Tag: ಹಿರಿಯ ನಾಗರಿಕರು

  • ಆಸ್ತಿ ಬರೆಸಿ ವೃದ್ಧ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿದ್ದಾರೆ ಮಕ್ಕಳು!

    ಆಸ್ತಿ ಬರೆಸಿ ವೃದ್ಧ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿದ್ದಾರೆ ಮಕ್ಕಳು!

    – ಬಿಮ್ಸ್‌ ಒಂದರಲ್ಲೇ 150 ಪ್ರಕರಣ ವರದಿ
    – ಮಕ್ಕಳ ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ

    ಕಲಬುರಗಿ: ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂಥ ಅಮಾನವೀಯ ಕೃತ್ಯಗಳಿಗೆ ಬ್ರೇಕ್‌ ಹಾಕಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ.

    ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು (Elderly Parents) ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ (Hospital) ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಅದೂ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ.

    ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿ ಇಂಥ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ: ಬೀದರ್‌ನಲ್ಲಿ ಏಕಾಏಕಿ ಕಾಗೆಗಳ ಸರಣಿ ಸಾವು – ಹಕ್ಕಿ ಜ್ವರದ ಆತಂಕ?

    ಈ ವಿಷಯವನ್ನು ಅರಿತ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್, ತೀವ್ರ ಬೇಸರ ವ್ಯಕ್ತಪಡಿಸಿದರಲ್ಲದೇ, ಕೂಡಲೇ ವಿಲ್‌ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಕ್ರಮ ಕೈಗೊಳ್ಳಲು ಸಚಿವರು ಆದೇಶ ನೀಡಿದ್ದಾರೆ.

    ಈ ಸಂಬಂಧ ಸಚಿವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಹಲವು ವಿಷಯಗಳನ್ನು ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ವಿಕಾಸ ಸೌಧದಲ್ಲಿ ರಾಜ್ಯದ ವಿವಿಧ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಇತರ ಸದಸ್ಯರ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.

    ಈ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಸಚಿವರು, ಈ ಕುರಿತ ಪ್ರಕರಣಗಳು ಕಂಡು ಬಂದ ಕೂಡಲೇ ವೈದ್ಯಕೀಯ ಶಿಕ್ಷಣ ನಿರ್ದೇಶಕರು (ಡಿಎಂಇ) ಕೂಡಲೇ ಸಹಾಯಕ ಆಯುಕ್ತರಿಗೆ (ಕಂದಾಯ ಉಪವಿಭಾಗ) ದೂರುಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.

    ತಮ್ಮ ಮಕ್ಕಳ ಪರವಾಗಿ ಮಾಡಿದ ವಿಲ್‌ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಪರಿತ್ಯಕ್ತ ಪೋಷಕರಿಗೆ ಸಚಿವರು ಕರೆ ನೀಡಿದ್ದಾರೆ.

    ತಮ್ಮ ಮಕ್ಕಳು ನಮ್ಮನ್ನು ನೋಡಿಕೊಳ್ಳಲು ಆಗದೇ, ತೊರೆದಿದ್ದಾರೆ. ಕೆಲವರು ಆರ್ಥಿಕ ಸಂಕಷ್ಟಗಳಿಂದ ನಮ್ಮನ್ನು ಇಲ್ಲಿ ಬಿಟ್ಟಿದ್ದಾರೆ. ನಮ್ಮ ಆಸ್ತಿಗಳನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ನಂತರ ಮಕ್ಕಳು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಸೇರಿಸಿ ಹೊರಟುಹೋಗಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಊಟ, ವಸತಿ, ಆಶಯ ಉಚಿತವಾಗಿ ಸಿಗುತ್ತದೆ ಎಂಬ ಉದ್ದೇಶದಿಂದ ನಮ್ಮನ್ನು ಇಲ್ಲಿ ಬಿಟ್ಟುಹೋಗಿದ್ದಾರೆ ಎಂದು ಪರಿತ್ಯಕ್ತ ಪೋಷಕರು ತಿಳಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಇಂಥ ಪರಿತ್ಯಕ್ತ ಹಿರಿಯ ನಾಗರಿಕರನ್ನು ಬಿಐಎಂಎಸ್ ಅಧಿಕಾರಿಗಳು ಬೆಳಗಾವಿ ಮತ್ತು ಸುತ್ತಮುತ್ತಲಿನ 70 ಹಿರಿಯ ನಾಗರಿಕರ ನಿವೃತ್ತಿ ಗೃಹಗಳಲ್ಲಿ ಅಥವಾ ವೃದ್ಧಾಶ್ರಮಗಳಲ್ಲಿ ಆಶ್ರಯ ಕಲ್ಪಿಸಿಕೊಟ್ಟಿದ್ದಾರೆ. ಆದರೆ ಇನ್ನೂ ಅನೇಕರು ಆಸ್ಪತ್ರೆಗಳಲ್ಲಿಯೇ ಇದ್ದಾರೆ.

    ಹಿರಿಯ ನಾಗರಿಕರ ಕಾಯ್ದೆಯಡಿ ಕಾನೂನು ಕ್ರಮ
    ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007 ರ ಅಡಿಯಲ್ಲಿ ಸಹಾಯಕ ಆಯುಕ್ತರು ಕ್ರಮ ಕೈಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ದೂರುಗಳನ್ನು ಸಲ್ಲಿಸಬೇಕು ಎಂದು ಡಾ. ಪಾಟೀಲ್ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    “ಈ ಕಾನೂನಿನ ಬಗ್ಗೆ ಅನೇಕ ಜನರಿಗೆ ತಿಳಿದಿಲ್ಲ. ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರಿಗೆ ಆರ್ಥಿಕ ಮತ್ತು ವೈದ್ಯಕೀಯ ಬೆಂಬಲವನ್ನು ಒದಗಿಸಬೇಕು ಎಂಬ ನಿಯಮವಿದೆ. ಅವರು ಹಾಗೆ ಮಾಡಲು ವಿಫಲವಾದರೆ, ಪೋಷಕರು ತಮ್ಮ ಮಕ್ಕಳ ಪರವಾಗಿ ಮಾಡಿದ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸುವ ಕಾನೂನುಬದ್ಧ ಹಕ್ಕು ಹೊಂದಿರುತ್ತಾರೆ” ಎಂದು ಡಾ. ಪಾಟೀಲ್ ಹೇಳಿದ್ದಾರೆ.

    ಕಾಯ್ದೆಯ ಸೆಕ್ಷನ್ 23 ರ ಪ್ರಕಾರ, ಮಕ್ಕಳು ಆಸ್ತಿಯನ್ನು ಆನುವಂಶಿಕವಾಗಿ ಪಡೆದ ನಂತರ ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ, ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ವಯಸ್ಸಾದ ಪೋಷಕರಿಗೆ ಮಾಲೀಕತ್ವವನ್ನು ಪುನಃ ಪಡೆಯಲು ಕಾಯ್ದೆಯಲ್ಲಿ ಅನುಮತಿ ಇದೆ ಎಂದು ತಿಳಿಸಲಾಗಿದೆ.

     

  • ಸಮಾಜಮುಖಿ ಕಾರ್ಯಗಳ ಮೂಲಕ ಹಿರಿಯರಿಗೆ ಗೌರವ ಸಲ್ಲಿಸಬೇಕು: ಸಿದ್ದರಾಮಯ್ಯ

    ಸಮಾಜಮುಖಿ ಕಾರ್ಯಗಳ ಮೂಲಕ ಹಿರಿಯರಿಗೆ ಗೌರವ ಸಲ್ಲಿಸಬೇಕು: ಸಿದ್ದರಾಮಯ್ಯ

    ಬೆಂಗಳೂರು: ಹಿರಿಯ ನಾಗರಿಕರ (Senior Citizens) ಸಾಧನೆಗಳು ಯುವಜನರಿಗೆ ಸ್ಪೂರ್ತಿ. ಹಿರಿಯರ ಬದುಕು ಕೇವಲ ಆದರ್ಶವಾಗಿಸದೇ, ಸಮಾಜಮುಖಿಯಾಗಿ ಕೆಲಸ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ಬೆಂಗಳೂರಿನ (Bengaluru) ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ವಿಶ್ವಹಿರಿಯ ನಾಗರೀಕರ ದಿನಾಚರಣೆ 2024 ಅನ್ನು ಉದ್ಘಾಟಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಬಾರಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು, ಘನತೆಯ ಬಾಳಿನೊಂದಿಗೆ ವಯೋಪಕ್ವತೆ, ವಿಶ್ವದಾದ್ಯಂತ ಹಿರಿಯ ಜೀವಿಗಳಿಗೆ ಆರೈಕೆ ಮತ್ತು ಬೆಂಬಲ ವ್ಯವಸ್ಥೆಗಳನ್ನು ಸದೃಢಗೊಳಿಸುವುದರ ಮಹತ್ವ ಎಂಬ ವಿಶ್ವಸಂಸ್ಥೆಯ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದರು. ಇದನ್ನೂ ಓದಿ: ಸಿಎಂ ಪತ್ನಿ ಪತ್ರದ ಬೆನ್ನಲ್ಲೇ 14 ಸೈಟ್‌ಗಳ ಸೇಲ್ ಡೀಡ್ ರದ್ದು; ಅಧಿಕಾರಿಗಳಿಂದ ಭೂಮಿ ಪರಿಶೀಲನೆ

    ಹಿರಿಯನ್ನು ಗೌರವದಿಂದ ಕಾಣಬೇಕು. ಅವರ ಅನುಭವಗಳನ್ನು ಗೌರವಿಸಿ ಪಾಲಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಹಿರಿಯರ ಕೊಡುಗೆಗಳು ಹಾಗೂ ಅವರ ಮಾರ್ಗದರ್ಶನದಿಂದ ಜೀವನದಲ್ಲಿ ಏಳಿಗೆಯನ್ನು ಕಾಣಬಹುದು. ಬಾಲ್ಯ, ಯೌವ್ವನ, ವೃದ್ಧಾಪ್ಯ, ಮಾನವನ ಜೀವನದ ಸಹಜ ಘಟ್ಟಗಳು. ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ ನೀಡಲೆಂಬ ಸದುದ್ದೇಶದಿಂದ ಹಿರಿಯ ನಾಗರಿಕನ್ನು ಗೌರವಿಸಿ ಸನ್ಮಾನಿಸಲಾಗುತ್ತದೆ. ನಮ್ಮ ಆತ್ಮಸಾಕ್ಷಿಯೇ ನ್ಯಾಯಾಲಯವಿದ್ದಂತೆ ಎಂದು ಮಹಾತ್ಮ ಗಾಂಧೀಜಿಯವರು ಹೇಳಿದ್ದರು. ಸಮಾಜದಲ್ಲಿ ಇಂದು ಮೌಢ್ಯಗಳು, ಕಂದಾಚಾರಗಳಿವೆ. ಇವುಗಳಿಗೆ ಜೋತುಬೀಳದೇ ವೈಚಾರಿಕತೆಯನ್ನು ಬೆಳೆಸಿಕೊಳ್ಳುವ ಅಗತ್ಯವಿದೆ. ರಾಷ್ಟçಕವಿ ಕುವೆಂಪುರವರು ತಿಳಿಸಿದಂತೆ ಮಾನವ, ಅಲ್ಪಮಾನವನಾಗದೇ, ವಿಶ್ವಮಾನವನಾಗಲು ಪ್ರಯತ್ನಿಸಬೇಕು. ಇದಕ್ಕಾಗಿ ಹಿರಿಯರ ಅನುಭವಗಳು ನಮಗೆ ದಾರಿದೀಪವಾಗಿದೆ ಎಂದು ನುಡಿದರು. ಇದನ್ನೂ ಓದಿ: ಹಿರಿಯ ನಾಗರಿಕರ ಮಾಸಾಶನ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ- ಲಕ್ಷ್ಮಿ ಹೆಬ್ಬಾಳ್ಕರ್

    2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ ಸುಮಾರು 57.91 ಲಕ್ಷದಷ್ಟು ಹಿರಿಯ ನಾಗರಿಕರಿದ್ದಾರೆ. ಇತ್ತೀಚಿನ ದಿನಮಾನದಲ್ಲಿ ವೃದ್ಧಾಶ್ರಮಗಳು ಹೆಚ್ಚುತ್ತಿವೆ. ಇದಕ್ಕೆ ಕಾರಣ, ಮಕ್ಕಳು ವಿದೇಶದಲ್ಲಿ ನೆಲೆಸಿ, ತಂದೆ-ತಾಯಿಯನ್ನು ಪೋಷಿಸಲು ಸಾಧ್ಯವಾಗದೇ ವೃದ್ಧಾಶ್ರಮಗಳಿಗೆ ಸೇರಿಸುತ್ತಾರೆ. ಸುಮಾರು 50 ಲಕ್ಷ ಹಿರಿಯ ನಾಗರಿಕರಿಗೆ ಮಾಸಾಶನ ನೀಡಲಾಗುತ್ತಿದೆ. ಈ ಮಾಸಾಶನದ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಅಕ್ಟೋಬರ್ 3ಕ್ಕೆ PSI ಪರೀಕ್ಷೆ; ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆ, ENT ವೈದ್ಯರ ನಿಯೋಜನೆ: – ಕೆಇಎ

    ಹಿರಿಯ ನಾಗರಿಕರ ನೆಮ್ಮದಿಗೆ ಹಾಗೂ ಆರೋಗ್ಯವನ್ನು ಖಾತ್ರಿಪಡಿಸುವುದು ಸರ್ಕಾರದ ಕರ್ತವ್ಯ. ತಾಲೂಕು ಕೇಂದ್ರಗಳಲ್ಲಿ ಡಯಾಲಿಸಿಸ್ ವ್ಯವಸ್ಥೆಯನ್ನು ಮಾಡಿಕೊಡಲಾಗಿದೆ. ಸಮಸಮಾಜ ನಿರ್ಮಿಸುವ ನಮ್ಮ ಗುರಿಯನ್ನು ಈಡೇರಿಸಲು ಆರ್ಥಿಕವಾಗಿ, ಸಾಮಾಜಿಕವಾಗಿ ಆಶಕ್ತರಾಗಿರುವ ಜನರಿಗೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಹಿರಿಯ ನಾಗರಿಕರು, ವಿಕಲಚೇತನರ ಬೇಡಿಕೆಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಪ್ರಶಸ್ತಿ ವಿಜೇತರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಪ್ರಶಸ್ತಿ ಪುರಸ್ಕೃತರ ಸಾಧನೆಗಳು ಯುವಜನರಿಗೆ ಪ್ರೇರಣೆಯಾಗಲಿ ಎಂದು ಆಶಿಸಿದರು. ಇದನ್ನೂ ಓದಿ: ನಸ್ರಲ್ಲಾ ಹತ್ಯೆ ಬಳಿಕ ಹಿಜ್ಬುಲ್ಲಾ ಪ್ರತೀಕಾರದ ದಾಳಿ – ಮೊಸಾದ್‌ ಹೆಡ್‌ಕ್ವಾರ್ಟಸ್‌ ಮೇಲೆ ಅಟ್ಯಾಕ್‌

  • ಮಾರ್ಚ್ 1 ರಿಂದ ಹಿರಿಯ ನಾಗರಿಕರಿಗೆ ಉಚಿತ ಕೊರೊನಾ ಲಸಿಕೆ – ಕೇಂದ್ರ ಸರ್ಕಾರ

    ಮಾರ್ಚ್ 1 ರಿಂದ ಹಿರಿಯ ನಾಗರಿಕರಿಗೆ ಉಚಿತ ಕೊರೊನಾ ಲಸಿಕೆ – ಕೇಂದ್ರ ಸರ್ಕಾರ

    ನವದೆಹಲಿ: ಹಿರಿಯ ನಾಗರಿಕರಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಹಾಗೂ 45 ವರ್ಷ ಮೇಲ್ಪಟ್ಟ 2ಕ್ಕಿಂತ ಹೆಚ್ಚು ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು ಸರ್ಕಾರ ತಿಳಿಸಿದೆ.

    ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಪ್ರಕಾಶ್ ಜಾವಡೇಕರ್, ಮಾರ್ಚ್ 1ರಿಂದ ಹಿರಿಯ ನಾಗರಿಕರಿಗೆ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆ ಆರಂಭವಾಗಲಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಎರಡರಲ್ಲೂ ಲಸಿಕೆ ಪಡೆಯಬಹುದಾಗಿದ್ದು, 45 ವರ್ಷ ಮೇಲ್ಪಟ್ಟವರು ತಮಗೆ 2ಕ್ಕಿಂತ ಹೆಚ್ಚು ಕಾಯಿಲೆಗಳು ಇರುವ ಬಗ್ಗೆ ಸರ್ಟಿಫಿಕೇಟ್ ತೋರಿಸಿ ಲಸಿಕೆ ಪಡೆಯಬಹುದಾಗಿದೆ ಎಂದು ಹೇಳಿದರು.

    ಸುಮಾರು 10 ಸಾವಿರಕ್ಕೂ ಅಧಿಕ ಸರ್ಕಾರಿ ಕೇಂದ್ರಗಳು, 20 ಸಾವಿರಕ್ಕೂ ಅಧಿಕ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಸರ್ಕಾರಿ ಕೇಂದ್ರಗಳಲ್ಲಿ ಉಚಿತವಾಗಿ ವ್ಯಾಕ್ಸಿನ್ ಪಡೆಯಬಹುದಾಗಿದ್ದು, ಖಾಸಗಿ ಕೇಂದ್ರಗಳಲ್ಲಿ ಪಡೆಯುವವರು ಹಣ ಪಾವತಿಸಬೇಕಾಗುತ್ತದೆ. ಒಂದು ಡೋಸ್‍ಗೆ ಎಷ್ಟು ಹಣ ನೀಡಬೇಕು ಎಂಬುದನ್ನು ಎರಡ್ಮೂರು ದಿನಗಳಲ್ಲಿ ತಿಳಿಸಲಾಗುವುದು. ಈ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಕಾಶ್ ಜಾವಡೇಕರ್ ಮಾಹಿತಿ ನೀಡಿದರು.

    ಜನವರಿ 16ರಿಂದ ಕೊವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆ ವಿತರಣಾ ಪ್ರಕ್ರಿಯೆ ಆರಂಭವಾಗಿದ್ದು, ಆರಂಭದಲ್ಲಿ ಆರೋಗ್ಯ ಸಿಬ್ಬಂದಿ ಬಳಿಕ ಮುಂಚೂಣಿಯಲ್ಲಿರುವ ಸರ್ಕಾರಿ ಸಿಬ್ಬಂದಿಗೆ ಲಸಿಕೆ ನೀಡಲಾಗಿತ್ತು. ಈಗ ಹಿರಿಯ ನಾಗರಿಕರು ಹಾಗೂ 45 ವರ್ಷ ಮೇಲ್ಪಟ್ಟ 2ಕ್ಕೂ ಹೆಚ್ಚು ಖಾಯಿಲೆಯಿಂದ ನರಳುತ್ತಿರುವವರಿಗೆ ಲಸಿಕೆ ನೀಡಲಾಗುತ್ತಿದೆ.

    ಆರಂಭದಲ್ಲಿ 50 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ವ್ಯಾಕ್ಸಿನ್ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿತ್ತು. ಬಳಿಕ ವಯಸ್ಸಿನ ಅಂತರವನ್ನು 60 ವರ್ಷಕ್ಕೆ ಹೆಚ್ಚಿಸಲಾಗಿದೆ. 60 ವರ್ಷ ಮೇಲ್ಪಟ್ಟವರು ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ಪಡೆಯಬೇಕಾದಲ್ಲಿ ಕೋ-ವಿನ್ ಆ್ಯಪ್ ಕಡ್ಡಾಯವಾಗಿ ಇರಬೇಕು ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

  • ಮಲ ತಿನ್ನುವಂತೆ ಹಿರಿಯ ನಾಗರಿಕರಿಗೆ ಒತ್ತಾಯ- 22 ಮಹಿಳೆಯರು ಸೇರಿ ಒಟ್ಟು 29 ಮಂದಿ ಅರೆಸ್ಟ್

    ಮಲ ತಿನ್ನುವಂತೆ ಹಿರಿಯ ನಾಗರಿಕರಿಗೆ ಒತ್ತಾಯ- 22 ಮಹಿಳೆಯರು ಸೇರಿ ಒಟ್ಟು 29 ಮಂದಿ ಅರೆಸ್ಟ್

    ಭುವನೇಶ್ವರ: ವಾಮಾಚಾರದ ಅನುಮಾನದ ಮೇಲೆ ಸಿಕ್ಕಿಬಿದ್ದ ಆರು ಜನ ಹಿರಿಯ ನಾಗರಿಕರಿಗೆ ಮಲ ತಿನ್ನುವಂತೆ ಒತ್ತಾಯಿಸಿದ ಅಮಾನವೀಯ ಘಟನೆ ಒಡಿಶಾದಲ್ಲಿ ನಡೆದಿದೆ.

    ಒಡಿಶಾದ ಗಂಜಾಂ ಜಿಲ್ಲೆಯ ಗೋಪಾಪುರ ಗ್ರಾಮದಲ್ಲಿ ಸೋಮವಾರ ಘಟನೆ ನಡೆದಿದೆ. ಈ ಕೃತ್ಯದಲ್ಲಿ ಭಾಗಿಯಾಗಿದ್ದ 22 ಮಹಿಳೆಯರು ಸೇರಿದಂತೆ ಒಟ್ಟು 29 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಹಿರಿಯ ನಾಗರಿಕರನ್ನು ಜೋಗಿ ದಾಸ್, ಸಾನಿಯಾ ನಹಾಕ್, ಜೋಗೇಂದ್ರ ನಹಾಕ್, ರಾಮ ನಹಾಕ್, ಹರಿ ನಹಾಕ್ ಮತ್ತು ಜುರಿಯಾ ನಹಾಕ್ ಎಂದು ಗುರುತಿಸಲಾಗಿದೆ. ಎಲ್ಲರನ್ನು ಬೆರ್ಹಾಂಪುರದ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಗಂಜಾಂ ಜಿಲ್ಲೆಯ ಗೋಪಾಪುರ ಗ್ರಾಮದಲ್ಲಿ ಕಳೆದ ಆರು ತಿಂಗಳುಗಳಲ್ಲಿ ಮೂವರು ಮಹಿಳೆಯರು ಹಾಗೂ 7 ಜನರು ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದಕ್ಕೆ ವಾಮಾಚಾರವೇ ಕಾರಣ ಎಂದು ಶಂಕೆ ವ್ಯಕ್ತಪಡಿಸಿದ ಗ್ರಾಮಸ್ಥರು ಆರು ಜನ ಹಿರಿಯ ನಾಗರಿಕರನ್ನು ಸೋಮವಾರ ಸೆರೆ ಹಿಡಿದ್ದರು. ಅದೇ ದಿನ ನಡೆದ ಗ್ರಾಮದ ಸಭೆಯಲ್ಲಿ ಆರು ಜನರನ್ನು ಮನಬಂದಂತೆ ಥಳಿಸಿ, ಹಲ್ಲುಗಳನ್ನು ಕಿತ್ತಿದ್ದಾರೆ ಎಂದು ಗಂಜಾಂ ಪೊಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಕುಮಾರ್ ರೈ ತಿಳಿಸಿದ್ದಾರೆ.

    ಸಂತ್ರಸ್ತರು 50 ರಿಂದ 60 ವರ್ಷದವರಾಗಿದ್ದಾರೆ. ಗ್ರಾಮಸ್ಥರು ಹಲ್ಲೆ ಮಾಡಿದ್ದಲ್ಲದೆ ಮಲ ತಿನ್ನುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಮಾಹಿತಿ ಸಿಗುತ್ತಿದ್ದಂತೆ ಮಹಿಳೆಯರು ಸೇರಿದಂತೆ 29 ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಎಲ್ಲರನ್ನೂ ವಿಚಾರಣೆ ನಡೆಸಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡ ಸಂತ್ರಸ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬ್ರಿಜೇಶ್ ಕುಮಾರ್ ರೈ ಹೇಳಿದ್ದಾರೆ.