Tag: ಹುಬ್ಬಳ್ಳಿ

  • ಕೆಲ ಬಿಜೆಪಿಯವರು ಸಿಎಂ ಮಾತ್ರ ಅಲ್ಲ, ಪ್ರಧಾನಿಯನ್ನು ಬದಲಾವಣೆ ಮಾಡಬೇಕೆಂದು ಕೇಳ್ತಿದ್ದಾರೆ: ಸಂತೋಷ್ ಲಾಡ್

    ಕೆಲ ಬಿಜೆಪಿಯವರು ಸಿಎಂ ಮಾತ್ರ ಅಲ್ಲ, ಪ್ರಧಾನಿಯನ್ನು ಬದಲಾವಣೆ ಮಾಡಬೇಕೆಂದು ಕೇಳ್ತಿದ್ದಾರೆ: ಸಂತೋಷ್ ಲಾಡ್

    ಹುಬ್ಬಳ್ಳಿ: ರಾಜ್ಯದ ಸಿಎಂ ಬದಲಾವಣೆ ಮಾತು ಅಷ್ಟೇ ಅಲ್ಲಾ, ದೇಶದ ಪ್ರಧಾನಿ ಬದಲಾವಣೆ ಮಾಡಬೇಕೆಂದು ಕೆಲ ಬಿಜೆಪಿಯವರು ಕೇಳ್ತಿದ್ದಾರೆ ಎಂಬ ನನಗೆ ಮಾಹಿತಿ ಇದೆ ಎಂದು ಸಚಿವ ಸಂತೋಷ್ ಲಾಡ್ (Santosh Lad) ತಿರುಗೇಟು ನೀಡಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ, 140 ಶಾಸಕರು ಇರುವ ಪಕ್ಷ. ಹೀಗಾಗಿ ಅಸಮಾಧಾನ ಸಹಜ, ಅವರ ಅಸಮಾಧಾನ ಪಕ್ಷದ ವಿರುದ್ಧ ಅಲ್ಲ. ಸುರ್ಜೇವಾಲ ಅವರು ಅವರ ಜೊತೆ ಮಾತನಾಡುತ್ತಿದ್ದಾರೆ. ಅವರ ಅಸಮಾಧಾನ ಬಗೆಹರಿಸುವ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಹಗರಣ| ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ – ಎಸ್‌ಐಟಿ ರದ್ದು, ಸಿಬಿಐ ತನಿಖೆಗೆ ಆದೇಶ

    ಕಲ್ಲಿದ್ದಲು ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿಲ್ಲಾ ಅಂತ ಬಿಜೆಪಿ ಸರ್ಕಾರವೇ ಹೇಳಿದೆ. ಯುಪಿಎ ಸರ್ಕಾರದಲ್ಲಿ ಯಾವುದೇ ಹಗರಣ ಆಗಿಲ್ಲ ಎಂದು ಇದೇ ಬಿಜೆಪಿ ಸರ್ಕಾರ ರಿಪೋರ್ಟ್ ಹೇಳಿದೆ. ಇವರ 11 ವರ್ಷದ ಅವಧಿಯಲ್ಲಿ ಯಾರಿಗೆಲ್ಲಾ ಟೆಂಡರ್ ಕೊಟ್ಟಿದ್ದಾರೆ ಅಂತ ಬಿಜೆಪಿ ಹೇಳಲಿ ಎಂದು ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ಹೆಚ್ಚುತ್ತಿರುವ ಹೃದಯಾಘಾತ – ಮೈಸೂರಿನ ಜಯದೇವ ಆಸ್ಪತ್ರೆಗೆ ತಪಾಸಣೆಗೆ ಬರುವವರ ಸಂಖ್ಯೆ ದಿಢೀರ್ ಏರಿಕೆ

    ವಿಶ್ವಗುರು ಪವರಫುಲ್ ಅಂತ ಬರೀ ಹೇಳಿಕೊಂಡು ಅಡ್ಡಾಡಿದ್ರೆ ಸಾಲದು. ಪೆಹಲ್ಗಾಮ್ ಘಟನೆ ಬಗ್ಗೆ ಕೇಳಬಾರದಾ? ಸಮಸ್ಯೆಗಳ ಬಗ್ಗೆ ಮೊದಲು ಚರ್ಚೆ ಮಾಡಬೇಕು. ಚೀನಾ ಮತ್ತು ಭಾರತವನ್ನು ಹೋಲಿಸಿಕೊಂಡು ಮಾತನಾಡಿದರೆ, ಚೀನಾದ ವಸ್ತುಗಳನ್ನು ಬಳಸಬೇಡಿ ಅಂತ ಮೋದಿ ಹೇಳ್ತಾರೆ. ಆದರೆ ಅಲ್ಲಿನ ವಸ್ತುಗಳನ್ನು ಆಮದು ಮಾಡ್ತಿರೋದು ಯಾರು? ದೇಶದ ವಿಚಾರದಲ್ಲಿ ಪ್ರಶ್ನೆ ಕೇಳುವ ಅಧಿಕಾರವಿದೆ. ಬಿಜೆಪಿಯವರ ಫಾರಿನ್ ಪಾಲಿಸಿ ಫೇಲ್ ಆಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ | CAT ಆದೇಶಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ – ಸಿಎಂ

    ಪೆಟ್ರೋಲ್, ಡೀಸೆಲ್, ಸಿನಿಮಾ ಟಿಕೆಟ್ ಮೇಲೆ ಸೆಸ್ ಹಾಕೋ ವಿಚಾರವನ್ನು ಸರ್ಕಾರಕ್ಕೆ ತಿಳಿಸಿದ್ದೇವೆ. ಸ್ವಲ್ಪ ಪ್ರಮಾಣದಲ್ಲಿ ಸೆಸ್ ಹೆಚ್ಚು ಮಾಡುವುದರಿಂದ ಜನರಿಗೆ ಹೆಚ್ಚಿನ ಹೊರೆ ಆಗುವುದಿಲ್ಲ ಎಂದಿದ್ದಾರೆ.

  • ಯುಪಿನಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಮೋದಿ ಅಧ್ಯಕ್ಷತೆಯ ಸಂಪುಟ ಅಸ್ತು!

    ಯುಪಿನಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಮೋದಿ ಅಧ್ಯಕ್ಷತೆಯ ಸಂಪುಟ ಅಸ್ತು!

    – ಆಗ್ರಾದ ಸಿಂಗ್ನಾದಲ್ಲಿ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರ ಸ್ಥಾಪನೆಗೆ ಅನುಮೋದನೆ

    ಹುಬ್ಬಳ್ಳಿ: ಕೇಂದ್ರ ಸರ್ಕಾರ, ಉತ್ತರ ಪ್ರದೇಶದಲ್ಲಿ (Uttar Pradesh) ಅಂತಾರಾಷ್ಟ್ರೀಯ ಆಲೂಗಡ್ಡೆ ಕೇಂದ್ರದ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಸಜ್ಜಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Prahlad Joshi) ತಿಳಿಸಿದರು.

    ಆಗ್ರಾದ (Agra) ಸಿಂಗ್ನಾದಲ್ಲಿ ಈ ಕೇಂದ್ರ ತೆರೆಯಲು ನಿರ್ಣಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಇದಕ್ಕೆ ಅನುಮೋದನೆ ನೀಡಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಕೇಂದ್ರದ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರ ಸ್ಥಾಪಿಸುವ ಕುರಿತು ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ಸಲ್ಲಿಸಿದ ಪ್ರಸ್ತಾವನೆಗೆ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ.ಇದನ್ನೂ ಓದಿ: Rain Alert | ಹಾಸನ ಜಿಲ್ಲೆಯ 3, ಉತ್ತರ ಕನ್ನಡ ಜಿಲ್ಲೆಯ 2 ತಾಲೂಕಿನ ಶಾಲೆಗಳಿಗೆ ಗುರುವಾರ ರಜೆ

    ಆಲೂಗಡ್ಡೆ, ಸಿಹಿಗೆಣಸು ಉತ್ಪಾದನೆ ಹಾಗೂ ಸುಗ್ಗಿ ನಂತರದಲ್ಲೂ ಇವುಗಳ ಆಹಾರೋತ್ಪನ್ನ, ಮೌಲ್ಯವರ್ಧಿತ ಆಹಾರ ಪದಾರ್ಥ, ಪೌಷ್ಟಿಕಾಂಶ ಭರಿತ ಆಹಾರ ಭದ್ರತೆ, ರೈತರ ಆದಾಯ ಹೆಚ್ಚಳ ಹಾಗೂ ಹೆಚ್ಚು ಉದ್ಯೋಗಾವಕಾಶ ಕಲ್ಪಿಸುವಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ಕೇಂದ್ರ ನೆರವಾಗಲಿದೆ.

    ಅಂತಾರಾಷ್ಟ್ರೀಯ ಆಲೂಗಡ್ಡೆ ಪ್ರಾದೇಶಿಕ ಕೇಂದ್ರ ಸ್ಥಾಪನೆಯಿಂದ ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೆಚ್ಚು ಹೂಡಿಕೆಯನ್ನೂ ಆಕರ್ಷಿಸಲಿದೆ. ಭಾರತದಲ್ಲಿ ಆಲೂಗಡ್ಡೆ ವಲಯವು ಉತ್ಪಾದನೆ, ಆಹಾರ ಸಂಸ್ಕರಣೆ, ಪ್ಯಾಕೇಜಿಂಗ್, ಸಾರಿಗೆ, ಮಾರುಕಟ್ಟೆ ಇತ್ಯಾದಿಗಳಲ್ಲಿ ಗಮನಾರ್ಹ ಉದ್ಯೋಗಾವಕಾಶ ಸೃಷ್ಟಿಸುವ ಸಾಮರ್ಥ್ಯ ಹೊಂದಿದೆ. ಹಾಗಾಗಿ ಇದನ್ನು ಮತ್ತಷ್ಟು ವಿಸ್ತರಿಸಲು ಕೇಂದ್ರ ಸರ್ಕಾರ ಮುಂದಡಿ ಇಟ್ಟಿದೆ ಎಂದಿದ್ದಾರೆ.

    ಅSAಖಅ ಅಭಿವೃದ್ಧಿಪಡಿಸಿದ ಹೆಚ್ಚಿನ ಇಳುವರಿ ನೀಡುವ, ಪೋಷಕಾಂಶ ಮತ್ತು ಹವಾಮಾನ ಆಧಾರಿತ ತಳಿಗಳ ಆಲೂಗಡ್ಡೆ ಮತ್ತು ಸಿಹಿಗೆಣಸು ಭಾರತದಲ್ಲಿ ಮಾತ್ರವಲ್ಲದೆ ದಕ್ಷಿಣ ಏಷ್ಯಾ ಪ್ರದೇಶದಲ್ಲಿಯೂ ಹೆಚ್ಚು ಉತ್ಪಾದನೆ ಮತ್ತು ಬಳಕೆಯಲ್ಲಿದ್ದು, ವಿಶ್ವದರ್ಜೆ ಮಾರುಕಟ್ಟೆ ಕಲ್ಪಿಸುವಲ್ಲಿ ಈ ಕೇಂದ್ರ ನೆರವಾಗಲಿದೆ.

    ಆಲೂಗಡ್ಡೆ, ಸಿಹಿಗೆಣಸು ಅನ್ವೇಷಣೆ ಮತ್ತು ಅಂತಾರಾಷ್ಟ್ರೀಯ ಆಲೂಗಡ್ಡೆ ಕೇಂದ್ರದ ದಕ್ಷಿಣ ಏಷ್ಯಾ ಪ್ರಾದೇಶಿಕ ಕೇಂದ್ರವನ್ನು ಉತ್ತರ ಪ್ರದೇಶದ ಆಗ್ರಾದ ಸಿಂಗ್ನಾದಲ್ಲಿ ಸ್ಥಾಪಿಸುವುದರಿಂದ ಭಾರತದಲ್ಲಿ ಆಲೂಗಡ್ಡೆ ಮತ್ತು ಸಿಹಿಗೆಣಸು ವಲಯಗಳ ಸುಸ್ಥಿರ ಅಭಿವೃದ್ಧಿಗೂ ಗಮನಾರ್ಹ ಕೊಡುಗೆ ನೀಡಲಿದೆ ಎಂದರು.ಇದನ್ನೂ ಓದಿ: ಲೋಕಸಭಾಧ್ಯಕ್ಷ ಓಂ ಬಿರ್ಲಾರನ್ನು ಭೇಟಿ ಮಾಡಿದ ಯು.ಟಿ.ಖಾದರ್

  • ಕುದಿಯುವ ಸಾಂಬಾರ್ ಮೈಮೇಲೆ ಬಿದ್ದು ಎರಡೂವರೆ ವರ್ಷದ ಬಾಲಕಿ ಸಾವು

    ಕುದಿಯುವ ಸಾಂಬಾರ್ ಮೈಮೇಲೆ ಬಿದ್ದು ಎರಡೂವರೆ ವರ್ಷದ ಬಾಲಕಿ ಸಾವು

    ಹುಬ್ಬಳ್ಳಿ/ಹಾವೇರಿ: ಕುದಿಯುವ ಸಾಂಬಾರ್ (Sambar) ಮೈಮೇಲೆ ಬಿದ್ದು ಬಾಲಕಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ.

    ಹುಬ್ಬಳ್ಳಿ ತಾಲೂಕಿನ ಚೆನ್ನಾಪುರ ಗ್ರಾಮದ ಎರಡೂವರೆ ವರ್ಷದ ರುಕ್ಸಾನಾ ಬಾನು ಶೇಖ್ ಸನದಿ ಮೃತ ಬಾಲಕಿ. ಕಳೆದ ಐದು ದಿನಗಳ ಹಿಂದೆ ಮನೆಯವರೊಂದಿಗೆ ಮದುವೆಗೆಂದು ಹಾವೇರಿ (Haveri) ಜಿಲ್ಲೆಯ ಶಿಗ್ಗಾವಿ (Shiggaon) ತಾಲೂಕಿನ ಕೊಣ್ಣೂರ ಗ್ರಾಮಕ್ಕೆ ಹೋಗಿದ್ದ ಸಂದರ್ಭ ಬಾಲಕಿ ಮೈಮೇಲೆ ಕುದಿಯುವ ಸಾಂಬಾರ್ ಬಿದ್ದಿತ್ತು. ಇದನ್ನೂ ಓದಿ: ತಮ್ಮ ತಪ್ಪು ಅರಿವಾದರೆ ಯಾರೇ ಆದರೂ ಪಕ್ಷಕ್ಕೆ ಮರಳಬಹುದು: ವಿಜಯೇಂದ್ರ ಮುಕ್ತ ಆಹ್ವಾನ

    ಕೂಡಲೇ ಬಾಲಕಿಯನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲು ಮಾಡಲಾಗಿತ್ತು. ಎರಡು ದಿನದ ಹಿಂದಷ್ಟೇ ಬಾಲಕಿಯನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಇಂದು ಮತ್ತೆ ಮೈಮೇಲೆ ಗುಳ್ಳೆಗಳು ಎದ್ದಿದ್ದವು. ಹೀಗಾಗಿ ಮತ್ತೆ ಕಿಮ್ಸ್ಗೆ ಬಾಲಕಿಯನ್ನು ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಆರ್‌ಟಿಐಯಡಿ ಸಲ್ಲಿಸಿದ ಅರ್ಜಿಯನ್ನು ಉಡಾಫೆ ಮಾಡಬೇಡಿ – ಕೆ. ಬದ್ರುದ್ದೀನ್ ಎಚ್ಚರಿಕೆ

    ಬಾಲಕಿ ಸಾವಿನಿಂದ ಕುಟುಂಬಸ್ಥರ ರೋಧನ ಮುಗಿಲುಮುಟ್ಟಿದೆ. ಇದ್ದ ಒಬ್ಬಳೇ ಮಗಳನ್ನು ಕಳೆದುಕೊಂಡು ಹೆತ್ತಮ್ಮ ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: 10 ಅಡಿ ಆಳದಲ್ಲಿ ಸೊಸೆಯನ್ನು ಹೂತಿದ್ದ ಪಾಪಿಗಳು – ಓಡಿ ಹೋಗಿದ್ದಾಳೆ ಎಂದು ಕತೆ ಕಟ್ಟಿದ್ದ ಪತಿ ಕುಟುಂಬಸ್ಥರು ಅರೆಸ್ಟ್‌!

  • ಹುಬ್ಬಳ್ಳಿ | ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಪತಿ ಮನೆಯಿಂದ ಹೊತ್ತೊಯ್ದ ಪೋಷಕರು

    ಹುಬ್ಬಳ್ಳಿ | ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಪತಿ ಮನೆಯಿಂದ ಹೊತ್ತೊಯ್ದ ಪೋಷಕರು

    – ಯುವತಿ ತಂಟೆಗೆ ಬಾರದಂತೆ ಪತಿಗೆ ಧಮ್ಕಿ

    ಹುಬ್ಬಳ್ಳಿ: ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಪತಿ ಮನೆಯಿಂದ ಬಲವಂತವಾಗಿ ಪೋಷಕರು ಎತ್ತೊಯ್ದ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ.

    ಹುಬ್ಬಳ್ಳಿಯ ಬೈರಿಕೊಪ್ಪ (Barikoppa) ಗ್ರಾಮದ ನಿರಂಜನ್ ಹಾಗೂ ಸುಷ್ಮಾರ ಪರಸ್ಪರ ಪ್ರೀತಿಗೆ ಹೆತ್ತವರ ವಿರೋಧವಿತ್ತು. ಕಳೆದ ಎಂಟು ವರ್ಷದಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಅಲ್ಲದೇ ಈ ಜೋಡಿ 2 ವರ್ಷದ ಹಿಂದೆಯೇ ಗದಗನಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಿ ಬಂದಿದ್ದರು. ಇದನ್ನೂ ಓದಿ: Ahmedabad Tragedy | ಡಿಎನ್‌ಎ ಮ್ಯಾಚ್ – 3 ದಿನಗಳ ಬಳಿಕ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

    ಬಳಿಕ ಪೋಷಕರ ವಿರೋಧಕ್ಕೆ ಮಣಿದು, ಇಬ್ಬರು ದೂರವಾಗಿ ವೇದನೆ ಪಡುತ್ತಿದ್ದರು. ಇದೀಗ ಪ್ರೀತಿಸಿ ಮದುವೆಯಾದ ಪತಿಯನ್ನು ಬಿಟ್ಟಿರಲು ಸಾಧ್ಯವಿಲ್ಲ ಎಂದು ನಿರಂಜನ್ ಮನೆಗೆ ಸುಷ್ಮಾ ಬಂದಿದ್ದರು. ಈ ವೇಳೆ ಯುವತಿ ತಂದೆ ಪರಶುರಾಮ, ಮಾವಂದಿರಾದ ಮಹಾಂತೇಶ್, ಮಂಜು ಸೇರಿ ನಿರಂಜನ್‌ಗೆ ಧಮ್ಕಿ ಹಾಕಿ ಗಂಡನ ಮನೆಯಲ್ಲಿ ಕುಳಿತಿದ್ದ ಸುಷ್ಮಾಳನ್ನು ಗೋಣಿ ಚೀಲದಲ್ಲಿ ಎತ್ತೊಯ್ದಿದ್ದಾರೆ. ಇದನ್ನೂ ಓದಿ: ಬ್ರಿಟನ್‌ನ F-35 ಫೈಟರ್‌ ಜೆಟ್‌ ಕೇರಳದಲ್ಲಿ ತುರ್ತು ಭೂಸ್ಪರ್ಶ – ಕಾರಣ ಏನು?

    ಸುಷ್ಮಾ ತಂಟೆಗೆ ಬಂದರೆ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪತಿ ನಿರಂಜನ್‌ಗೆ ಆಕೆ ಕುಟುಂಬಸ್ಥರು ಧಮ್ಕಿ ಹಾಕಿದ್ದಾರೆ. ಸದ್ಯ ಈ ಜೋಡಿ ರಕ್ಷಣೆಗಾಗಿ ಹುಬ್ಬಳ್ಳಿಯ ಪೊಲೀಸರ ಮೊರೆ ಹೋಗಿದ್ದಾರೆ. ಇದನ್ನೂ ಓದಿ: Bengaluru | ಪಾರ್ಟಿ ಮಾಡಲು ಪಬ್‌ಗೆ ಕರೆಸಿ, ಸುಪಾರಿ ನೀಡಿ ಗೆಳೆಯನ ಸುಲಿಗೆ

    ಮದುವೆಯಾಗಿ ನಾವು ಒಂದು ತಿಂಗಳು ಜೊತೆಗೆ ಇದ್ದೆವು. ನಮ್ಮ ಮನೆಗೆ ಬಂದು ಒತ್ತಾಯ ಪೂರ್ವಕವಾಗಿ ನನ್ನ ಪತ್ನಿಯನ್ನು ಎತ್ತಿಕೊಂಡು ಹೋಗಿದ್ದಾರೆ. ಅಲ್ಲದೆ ನನಗೂ ಬೆದರಿಕೆ ಹಾಕಿದ್ದಾರೆ. ನಮ್ಮಿಬ್ಬರಿಗೂ ರಕ್ಷಣೆ ನೀಡಬೇಕೆಂದು ನಿರಂಜನ್ ಪೊಲೀಸರ ಬಳಿ ಮನವಿ ಮಾಡಿಕೊಂಡಿದ್ದಾರೆ.

  • ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

    ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

    ಹುಬ್ಬಳ್ಳಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು, ವ್ಯಕ್ತಿಯೊಬ್ಬರು ಆಯತಪ್ಪಿ ಚರಂಡಿಗೆ ಬಿದ್ದು ಕೊಚ್ಚಿ ಹೋಗಿರುವ ಘಟನೆ ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಲಿ (Belagali) ರಸ್ತೆಯಲ್ಲಿ ನಡೆದಿದೆ.

    ಬೀರಬಂದ ಓಣಿಯ ಹುಸೇನ ಕಳಸ ಕೊಚ್ಚಿಕೊಂಡು ಹೋಗಿರುವ ವ್ಯಕ್ತಿ. ಹುಸೇನ ಅವರು ಬೆಳಗಲಿ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಆಯತಪ್ಪಿ ಚರಂಡಿಗೆ ಬಿದ್ದಿದ್ದರು. ಧಾರಕಾರ ಮಳೆಯಿಂದಾಗಿ ಚರಂಡಿಯಲ್ಲಿ ಭಾರೀ ನೀರು ಹರಿಯುತ್ತಿದ್ದ ಕಾರಣ ಹುಸೇನ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಇದನ್ನೂ ಓದಿ: ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

    ಹುಸೇನ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಇದುವರೆಗೆ ಪತ್ತೆಯಾಗಿಲ್ಲ. ಕಸಬಾಪೇಟೆ (Kasaba Pete) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

  • ಪಾಕ್ ವಿರುದ್ಧ ಯುದ್ಧ ಬೇಡ ಅಂದಿದ್ದ ಸಿಎಂ ಹೇಳಿಕೆ ಖಂಡಿಸಿ ಪೋಸ್ಟ್ – ಹಿಂದೂ ಕಾರ್ಯಕರ್ತನ ವಿರುದ್ಧ ಕೇಸ್

    ಪಾಕ್ ವಿರುದ್ಧ ಯುದ್ಧ ಬೇಡ ಅಂದಿದ್ದ ಸಿಎಂ ಹೇಳಿಕೆ ಖಂಡಿಸಿ ಪೋಸ್ಟ್ – ಹಿಂದೂ ಕಾರ್ಯಕರ್ತನ ವಿರುದ್ಧ ಕೇಸ್

    -ಪೋಸ್ಟ್ ಡಿಲೀಟ್ ಮಾಡಿದ 1 ತಿಂಗಳ ನಂತರ ಕೇಸ್

    ಹುಬ್ಬಳ್ಳಿ: ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಎಂದಿದ್ದ ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿಕೆ ಖಂಡಿಸಿ ಪೋಸ್ಟ್ ಹಾಕಿದ್ದ ಹಿಂದೂ ಕಾರ್ಯಕರ್ತನ ಮೇಲೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

    ಈ ಕುರಿತು ಹಿಂದೂ ಕಾರ್ಯಕರ್ತ ಶಿವಾನಂದ ಸತ್ತಿಗೇರಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ನಡೆ ಸರಿಯಿಲ್ಲ. ರಾಜ್ಯದಲ್ಲಿರುವ ಹಿಂದೂ ಕಾರ್ಯಕರ್ತರ ಮೇಲೆ ಕೇಸ್‌ಗಳ ಸುರಿಮಳೆ ಸುರಿಸುತ್ತಿದ್ದಾರೆ. ಈ ಮೂಲಕ ಹಿಂದೂ ಕಾರ್ಯಕರ್ತರನ್ನು ಬೆದರಿಸುವ ತಂತ್ರ ನಡೆಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡೀಪಾರು ನೋಟಿಸ್

    ಸಿದ್ದರಾಮಯ್ಯನವರ ಪ್ರಚೋದನಕಾರಿ ಹೇಳಿಕೆ ವಿರುದ್ಧ ಪೋಸ್ಟ್ ಮಾಡಿದ್ದೆ. ಡಿಲೀಟ್ ಆದ ಒಂದು ತಿಂಗಳ ನಂತರ ಇದೀಗ ಪ್ರಕರಣ ದಾಖಲಾಗಿದೆ. ಈ ರೀತಿ ಪ್ರಕರಣ ದಾಖಲು ಮಾಡಿರುವುದು ಸರಿಯಲ್ಲ. ಈ ಬಗ್ಗೆ ನಾನು ಕಾನೂನು ಹೋರಾಟ ನಡೆಸುತ್ತೇನೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾನೆ.

    ಕಳೆದ ಏ.28 ರಂದು ಬಜರಂಗದಳ ಕಾರ್ಯಕರ್ತ ಶಿವಾನಂದ ಸತ್ತಿಗೇರಿ ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಎಂಬ ಸಿಎಂ ಸಿದ್ಧರಾಮಯ್ಯ ಹೇಳಿಕೆ ಖಂಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಪೋಸ್ಟ್ನಲ್ಲಿ ಸಿಎಂ ಅವರಿಗೆ ಗೋಡ್ಸೆ ಬೇಕಾಗಿದ್ದಾರೆ ಎಂದು ಉಲ್ಲೇಖಿಸಿದ್ದರು. ಬಳಿಕ ಪೊಲೀಸರು ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿಸಿದ್ದರು.ಇದನ್ನೂ ಓದಿ: Chikkaballapura | ಲಾಂಗ್‌ನಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ – ಆಟೋ ಚಾಲಕ ಅರೆಸ್ಟ್

  • ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೊನಾ ಸೋಂಕು – ಮಂಡ್ಯದಲ್ಲೂ ಮೊದಲ ಕೇಸ್‌ ಪತ್ತೆ

    ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೊನಾ ಸೋಂಕು – ಮಂಡ್ಯದಲ್ಲೂ ಮೊದಲ ಕೇಸ್‌ ಪತ್ತೆ

    – ಬೇರೆ ಆರೋಗ್ಯ ಸಮಸ್ಯೆ ಇದ್ದವರು ಎಚ್ಚರದಿಂದಿರಿ – ದಿನೇಶ್‌ ಗುಂಡೂರಾವ್‌

    ಹುಬ್ಬಳ್ಳಿ/ಧಾರವಾಡ/ಮಂಡ್ಯ: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು (Corona Virus) ಪ್ರಕರಣಗಳು ಹೆಚ್ಚಾಗುತ್ತಿವೆ. ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೊನಾ ಕಾಣಿಸಿಕೊಂಡಿದೆ. ಅಲ್ಲದೇ ಮಂಡ್ಯದಲ್ಲೂ (Mandya) ಈ ಬಾರಿ ಮೊದಲ ಸೋಂಕು ಪತ್ತೆಯಾಗಿದೆ.

    ಹುಬ್ಬಳ್ಳಿಯ (Hubballi) ಬೈರಿದೇವರಕೊಪ್ಪ ಗ್ರಾಮದ 11 ತಿಂಗಳ ಮಗುವಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಗುವಿಗೆ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಕೊಡಿಸಲು ಹೋದಾಗ ಕೋವಿಡ್‌ ಇರೋದು ಪತ್ತೆಯಾಗಿದೆ. ಸದ್ಯ ಮಗುವಿನ ಆರೋಗ್ಯ ಸ್ಥಿರವಾಗಿದೆ ಅಂತ ಧಾರವಾಡ ಜಿಲ್ಲಾಡಳಿತ ಮಾಹಿತಿ ನೀಡಿದೆ.

    ಮಂಡ್ಯದಲ್ಲಿ ಮೊದಲ ಕೇಸ್‌ ಪತ್ತೆ:
    ಇನ್ನೂ ಈ ವರ್ಷ ಮಂಡ್ಯದಲ್ಲಿ 60 ವರ್ಷದ ವೃದ್ಧೆಯಲ್ಲಿ ಮೊದಲ ಕೊರೊನಾ ಕೇಸ್‌ ಪತ್ತೆಯಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಹರಕೆರೆ ಗ್ರಾಮದ ಕಲ್ಯಾಣಮ್ಮ ಎಂಬ ವೃದ್ಧೆಗೆ ಸೋಂಕು ಕಾಣಿಸಿಕೊಂಡಿದೆ. ಗ್ರಾಮದ ನಿವಾಸದಲ್ಲೇ ಇದ್ದ ಕಲ್ಯಾಣಮ್ಮ, ಕಳೆದ 2 ದಿನಗಳಿಂದ ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದರು. ಪರೀಕ್ಷೆ ವೇಳೆ ಸೋಂಕು ದೃಢಪಟ್ಟಿದ್ದು, ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಬೇರೆ ಬೇರೆ ಕಾಯಿಲೆ ಇದ್ದವರು ಎಚ್ಚರದಿಂದಿರಿ
    ಕೊರೊನಾ ಸೋಂಕು ಉಲ್ಬಣದ ಕುರಿತು ಮಾತನಾಡಿರುವ ಸಚಿವ ದಿನೇಶ್‌ ಗುಂಡೂರಾವ್‌, ಈ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನಿಲ್ಲ ಹಿಂದೆ ಏನು ಸೂಚನೆ ಕೊಟ್ಟಿದ್ದೆವೊ ಅಷ್ಟೆ‌. ಸದ್ಯಕ್ಕೆ ವಿಶೆಷವಾಗಿ ಹೇಳುಂತದ್ದು ಏನೂ ಇಲ್ಲ. ಕೇಂದ್ರ ಸರ್ಕಾರ ಸಹ ಇದು ಅಪಾಯಕಾರಿ ಏನಲ್ಲ ಅಂತ ಮೆಸೇಜ್‌ ಕೊಟ್ಟಿದೆ. ಸಣ್ಣ ಪ್ರಮಾಣದಲ್ಲಿ ತೊಂದರೆ ಆಗಬಹುದೇ ಹೊರತು ಅಪಾಯಕಾರಿ ಅಲ್ಲ ಎಂದು ವಿಶ್ಲೇಷಣೆ ಮಾಡಿದ್ದಾರೆ. ಹಾಗಾಗಿ ಜನ ಆತಂಕಪಡುವ ಅಗತ್ಯವಿಲ್ಲ. ರೋಗನಿರೋಧಕ ಶಕ್ತಿ ಕಡಿಮೆ ಇದ್ದವರು ಎಚ್ಚರಿಕೆಯಿಂದ ಇರಬೇಕು. ಬೇರೆ ಬೇರೆ ಕಾಯಿಲೆ ಇದ್ದಾಗ ಇದು ಸಮಸ್ಯೆ ಆಗಬಹುದು, ಸ್ವಲ್ಪ ಎಚ್ಚರಿಕೆಯಿಂದ ಇರಬೇಕು ಅಷ್ಟೆ ಅಂತ ಸಲಹೆ ನೀಡಿದ್ದಾರೆ.

  • ಸರಣಿ ಮನೆಗಳ್ಳತನ ಮಾಡ್ತಿದ್ದ ಖದೀಮ ಅಂದರ್ – 6 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

    ಸರಣಿ ಮನೆಗಳ್ಳತನ ಮಾಡ್ತಿದ್ದ ಖದೀಮ ಅಂದರ್ – 6 ಲಕ್ಷ ಮೌಲ್ಯದ ಚಿನ್ನ ವಶಕ್ಕೆ

    ಹುಬ್ಬಳ್ಳಿ: ಟಾಯ್ಲೆಟ್ ಕಿಟಕಿ ಮುರಿದು 6 ಲಕ್ಷ ಮೌಲ್ಯದ 62 ಗ್ರಾಂ ಚಿನ್ನ ಕಳ್ಳತನ ಮಾಡಿದ್ದ ಖದೀಮನನ್ನು ಹುಬ್ಬಳ್ಳಿಯ (Hubballi) ಬೆಂಡಿಗೇರಿ ಪೊಲೀಸರು (Bendigeri Police) ಬಂಧಿಸಿದ್ದಾರೆ.

    ನಗರದ ದೊಡ್ಡಮನಿ ಕಾಲೋನಿಯ ಜಾಫರ್ ಬೇಪಾರಿ(24) ಬಂಧಿತ ಕಳ್ಳ. ಇದನ್ನೂ ಓದಿ: ಕಲಬುರಗಿ ಗುತ್ತಿಗೆದಾರನಿಗೆ ಸರ್ಕಾರದ ವರ್ಕ್ ಆರ್ಡರ್ ಕೊಡಿಸುವುದಾಗಿ ಆಮಿಷ – 1.21 ಕೋಟಿ ವಂಚನೆ ಆರೋಪ

    ಆರೋಪಿ ಜಾಫರ್, ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿ, ಟಾಯ್ಲೆಟ್ ಕಿಟಕಿ ಮುರಿದು ಮನೆ ಕಳ್ಳತನ ಮಾಡುತ್ತಿದ್ದ. ಅದೇ ದುಡ್ಡಿನಲ್ಲಿ ಮೋಜು ಮಸ್ತಿ ಮಾಡುತ್ತಿದ್ದ. ಬೆಂಡಿಗೇರಿ ಪೊಲೀಸರು ಆರೋಪಿ ಜಾಫರ್‌ನನ್ನು ಬಂಧಿಸಿ, ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

    ಕಳೆದ 1 ತಿಂಗಳ ಹಿಂದೆ ನಗರದಲ್ಲಿ ಮನೆಗಳಲ್ಲಿ ಸರಣಿ ಕಳ್ಳತನವಾಗಿತ್ತು. ಕೂಡಲೇ ಅಲರ್ಟ್ ಆದ ಇನ್ಸ್ಪೆಕ್ಟರ್ ಎಸ್.ಆರ್ ನಾಯಕ್ ನೇತೃತ್ವದ ತಂಡ, ಸಿಸಿ ಕ್ಯಾಮೆರಾಗಳಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆರೋಪಿಯ ಜಾಡು ಹಿಡಿದು ಬಂಧಿಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧ ಭಾರತದ ದಿಟ್ಟ ಹೋರಾಟಕ್ಕೆ ಬೆಂಬಲ – ಸ್ಲೊವೇನಿಯಾದಲ್ಲಿ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷ ನಿಯೋಗ

    ಬಂಧಿತ ಆರೋಪಿಯಿಂದ 6 ಲಕ್ಷ ಮೌಲ್ಯದ 62 ಗ್ರಾಂ ತೂಕದ ಚಿನ್ನ ಹಾಗೂ 27 ಸಾವಿರ ಮೌಲ್ಯದ ಬೆಳ್ಳಿ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಹುಬ್ಬಳ್ಳಿ ಮಸೀದಿಗಳಲ್ಲಿ ಅಪರಿಚಿತ ವ್ಯಕ್ತಿಗಳು – ಮುಸ್ಲಿಮರೇ ಆತಂಕ ವ್ಯಕ್ತಪಡಿಸಿದ್ದಾರೆ ಎಂದ  ಟೆಂಗಿನಕಾಯಿ

    ಹುಬ್ಬಳ್ಳಿ ಮಸೀದಿಗಳಲ್ಲಿ ಅಪರಿಚಿತ ವ್ಯಕ್ತಿಗಳು – ಮುಸ್ಲಿಮರೇ ಆತಂಕ ವ್ಯಕ್ತಪಡಿಸಿದ್ದಾರೆ ಎಂದ ಟೆಂಗಿನಕಾಯಿ

    ಧಾರವಾಡ: ಹುಬ್ಬಳ್ಳಿಯ (Hubballi) ವಿವಿಧ ಮಸೀದಿಗಳಲ್ಲಿ ಅಪರಿಚಿತ ವ್ಯಕ್ತಿಗಳು ಕಾಣಿಸಿಕೊಂಡಿದ್ದಾರೆ ಎಂದು ಶಾಸಕ ಮಹೇಶ್‌ ಟೆಂಗಿನಕಾಯಿ (Mahesh Tenginakai) ಹೇಳಿದ್ದಾರೆ.

    ಹುಬ್ಬಳ್ಳಿಯ ವಿವಿಧ ಮಸೀದಿಗಳಲ್ಲಿ (Mosque) ಇರುವವರು ನಮ್ಮ ದೇಶದ ವ್ಯಕ್ತಿಗಳಂತೆ ಕಾಣುತ್ತಿಲ್ಲ. ಇದನ್ನು ನಾನು ಹೇಳುತ್ತಿಲ್ಲ. ಮುಸ್ಲಿಂ ಮುಖಂಡರೇ ನನ್ನ ಬಳಿ ಹೇಳಿ ಏನಾದರೂ ಆಗಬಹುದು ಎಂಬ ಅಂತಂಕವನ್ನು ಹೊರಹಾಕಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮ್ಯಾನೇಜರ್‌ ಕಿರುಕುಳ – ಕೆರೆಗೆ ಹಾರಿ ಬೆಂಗಳೂರಿನ ಟೆಕ್ಕಿ ಆತ್ಮಹತ್ಯೆ

     

    ಈ ಬಗ್ಗೆ ಗೃಹ ಇಲಾಖೆಗೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹುಬ್ಬಳ್ಳಿ ಬಹಳಷ್ಟು ಸೂಕ್ಷ್ಮ ಪ್ರದೇಶದ ಮುಂದೆ ಏನಾದರೂ ಅನಾಹುತ ಆದರೆ ಅದಕ್ಕೆ ಗೃಹ ಇಲಾಖೆಯೇ ಕಾರಣ ಎಂದರು.

    ಇಲ್ಲಿನ ಅಧಿಕಾರಿಗಳು ಅತ್ಯುತ್ತಮ ಕಾರ್ಯ ಮಾಡತ್ತಾರೆ.ಆದರೆ ಸರ್ಕಾರ ಅವರ ಕೈ ಕಟ್ಟಿಹಾಕಿದ್ದಾರೆ ಅಂತ ಶಾಸಕ ಮಹೇಶ್ ಟೆಂಗಿನಕಾಯಿ ಸಹ ಬೆಲ್ಲದ ಆರೋಪಕ್ಕೆ ಧ್ವನಿಗೂಡಿಸಿದ್ದಾರೆ. ಇದನ್ನೂ ಓದಿ: ಪಾಕ್‌ನಿಂದ ದಾಳಿ – ಅಮೃತಸರದ ಗೋಲ್ಡನ್ ಟೆಂಪಲ್ ರಕ್ಷಿಸಿದ್ದ ಆಕಾಶ್ ಮಿಸೈಲ್!

  • ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ – ಪರಿಶೀಲಿಸುವಂತೆ ಪೊಲೀಸ್ ಆಯುಕ್ತರಿಗೆ ಬೆಲ್ಲದ್ ಪತ್ರ

    ಮಸೀದಿಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ – ಪರಿಶೀಲಿಸುವಂತೆ ಪೊಲೀಸ್ ಆಯುಕ್ತರಿಗೆ ಬೆಲ್ಲದ್ ಪತ್ರ

    ಹುಬ್ಬಳ್ಳಿ/ಧಾರವಾಡ: ಅಪರಿಚಿತ ಹಾಗೂ ಅನುಮಾನಾಸ್ಪದವಾಗಿ ಬೇರೆ ದೇಶದ ವ್ಯಕ್ತಿಗಳು ಹುಬ್ಬಳ್ಳಿ-ಧಾರವಾಡ (Hubballi-Dharwad) ಮಹಾನಗರದ ಕೆಲ ಮಸೀದಿಗಳಲ್ಲಿ ಓಡಾಟ ನಡೆಸುತ್ತಿದ್ದು, ಪರಿಶೀಲಿಸುವಂತೆ ಪೊಲೀಸ್ ಆಯುಕ್ತರಿಗೆ ಶಾಸಕ ಅರವಿಂದ್ ಬೆಲ್ಲದ್ (Aravind Bellad) ಪತ್ರ ಬರೆದಿದ್ದಾರೆ.

    ಅಪರಿಚಿತರ ಓಡಾಟ ಪರಿಶೀಲಿಸುವಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರಿಗೆ ಬೆಲ್ಲದ್ ಪತ್ರ ಬರೆದಿದ್ದಾರೆ. ಮೇ 17ರಂದು ಬೆಲ್ಲದ್ ಪತ್ರ ಬರೆದಿದ್ದು, ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕೆಲ ಮಸೀದಿಗಳಲ್ಲಿ ಅಪರಿಚಿತರ ಓಡಾಟ ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಅವರು ಸ್ಥಳೀಯರು ಅಲ್ಲ ಎಂಬ ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಬೇಕಾ, ನರಕ ಬೇಕಾ ಅಂತ ಕೇಳಿದ್ರೆ ನಾನು ನರಕವನ್ನೇ ಆಯ್ಕೆ ಮಾಡ್ತೀನಿ: ಜಾವೇದ್‌ ಅಖ್ತರ್‌

    ಹೀಗೆ ಓಡಾಡುತ್ತಿರುವವರಲ್ಲಿ ಹೊಸ ಮುಖ, ಅಪರಿಚಿತ, ಅನುಮಾನಾಸ್ಪದ ವ್ಯಕ್ತಿಗಳೇ ಹೆಚ್ಚಾಗಿದ್ದಾರೆ. ಅವರು ಹೊರ ದೇಶದ ಪ್ರಜೆಗಳಂತೆ ಭಾಸವಾಗುತ್ತಾರೆ. ಅವಳಿ ನಗರದ ವಿವಿಧ ಕೊಳಚೆ ಪ್ರದೇಶದಲ್ಲಿ (ಜನ್ನತ್ ನಗರ ಧಾರವಾಡ ಸೇರಿದಂತೆ) ವಾಸವಾಗಿದ್ದಾರೆಂಬ ಮಾಹಿತಿಯೂ ಇದೆ. ಅದಕ್ಕಾಗಿ ಈ ಕುರಿತು ಪೊಲೀಸ್ ಇಲಾಖೆ ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: Hyderabad | ಚಾರ್‌ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿ ಬೆಂಕಿ ಅವಘಡ – 8 ಮಂದಿ ಸಜೀವ ದಹನ

    ಅವಳಿ ನಗರದಲ್ಲಿರುವ ಅಪರಿಚಿತ, ಹೊಸಮುಖದ ವ್ಯಕ್ತಿಗಳನ್ನು ವಿಚಾರಿಸಿ ಸೂಕ್ತ ಕ್ರಮ ಜರುಗಿಸಬೇಕು. ಇದರಿಂದ ಮಹಾನಗರದಲ್ಲಿ ಅಹಿತಕರ ಘಟನೆ ಆಗದಂತೆ ತಡೆಯುವ ಕೆಲಸ ಮಾಡಬೇಕೆಂದು ಶಾಸಕ ಬೆಲ್ಲದ್ ಪೊಲೀಸ್ ಆಯುಕ್ತರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಟಿಬಿ ಡ್ಯಾಂನಲ್ಲಿ ಅಧಿಕಾರಿಯ ಪುತ್ರನ ನಿಶ್ಚಿತಾರ್ಥ – ನಿಷೇಧವಿದ್ದರೂ ಖಾಸಗಿ ಕಾರ್ಯಕ್ಕೆ ಬಳಸಿಕೊಂಡು ನಿಯಮ ಉಲ್ಲಂಘನೆ