Tag: ಹುಬ್ಬಳ್ಳಿ

  • ಮುಸ್ಲಿಂ ಸಮುದಾಯದ ಜಾತಿಗಳನ್ನು ಒಂದು ಮಾಡಿ ಮುಸ್ಲಿಮರೇ ಹೆಚ್ಚು ಅಂತ ಬಿಂಬಿಸಿದ್ದಾರೆ: ಛಲವಾದಿ ನಾರಾಯಣಸ್ವಾಮಿ

    ಮುಸ್ಲಿಂ ಸಮುದಾಯದ ಜಾತಿಗಳನ್ನು ಒಂದು ಮಾಡಿ ಮುಸ್ಲಿಮರೇ ಹೆಚ್ಚು ಅಂತ ಬಿಂಬಿಸಿದ್ದಾರೆ: ಛಲವಾದಿ ನಾರಾಯಣಸ್ವಾಮಿ

    ಹುಬ್ಬಳ್ಳಿ: ಮುಸ್ಲಿಂ ಸಮುದಾಯದಲ್ಲಿ ಅನೇಕ ಜಾತಿಗಳಿವೆ. ಅದರಲ್ಲಿ ಎಲ್ಲರನ್ನೂ ಒಂದು ಮಾಡಿ ಮುಸ್ಲಿಮರನ್ನು ಅತಿ ಹೆಚ್ಚು ಎಂದು ಬಿಂಬಿಸಿದ್ದಾರೆಂದು ಜಾತಿಗಣತಿ ವಿರುದ್ಧ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಕಿಡಿಕಾರಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಷ್ಟು ದಿನ ಯಾರು ಅಲ್ಪಸಂಖ್ಯಾತರು ಇದ್ದರು, ಈಗ ಅವರು ಬಹುಸಂಖ್ಯಾತರು ಆಗಿದ್ದಾರೆ. ಹಾಗಿದ್ದರೆ ಅವರಿಗೆ ಅಲ್ಪಸಂಖ್ಯಾತ ಸೌಲಭ್ಯ ಯಾಕೆ? ಕಾಂಗ್ರೆಸ್ ಮಾಡುತ್ತಿರುವುದು ಮುಸ್ಲಿಮರಿಗೆ ಯಾವುದೂ ಉಪಯೋಗಕ್ಕೆ ಬರೋದಿಲ್ಲಾ. ಮುಸ್ಲಿಮರನ್ನು ಅತಿ ಹೆಚ್ಚು ಅಂತ ತೋರಿಸಿ ಅವರಿಗೆ ಇತರರ ಕೆಂಗಣ್ಣಿಗೆ ಗುರಿ ಮಾಡಿದ್ದೀರಿ. ಇದು ಅಲ್ಪಾಯುಶಿ ಸರ್ಕಾರ, ಈ ಸರ್ಕಾರ‌ ಯಾವತ್ತಾದ್ರೂ ಹೋಗಬಹುದು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಜಾತಿ ಸಂಖ್ಯೆ ಕಡಿಮೆ ಆಯ್ತು ಅಂತಾ ಮಂಗ್ಯಾಗಳ ತರ ಕಿತ್ತಾಡಬೇಡಿ – ಪ್ರತಾಪ್ ಸಿಂಹ

    ರಾಜ್ಯದಲ್ಲಿ ಜನಾಕ್ರೋಶ ಆರಂಭವಾಗಿ, ಅಭಿವೃದ್ಧಿ ಶೂನ್ಯವಾಗಿದೆ. ಐದು ವರ್ಷ ಆಡಳಿತ ಮುಗಿಸಿದ್ರೆ ಸಾಕು ಎನ್ನುವ ಸ್ಥಿತಿಗೆ ಸರ್ಕಾರ‌ ಬಂದು ತಲುಪಿದೆ. ಇಡೀ ರಾಜ್ಯದಲ್ಲಿ ಗೊಂದಲದಲ್ಲಿದೆ. ಹೀಗಾಗಿ ನಮ್ಮ ಪಕ್ಷ ಜನಾಕ್ರೋಶ ಯಾತ್ರೆ ಕೈಗೊಂಡಿದೆ. ನಾಳೆ ಬೆಳಗಾವಿಯಿಂದ ಎರಡನೇ ಸುತ್ತಿನ ಯಾತ್ರೆ ಆರಂಭವಾಗುತ್ತಿದೆ ಎಂದು ತಿಳಿಸಿದ್ದಾರೆ.

    ಕಾಂಗ್ರೆಸ್ ದೊಡ್ಡ ಗೊಂದಲದ ಗೂಡಾಗಿದೆ. ಕಾಂಗ್ರೆಸ್ ಅಂಬೇಡ್ಕರ್ ಅವರಿಗೆ ಗೌರವದ ಬದಲು ಅಪಮಾನ ಮಾಡುತ್ತಿದೆ. ಬೆಳಗಾವಿ ಗಾಂಧೀಜಿ ಬಂದು ನೂರು ವರ್ಷವಾದ ಹಿನ್ನೆಲೆ ದೊಡ್ಡ ಕಾರ್ಯಕ್ರಮ ಮಾಡಿತು. ಆದರೆ, ಅಂಬೇಡ್ಕರ್ ಬಂದು ನೂರು ವರ್ಷವಾಗಿದೆ. ಯಾಕೆ ಕಾರ್ಯಕ್ರಮ ಮಾಡಿಲ್ಲ. ಈ ಕಾರ್ಯಕ್ರಮವನ್ನು ಬಿಜೆಪಿ ಮಾಡುತ್ತಿದೆ ಎಂದು ಹೇಳಿದ್ದಾರೆ. ಅಂಬೇಡ್ಕರ್‌ರನ್ನು ಸೋಲಿಸಿದ್ದು ಸಾರ್ವಕರ್ ಅಂತ ಸಿಎಂ ಹೇಳಿಕೆ ವಿಚಾರವಾಗಿ ಮಾತನಾಡಿ, ಸಿದ್ದರಾಮಯ್ಯ ಇದನ್ನು ಸಾಬೀತು ಮಾಡಿದ್ರೆ ನನ್ನ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಅವರು ಸಾಬೀತು ಮಾಡಲು‌ ಆಗದಿದ್ದರೆ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳಬೇಕು ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಒಕ್ಕಲಿಗ ಸಮುದಾಯಕ್ಕೆ ಅನ್ಯಾಯ ಆಗಿರುವ ಸಮೀಕ್ಷೆ ನಾನು ಒಪ್ಪಲ್ಲ – ಕುಮಾರಸ್ವಾಮಿ

    ಕಾಂಗ್ರೆಸ್ ಸುಳ್ಳು ಹೇಳುವ ಫ್ಯಾಕ್ಟರಿ ಓಪನ್ ಮಾಡಿದ್ದೇವೆ. ಅಂಬೇಡ್ಕರ್ ಪ್ರಶಸ್ತಿ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡಿದೆ. ದಲಿತರಲ್ಲೇ ರೈಟು, ಲೆಫ್ಟ್ ಅಂತ ಕಾಂಗ್ರೆಸ್ ಗೊಂದಲ ಸೃಷ್ಟಿ ಮಾಡಿದೆ. ಅವರಿಗೆ ಜಾಸ್ತಿ ಕೊಟ್ಟಿದ್ದೇವೆ, ಇವ್ರಿಗೆ ಜಾಸ್ತಿ ಕೊಟ್ಟಿದ್ದೇವೆ ಅಂತ ಅಸಮಾಧಾನ ಹುಟ್ಟಿಸಿದ್ದಾರೆ. ಒಕ್ಕಲೆಬ್ಬಿಸಿ ಜನರ ನಡುವೆ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

  • ಹುಬ್ಬಳ್ಳಿ ಬಾಲಕಿ ಕೊಲೆ ಕೇಸ್ – ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ನಡೆಸಿರೋ ಬಗ್ಗೆ ಸಾಕ್ಷ್ಯ ಲಭ್ಯ, ಪೋಕ್ಸೋ ಕೇಸ್ ದಾಖಲು

    ಹುಬ್ಬಳ್ಳಿ ಬಾಲಕಿ ಕೊಲೆ ಕೇಸ್ – ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ನಡೆಸಿರೋ ಬಗ್ಗೆ ಸಾಕ್ಷ್ಯ ಲಭ್ಯ, ಪೋಕ್ಸೋ ಕೇಸ್ ದಾಖಲು

    – ಆರೋಪಿ ಒಳಉಡುಪಿನಲ್ಲಿ ಬಾಲಕಿಯ ಲೆಗ್ಗಿನ್ಸ್ ಬಟ್ಟೆ ಪತ್ತೆ

    ಹುಬ್ಬಳ್ಳಿ: ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿತೇಶ್‌ ಕುಮಾರ್ ಮರಣೋತ್ತರ ಪರೀಕ್ಷೆಯಲ್ಲಿ (Postmortem) ಅತ್ಯಾಚಾರ ನಡೆಸಿರುವ ಬಗ್ಗೆ ಸಾಕ್ಷ್ಯ ಲಭ್ಯವಾಗಿದ್ದು, ಆರೋಪಿ ಒಳ ಉಡುಪಿನಲ್ಲಿ ಬಾಲಕಿಯ ಲೆಗ್ಗಿನ್ಸ್ ಬಟ್ಟೆ ಪತ್ತೆಯಾಗಿದೆ. ಇದೀಗ ಆರೋಪಿಯ ವಿರುದ್ಧ ಪೋಕ್ಸೋ ಕೇಸ್ (Pocso Case) ದಾಖಲಾಗಿದೆ.

    ಇಂದು ಕಿಮ್ಸ್ (KIMS) ಆಸ್ಪತ್ರೆಯಲ್ಲಿ ಆರೋಪಿಯ ಮರಣೋತ್ತರ ಪರೀಕ್ಷೆ ನಡೆದಿದ್ದು, ಈ ವೇಳೆ ಅತ್ಯಾಚಾರ ನಡೆಸಿರುವ ಬಗ್ಗೆ ಸಾಕ್ಷ್ಯ ಲಭ್ಯವಾಗಿದೆ. ವಿಕೃತ ಕಾಮಿಯಂತೆ ಆರೋಪಿ ವರ್ತಿಸಿದ್ದು, ಆತನ ಒಳಉಡುಪಿನಲ್ಲಿ ಬಾಲಕಿಯ ಲೆಗ್ಗಿನ್ಸ್ ಬಟ್ಟೆ ಪತ್ತೆಯಾಗಿದೆ ಎಂದು ಕಿಮ್ಸ್ ವೈದ್ಯ ಮೂಲದಿಂದ ಮಾಹಿತಿ ತಿಳಿದುಬಂದಿದೆ.ಇದನ್ನೂ ಓದಿ: ಹುಬ್ಬಳ್ಳಿ | ಬಾಲಕಿ ಕೊಲೆ ಕೇಸ್ – ಆರೋಪಿಗೆ ಗುಂಡಿಟ್ಟ `ಲೇಡಿ ಸಿಂಗಂ’ಗೆ ಮುಂದಿನ ತಿಂಗಳಲ್ಲೇ ಮದುವೆ!

    ಪೊಲೀಸರು ಈಗಾಗಲೇ ಆರೋಪಿಯನ್ನು ಎನ್ಕೌಂಟರ್ ಮಾಡಿದ್ದು, ಆರೋಪಿ ವಿರುದ್ಧ ಪೋಕ್ಸೋ, ಅಪಹರಣ ಮತ್ತು ಕೊಲೆ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಘಟನೆ ಏನು?
    ಸೈಕೋಪಾತ್ ಒಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಬಿಹಾರ ಮೂಲದ ಸೈಕೋಪಾತ್ ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದನು. ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ ಸ್ಥಳೀಯರು ಶೆಡ್‌ನತ್ತ ಬಂದಿದ್ದರು. ಜನ ಬರುತ್ತಿರುವುದನ್ನು ಕಂಡ ಸೈಕೋಪಾತ್ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದನು.

    ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯಲೆಂದು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ, ಎಸ್ಕೇಪ್ ಆಗಲು ಯತ್ನಿಸಿದ್ದ. ಒಮ್ಮೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ರೂ ಕೇಳದೇ ಪೊಲೀಸರ ಮೇಲೆ ಕಲ್ಲು ತೂರಿದ್ದ. ಈ ವೇಳೆ ಹುಬ್ಬಳ್ಳಿ ಪೊಲೀಸರು ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಿದ್ದರು. ಅಶೋಕನಗರ ಪೊಲೀಸ್ ಠಾಣೆಯ ಮಹಿಳಾ ಪಿಎಸ್‌ಐ ಅನ್ನಪೂರ್ಣ (PSI Annapurna) ಅವರು ಹಾರಿಸಿದ ಗುಂಡು ಬೆನ್ನಿಗೆ ತಾಗಿ ಗಾಯಗೊಂಡಿದ್ದ ಆರೋಪಿಯನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದೇ ಆರೋಪಿ ರಿತೇಶ್ ಸಾವನ್ನಪ್ಪಿದ್ದ.ಇದನ್ನೂ ಓದಿ: ಹುಬ್ಬಳ್ಳಿ | 5 ವರ್ಷದ ಬಾಲಕಿ ಹತ್ಯೆ – ಕುರುಬ ಸಂಪ್ರದಾಯದಂತೆ ನೆರವೇರಿದ ಅಂತ್ಯಕ್ರಿಯೆ

  • ಹುಬ್ಬಳ್ಳಿ | 5 ವರ್ಷದ ಬಾಲಕಿ ಹತ್ಯೆ – ಕುರುಬ ಸಂಪ್ರದಾಯದಂತೆ ನೆರವೇರಿದ ಅಂತ್ಯಕ್ರಿಯೆ

    ಹುಬ್ಬಳ್ಳಿ | 5 ವರ್ಷದ ಬಾಲಕಿ ಹತ್ಯೆ – ಕುರುಬ ಸಂಪ್ರದಾಯದಂತೆ ನೆರವೇರಿದ ಅಂತ್ಯಕ್ರಿಯೆ

    ಹುಬ್ಬಳ್ಳಿ: ಬಿಹಾರ (Bihar) ಮೂಲದ ಸೈಕೋಪಾತ್‌ನಿಂದ ಕೊಲೆಯಾದ 5 ವರ್ಷದ ಬಾಲಕಿಯ ಅಂತ್ಯಕ್ರಿಯೆ ಇಂದು ಹುಬ್ಬಳ್ಳಿಯ (Hubballi) ದೇವಾಂಗ ಪೇಟ ರುದ್ರಭೂಮಿಯಲ್ಲಿ ನೇರವೇರಿತು. ಕುಟುಂಬಸ್ಥರು ವಿಧಿವಿಧಾನಗಳೊಂದಿಗೆ ಕುರುಬ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿದರು.

    ಕಿಮ್ಸ್ (KIMS) ಆಸ್ಪತ್ರೆಯಲ್ಲಿ ನಡೆದ ಮರಣೋತ್ತರ ಪರೀಕ್ಷೆಯ ಬಳಿಕ ಬಾಲಕಿಯ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಮಗಳ ಶವವನ್ನು ಕೈಯಲ್ಲಿ ಹೊತ್ತು ತಂದ ತಂದೆ, ದೇವಾಂಗ ಪೇಟ ಸ್ಮಶಾನಕ್ಕೆ ತೆರಳಿ ಕುರುಬ ಸಂಪ್ರದಾಯದಂತೆ ಪೂಜೆ ಮಾಡಿದರು. ಬಳಿಕ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತ್ಯಕ್ರಿಯೆ ನೆರವೇರಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಇದನ್ನೂ ಓದಿ: ಹುಬ್ಬಳ್ಳಿ | ಬಾಲಕಿ ಕೊಲೆ ಕೇಸ್ – ಆರೋಪಿಗೆ ಗುಂಡಿಟ್ಟ `ಲೇಡಿ ಸಿಂಗಂ’ಗೆ ಮುಂದಿನ ತಿಂಗಳಲ್ಲೇ ಮದುವೆ!

    ಘಟನೆ ಏನು?
    ಸೈಕೋಪಾತ್ ಒಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಬಿಹಾರ ಮೂಲದ ಸೈಕೋಪಾತ್ ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದನು. ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ ಸ್ಥಳೀಯರು ಶೆಡ್‌ನತ್ತ ಬಂದಿದ್ದರು. ಜನ ಬರುತ್ತಿರುವುದನ್ನು ಕಂಡ ಸೈಕೋಪಾತ್ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದನು.

    ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯಲೆಂದು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ, ಎಸ್ಕೇಪ್ ಆಗಲು ಯತ್ನಿಸಿದ್ದ. ಒಮ್ಮೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ರೂ ಕೇಳದೇ ಪೊಲೀಸರ ಮೇಲೆ ಕಲ್ಲು ತೂರಿದ್ದ. ಈ ವೇಳೆ ಹುಬ್ಬಳ್ಳಿ ಪೊಲೀಸರು ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಿದ್ದರು. ಅಶೋಕನಗರ ಪೊಲೀಸ್ ಠಾಣೆಯ ಮಹಿಳಾ ಪಿಎಸ್‌ಐ ಅನ್ನಪೂರ್ಣ (PSI Annapurna) ಅವರು ಹಾರಿಸಿದ ಗುಂಡು ಬೆನ್ನಿಗೆ ತಾಗಿ ಗಾಯಗೊಂಡಿದ್ದ ಆರೋಪಿಯನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದಿದೇ ಆರೋಪಿ ರಿತೇಶ್ ಸಾವನ್ನಪ್ಪಿದ್ದ.ಇದನ್ನೂ ಓದಿ: ಹುಬ್ಬಳ್ಳಿ ಕೊಲೆ ಪ್ರಕರಣ – ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ

  • ಹುಬ್ಬಳ್ಳಿ ಕೃತ್ಯ ಮಾಸುವ ಮುನ್ನ ಬೀದರ್‌ನಲ್ಲಿ ಘಟನೆ – ಗೇಟ್ ಬಳಿ ಆಟವಾಡ್ತಿದ್ದ ಬಾಲಕಿ ಅಪಹರಣಕ್ಕೆ ಯತ್ನಿಸಿದ ಯುವಕ

    ಹುಬ್ಬಳ್ಳಿ ಕೃತ್ಯ ಮಾಸುವ ಮುನ್ನ ಬೀದರ್‌ನಲ್ಲಿ ಘಟನೆ – ಗೇಟ್ ಬಳಿ ಆಟವಾಡ್ತಿದ್ದ ಬಾಲಕಿ ಅಪಹರಣಕ್ಕೆ ಯತ್ನಿಸಿದ ಯುವಕ

    ಬೀದರ್: ಹುಬ್ಬಳ್ಳಿಯಲ್ಲಿ (Hubballi) 5 ವರ್ಷದ ಬಾಲಕಿ ಕೊಲೆ ಪ್ರಕರಣ ಮಾಸುವ ಮುನ್ನವೇ ಬೀದರ್‌ನಲ್ಲಿ (Bidar) ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಗೇಟ್ ಬಳಿ ಆಡುತ್ತಿದ್ದ ಬಾಲಕಿಯನ್ನು ಯುವಕನೊಬ್ಬ ಅಪಹರಿಸಲು (Kidnap) ಯತ್ನಿಸಿದ್ದಾನೆ. ಈ ದೃಶ್ಯ ಸಿಟಿಟಿವಿಯಲ್ಲಿ ಲಭ್ಯವಾಗಿದೆ.ಇದನ್ನೂ ಓದಿ: ಹುಬ್ಬಳ್ಳಿ | ಸೈಕೋಪಾತ್‌ನಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ

    ಬೀದರ್‌ನ ವಿದ್ಯಾನಗರ ಬಡಾವಣೆಯ 11ನೇ ಕ್ರಾಸ್‌ನಲ್ಲಿರುವ ಸತೀಶ್ ಬಕ್ಕಾಚೌಡೇಕರ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯಂಗಳಲ್ಲಿ ಬಾಲಕಿಯರಿಬ್ಬರು ಆಟವಾಡುತ್ತಿದ್ದರು. ಈ ವೇಳೆ ಯುವಕನೊಬ್ಬ ಮನೆ ಮುಂದೆ ಬೈಕ್ ನಿಲ್ಲಿಸಿ, ಸ್ವಲ್ಪ ಹೊತ್ತು ನೋಡಿಕೊಂಡು ನಿಂತಿದ್ದಾನೆ. ಬಳಿಕ ಗೇಟ್ ಒಳಗೆ ಹೋಗಿ ಅಲ್ಲೇ ಆಟ ಆಡುತ್ತಿದ್ದ ಇಬ್ಬರು ಬಾಲಕಿಯರ ಪೈಕಿ ಒಬ್ಬಳನ್ನ ಅಪಹರಿಸಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಪೋಷಕರು ಹೊರಬರುತ್ತಿದ್ದಂತೆ ಬೈಕ್ ಸಮೇತ ಯುವಕ ಪರಾರಿಯಾಗಿದ್ದಾನೆ.

    ಅಪಹರಿಸಲು ಯತ್ನಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಯುವಕನ ಅಸಭ್ಯ ವರ್ತನೆಯ ಬಗ್ಗೆ ಬಾಲಕಿಯರು ಪೋಷಕರಿಗೆ ತಿಳಿಸಿದ್ದಾರೆ.ಇದನ್ನೂ ಓದಿ: ಶಿವಮೊಗ್ಗದ ಲಾಡ್ಜ್‌ನಲ್ಲಿ ಹುಬ್ಬಳ್ಳಿ ಮೂಲದ ಉದ್ಯಮಿ ಅನುಮಾನಾಸ್ಪದ ಸಾವು

     

  • ಬಿಹಾರ ಮೂಲದ ಸೈಕೋ ಎನ್‌ಕೌಂಟರ್: ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹೊಡೆದಿದ್ದಾರೆ – ಪರಮೇಶ್ವರ್

    ಬಿಹಾರ ಮೂಲದ ಸೈಕೋ ಎನ್‌ಕೌಂಟರ್: ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹೊಡೆದಿದ್ದಾರೆ – ಪರಮೇಶ್ವರ್

    – ಹೊರ ರಾಜ್ಯದವರಿಗೆ ರಾಜ್ಯದಲ್ಲಿ ಕಾನೂನಿನ ಭಯ ಇಲ್ಲ ಎಂದ ಸಚಿವ

    ಬೆಂಗಳೂರು: ಬಿಹಾರ (Bihar) ಮೂಲದ ವ್ಯಕ್ತಿ ಐದು ವರ್ಷದ ಮಗುವನ್ನ ಎತ್ತಿಕೊಂಡು ಹೋಗಿ ಕೊಲೆ ಮಾಡಿದ್ದಾನೆ. ಆತನನ್ನ ಸ್ಥಳ ಪರಿಶೀಲನೆಗೆ ಕರೆದುಕೊಂಡು ಹೋಗುವಾಗ ಪೊಲೀಸರ ಮೇಲೆ ಅಟ್ಯಾಕ್ ಮಾಡಿದ್ದಾನೆ. ಪೊಲೀಸರು ಅವರ ಆತ್ಮ ರಕ್ಷಣೆ ಮಾಡಿಕೊಳ್ಳಬೇಕು ಅಲ್ಲವಾ ಅಂತಾ ಗೃಹ ಸಚಿವ ಪರಮೇಶ್ವರ್ (G Parameshwar) ಎನ್ ಕೌಂಟರ್ ಸಮರ್ಥಿಸಿಕೊಂಡಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಆತ್ಮರಕ್ಷಣೆಗಾಗಿ ಪೊಲೀಸರು ಕಾಲಿಗೆ ಗುಂಡು ಹೊಡೆದಿದ್ದಾರೆ, ಅದು ಬೆನ್ನಿಗೆ ಬಿದ್ದಿದೆ. ‌ಆತನನ್ನ ಆಸ್ಪತ್ರೆಗೆ ಸೇರಿಸಲು ಮುಂದಾಗಿದ್ದಾರೆ. ಆದ್ರೆ ಆತ ಆಸ್ಪತ್ರೆಗೆ ಹೋಗುವಾಗಲೇ ತೀರಿಕೊಂಡಿದ್ದಾನೆ ಎಂದು ರಿಪೋರ್ಟ್ ಇದೆ ಅಂತೇಳಿದ್ರು. ನಾನು ತಕ್ಷಣ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮಾಡಲು ಸೂಚನೆ ನೀಡಿದ್ದೇನೆ. ತನಿಖೆ ಮಾಡಿದ ನಂತರದಲ್ಲಿ ಸತ್ಯಾಂಶ ಗೊತ್ತಾಗುತ್ತದೆ ಅಂತಾ ಸ್ಪಷ್ಟಪಡಿಸಿದ್ರು. ಇದನ್ನೂ ಓದಿ: ಹುಬ್ಬಳ್ಳಿ | ಬಾಲಕಿ ಕೊಲೆ ಕೇಸ್ – ಆರೋಪಿಗೆ ಗುಂಡಿಟ್ಟ `ಲೇಡಿ ಸಿಂಗಂ’ಗೆ ಮುಂದಿನ ತಿಂಗಳಲ್ಲೇ ಮದುವೆ!

    ಇನ್ನು ಹೊರ ರಾಜ್ಯದವರಿಗೆ ರಾಜ್ಯದಲ್ಲಿ ಕಾನೂನಿನ ಭಯ ಇಲ್ಲ ಎಂಬ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಹೊರ ರಾಜ್ಯದಿಂದ ಸಾಕಷ್ಟು ಜನ ಬೆಂಗಳೂರಿಗೆ ಬರುತ್ತಾರೆ. ಬಂದಂತವರಿಗೆ ಇಲ್ಲಿನ ಸಂಸ್ಕೃತಿ ಜನರ ಭಾವನೆ ಅರ್ಥ ಆಗುವುದಿಲ್ಲವೋ ಗೊತ್ತಿಲ್ಲ. ಅವರು ಆ ರೀತಿ ವರ್ತನೆ ಮಾಡುತ್ತಾರೆ. ಹೊರ ರಾಜ್ಯದಿಂದ ಬಂದವರದ್ದೇ ಹೆಚ್ಚು ಪ್ರಕರಣಗಳನ್ನು ನೋಡುತ್ತಿದ್ದೇವೆ. ಸುಮಾರು ಕಡೆ ಕಟ್ಟಡ ಕಾರ್ಮಿಕರಿಂದ ಕ್ರೈಮ್ ಗಳು ಆಗಿದ್ದಾವೆ. ಇದರ ಬಗ್ಗೆ ಕ್ರಮಕ್ಕೆ ಕಾರ್ಮಿಕ ಇಲಾಖೆ ಮತ್ತು ನಾವು ಜಂಟಿಯಾಗಿ ಸಭೆ ಮಾಡುತ್ತೇವೆ ಅಂತೇಳಿದ್ರು.  ಇದನ್ನೂ ಓದಿ: ಹೊರ ರಾಜ್ಯದ ಕಟ್ಟಡ ಕಾರ್ಮಿಕರಿಂದ ಕ್ರೈಮ್ – ಕಾರ್ಮಿಕ ಇಲಾಖೆ ಜೊತೆ ಸಭೆ ನಡೆಸಿ ಕ್ರಮ: ಪರಮೇಶ್ವರ್‌

  • ಹುಬ್ಬಳ್ಳಿ | ಬಾಲಕಿ ಕೊಲೆ ಕೇಸ್ – ಆರೋಪಿಗೆ ಗುಂಡಿಟ್ಟ `ಲೇಡಿ ಸಿಂಗಂ’ಗೆ ಮುಂದಿನ ತಿಂಗಳಲ್ಲೇ ಮದುವೆ!

    ಹುಬ್ಬಳ್ಳಿ | ಬಾಲಕಿ ಕೊಲೆ ಕೇಸ್ – ಆರೋಪಿಗೆ ಗುಂಡಿಟ್ಟ `ಲೇಡಿ ಸಿಂಗಂ’ಗೆ ಮುಂದಿನ ತಿಂಗಳಲ್ಲೇ ಮದುವೆ!

    – ವೈಯಕ್ತಿಕ ಬದುಕು ಲೆಕ್ಕಿಸದೇ ಆರೋಪಿಗೆ ಗುಂಡಿಟ್ಟ ಅನ್ನಪೂರ್ಣ ಯಾರು?

    ಹುಬ್ಬಳ್ಳಿ: ಜಿಲ್ಲೆಯಲ್ಲಿ ನಡೆದ 5 ವರ್ಷದ ಬಾಲಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ತಮ್ಮ ಗುಂಡೇಟಿಗೆ ಬಲಿ ಪಡೆದ ಪಿಎಸ್‌ಐ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ತಮ್ಮ ವೈಯಕ್ತಿಕ ಬದುಕು ಲೆಕ್ಕಿಸದೇ ರಿಸ್ಕ್ ತೆಗೆದುಕೊಂಡ ಪಿಎಸ್‌ಐ (PSI) ಅನ್ನಪೂರ್ಣ ಅವರ ಹಿನ್ನೆಲೆ ರೋಚಕವಾಗಿದೆ.

    ರಾಜ್ಯದ ಜನರ ಆಕ್ರೋಶಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ (Hubballi) 5 ವರ್ಷದ ಬಾಲಕಿ ಕೊಲೆ ಪ್ರಕರಣದಲ್ಲಿ ಆರೋಪಿಯನ್ನು ಸಂಹರಿಸಿ, ದಿಟ್ಟ ಸಮಯದಲ್ಲಿ ದಿಟ್ಟ ಹೆಜ್ಜೆಯಿಟ್ಟ ಅಶೋಕ ನಗರ ಪೊಲೀಸ್ ಠಾಣೆ ಲೇಡಿ ಪಿಎಸ್‌ಐ ಅನ್ನಪೂರ್ಣ ರಾಜ್ಯಕ್ಕೆ ಮಾದರಿ ಹೆಣ್ಣು. ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ ತಾಲ್ಲೂಕು ಗುಜನಟ್ಟಿ ಗ್ರಾಮದ ನಿವಾಸಿಯಾಗಿರುವ ಅನ್ನಪೂರ್ಣ ಅವರು ಕಡುಬಡತನದ ರೈತಾಪಿ ಕುಟುಂಬದಿಂದ ಬಂದವರು. ಧಾರವಾಡ (Dharwad) ಕೃಷಿ ವಿಶ್ವವಿದ್ಯಾಲಯದಲ್ಲಿ ಎಂಎಸ್‌ಸಿ ಪದವಿ ಮುಗಿಸಿ, ಕಳೆದ ವರ್ಷ ಯುಪಿಎಸ್‌ಸಿ (UPSC) ಪರೀಕ್ಷೆ ಬರೆದು ಪ್ರೀಲಿಮ್ಸ್ ಕ್ಲಿಯರ್ ಮಾಡಿದ್ದರು. ಪಿಎಸ್‌ಐ ಆಗಿ ಆಯ್ಕೆಯಾಗಿ 2018ರಲ್ಲಿ ಸೇವೆಗೆ ಸೇರ್ಪಡೆಯಾಗಿದ್ದರು.ಇದನ್ನೂ ಓದಿ: ಹೊರ ರಾಜ್ಯದ ಕಟ್ಟಡ ಕಾರ್ಮಿಕರಿಂದ ಕ್ರೈಮ್ – ಕಾರ್ಮಿಕ ಇಲಾಖೆ ಜೊತೆ ಸಭೆ ನಡೆಸಿ ಕ್ರಮ: ಪರಮೇಶ್ವರ್‌

    ಮೂಲತಃ ಚೆನ್ನಮ್ಮನ ನೆಲದವರಾಗಿರುವ ಅನ್ನಪೂರ್ಣ ಅವರಿಗೆ ಶೌರ್ಯ ಎನ್ನುವುದು ರಕ್ತದಲ್ಲಿಯೇ ಬಂದಿದೆ. ಮುಂದಿನ ತಿಂಗಳು ಅವರ ಮದುವೆ ನಿಗದಿಯಾಗಿದ್ದು, ವೈಯಕ್ತಿಕ ಜೀವನವನ್ನೂ ಲೆಕ್ಕಿಸದೇ ಆರೋಪಿಯನ್ನು ಬಲಿತೆಗೆದುಕೊಂಡಿದ್ದಾರೆ.

    ಬಾಲಕಿ ಕೊಲೆಯಾದ ಬಳಿಕ ಪಿಎಸ್‌ಐ ಅನ್ನಪೂರ್ಣ ಆಕೆಯ ಮುಖವನ್ನು ನೋಡಿ ಆಸ್ಪತ್ರೆಯಲ್ಲಿಯೇ ಕಣ್ಣೀರು ಹಾಕಿದ್ದರು. ಆಗಲೇ ಆರೋಪಿ ಸಿಕ್ಕಿದ್ದರೆ ತಕ್ಕ ಕ್ರಮ ಕೈಗೊಳ್ಳುವುದಾಗಿ ಶಪತ ಮಾಡಿದ್ದರು. ಕಾಕತಾಳೀಯೆಂಬಂತೆ ಪಿಎಸ್‌ಐ ಅನ್ನಪೂರ್ಣ ತಂಡಕ್ಕೆ ಆರೋಪಿ ಸೆರೆ ಸಿಕಿದ್ದಾನೆ. ಬಂಧಿಸಲು ಹೋದಾಗ ಆರೋಪಿ ತಮ್ಮ ಮೇಲೆ ದಾಳಿಗೆ ಯತ್ನಿಸಿದ್ದು, ಆತ್ಮ ರಕ್ಷಣೆಗಾಗಿ 2 ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಸೂಚಿಸಿದರು. ಆದರೆ ಆತ ಲೆಕ್ಕಿಸದೇ ತಪ್ಪಿಸಿಕೊಳ್ಳಲು ಹೋದಾಗ ಕಾಲಿನತ್ತ ಗುಂಡು ಹಾರಿಸಿದರು. ಆದರೆ ಗುಂಡು ಬೆನ್ನಿಗೆ ತಾಗಿ ಗಾಯಗೊಂಡ ಆರೋಪಿಯನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದ. ಪಿಎಸ್‌ಐ ಅನ್ನಪೂರ್ಣ ಅವರ ಈ ಕ್ರಮಕ್ಕೆ ಅಭಿನಂದನೆಯ ಮಹಾಪೂರವೇ ಹರಿದುಬರುತ್ತಿದ್ದು, ಜನಮೆಚ್ಚುಗೆಗೆ ಪಾತ್ರವಾಗಿದ್ದಾರೆ.

    ಘಟನೆ ಏನು?
    ಸೈಕೋಪಾತ್ ಒಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಅಶೋಕನಗರ (Ashok Nagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಬಿಹಾರ ಮೂಲದ ಸೈಕೋಪಾತ್ ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದನು. ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ ಸ್ಥಳೀಯರು ಶೆಡ್‌ನತ್ತ ಬಂದಿದ್ದರು. ಜನ ಬರುತ್ತಿರುವುದನ್ನು ಕಂಡ ಸೈಕೋಪಾತ್ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದನು.ಇದನ್ನೂ ಓದಿ: ಮನೆಗೆ ನುಗ್ಗಿ, ಕಾರು ಸ್ಫೋಟಿಸಿ ಕೊಲೆ ಮಾಡುವುದಾಗಿ ನಟ ಸಲ್ಮಾನ್‌ ಖಾನ್‌ಗೆ ಬೆದರಿಕೆ

  • ಹುಬ್ಬಳ್ಳಿ ಕೊಲೆ ಪ್ರಕರಣ – ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ

    ಹುಬ್ಬಳ್ಳಿ ಕೊಲೆ ಪ್ರಕರಣ – ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ

    – ಕೀಚಕನಿಗೆ ಗುಂಡೇಟು- ಲೇಡಿ ಪಿಎಸ್‌ಐ- ಪೊಲೀಸರ ಕಾರ್ಯಕ್ಕೆ ಜೈಕಾರ

    ಹುಬ್ಬಳ್ಳಿ: ಬಿಹಾರದ ಮೂಲದ ಸೂಕೋಪಾತ್‌ನಿಂದ ಕೊಲೆಯಾದ 5 ವರ್ಷದ ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ವಿಧಾನ ಪರಿಷತ್‌ ಸದಸ್ಯ ಸಲೀಮ್ ಅಹಮದ್ ತಿಳಿಸಿದ್ದಾರೆ.

    ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಕಾಮುಕ ಆರೋಪಿಯನ್ನು ಎನ್‌ಕೌಂಟರ್ ಮಾಡಲಾಗಿದೆ. ಬಿಹಾರ ಮೂಲದ ಆರೋಪಿ ರಿತೇಶ್ ಕುಮಾರ್ ಪೊಲೀಸರ ಗುಂಡೇಟಿಗೆ ಬಲಿಯಾದ ಆರೋಪಿಯಾಗಿದ್ದಾನೆ.

    ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯಲೆಂದು ಹೋಗಿದ್ರು. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ, ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ. ಒಮ್ಮೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ರೂ ಕೇಳದೇ ಪೊಲೀಸರ ಮೇಲೆ ಕಲ್ಲು ತೂರಿದ್ದಾನೆ. ಈ ವೇಳೆ ಹುಬ್ಬಳ್ಳಿ ಪೊಲೀಸರು ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಿದ್ದಾರೆ.

    ಅಶೋಕನಗರ ಪೊಲೀಸ್ ಠಾಣೆಯ ಮಹಿಳಾ ಪಿಎಸ್‌ಐ ಅನ್ನಪೂರ್ಣ ಅವರು ಹಾರಿಸಿದ ಗುಂಡು ಎದೆಗೆ ತಾಗಿ ಗಾಯಗೊಂಡಿದ್ದ ಆರೋಪಿಯನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದಿದೇ ಆರೋಪಿ ರಿತೇಶ್ ಜೀವ ಹೋಗಿದೆ.

    ಇನ್ನೂ, ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ, ಸಿಬ್ಬಂದಿ ಆರೋಗ್ಯ ವಿಚಾರಿಸಿದ್ರು. ಪೊಲೀಸರ ಕಾರ್ಯಕ್ಕೆ ಜನರು ಜೈಕಾರ ಹಾಕಿದ್ದಾರೆ. ಇನ್ನೂ, ಬಾಲಕಿ ಹಾಗೂ ಆರೋಪಿ ಹಿತೇಶ್ ಮೃತದೇಹ ಇನ್ನೂ, ಕಿಮ್ಸ್ ಆಸ್ಪತ್ರೆಯಲ್ಲೇ ಇದ್ದು, ಇಂದು ಕುಟುಂಬಸ್ಥರಿಗೆ ಹಸ್ತಾಂತರಿಲಾಗುತ್ತದೆ.

  • ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ ಕೇಸ್‌ – ಪೊಲೀಸರ ಗುಂಡೇಟಿಗೆ ಆರೋಪಿ ಬಲಿ

    ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ ಕೇಸ್‌ – ಪೊಲೀಸರ ಗುಂಡೇಟಿಗೆ ಆರೋಪಿ ಬಲಿ

    – ಆರೋಪಿ ಎದೆಗೆ ಗುಂಡಿಟ್ಟ ಲೇಡಿ ಪಿಎಸ್‌ಐ

    ಹುಬ್ಬಳ್ಳಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಪ್ರಕರಣದ ಆರೋಪಿಯು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.

    ಬಿಹಾರ ಮೂಲದ ಆರೋಪಿ ರಿತೇಶ್‌ ಕುಮಾರ್‌ ಗುಂಡೇಟಿಗೆ ಸಾವನ್ನಪ್ಪಿದ ಆರೋಪಿ. ಮಹಿಳಾ ಪಿಎಸ್‌ಐ ಗುಂಡೇಟು ನೀಡಿದ್ದರು. ಎದೆಗೆ ಗುಂಡು ತಾಗಿ ತೀವ್ರವಾಗಿ ಗಾಯಗೊಂಡಿದ್ದ ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

    ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌, ಬೆಳಗ್ಗೆ ಹುಬ್ಬಳ್ಳಿ ಅಶೋಕ ನಗರ ವಿಜಯನಗರ ಬಳಿ ಮಗು ಮಿಸ್ ಆಗಿದೆ ಎಂದು ಮಾಹಿತಿ ಇತ್ತು. ಪ್ರಕರಣದ ಆರೋಪಿ ಬಿಹಾರ ಮೂಲದ ಪಾಟ್ನಾದವನು. ಹುಬ್ಬಳ್ಳಿ ತಾರಿಹಾಳರ ಬಳಿ ಮನೆ ಮಾಡಿಕೊಂಡಿದ್ದ. ಆರೋಪಿ ನಮ್ಮ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದ. ಮಹಿಳಾ ಪೊಲೀಸ್ ಅಧಿಕಾರಿ ಏರ್ ಫೈಯರ್‌ ಮಾಡಿದ್ದರು. ಆತ ಓಡಿ ಹೋಗುವಾಗ ಎರಡು ಗುಂಡು ಆತನ ಮೇಲೆ ಹಾರಿಸಲಾಗಿತ್ತು. ಆಗ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ರವಾನೆ ಮಾಡಿದ್ದರು. ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಪಿಎಸ್‌ಐ ಅನ್ನಪೂರ್ಣ ಹಾಗೂ ಇಬ್ಬರು ಸಿಬ್ಬಂದಿಗೆ ಗಾಯವಾಗಿದೆ. ಕೊಲೆ ಪ್ರಕರಣ ದಾಖಲು ಮಾಡಿಕೊಂಡಿದ್ದೆವು ಎಂದು ಮಾಹಿತಿ ನೀಡಿದ್ದಾರೆ.

    ವಿಚಾರಣೆ ವೇಳೆ ಆರೋಪಿಯು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಆತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಮಿಷನರ್‌ ಶಶಿಕುಮಾರ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡಿದ್ದ ಪಿಎಸ್‌ಐ ಅನ್ನಪೂರ್ಣ ಹಾಗೂ ಪೇದೆ ಆರೋಗ್ಯ ವಿಚಾರಿಸಿದ್ದಾರೆ.

    ಪ್ರಕರಣ ಏನು?
    ಮನೆ ಬಳಿ ಆಟವಾಡುತ್ತಿದ್ದ 5 ವರ್ಷದ ಬಾಲಕಿಗೆ ತಿಂಡಿ ಕೊಡಿಸುವ ಆಸೆ ತೋರಿಸಿ ಸೈಕೋಪಾತ್‌ ರಿತೇಶ್‌ ಕುಮಾರ್‌ ಆಕೆಯನ್ನು ಎತ್ತಿಕೊಂಡು ಹೋಗಿದ್ದ. ಬಾಲಕಿಯನ್ನು ಆರೋಪಿ ಕರೆದುಕೊಂಡು ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಳಿಕ ಶೆಡ್‌ವೊಂದಕ್ಕೆ ಮಗು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮಗು ಕಿರುಚಿಕೊಂಡಿದೆ. ಮಗು ಚೀರಾಟ ಕೇಳಿ ಅಕ್ಕಪಕ್ಕದಲ್ಲಿದ್ದವರು ಸ್ಥಳಕ್ಕೆ ಧಾವಿಸಿದ್ದರು.

    ಜನರು ಬರುತ್ತಿರುವುದನ್ನು ಕಂಡು ಆರೋಪಿಯು ಮಗುವಿನ ಕತ್ತು ಹಿಸುಕಿ ಕೊಂದಿದ್ದಾನೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದ. ಕೃತ್ಯ ಖಂಡಿಸಿ ಸ್ಥಳೀಯರು ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.

  • ಸೈಕೋಪಾತ್‌ನಿಂದ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ – ಹತ್ಯೆ ಖಂಡಿಸಿ ತೀವ್ರ ಪ್ರತಿಭಟನೆ

    ಸೈಕೋಪಾತ್‌ನಿಂದ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ – ಹತ್ಯೆ ಖಂಡಿಸಿ ತೀವ್ರ ಪ್ರತಿಭಟನೆ

    – ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ
    – ಆರೋಪಿ ಗಲ್ಲಿಗೇರಿಸುವಂತೆ ಒತ್ತಾಯಿಸಿ ಠಾಣೆ ಮುಂದೆ ಪ್ರತಿಭಟನೆ

    ಹುಬ್ಬಳ್ಳಿ: ಸೈಕೋಪಾತ್ ಒಬ್ಬ 5 ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿರುವ ಘಟನೆ ಅಶೋಕ್ ನಗರ ಪೊಲೀಸ್ ಠಾಣೆ (Ashok nagara Police Station) ವ್ಯಾಪ್ತಿಯಲ್ಲಿ ನಡೆದಿದೆ. ಹತ್ಯೆ ಖಂಡಿಸಿ ಪೋಷಕರು ಹಾಗೂ ಸಾರ್ವಜನಿಕರು ಪೊಲೀಸ್ ಠಾಣೆ ಎದುರು ತೀವ್ರ ಪ್ರತಿಭಟನೆ ನಡೆಸಿದರು.

    ಬಿಹಾರ (Bihara) ಮೂಲದ ಸೈಕೋಪಾತ್, ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ ಸ್ಥಳೀಯರು ಶೆಡ್‌ನತ್ತ ಬಂದಿದ್ದಾರೆ. ಜನ ಬರುತ್ತಿರುವುದನ್ನು ಕಂಡ ಸೈಕೋಪಾತ್ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ಹುಬ್ಬಳ್ಳಿ | ಸೈಕೋಪಾತ್‌ನಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ

    ಬಾಲಕಿ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಹಿನ್ನಲೆ ಭುಗಿಲೆದ್ದ ಜನರು ಮತ್ತು ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಅಶೋಕ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟಿಸಿದ್ದು, ಆರೋಪಿಗೆ ತಕ್ಕ ಶಿಕ್ಷೆ ನೀಡುವಂತೆ ಒತ್ತಾಯಿಸಿದರು. ಸ್ಥಳಕ್ಕಾಗಮಿಸಿದ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಕಮಿಷನರ್ ಮಾತಿಗೆ ಒಪ್ಪದ ಪ್ರತಿಭಟನಾಕಾರರು ಠಾಣೆಯ ಮುಂದೆಯೇ ಕುಳಿತು ಆರೋಪಿಯ ಪತ್ತೆಗೆ ಆಗ್ರಹಿಸಿದರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ ಕೇಸ್ – ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

    ಪ್ರತಿಭಟನಾಕಾರರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆ ಎಲ್ಲರನ್ನೂ ಚದುರಿಸಲು ಪೊಲೀಸರು ಹರಸಾಹಸ ಪಟ್ಟರು. ಮತ್ತೊಂದೆಡೆ ಮಹಿಳೆಯರು ಹಾಗೂ ಪ್ರತಿಭಟನಾಕಾರರು ರಸ್ತೆಯಲ್ಲೇ ಕುಳಿತು ಶಾಂತ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಬಾಲಕಿ ಕೊಲೆ ಕೇಸ್ | ಆರೋಪಿ ಮೇಲೆ ಕಟ್ಟಿನಿಟ್ಟಿನ ಕ್ರಮ ಆಗಬೇಕು – ಪ್ರಹ್ಲಾದ್ ಜೋಶಿ

    ಹತ್ಯೆ ಖಂಡಿಸಿ ಹುಬ್ಬಳ್ಳಿ ಕಿಮ್ಸ್ ಗೇಟ್ ಎದುರು ಕನ್ನಡಪರ ಸಂಘಟನೆಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಆರೋಪಿಯನ್ನು ಗಲ್ಲಿಗೆ ಏರಿಸಿ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಅಲ್ಲದೇ ಎಲ್ಲಿದ್ದಿರಪ್ಪಾ ಸಂಸದರೇ, ಶಾಸಕರೇ, ನೇಹಾ ಹತ್ಯೆ ವೇಳೆ ಮಾತಾಡುತ್ತಿದ್ದವರು ಈಗ ಎಲ್ಲಿ ಎಂದು ಪ್ರತಿಭಟನಾಕಾರರು ಜನಪ್ರತಿನಿಧಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ, ರಸ್ತೆ ತಡೆದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಈ ವೇಳೆ ಪ್ರತಿಭಟನಾಕಾರರ ಬಳಿ ವಾಹನ ಓಡಾಟಕ್ಕೆ ಅನುವು ಮಾಡಿಕೊಡುವಂತೆ ಪೊಲೀಸರು ಮನವಿ ಮಾಡಿದರು.

  • ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ ಕೇಸ್ – ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

    ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ ಕೇಸ್ – ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

    – ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಬಿಹಾರ ಮೂಲದ ಸೈಕೋಪಾತ್

    ಹುಬ್ಬಳ್ಳಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ.

    ಬಿಹಾರ ಮೂಲದ ಸೈಕೋಪಾತ್ ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದ. ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ ಸ್ಥಳೀಯರು ಶೆಡ್‌ನತ್ತ ಧಾವಿಸಿದ್ದರು. ಜನ ಬರುತ್ತಿರುವುದನ್ನು ಕಂಡ ಸೈಕೋಪಾತ್ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದ. ಇದನ್ನೂ ಓದಿ: ಹುಬ್ಬಳ್ಳಿ | ಸೈಕೋಪಾತ್‌ನಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ

    ಇದೀಗ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು ಆತನ ಕಾಲಿಗೆ ಗುಂಡೇಟು ನೀಡಿ, ಬಂಧಿಸಿದ್ದಾರೆ. ಆತನಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.