Tag: ಹುಕ್ಕಾ ಬಾರ್

  • ಹುಕ್ಕಾ ಬಾರ್, ತಂಬಾಕು ಉತ್ಪನ್ನಗಳ ನಿಷೇಧಕ್ಕೆ ಕೋಟ್ಪಾ ಕಾಯ್ದೆಗೆ ಮಹತ್ವದ ತಿದ್ದುಪಡಿ : ದಿನೇಶ್ ಗುಂಡೂರಾವ್

    ಹುಕ್ಕಾ ಬಾರ್, ತಂಬಾಕು ಉತ್ಪನ್ನಗಳ ನಿಷೇಧಕ್ಕೆ ಕೋಟ್ಪಾ ಕಾಯ್ದೆಗೆ ಮಹತ್ವದ ತಿದ್ದುಪಡಿ : ದಿನೇಶ್ ಗುಂಡೂರಾವ್

    ಬೆಂಗಳೂರು: ಹುಕ್ಕಾ ಬಾರ್ ಸೇರಿದಂತೆ ರಾಜ್ಯದಲ್ಲಿ ತಂಬಾಕು ಉತ್ಪನ್ನಗಳನ್ನ ನಿಷೇಧಿಸಲು ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ ಕಾಯ್ದೆಗೆ (COTPA) ತಿದ್ದುಪಡಿ ತರುವುದರ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ.

    ವಿಕಾಸ ಸೌಧದಲ್ಲಿ ಇಂದು ಕ್ರೀಡಾ ಸಚಿವ ನಾಗೇಂದ್ರ ಅವರ ಜೊತೆಗೂಡಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ದಿನೇಶ್ ಗುಂಡೂರಾವ್, ಸಾರ್ವಜನಿಕ ಸ್ಥಳಗಳಲ್ಲಿ ಇತರ ತಂಬಾಕು ಉತ್ಪನ್ನಗಳ ನಿಷೇಧಿಸುವ ಬಗ್ಗೆ ಚರ್ಚಿಸಿದರು.

    ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಸೇವನೆಯನ್ನು ಶಾಲೆಗಳ ಜೊತೆಗೆ, ದೇವಸ್ಥಾನಗಳು, ಆಸ್ಪತ್ರೆಗಳ ಸುತ್ತ ಮುತ್ತಲು ನಿಷೇಧಿಸುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಕೋಟ್ಪಾ ಕಾಯ್ದೆಗೆ ತಿದ್ದುಪಡಿಗೆ ಸೂಚಿಸಿರುವುದಾಗಿ ತಿಳಿಸಿದರು.‌ ಈ ಹಿಂದಿನ ಕೋಟ್ಪಾ ಕಾಯ್ದೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆಯನ್ನ ನಿಷೇಧಿಸಲಾಗಿತ್ತು. ಸಿಗರೇಟ್ ಜೊತೆಗೆ ಇತರ ತಂಬಾಕು ಉತ್ಪನ್ನಗಳ ಸೇವನೆ ಮತ್ತು ಮಾರಾಟವನ್ನು ನಿಷೇಧಿಸುವ ನಿಟ್ಟಿನಲ್ಲಿ ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ ಎಂದರು. ಇದನ್ನೂ ಓದಿ: ಬರ್ಮುಡಾ, ಟೀ ಶರ್ಟ್‍ನಲ್ಲಿ ಸಿಕ್ಕಿಬಿದ್ದ ಹಾಲಶ್ರೀ!

     

    ಹುಕ್ಕಾ ಬಾರ್‌ಗಳಿಗೆ ಯುವಕರು ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಇದರಿಂದ ಯುವಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.‌ ಈ ಹಿನ್ನೆಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಹುಕ್ಕಾ ಬಾರ್ ಗಳಲ್ಲಿ ಮಾದಕ ವಸ್ತುಗಳ ಸೇವನೆಯನ್ನು ನಿಷೇಧಿಸಲು ಕ್ರಮ ಕೈಗೊಳ್ಳುವುದಾಗಿ ಗುಂಡೂರಾವ್ ತಿಳಿಸಿದರು. ಹುಕ್ಕಾ ಬಾರ್ ಗಳಿಗೆ ನಿಯಂತ್ರಣ ಹೇರುವಲ್ಲಿ ಕ್ರೀಡಾ ಸಚಿವ ನಾಗೇಂದ್ರ ಅವರು ಕೆಲವು ಸಲಹೆ ನೀಡಿದ್ದು, ಕೋಟ್ಪಾ ಕಾಯ್ದೆ ತಿದ್ದುಪಡಿಯಲ್ಲಿ ಹುಕ್ಕಾ ಬಾರ್ ಗಳಲ್ಲಿ ನಡೆಯುವ ಮಾದಕ ವಸ್ತುಗಳ ಸೇವನೆಗೆ ನಿಷೇಧ ಹೇರಲು ಕ್ರಮ ಕೈಗೊಳ್ಳುವುದಾಗಿ ಗುಂಡೂರಾವ್ ಹೇಳಿದರು.

    ತಂಬಾಕು ಖರೀದಿಗೆ 18 ವರ್ಷದ ಮೇಲ್ಪಟ್ಟವರಿಗೆ, ಕಾನೂನನಲ್ಲಿ ಇದ್ದ ಅವಕಾಶವನ್ನ ಪರಿಷ್ಕರಿಸಲು ಗುಂಡೂರಾವ್ ಮುಂದಾಗಿದ್ದಾರೆ.‌ 18 ವರ್ಷದ ಬದಲು 21 ವರ್ಷದ ಮೇಲ್ಪಟ್ಟವರು ಎಂದು ಕೋಟ್ಪಾ ಕಾಯ್ದೆಗೆ ತಿದ್ದುಪಡಿ ತರುವುದಾಗಿ ಇದೇ ವೇಳೆ ತಿಳಿಸಿದರು. ಈ ಮೂಲಕ 21 ವರ್ಷದ ಒಳಗಿನವರಿಗೆ ತಂಬಾಕು ಉತ್ಪನ್ನಗಳ ಖರೀದಿಗೆ ನಿಷೇಧ ಹೇರಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

    ಯಾವುದೇ ಶಾಲೆ,‌ ಕಾಲೇಜು, ಆಸ್ಪತ್ರೆ, ಶಿಶುಪಾಲನಾ ಕೇಂದ್ರಗಳು, ಹೆಲ್ತ್ ಕೇರ್ ಸೆಂಟರ್, ದೇವಸ್ಥಾನಗಳು, ಮಂದಿರಗಳು, ಮಸೀದಿಗಳು, ಉದ್ಯಾನವನ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತಿದೆ.‌

    ಮಾದಕ ವಸ್ತುಗಳ ವ್ಯಸನಕ್ಕೆ ದಾಸರಾಗಿ ಇಂದಿನ ಯುವಜನತೆ ತಮ್ಮ ಅಮೂಲ್ಯ ಭವಿಷ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಬುಡಸಮೇತ ಕಿತ್ತೆಸೆಯುವ ಗಟ್ಟಿ ನಿರ್ಧಾರವನ್ನು ಮಾಡಿದ್ದೇವೆ. ತಂಬಾಕು ಸೇವನೆಯ ಬಳಿಕ ಯುವಕರು ಡ್ರಗ್ಸ್, ಮಾದಕ ವಸ್ತುಗಳ ವ್ಯಸನಗಳತ್ತ ಆಕರ್ಷಿತರಾಗುತ್ತಿದ್ದರು. ಇದಕ್ಕೆಲ್ಲಾ ತಂಬಾಕು ಸೇವನೆಯೇ ಒಂದು ರೀತಿಯಲ್ಲಿ ಅಡಿಪಾಯ ಹಾಕಿ ಕೊಡುತ್ತಿತ್ತು. ಹೀಗಾಗಿ ಮೂಲದಲ್ಲೇ ಸರಿಪಡಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್, ಬೇಕಾದ್ರೆ ನೆಹರು ಹುಕ್ಕಾ ಬಾರ್ ತೆರೆಯಲಿ : ಸಿಟಿ ರವಿ

    ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್, ಬೇಕಾದ್ರೆ ನೆಹರು ಹುಕ್ಕಾ ಬಾರ್ ತೆರೆಯಲಿ : ಸಿಟಿ ರವಿ

    ಬೆಂಗಳೂರು: ಕಾಂಗ್ರೆಸ್ಸಿನವರು ಇಂದಿರಾ ಕ್ಯಾಂಟೀನ್ ತೆರೆದಿರೋದು ಅವರ ಎಟಿಎಂಗಳನ್ನು ತುಂಬಿಸಿಕೊಳ್ಳಲೇ ಹೊರತು, ಇಂದಿರಾ ಗಾಂಧಿ ಮೇಲಿನ ಪ್ರೀತಿಯಿಂದಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ತಿರುಗೇಟು ನೀಡಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‍ನವರು ಬೇಕಾದ್ರೆ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಿ. ಬೇಕಾದ್ರೆ ಬಾರ್ ತೆರೆಯಲಿ, ನೆಹರು ಹುಕ್ಕಾ ಬಾರ್ ಎಂಬ ಹೆಸರಲ್ಲಿ ತೆರೆಯಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮಾಡಬೇಕು ಅಂತಾ ಪ್ರಸ್ತಾಪಿಸಿದ್ದೇನೆ ಎಂದು ಹೇಳಿದರು.  ಇದನ್ನೂ ಓದಿ: ಸುಲಭ್ ಶೌಚಾಲಯ ಯೋಜನೆಗೆ ಮೋದಿಯ ಹೆಸರನ್ನು ಇಡಲಿ: ಹರಿಪ್ರಸಾದ್ ವ್ಯಂಗ್ಯ

    ನೆಹರು, ಇಂದಿರಾ ಗಾಂಧಿಯವರ ಒಳ್ಳೆಯ ಕೊಡುಗೆಗಳನ್ನು ನೆನೆಯುತ್ತೇವೆ. ಆದರೆ ಅವರು ಮಾಡಿದ್ದ ಎಲ್ಲವನ್ನೂ ಒಪ್ಪಿಕೊಳುವುದ್ದಕ್ಕೆ ನಾವೇನು ಗುಲಾಮರಲ್ಲ ಎಂದು ಕಾಂಗ್ರೆಸ್ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದರು.

    ನಮ್ಮ ರಾಜಕೀಯ ವಿರೋಧಿಗಳು ಹಳೆಯ ಗ್ರಾಮಾಫೋನ್ ಪ್ಲೇಟ್ ತಿರುಗಿಸುತ್ತಲೇ ಇರುತ್ತಾರೆ. ಅದರಲ್ಲಿ ಸಿದ್ದರಾಮಯ್ಯ ಒಬ್ಬರು. ಸಿದ್ದರಾಮಯ್ಯನವರು ಅಪ್ ಡೇಟ್ ಆಗಬೇಕು. ನಾವು ಅಂಬೇಡ್ಕರ್ ವಿರೋಧಿಗಳಲ್ಲ. ಅಂಬೇಡ್ಕರ್ ಅವರನ್ನು ಎರಡು ಬಾರಿ ಸೋಲಿಸಿದ್ದು ಕಾಂಗ್ರೆಸ್. ನಿಮ್ಮ ಸಾಫ್ಟ್ ವೇರ್ ಅಪ್ಡೇಟ್ ಮಾಡಿಕೊಳ್ಳಿ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

    ಸಂಸತ್ತಿನಲ್ಲಿ ಕಾಂಗ್ರೆಸ್ ವಿಪಕ್ಷಗಳ ಅಸಹಾಕಾರದ ನಡುವೆಯೂ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. 671 ಒಬಿಸಿ ಸಮುದಾಯಗಳು ನ್ಯಾಯ ಪಡೆಯಲು ಸಾಧ್ಯವಾಗಲಿದೆ. ಮೀಸಲಾತಿ, ಸಾಮಾಜಿಕ ನ್ಯಾಯ ಬಿಜೆಪಿಯ ಬದ್ಧತೆಯಾಗಿದ್ದು, ಅದಕ್ಕೆ ಪೂರಕವಾಗಿ ನಮ್ಮ ಸರ್ಕಾರ ನಡೆದುಕೊಳ್ಳುತ್ತಿದೆ.  ಸಂಸತ್ತನ್ನು ಖಾನ್ ಮಾರ್ಕೆಟ್ ಆಗಿ ಪರಿವರ್ತಿಸಿದ್ದವರು ಕಾಂಗ್ರೆಸ್‍ನವರು ಎಂದು ದೂರಿದರು.

  • ವೀಕೆಂಡ್ ಮತ್ತಿನಲ್ಲಿದ್ದವರಿಗೆ ಸಿಸಿಬಿ ಶಾಕ್..!

    ವೀಕೆಂಡ್ ಮತ್ತಿನಲ್ಲಿದ್ದವರಿಗೆ ಸಿಸಿಬಿ ಶಾಕ್..!

    ಬೆಂಗಳೂರು: ವೀಕೆಂಡ್ ಮತ್ತಿನಲ್ಲಿದ್ದ ಸಿಲಿಕಾನ್ ಸಿಟಿ ಜನರಿಗೆ ಸಿಸಿಬಿ ಪೊಲೀಸರು ತಡರಾತ್ರಿ ಶಾಕ್ ನೀಡಿದ್ದಾರೆ.

    ನಗರದಲ್ಲಿ ಅನಧಿಕೃತವಾಗಿ ನಿಯಮ ಉಲಂಘನೆ ಮಾಡಿ ನಡೆಸುತ್ತಿದ್ದ ಹುಕ್ಕಾ ಬಾರ್‍ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕೋರಮಂಗಲ, ಹೆಚ್‍ಎಸ್‍ಆರ್ ಲೇಔಟ್, ಎಂ.ಜಿ ರೋಡ್, ಸೆಂಟ್ ಮಾರ್ಕ್ಸ್ ರಸ್ತೆ, ರಾಜಾಜಿನಗರ ಓರಾಯನ್ ಮಾಲ್ ಸೇರಿದಂತೆ ನಗರದ 10 ಕಡೆ ಸಿಸಿಬಿ ಡಿಸಿಪಿ ಗಿರೀಶ್ ನೇತೃತ್ವದ 12 ತಂಡಗಳು ದಾಳಿ ನಡೆಸಿವೆ.

    ಹುಕ್ಕಾ ಬಾರ್‍ಗಳಲ್ಲಿ ಸ್ಮೋಕಿಂಗ್ ಜೊನ್ ಇರಬೇಕು. ಊಟವನ್ನ ಸರಬರಾಜು ಮಾಡುವಂತಿಲ್ಲ.ಅಲ್ಲದೇ ಅಪ್ರಾಪ್ತರಿಗೆ ಹುಕ್ಕಾ ಬಾರ್‍ಗಳಲ್ಲಿ ಪ್ರವೇಶ ಇಲ್ಲ. ಇವೆಲ್ಲ ನಿಯಮಗಳನ್ನು ಉಲಂಘನೆ ಮಾಡಿ ಹುಕ್ಕಾ ಬಾರ್‍ಗಳನ್ನ ನಡೆಸುತ್ತಿದ್ದರು. ಹೀಗಾಗಿ ದಾಳಿ ವೇಳೆ ಒಟ್ಟು 10 ಜನ ಮಾಲೀಕರು, ಬಾರ್ ಮ್ಯಾನೇಜರ್‍ಗಳನ್ನು ಬಂಧಿಸಲಾಗಿದೆ.

    50ಕ್ಕೂ ಹೆಚ್ವು ಹುಕ್ಕಾಗಳನ್ನು ಜಪ್ತಿ ಮಾಡಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv