Tag: ಹೀರಾಬೆನ್ ಮೋದಿ

  • ಈ ಬಾರಿ ಅಮ್ಮನ ಬಳಿ ಹೋಗಿ ಆಶೀರ್ವಾದ ಪಡೆಯಲು ಸಾಧ್ಯವಾಗಿಲ್ಲ: ಮೋದಿ

    ಈ ಬಾರಿ ಅಮ್ಮನ ಬಳಿ ಹೋಗಿ ಆಶೀರ್ವಾದ ಪಡೆಯಲು ಸಾಧ್ಯವಾಗಿಲ್ಲ: ಮೋದಿ

    ಭೋಪಾಲ್: ನನ್ನ ಹುಟ್ಟುಹಬ್ಬದಂದು(Birthday) ಪ್ರತಿ ಬಾರಿಯೂ ನನ್ನ ತಾಯಿಯ(Mother) ಬಳಿ ತೆರಳಿ ಅವರ ಪಾದ ಸ್ಪರ್ಶಿಸಿ ಆಶೀರ್ವಾದ ಪಡೆಯುತ್ತಿದ್ದೆ. ಆದರೆ ಈ ಬಾರಿ ಅದು ಸಾಧ್ಯವಾಗಿಲ್ಲ. ಆದರೆ ಇಂದು ಬುಡಕಟ್ಟು ಪ್ರದೇಶಗಳಲ್ಲಿ ಹಾಗೂ ಹಳ್ಳಿಗಳಲ್ಲಿ ಕಷ್ಟಪಟ್ಟು ದುಡಿಯುವ ಲಕ್ಷಾಂತರ ಮಂದಿ ತಾಯಂದಿರು ನನ್ನನ್ನು ಆಶೀರ್ವದಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ.

    ಮಧ್ಯಪ್ರದೇಶದ(Madhya Pradesh) ಶಿಯೋಪುರದಲ್ಲಿ ಸ್ವಸಹಾಯ ಗುಂಪುಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮೋದಿ ತಮ್ಮ ತಾಯಿಯನ್ನು ನೆನೆಸಿಕೊಂಡು, ಈ ದಿನ ನಾನು ಸಾಮಾನ್ಯವಾಗಿ ನನ್ನ ತಾಯಿಯ ಬಳಿ ಹೋಗಿ ಆಶೀರ್ವಾದ ಪಡೆಯುತ್ತಿದ್ದೆ. ಆದರೆ ಇಂದು ನಾನು ಆಕೆಯ ಬಳಿ ಹೋಗಲು ಸಾಧ್ಯವಾಗಲಿಲ್ಲ ಎಂದರು.

    ಕಳೆದ ಶತಮಾನದ ಭಾರತ ಮತ್ತು ಈ ಶತಮಾನದ ನವಭಾರತದ ನಡುವೆ ಅಗಾಧ ವ್ಯತ್ಯಾಸವಿದೆ. ಈಗಿನ ನವಭಾರತದಲ್ಲಿ ನಾರಿ ಶಕ್ತಿ ಪ್ರಾತಿನಿಧ್ಯವಾಗಿ ಬಂದಿದೆ. ಪಂಚಾಯತ್ ಭವನದಿಂದ ರಾಷ್ಟ್ರಪತಿ ಭವನದವರೆಗೆ ಮಹಿಳಾ ಶಕ್ತಿಯ ಧ್ವಜ ಹಾರಾಡುತ್ತಿದೆ ಎಂದು ಪ್ರಧಾನಿ ಹೇಳಿದರು. ಇದನ್ನೂ ಓದಿ: 70 ವರ್ಷಗಳ ನಂತರ ಭಾರತಕ್ಕೆ ಮರಳಿದ ಚೀತಾ – ನಮೀಬಿಯಾದ 8 ಚೀತಾಗಳನ್ನು ಬಿಡುಗಡೆ ಮಾಡಿದ ಮೋದಿ

    ಕಳೆದ 8 ವರ್ಷಗಳಲ್ಲಿ, ನಾವು ಸ್ವಸಹಾಯ ಗುಂಪುಗಳನ್ನು ಸಬಲೀಕರಣಗೊಳಿಸಲು ಎಲ್ಲಾ ರೀತಿಯಲ್ಲೂ ಸಹಾಯ ಮಾಡಿದ್ದೇವೆ. ಇಂದು ದೇಶಾದ್ಯಂತ 8 ಕೋಟಿಗೂ ಹೆಚ್ಚು ಮಹಿಳೆಯರು ಈ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ. ಈ ಅಭಿಯಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಗ್ರಾಮೀಣ ಮನೆಯಿಂದ ಕನಿಷ್ಠ ಒಬ್ಬ ಸಹೋದರಿಯನ್ನು ಹೊಂದಲು ನಾವು ಗುರಿಯಿಟ್ಟಿದ್ದೇವೆ ಎಂದು ತಿಳಿಸಿದರು.

    ನಮ್ಮ ಸರ್ಕಾರ ಗ್ರಾಮೀಣ ಆರ್ಥಿಕತೆಯಲ್ಲಿ ಮಹಿಳಾ ಉದ್ಯಮಿಗಳಿಗೆ ಹೊಸ ಸಾಧ್ಯತೆಗಳನ್ನು ಸೃಷ್ಟಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. ‘ಒಂದು ಜಿಲ್ಲೆ, ಒಂದು ಉತ್ಪನ್ನ’ ಯೋಜನೆಯ ಮೂಲಕ ನಾವು ಪ್ರತಿ ಜಿಲ್ಲೆಯಿಂದ ಸ್ಥಳೀಯ ಉತ್ಪನ್ನಗಳನ್ನು ದೊಡ್ಡ ಮಾರುಕಟ್ಟೆಗಳಿಗೆ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದೇವೆ ಎಂದರು. ಇದನ್ನೂ ಓದಿ: ಬ್ಯಾಂಕುಗಳಿಗೆ ಸ್ಥಳೀಯ ಭಾಷಿಕರನ್ನೇ ನೇಮಿಸಿ- ನಿರ್ಮಲಾ ಸೀತಾರಾಮನ್ ಸಲಹೆ

    Live Tv
    [brid partner=56869869 player=32851 video=960834 autoplay=true]

  • ಮೋದಿ ತಾಯಿಗೆ 100ರ ಸಂಭ್ರಮ – ಶುಭಕೋರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಪ್ರಧಾನಿ

    ಮೋದಿ ತಾಯಿಗೆ 100ರ ಸಂಭ್ರಮ – ಶುಭಕೋರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಪ್ರಧಾನಿ

    ಗಾಂಧೀನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ ಮೋದಿ ಅವರು ಇಂದು 100ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.

    ಶತಾಯುಷಿಯಾದ ತಾಯಿ ಹೀರಾಬೆನ್‌ ಅವರನ್ನು ಪ್ರಧಾನಿ ಮೋದಿ ಭೇಟಿಯಾದರು. ಗುಜರಾತ್‌ ರಾಜಧಾನಿ ಗಾಂಧೀನಗರದಲ್ಲಿರುವ ತಮ್ಮ ನಿವಾಸಕ್ಕೆ ಭೇಟಿ ನೀಡಿದ ಮೋದಿ, ತಾಯಿಯ ಹುಟ್ಟುಹಬ್ಬವನ್ನು ಆಚರಿಸಿದರು. ಇದನ್ನೂ ಓದಿ: 2023ರ ಚುನಾವಣೆಗೆ ಬಿಜೆಪಿ ಸಜ್ಜು- ಕೋಟೆನಾಡಿಗೆ ಇಂದು ಜೆ.ಪಿ. ನಡ್ಡಾ ಭೇಟಿ

    ತಮ್ಮ ತಾಯಿಗೆ ಸಿಹಿ ತಿನಿಸಿ ಜನ್ಮದಿನದ ಶುಭಾಶಯ ತಿಳಿಸಿದ ಮೋದಿ ನಂತರ ತಾಯಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

    ಜನ್ಮದಿನದ ಸಂಭ್ರಮದಲ್ಲಿರುವ ಹೀರಾಬೆನ್ ಮೋದಿ ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ಪ್ರಾಪ್ತವಾಗಲಿ ಎಂದು ಹಾರೈಸಿ ಮೋದಿ ಅವರ ಹುಟ್ಟೂರು ವಡನಗರದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

    Live Tv

  • ತಾಯಿ ಹೀರಾಬೆನ್ ಸ್ಕೆಚ್‍ನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಮಹಿಳಾ ಅಭಿಮಾನಿ

    ತಾಯಿ ಹೀರಾಬೆನ್ ಸ್ಕೆಚ್‍ನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಮಹಿಳಾ ಅಭಿಮಾನಿ

    ಶಿಮ್ಲಾ: ಗರೀಬ್ ಕಲ್ಯಾಣ್ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಿ ಮೋದಿಯವರು ಮಂಗಳವಾರ ಹಿಮಾಚಲ ಪ್ರದೇಶಕ್ಕೆ ಬಂದಿಳಿದಿದ್ದು, ಅವರನ್ನು ಸ್ವಾಗತಿಸಲು ನಗರದ ಮಾಲ್ ರಸ್ತೆಯ ಬೀದಿಗಳಲ್ಲಿ ಅಪಾರ ಬೆಂಬಲಿಗರು ಸಾಲುಗಟ್ಟಿ ನಿಂತಿದ್ದರು. ಈ ವೇಳೆ ಜನಸಮೂಹದ ನಡುವೆ ಒಬ್ಬ ಮಹಿಳೆ ಹೀರಾಬೆನ್ ಮೋದಿಯವರ ಪೆನ್ಸಿಲ್ ಸ್ಕೆಚ್ ಅನ್ನು ಪ್ರಧಾನಿಗೆ ಉಡುಗೊರೆಯಾಗಿ ನೀಡಿದ್ದಾರೆ.

    ನಂತರದಲ್ಲಿ ಮಹಿಳೆಯು ಪ್ರಧಾನಿಯವರ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದಿದ್ದಾರೆ. ಅವರು ತಮ್ಮ ಬೆಂಬಲಿಗರಿಂದ ಈ ಅದ್ಭುತ ಉಡುಗೊರೆಯನ್ನು ಸ್ವೀಕರಿಸಲು ಸಂಪೂರ್ಣವಾಗಿ ಉತ್ಸುಕರಾಗಿದ್ದರು. ಅಷ್ಟೇ ಅಲ್ಲದೇ ಮಹಿಳೆಯು ಪ್ರಧಾನಿಯವರ ಚಿತ್ರವನ್ನು ಸಹ ಚಿತ್ರಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಅವರು ಮಹಿಳೆಯೊಂದಿಗೆ ಸಂಭಾಷಣೆ ನಡೆಸುತ್ತಿರುವ ಸಂದರ್ಭವು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗುತ್ತಿದೆ. ಇದನ್ನೂ ಓದಿ: ವಿದ್ಯಾಭ್ಯಾಸ ಕೊಡಿಸಲು ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು ಯುಪಿಎಸ್‍ಸಿಯಲ್ಲಿ ಟಾಪರ್ 

    ವೈರಲ್ ಆಗಿರುವ ವೀಡಿಯೊದಲ್ಲಿ, ಪ್ರಧಾನಿ ಅವರು ತಮ್ಮ ಬೆಂಬಲಿಗರಿಂದ ತಮ್ಮ ತಾಯಿಯ ಸ್ಕೆಚ್‍ನ್ನು ಉಡುಗೊರೆಯಾಗಿ ಸ್ವೀಕರಿಸುತ್ತಿದ್ದಾರೆ. ಈ ಅಮೂಲ್ಯವಾದ ಪೋಟೋವನ್ನು ಉಡುಗೊರೆಯಾಗಿ ನೀಡಿದ ಮಹಿಳೆಯೊಂದಿಗೆ ಸಂಭಾಷಣೆಯನ್ನು ನಡೆಸಿದ ಅವರು, ಇದನ್ನು ನೀವೇ ತಯಾರಿಸಿದ್ದೀರಾ? ಇದನ್ನು ಮಾಡಲು ನೀವು ಎಷ್ಟು ಸಮಯ ತೆಗೆದುಕೊಂಡಿದ್ದೀರಿ ಎಂದು ಕೇಳಿದ್ದಾರೆ. ಇದನ್ನೂ ಓದಿ:  ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್ 

    ಗರೀಬ್ ಕಲ್ಯಾಣ್ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಂಗಳವಾರ ಬೆಳಗ್ಗೆ ಶಿಮ್ಲಾ ತಲುಪಿದ್ದಾರೆ. ಅವರು 16 ಕೇಂದ್ರ ಪ್ರಾಯೋಜಿತ ಕಲ್ಯಾಣ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಮೋದಿ ಸರ್ಕಾರದ ಎಂಟು ವರ್ಷಗಳ ವಾರ್ಷಿಕೋತ್ಸವದ ಅಂಗವಾಗಿ ದೇಶಾದ್ಯಂತ ಇದೇ ರೀತಿಯ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.

  • ಮತದಾನಕ್ಕೂ ಮುನ್ನ ತಾಯಿಯ ಆಶೀರ್ವಾದ ಪಡೆದ ಮೋದಿ

    ಮತದಾನಕ್ಕೂ ಮುನ್ನ ತಾಯಿಯ ಆಶೀರ್ವಾದ ಪಡೆದ ಮೋದಿ

    ನವದೆಹಲಿ: ಮತದಾನ ಎಲ್ಲರ ಮೂಲಭೂತ ಕರ್ತವ್ಯ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಇವತ್ತು ಮತದಾನ ಮಾಡಿದ್ದಾರೆ. ಅದಕ್ಕೂ ಮುನ್ನ ತಮ್ಮ ತಾಯಿಯವರ ಆಶೀರ್ವಾದ ಪಡೆದಿರುವುದು ವಿಶೇಷವಾಗಿತ್ತು.

    ದೇಶದಲ್ಲಿ ಮೂರನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಇಂದು ಮೋದಿ ಅವರು ಅಹಮದಾಬಾದ್‍ನ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಮಾಡಿದ್ದಾರೆ. ಮತದಾನಕ್ಕೂ ಮುನ್ನ ಮೋದಿ ಅವರು ತಮ್ಮ ತಾಯಿ ಹೀರಾಬೆನ್ ಮೋದಿ ಅವರನ್ನು ಗಾಂಧಿನಗರದ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

    “2019ನೇ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ದಾಖಲೆಯ ಪ್ರಮಾಣದಲ್ಲಿ ಆಗಬೇಕು. ನಿಮ್ಮ ಮತ ತುಂಬ ಅಮೂಲ್ಯವಾದುದ್ದು, ನೀವು ಹಾಕುವ ಒಂದು ಮತ ಮುಂದಿನ ದಿನಗಳಲ್ಲಿ ನಿಮ್ಮ ರಾಷ್ಟ್ರದ ದಿಕ್ಕನ್ನು ಬದಲಿಸುತ್ತದೆ. ನಾನು ಅಹಮದಾಬಾದ್‍ನಲ್ಲಿ ಮತದಾನ ಮಾಡುತ್ತಿದ್ದೇನೆ ನೀವು ಮಾಡಿ”. ಎಂದು ಟ್ವೀಟ್ ಮಾಡಿದ್ದಾರೆ.

    ದಾಖಲೆಯ ಪ್ರಮಾಣದಲ್ಲಿ ಮತದಾನ ಮಾಡಬೇಕು ಎಂದು ಜನರಿಗೆ ಮೋದಿ ಕರೆಕೊಟ್ಟಿದ್ದಾರೆ. ಮೋದಿ ಅವರು ಮತದಾನ ಮಾಡಿದ ಗಾಂಧಿನಗರ ಕ್ಷೇತ್ರದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಸ್ಪರ್ಧೆಗಿಳಿದಿದ್ದಾರೆ.