Tag: ಹೀರಾಬೆನ್ ಮೋದಿ

  • ಪ್ರಧಾನಿ ಮೋದಿ ತಾಯಿಯ AI ವಿಡಿಯೋ ತೆಗೆದುಹಾಕಿ: ಕಾಂಗ್ರೆಸ್‌ಗೆ ಪಾಟ್ನಾ ಹೈಕೋರ್ಟ್ ಸೂಚನೆ

    ಪ್ರಧಾನಿ ಮೋದಿ ತಾಯಿಯ AI ವಿಡಿಯೋ ತೆಗೆದುಹಾಕಿ: ಕಾಂಗ್ರೆಸ್‌ಗೆ ಪಾಟ್ನಾ ಹೈಕೋರ್ಟ್ ಸೂಚನೆ

    ಪಾಟ್ನಾ: ಪ್ರಧಾನಿ ನರೇಂದ್ರ ಮೋದಿಯವರ ದಿವಂಗತ ತಾಯಿ ಹೀರಾಬೆನ್ ಮೋದಿ ಅವರ ಕುರಿತಾದ ಎಐ ಆಧಾರಿತ ವೀಡಿಯೊವನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕುವಂತೆ ಪಾಟ್ನಾ ಹೈಕೋರ್ಟ್ ಕಾಂಗ್ರೆಸ್‌ಗೆ ಸೂಚಿಸಿದೆ.

    ಬಿಹಾರ ಕಾಂಗ್ರೆಸ್ ಪೋಸ್ಟ್ ಮಾಡಿದ ಕೃತಕ ಬುದ್ಧಿಮತ್ತೆ ಆಧಾರಿತ ವೀಡಿಯೊ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್‌, ಕಾಂಗ್ರೆಸ್‌ಗೆ ಸೂಚನೆ ನೀಡಿದೆ.

    ವಿರೋಧ ಪಕ್ಷವು ಪ್ರಧಾನಿಯವರ ದಿವಂಗತ ತಾಯಿಗೆ ಅಗೌರವ ತೋರಿದೆ ಎಂದು ಬಿಜೆಪಿ ಆರೋಪಿಸಿತ್ತು. ವೀಡಿಯೊದಲ್ಲಿ ಎಲ್ಲಿಯೂ ಹೀರಾಬೆನ್ ಮೋದಿಗೆ ಅಗೌರವ ತೋರಿಲ್ಲ ಎಂದು ಕಾಂಗ್ರೆಸ್ ಸಮರ್ಥಿಸಿಕೊಂಡಿತ್ತು.

  • ನಿಮ್ಮ ತಾಯಿ ಎಂದರೆ ನಮಗೂ ತಾಯಿ: ಭಾವನಾತ್ಮಕವಾಗಿ ಮೋದಿಗೆ ಸಂತಾಪ ತಿಳಿಸಿದ ಮಮತಾ

    ನಿಮ್ಮ ತಾಯಿ ಎಂದರೆ ನಮಗೂ ತಾಯಿ: ಭಾವನಾತ್ಮಕವಾಗಿ ಮೋದಿಗೆ ಸಂತಾಪ ತಿಳಿಸಿದ ಮಮತಾ

    ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಅವರು ಇಂದು ಮುಂಜಾನೆ ವಿಧಿವಶರಾಗಿದ್ದು, ಮೋದಿ ತಾಯಿಯ ಎಲ್ಲಾ ಅಂತಿಮ ಸಂಸ್ಕಾರವನ್ನು ಮುಗಿಸಿ ತಮ್ಮ ಕರ್ತವ್ಯಕ್ಕೆ ಮತ್ತೆ ಹಾಜರಾಗಿದ್ದಾರೆ. ತಾಯಿಯ ಅಗಲಿಕೆಯ ದುಃಖದ ನಡುವೆಯೂ ಮೋದಿ ಬಿಡುವನ್ನು ಪಡೆದುಕೊಳ್ಳದೇ ಎಲ್ಲಾ ಕಾರ್ಯಕ್ರಮಗಳಲ್ಲೂ ಹಾಜರಾಗುತ್ತಿರುವುದಕ್ಕೆ ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಭಾವುಕರಾಗಿ ಮೋದಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆಯನ್ನು ನೀಡಿದ್ದಾರೆ.

    ಇಂದು ಪಶ್ಚಿಮ ಬಂಗಾಳದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಹಾಗೂ ಇತರ ಹಲವಾರು ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಮೋದಿ ಬಂಗಾಳ ಭೇಟಿ ನೀಡಬೇಕಿತ್ತು. ಆದರೆ ತಮ್ಮ ತಾಯಿಯ ಮರಣದ ಹಿನ್ನೆಲೆ ಅವರು ಬಂಗಾಳ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಆದರೂ ಮೋದಿ ಯಾವುದೇ ವಿಶ್ರಾಂತಿ ಪಡೆಯದೇ ವೀಡಿಯೋ ಕಾನ್ಫರೆನ್ಸ್ ಮುಖಾಂತರ ವರ್ಚುವಲ್ ಆಗಿ ತಮ್ಮ ಹುಟ್ಟೂರಿನಿಂದಲೇ ಬಂಗಾಳದ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ.

    ತಾಯಿಯ ಶವಸಂಸ್ಕಾರ ಮುಗಿಸಿದ ಬಳಿಕ ವೀಡಿಯೋ ಕಾನ್ಫರೆನ್ಸ್ನಲ್ಲಿ ಭಾಗಿಯಾದ ಮೋದಿಗೆ ಮಮತಾ ಬ್ಯಾನರ್ಜಿ ಸಂತಾಪ ತಿಳಿಸಿದ್ದಾರೆ. ನಿಮ್ಮ ತಾಯಿ ಎಂದರೆ ನಮಗೂ ತಾಯಿಯೇ. ದಯವಿಟ್ಟು ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ಸ್ವಲ್ಪ ಸಮಯ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಅವರು ಭಾವನಾತ್ಮಕವಾಗಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಗ ಮನೆ ಬಿಟ್ಟು ಹೋದಾಗ್ಲೂ ಕುಗ್ಗಿರಲಿಲ್ಲ ಹೀರಾಬೆನ್!

    ಪಶ್ಚಿಮ ಬಂಗಾಳದ ಜನರ ಪರವಾಗಿ ಸಂತಾಪ ಸೂಚಿಸಿದ ಬ್ಯಾನರ್ಜಿ, ನನ್ನ ಸಂತಾಪ ಮತ್ತು ಸಂದೇಶಗಳನ್ನು ನಿಮ್ಮ ಕುಟುಂಬದ ಸದಸ್ಯರಿಗೆ ಮತ್ತು ಇತರರಿಗೆ ಹೇಗೆ ತಿಳಿಸಬೇಕು ಎಂದು ತೋಚುತ್ತಿಲ್ಲ. ಏಕೆಂದರೆ ತಾಯಿ ಎಂಬುವುದು ಬೇರೆಯವರಿಗೆ ಹೊರತಾದುದಲ್ಲ. ಪಶ್ಚಿಮ ಬಂಗಾಳದ ಜನರ ಪರವಾಗಿ, ನಮಗೆ ಈ ಅವಕಾಶವನ್ನು ನೀಡಿದ್ದಕ್ಕಾಗಿ ನಾನು ನಿಮಗೆ ತುಂಬಾ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನಿಮ್ಮ ತಾಯಿ ಎಂದರೆ ನಮಗೂ ತಾಯಿ. ಈ ಸಂದರ್ಭ ನಾನು ನನ್ನ ತಾಯಿಯನ್ನೂ ನೆನಪಿಸಿಕೊಳ್ಳುತ್ತೇನೆ ಎಂದು ಹೇಳುತ್ತಾ ಗದ್ಗದಿತರಾದ ಮಮತಾ, ನಿಮ್ಮ ಕೆಲಸವನ್ನು ಮುಂದುವರಿಸಲು ದೇವರು ನಿಮಗೆ ಶಕ್ತಿಯನ್ನು ನೀಡಲಿ ಎಂದು ಬೇಡಿಕೊಂಡರು.

    ಕಳೆದ 2 ದಿನಗಳ ಹಿಂದೆ ಅಹಮದಾಬಾದ್‌ನ ಯುಎನ್ ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ಗೆ ದಾಖಲಾಗಿದ್ದ ಹೀರಾಬೆನ್ ಮೋದಿ ಇಂದು ಮುಂಜಾನೆ ನಿಧನರಾದರು. ಪ್ರಧಾನಿಯವರು ತಮ್ಮ ತಾಯಿಯ ಅಂತಿಮ ಸಂಸ್ಕಾರವನ್ನು ನೆರವೇರಿಸಲು ತಕ್ಷಣವೇ ಹುಟ್ಟೂರಿಗೆ ತೆರಳಿದರು. ತಾಯಿಯ ಅಂತಿಮ ಯಾತ್ರೆಗೆ ಪ್ರಧಾನಿಯೂ ಹೆಗಲಾಗಿ, ಬರಿಗಾಲಿನಲ್ಲಿ ನಡೆದರು. ತಮ್ಮ ಸಹೋದರರೊಂದಿಗೆ ತಾಯಿಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಇದನ್ನೂ ಓದಿ: ಬಿಳಿ ಸೀರೆಯೊಂದಿಗೆ ಕರವಸ್ತ್ರ ಯಾವಾಗ್ಲೂ ಇರುತ್ತಿತ್ತು- ಹೀರಾಬೆನ್ ಕುತೂಹಲಕಾರಿ ಸಂಗತಿ

    Live Tv
    [brid partner=56869869 player=32851 video=960834 autoplay=true]

  • ಪ್ರಧಾನಿ ನರೇಂದ್ರ ಮೋದಿ ತಾಯಿ ನಿಧನಕ್ಕೆ ಸಿನಿಮಾ ಸೆಲೆಬ್ರಿಟಿಗಳ ಕಂಬನಿ

    ಪ್ರಧಾನಿ ನರೇಂದ್ರ ಮೋದಿ ತಾಯಿ ನಿಧನಕ್ಕೆ ಸಿನಿಮಾ ಸೆಲೆಬ್ರಿಟಿಗಳ ಕಂಬನಿ

    ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ನಿಧನಕ್ಕೆ ಭಾರತೀಯ ಸಿನಿಮಾ ರಂಗದ ಅನೇಕ ಕಲಾವಿದರು ಕಂಬನಿ ಮಿಡಿದಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಕೋರುವುದರ ಜೊತೆಗೆ ಮೋದಿ ಕುಟುಂಬಕ್ಕೆ ಆ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕೊಡಲಿ ಎಂದು ಪ್ರಾರ್ಥಿಸಿದ್ದಾರೆ. ಮಧ್ಯರಾತ್ರಿ ನಿಧನರಾಗಿರುವ ಹೀರಾಬೆನ್ ಅವರ ತ್ಯಾಗವನ್ನೂ ಹಲವರು ಕೊಂಡಾಡಿದ್ದಾರೆ.

    ದಕ್ಷಿಣ ಭಾರತದ ಪ್ರಸಿದ್ಧ ಕಲಾವಿದ ಪ್ರಕಾಶ್ ರೈ, ಬಾಲಿವುಡ್ ನಟಿ ಕಂಗನಾ ರಣಾವತ್, ಸ್ಯಾಂಡಲ್ ವುಡ್ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್, ಬಾಲಿವುಡ್ ನಟರಾದ  ಅಕ್ಷಯ್ ಕುಮಾರ್, ಸೋನು ಸೂದ್, ಅನುಪಮ್ ಖೇರ್, ಅಜಯ್ ದೇವಗನ್ ಸೇರಿದಂತೆ ಸಾಕಷ್ಟು ಕಲಾವಿದರು ನಿಧನಕ್ಕೆ ಕಂಬನಿ ಮಿಡಿದು ಸೋಷಿಯಲ್ ಮೀಡಿಯಾ ಮೂಲಕ ತಮ್ಮ ದುಃಖವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಟಿ ತುನಿಷಾ ಶರ್ಮಾ ಸಾವು ಪ್ರಕರಣ – ಆರೋಪಿ ಶಿಜಾನ್‌ ಖಾನ್‌ ಬೆಂಬಲಕ್ಕೆ ನಿಂತ ಊರ್ಫಿ

    ಇಳಿವಯಸ್ಸಿನ ಹೀರಾಬೆನ್ ಮೋದಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೊನ್ನೆಯಷ್ಟೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ವತಃ ಮೋದಿ ಅವರು ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯವನ್ನು ವಿಚಾರಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ ಹೀರಾಬೆನ್ ಕೊನೆಯುಸಿರು ಬಿಟ್ಟಿದ್ದಾರೆ. ಇಂದು ಅವರ ಅಂತ್ಯಸಂಸ್ಕಾರ ಕೂಡ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ಬಿಳಿ ಸೀರೆಯೊಂದಿಗೆ ಕರವಸ್ತ್ರ ಯಾವಾಗ್ಲೂ ಇರುತ್ತಿತ್ತು- ಹೀರಾಬೆನ್ ಕುತೂಹಲಕಾರಿ ಸಂಗತಿ

    ಬಿಳಿ ಸೀರೆಯೊಂದಿಗೆ ಕರವಸ್ತ್ರ ಯಾವಾಗ್ಲೂ ಇರುತ್ತಿತ್ತು- ಹೀರಾಬೆನ್ ಕುತೂಹಲಕಾರಿ ಸಂಗತಿ

    – 18 ಗಂಟೆ ಕೆಲಸ ಮಾಡಲು ತಾಯಿಯೇ ಸ್ಪೂರ್ತಿ
    – 100 ವರ್ಷ ಪೂರೈಸಿರುವ ಹಿಂದಿನ ಗುಟ್ಟು

    ಬ್ಬ ತಾಯಿ ಮಗುವಿಗೆ ಜನ್ಮ ನೀಡುವುದಲ್ಲದೆ, ಅವರ ಮನಸ್ಸು, ವ್ಯಕ್ತಿತ್ವ ಮತ್ತು ಆತ್ಮವಿಶ್ವಾಸವನ್ನು ರೂಪಿಸುತ್ತಾಳೆ. ನನ್ನ ಜೀವನದಲ್ಲಿ ಏನೇ ಒಳ್ಳೆಯದಾದರೂ ಅದರ ಶ್ರೇಯಸ್ಸು ತಾಯಿಗೇ ಸಲ್ಲುತ್ತದೆ. ದೇಶದ ನಾಯಕನಾಗುವಂಹ ವ್ಯಕ್ತಿಗೆ ಜನ್ಮ ನೀಡಿದ ಹೀರಾಬೆನ್ (Heeraben Modi) ಇಂದು ಅಗಲಿದ್ದಾರೆ. ಶತಾಯುಷಿ ತಾಯಿ (Mother) ಬಗ್ಗೆ ಸ್ವತಃ ನರೇಂದ್ರ ಮೋದಿಯವರೇ (Narendra Modi) ಕುತೂಹಲಪಟ್ಟಂತಹ ಹಲವಾರು ಸಂಗತಿಗಳಿವೆ.

    ತನ್ನ ಜೀವನದಲ್ಲಿ ಪಟ್ಟಂತಹ ಕಷ್ಟ, ಹೋರಾಟದ ಕಥೆ ಹಾಗೂ ಕುತೂಹಲಕಾರಿ ಸಂಗತಿಗಳು ಇಲ್ಲಿವೆ.

    ಕಠಿಣ ಪರಿಶ್ರಮ: ಮೋದಿ ಅವರು ತಮ್ಮ ಚಿಕ್ಕ ವಯಸ್ಸಿನ ನೆನಪುಗಳನ್ನು ಈ ಹಿಂದೆ ಅವರ 100 ವರ್ಷದ ಹುಟ್ಟುಹಬ್ಬದಂದು ಮೆಲುಕು ಹಾಕಿದ್ದರು. ಈ ಬಗ್ಗೆ ತಿಳಿಸಿರುವ ಅವರು ತಮ್ಮ ತಾಯಿ ಬೆಳಗ್ಗೆ 4 ಗಂಟೆಗೆ ಏಳುತ್ತಿದ್ದರು. ಮನೆಯ ಎಲ್ಲಾ ಕೆಲಸಗಳನ್ನೂ ತಾನೇ ಮಾಡುತ್ತಿದ್ದರು. ಕಾಳುಗಳನ್ನು ರುಬ್ಬುವುದರಿಂದ ಹಿಡಿದು ಅಕ್ಕಿ, ಕಾಳುಗಳನ್ನು ಜರಡಿ ಹಿಡಿಯುವವರೆಗೂ ಎಲ್ಲವನ್ನೂ ಮಾಡುತ್ತಿದ್ದರು. ಆಕೆಗೆ ಯಾರ ಆಸರೆಯೂ ಇರಲಿಲ್ಲ. ಯಾರ ಸಹಾಯವನ್ನೂ ಕೇಳುತ್ತಿರಲಿಲ್ಲ. ಮನೆಯಿಂದ ಕೊಳಕು ಬಟ್ಟೆಗಳನ್ನೆಲ್ಲಾ ಕೊಂಡು ಹೋಗಿ ಕೆರೆಯಲ್ಲಿ ಒಗೆಯುತ್ತಿದ್ದರು. ನಾನೂ ಅವರೊಂದಿಗೆ ಹೋಗಿ ಸಹಾಯ ಮಾಡುವುದರೊಂದಿಗೆ ಆಟವನ್ನೂ ಆಡುತ್ತಿದ್ದೆ ಎಂದಿದ್ದಾರೆ.

    ಹನಿ ನೀರನ್ನೂ ವ್ಯರ್ಥ ಮಾಡುತ್ತಿರಲಿಲ್ಲ: ಮನೆಯ ಖರ್ಚಿಗೆಂದು ತಮ್ಮ ತಾಯಿ ಕೆಲವು ಮನೆಗಳಿಗೆ ತೆರಳಿ ಪಾತ್ರೆ ತೊಳೆಯುತ್ತಿದ್ದರು. ಹೆಚ್ಚುವರಿ ಸಂಪಾದಿಸಲು, ಅವರು ಚರಕವನ್ನು ಹಿಡಿದು ನೂಲುತ್ತಿದ್ದರು. ಆಕೆ ಇತರರ ಮೇಲೆ ಅವಲಂಬಿತರಾಗುವುದು ಅಥವಾ ಇತರರಿಗೆ ತನ್ನ ಕೆಲಸವನ್ನು ಮಾಡುವಂತೆ ಎಂದಿಗೂ ಕೇಳುತ್ತಿರಲಿಲ್ಲ.

    ಮಳೆಯಿಂದ ನಮ್ಮ ಮಣ್ಣಿನ ಮನೆಯಲ್ಲಿ ಸಮಸ್ಯೆಯಾಗುತ್ತಿತ್ತು. ಮಳೆಗಾಲದಲ್ಲಿ ನಮ್ಮ ಮೇಲ್ಛಾವಣಿ ಸೋರುತ್ತಿದ್ದು, ಮನೆಗೆ ನೀರು ನುಗ್ಗುತ್ತಿತ್ತು. ಮಳೆ ನೀರನ್ನು ಸಂಗ್ರಹಿಸಲು ತಾಯಿ ಪಾತ್ರೆಗಳನ್ನು ಸೋರಿಕೆಯ ಅಡಿಯಲ್ಲಿ ಇಡುತ್ತಿದ್ದರು. ಈ ಪ್ರತಿಕೂಲ ಪರಿಸ್ಥಿತಿಯಲ್ಲೂ ತಾಯಿ ಸಹನೆಯ ಪ್ರತೀಕವಾಗಿದ್ದರು. ಮುಂದಿನ ಕೆಲವು ದಿನಗಳ ವರೆಗೆ ಇದೇ ನೀರನ್ನು ಬಳಸುತ್ತಿದ್ದಳು ಎಂದರೆ ಎಲ್ಲರೂ ಆಶ್ಚರ್ಯ ಪಡುತ್ತಾರೆ. ಜಲ ಸಂರಕ್ಷಣೆಗೆ ಇದಕ್ಕಿಂತ ಉತ್ತಮ ಉದಾಹರಣೆ ಬೇರೇನಿದೆ!

    ಕರವಸ್ತ್ರ ಯಾವಾಗಲೂ ಇಟ್ಟುಕೊಂಡಿರುತ್ತಿದ್ದರು: ವಯಸ್ಸು 100 ಆಗಿದ್ದರೂ ತಮ್ಮ ತಾಯಿ ಯಾವಾಗಲೂ ತಮಗೆ ಕೈಯಾರೆ ತಿಂಡಿಗಳನ್ನು ತಿನ್ನಿಸುತ್ತಿದ್ದರು. ಸ್ವಚ್ಛತೆಗೂ ಆದ್ಯತೆ ನೀಡುತ್ತಿದ್ದರು. ಹಾಸಿಗೆ ಮೇಲೆ ಧೂಳಿನ ಕಣವಿದ್ದರೂ ಸಹಿಸುತ್ತಿರಲಿಲ್ಲ. ನಾನು ಅವರನ್ನು ಗಾಂಧಿನಗರದಲ್ಲಿ ಭೇಟಿಯಾದಾಗಲೆಲ್ಲಾ ಅವರು ತಮ್ಮ ಕೈಯಿಂದಲೇ ನನಗೆ ಸಿಹಿ ತಿನ್ನಿಸುತ್ತಿದ್ದರು. ಚಿಕ್ಕ ಮಕ್ಕಳಿಗೆ ಊಟ ಮಾಡಿಸಿದಂತೆ ಉಣಿಸುತ್ತಿದ್ದರು. ಊಟದ ಬಳಿಕ ತನ್ನ ಕರವಸ್ತ್ರದಿಂದ ಮುಖವನ್ನು ಒರೆಸುತ್ತಿದ್ದರು. ತಮ್ಮ ಬಿಳಿ ಸೀರೆಯೊಂದಿಗೆ ಅವರು ಯಾವಾಗಲೂ ಕರವಸ್ತ್ರವನ್ನು ಇಟ್ಟುಕೊಳ್ಳುತ್ತಿದ್ದರು.

    ಖರ್ಚು ವೆಚ್ಚದಲ್ಲಿ ಪ್ರಾಮಾಣಿಕತೆ: ತನ್ನ ಬಳಿ 5 ರೂ. ಇರಲಿ ಅಥವಾ 10 ರೂ. ಇರಲಿ. ಆಕೆಗೆ ಕುಟುಂಬವನ್ನು ಹೇಗೆ ನಡೆಸಬೇಕು ಎಂಬುದು ತಿಳಿದಿತ್ತು. ಮನೆಯವರಾರಾದರೂ ಅನಗತ್ಯ ವಸ್ತು ತಂದಾಗ ಬೈದು ಆ ವಸ್ತುವನ್ನು ವಾಪಸ್ ಕೊಡುವಂತೆ ಹೇಳಿ ಕಳುಹಿಸುತ್ತಿದ್ದರು. ಆಕೆಗೆ ಪ್ರಾಮಾಣಿಕ ಗುಣಗಳಿತ್ತು. ಭವಿಷ್ಯಕ್ಕಾಗಿ ಹಣವನ್ನು ಕೂಡಿಡುತ್ತಿದ್ದರು. ಹಣದ ಕೊರತೆಯುಂಟಾದಾಗಲೂ ಒಂದಲ್ಲಾ ಒಂದು ರೀತಿಯಲ್ಲಿ ಸಂಸಾರ ನಡೆಸುತ್ತಿದ್ದಳು. ಇದನ್ನೂ ಓದಿ: ಎರಡು ಬಾರಿ ಮಾತ್ರ ಮಗನ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ಹೀರಾಬೆನ್!

    ಮನೆಮದ್ದು, ಕಠಿಣ ಪರಿಶ್ರಮದಿಂದಲೇ 100 ವರ್ಷ ಪೂರೈಕೆ: ತಾಯಿಗೆ ಅನೇಕ ಮನೆಮದ್ದುಗಳ ಬಗ್ಗೆ ತಿಳಿದಿತ್ತು. ಅಂತಹ ಪರಿಸ್ಥಿತಿಯಲ್ಲಿ ಜನರು ಅವಳನ್ನು ದೇಸಿ ಮಾ ಎಂದು ಕರೆಯುತ್ತಿದ್ದರು. ಶಾಲೆಗೆ ಹೋಗದಿದ್ದರೂ ಆಕೆ ಹಳ್ಳಿಯ ವೈದ್ಯೆಯಾಗಿದ್ದಳು. ಕಠಿಣ ಪರಿಶ್ರಮ ಮತ್ತು ಮನೆಮದ್ದುಗಳ ಆಧಾರದ ಮೇಲೆ ಅವರು ತಮ್ಮ 100 ವರ್ಷ ಪೂರೈಸಿದರು.

    ಅಮ್ಮ ದಿನಕ್ಕೆ 2 ಬಾರಿ ಬಾವಿಯಿಂದ ನೀರು ತುಂಬಿಸುತ್ತಿದ್ದಳು. ಇದರಿಂದ ಅವಳ ಬೆನ್ನು ಗಟ್ಟಿಯಾಗುತ್ತಿತ್ತು. ಪ್ರತಿನಿತ್ಯ ಬಟ್ಟೆ ಒಗೆಯಲು ಕೆರೆಗೆ ಹೋಗುತ್ತಿದ್ದಳು. ಇದಕ್ಕಾಗಿ ಸಾಕಷ್ಟು ಮೆಟ್ಟಿಲುಗಳನ್ನು ಹತ್ತಬೇಕಾಗಿತ್ತು. ಇದರಿಂದ ಅವಳ ಕಾಲುಗಳು ಬಲವಾಗಿತ್ತು.

    18 ಗಂಟೆ ಕೆಲಸ ಮಾಡಲು ತಾಯಿಯೇ ಸ್ಪೂರ್ತಿ: ನಮ್ಮ ತಂದೆ ತುಂಬಾ ಶ್ರಮಜೀವಿ. ತಾಯಿಯೂ ದಿನವಿಡೀ ದುಡಿಯುತ್ತಿದ್ದರು ಎಂದು ಮೋದಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ದಿನಕ್ಕೆ 18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಅವರು ಈ ಸ್ಫೂರ್ತಿಯನ್ನು ತಮ್ಮ ತಾಯಿ ಹೀರಾಬೆನ್ ಅವರಿಂದಲೇ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇಶಕ್ಕೆ ಪ್ರಧಾನಿ, ತಾಯಿಗೆ ಮುದ್ದಿನ ಮಗ- ಮೋದಿ, ಹೀರಾಬೆನ್ ಅದ್ಭುತ ಬಾಂಧವ್ಯ ಹೀಗಿತ್ತು!

    ಆಕೆ ಅನಕ್ಷರಸ್ಥೆ. ಆದರೆ ನನ್ನ ತಂದೆ ದಾಮೋದರ್ ಅವರಿಗೆ ಧಾರ್ಮಿಕ ಪುಸ್ತಕಗಳನ್ನು ನೀಡುತ್ತಿದ್ದರು. ಅವರು ಶಿವರಾತ್ರಿ ಮತ್ತು ಶ್ರಾವಣ ಮಾಸದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು. ಆಕೆ ಪೂಜೆ ಮಾಡುತ್ತಿದ್ದಳು. ಪ್ರತಿಯೊಬ್ಬ ಪುರುಷನ ಯಶಸ್ಸಿನ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ. ಪ್ರಧಾನಿ ನರೇಂದ್ರ ಮೋದಿಯವರ ಜೀವನದಲ್ಲಿ ಆ ಮಹಿಳೆ ಅವರ ತಾಯಿ ಹೀರಾಬೆನ್. ಜೀವನವಿಡೀ ಕಷ್ಟಪಟ್ಟು ದುಡಿದು, ಸಾಲ ಮಾಡದೆ ಮಕ್ಕಳಿಗೆ ಇಂತಹ ಶಿಕ್ಷಣ ನೀಡಿ, ಸ್ವಾವಲಂಬಿಗಳಾಗುವಂತೆ ಮಾಡಿದರು.

    Live Tv
    [brid partner=56869869 player=32851 video=960834 autoplay=true]

  • ತಾಯಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ ಮೋದಿ ಸಹೋದರರು

    ತಾಯಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ ಮೋದಿ ಸಹೋದರರು

    ಗಾಂಧೀನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಅವರು ಇಂದು ಮುಂಜಾನೆ ವಿಧಿವಶರಾಗಿದ್ದು, ಅವರ ಅಂತಿಮ ಸಂಸ್ಕಾರದಲ್ಲಿ ಮೋದಿ ಕುಟುಂಬದ ಸದಸ್ಯರೆಲ್ಲರೂ ಭಾಗಿಯಾಗಿದ್ದಾರೆ. ಮೋದಿ ಸಹೋದರರು ಹೀರಾಬೆನ್ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದು, ಪಂಚಭೂತಗಳಲ್ಲಿ ಲೀನರಾಗಿದ್ದಾರೆ.

    ಮೋದಿ ತಾಯಿಯ ಅಗಲಿಕೆ ಸುದ್ದಿ ತಿಳಿಯುತಿದ್ದಂತೆಯೇ ಪ್ರಧಾನಿ ಅಹಮದಾಬಾದ್‌ಗೆ ತೆರಳಿದ್ದರು. ಹೀರಾಬೆನ್ ಅಂತ್ಯಕ್ರಿಯೆಗೂ ಮುನ್ನ ಪ್ರಧಾನಿ ಪಾರ್ಥೀವ ಶರೀರದ ಮೆರವಣಿಗೆಯಲ್ಲಿ ಹೆಗಲು ಕೊಟ್ಟಿದ್ದಾರೆ. ಇದನ್ನೂ ಓದಿ: ಎರಡು ಬಾರಿ ಮಾತ್ರ ಮಗನ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ಹೀರಾಬೆನ್!

    ಪಂಕಜ್ ಮೋದಿ ಅವರ ನಿವಾಸದಿಂದ ಪಾರ್ಥಿವ ಶರೀರ ಅಂತಿಮ ಯಾತ್ರೆ ಹೊರಡಲಾಗಿತ್ತು. ಇಂದು ಬೆಳಗ್ಗೆ 9:30ರ ವೇಳೆಗೆ ಸೆಕ್ಟರ್ 30ರ ರುದ್ರಭೂಮಿಯಲ್ಲಿ ಹೀರಾಬೆನ್ ಅಂತ್ಯಕ್ರಿಯೆ ನಡೆದಿದೆ. ಹೀರಾಬೆನ್ ಚಿತೆಗೆ ಮೋದಿ ಸಹೋದರರು ಅಗ್ನಿಸ್ಪರ್ಶ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೀರಾಬೆನ್ ಅಗಲಿಕೆಗೆ ಗಣ್ಯರ ಸಂತಾಪ

    ಹೀರಾಬೆನ್ ಅಗಲಿಕೆಗೆ ಗಣ್ಯರ ಸಂತಾಪ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ (Mother) ಹೀರಾಬೆನ್ ಮೋದಿ (Heeraben Modi) ಅವರು ಶುಕ್ರವಾರ ಬೆಳಗ್ಗೆ ತಮ್ಮ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಬೆಳಗ್ಗಿನ ಜಾವ 3.39ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾಳೆ. ಆರೋಗ್ಯ ಸಮಸ್ಯೆಗಳಿಂದಾಗಿ ಅವರನ್ನು 2 ದಿನಗಳ ಹಿಂದೆ ಅಹಮದಾಬಾದ್‌ನ ಯುಎನ್ ಮೆಹ್ತಾ ಕಾರ್ಡಿಯಾಲಜಿ ಮತ್ತು ಸಂಶೋಧನಾ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅವರ ನಿಧನದ ಸುದ್ದಿ ಹೊರಹೊಮ್ಮುತ್ತಿದ್ದಂತೆಯೇ, ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

    ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಪ್ರಧಾನಿ ಮೋದಿ ಅವರ ತಾಯಿಯ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. ಹೀರಾಬೆನ್ ಅವರು ಎಲ್ಲರಿಗೂ ಮಾದರಿ ಎಂದು ಶಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ನಿಧನದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ. ತಾಯಿ ಒಬ್ಬ ವ್ಯಕ್ತಿಯ ಜೀವನದ ಮೊದಲ ಸ್ನೇಹಿತೆ ಹಾಗೂ ಶಿಕ್ಷಕಿಯಾಗಿರುತ್ತಾರೆ. ಇಂತಹವರನ್ನು ಕಳೆದುಕೊಂಡಾಗ ಉಂಟಾಗುವ ನೋವು ನಿಸ್ಸಂದೇಹವಾಗಿ ವಿಶ್ವದಲ್ಲೇ ದೊಡ್ಡ ನೋವಾಗಿರುತ್ತದೆ ಎಂದು ಭಾವನಾತ್ಮಕವಾಗಿ ಬರೆದಿದ್ದಾರೆ. ಇದನ್ನೂ ಓದಿ: ಹೀರಾಬೆನ್ ವಿಧಿವಶ- ತಾಯಿ ಮಾತುಗಳನ್ನು ಸ್ಮರಿಸಿಕೊಂಡು ಮೋದಿ ಭಾವುಕ ಟ್ವೀಟ್

    ಹೀರಾಬೆನ್ ನಿಧನಕ್ಕೆ ಸಂತಾಪ ಸೂಚಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ದೇಶಕ್ಕೆ ಜನನಾಯಕ ಪ್ರಧಾನಿ ನರೇಂದ್ರ ಮೋದಿಯವರಂತಹ ಮಗನನ್ನು ನೀಡಿ, ಶತಾಯುಷಿಯಾಗಿ ಬದುಕಿ ಬಾಳಿ ದೇವರ ಚರಣ ಸೇರಿದ ಹೀರಾಬೆನ್ ಅವರಿಗೆ ಗೌರವಪೂರ್ವಕ ವಿದಾಯಗಳು. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಪ್ರಧಾನಿಯವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಗೃಹಸಚಿವ ಅರಗ ಜ್ಞಾನೇಂದ್ರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್ ಮೋದಿ ಅವರು ದೈವಾಧೀನರಾದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ವಿಶ್ವದ ಅತ್ಯಂತ ಬಲಿಷ್ಠ ನಾಯಕನಿಗೆ ಜನ್ಮ ನೀಡಿದ ಆ ದಿವ್ಯ ಚೇತನಕ್ಕೆ ದೇವರು ಚಿರ ಶಾಂತಿ ಕರುಣಿಸಲಿ, ಅವರ ಕುಟುಂಬದ ದುಃಖದಲ್ಲಿ ನಾನು ಸಹ ಭಾಗಿಯಾಗಿದ್ದೇನೆ ಎಂದಿದ್ದಾರೆ.

    ಸಂತಾಪ ಸೂಚಿಸಿರುವ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಹೀರಾಬೆನ್‌ ಅವರು ಶತಾಯುಷಿಯಾಗಿ ಅವರು ತಮ್ಮ ಪೂರ್ಣ ಜೀವನವನ್ನು ನಡೆಸಿದ್ದಾರೆ. ಆದರೆ ಒಬ್ಬ ತಾಯಿಯಾಗಿ ತನ್ನ ಸುತ್ತಲೂ ಶಾಶ್ವತವಾಗಿ ಶಕ್ತಿ ತುಂಬಲು ಬಯಸುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇವರು ತಮಗಾದ ನಷ್ಟವನ್ನು ಭರಿಸುವ ಶಕ್ತಿ ಕೊಡಲಿ ಎಂದಿದ್ದಾರೆ. ಇದನ್ನೂ ಓದಿ: ಇಂದೇ ಮೋದಿ ತಾಯಿ ಹೀರಾಬೆನ್ ಅಂತ್ಯಕ್ರಿಯೆ

    ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಮೋದಿ ತಾಯಿ ನಿಧನಕ್ಕೆ ಸಂತಾಪ ಸೂಚಿಸಿ, ಮಗನಿಗೆ ತಾಯಿಯೇ ಇಡೀ ಜಗತ್ತು. ಅವರ ಸಾವು ತುಂಬಲಾಗದ ನಷ್ಟ ಎಂದಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರ ನಿಧನದಿಂದ ನನಗೆ ತುಂಬಾ ನೋವಾಗಿದೆ. ತಾಯಿಯ ಸಾವು ಒಬ್ಬರ ಜೀವನದಲ್ಲಿ ತುಂಬಲು ಅಸಾಧ್ಯವಾದ ಶೂನ್ಯವನ್ನು ಉಂಟುಮಾಡುತ್ತದೆ. ಈ ದುಃಖದ ಸಮಯದಲ್ಲಿ ಪ್ರಧಾನಮಂತ್ರಿ ಮತ್ತು ಅವರ ಇಡೀ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

    ಪಂಜಾಬ್ ಸಿಎಂ ಭಗವಂತ್ ಮಾನ್ ಈ ಬಗ್ಗೆ ಟ್ವೀಟ್ ಮಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ತಾಯಿಯ ನಿಧನದ ದುಃಖದ ಸುದ್ದಿಯನ್ನು ಸ್ವೀಕರಿಸಿದೆ. ತಾಯಿಯ ಮರಣವು ಜೀವನದ ಅತಿದೊಡ್ಡ ಪೂರೈಸಲಾಗದ ಕೊರತೆಯಾಗಿದೆ. ಈ ದುಃಖದ ಸಮಯದಲ್ಲಿ ನಾನು ಪ್ರಧಾನಮಂತ್ರಿ ಮತ್ತು ಅವರ ಇಡೀ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಅಮ್ಮನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ಪ್ರಧಾನಿ ಮೋದಿ

    ಹೀರಾಬೆನ್ ಅವರ ನಿಧನದ ಬಗ್ಗೆ ತಮ್ಮ ದುಃಖವನ್ನು ವ್ಯಕ್ತಪಡಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಅವರ ಸರಳತೆ ಮತ್ತು ಪ್ರೀತಿಯ ಸ್ವಭಾವದಿಂದ ಅವರು ಯಾವಾಗಲೂ ನೆನಪಿನಲ್ಲಿ ಉಳಿಯುತ್ತಾರೆ ಎಂದು ಹೇಳಿದ್ದಾರೆ.

    ಮೋದಿ ತಾಯಿ ಹೀರಾಬೆನ್ ಅವರ ಅಂತ್ಯಕ್ರಿಯೆ ಇಂದೇ ನಡೆಯಲಿದೆ. ಸದ್ಯ ಗಾಂಧಿನಗರದ ಪಂಕಜ್ ಮೋದಿ ನಿವಾಸದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇತ್ತ ಪ್ರಧಾನಿಯವರು ಕೂಡ ಅಹಮದಾಬಾದ್‌ಗೆ ಭೇಟಿ ನೀಡಿದ್ದು, ಯೂಎನ್ ಮೆಹ್ತಾ ಆಸ್ಪತ್ರೆಗೆ ತೆರಳಿ ತಾಯಿಯ ಅಂತಿಮ ದರ್ಶನ ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇಂದೇ ಮೋದಿ ತಾಯಿ ಹೀರಾಬೆನ್ ಅಂತ್ಯಕ್ರಿಯೆ

    ಇಂದೇ ಮೋದಿ ತಾಯಿ ಹೀರಾಬೆನ್ ಅಂತ್ಯಕ್ರಿಯೆ

    ನವದೆಹಲಿ: ಇಂದೇ ಪ್ರಧಾನಿ ನರೇಂದ್ರ ಮೋದಿ (Narendra Modi) ತಾಯಿ ಹೀರಾಬೆನ್ ಮೋದಿ (Heeraben Modi) ಅವರ ಅಂತ್ಯಕ್ರಿಯೆ ನಡೆಯಲಿದೆ.

    ಸದ್ಯ ಗಾಂಧಿನಗರದ ಪಂಕಜ್ ಮೋದಿ (Pankaj Modi) ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇತ್ತ ಪ್ರಧಾನಿಯವರು ಕೂಡ ಅಹಮದಾಬಾದ್‍ಗೆ ಭೇಟಿ ನೀಡಿದ್ದು, ಯೂಎನ್ ಮೆಹ್ತಾ (UN Mehta Hospital) ಆಸ್ಪತ್ರೆಗೆ ತೆರಳಿ ತಾಯಿಯ ಅಂತಿಮ ದರ್ಶನ ಪಡೆದಿದ್ದಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹೀರಾಬೆನ್ ಅವರನ್ನು ಬುಧವಾರವಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3.39ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಹೀರಾಬೆನ್ ವಿಧಿವಶ- ತಾಯಿ ಮಾತುಗಳನ್ನು ಸ್ಮರಿಸಿಕೊಂಡು ಮೋದಿ ಭಾವುಕ ಟ್ವೀಟ್

    ಶತಾಯುಷಿ ಹೀರಾಬೆನ್ ಅವರು ಐವರು ಪುತ್ರರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸದ್ಯ ಹೀರಾಬೆನ್ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಗಣ್ಯರು ಸಂತಾಪಗಳನ್ನು ಸೂಚಿಸುತ್ತಿದ್ದಾರೆ. ಅಲ್ಲದೇ ಪ್ರಧಾನಿಯವರಿಗೆ ಧೈರ್ಯ ತುಂಬುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆಸ್ಪತ್ರೆ ಸೇರಿರೋ ಪ್ರಧಾನಿ ತಾಯಿ – ನಿಮ್ಮೊಂದಿಗೆ ನಾನಿದ್ದೇನೆ ಎಂದು ಮೋದಿಗೆ ರಾಹುಲ್‌ ಗಾಂಧಿ ಅಭಯ

    ಆಸ್ಪತ್ರೆ ಸೇರಿರೋ ಪ್ರಧಾನಿ ತಾಯಿ – ನಿಮ್ಮೊಂದಿಗೆ ನಾನಿದ್ದೇನೆ ಎಂದು ಮೋದಿಗೆ ರಾಹುಲ್‌ ಗಾಂಧಿ ಅಭಯ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಅಹಮದಾಬಾದ್‌ನ ಆಸ್ಪತ್ರೆಯಲ್ಲಿದ್ದಾರೆ ಎಂಬ ವರದಿಗಳು ಹೊರಬಂದ ಬೆನ್ನಲ್ಲೇ ಕಾಂಗ್ರೆಸ್‌ (Congress) ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಟ್ವೀಟ್‌ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ ಅಭಯ ನೀಡಿದ್ದಾರೆ.

    ಟ್ವೀಟ್‌ನಲ್ಲಿ ಏನಿದೆ?: ತಾಯಿ ಮತ್ತು ಮಗನ ನಡುವಿನ ಪ್ರೀತಿ ಶಾಶ್ವತ ಮತ್ತು ಬೆಲೆ ಕಟ್ಟಲಾಗದು. ಮೋದಿ ಅವರ ಈ ಕಷ್ಟದ ಸಮಯದಲ್ಲಿ ನನ್ನ ಪ್ರೀತಿ ಮತ್ತು ಬೆಂಬಲವಿದೆ. ನಿಮ್ಮ ತಾಯಿ ಶೀಘ್ರದಲ್ಲೇ ಗುಣಮುಖರಾಗುತ್ತಾರೆ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

    ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಅವರ ಆರೋಗ್ಯ ಕಳೆದ ರಾತ್ರಿ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ತಾಯಿಯ ಭೇಟಿಗೆ ಮೋದಿ ತುರ್ತಾಗಿ ಅಹಮದಾಬಾದ್ ತೆರಳಿದ್ದಾರೆ. ಉಳಿದಂತೆ ಆಸ್ಪತ್ರೆ ಯಾವುದೇ ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿಲ್ಲ.

    ಈ ಹಿನ್ನೆಲೆಯಲ್ಲಿ ಗುಜರಾತ್‌ನ ಬಿಜೆಪಿ ಶಾಸಕರಾದ ದರ್ಶನಾಬೆನ್ ವಘೇಲಾ ಮತ್ತು ಕೌಶಿಕ್ ಜೈನ್ ಆಸ್ಪತ್ರೆಗೆ ಆಗಮಿಸಿ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿ ಅವರ ಆರೋಗ್ಯ ಸ್ಥಿತಿಯನ್ನು ವಿಚಾರಿಸಿದ್ದಾರೆ. ಇದನ್ನೂ ಓದಿ: ಮೆಟ್ರೋದಲ್ಲಿ ನಿದ್ರೆ ಮಂಪರಲ್ಲಿ ಬೀಳ್ತಿದ್ದ ಯುವಕನಿಗೆ ಪಕ್ಕದಲ್ಲಿದ್ದ ಯುವತಿ ಮಾಡಿದ್ದೇನು ಗೊತ್ತಾ?

    ಈ ಹಿಂದೆ ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರದ ಬಳಿಕ ಪ್ರಧಾನಿ ಮೋದಿ ತಮ್ಮ ತಾಯಿಯನ್ನು ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದರು. ಇದನ್ನೂ ಓದಿ: ಹೀರಾಬೆನ್ ಆರೋಗ್ಯ ಸ್ಥಿರ – ತಾಯಿ ಭೇಟಿಗೆ ಅಹಮದಾಬಾದ್ ತೆರಳಿದ ಮೋದಿ

    Live Tv
    [brid partner=56869869 player=32851 video=960834 autoplay=true]

  • ಹೀರಾಬೆನ್ ಆರೋಗ್ಯ ಸ್ಥಿರ – ತಾಯಿ ಭೇಟಿಗೆ ಅಹಮದಾಬಾದ್ ತೆರಳಿದ ಮೋದಿ

    ಹೀರಾಬೆನ್ ಆರೋಗ್ಯ ಸ್ಥಿರ – ತಾಯಿ ಭೇಟಿಗೆ ಅಹಮದಾಬಾದ್ ತೆರಳಿದ ಮೋದಿ

    ಗಾಂಧೀನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಅವರ ಆರೋಗ್ಯ ಕಳೆದ ರಾತ್ರಿ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ತಾಯಿಯ ಭೇಟಿಗೆ ಮೋದಿ ತುರ್ತಾಗಿ ಅಹಮದಾಬಾದ್ ತೆರಳಿದ್ದಾರೆ.

    ಈ ವರ್ಷ ಜೂನ್‌ನಲ್ಲಿ 99 ವರ್ಷ ಪೂರೈಸಿರುವ ಹೀರಾಬೆನ್ ಆರೋಗ್ಯ ಹದಗೆಟ್ಟಿರುವ ಹಿನ್ನೆಲೆ ಅವರನ್ನು ಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಇದೀಗ ಸ್ಥಿರವಾಗಿದೆ ಎಂದು ಯುಎನ್ ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್ ತಿಳಿಸಿದೆ. ಉಳಿದಂತೆ ಆಸ್ಪತ್ರೆ ಯಾವುದೇ ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿಲ್ಲ.

    ಈ ಹಿಂದೆ ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರದ ಬಳಿಕ ಪ್ರಧಾನಿ ಮೋದಿ ತಮ್ಮ ತಾಯಿಯನ್ನು ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದರು. ಇದನ್ನೂ ಓದಿ: ಮತ್ತೆ ಟೆಸ್ಟಿಂಗ್ ಎಡವಟ್ಟು- ಕೋವಿಡ್ ಟೆಸ್ಟ್ ಮಾಡಿಸದಿದ್ರೂ ಬಂತು ಮೆಸೇಜ್

    ನಿನ್ನೆ ಮೈಸೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ ಅವರು ತಮ್ಮ ಮಗ, ಸೊಸೆ ಮತ್ತು ಮೊಮ್ಮಗನೊಂದಿಗೆ ಬಂಡೀಪುರಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.

    ಪ್ರಹ್ಲಾದ್ ಮೋದಿ ಅವರನ್ನು ತಮ್ಮ ಕುಟುಂಬದೊಂದಿಗೆ ಚಿಕಿತ್ಸೆಗಾಗಿ ಜೆಎಸ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಸುರಕ್ಷಿತರಾಗಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲು

    Live Tv
    [brid partner=56869869 player=32851 video=960834 autoplay=true]

  • ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲು

    ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲು

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಅವರು ಬುಧವಾರ ಅಹಮದಾಬಾದ್‌ನ (Ahmedabad) ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಈ ವರ್ಷ 99 ವಯಸ್ಸನ್ನು ಪೂರೈಸಿರುವ ಹೀರಾಬೆನ್ ಅವರನ್ನು ಈ ಹಿಂದೆಯೂ ಆಸ್ಪತ್ರೆಗೆ (Hospital) ದಾಖಲಿಸಲಾಗಿತ್ತು. ವರದಿಗಳ ಪ್ರಕಾರ, ಪ್ರಧಾನಿ ಮೋದಿಯವರ ತಾಯಿಯ ಆರೋಗ್ಯ ಹದಗೆಟ್ಟಿದ್ದು, ಇದೀಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಈ ಹಿಂದೆ ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರದ ಬಳಿಕ ಪ್ರಧಾನಿ ಮೋದಿ ತಮ್ಮ ತಾಯಿಯನ್ನು ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದರು.

    ನಿನ್ನೆ ಮೈಸೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ ಅವರು ತಮ್ಮ ಮಗ, ಸೊಸೆ ಮತ್ತು ಮೊಮ್ಮಗನೊಂದಿಗೆ ಬಂಡೀಪುರಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಉತ್ತರ ಭಾರತದಲ್ಲಿ ಮಂಜಿನ ದಟ್ಟನೆ – ವಿಮಾನ ಸಂಚಾರಕ್ಕೆ ಅಡಚಣೆ

    ಪ್ರಹ್ಲಾದ್ ಮೋದಿ ಅವರನ್ನು ತಮ್ಮ ಕುಟುಂಬದೊಂದಿಗೆ ಚಿಕಿತ್ಸೆಗಾಗಿ ಜೆಎಸ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಸುರಕ್ಷಿತರಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ಲಾನ್: ಅಶ್ವಥ್ ನಾರಾಯಣ್ ಘೋಷಣೆ

    Live Tv
    [brid partner=56869869 player=32851 video=960834 autoplay=true]