Tag: ಹುಬ್ಬಳ್ಳಿ

  • Hubballi | ರಂಜಾನ್ ಆಚರಣೆ ವೇಳೆ ಎಸ್‌ಡಿಪಿಐನಿಂದ ವಿವಾದಿತ ಪೋಸ್ಟರ್‌ಗಳ ಪ್ರದರ್ಶನ

    Hubballi | ರಂಜಾನ್ ಆಚರಣೆ ವೇಳೆ ಎಸ್‌ಡಿಪಿಐನಿಂದ ವಿವಾದಿತ ಪೋಸ್ಟರ್‌ಗಳ ಪ್ರದರ್ಶನ

    -ಹಿಂದೂ ಸಂಘಟನೆಗಳಿಂದ ಆಕ್ರೋಶ

    ಹುಬ್ಬಳ್ಳಿ: ರಂಜಾನ್ (Ramzan) ಆಚರಣೆ ಸಮಯದಲ್ಲಿ ಒಂದು ಕಡೆ ಶಾಂತಿಯುತ ರಂಜಾನ್ ಪ್ರಾರ್ಥನೆ ನಡೆಯುತ್ತಿದ್ದರೆ, ಮತ್ತೊಂದೆಡೆ ವಿವಿಧ ವಿಷಯಗಳ ಪ್ಲೇ ಕಾರ್ಡ್ ಹಿಡಿದು, ಕೈಗೆ ಕಪ್ಪು ಪಟ್ಟಿ ಧರಿಸಿ ಎಸ್‌ಡಿಪಿಐ (SDPI) ಕಾರ್ಯಕರ್ತರು ಅಸಮಾಧಾನ ಹೊರಹಾಕಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

    ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿ ಪ್ಯಾಲೆಸ್ಟಿನ್‌ನಲ್ಲಿ ಯುದ್ಧ ನಿಲ್ಲಬೇಕು, ಎಸ್‌ಡಿಪಿಐ ಅಧ್ಯಕ್ಷ ಎಂಕೆ ಫೈಜಿ ಬಿಡುಗಡೆಯಾಗಬೇಕು, ವಕ್ಫ್ ಆಸ್ತಿ ಎಂದಿಗೂ ಮುಸ್ಲಿಮರದ್ದೇ, ದೇಶ, ಮನಸ್ಸು ಒಡೆದವರು ಮುಸ್ಲಿಂ ಆಸ್ತಿ ಮೇಲೆ ಕಣ್ಣು ಹಾಕಿದ್ದಾರೆ ಎಂದು ಕೇಂದ್ರ ಸರ್ಕಾರ, ಸಂಘಪರಿವಾರ ಗುರಿಯಾಗಿಟ್ಟುಕೊಂಡು ವಿವಿಧ ಪೋಸ್ಟರ್‌ಗಳ (Poster) ಪ್ರದರ್ಶನ ಮಾಡಲಾಗಿದೆ. ಇದನ್ನೂ ಓದಿ: ಚಿತ್ರದುರ್ಗ| ಜೂಜು ಅಡ್ಡೆಗಳ ಮೇಲೆ ಪೊಲೀಸರ ದಾಳಿ – 108 ಪ್ರಕರಣ ದಾಖಲು, 575 ಜೂಜುಕೋರರು ವಶಕ್ಕೆ

    ಕೂಡಲೇ ಎಚ್ಚೆತ್ತ ಪೊಲೀಸರು, ಪ್ರತಿಭಟನೆಗೆ ಕಡಿವಾಣಹಾಕಿದರು. ಈ ಬಗ್ಗೆ ಮಾತನಾಡಿದ ಎಸ್‌ಡಿಪಿಐ ಮುಖಂಡರು, ದೇಶದಲ್ಲಿ ಮುಸ್ಲಿಂ ಪರಿಸ್ಥಿತಿ ಸರಿಯಲ್ಲ. ಮುಸ್ಲಿಮರ ಪರವಾಗಿ ಎಸ್‌ಡಿಪಿಐ ಧ್ವನಿಯಾಗಿದೆ. ಎಸ್‌ಡಿಪಿಐ ಬ್ಯಾನ್ ಮಾಡಲು ಆಗಲ್ಲ. ಬರೀ ಜಿಲ್ಲಾ ಪಂಚಾಯತಿ, ಪಾಲಿಕೆ ಅಷ್ಟೇ ಅಲ್ಲಾ ಮುಂದಿನ ಬಾರಿ ಎಂಎಲ್‌ಎ, ಎಂಪಿ ಸ್ಥಾನ ಸಹ ಗೆಲ್ಲುತ್ತೆವೆ. ಪ್ಯಾಲೆಸ್ತೀನ್‌ನಲ್ಲಿ ಶಾಂತಿ ನೆಲಸಬೇಕು. ನಿಜವಾದ ಉಗ್ರರು ಇಸ್ರೇಲ್‌ನವರು ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: Explained: ಮುಂಬೈ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ರೋಹಿತ್‌ಗೆ ಇಲ್ಲ ಸ್ಥಾನ

    ಸಂಘಪರಿವಾರ ಅವಹೇಳನ ಮಾಡಿ ಪ್ಲೇ ಕಾರ್ಡ್ ಪ್ರದರ್ಶನ ಹಿನ್ನೆಲೆ ಹಿಂದೂಪರ ಸಂಘಟನೆಗಳು ಎಸ್‌ಡಿಪಿಐ ಕಾರ್ಯಕರ್ತರ ಮೇಲೆ ದೂರು ದಾಖಲಿಸಿದೆ. ಹಿಂದೂಗಳ ಭಾವನೆಗೆ ದಕ್ಕೆ ತಂದಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ವಿಶ್ವಹಿಂದೂ ಪರಿಷತ್, ಭಜರಂಗದಳ, ಹಿಂದೂ ವಕೀಲರ ಸಂಘದಿಂದ ದೂರು ಕೊಡಲಾಗಿದೆ. ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಫ್‌ಐಆರ್ ದಾಖಲು ಮಾಡುವಂತೆ ಆಗ್ರಹಿಸಿದ್ದಾರೆ. ಠಾಣೆಯ ಮುಂದೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಎಸ್‌ಡಿಪಿಐ ಬ್ಯಾನ್ ಮಾಡುವಂತೆ ಆಗ್ರಹಿಸಿದೆ. ಇದನ್ನೂ ಓದಿ: ಎಂಎಲ್‌ಸಿ ರಾಜೇಂದ್ರ ಹತ್ಯೆಗೆ ಸುಪಾರಿ – ಆಡಿಯೋದಲ್ಲಿ ಮಾತನಾಡಿರುವ ಪುಷ್ಪಾ ಯಾರು? ಹಿನ್ನೆಲೆ ಏನು?

  • ಹುಬ್ಬಳ್ಳಿ, ಧಾರವಾಡದಲ್ಲಿ ಗುಡುಗು ಸಹಿತ ಭಾರೀ ಮಳೆ – ಸಿಡಿಲು ಬಡಿದು ವೃದ್ಧ ಸಾವು

    ಹುಬ್ಬಳ್ಳಿ, ಧಾರವಾಡದಲ್ಲಿ ಗುಡುಗು ಸಹಿತ ಭಾರೀ ಮಳೆ – ಸಿಡಿಲು ಬಡಿದು ವೃದ್ಧ ಸಾವು

    ಹುಬ್ಬಳ್ಳಿ/ಧಾರವಾಡ: ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಹುಬ್ಬಳ್ಳಿ-ಧಾರವಾಡದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

    ಧಾರವಾಡದಲ್ಲಿ (Dharwad) ಸತತ ಒಂದು ಗಂಟೆಗಳ ಕಾಲ ಧಾರಾಕಾರವಾಗಿ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಮುಂಗಾರು ಬಿತ್ತನೆಗೆ ಭೂಮಿ ಸಜ್ಜು ಮಾಡಿಕೊಳ್ಳಲು ಈ ಮಳೆ ಸಹಾಯಕವಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿತ್ತು. ಇಂದು ಧಾರಾಕಾರವಾಗಿ ಮಳೆಯಾಗಿದೆ. ಇದನ್ನೂ ಓದಿ: ಹಿಮಾಚಲ ಪ್ರದೇಶ: ಬಿರುಗಾಳಿಗೆ ಉರುಳಿ ಬಿದ್ದ ಮರ – 6 ಕ್ಕೂ ಹೆಚ್ಚು ಮಂದಿ ಸಾವು

    ಇನ್ನು ಭಾರೀ ಮಳೆಯ ಹಿನ್ನೆಲೆ ಸಿಡಿಲು ಬಡಿದು ಮೇಕೆ ಮೇಯಿಸಲು ಹೋಗಿದ್ದ ವೃದ್ಧ ಸಾವನ್ನಪ್ಪಿದ್ದಾರೆ. ಧಾರವಾಡ ತಾಲೂಕಿನ ಮುಗದ ಗ್ರಾಮದ ಹೊಲದಲ್ಲಿ ಘಟನೆ ನಡೆದಿದೆ. ರಸೂಲಸಾಬ್ ಚಾಂದವಾಲೆ (62) ಮೃತ ದುರ್ದೈವಿ. ಸಂಜೆ ಮೇಕೆ ಮೇಯಿಸಿಕೊಂಡು ವಾಪಸ್ ಮುಗದ ಗ್ರಾಮಕ್ಕೆ ಬರುವಾಗ ಸಿಡಿಲು ಬಡಿದಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಮಹಾಭಾರತದಲ್ಲಿ ಜಯಗಳಿಸಿದ್ದು ಕೃಷ್ಣಾರ್ಜುನರೇ ಹೊರತು ಶಕುನಿ, ದೃತರಾಷ್ಟ್ರರಲ್ಲ: ಯತ್ನಾಳ್‌

    ಹುಬ್ಬಳ್ಳಿಯ ನವನಗರ, ವಿದ್ಯಾನಗರ, ದೇಶಪಾಂಡೆ ನಗರದಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಕೇಶ್ವಾಪುರದ ಕೆಲವು ಕಡೆ ಸಣ್ಣ ಪ್ರಮಾಣದ ಆಲಿಕಲ್ಲು ಸಹಿತ ಮಳೆಯಾಗಿದ್ದು, ಮಳೆ ಹಿನ್ನೆಲೆ ಹುಬ್ಬಳ್ಳಿ ನಗರದ ವಿದ್ಯುತ್ ಕಡಿತಗೊಂಡಿದೆ. ಸತತ ಎರಡು ಗಂಟೆಗಳ ಕಾಲ ಸುರಿದ ಭಾರಿ ಮಳೆಗೆ ಚರಂಡಿ ತುಂಬಿ ಕೊಳಚೆ ನೀರು ಮುಖ್ಯ ರಸ್ತೆಗೆ ಹರಿದಿದೆ. ಅಲ್ಲದೇ ಪ್ರಮುಖ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದನ್ನೂ ಓದಿ: ದೆಹಲಿಗೆ ಹೋಗುವ ಮುನ್ನ ಸಿಎಂ, ಡಿಸಿಎಂ ಮೀಟಿಂಗ್

  • ಹಾಲಿನ ದರ ಏರಿಕೆ ಸರ್ಕಾರದ ಆರನೇ ಭಾಗ್ಯ: ಮಹೇಶ್ ಟೆಂಗಿನಕಾಯಿ

    ಹಾಲಿನ ದರ ಏರಿಕೆ ಸರ್ಕಾರದ ಆರನೇ ಭಾಗ್ಯ: ಮಹೇಶ್ ಟೆಂಗಿನಕಾಯಿ

    ಹುಬ್ಬಳ್ಳಿ: ಸರ್ಕಾರ ಬಂದಾಗ 5 ಗ್ಯಾರಂಟಿಗಳನ್ನು ಕೊಟ್ಟಿತ್ತು. ನಂತರ ದರ ಏರಿಕೆಯ ಐದು ಬರೆ ಗ್ಯಾರಂಟಿ ಕೊಡುತ್ತಿದೆ. ಇದೀಗ ಹಾಲಿನ ದರ ಏರಿಕೆಯ ಮೂಲಕ ಸರ್ಕಾರ ಆರನೇ ಭಾಗ್ಯ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ (Mahesh Tenginakai) ವ್ಯಂಗ್ಯವಾಡಿದರು.

    ಹುಬ್ಬಳ್ಳಿಯಲ್ಲಿ (Hubballi) ಹಾಲಿನ ದರ ಏರಿಕೆ ಬಗ್ಗೆ ಮಾತನಾಡಿದ ಅವರು, ಸರ್ಕಾರ ಒಂದು ಕಡೆ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂ. ಏರಿಸಲು ನಿರ್ಧರಿಸಿದೆ. ಮತ್ತೊಂದು ಕಡೆ ವಿದ್ಯುತ್ ದರ ಏರಿಕೆಗೂ ಮುಂದಾಗಿದೆ. ಇದರ ನಡುವೆ ನೋಂದಣಿ ಸೇರಿ ಹಲವಾರು ಶುಲ್ಕಗಳ ಏರಿಕೆ ಮಾಡಿದೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: Milk Price Hike | ಗ್ಯಾರಂಟಿ ಸರ್ಕಾರದ ಬಂದ ಮೇಲೆ ಯಾವುದು ಎಷ್ಟು ಏರಿಕೆ? ಮುಂದೆ ಏನೇನು ಶಾಕ್ ಸಿಗುತ್ತೆ?

    ಕಾಂಗ್ರೆಸ್ (Congress) ಸರ್ಕಾರ ದರ ಏರಿಕೆಯ ಗ್ಯಾರಂಟಿಗಳನ್ನು ಕೊಡುತ್ತಲೇ ಸಾಗಿದೆ. ಕೂಡಲೇ ಹಾಲಿನ ದರ ಏರಿಕೆ ವಾಪಸ್ ಪಡೆಯಬೇಕು. ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ಹೋರಾಟ ಮಾಡುವ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ನಂದಿನಿ ಹಾಲಿನ ದರ 4 ರೂ. ಹೆಚ್ಚಳ – ರೈತರಿಗೆ ಪೂರ್ಣ ಹಣ ವರ್ಗಾವಣೆಗೆ ಕ್ಯಾಬಿನೆಟ್ ತೀರ್ಮಾನ

  • ಯತ್ನಾಳ್ ಉಚ್ಚಾಟನೆ ದುಃಖ ತಂದಿದೆ, ಹೈಕಮಾಂಡ್ ನಿರ್ಧಾರಕ್ಕೆ ತಲೆ ಬಾಗುವೆ: ಬೆಲ್ಲದ್

    ಯತ್ನಾಳ್ ಉಚ್ಚಾಟನೆ ದುಃಖ ತಂದಿದೆ, ಹೈಕಮಾಂಡ್ ನಿರ್ಧಾರಕ್ಕೆ ತಲೆ ಬಾಗುವೆ: ಬೆಲ್ಲದ್

    ಹುಬ್ಬಳ್ಳಿ: ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್‌ರನ್ನ (Basanagouda Patil Yatnal) ಉಚ್ಚಾಟನೆ ಮಾಡಿರುವುದು ಬಹಳಷ್ಟು ದುಃಖ ತಂದಿದೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ (Aravind Bellad) ಹೇಳಿದರು.

    ಯತ್ನಾಳ್‌ರನ್ನು ಬಿಜೆಪಿ ಪಕ್ಷದಿಂದ 6 ವರ್ಷ ಹೈಕಮಾಂಡ್ ಉಚ್ಚಾಟನೆ ಮಾಡಿರುವ ವಿಚಾರವಾಗಿ ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮದವರೊಂದಿಗೆ ಮಾತನಾಡಿದರು. ಯತ್ನಾಳ್ ಒಬ್ಬ ಪಕ್ಷದ ಹಿರಿಯ ಜನಪ್ರಿಯ ನಾಯಕರು. ಅವರು ಪಕ್ಷದಿಂದ ದೂರವಾಗುತ್ತಿರುವುದು ನನಗೆ ದುಃಖ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ

    ಹೈಕಮಾಂಡ್‌ನ ನಿರ್ಧಾರಕ್ಕೆ ನಾನು ತಲೆ ಬಾಗುತ್ತೇನೆ. ಪಕ್ಷದಲ್ಲಿ ಮುಂದೆ ಎಲ್ಲವೂ ಸರಿಯಾಗುತ್ತದೆ ಎನ್ನುವ ಭರವಸೆ ನನಗಿದೆ. ಯತ್ನಾಳ್ ಅವರಿಗೆ ಕೇಂದ್ರದ ಮಂತ್ರಿಯಾಗಿ, ಶಾಸಕರಾಗಿ ಸಾಕಷ್ಟು ಅನುಭವವಿದೆ. ಅವರು ಏನೇ ವಿಷಯವಿದ್ದರೂ ನೇರವಾಗಿಯೇ ಹೇಳುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಸತ್ಯವಂತರಿಗಿದು ಕಾಲವಲ್ಲ.. ದುಷ್ಟಜನರಿಗೆ ಸುಭಿಕ್ಷಕಾಲ: ಉಚ್ಚಾಟನೆಗೆ ದಾಸರ ಹಾಡಿನ ಮೂಲಕ ಯತ್ನಾಳ್ ಕೌಂಟರ್

  • ಧಾರವಾಡ | ಮಳೆ, ಗಾಳಿಗೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ದುರ್ಮರಣ – ಓರ್ವ ಗಂಭೀರ

    ಧಾರವಾಡ | ಮಳೆ, ಗಾಳಿಗೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ದುರ್ಮರಣ – ಓರ್ವ ಗಂಭೀರ

    ಹುಬ್ಬಳ್ಳಿ/ಧಾರವಾಡ: ಮಳೆ-ಗಾಳಿಗೆ (Rain) ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನಪ್ಪಿ, ಓರ್ವ ಗಂಭೀರ ಗಾಯಗೊಂಡ ಘಟನೆ ಧಾರವಾಡ (Dharwad) ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ.

    ಹಳೇ ಹುಬ್ಬಳ್ಳಿಯ ಧಾರವಾಡ ಪ್ಲಾಟ್ ನಿವಾಸಿ ದಾವೂದ್ ಸವಣೂರು (52), ನೂರಾಣಿ ಪ್ಲಾಟ್ ನಿವಾಸಿ ರಫಿಕ್‌ಸಾಬ್ ಚನ್ನಾಪುರ (50) ಮೃತ ಕಾರ್ಮಿಕರು. ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದ ಮಹಾಂತೇಶ ಚವರಗುಡ್ಡ ಎಂಬವರಿಗೆ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಮೋದಿ ಹೆಸ್ರಲ್ಲಿ 32 ಲಕ್ಷ ಗಿಫ್ಟ್ ಕಿಟ್ ಕೊಡೋದು ಮುಸ್ಲಿಂ ಓಲೈಕೆ ಅಲ್ವಾ? – ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ನಿರ್ಮಾಣ ಆಗುತ್ತಿರುವ ಕಟ್ಟಡದ ಗಾರೆ ಕೆಲಸಕ್ಕೆ ಕೂಲಿ ಕಾರ್ಮಿಕರು ತೆರಳಿದ್ದರು. ಮಳೆ, ಗಾಳಿ ಜೋರಾಗಿ ಬೀಸಿದ್ದರಿಂದ ಗೋಡೆಯ ಬಳಿ ನಿಂತಿದ್ದರು. ಗಾಳಿ ರಭಸಕ್ಕೆ ಗೋಡೆ ಕುಸಿದು ಕೆಳಗೆ ಸಿಲುಕಿ ಸಾವು ಸಂಭವಿಸಿದೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಂಡ್ಯ ಜನರು ಛತ್ರಿ ಹೇಳಿಕೆ; ಡಿಕೆಶಿ ಜನರ ಕ್ಷಮೆ ಕೇಳಬೇಕು – ಅನ್ನದಾನಿ

  • ರಾಜೀನಾಮೆ ಕೊಡಬೇಕು ಅನ್ನೋ ನಿರ್ಧಾರ ಮಾಡಿದ್ದು ನಿಜ: ಬಸವರಾಜ್ ಹೊರಟ್ಟಿ

    ರಾಜೀನಾಮೆ ಕೊಡಬೇಕು ಅನ್ನೋ ನಿರ್ಧಾರ ಮಾಡಿದ್ದು ನಿಜ: ಬಸವರಾಜ್ ಹೊರಟ್ಟಿ

    – ಕಳೆದ ಮೂರು ವರ್ಷಗಳಿಂದ ಅಸಮಾಧಾನ ಇದೆ ಎಂದ ಸಭಾಪತಿ

    ಹುಬ್ಬಳ್ಳಿ: ರಾಜೀನಾಮೆ ( Resignation) ಕೊಡಬೇಕು ಎಂಬ ನಿರ್ಧಾರ ಮಾಡಿದ್ದು ನಿಜ. ಆದರೆ ಇದೀಗ ಬಹಳ ಜನ ನನಗೆ ಕಾಲ್ ಮಾಡಿ ಬೇಡ ಅನ್ನುತ್ತಿದ್ದಾರೆ ಎಂದು ರಾಜೀನಾಮೆ ವಿಚಾರವಾಗಿ ಸಭಾಪತಿ ಬಸವರಾಜ್ ಹೊರಟ್ಟಿ (Basavaraj Horatti) ಸ್ಪಷ್ಟನೆ ನೀಡಿದ್ದಾರೆ.

    ಸಭಾಪತಿ ಬಸವರಾಜ್ ಹೊರಟ್ಟಿ ರಾಜೀನಾಮೆ ಪತ್ರ ವೈರಲ್ ಆಗುತ್ತಿರುವ ವಿಚಾರದ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಹಿ ಮಾಡಿದ ಪತ್ರ ಇನ್ನೂ ಲಾಕರ್‌ನಲ್ಲಿದೆ. ವೈರಲ್ ಆಗಿರುವುದು ಸಹಿ ಮಾಡದ ಪತ್ರ. ನನ್ನ ಪಿ.ಎ ಆ ಪತ್ರವನ್ನು ವೈರಲ್ ಮಾಡಿದ್ದಾರೆ. ದಿನಾಂಕ 21 ಎಂದು ಹಾಕಿದ್ದೆ. ಈ ಪತ್ರ ಬಹಳ ಜನರ ಹತ್ತಿರ ಹೋಗಿದೆ. ಸಚಿವರು, ಪರಿಷತ್ ಸದಸ್ಯರು ಕಾಲ್ ಮಾಡುತ್ತಿದ್ದಾರೆ. ದುಡುಕಿನ ನಿರ್ಧಾರ ಬೇಡ ಎನ್ನುತ್ತಿದ್ದಾರೆ. ಕೆಲವು ಸಲ ಹಿತೈಷಿಗಳ ಮಾತು ಕೇಳಬೇಕಾಗುತ್ತದೆ ಎಂದರು. ಇದನ್ನೂ ಓದಿ: ಬಿಗ್‌ ಬಾಸ್‌ ಮಾಜಿ ಸ್ವರ್ಧಿಗಳಾದ ರಜತ್, ವಿನಯ್ ಗೌಡ ವಿರುದ್ಧ ಎಫ್‌ಐಆರ್

    ರಾಜೀನಾಮೆ ಕುರಿತು ವಿಚಾರ ಮಾಡುತ್ತೇನೆ. ಮಾನಸಿಕವಾಗಿ ಬೇಸರವಾಗಿದ್ದು ನಿಜ. ಹೀಗಾಗಿ ನಾನು ರಾಜೀನಾಮೆ ಕೊಡುವ ನಿರ್ಧಾರ ಮಾಡಿದ್ದೆ. ಕೆಲವರ ನಡುವಳಿಕೆ ನನ್ನ ಮನಸಿಗೆ ಸಮಾಧಾನವಾಗಿಲ್ಲ. ಕಳೆದ ಮೂರು ವರ್ಷಗಳಿಂದ ಅಸಮಾಧಾನವಾಗಿದೆ. ರಾಜ್ಯದ ಎಲ್ಲಾ ಕಡೆಯಿಂದ ಕರೆ ಬಂದಿದೆ, ಮಾನಸಿಕ ನೆಮ್ಮದಿ ಹಾಳಗಿದೆ. ನಾಳೆ ಒಂದು ದಿನ ಕುಳಿತು ವಿಚಾರ ಮಾಡುತ್ತೇನೆ. ಆತ್ಮೀಯರ ಮಾತು ಕೇಳಿಕೊಂಡು ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಹಾಲಿನ ದರ ಏರಿಕೆ – ಇಂದು ಸಿಎಂ ಸಭೆಯಲ್ಲಿ ನಿರ್ಧಾರ ಸಾಧ್ಯತೆ!

    ಈ ಮೊದಲು ಮಾತನಾಡಿದ್ದ ಹೊರಟ್ಟಿ, ನಾನು ಸಭಾಪತಿ ಹುದ್ದೆಗೆ ರಾಜೀನಾಮೆ ಕೊಡುತ್ತೇನೆ. ಸಾಕಾಗಿದೆ, ಇನ್ನೂ ಸ್ವಲ್ಪ ಟೆಕ್ನಿಕಲ್ ಸಮಸ್ಯೆ ಇದೆ. ಜನರಿಗೆ ಮೋಸ ಮಾಡೋ ಟ್ರೆಂಡ್ ಬಂದಿದೆ. ಇದೀಗ ವಿಧಾನ ಮಂಡಲಕ್ಕೆ ಬಂದಿದೆ. ರಾಜಕಾರಣ ಬಹಳ ಕಲುಷಿತ ಆಗಿದೆ. ಕಾಲ ಕೆಟ್ಟಿದೆ, ಸದನದ ಗೌರವ ಹೋಗಿ ಬಹಳ ದಿನ ಆಗಿದೆ. ಚುನಾವಣೆಯಲ್ಲಿ ಸೋಲಿಸೋಕೆ ಆಗಿದಿದ್ರೆ ಈ ತರಹ ಟಾರ್ಗೆಟ್ ಮಾಡೋದು ಸರಿಯಲ್ಲ. ಇದೆಲ್ಲ ದುರ್ದೈವ. ಇತ್ತಿಚೆಗೆ ಸದನದಲ್ಲಿ ನಡೆದ ಬೆಳವಣಿಗೆ ನನ್ನ ಮನಸಿಗೆ ಬೇಸರ ತರಿಸಿದೆ. ಈ ಸಭಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವುದು ಸೂಕ್ತವಲ್ಲ ಎಂಬ ಭಾವನೆ ಬಂದಿದೆ. ಸದನದಲ್ಲಿ ನಡೆದ ಬೆಳವಣಿಗೆ ನಿಯಂತ್ರಿಸುವಲ್ಲಿ ನಾನು ವಿಫಲವಾಗಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ತುಮಕೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಶೀತಲ ಸಮರ; ಡಾ.ರಂಗನಾಥ್-ರಾಜಣ್ಣ ಕುಟುಂಬ ನಡುವೆ ವಾರ್

    ಮೇಲೆಮನೆ ಚಿಂತಕರ ಛವಾಡಿ ಎಂದು ಕರೆಯುತ್ತೇವೆ. ಆದರೆ ಸದನದಲ್ಲಿ ಪ್ಲೇಕಾರ್ಡ್ ಹಿಡಿದು ಬಂದ್ರು, ಘೋಷಣೆ ಕೂಗಿದರು. ಗದ್ದಲದಲ್ಲಿ ಕೆಲ ಬಿಲ್‌ಗಳು ಪಾಸ್ ಆಗಿವೆ. ಏನೂ ಚರ್ಚೆಯೇ ಆಗದೆ ಬಿಲ್ ಪಾಸ್ ಆಗುತ್ತಿವೆ. ಮುಸ್ಲಿಂ ಮೀಸಲಾತಿ ವಿಚಾರದ ಬಗ್ಗೆ ಸಣ್ಣದೊಂದು ಚರ್ಚೆ ಆಗಿದ್ದು ಬಿಟ್ಟರೆ, ಯಾವುದೇ ಬಿಲ್ ಬಗ್ಗೆ ಚರ್ಚೆಯೇ ಆಗಲಿಲ್ಲ. ಇನ್ನೂ ನಾನು ಸದನದಲ್ಲಿ ಇದ್ದು ಏನು ಪ್ರಯೋಜನ? ಹುದ್ದೆಗೆ ಘನತೆ ಗೌರವ ಇಲ್ಲದಿದ್ದ ಮೇಲೆ ಅಲ್ಲಿ ಇರಬಾರದು ಎಂದು ತೀರ್ಮಾನಕ್ಕೆ ಬಂದಿದ್ದೇನೆ ಎಂದು ಅತ್ಯಂತ ಭಾವುಕರಾಗಿ ಮಾತನಾಡಿದ್ದರು. ಇದನ್ನೂ ಓದಿ: ಶಿರಸಿ: ತ್ಯಾಜ್ಯ ವಿಲೇವಾರಿ ಘಟಕಕ್ಕೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ

    ಸಭಾಪತಿ ಹುದ್ದೆಗೆ ಬಸವರಾಜ ಹೊರಟ್ಟಿ ರಾಜೀನಾಮೆ ಹೇಳಿಕೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಫೇಕ್ ರಾಜೀನಾಮೆ ಪತ್ರ ವೈರಲ್ ಆಗಿದೆ. ಬಸವರಾಜ ಹೊರಟ್ಟಿ ಲೆಟರ್ ಹೆಡ್‌ನಲ್ಲಿ ರಾಜೀನಾಮೆಯ ನಕಲಿ ಪತ್ರ ವೈರಲ್ ಆಗಿತ್ತು. ಆದರೆ ಇದು ಸುಳ್ಳು ಎಂದು ಹೊರಟ್ಟಿ ಕಚೇರಿಯ ಸಿಬ್ಬಂದಿ ವರ್ಗ ‘ಪಬ್ಲಿಕ್ ಟಿವಿ’ಗೆ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: IPL 2025: ಗಾಯಕ್ವಾಡ್‌, ರಚಿನ್‌ ಫಿಫ್ಟಿ ಆಟ – ಮುಂಬೈ ವಿರುದ್ಧ ಚೆನ್ನೈಗೆ 4 ವಿಕೆಟ್‌ಗಳ ಜಯ

  • ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನಸೇವೆ – ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನಸೇವೆ – ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ/ಬೆಂಗಳೂರು: ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ (Hubballi) ರಾಜಧಾನಿ ಬೆಂಗಳೂರಿಗೆ (Bengaluru) ಸಂಪರ್ಕ ಕಲ್ಪಿಸಲು ಮತ್ತೊಂದು ವಿಮಾನಯಾನ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ತಿಳಿಸಿದರು.

    ಭಾನುವಾರ ಇಂಡಿಗೋ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಈ ಸೇವೆ ಆರಂಭಿಸುವ ಕುರಿತು ನಿರ್ಣಯ ಕೈಗೊಂಡಿದ್ದಾರೆ. ಮಾ.30 ವಿಮಾನಯಾನ ಪ್ರಾರಂಭವಾಗಲಿದ್ದು, ಈ ಮೂಲಕ ದಿನಕ್ಕೆ ಮೂರು ವಿಮಾನಗಳು ಬೆಂಗಳೂರು ಮತ್ತು ಹುಬ್ಬಳ್ಳಿ ಮಧ್ಯ ಸಂಚರಿಸಲಿವೆ.ಇದನ್ನೂ ಓದಿ: ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಸಂವಿಧಾನ ಬಾಹಿರ – ದತ್ತಾತ್ರೇಯ ಹೊಸಬಾಳೆ

    ಯಾವ್ಯಾವ ವಿಮಾನಗಳು ಸಂಚರಿಸಲಿವೆ?
    ಬೆಂಗಳೂರು – ಹುಬ್ಬಳ್ಳಿ 6E7056 ಬೆಳಿಗ್ಗೆ 9:55 – ಬೆಳಿಗ್ಗೆ 11:20
    ಹುಬ್ಬಳ್ಳಿ- ಬೆಂಗಳೂರು 6E7263 ಬೆಳಿಗ್ಗೆ 11:55 – ಮಧ್ಯಾಹ್ನ 1:20

    ಹುಬ್ಬಳ್ಳಿ – ಬೆಂಗಳೂರು ನಡುವೆ ಮತ್ತೊಂದು ವಿಮಾನಸೇವೆಗೆ ಅವಕಾಶ ಕಲ್ಪಿಸಿದ್ದಕ್ಕಾಗಿ ಸಚಿವರು ಇಂಡಿಗೋ (Indigo) ಆಡಳಿತ ವರ್ಗಕ್ಕೆ ಧನ್ಯವಾದ ತಿಳಿಸಿದ್ದಾರೆ. ಇದೇ ಸಮಯದಲ್ಲಿ ಹುಬ್ಬಳ್ಳಿ ಮತ್ತು ಅಹ್ಮದಾಬಾದ್ (Ahmedabad) ನಡುವೆ ವಿಮಾನಯಾನ ಆರಂಭಿಸುವಂತೆ ಇಂಡಿಗೋ ಅಧಿಕಾರಿಗಳಲ್ಲಿ ವಿನಂತಿಸಿದ್ದಾರೆ.

    ಈ ಸೇವೆಯಿಂದ ಹುಬ್ಬಳ್ಳಿ – ಧಾರವಾಡ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಬೆಂಗಳೂರಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ನಟಿ ರಮೋಲ ಒಂದು ದಿನದ ಖರ್ಚು ಕೇಳಿದ್ರೆ ಶಾಕ್ ಆಗ್ತೀರಾ!

  • ಯಶವಂತಪುರ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿ – ಕೆಲವು ರೈಲುಗಳ ಸಂಚಾರ ರದ್ದು, ಟರ್ಮಿನಲ್ & ಮಾರ್ಗ ಬದಲಾವಣೆ

    ಯಶವಂತಪುರ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿ – ಕೆಲವು ರೈಲುಗಳ ಸಂಚಾರ ರದ್ದು, ಟರ್ಮಿನಲ್ & ಮಾರ್ಗ ಬದಲಾವಣೆ

    ಹುಬ್ಬಳ್ಳಿ/ಬೆಂಗಳೂರು: ಯಶವಂತಪುರ ರೈಲು ನಿಲ್ದಾಣದಲ್ಲಿ (Yeshwanthpur) ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಅಲ್ಲದೆ ತಾತ್ಕಾಲಿಕವಾಗಿ ಕೆಲವು ರೈಲುಗಳನ್ನು ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೇ ಇಲಾಖೆ ವಿಭಾಗೀಯ ಕಚೇರಿ (South Western Railway Division) ಮಾಹಿತಿ ನೀಡಿದೆ.ಇದನ್ನೂ ಓದಿ: ಏಪ್ರಿಲ್ 1 ರಿಂದ ಮಾರುತಿ ಸುಝುಕಿ ಕಂಪನಿ ಕಾರುಗಳು ದುಬಾರಿ

    ಯಾವ್ಯಾವ ರೈಲುಗಳು ರದ್ದು?
    ಏ.4 – ರೈ.ಸಂಖ್ಯೆ 12291 ಯಶವಂತಪುರ-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್‌
    ಏ.5 – ರೈ.ಸಂಖ್ಯೆ 12292 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಯಶವಂತಪುರ ಎಕ್ಸ್‌ಪ್ರೆಸ್‌
    ಏ.4 – ರೈ.ಸಂಖ್ಯೆ 16573 ಯಶವಂತಪುರ-ಪುದುಚೇರಿ ಎಕ್ಸ್‌ಪ್ರೆಸ್‌
    ಏ.5 – ರೈ.ಸಂಖ್ಯೆ 16574 ಪುದುಚೇರಿ-ಯಶವಂತಪುರ ಎಕ್ಸ್‌ಪ್ರೆಸ್‌
    ಏ.5 – ರೈ.ಸಂಖ್ಯೆ 16577 ಯಶವಂತಪುರ-ಬೀದರ್ ಎಕ್ಸ್‌ಪ್ರೆಸ್‌
    ಏ.6 – ರೈ.ಸಂಖ್ಯೆ 16578 ಬೀದರ್-ಯಶವಂತಪುರ ಎಕ್ಸ್‌ಪ್ರೆಸ್‌
    ಏ.3 & ಏ.10 – ರೈಲು ಸಂಖ್ಯೆ 16541 ಯಶವಂತಪುರ-ಪಂಢರಪುರ ಎಕ್ಸ್‌ಪ್ರೆಸ್‌
    ಏ.4 & ಏ.11 – ರೈಲು ಸಂಖ್ಯೆ 16542 ಪಂಢರಪುರ-ಯಶವಂತಪುರ ಎಕ್ಸ್‌ಪ್ರೆಸ್‌

    ರೈಲುಗಳ ಟರ್ಮಿನಲ್ ಮತ್ತು ಮಾರ್ಗ ಬದಲಾವಣೆ:
    ರೈಲು ಸಂಖ್ಯೆ 16511/16512 ಕೆಎಸ್‌ಆರ್ ಬೆಂಗಳೂರು ಹಾಗೂ ಕಣ್ಣೂರು-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲುಗಳ ಟರ್ಮಿನಲ್ ಮತ್ತು ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.

    1. ರೈಲು ಸಂಖ್ಯೆ 16511 ಕೆಎಸ್‌ಆರ್ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್‌ ರೈಲು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ರಾತ್ರಿ 8:00 ಗಂಟೆಗೆ ಹೊರಟು, ಬಾಣಸವಾಡಿ, ಹೆಬ್ಬಾಳ ಮತ್ತು ಚಿಕ್ಕಬಾಣಾವರ ಮಾರ್ಗದ ಮೂಲಕ ಸಂಚರಿಸಲಿದೆ.

    2. ರೈಲು ಸಂಖ್ಯೆ 16512 ಕಣ್ಣೂರು-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಚಿಕ್ಕಬಾಣಾವರ, ಹೆಬ್ಬಾಳ, ಬಾಣಸವಾಡಿ ಮಾರ್ಗದ ಮೂಲಕ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ. ಈ ರೈಲು ಕೆಎಸ್‌ಆರ್ ಬೆಂಗಳೂರಿನ ಬದಲು ಎಸ್‌ಎಂವಿಟಿಯಲ್ಲಿ ತನ್ನ ಪ್ರಯಾಣವನ್ನು ಅಂತ್ಯಗೊಳಿಸಲಿದೆ. ಈ ರೈಲು ಬೆಳಿಗ್ಗೆ 07:45ಕ್ಕೆ ಎಸ್‌ಎಂವಿಟಿಯಿಂದ ಬೆಂಗಳೂರಿಗೆ ಆಗಮಿಸಲಿದೆ.ಇದನ್ನೂ ಓದಿ: ಮಮ್ಮುಟ್ಟಿ ಆರೋಗ್ಯವಾಗಿದ್ದಾರೆ: ಸುಳ್ಳು ವದಂತಿಗೆ ತೆರೆ ಎಳೆದ ಪಿ.ಆರ್‌ ಟೀಮ್

  • ರನ್ಯಾ ರಾವ್ ಕೇಸ್‌ನಲ್ಲಿ ಸರ್ಕಾರ ಯಾರನ್ನೋ ರಕ್ಷಣೆ ಮಾಡಲು ಪ್ರಯತ್ನ: ಪ್ರಹ್ಲಾದ್ ಜೋಶಿ

    ರನ್ಯಾ ರಾವ್ ಕೇಸ್‌ನಲ್ಲಿ ಸರ್ಕಾರ ಯಾರನ್ನೋ ರಕ್ಷಣೆ ಮಾಡಲು ಪ್ರಯತ್ನ: ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ರನ್ಯಾ ರಾವ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಿರ್ವಹಣೆ ನೋಡಿದರೆ ಯಾರನ್ನೋ ರಕ್ಷಣೆ ಮಾಡಲು ಪ್ರಯತ್ನ ಮಾಡುತ್ತಿದ್ದಂತೆ ಕಾಣುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಆರೋಪಿಸಿದ್ದಾರೆ.

    ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾಲು ಸಾಲಾಗಿ ಇಷ್ಟು ಆರೋಪಗಳು ಬರುತ್ತಿರುವುದು ನೋಡಿದರೆ ಇದರಲ್ಲಿ ರಾಜಕಾರಣಿಗಳು ಇರುವುದು ಸ್ಪಷ್ಟವಾಗುತ್ತಿದೆ. ಯಾರೋ ಮಂತ್ರಿಯನ್ನು ರಕ್ಷಣೆ ಮಾಡುವ ಕಾರ್ಯ ನಡೆದಿದೆ. ಇದು ದೇಶದ್ರೋಹದ ಕೆಲಸವಾಗಿದೆ. ಅಕ್ರಮವಾಗಿ ತಂದ ಬಂಗಾರ ಎಲ್ಲಿಗೆ ಹೋಗುತ್ತಿತ್ತು. ದೇಶದ್ರೋಹಿಗಳಿಗಾ, ನಕ್ಸಲ್‌ಗಳಿಗಾ, ಎಲ್ಲಿಗೆ ಹೋಗುತ್ತಿತ್ತು? ಇದರಲ್ಲಿ ಸರ್ಕಾರ ಯಾರನ್ನು ರಕ್ಷಣೆ ಮಾಡಲು ಹೊರಟಿದೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರ ಇದೆ ಎಂಬ ಅನುಮಾನವಿದೆ. ಡಿಐಜಿ ಮಗಳು ಇದ್ದಾರೆ ಎನ್ನುವ ಆರೋಪಯಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ಗುಜರಾತ್‌ ವಿರುದ್ಧ ಮುಂಬೈಗೆ 47 ರನ್‌ಗಳ ಭರ್ಜರಿ ಜಯ – ಶನಿವಾರ ಡೆಲ್ಲಿ ವಿರುದ್ಧ ಫೈನಲ್‌

    ಸಿಐಡಿಗೆ ತನಿಖೆಗೆ ಯಾಕೆ ನೀಡಿದರು. ಒಬ್ಬ ಡಿಐಜಿಯನ್ನು ಒಬ್ಬ ಸಿಐಡಿ ಎಸ್ಪಿ ತನಿಖೆ ಮಾಡಲು ಆಗುತ್ತಾ? ಗೃಹ ಸಚಿವ ಪರಮೇಶ್ವರ ಅವರೇ ಯಾರದ್ದೋ ಒತ್ತಡದಿಂದ ಹೇಳಿಕೆ ನೀಡಬೇಡಿ ಎಂದಿದ್ದಾರೆ. ಇನ್ನೂ ಧರ್ಮಾಧಾರಿತ ಮೀಸಲಾತಿ ಒಪ್ಪಲು ಸಾಧ್ಯವಿಲ್ಲ. ಈ ಬಗ್ಗೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ನಾವು ಈ ಬಗ್ಗೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮರಾಠಿಯಲ್ಲಿ ಮಾತನಾಡುವಂತೆ ಪಿಡಿಓಗೆ ಧಮ್ಕಿ – ಆರೋಪಿ ಹಿಂಡಲಗಾ ಜೈಲಿಗೆ

    ಯಾವ ಜಮೀರ್ ಅಹ್ಮದ್ ಹೇಳಿದ್ರೂ ಆಗಲ್ಲ. ಈ ಹಿಂದೆ ಜಮೀರ್ ನೀಡಿದ್ದ ಒಂದು ಹೇಳಿಕೆ ಏನಾಗಿದೆ ಗೊತ್ತು ಎಷ್ಟು ಆತ್ಮಹತ್ಯೆಗಳಾಗಿವೆ. 40 ಪರ್ಸೆಂಟ್ ಕಮಿಷನ್ ತನಿಖೆ ನ್ಯಾಯಯುತವಾಗಿ ಆಗಬೇಕು. ರಿಪೋರ್ಟ್ ಮಂಡಿಸಿ, ನೀವು ಯಾರಿಗೆ ನೋಟಿಸ್ ಕೊಟ್ಟಿದೀರಿ ನಮಗೆ ಗೊತ್ತಿರುವ ಹಾಗೆ ಯಾರಿಗೂ ನೋಟಿಸ್ ಕೊಟ್ಟಿಲ್ಲ. ಆರೋಪ ಬಂದವರಿಗೆ ನೋಟಿಸ್ ಕೊಟ್ಟಿಲ್ಲ. ಮೊದಲು ನೋಟಿಸ್ ಕೊಡಿ ನೋಟಿಸ್ ಬಂದ ಮೇಲೆ ನಾವು ಉತ್ತರ ಕೊಡುತ್ತೇವೆ. ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ ಎಂದಿದ್ದಾರೆ. ಇದನ್ನೂ ಓದಿ: ಪ್ರತ್ಯೇಕ ಕರಾವಳಿಯ ಕೂಗು ಎಬ್ಬಿಸಿದ ಪೂಂಜಾ

  • ಸಿಲಿಂಡರ್ ಸ್ಫೋಟ ಪ್ರಕರಣ – ಗಾಯಾಳು ಸಾವು

    ಸಿಲಿಂಡರ್ ಸ್ಫೋಟ ಪ್ರಕರಣ – ಗಾಯಾಳು ಸಾವು

    ಹುಬ್ಬಳ್ಳಿ: ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

    ರಾಜಸ್ಥಾನ (Rajasthan) ಜೋಧ್‌ಪುರದ (Jodhpur) ಸುಭಾಶ್ ಮೋಹನರಾಮ್ (26) ಮೃತ ದುರ್ದೈವಿ. ಹುಬ್ಬಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶದ ಫಾರ್ಮ್‌ಹೌಸ್‌ನಲ್ಲಿ ಅಡುಗೆ ಅನಿಲ ಸೋರಿಕೆಯಿಂದಾದ ಸ್ಫೋಟದಲ್ಲಿ ಸುಭಾಶ್ ಗಂಭೀರ ಗಾಯಗೊಂಡಿದ್ದರು. ಇದನ್ನೂ ಓದಿ: ತುಮಕೂರು | ಮನೆ ಮುಂದಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ – ಭಯಭೀತರಾದ ಗ್ರಾಮಸ್ಥರು

    ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಭಾಶ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

    ಘಟನೆಯಲ್ಲಿ ಗಾಯಗೊಂಡಿದ್ದ ಇನ್ನಿಬ್ಬರನ್ನು ಸುಭಾಶ್ ಕಡೆಯವರು ರಾಜಸ್ಥಾನದ ತಮ್ಮ ಊರಿಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಜನ ಸಾಮಾನ್ಯರ ಬಳಿ ಫಟಾಫಟ್ ವಸೂಲಿ – ಸರ್ಕಾರಿ ಇಲಾಖೆಗಳಿಂದಲೇ 8,000 ಕೋಟಿ ವಿದ್ಯುತ್‌ ಬಿಲ್‌ ಬಾಕಿ!