Tag: ಹಿರಿಯ ಅಧಿಕಾರಿ

  • ಹಿರಿಯ ಅಧಿಕಾರಿಯಿಂದ ಅವಮಾನವಾಗಿದೆ – ಠಾಣೆಯೊಳಗೆ ಗುಂಡು ಹಾರಿಸಿಕೊಂಡು ಪೊಲೀಸ್‌ ಆತ್ಮಹತ್ಯೆ

    ಹಿರಿಯ ಅಧಿಕಾರಿಯಿಂದ ಅವಮಾನವಾಗಿದೆ – ಠಾಣೆಯೊಳಗೆ ಗುಂಡು ಹಾರಿಸಿಕೊಂಡು ಪೊಲೀಸ್‌ ಆತ್ಮಹತ್ಯೆ

    ಚಂಡೀಗಢ: ಹಿರಿಯ ಅಧಿಕಾರಿಗಳ ಮೇಲೆ ಗಂಭೀರ ಆರೋಪ ಮಾಡಿ ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ ಪೊಲೀಸ್‌ ಠಾಣೆಯೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್‌ನಲ್ಲಿ ನಡೆದಿದೆ.

    ಸತೀಶ್‌ ಕುಮಾರ್‌ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಹಿರಿಯ ಅಧಿಕಾರಿಗಳಿಂದ ತುಂಬಾ ತೊಂದರೆ ಅನುಭವಿಸಿದ್ದೇನೆ. ಹೀಗಾಗಿ ನನ್ನ ಜೀವನವನ್ನು ಕೊನೆಗೊಳಿಸುತ್ತಿದ್ದೇನೆ ಎಂದು ವೀಡಿಯೋ ಮಾಡಿ ನಂತರ ಪೊಲೀಸ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ. ಠಾಣೆಯೊಳಗೆ ತನ್ನ ಸರ್ವಿಸ್‌ ರಿವಲ್ವಾರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಪರೀಕ್ಷೆ ಬರೆಯಲು ಈಜಿ ಚಂಪಾವತಿ ನದಿ ದಾಟಿದ ಯುವತಿ

    ಹೋಶಿಯಾರ್‌ಪುರದ ಹರಿಯಾಣಾ ಪೊಲೀಸ್ ಠಾಣೆಯಲ್ಲಿ ನಿಯೋಜನೆಗೊಂಡಿದ್ದ ಸತೀಶ್ ಕುಮಾರ್, ಗುರುವಾರ ಪರಿಶೀಲನೆ ವೇಳೆ ತಾಂಡಾ ಪೊಲೀಸ್ ಠಾಣೆಯ ಠಾಣಾಧಿಕಾರಿ (ಎಸ್‌ಹೆಚ್‌ಒ) ಓಂಕಾರ್ ಸಿಂಗ್ ಅವರು ನನ್ನನ್ನು ನಿಂದಿಸಿದ್ದರು. ನನ್ನನ್ನು ಹೀಗೆ ಅವಮಾನಿಸುವುದಕ್ಕಿಂತ ಸುಮ್ಮನೆ ಗುಂಡು ಹಾರಿಸಿದ್ದರೆ ಚೆನ್ನಾಗಿರುತ್ತಿತ್ತು ಎಂದು ವೀಡಿಯೋದಲ್ಲಿ ನೋವು ಹೇಳಿಕೊಂಡಿದ್ದಾರೆ.

    ಆತ್ಮಹತ್ಯೆ ಪ್ರಕರಣದ ನಂತರ ಎಸ್‌ಹೆಚ್‌ಒ ಅವರನ್ನು ಬೇರೆಡೆಗೆ ವರ್ಗಾಯಿಸಲಾಗಿದೆ. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕ್ಯಾಮೆರಾವನ್ನು ಲೆಕ್ಕಿಸದೇ ಕಿತ್ತಾಡಿದ ಮಹಿಳಾ ಆಯೋಗದ ಅಧ್ಯಕ್ಷೆ – ಪೊಲೀಸ್ ಅಧಿಕಾರಿ

    ಹೋಶಿಯಾರ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸರ್ತಾಜ್ ಸಿಂಗ್ ಚಾಹಲ್ ಅವರು, ಕಿರಿಯ ಪೊಲೀಸರಿಗೆ ಯಾವುದೇ ಸಮಸ್ಯೆ ಎದುರಾದರೂ ನನ್ನನ್ನು ಸಂಪರ್ಕಿಸಿ ಎಂದು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಿರುಕುಳ ತಪ್ಪಿಸಿ ಎಂದು ಶಾಸಕರ ಮುಂದೆ ಹಿರಿಯ ಅಧಿಕಾರಿ ಕಣ್ಣೀರು

    ಕಿರುಕುಳ ತಪ್ಪಿಸಿ ಎಂದು ಶಾಸಕರ ಮುಂದೆ ಹಿರಿಯ ಅಧಿಕಾರಿ ಕಣ್ಣೀರು

    ಮೈಸೂರು: ದೊಡ್ಡ ಹುದ್ದೆಯಲ್ಲಿ ಇರುವವರು ತಮ್ಮ ಕೆಳಗಿನ ಅಧಿಕಾರಿಗಳಿಗೆ ಕಿರುಕುಳ ನೀಡೋದು ಕೇಳಿದ್ದೇವೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ಕೆಳ ಹಂತದ ಅಧಿಕಾರಿಯೇ ತನ್ನ ಮೇಲಿನ ಅಧಿಕಾರಿಗೆ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.

    ಜಿಲ್ಲೆಯ ನಂಜನಗೂಡಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕೆಳ ಹಂತದ ಅಧಿಕಾರಿ ಹಾಗೂ ಅವರ ಪತಿಯಿಂದ ಆಗುತ್ತಿರುವ ಕಿರುಕುಳ ಹೇಳಿಕೊಂಡು ಹಿರಿಯ ಅಧಿಕಾರಿ ಶಾಸಕರ ಮುಂದೆ ಕಣ್ಣೀರಿಟ್ಟಿದ್ದಾರೆ. ತಾಲೂಕಿನ ಕಳಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಶಿಕಲಾ ಕಣ್ಣೀರಿಟ್ಟಿದ್ದಾರೆ.

    ನವಿಲೂರು ಉಪ ಪ್ರಾಥಮಿಕ ಕೇಂದ್ರ ಕಿರಿಯ ಸಹಾಯಕ ವೈದ್ಯಾಧಿಕಾರಿ ಶಾರದಾ ಹಾಗೂ ಇವರ ಪತಿ ಗೋಪಾಲ ಕೃಷ್ಣ ಎಂಬವರು ನನಗೆ ಕೆಲಸದಲ್ಲಿ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಮುಕ್ತಿ ಕೊಡಿಸಿ ಎಂದು ಶಾಸಕರಾದ ಹರ್ಷವರ್ಧನ್ ಮತ್ತು ಡಾ. ಯತೀಂದ್ರ ಸಿದ್ದರಾಮಯ್ಯ ಮುಂದೆ ಕಣ್ಣೀರಿಟ್ಟರು.

    ಕೆಲಸದ ವಿಚಾರದಲ್ಲಿ ಸಹಾಯಕ ವೈದ್ಯಾಧಿಕಾರಿ ಶಾರದಾ ಅವರಿಗೆ ನೋಟಿಸ್ ನೀಡಿದ್ದೆ. ಈ ಕಾರಣಕ್ಕೆ ನನಗೆ ಕಿರುಕುಳ ನೀಡುತ್ತಿದ್ದಾರೆ. ಅವರ ಪತಿ ಆರ್.ಟಿ.ಐ.ನಲ್ಲಿ ಅನಗತ್ಯವಾಗಿ ಅರ್ಜಿ ಸಲ್ಲಿಸಿ ನನಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಇದರಿಂದ ಮುಕ್ತಿ ಕೊಡಿಸಿ ಎಂದು ಮನವಿ ಮಾಡಿದರು. ಮನವಿ ಆಲಿಸಿದ ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಈ ವಿಷಯ ತಿಳಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

  • ಹಿರಿಯ ಅಧಿಕಾರಿಗಳನ್ನು ನಾನ್ ನೋಡ್ಕೋತಿನಿ- ಕಂತೆ ಕಂತೆ ಹಣ ಪಡೆದ ಪೊಲೀಸ್ ಪೇದೆ

    ಹಿರಿಯ ಅಧಿಕಾರಿಗಳನ್ನು ನಾನ್ ನೋಡ್ಕೋತಿನಿ- ಕಂತೆ ಕಂತೆ ಹಣ ಪಡೆದ ಪೊಲೀಸ್ ಪೇದೆ

    ಬೆಂಗಳೂರು: ಸಿಸಿಬಿ ಪೊಲೀಸ್ ಪೇದೆಯೊಬ್ಬರು ಸ್ಪಾ ಮಾಲೀಕರೊಬ್ಬರಿಂದ ಕಂತೆ ಕಂತೆ ಹಣ ಪಡೆದಿರುವ ವಿಡಿಯೋ ಬಹಿರಂಗವಾಗಿದೆ.

    ರಾಜಾಜಿನಗರದ ಸ್ಪಾ ಬಳಿ ಹೋದ ಇಬ್ಬರು ಪೇದೆಗಳು, ಮಾಲೀಕನಿಗೆ “ನೀವೇನು ಭಯಪಡಬೇಡಿ ಹಿರಿಯ ಅಧಿಕಾರಿಗಳನ್ನು ನಾವು ನೋಡಿಕೊಳ್ಳುತ್ತೇವೆ. ಸಿಸಿಬಿ ಹಿರಿಯ ಅಧಿಕಾರಿಗಳು ರೇಡ್ ಮಾಡುವಾಗ ನಮಗೆ ಮೊದಲೇ ಇಂತಹ ದಿನ ನಿಮ್ಮ ಏರಿಯಾದಲ್ಲಿ ರೇಡ್‍ಗೆ ಬರುತ್ತೇವೆ, ಹುಷಾರಾಗಿ ಎಂದು ನಮಗೆ ವಾಟ್ಸಾಪ್ ಕಾಲ್ ಮಾಡಿ ಹೇಳುತ್ತಾರೆ. ನಾವು ಆಗ ಎಲ್ಲಾ ಅಕ್ರಮ ಚಟುವಟಿಕೆಗಳ ನಡೆಯುವ ಜಾಗದ ಮಾಲೀಕರಿಗೆ ಅಲರ್ಟ್ ಮಾಡಿಬಿಡ್ತೀವಿ. ಸೀನಿಯರ್ ಆಫೀಸರ್ ಗಳ ಬಗ್ಗೆ ನೀವೇನು ಭಯಪಡಬೇಡಿ” ಎಂದು ಹೇಳಿದ್ದಾರೆ.

    ಸದ್ಯ ಇಬ್ಬರು ಪೇದೆ ಸ್ಪಾ ಮಾಲೀಕರ ಬಳಿ ಹಣ ಪಡೆದಿರುವ ವಿಡಿಯೋ ಈಗ ವೈರಲ್ ಆಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಸಿಬಿ ಡಿಸಿಪಿ ಕುಲ್ ದಿಲ್ ಕುಮಾರ್ ಜೈನ್ ಮಾತನಾಡಿ, ವಿಡಿಯೋ ವಿಚಾರ ನಮ್ಮ ಗಮನಕ್ಕೆ ಬಂದಿದೆ. ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ತೀವಿ ಎಂದು ತಿಳಿಸಿದರು,