Tag: ಹುಲಿಗೆಮ್ಮ ದೇವಸ್ಥಾನ

  • ಕೊಪ್ಪಳ ಹುಲಿಗೆಮ್ಮ ಪಾದಯಾತ್ರಿಕರ ಮೇಲೆ ಹರಿದ ಬಸ್‌ – ಮೂವರು ಸಾವು, ನಾಲ್ವರಿಗೆ ಗಾಯ

    ಕೊಪ್ಪಳ ಹುಲಿಗೆಮ್ಮ ಪಾದಯಾತ್ರಿಕರ ಮೇಲೆ ಹರಿದ ಬಸ್‌ – ಮೂವರು ಸಾವು, ನಾಲ್ವರಿಗೆ ಗಾಯ

    ಕೊಪ್ಪಳ: ಹುಲಿಗೆಮ್ಮ ದೇವಸ್ಥಾನದ (Huligemma Devi Temple) ಪಾದಯಾತ್ರೆಗೆ ಹೊರಟಿದ್ದರ ಮೇಲೆ ಖಾಸಗಿ ಬಸ್‌ (Private Bus) ಹರಿದು ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ಕೂಕನಪಳ್ಳಿ ಗ್ರಾಮದ ರಾ.ಹೆ. 50 ರಲ್ಲಿ ನಡೆದಿದೆ.

    ಅನ್ನಪೂರ್ಣ(40),ಪ್ರಕಾಶ್(25), ಶರಣಪ್ಪ(19) ಮೃತರು. ಸಿಂದಗಿಯಿಂದ ಬೆಂಗಳೂರಿಗೆ (Bengaluru) ತೆರಳುತ್ತಿದ್ದ ಖಾಸಗಿ ಸ್ಲೀಪರ್‌ ಕೋಚ್‌ ಬಸ್‌ ಹರಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.  ಇದನ್ನೂ ಓದಿ: ಮೌಂಟ್ ಎವರೆಸ್ಟ್‌ನಲ್ಲಿ ಭಾರಿ ಹಿಮಪಾತ 1,000 ಜನ ಸಿಲುಕಿರುವ ಶಂಕೆ; 350 ಚಾರಣಿಗರ ರಕ್ಷಣೆ

    ಗದಗ ಜಿಲ್ಲೆಯ ರೋಣ ತಾಲೂಕಿನ ತಳ್ಳಿಹಾಳ ಗ್ರಾಮದ ಇವರು ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನಕ್ಕೆ ಶನಿವಾರ ಪಾದಯಾತ್ರೆಗೆ ಹೊರಟಿದ್ದರು. ಇನ್ನು ಕೇವಲ ಕೇವಲ 3 ಗಂಟೆ ಕಳೆದರೆ ಇವರು ದೇವಸ್ಥಾನ ತಲುಪುತ್ತಿದ್ದರು.

    ಪ್ರಾಣಾಪಾಯದಿಂದ ಪಾರಾದ ನಾಲ್ವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಡಾ ರಾಮ್ ಅರಸಿದ್ದಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮುನಿರಾಬಾದ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಖಾಸಗಿ ಬಸ್‌ ಚಾಲಕನನ್ನು ಬಂಧಿಸಿಲಾಗಿದೆ.

    ಬೈಕ್ ಡಿಕ್ಕಿಯಾಗಿ ಸಾವು: ಕುಕನೂರಿನಿಂದ ಹುಲಿಗೆಗೆ ಪಾದಯಾತ್ರೆ ಮಾಡುತ್ತಿದ್ದ ಯವಕನಿಗೆ ಬೈಕ್ ಡಿಕ್ಕಿಯಾಗಿ ಮೃತಪಟ್ಟ ಘಟನೆ ಭಾನಾಪುರ ಬಳಿ ರಾತ್ರಿ ನಡೆದಿದೆ.

    ಕುಕನೂರಿನ ವೀರೇಶ ಹಳ್ಳಿಕೇರಿ (28) ಮೃತಪಟ್ಟಿದ್ದಾರೆ. ಒಟ್ಟು 9 ಭಕ್ತರು ಪಾದಯಾತ್ರೆಗೆ ಹೊರಟ್ಟಿದ್ದರು. ಭಾನಾಪುರ ಬಳಿ ಬೈಕ್‌ ಡಿಕ್ಕಿಯಾಗಿ ವೀರೇಶನಿಗೆ ಗಂಭೀರ ಗಾಯವಾಗಿ ಮೃತಟ್ಟಿದ್ದಾರೆ.

     

  • ಹುಲಿಗೆಮ್ಮ ದೇವಸ್ಥಾನದ ಸುತ್ತಲು 144 ಸೆಕ್ಷನ್ ಜಾರಿ

    ಹುಲಿಗೆಮ್ಮ ದೇವಸ್ಥಾನದ ಸುತ್ತಲು 144 ಸೆಕ್ಷನ್ ಜಾರಿ

    ಕೊಪ್ಪಳ: ದಕ್ಷಿಣ ಭಾರತದ ಪ್ರಮುಖ ಯಾತ್ರಾ ಸ್ಥಳವಾಗಿರುವ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಿಯ ಸಾರ್ವಜನಿಕ ದರ್ಶನ ಈ ವಾರವು ಸ್ಥಗಿತಗೊಳಿಸಲಾಗಿದೆ. ಇಂದಿನಿಂದ ನಾಳೆ ಮಧ್ಯರಾತ್ರಿಯವರೆಗೂ ಹುಲಿಗೆಮ್ಮ ದೇವಸ್ಥಾನದ ಸುತ್ತಲು ಕಲಂ 144ರ ಅನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

    ಈ ಮಧ್ಯೆ ಲಾಕ್ ಡೌನ್ ನಿಂದಾಗಿ ದೇವಸ್ಥಾನಕ್ಕೆ ಮೂರು ತಿಂಗಳಲ್ಲಿ ಬರೋಬ್ಬರಿ 3 ಕೋಟಿ ರೂಪಾಯಿ ಆದಾಯಕ್ಕೆ ಖೋತಾ ಬಿದ್ದಿದೆ. ಕರ್ನಾಟಕ, ಮಹಾರಾಷ್ಟ್ರ, ಆಂಧ್ರ ಹಾಗೂ ತೆಲಂಗಾಣದ ಲಕ್ಷಾಂತರ ಭಕ್ತರನ್ನು ಹೊಂದಿರುವ ಕೊಪ್ಪಳ ಜಿಲ್ಲೆಯ ತುಂಗಭದ್ರಾ ತಟದಲ್ಲಿರುವ ಹುಲಿಗಿಯ ಹುಲಿಗೆಮ್ಮ ದೇವಸ್ಥಾನವು ಏಪ್ರಿಲ್ 24 ರಿಂದ ಭಕ್ತರಿಗೆ ದೇವಿ ದರ್ಶನ ಬಂದ್ ಮಾಡಲಾಗಿದೆ.

    ಪ್ರತಿ ಹುಣ್ಣಿಮೆ ಹಾಗೂ ಮಂಗಳವಾರ, ಶುಕ್ರವಾರ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕಾಗಿ ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ಸಂಜೆಯಿಂದ ಮಂಗಳವಾರ ರಾತ್ರಿ 12 ಗಂಟೆಯವರೆಗೂ ದೇವಸ್ಥಾನದಿಂದ 2 ಕಿ.ಮೀ ದೂರದವರೆಗೂ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಭಕ್ತರು ದೇವಿಯ ದರ್ಶನಕ್ಕೆ ಹುಲಿಗಿಗೆ ಬಾರದಂತೆ ಸೂಚನೆ ನೀಡಿ ಸಹಾಯಕ ಆಯುಕ್ತ ನಾರಾಯಣ ಕನಕರಡ್ಡಿ ಆದೇಶ ಹೊರಡಿಸಿದ್ದಾರೆ.

    ಪ್ರತಿ ತಿಂಗಳ ಒಂದು ಕೋಟಿ ರೂಪಾಯಿಗೂ ಅಧಿಕ ಆದಾಯ ಹೊಂದಿರುವ ಹುಲಿಗೆಮ್ಮ ದೇವಸ್ಥಾನದಲ್ಲಿ ಈ ಮೂರು ತಿಂಗಳಲ್ಲಿ ಬರೋಬ್ಬರಿ 3 ಕೋಟಿ ರೂಪಾಯಿಗೂ ಅಧಿಕ ಆದಾಯ ನಷ್ಟವಾಗಿದೆ. ಕಳೆದ ತಿಂಗಳು ಮೇ 1 ರಿಂದ ಮೂರು ದಿನಗಳ ಕಾಲ ದೇವಿಯ ಜಾತ್ರೆ ನಡೆಯಬೇಕಿತ್ತು, ಆದರೆ ಕೊರೊನಾ ಲಾಕ್ ಡೌನ್ ನಿಂದಾಗಿ ಜಾತ್ರೆಯನ್ನು ದೇವಸ್ಥಾನದ ಆವರಣದಲ್ಲಿ ಸಂಪ್ರಾದಾಯಕವಾಗಿ ಆಚರಿಸಲಾಯಿತು. ಜಾತ್ರೆಯ ಮೂರು ದಿನಗಳಲ್ಲಿಯೇ ಸರಿಸುಮಾರು ಒಂದು ಕೋಟಿ ಆದಾಯ ಬರುತ್ತಿತ್ತು, ಆದರೆ ಈ ಬಾರಿ ಜಾತ್ರೆ ಇಲ್ಲದೆ ಆದಾಯ ಬಂದಿಲ್ಲ, ಕಳೆದ ಬಾರಿಯೂ ಜಾತ್ರೆಯ ಸಂದರ್ಭದಲ್ಲಿ ಲಾಕ್ ಡೌನ್ ಆಗಿ ಆಗಲೂ ಆದಾಯಕ್ಕೆ ಖೋತಾ ಬಿದ್ದಿತ್ತು. ನವೆಂಬರ್ ತಿಂಗಳಿನಿಂದ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ ನೀಡಿದ್ದರಿಂದ ಮೂರೂವರೆ ತಿಂಗಳಲ್ಲಿ 4 ಕೋಟಿ ರೂಪಾಯಿ ಆದಾಯ ಬಂದಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕಾಧಿಕಾರಿ ಅರವಿಂದ ಸುತಗಟ್ಟಿ ತಿಳಿಸಿದ್ದಾರೆ.

    ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಆದಾಯವಿರಲಿಲ್ಲಕ್ಕಿಲ್ಲ, ಆದರೆ ಜನರು ಆರೋಗ್ಯವಾಗಿರಬೇಕು, ಸರ್ಕಾರ ಹಾಗೂ ಜಿಲ್ಲಾಡಳಿತದ ಸೂಚನೆಯನ್ನು ಪಾಲಿಸಿಕೊಳ್ಳಬೇಕೆಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ನೆಟ್‍ವರ್ಕ್ ಸಮಸ್ಯೆ – ಆನ್‍ಲೈನ್ ಶಿಕ್ಷಣ ಪಡೆಯಲಾಗದೇ ವಿದ್ಯಾರ್ಥಿಗಳ ಪರದಾಟ