ಚಾಮರಾಜನಗರ: ಹುಲಿ ಉಗುರು (Tiger Claws) ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿರುವ ಘಟನೆ ಚಾಮರಾಜನಗರ (Chamarajanagara) ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ. ಇದನ್ನೂ ಓದಿ: ಇಬ್ಬರು ಯುವಕರಿಂದ ಅಂಗಾಂಗ ದಾನ – 6 ಜನರಿಗೆ ಮರುಜನ್ಮ!
ಹುಲಿ ಉಗುರು (Tiger Claw) ವಿಷಯಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಅವರು ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ನಿಂದಿಸಿದ್ದಾರೆ ಎನ್ನುವ ಕಾರಣಕ್ಕಾಗಿ ಜಗ್ಗೇಶ್ ವಿರುದ್ಧ ವರ್ತೂರು ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಜಗ್ಗೇಶ್ ಅವರನ್ನು ನಿಂದಿಸುವಂತಹ ಕೆಲಸಕ್ಕೆ ಮುಂದಾಗಿದ್ದಾರೆ. ಜಗ್ಗೇಶ್ ಮನೆಗೆ ಮುತ್ತಿಗೆ ಹಾಕುವ ಬೆದರಿಕೆಯನ್ನೂ ಹಾಕಿದ್ದಾರೆ. ಹಾಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಜಗ್ಗೇಶ್ ದೂರು ನೀಡಿದ್ದಾರೆ.
ರಂಗನಾಯಕ ಸಿನಿಮಾದ ಹಾಡು ಬಿಡುಗಡೆ ಸಮಾರಂಭದಲ್ಲಿ ರಿಯಲ್ ಹುಲಿ ಉಗುರು ಪೆಂಡೆಂಟ್ ಧರಿಸಿದ್ದಕ್ಕಾಗಿ ವರ್ತೂರು ಸಂತೋಷ್‌ಗೆ ಜಗ್ಗೇಶ್ (Jaggesh) ‘ಕಿತ್ತೋದ್ ನನ್ಮಗ’ ಎಂದು ಅಸಮಾಧಾನ ಹೊರಹಾಕಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ‘ಬಿಗ್ ಬಾಸ್ ಕನ್ನಡ 10’ರ ಸ್ಪರ್ಧಿ (Bigg Boss Kannada 10) ವರ್ತೂರು ಸಂತೋಷ್ (Varthur Santhosh) ಗಮನಕ್ಕೂ ಬಂದಿದೆ. ಜಗ್ಗೇಶ್ ಮಾತಿಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಬಿಡಿ ಅವರು ದೊಡ್ಡವರು. ನಾನು ಹೇಳುವುದು ಇಷ್ಟೆ, ಕಾಲಾಯ ತಸ್ಮೈ ನಮಃ ಅಷ್ಟೆ. ಎಲ್ಲದಕ್ಕೂ ಉತ್ತರ ಕೊಡಲೇ ಬೇಕು ಅಂತೇನೂ ಇಲ್ಲ. ಕೆಲವೊಂದಕ್ಕೆ ಉತ್ತರ ಕೊಡಬೇಕು. ಕೆಲವೊಂದಕ್ಕೆ ಮೌನವಾಗಿದ್ದರೆ ಸಾಕು ಉತ್ತರ ಸಿಗುತ್ತದೆ ಎಂದು ಜಗ್ಗೇಶ್ ಮಾತಿಗೆ ವರ್ತೂರು ಉತ್ತರ ನೀಡಿದ್ದಾರೆ. ಬಳಿಕ ಸುದೀಪಣ್ಣನ ಬಳಿ ನಾನು ಕೆಲವೊಂದು ವಿಚಾರಗಳನ್ನು ಕಲಿತಿದ್ದೀನಿ. ಸುದೀಪಣ್ಣ ಸದಾ ಒಂದು ಮಾತು ಹೇಳ್ತಾರೆ. ವರ್ತೂರು ಅವರೇ ಎಲ್ಲಾ ಜಾಗದಲ್ಲೂ ಮಾತನಾಡಬೇಕು ಅಂತಿಲ್ಲ. ಕೆಲವೊಮ್ಮೆ ಮಾತನಾಡದೇ ಸುಮ್ಮನಿದ್ದರೆ ಆ ಸೈಲೆಂಟ್ ಉತ್ತರ ಕೊಡುತ್ತೆ ಅಂತ. ತೂಕದ ಜೊತೆ ತೂಕವನ್ನು ಅಳೆಯಬೇಕಾದರೆ ತೂಕಕ್ಕೆ ತೂಕ ಸರಿ ಇರಬೇಕು ಎಂದು ಮಾತನಾಡಿದ್ದಾರೆ.
‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನಾನು ಹುಲಿ ತರ ಬದುಕಬೇಕು ಅಂತ ನನ್ನ ತಾಯಿ ಹುಲಿ ಉಗುರನ್ನು ಕೊಟ್ಟಳು. ಆದರೆ ಯಾವನೋ ಕಿತ್ತೋದ್ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡು, ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ ಬಳಿಕ ದೊಡ್ಡ ಸುದ್ದಿ ಆಯಿತು ಎಂದು ಜಗ್ಗೇಶ್ ಮಾತನಾಡಿದ್ದರು.
ಸಂತೋಷ್ ಬಗ್ಗೆ ಜಗ್ಗೇಶ್ ಈ ರೀತಿ ಹೇಳಿದ್ದಾರೆ, ಜಗ್ಗೇಶ್ ಅಂತಹವರು ‘ಕಿತ್ತೋದ್ ನನ್ಮಗ’ ಎಂಬ ಪದ ಬಳಕೆ ಮಾಡಿದ್ದು ಸರಿಯಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಹಿರಿಯ ನಟ ಜಗ್ಗೇಶ್ ಬಗ್ಗೆ ಪರ ಮತ್ತು ವಿರೋಧವಾಗಿ ಚರ್ಚೆ ಶುರುವಾಗಿತ್ತು.
ಮೂರು ತಿಂಗಳ ಹಿಂದೆ ವರ್ತೂರು ಸಂತೋಷ್ ಬಿಗ್ ಬಾಸ್ ಮನೆಗೆ ಕಾಲಿಟ್ಟಾಗ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು. ಅದರಿಂದ ಜೈಲಿಗೆ ಕೂಡ ಹೋಗಿದ್ದರು. ಆನಂತರ ಜಾಮೀನು ಪಡೆದು ಮತ್ತೆ ಬಿಗ್ ಬಾಸ್‌ಗೆ ಎಂಟ್ರಿ ಕೊಟ್ಟಿದ್ದರು. ಆ ಸಂದರ್ಭದಲ್ಲಿ ಅನೇಕರಿಗೆ ಸಂಕಷ್ಟ ಎದುರಾಗಿತ್ತು. ಹುಲಿ ಉಗುರಿನ ವಿವಾದ ಜಗ್ಗೇಶ್ ಅವರಿಗೂ ಬಿಸಿ ಮುಟ್ಟಿಸಿತ್ತು.
ಹುಲಿ ಉಗುರು ಪೆಂಡೆಂಟ್ ಗೆ ಸಂಬಂಧಿಸಿದಂತೆ ಜಗ್ಗೇಶ್ ಆಡಲಾದ ಮಾತಿಗೆ ಕ್ಷಮೆ ಕೇಳಬೇಕು ಎಂದು ವರ್ತೂರು ಸಂತೋಷ್ ಪರ ಆಪ್ತರು ಆಗ್ರಹಿಸಿದ್ದಾರೆ. ಜಗ್ಗೇಶ್ ಕ್ಷಮೆ ಕೇಳದೇ ಇದ್ದರೆ, ಅವರ ಮನೆಗೆ ಮುತ್ತಿಗೆ ಹಾಕುವುದಾಗಿ ಆಪ್ತರು ವಿಡಿಯೋ ಹರಿಬಿಟ್ಟಿದ್ದಾರೆ. ಅಲ್ಲಿಗೆ ಹುಲಿ ಉಗುರು ಮತ್ತೊಂದು ಬಾರಿ ಸದ್ದು ಮಾಡುತ್ತಿದೆ.
ರಿಯಲ್ ಹುಲಿ ಉಗುರು ಪೆಂಡೆಂಟ್ ಧರಿಸಿದ್ದಕ್ಕಾಗಿ ವರ್ತೂರು ಸಂತೋಷ್‌ಗೆ ಜಗ್ಗೇಶ್ (Jaggesh) ‘ಕಿತ್ತೋದ್ ನನ್ಮಗ’ ಎಂದು ಅಸಮಾಧಾನ ಹೊರಹಾಕಿದ್ದರು. ಈ ವಿಚಾರ ‘ಬಿಗ್ ಬಾಸ್ ಕನ್ನಡ 10’ರ ಸ್ಪರ್ಧಿ (Bigg Boss Kannada 10) ವರ್ತೂರು ಸಂತೋಷ್ (Varthur Santhosh) ಗಮನಕ್ಕೂ ಬಂದಿದೆ. ಜಗ್ಗೇಶ್ ಮಾತಿಗೆ ಅವರು ಪ್ರತಿಕ್ರಿಯೆ ಕೂಡ ನೀಡಿದ್ದಾರೆ.
ಬಿಡಿ ಅವರು ದೊಡ್ಡವರು. ನಾನು ಹೇಳುವುದು ಇಷ್ಟೆ, ಕಾಲಾಯ ತಸ್ಮೈ ನಮಃ ಅಷ್ಟೆ. ಎಲ್ಲದಕ್ಕೂ ಉತ್ತರ ಕೊಡಲೇ ಬೇಕು ಅಂತೇನೂ ಇಲ್ಲ. ಕೆಲವೊಂದಕ್ಕೆ ಉತ್ತರ ಕೊಡಬೇಕು. ಕೆಲವೊಂದಕ್ಕೆ ಮೌನವಾಗಿದ್ದರೆ ಸಾಕು ಉತ್ತರ ಸಿಗುತ್ತದೆ ಎಂದು ಜಗ್ಗೇಶ್ ಮಾತಿಗೆ ವರ್ತೂರು ಉತ್ತರ ನೀಡಿದ್ದಾರೆ.
ಬಳಿಕ ಸುದೀಪಣ್ಣನ ಬಳಿ ನಾನು ಕೆಲವೊಂದು ವಿಚಾರಗಳನ್ನು ಕಲಿತಿದ್ದೀನಿ. ಸುದೀಪಣ್ಣ ಸದಾ ಒಂದು ಮಾತು ಹೇಳ್ತಾರೆ. ವರ್ತೂರು ಅವರೇ ಎಲ್ಲಾ ಜಾಗದಲ್ಲೂ ಮಾತನಾಡಬೇಕು ಅಂತಿಲ್ಲ. ಕೆಲವೊಮ್ಮೆ ಮಾತನಾಡದೇ ಸುಮ್ಮನಿದ್ದರೆ ಆ ಸೈಲೆಂಟ್ ಉತ್ತರ ಕೊಡುತ್ತೆ ಅಂತ. ತೂಕದ ಜೊತೆ ತೂಕವನ್ನು ಅಳೆಯಬೇಕಾದರೆ ತೂಕಕ್ಕೆ ತೂಕ ಸರಿ ಇರಬೇಕು ಎಂದು ಮಾತನಾಡಿದ್ದಾರೆ.
‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನಾನು ಹುಲಿ ತರ ಬದುಕಬೇಕು ಅಂತ ನನ್ನ ತಾಯಿ ಹುಲಿ ಉಗುರನ್ನು ಕೊಟ್ಟಳು. ಆದರೆ ಯಾವನೋ ಕಿತ್ತೋದ್ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡು, ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ ಬಳಿಕ ದೊಡ್ಡ ಸುದ್ದಿ ಆಯಿತು ಎಂದು ಜಗ್ಗೇಶ್ ಮಾತನಾಡಿದ್ದರು.
ಸಂತೋಷ್ ಬಗ್ಗೆ ಜಗ್ಗೇಶ್ ಈ ರೀತಿ ಹೇಳಿದ್ದಾರೆ, ಜಗ್ಗೇಶ್ ಅಂತಹವರು ‘ಕಿತ್ತೋದ್ ನನ್ಮಗ’ ಎಂಬ ಪದ ಬಳಕೆ ಮಾಡಿದ್ದು ಸರಿಯಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಹಿರಿಯ ನಟ ಜಗ್ಗೇಶ್ ಬಗ್ಗೆ ಪರ ಮತ್ತು ವಿರೋಧವಾಗಿ ಚರ್ಚೆ ಶುರುವಾಗಿತ್ತು.
ಮೂರು ತಿಂಗಳ ಹಿಂದೆ ವರ್ತೂರು ಸಂತೋಷ್ ಬಿಗ್ ಬಾಸ್ ಮನೆಗೆ ಕಾಲಿಟ್ಟಾಗ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು. ಅದರಿಂದ ಜೈಲಿಗೆ ಕೂಡ ಹೋಗಿದ್ದರು. ಆನಂತರ ಜಾಮೀನು ಪಡೆದು ಮತ್ತೆ ಬಿಗ್ ಬಾಸ್‌ಗೆ ಎಂಟ್ರಿ ಕೊಟ್ಟಿದ್ದರು. ಆ ಸಂದರ್ಭದಲ್ಲಿ ಅನೇಕರಿಗೆ ಸಂಕಷ್ಟ ಎದುರಾಗಿತ್ತು. ಹುಲಿ ಉಗುರಿನ ವಿವಾದ ಜಗ್ಗೇಶ್ ಅವರಿಗೂ ಬಿಸಿ ಮುಟ್ಟಿಸಿತ್ತು.
ಬಿಗ್ ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ ಹುಲಿ ಉಗುರು (Tiger Claw) ಚೈನ್ ಹಾಕಿಕೊಂಡು ಹೋಗಿದ್ದು ಭಾರೀ ಸದ್ದು ಮಾಡಿತ್ತು. ಹುಲಿ ಉಗುರಿನ ಪೆಂಡೆಂಟ್ ಧರಿಸೋದು ಕಾನೂನು ಅಡಿಯಲ್ಲಿ ಶಿಕ್ಷಾರ್ಹಪರಾಧ ಎಂದು ಗೊತ್ತಿದ್ದರೂ, ಹೀಗೆ ಸಂತೋಷ್ ಹಾಕಿಕೊಂಡಿದ್ದು ದೊಡ್ಡ ಚರ್ಚೆಯನ್ನೇ ಹುಟ್ಟು ಹಾಕಿತ್ತು. ವರ್ತೂರು ಜೈಲಿಗೆ ಹೋಗುತ್ತಿದ್ದಂತೆಯೇ ಸಾಕಷ್ಟು ಸೆಲೆಬ್ರಿಟಿಗಳು ಕೂಡ ಈ ಹುಲಿ ಉಗುರಿನ ಚೈನು ಧರಿಸಿರೋದು ಬೆಳಕಿಗೆ ಬಂದಿತ್ತು. ಅದರಲ್ಲಿ ಜಗ್ಗೇಶ್ ಕೂಡ ಒಬ್ಬರು.
ಹಿರಿಯ ನಟ ಜಗ್ಗೇಶ್ (Jaggesh), ಯುವ ರಾಜಕಾರಣಿ ಮತ್ತು ನಟ ನಿಖಿಲ್ ಕುಮಾರಸ್ವಾಮಿ, ನಟ ದರ್ಶನ್, ಆರ್ಯವರ್ಧನ್ ಗುರೂಜಿ, ನಟಿ ಅಮೂಲ್ಯ ಮಕ್ಕಳು ಹೀಗೆ ಅನೇಕರು ಹುಲಿ ಉಗುರಿನ ಪೆಂಡೆಂಟ್ ಧರಿಸಿ ಸಂಕಷ್ಟಕ್ಕೆ ಸಿಲುಕಿದ್ದರು. ಅದರಲ್ಲೂ ಜಗ್ಗೇಶ್ ಈ ಪ್ರಕರಣದಲ್ಲಿ ಇನ್ನೇನು ಬಂಧನವಾಗುತ್ತಾರೆ ಅಂತೆಲ್ಲ ಸುದ್ದಿ ಬಂದಿತ್ತು.
ಇಂತಹ ಸುದ್ದಿಯಿಂದ ಬೇಸತ್ತಿದ್ದ ಜಗ್ಗೇಶ್, ಮಾಧ್ಯಮಗಳಲ್ಲಿ ಸುದ್ದಿ ಬಾರದಂತೆ ತಡೆಗಟ್ಟುವುದಾಗಿ ಕೋರ್ಟ್ ಮೆಟ್ಟಿಲು ಏರಿದ್ದರು. ಇದಕ್ಕೆ ಸಹಾಯ ಮಾಡಿದ್ದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar). ಈ ವಿಷಯವನ್ನು ಸ್ವತಃ ಜಗ್ಗೇಶ್ ಅವರೇ ಹೇಳಿದ್ದಾರೆ. ರಂಗನಾಯಕ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ಇದನ್ನು ಬಹಿರಂಗ ಪಡಿಸಿದ್ದಾರೆ.
ಸುದ್ದಿಗಳ ಹಾವಳಿಯನ್ನು ತಡೆಯೋಕೆ ಆಗದೇ ನಾನು ಡಿ.ಕೆ.ಶಿವಕುಮಾರ್ ಅವರ ಮೊರೆ ಹೋದೆ. ಅವರು ಯಾರಿಗೆ ತಿಳಿಸಬೇಕೋ ತಿಳಿಸಿದರು. ಅಲ್ಲಿಗೆ ನಾನು ಬಚಾವ್ ಆದೆ ಎಂದು ಜಗ್ಗೇಶ್ ಹೇಳಿದ್ದಾರೆ. ಅನಿವಾರ್ಯವಾಗಿ ನಾನು ಕೋರ್ಟಿನಿಂದ ಸ್ಟೇ ತರಬೇಕಾಯಿತು ಎಂದು ಅವರು ಮಾತನಾಡಿದ್ದಾರೆ.
ಚಿಕ್ಕಬಳ್ಳಾಪುರ : ಜಿಲ್ಲೆಯ ಚಿಂತಾಮಣಿ (Chintamani) ತಾಲೂಕಿನ ಸೂಲದೇನಹಳ್ಳಿ ಗ್ರಾಮದ ಮನೆಯೊಂದರ ಮೇಲೆ ಪೊಲೀಸರು ದಾಳಿ (Police Raid) ಮಾಡಿ ಹುಲಿ ಉಗುರನ್ನು (Tiger Claw) ವಶಪಡಿಸಿಕೊಂಡಿದ್ದಾರೆ.
ಪತ್ತೆಯಾದ ವಸ್ತುವನ್ನು ಪೊಲೀಸರು ಅರಣ್ಯಾಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಚಿಂತಾಮಣಿ ವಲಯ ಅರಣ್ಯಾಧಿಕಾರಿ ಚಂದನ್ ಈಗ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ. ಪರಾರಿಯಾಗಿರುವ ನವೀನ್‌ಗಾಗಿ ಅರಣ್ಯಾಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.
ಬೀದರ್: ವನ್ಯಜೀವಿಗಳ ಹಲ್ಲು, ಉಗುರು, ಅಂಗಾಂಗಗಳು, ಚರ್ಮ ಹಾಗೂ ಕೊಂಬುಗಳನ್ನು ಇಟ್ಟುಕೊಂಡವರು 2 ರಿಂದ 3 ತಿಂಗಲ್ಲಿ ವಾಪಸ್ ಮಾಡಬೇಕು ಎಂಬ ತೀರ್ಮಾನ ಮಾಡಿದ್ದೇವೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwara Khandre) ಹೇಳಿಕೆ ನೀಡಿದ್ದಾರೆ.
ಹಲವು ವರ್ಷಗಳಿಂದ ವನ್ಯಜೀವಿಗಳ (Wild Animal) ಉತ್ಪನ್ನಗಳನ್ನಿಟ್ಟುಕೊಂಡವರಿಗೆ ಬೀದರ್‌ನಲ್ಲಿ ಅರಣ್ಯ ಸಚಿವರು ಡೆಡ್‌ಲೈನ್ ನೀಡಿದ್ದಾರೆ. ಈಗಾಗಲೇ ಎಲ್ಲಾ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದ್ದು ಡೆಡ್‌ಲೈನ್ ಬಗ್ಗೆ ಕರಡು ಪ್ರತಿ ರೆಡಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಜನರಿಗೆ ಈ ಬಗ್ಗೆ ಅರಿವು ಇಲ್ಲ. ಹೀಗಾಗಿ ಅವುಗಳನ್ನು ತಮ್ಮಲ್ಲಿಯೇ ಇರಿಸಿಕೊಂಡಿದ್ದು, ಅವುಗಳನ್ನು ಅರಣ್ಯ ಇಲಾಖೆಗೆ ವಾಪಸ್ ಕೊಡಲು ಒಂದು ಅವಕಾಶ ನೀಡುತ್ತಿದ್ದೇವೆ. ಸಿಎಂ ಜೊತೆ ಚರ್ಚೆ ಮಾಡಿ ತಿರ್ಮಾನ ಮಾಡಿದ್ದು, ನವೆಂಬರ್ 9ಕ್ಕೆ ಸಚಿವ ಸಂಪುಟದ ಸಭೆಯಲ್ಲಿ ಮಂಡನೆ ಮಾಡಿ ಜಾರಿಗೆ ತರುತ್ತೇವೆ ಎಂದರು. ಇದನ್ನೂ ಓದಿ: ದರ್ಶನ್ ವಿರುದ್ಧ ದೂರು ದಾಖಲಿಸಿದ್ದ ಮಹಿಳೆಗೆ ಪೊಲೀಸರಿಂದ ನೋಟಿಸ್
ಹುಲಿ ಉಗುರು ಪ್ರಕರಣಕ್ಕೆ (Tiger Claw)ಸಂಬಂಧಿಸಿದಂತೆ ಜಗ್ಗೇಶ್ (Jaggesh) ಮತ್ತೆ ತಮ್ಮ ನೋವು ತೋಡಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ಸಂಬಂಧದ ಬೆಲೆಯನ್ನೂ ಈ ಮೂಲಕ ತಿಳಿಸುವ ಪ್ರಯತ್ನ ಮಾಡಿದ್ದಾರೆ. ಪ್ರಚಾರದ ಬಗ್ಗೆ ಚಾಟಿ ಬೀಸಿದ್ದಾರೆ.
ನಾನಾಯಿತು ನನ್ನ ಬದುಕಾಯಿತು ಎಂದು ಶ್ರದ್ಧೆಯಿಂದ ಬಾಳುತ್ತಿರುವ ನನ್ನನ್ನು ಪ್ರಚಾರ ವಸ್ತುವಿನಂತೆ ಬಳಕೆ ಮಾಡಲಾಯಿತು. ಪ್ರೀತಿ, ನಂಬಿಕೆ, ಸಂಬಂಧ ಎಂದು ಸಾಮಾಜಿಕವಾಗಿ ಮಾತನಾಡುತ್ತಿದ್ದ ನನ್ನನ್ನು ಮೂಕನಾಗಿಸಿ, ಇನ್ನು ಮುಂದೆ ಯಾವ ವಿಷಯವು ಮಾತನಾಡದಂತೆ ದಿಗ್ಭಂಧ ಹಾಕಿಕೊಂಡಿತು ಮನಸು. ಇಂದಿನ ದುರ್ದೈವ ಪ್ರಚಾರ ಕಂಡು. ಸಂಬಂಧ ಅರಿವಿಲ್ಲದ ಸಮುದಾಯ ಎಂದು ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ತನ್ನ ತಾಯಿ ಕೊಟ್ಟ ಹುಲಿ ಉಗುರಿನೆ ಪೆಂಡೆಂಟ್ ಕುರಿತಾಗಿ ಅವರು ಹೇಳಲಾದ ವಿಡಿಯೋ ವೈರಲ್ ಆಗಿತ್ತು. ಏಕಾಏಕಿ ಅರಣ್ಯಾಧಿಕಾರಿಗಳು ಜಗ್ಗೇಶ್ ಮನೆಗೆ ನುಗ್ಗಿ ತಪಾಸಣೆ ಮಾಡಿದ್ದರು. ಈ ನಡೆಯ ವಿರುದ್ಧ ಜಗ್ಗೇಶ್ ಕೋರ್ಟ್ ಮೆಟ್ಟಿಲು ಏರಿದ್ದರು. ಇದೀಗ ಕೋರ್ಟ್ ಅರಣ್ಯಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಅಂದುಕೊಂಡಂತೆ ಆಗಿದ್ದರೆ ನಿನ್ನೆಯೇ ವರ್ತೂರು ಸಂತೋಷ್ (Varthur Santhosh) ಬಿಗ್ ಬಾಸ್ (Bigg Boss Kannada) ಮನೆ ಪ್ರವೇಶ ಮಾಡಬೇಕಿತ್ತು. ಜೈಲಿನಿಂದ ಬಿಡುಗಡೆಯಾಗಿ 48 ಗಂಟೆ ಸಮೀಪಿಸಿದರೂ ಇನ್ನೂ ಸಂತೋಷ್ ದೊಡ್ಮನೆಗೆ ಎಂಟ್ರಿಕೊಟ್ಟಿರಲಿಲ್ಲ. ಕೊನೆಗೂ ಬಿಗ್ ಬಾಸ್ ಮನೆಗೆ ಪ್ರವೇಶ ಮಾಡಿದ್ದಾರೆ ವರ್ತುರ್ ಸಂತೋಷ್. ಆ ದೃಶ್ಯಾವಳಿಗಳನ್ನು ಸದ್ಯ JioCinema ವೀಕ್ಷಿಸಬಹುದಾಗಿದೆ.
ಜಾಮೀನು ಸಿಕ್ಕು ಜೈಲಿನಿಂದ ಬಂದ ನಂತರ ಮಾಧ್ಯಮದವರಿಂದ ತಪ್ಪಿಸಿಕೊಂಡು ರಾತ್ರೋರಾತ್ರಿ ಹೋದವರು ಯಾಕೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿಲ್ಲ ಎನ್ನುವ ಪ್ರಶ್ನೆ ಎಲ್ಲರದ್ದಾಗಿತ್ತು. ಹಾಗಾದರೆ, ಸಂತೋಷ್ ಬಿಗ್ ಬಾಸ್ ಮನೆ ಪ್ರವೇಶ ಮಾಡೋದಿಲ್ಲವಾ?? ತಡ ಯಾಕೆ ಆಗುತ್ತಿದೆ? ಕಾನೂನು ಸಮಸ್ಯೆ ಏನಾದರು ಎದುರಾಗಿದ್ಯಾ? ಮತ್ತೆ ಮನೆ ಪ್ರವೇಶ ಮಾಡೋಕೆ ಅವರ ಮನಸ್ಥಿತಿ ಚೆನ್ನಾಗಿಲ್ಲವಾ? ಹೀಗೆ ಹತ್ತಾರು ಪ್ರಶ್ನೆಗಳು ಎದುರಾಗಿದ್ದವು. ಯಾವುದೇ ಸಮಸ್ಯೆ ಇಲ್ಲದೇ ಇದ್ದರೆ ಇನ್ನೂ ಯಾಕೆ ಅವರನ್ನು ಮನೆ ಒಳಗೆ ಕಳುಹಿಸಿಲ್ಲ ಎನ್ನುವ ಪ್ರಶ್ನೆ ಮೂಡಿತ್ತು.
ಶುಕ್ರವಾರ ರಾತ್ರಿಯೇ ಬಿಗ್ ಬಾಸ್ ಟೀಮ್ ಸಂತೋಷ್ ಅವರನ್ನ ತಮ್ಮ ಕಬ್ಜಾಗೆ ಪಡೆದಿತ್ತು. ಮೆಡಿಕಲ್ ಟೆಸ್ಟ್ ಕೂಡ ಮಾಡಿಸಲಾಗಿತ್ತು. ಮತ್ತೆ ಬಿಗ್ ಬಾಸ್ ಮನೆಗೆ ಕಳುಹಿಸುತ್ತಿರುವ ಕುರಿತು ಅವರ ಕುಟುಂಬಕ್ಕೂ ಮಾಹಿತಿ ನೀಡಿತ್ತು. ಆದರೆ, ಜಾಮೀನಿನಲ್ಲಿರುವ ಅಂಶಗಳ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುತ್ತಿದೆ ಎನ್ನುವ ಮಾಹಿತಿ ಸಿಕ್ಕಿತ್ತು. ಜಾಮೀನು ಮೇಲೆ ಸಂತೋಷ್ ಜೈಲಿನಿಂದ ಹೊರ ಬಂದಿರುವ ಕಾರಣದಿಂದಾಗಿ ಕಾನೂನು ತಜ್ಞರ ಸಲಹೆ ಪಡೆದುಕೊಳ್ಳಲಾಗುತ್ತಿತ್ತು.
ಎಲ್ಲ ಅಡೆತಡೆಗಳನ್ನು ದಾಟಿಕೊಂಡು ಇಂದು ಮಧ್ಯಾಹ್ನದಿಂದಲೇ ಅಧಿಕೃತವಾಗಿ ವರ್ತೂರ್ ಸಂತೋಷ್ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಮತ್ತೆ ಬಿಗ್ ಬಾಸ್ ಮನೆಯಲ್ಲಿ ಹಳ್ಳಿಕಾರ್ ದುನಿಯಾ ಇಂದಿನಿಂದ ಶುರುವಾಗಿದೆ. ಮನೆಯಲ್ಲಿ ಅವರು ಹೇಗಿರಲಿದ್ದಾರೆ ಅನ್ನೋದೋ ಸದ್ಯಕ್ಕಿರೋ ಸಸ್ಪೆನ್ಸ್.
ನಟಿ ಅಮೂಲ್ಯ (Amulya) ಅವರ ಇಬ್ಬರು ಮಕ್ಕಳ ಕೊರಳಲ್ಲೂ ಹುಲಿ ಉಗುರಿನ (Tiger Claw) ಪೆಂಡೆಂಟ್ ಇದೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಅನೇಕರು ಅಮೂಲ್ಯ ಅವರಿಗೆ ಪ್ರಶ್ನೆ ಮಾಡಿದ್ದರು. ಈ ಕುರಿತಂತೆ ಅಮೂಲ್ಯ ಸ್ಪಷ್ಟನೆ ನೀಡಿದ್ದಾರೆ. ಅವುಗಳು ಅಸಲಿ ಉಗುರುಗಳೇ ಅಲ್ಲ ಎಂದು ಹೇಳಿದ್ದಾರೆ.
ಮಕ್ಕಳ ನಾಮಕರಣದ ವೇಳೆ ಧರಿಸಿದ್ದ ಪೆಂಡೆಂಟ್ ನಲ್ಲಿಯ ಹುಲಿ ಉಗುರು ಅಸಲಿ ಅಲ್ಲ. ಸಿಂಥೆಟಿಕ್ ಹುಲಿ ಉಗುರು ಅವು. ಅಂತಹ ನಕಲಿ ಉಗುರುಗಳು 500-600ಗೆ ಸಿಗುತ್ತವೆ. ಅರಣ್ಯ ಅಧಿಕಾರಿಗಳು ಪರಿಶೀಲನೆಗೆ ಬಂದರೆ ಖಂಡಿತಾ ಅವುಗಳನ್ನು ನೀಡುತ್ತೇನೆ ಎಂದಿದ್ದಾರೆ ನಟಿ ಅಮೂಲ್ಯ. ಉಗುರುಗಳು ಅಸಲಿಯಲ್ಲ ಎನ್ನುವುದನ್ನು ಸ್ಪಷ್ಟ ಪಡಿಸಿದ್ದಾರೆ.
ವರ್ತೂರ್ ಸಂತೋಷ್ (Varthur Santhosh) ಬಂಧನವಾಗುತ್ತಿದ್ದಂತೆಯೇ ಹುಲಿ ಉಗುರಿನ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಅದರಲ್ಲೂ ಸೆಲೆಬ್ರಿಟಿಗಳ ಮೇಲೆ ಸಾಮಾನ್ಯ ಜನರು ಮುಗಿ ಬಿದ್ದಿದ್ದಾರೆ. ಸಿನಿಮಾ ನಟರು, ಸಂನ್ಯಾಸಿಗಳು, ರಾಜಕಾರಣಿಗಳು ಹೀಗೆ ಅನೇಕರು ಹುಲಿ ಉಗುರು ಧರಿಸಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಎಲ್ಲರೂ ತಮ್ಮದೇ ಆದ ರೀತಿಯಲ್ಲಿ ಸಮರ್ಥನೆಯನ್ನು ಮಾಡುತ್ತಿದ್ದಾರೆ.
ವರ್ತೂರ್ ಸಂತೋಷ್ ಮತ್ತು ಅರಣ್ಯಾಧಿಕಾರಿ ದರ್ಶನ್ ಹಾಗೂ ಇಬ್ಬರು ಅರ್ಚಕರನ್ನು ಈವರೆಗೂ ಬಂಧಿಸಲಾಗಿದೆ. ಸಂತೋಷ್ ಗೆ ನಿನ್ನೆ ಜಾಮೀನು ಮಂಜೂರಾಗಿ ಜೈಲಿನಿಂದ ಹೊರ ಬಂದಿದ್ದಾರೆ. ಉಳಿದಂತೆ ಅರಣ್ಯಾಧಿಕಾರಿಗಳು ತನಿಖೆಯನ್ನು ಮುಂದುವರೆಸಿದ್ದಾರೆ.