗೆ ಸವಾಲೊಡ್ಡಿ ಮಂಜುಗಡ್ಡೆಗಳ ಮಧ್ಯೆ ಜೀವನ್ಮರಣ ಹೋರಾಟ ನಡೆಸಿದ್ದ ವೀರಯೋಧ ಹನುಮಂತಪ್ಪ ಅವರಿಗೆ ಮರಣೋತ್ತರ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

    1984 ರಲ್ಲೂ ಇದೇ ರೀತಿ ಹಿಮಪಾತವಾಗಿ ಭಾರತ ಸೇನೆಯ ಸಾವಿರಕ್ಕೂ ಹೆಚ್ಚಿನ ಯೋಧರು ಹುತಾತ್ಮರಾಗಿದ್ದರು. ಇದರಲ್ಲಿ 35 ಜನ ಮಿಲಿಟರಿ ಆಫೀಸರ್ ಗಳು ಇದ್ದರು.

  • ಹಿಮಾಚಲ ಪ್ರದೇಶದಲ್ಲಿ ಹಿಮಪಾತ – ಓರ್ವ ಯೋಧ ಹುತಾತ್ಮ, 5 ಮಂದಿ ಕಣ್ಮರೆ

    ಹಿಮಾಚಲ ಪ್ರದೇಶದಲ್ಲಿ ಹಿಮಪಾತ – ಓರ್ವ ಯೋಧ ಹುತಾತ್ಮ, 5 ಮಂದಿ ಕಣ್ಮರೆ

    ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಹಿಮಪಾತದಡಿ ಸಿಲುಕಿ ಯೋಧರೊಬ್ಬರು ಮೃತಪಟ್ಟಿದ್ದು, ಐವರು ಕಣ್ಮರೆಯಾಗಿದ್ದಾರೆ,

    ಈಗಾಗಲೇ ಹಿಮಪಾತದಡಿ ಸಿಲುಕಿದ ಹುತಾತ್ಮ ಯೋಧನ ಮೃತದೇಹವನ್ನು ಹೊರತೆಗೆಯಲಾಗಿದ್ದು, ಇನ್ನುಳಿದ ಐವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಹೀಗಾಗಿ ಅವರ ರಕ್ಷಣೆಗೆ ಯೋಧರು ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ಕಿನ್ನೌರ್ ಉಪ ಆಯುಕ್ತರು ಗೋಪಾಲ್ ಚಂದ್ ತಿಳಿಸಿದ್ದಾರೆ.

    ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಇಂಡೋ-ಚೀನಾ ಗಡಿಭಾಗದ ಶಿಪ್ಕಿ ಲಾ ವಲಯದಲ್ಲಿ ಹಿಮಕುಸಿತ ಉಂಟಾಗಿದ್ದು, ಈ ವೇಳೆ ಹಲವು ಯೋಧರು ಅದರೊಳಗೆ ಸಿಲುಕಿದ್ದಾರೆ. ಕೂಡಲೇ ಕೆಲವರನ್ನು ರಕ್ಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ಸೇನಾ ಮೂಲಗಳ ಪ್ರಕಾರ, ಇಂಡೋ ಟಿಬೆಟ್ ಬಾರ್ಡರ್ ಪೊಲೀಸ್ ಮತ್ತು ಸೇನೆಯ ಎರಡು ತಂಡಗಳು ಶಿಪ್ಕಿ ಲಾ ವಲಯದಲ್ಲಿ ಗಸ್ತು ತಿರುಗುತ್ತಿದ್ದರು. 16 ಮಂದಿ ಯೋಧರು ಗುಸ್ತು ತಿರುಗುತ್ತಿದ್ದ ವೇಳೆ ಏಕಾಏಕಿ ಹಿಮಪಾತವಾಗಿದೆ. ಈಗ 150 ಕ್ಕೂ ಹೆಚ್ಚು ಮಂದಿ ಯೋಧರು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಿಮಪಾತಕ್ಕೆ ಸೇಬು ಬೆಳೆ ಹಾನಿ- ಸಂಚಾರ, ವಿದ್ಯುತ್ ಅಸ್ತವ್ಯಸ್ತ

    ಹಿಮಪಾತಕ್ಕೆ ಸೇಬು ಬೆಳೆ ಹಾನಿ- ಸಂಚಾರ, ವಿದ್ಯುತ್ ಅಸ್ತವ್ಯಸ್ತ

    -ಕ್ಯಾಂಡಲ್ ಬೆಳಕಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮಪಾತ ಆರಂಭವಾಗಿದ್ದು, ರಸ್ತೆ, ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಸೇಬು ಗಿಡಗಳ ಮೇಲೆ ಹಿಮ ಬಿದ್ದ ಪರಿಣಾಮ ಭಾರೀ ಹಾನಿ ಉಂಟಾಗಿದೆ.

    ಬೃಹತ್ ಪ್ರಮಾಣದಲ್ಲಿ ಸೇಬು ಗಿಡಗಳು ಹಾಳಾಗಿವೆ. ಇದರಿಂದಾಗಿ ಆರ್ಥಿಕತೆಯ ಮೇಲೆ ಭಾರೀ ಪರಿಣಾಮ ಬೀರಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ ಅವರು ಇಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಸೇಬು ಬೆಳೆಗಾರರಿಗೆ ಆಗಿರುವ ನಷ್ಟವನ್ನು ಭರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

    ಕಳೆದ ಎರಡು ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ಬಾರಿ ನವೆಂಬರ್ ಆರಂಭದಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಹಿಮಪಾತ ಕಂಡು ಬಂದಿದೆ. ಇದೇ ರೀತಿ 2009, 2008 ಮತ್ತು 2004ರಲ್ಲಿ ಹಿಮಪಾತ ಸಂಭವಿಸಿತ್ತು ಅಂತ ಹವಾಮಾನ ಇಲಾಖೆ ತಿಳಿಸಿದೆ ಎಂದು ವರದಿಯಾಗಿದೆ.

    ಕಾಶ್ಮೀರದ ಗುಲ್ಮರ್ಗ್ ಕನಿಷ್ಠ ಮೂರು ಡಿಗ್ರಿ ಸೆಲ್ಸಿಯಸ್ ಹಾಗೂ ಶ್ರೀನಗರದಲ್ಲಿ 1.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ವಿದ್ಯುತ್ ಕಡಿತವಾಗಿದ್ದು, ವಿದ್ಯಾರ್ಥಿಗಳು ಕ್ಯಾಂಡಲ್ ಬೆಳಕಿನಲ್ಲಿ ಪರೀಕ್ಷೆ ಬರೆದಿದ್ದಾರೆ. ಅಷ್ಟೇ ಅಲ್ಲದೆ ಆಸ್ಪತ್ರೆಗಳಿಗೆ ವಿದ್ಯುತ್ ಕಡಿತದ ಬಿಸಿ ತಟ್ಟಿದೆ. ಹೀಗಾಗಿ ವಿದ್ಯುತ್ ದುರಸ್ತಿ ಕಾರ್ಯದಲ್ಲಿ 7 ಸಾವಿರ ಸಿಬ್ಬಂದಿ ತೊಡಗಿದ್ದಾರಂತೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಿಮಪಾತದಿಂದ 140 ಮಂದಿಯನ್ನು ರಕ್ಷಿಸಿದ ಸೇನೆ

    ಹಿಮಪಾತದಿಂದ 140 ಮಂದಿಯನ್ನು ರಕ್ಷಿಸಿದ ಸೇನೆ

    ಶ್ರೀನಗರ್: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತ ಮತ್ತು ಮಳೆಯಾಗುತ್ತಿದ್ದು, ಸೇನೆ ಮತ್ತು ಪೊಲೀಸರು ಸುಮಾರು 140 ಮಂದಿಯನ್ನು ರಕ್ಷಣೆ ಮಾಡಿದ್ದಾರೆ.

    ಭಾರೀ ಹಿಮಪಾತದಿಂದಾಗಿ ಪೂಂಚ್ ಜಿಲ್ಲೆಯ ಮುಘಲ್ ರಸ್ತೆಯ ಬಳಿ ಸಿಲುಕಿಕೊಂಡಿದ್ದ 140 ಮಂದಿಯನ್ನು ಪೊಲೀಸರು ಮತ್ತು ಸೈನಿಕರು ಶುಕ್ರವಾರ ರಾತ್ರಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಅಷ್ಟೇ ಅಲ್ಲದೇ ರಕ್ಷಿಸಿದ ಜನರನ್ನು ಸುರಣ್‍ಕೋಟ್‍ನಲ್ಲಿರುವ ಸೇನಾ ಶಿಬಿರಕ್ಕೆ ಕರೆತಂದಿದ್ದಾರೆ. ಅಲ್ಲಿಯೇ ಸಂತ್ರಸ್ತರಿಗೆ ಆಹಾರ ಸರಬರಾಜು ಮಾಡಲಾಗುತ್ತಿದೆ.

    ಶುಕ್ರವಾರದಿಂದಲೂ ಜಮ್ಮು ಮತ್ತು ಕಾಶ್ಮೀರದ ಅನೇಕ ಪ್ರದೇಶಗಳಲ್ಲಿ ಭಾರೀ ಹಿಮಪಾತವಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಹಿಮ ಸುತ್ತಲೂ ಆವರಿಸಿಕೊಂಡಿವೆ. ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಶುಕ್ರವಾರದಿಂದಲೇ ಭಾರೀ ಮಳೆಯಾಗುತ್ತಿದ್ದು, ಹಿಮಾಚಲ ಪ್ರದೇಶದ ಅನೇಕ ಜಿಲ್ಲೆಗಳಲ್ಲೂ ಹಿಮಾಪಾತವಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv