Tag: ಹಿಮಾಚಲ

  • ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಕುಂಭದ್ರೋಣ ಮಳೆ – 66 ಮಂದಿ ಸಾವು

    ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಕುಂಭದ್ರೋಣ ಮಳೆ – 66 ಮಂದಿ ಸಾವು

    ನವದೆಹಲಿ: ಹಿಮಾಚಲ ಪ್ರದೇಶ (Himachal) ಮತ್ತು ಉತ್ತರಾಖಂಡದಲ್ಲಿ (Uttar Kand) ನಿರಂತರ ಮಳೆ (Rain) ಮತ್ತು ಭೂಕುಸಿತದಿಂದ 66 ಜನರು ಸಾವನ್ನಪ್ಪಿದ್ದಾರೆ. ಭೂ ಕುಸಿತದಿಂದಾಗಿ ಮನೆಗಳ ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಹಿಮಾಚಲ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಸಾವುಗಳು ಸಂಭವಿಸಿವೆ. ಆಗಸ್ಟ್ 13 ರಿಂದ ಭಾರೀ ಮಳೆ ಆಗುತ್ತಿದ್ದು, ಇದರ ಪರಿಣಾಮ 60 ಜನರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ. ಅಲ್ಲದೇ ಮುಂದಿನ ಎರಡು ದಿನಗಳಲ್ಲಿ ಹಿಮಾಚಲ ಪ್ರದೇಶದಲ್ಲಿ ಮತ್ತು ಮುಂದಿನ ನಾಲ್ಕು ದಿನಗಳಲ್ಲಿ ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಕಚೇರಿ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಕರ್ನಾಟಕ ನೆರೆ ರಾಜ್ಯ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ 3.4 ತೀವ್ರತೆ ಭೂಕಂಪ

    ಮಂಗಳವಾರ ನಡೆದ ರಕ್ಷಣಾ ಕಾರ್ಯಚರಣೆಯಲ್ಲಿ ಭೂಕುಸಿತದಿಂದಾಗಿ ಅವಶೇಷಗಳಲ್ಲಿ ಸಿಲುಕಿದ್ದ ಮೂರು ದೇಹಗಳನ್ನು ಹೊರತೆಗೆಯಲಾಗಿದೆ. ಶಿಮ್ಲಾದಲ್ಲಿ ಕುಸಿದ ಶಿವ ದೇವಾಲಯದ ಅವಶೇಷಗಳಿಂದ ಒಬ್ಬರ ದೇಹವನ್ನು ಹೊರತೆಗೆಯಲಾಗಿದೆ. ಈ ನಡುವೆ ನಗರದಲ್ಲಿ ಹೊಸದಾಗಿ ಭೂಕುಸಿತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಶಿಮ್ಲಾದ ಕೃಷ್ಣನಗರ ಪ್ರದೇಶದಲ್ಲಿ ಭೂಕುಸಿತದ ನಂತರ ಆರು ತಾತ್ಕಾಲಿಕ ಮನೆಗಳು ಸೇರಿದಂತೆ ಕನಿಷ್ಠ ಎಂಟು ಮನೆಗಳು ಕುಸಿದಿವೆ. ಸಮ್ಮರ್ ಹಿಲ್‍ನ ಶಿವ ದೇವಾಲಯ ಸ್ಥಳದಲ್ಲಿ 12, ಫಾಗ್ಲಿಯಲ್ಲಿ ಐದು ಮತ್ತು ಕೃಷ್ಣಾನಗರದಲ್ಲಿ ಎರಡು ಶವಗಳನ್ನು ಹೊರ ತೆಗೆಯಲಾಗಿದೆ. ಕುಸಿದ ಶಿವ ದೇವಾಲಯದಲ್ಲಿ ಇನ್ನೂ 10 ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ಇದೆ.

    ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ನೀಡಲಾಗಿದೆ. ಹಿಮಾಚಲ ಪ್ರದೇಶ ವಿಶ್ವವಿದ್ಯಾನಿಲಯವು ಆಗಸ್ಟ್ 19 ರವರೆಗೆ ಬೋಧನಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ. ವಿಶ್ವವಿದ್ಯಾನಿಲಯದ ಗ್ರಂಥಾಲಯವು ಆಗಸ್ಟ್ 20 ರವರೆಗೆ ಮುಚ್ಚಿರಲಿದೆ.

    ಪರಿಸ್ಥಿತಿಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಮಂಗಳವಾರ ಸಭೆ ನಡೆಸಿದ್ದಾರೆ. ಹಿಮಾಚಲ ಸರ್ಕಾರವು ಆದ್ಯತೆಯ ಆಧಾರದ ಮೇಲೆ ಪುನಃಸ್ಥಾಪನೆ ಪ್ರಯತ್ನಗಳನ್ನು ತ್ವರಿತಗೊಳಿಸಲು ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಒತ್ತಿ ಹೇಳಿದ್ದಾರೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾನಿಗೊಳಗಾದ ವಿದ್ಯುತ್ ಮತ್ತು ನೀರು ಸರಬರಾಜು ಯೋಜನೆಗಳನ್ನು ತ್ವರಿತವಾಗಿ ಪುನಃಸ್ಥಾಪಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಇಂದು ಬೆಳಗ್ಗೆ ಟ್ವೀಟ್‍ನಲ್ಲಿ ಅವರು, ಪಾಂಗ್ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಹೆಚ್ಚಾದ ಕಾರಣ ಕಂಗ್ರಾದ ತಗ್ಗು ಪ್ರದೇಶಗಳಲ್ಲಿ 800 ಕ್ಕೂ ಹೆಚ್ಚು ಜನರನ್ನು ಅವರ ಗ್ರಾಮಗಳಿಂದ ಸ್ಥಳಾಂತರಿಸಲಾಗಿದೆ. ಜಲಾಶಯದಲ್ಲಿ ಹೆಚ್ಚಿದ ನೀರಿನ ಮಟ್ಟದಿಂದಾಗಿ ಅಪಾಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ಉತ್ತರಾಖಂಡದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 6 ಏರಿದೆ. ಏಳು ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ಚಮೋಲಿ ಜಿಲ್ಲೆಯ ಜೋಶಿಮಠದ ಬಳಿಯ ಹೆಲಾಂಗ್‍ನಲ್ಲಿ ಮಂಗಳವಾರ ಕಟ್ಟಡವೊಂದು ಕುಸಿದಿದ್ದು, ಮೂವರನ್ನು ರಕ್ಷಿಸಲಾಗಿದ್ದು, ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮದ್ಮಹೇಶ್ವರ ಕಣಿವೆಯಲ್ಲಿ ಸಿಲುಕಿರುವ ಜನರನ್ನು ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಲಾಗಿದೆ. ನಾನೂದಲ್ಲಿ ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಿಸಿ, ರಾನ್ಸಿ ಗ್ರಾಮಕ್ಕೆ ಜನರ ಸ್ಥಳಾಂತರ ಮಾಡಲಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಉತ್ತರಾಖಂಡದ ಹಲವು ಸ್ಥಳಗಳಿಗೆ ಆಗಸ್ಟ್ 19 ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಕಾಲಕ್ರಮೇಣ ಮಳೆಯ ತೀವ್ರತೆ ಕಡಿಮೆಯಾಗಬಹುದು. ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜನರು ಹೊರಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ತೆಲಂಗಾಣದಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ಐವರ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಮಾಚಲ, ಉತ್ತರಾಖಂಡದಲ್ಲಿ ವರುಣನ ಆರ್ಭಟ – 54 ಮಂದಿ ಸಾವು

    ಹಿಮಾಚಲ, ಉತ್ತರಾಖಂಡದಲ್ಲಿ ವರುಣನ ಆರ್ಭಟ – 54 ಮಂದಿ ಸಾವು

    ನವದೆಹಲಿ: ಹಿಮಾಚಲ ಪ್ರದೇಶ (Himachal) ಮತ್ತು ಉತ್ತರಾಖಂಡ (Uttarakhand) ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು (Rain), ಈವರೆಗೂ 54 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಿಮಾಚಲ ಪ್ರದೇಶ ಒಂದರಲ್ಲಿ 51 ಜನ ಸಾವನ್ನಪ್ಪಿದ್ದು, ಉತ್ತರಾಖಂಡದಲ್ಲಿ 3 ಜನ ಮೃತಪಟ್ಟಿದ್ದಾರೆ.

    ಶಿಮ್ಲಾದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೂ ಕುಸಿತದಲ್ಲಿ (Landslide) ಈವರೆಗೂ 14 ಶವಗಳನ್ನು ಹೊರತೆಗೆಯಲಾಗಿದೆ. ಸಮ್ಮರ್ ಹಿಲ್ ಪ್ರದೇಶದ ಶಿವ ದೇವಾಲಯದ ಅವಶೇಷಗಳ ಅಡಿಯಲ್ಲಿ ಇನ್ನೂ ಹೆಚ್ಚಿನ ಜನರು ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಕ್ಕಳಾಗಿಲ್ಲ ಅಂತ ದೇವರ ಮೊರೆ ಹೋಗಿದ್ದ 24ರ ವಿವಾಹಿತೆ 54ರ ಪೂಜಾರಿ ಜೊತೆಯೇ ಜೂಟ್!

    ಮಂಡಿ ಜಿಲ್ಲೆಯಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ. ಸೋಲನ್ ಜಿಲ್ಲೆಯಲ್ಲಿ ಒಂದು ಕುಟುಂಬದ ಏಳು ಸದಸ್ಯರು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಕುಲು, ಕಿನ್ನೌರ್, ಲಾಹೌಲ್ ಮತ್ತು ಸ್ಪಿತಿ ಹೊರತುಪಡಿಸಿ ರಾಜ್ಯದ 12 ಜಿಲ್ಲೆಗಳ ಪೈಕಿ ಒಂಬತ್ತು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ಜಿಲ್ಲಾಧಿಕಾರಿ ಅರಿಂದಮ್ ಚೌಧರಿ ತಿಳಿಸಿದ್ದಾರೆ.

    ಯುನೆಸ್ಕೋ ವಿಶ್ವ ಪರಂಪರೆಯ ಶಿಮ್ಲಾ-ಕಲ್ಕಾ ರೈಲು ಮಾರ್ಗವು ಶಿಮ್ಲಾದ ಸಮ್ಮರ್ ಹಿಲ್ ಬಳಿ 50 ಮೀಟರ್ ಸೇತುವೆ, ಭೂಕುಸಿತದಿಂದ ಹಾನಿಗೊಳಗಾಗಿದೆ. ಟ್ರ್ಯಾಕ್‍ನ ಒಂದು ಭಾಗ ನೇತಾಡುತ್ತಿದೆ. ಈ ಭಾಗದಲ್ಲಿ ಸೇನೆ, ಎಸ್‍ಡಿಆರ್‍ಎಫ್, ಎನ್‍ಡಿಆರ್‍ಎಫ್, ಐಟಿಬಿಪಿ ಮತ್ತು ರಾಜ್ಯ ಪೊಲೀಸ್ ಸಿಬ್ಬಂದಿ ಪರಿಹಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅಲ್ಲದೇ ಉತ್ತರಾಖಂಡದಲ್ಲಿ 10 ಮಂದಿ ನಾಪತ್ತೆಯಾಗಿದ್ದಾರೆ. ಭೂಕುಸಿತ ಸಹ ಸಂಭವಿಸಿದ್ದು ಬದರಿನಾಥ್, ಕೇದಾರನಾಥ ಮತ್ತು ಗಂಗೋತ್ರಿ ದೇಗುಲಗಳಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳ ಸಂಪರ್ಕ ಕಡಿತವಾಗಿದೆ. ಇದರ ಬೆನ್ನಲ್ಲೇ ಚಾರ್ಧಾಮ್ ಯಾತ್ರೆಯನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ.

    ಕೇದಾರನಾಥ ಟ್ರೆಕ್ ಮಾರ್ಗದಲ್ಲಿ ಲಿಂಚೋಲಿಯಲ್ಲಿ ಕ್ಯಾಂಪ್‍ಗೆ ಭೂಕುಸಿತ ಸಂಭವಿಸಿದ್ದು, ನಾಲ್ಕು ಅಂಗಡಿಗಳಿಗೆ ಹಾನಿಯಾಗಿದೆ. ಇದರಲ್ಲಿ ನೇಪಾಳದ ಒಬ್ಬ ಪ್ರಜೆ ಸಾವನ್ನಪ್ಪಿದ್ದಾರೆ. ಒಬ್ಬ ವ್ಯಾಪಾರಿ ನಾಪತ್ತೆಯಾಗಿದ್ದಾರೆ. ಋಷಿಕೇಶದ ಶಿವ ದೇವಾಲಯ ಮತ್ತು ಮೀರಾನಗರ ಪ್ರದೇಶಗಳ ಬಳಿ ಹೊಳೆಗಳಿಂದಲೂ ಎರಡು ಮೃತದೇಹಗಳನ್ನು ಮೇಲೆತ್ತಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಋಷಿಕೇಶ-ಕರ್ಣಪ್ರಯಾಗ ರೈಲು ಮಾರ್ಗ ಯೋಜನೆಯ `ಎಡಿಟ್ II’ ಎಂಬ ಹೆಸರಿನ ಸುರಂಗದಲ್ಲಿ ನೀರು ನುಗ್ಗಿ 114 ಕಾರ್ಮಿಕರು ಸಿಲುಕಿಕೊಂಡಿದ್ದರು. ಪೊಲೀಸರು ಸ್ಥಳಕ್ಕೆ ಧಾವಿಸಿ ಸುರಂಗದೊಳಗೆ ಸಂಗ್ರಹವಾದ ನೀರನ್ನು ಹೊರಹಾಕಿದ್ದಾರೆ. ಬಳಿಕ ಎಲ್ಲಾ 114 ಕಾರ್ಮಿಕರನ್ನು ಹಗ್ಗಗಳ ಸಹಾಯದಿಂದ ರಕ್ಷಿಸಲಾಗಿದೆ.

    ತೆಹ್ರಿ, ಹರಿದ್ವಾರ ಮತ್ತು ಋಷಿಕೇಶದಲ್ಲಿ ಗಂಗಾ (Ganga River) ಸೇರಿದಂತೆ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಹರಿದ್ವಾರದಲ್ಲಿ ಗಂಗಾ ನದಿಯು 295.60 ಮೀಟರ್, ಅಪಾಯದ ಮಟ್ಟಕ್ಕಿಂತ 1.60 ಮೀಟರ್ ಎತ್ತರದಲ್ಲಿ ಹರಿಯುತ್ತಿರುವುದರಿಂದ ಪರಿಸ್ಥಿತಿ ಆತಂಕಕಾರಿಯಾಗಿದೆ. ಗಂಗಾ ನದಿಯಿಂದ ಹರಿದ್ವಾರದ ಬೈರಾಗಿ ಶಿಬಿರಕ್ಕೂ ನೀರು ನುಗ್ಗಿದೆ. ರುದ್ರಪ್ರಯಾಗ, ಶ್ರೀನಗರ, ದೇವಪ್ರಯಾಗದ ಅಲಕನಂದಾ, ಮಂದಾಕಿನಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎಂದು ಡೆಹ್ರಾಡೂನ್‍ನ ವಿಪತ್ತು ನಿಯಂತ್ರಣಾಲಯ ತಿಳಿಸಿದೆ. ಇದನ್ನೂ ಓದಿ: ತಾಯಿ, ಸಹೋದರಿಯರಿಗೆ ಅವಮಾನ – ದೇಶವೇ ಮಣಿಪುರದೊಂದಿಗೆ ನಿಂತಿದೆ: ಮೋದಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ : ನಟ ಚೇತನ್

    ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಿ : ನಟ ಚೇತನ್

    ಲವು ವರ್ಷಗಳಿಂದ ಗಾಂಜಾ (Ganja) ಕುರಿತಾಗಿ ಹತ್ತಾರು ಹೇಳಿಕೆಗಳು ಬರುತ್ತಿವೆ. ಈ ಹಿಂದೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ನಟ ರಾಕೇಶ್ ಅಡಿಗ (Rakesh Adiga) ಕೂಡ ಗಾಂಜಾವನ್ನು ಕಾನೂನುಬದ್ಧಗೊಳಿಸಿ ಎಂದು ಹೇಳಿಕೆ ನೀಡಿದ್ದರು. ಅದು ಭಾರೀ ಕೋಲಾಹಲವನ್ನೇ ಎಬ್ಬಿಸಿತ್ತು. ಡ್ರಗ್ಸ್ ವಿಚಾರವಾಗಿ ಸ್ಯಾಂಡಲ್ ವುಡ್ ಸುದ್ದಿಯಲ್ಲಿದ್ದಾಗ ಗಾಂಜಾ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೀಗ ಮತ್ತೆ ಚೇತನ್ (Chetan Ahimsa) ಆ ಕುರಿತು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

    ಹಿಮಾಚಲ (Himachal) ಮುಖ್ಯಮಂತ್ರಿ ಸುಖವಿಂದರ್  ಸುಖು ಗಾಂಜಾ ವಿಚಾರವಾಗಿ ಮಾತನಾಡಿದ್ದನ್ನು ಅನುಮೋದಿಸಿರುವ ಚೇತನ್, ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸುವತ್ತ ಗಮನಹರಿಸಬೇಕು ಎಂದಿದ್ದಾರೆ. ಸುಖವಿಂದರ್ ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸಲು ಯೋಜಿಸಿರುವುದನ್ನು ಚೇತನ್ ಬೆಂಬಲಿಸಿದ್ದಾರೆ. ಇದನ್ನೂ ಓದಿ:ಜ್ಯೂ.ಎನ್‌ಟಿಆರ್‌ಗೆ ಜೋಡಿಯಾದ ಆಲಿಯಾ ಭಟ್

    ಈ ಕುರಿತು ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಚೇತನ್, ‘ಗಾಂಜಾ ಕೃಷಿಯು ರಾಜ್ಯದ ಆದಾಯವನ್ನು ಹೇಗೆ ಹೆಚ್ಚಿಸುತ್ತದೆ ಮತ್ತು ರೋಗಿಗಳಿಗೆ ಔಷಧೀಯ ಪ್ರಯೋಜನಗಳನ್ನು ಹೇಗೆ ಒದಗಿಸುತ್ತದೆ ಎಂಬುದನ್ನು 5 ಸದಸ್ಯ ಸಮಿತಿಯೊಂದು ಅಧ್ಯಯನ ಮಾಡುತ್ತದೆ. ಉತ್ತರಾಖಂಡ, ಗುಜರಾತ್, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಕರ್ನಾಟಕವೂ ಗಾಂಜಾ ಕೃಷಿಯನ್ನು ಕಾನೂನುಬದ್ಧಗೊಳಿಸುವತ್ತ ಗಮನಹರಿಸಬೇಕು’ ಎಂದಿದ್ದಾರೆ.

    ಹಿಮಾಚಲದ ಮುಖ್ಯಮಂತ್ರಿಯ ನಡೆಯು ಒಳ್ಳೆಯದು ಎಂದು ಚೇತನ್ ಪ್ರಶಂಸೆ ಮಾಡಿದ್ದಾರೆ. ಕರ್ನಾಟಕವೂ ಇದರತ್ತ ಗಮನ ಹರಿಸಬೇಕು ಎಂದಿದ್ದಾರೆ. ಇದು ರಾಜ್ಯದ ಆದಾಯವನ್ನು ಹೇಗೆ ಹೆಚ್ಚಿಸುತ್ತದೆ ಎನ್ನುವ ಕುರಿತು ಅಧ್ಯಯನವಾಗಲಿ ಎಂದು ಅವರು ಬರೆದುಕೊಂಡಿದ್ದಾರೆ.

  • ಹಿಮಾಚಲ ಉಪಸಭಾಪತಿಯಿಂದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಆರೋಪ

    ಹಿಮಾಚಲ ಉಪಸಭಾಪತಿಯಿಂದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಆರೋಪ

    ಶಿಮ್ಲಾ: ಬಿಜೆಪಿ ಶಾಸಕ ಮತ್ತು ಹಿಮಾಚಲ ವಿಧಾನಸಭೆಯ ಉಪಸಭಾಪತಿ ಹಂಸರಾಜ್ ಸರ್ಕಾರಿ ಶಾಲೆಯೊಂದಕ್ಕೆ ಭೇಟಿ ನೀಡಿದ್ದ ವೇಳೆ ವಿದ್ಯಾರ್ಥಿಯೊಬ್ಬನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಚಂಬಾ ಜಿಲ್ಲೆಯ ಚುರಾ ವಿಧಾನಸಭಾ ಕ್ಷೇತ್ರದ ಪ್ರತಿನಿಧಿಯಾಗಿರುವ ಹಂಸರಾಜ್ ಅವರು ದಿಢೀರ್ ತಪಾಸಣೆಗೆಂದು ಗುರುವಾರ ರೈಲಾ ಗ್ರಾಮದ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಗೆ ಭೇಟಿ ನೀಡಿದ್ದರು. ಈ ವೇಳೆ ವಿದ್ಯಾರ್ಥಿಗಳಿಗೆ ಕೋವಿಡ್ ಮತ್ತು ಲಸಿಕೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಮಾತನಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇದನ್ನೂ ಓದಿ: ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಮುಳುಗಡೆ – ಸಿಲಿಕಾನ್ ಸಿಟಿಯಲ್ಲಿ ವಾತಾವರಣ ಕೂಲ್

    ಹಂಸರಾಜ್ ಅವರು ಮಾತನಾಡುತ್ತಿದ್ದಾಗ, ವಿದ್ಯಾರ್ಥಿಯೊಬ್ಬನು ನಗುತ್ತಿದ್ದನು. ಇದರಿಂದ ಕೋಪಗೊಂಡ ಉಪಸಭಾಪತಿ ವಿದ್ಯಾರ್ಥಿಗೆ ಯಾಕೆ ನಗುತ್ತಿದ್ದೀಯಾ ಎಂದು ಪ್ರಶ್ನಿಸಿ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದು ವೀಡಿಯೋದಲ್ಲಿ ಸೆರೆಯಾಗಿದ್ದರೂ ಸ್ಪಷ್ಟವಾಗಿ ಕಾಣುತ್ತಿಲ್ಲ. ಸದ್ಯ ಈ ವೀಡಿಯೋ ಸೋಶಿಯಕ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ವಿದ್ಯಾರ್ಥಿಗಳೊಂದಿಗೆ ಸಭಾಧ್ಯಕ್ಷರು ಈ ರೀತಿ ವರ್ತಿಸಿದ್ದಕ್ಕೆ ನೆಟ್ಟಿಗರಿಂದ ಟೀಕೆಗೆ ಒಳಗಾಗಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿ ತಂದೆ, ನಾವು ಇಲ್ಲಿಯವರೆಗೂ ನಮ್ಮ ಮಗನನ್ನು ಪ್ರೀತಿ ಮತ್ತು ವಾತ್ಸಲ್ಯದಿಂದ ಬೆಳೆಸಿದ್ದೇವೆ. ಆದರೆ ಎಂದಿಗೂ ಹೊಡೆದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬ್ರಿಗೇಡ್ ರೋಡ್‍ನಲ್ಲಿ ಕಟ್ಟಡದ ಮೇಲಿಂದ ಬಿದ್ದು ಯುವತಿ ಸಾವು