Tag: ಹುಲಿ ಉಗುರು

  • ಹುಲಿ ಉಗುರು ಪ್ರಕರಣ: ಗುಜರಾತ್ ಗೆ ಹೊರಟ ನಟ ದರ್ಶನ್

    ಹುಲಿ ಉಗುರು ಪ್ರಕರಣ: ಗುಜರಾತ್ ಗೆ ಹೊರಟ ನಟ ದರ್ಶನ್

    ನಿನ್ನೆಯಷ್ಟೇ ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಅರಣ್ಯಾಧಿಕಾರಿಗಳು ದರ್ಶನ್ (Darshan) ಅವರಿಗೆ ನೋಟಿಸ್ ನೀಡಿದ್ದರು. ನೋಟಿಸ್ ಗೆ ಸಂಬಂಧಪಟ್ಟಂತೆ ದರ್ಶನ್ ಇವತ್ತು ಉತ್ತರ ನೀಡುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಇಂದು ದರ್ಶನ್ ಉತ್ತರ ನೀಡುತ್ತಿಲ್ಲ ಎನ್ನುವುದು ಗೊತ್ತಾಗಿದೆ. ಈ ಹಿಂದೆಯೇ ನಿಗದಿಯಾದಂತೆ ಕಾಟೇರ (Katera) ಸಿನಿಮಾದ ಶೂಟಿಂಗ್ ಗಾಗಿ ದರ್ಶನ್ ಇಂದು ಗುಜರಾತ್ (Gujarat)ಗೆ ಪ್ರಯಾಣ ಬೆಳಸಲಿದ್ದಾರೆ.

    ಬೆಳಗ್ಗೆ ಬೆಂಗಳೂರಿನಿಂದ ಮೈಸೂರಿಗೆ ಹೊರಟಿರುವ ದರ್ಶನ್. ಆನಂತರ ಸಾಯಂಕಾಲ 4 ಗಂಟೆಗೆ ವಿಮಾನದ ಟಿಕೆಟ್ ಬುಕ್ ಆಗಿರುವುದರಿಂದ ಮತ್ತೆ ಬೆಂಗಳೂರಿಗೆ ಆಗಮಿಸಿ, ವಿಮಾನ ಏರಲಿದ್ದಾರೆ. ನಿನ್ನೆ ದರ್ಶನ್ ಮನೆಯಲ್ಲಿ ಹುಲಿ ಉಗುರಿನ ಶೋಧ ಕಾರ್ಯ ನಡೆಸಿದ್ದರು ಅರಣ್ಯ ಅಧಿಕಾರಿಗಳು. ಈ ಪ್ರಕರಣಕ್ಕೆ ದರ್ಶನ್ ಸಂಪೂರ್ಣ ಸಹಕಾರ ನೀಡಿರುವುದಾಗಿಯೂ ಅಧಿಕಾರಿಗಳು ಹೇಳಿಕೊಂಡಿದ್ದರು.

    ಕಾಫಿನಾಡಿನಲ್ಲಿ ಅರ್ಚಕರ ಬಂಧನ

    ಕಾಫಿನಾಡು ಚಿಕ್ಕಮಗಳೂರಿನಲ್ಲಿ (Chikkamagaluru) ಹುಲಿ ಉಗುರು (Tiger Claw) ಕಾರ್ಯಚರಣೆ ಮುಂದುವರೆದಿದ್ದು, ಹುಲಿ ಉಗುರಿನ ಡಾಲರ್ (Dollar) ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ. ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು (Priest) ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು ಮೂರು ಹುಲಿ ಉಗುರನ್ನು ವಶಕ್ಕೆ ಪಡೆಯಲಾಗಿದೆ.

    ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಅರ್ಚಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರು ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರ ಬಂಧನ

    ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರ ಬಂಧನ

    ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ (Chikkamagaluru) ಹುಲಿ ಉಗುರು (Tiger Claw) ಕಾರ್ಯಚರಣೆ ಮುಂದುವರೆದಿದ್ದು, ಹುಲಿ ಉಗುರಿನ ಡಾಲರ್ (Dollar) ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ.

    ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು (Priest) ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು ಮೂರು ಹುಲಿ ಉಗುರನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ – 12 ಸಾವು, ಇಬ್ಬರು ಗಂಭೀರ

    ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಅರ್ಚಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರು ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇದನ್ನೂ ಓದಿ: ಸ್ನೇಹಿತರ ಮನೆಗೆ ಹಬ್ಬಕ್ಕೆ ಬಂದಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟ ಜಗ್ಗೇಶ್ ಪತ್ನಿ ಪೂಜೆ ಮಾಡಿ ಇಟ್ಟಿದ್ದ ಪೆಂಡೆಂಟ್ ಕೊಟ್ಟಿದ್ದಾರೆ: ಅಧಿಕಾರಿಗಳು

    ನಟ ಜಗ್ಗೇಶ್ ಪತ್ನಿ ಪೂಜೆ ಮಾಡಿ ಇಟ್ಟಿದ್ದ ಪೆಂಡೆಂಟ್ ಕೊಟ್ಟಿದ್ದಾರೆ: ಅಧಿಕಾರಿಗಳು

    ಹುಲಿ ಉಗುರು ಧರಿಸಿದ್ದ ಆರೋಪ ಹೊತ್ತಿರುವ ನಟ ಜಗ್ಗೇಶ್ ಮನೆಗೆ ಇಂದು (ಬುಧವಾರ) ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಜಗ್ಗೇಶ್ ಪತ್ನಿ ಪರಿಮಳಾ ಅವರು, ಪೂಜೆ ಮಾಡಿದ್ದ ಇಟ್ಟಿದ್ದ ಪೆಂಡೆಂಟ್ ಅನ್ನು ಅಧಿಕಾರಿಗಳಿಗೆ ನೀಡಿದ್ದಾರೆ.

    ಮಲ್ಲೇಶ್ವರಂನಲ್ಲಿರುವ ಜಗ್ಗೇಶ್ (Jaggesh) ಮನೆಗೆ ಆರ್‌ಎಫ್‌ಒ ನೇತ್ರಾವತಿ ಅವರ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ವತಃ ಡಿಸಿಎಫ್ ರವೀಂದ್ರ ಅವರು ಕೂಡ ಭೇಟಿ ಕೊಟ್ಟಿದ್ದರು. ಈ ವೇಳೆ ಜಗ್ಗೇಶ್ ಅವರ ಪತ್ನಿ ಪೆಂಡೆಂಟ್ ಅನ್ನು ಅಧಿಕಾರಿಗಳಿಗೆ ನೀಡಿದ್ದಾರೆ. ಪೂಜೆ ಮಾಡಿ ಇಟ್ಟುಕೊಂಡಿದ್ದೆವು ಎಂದು ಅಧಿಕಾರಿಗಳಿಗೆ ಈ ವೇಳೆ ತಿಳಿಸಿದ್ದಾರೆ. ಇದನ್ನೂ ಓದಿ: ಹುಲಿ ಉಗುರಿನ ಸಂಕಷ್ಟ- ದರ್ಶನ್ ಮನೆಗೆ ಅರಣ್ಯಾಧಿಕಾರಿಗಳ ಭೇಟಿ

    ಈ ಕುರಿತು ಮಾತನಾಡಿರುವ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ, ನೋಟಿಸ್ ಕೊಟ್ಟಿದ್ದೇವೆ. ಅದಕ್ಕೆ ಪೆಂಡೆಂಟ್ ಕೊಟ್ಟಿದ್ದಾರೆ. ನಾವು ಯಾವುದೇ ತಪಾಸಣೆ ನಡೆಸಲಿಲ್ಲ. ಜಗ್ಗೇಶ್ ಮಡದಿ ಪೆಂಡೆಂಟ್, ಲಾಕೆಟ್ ಕೊಟ್ಟಿದ್ದಾರೆ. ಜಗ್ಗೇಶ್ ಹೋಗುವಾಗ ಕೊಟ್ಟು ಹೋಗಿದ್ದಾರೆ. ಅವರು ಮನೆಯಲ್ಲಿ ಇರಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.

    ಜಗ್ಗೇಶ್ ಅವರಿಗೆ ತಾಯಿ ಕೊಟ್ಟಿದ್ದು. ಪೂಜೆ ಮಾಡಿ ಇಟ್ಟುಕೊಂಡಿದ್ದೇವೆ ಎಂದಿದ್ದಾರೆ. 40 ವರ್ಷದಷ್ಟು ಹಳೆಯದಾಗಿದೆ ಪೆಂಡೆಂಟ್. ಹೀಗಾಗಿ ಡಿಎನ್‌ಎ ಪರೀಕ್ಷೆ ಮಾಡಲು ಡೆಹ್ರಾಡೂನ್‌ಗೆ ಲ್ಯಾಬ್‌ಗೆ ಕಳುಹಿಸಲಾಗುತ್ತದೆ. ಜಗ್ಗೇಶ್ ಮನೆಯಲ್ಲಿ ಸಿಕ್ಕ ಪೆಂಡೆಂಟ್ ಕೊಳೆತ ಸ್ಥಿತಿಯಲ್ಲಿ ಇದ್ದು, ಪ್ರಾಥಮಿಕವಾಗಿ ಗೊತ್ತಾಗುತ್ತಿಲ್ಲ. ಸ್ವಲ್ಪ ದಿನ ಸಮಯ ತೆಗೆದುಕೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಹುಲಿ ಉಗುರು ಕಂಟಕ: ದರ್ಶನ್, ಜಗ್ಗೇಶ್, ನಿಖಿಲ್ ಕ್ರಮಕ್ಕೆ ಒತ್ತಾಯ

    ಮೊದಲು ಪರಿಶೀಲನೆಗೆ ಲ್ಯಾಬ್‌ಗೆ ಕಳುಹಿಸಿ, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಅದು ನೈಜವಾಗಿದ್ದಲ್ಲಿ ಅವರನ್ನ ಕರೆಸಿ ವಿಚಾರಣೆ ಮಾಡಲಾಗುತ್ತದೆ. ಅದು ಹುಲಿಯ ಉಗುರಾಗಿದ್ದರೆ ಕಾನೂನುಬದ್ಧವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಪರಾಧಗಳಲ್ಲಿ ಯಾರೇ ಭಾಗಿಯಾದರೂ ಕಾನೂನು ಕ್ರಮ: ಹುಲಿ ಉಗುರು ವಿವಾದ ಬಗ್ಗೆ ಈಶ್ವರ್ ಖಂಡ್ರೆ ಮಾತು

    ಅಪರಾಧಗಳಲ್ಲಿ ಯಾರೇ ಭಾಗಿಯಾದರೂ ಕಾನೂನು ಕ್ರಮ: ಹುಲಿ ಉಗುರು ವಿವಾದ ಬಗ್ಗೆ ಈಶ್ವರ್ ಖಂಡ್ರೆ ಮಾತು

    ಕಲಬುರಗಿ: ವನ್ಯಜೀವಿಗಳ ಕಾಯ್ದೆ 72ನೇ ವಿಧಿ ಅನ್ವಯ ಯಾವುದೇ ವನ್ಯಜೀವಿಗಳ ಉಗುರು, ಚರ್ಮ ಸೇರಿದಂತೆ ಇತರ ವಸ್ತುಗಳನ್ನು ಯಾರೂ ಬಳಸುವಂತಿಲ್ಲ. ಜೊತೆಗೆ ಮಾರಾಟವಾಗಲಿ, ಸಂಗ್ರಹವಾಗಲಿ, ಸಾಗಾಟವಾಗಲಿ ಮಾಡುವುದು ಅಪರಾಧ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwara Khandre) ಹೇಳಿಕೆ ನೀಡಿದ್ದಾರೆ.

    ಕಲಬುರಗಿಯಲ್ಲಿ (Kalaburagi) ಮಾತನಾಡಿದ ಅರಣ್ಯ ಸಚಿವರು, ಇಂತಹ ಅಪರಾಧಗಳಲ್ಲಿ ಯಾರೇ ಭಾಗಿಯಾದರೂ ಸರ್ಕಾರ ಕಾನೂನು ಕ್ರಮ ಕೈಗೊಳ್ಳುತ್ತದೆ. ಈ ಪ್ರಕರಣದಿಂದ ಎಲ್ಲರೂ ಜಾಗೃತಗೊಳ್ಳಬೇಕು. ವನ್ಯಜೀವಿಗಳ, ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಹುಲಿ ಉಗುರಿನ ಸಂಕಷ್ಟ- ದರ್ಶನ್ ಮನೆಗೆ ಅರಣ್ಯಾಧಿಕಾರಿಗಳ ಭೇಟಿ

    ನಟ ದರ್ಶನ್ ಹಾಗೂ ಜಗ್ಗೇಶ್ ಹುಲಿ ಉಗುರು (Tiger Claw) ಬಳಸಿರುವ ವಿಚಾರವಾಗಿ ಮಾತನಾಡಿದ ಅವರು, ನಾನು ಯಾರ ಹೆಸರನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುವುದಿಲ್ಲ. ನಿಯಮ-72 ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಜರುಗಿಸುತ್ತೇವೆ. ಈ ನೆಲದ ಕಾನೂನು ಎಲ್ಲರಿಗೂ ಸರಿಸಮನಾಗಿದೆ ಎಂದು ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 20 ಸಾವಿರ ಕೊಟ್ಟು ಹುಲಿ ಉಗುರು ಖರೀದಿಸಿದ್ದರಾ ವರ್ತೂರ್ ಸಂತೋಷ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 20 ಸಾವಿರ ಕೊಟ್ಟು ಹುಲಿ ಉಗುರು ಖರೀದಿಸಿದ್ದರಾ ವರ್ತೂರ್ ಸಂತೋಷ್

    20 ಸಾವಿರ ಕೊಟ್ಟು ಹುಲಿ ಉಗುರು ಖರೀದಿಸಿದ್ದರಾ ವರ್ತೂರ್ ಸಂತೋಷ್

    ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ವರ್ತೂರ್ ಸಂತೋಷ್ (Varthur Santhosh) ಹೇಳಿದ್ದಾರೆ ಎನ್ನಲಾದ ಮಾಹಿತಿಯನ್ನು ಸಖತ್ ಸೌಂಡ್ ಮಾಡುತ್ತಿದೆ. ತಾವು ಧರಿಸಿದ್ದ ಹುಲಿ ಉಗುರನ್ನು (Tiger Claw) ಅವರು 20 ಸಾವಿರ ರೂಪಾಯಿ ಕೊಟ್ಟು ಖರೀದಿಸಿದ್ದರಂತೆ. ಹಾಗಂತ ಅರಣ್ಯಾಧಿಕಾರಿಗಳಿಗೆ  ಸಂತೋಷ್ ಹೇಳಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

    ಇಕ್ಕಟ್ಟಿನಲ್ಲಿ ಸೆಲೆಬ್ರಿಟಿಗಳು

    ನಟ, ಯುವರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ (Nikhil) ಅವರು ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ಎನ್ನಲಾದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ ಮಾಡಿದ್ದರು. ಸೆಲೆಬ್ರಿಟಿಗಳ ಮೇಲೆ ದೂರು ನೀಡಲು ಕೆಲವರು ಮುಂದಾಗಿದ್ದಾರೆ. ಮಾಧ್ಯಮಗಳಲ್ಲಿ ಈ ಕುರಿತು ಸಾಕಷ್ಟು ಸದ್ದು ಆಗುತ್ತಿದ್ದಂತೆಯೇ ನಿಖಿಲ್ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ.

    ‘ನನ್ನ ಮದುವೆ ಸಮಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ. ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಸ್ಯಾಂಡಲ್ ವುಡ್ ಸಿಲೆಬ್ರಿಟಿಗಳು ಅಲ್ಲದೇ, ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕೂತಿರುವ ಮತ್ತು ಅರ್ಚಕರೊಬ್ಬರು ಹುಲಿ ಉಗುರಿನ ಸರ ಹಾಕಿರುವ ಕುರಿತಾಗಿಯೂ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಹೀಗಾಗಿ ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಎಲ್ಲರಿಗೂ ನೋಟಿಸ್ ಕೊಡುವುದಾಗಿ ಉನ್ನತ ಮಟ್ಟದ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    ಈ ಕುರಿತಂತೆ ಅರಣ್ಯಾ ಇಲಾಖೆಯ ಅಧಿಕಾರಿಗಳ ಕಚೇರಿಗೆ ಸಾಲು ಸಾಲು ದೂರುಗಳು ಬರುತ್ತಿವೆ. ಜನತಾ ಪಕ್ಷದ ನಾಗೇಶ್ ಅವರು ಜಗ್ಗೇಶ್ ಮತ್ತು ದರ್ಶನ್ ಅವರ ಮೇಲೆ ದೂರು ನೀಡಿದ್ದು, ‘ಬಿಜೆಪಿ ಮುಖಂಡ ಜಗ್ಗೇಶ್ ಅವರು ಹುಲಿ ಉಗುರಿನ ಬಗ್ಗೆ ಮಾತನಾಡಿದ್ದಾರೆ. ಆದರೂ, ಅರಣ್ಯಾಧಿಕಾರಿಗಳು ಮೌನವಾಗಿದ್ದಾರೆ. ಬಡವರು, ರೈತರು, ವನ್ಯ ಜೀವಿಗಳನ್ನು ಕೊಂದು ಕೇಸ್ ಹಾಕ್ತಾರೆ. ಜಗ್ಗೇಶ್, ದರ್ಶನ್, ವಿನಯ್ ಗುರೂಜಿ ಮೇಲೆ ಕ್ರಮ ಯಾಕೆ ತಗೆದುಕೊಂಡಿಲ್ಲ’ ಎಂದು ಕೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾನು ಧರಿಸಿದ್ದು ಕೃತಕ ಹುಲಿ ಉಗುರು: ನಟ ನಿಖಿಲ್ ಕುಮಾರ್ ಸ್ವಾಮಿ ಸ್ಪಷ್ಟನೆ

    ನಾನು ಧರಿಸಿದ್ದು ಕೃತಕ ಹುಲಿ ಉಗುರು: ನಟ ನಿಖಿಲ್ ಕುಮಾರ್ ಸ್ವಾಮಿ ಸ್ಪಷ್ಟನೆ

    ಟ, ಯುವರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಅವರು ಕೂಡ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದಾರೆ ಎನ್ನಲಾದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ ಮಾಡಿದ್ದರು. ಸೆಲೆಬ್ರಿಟಿಗಳ ಮೇಲೆ ದೂರು ನೀಡಲು ಕೆಲವರು ಮುಂದಾಗಿದ್ದಾರೆ. ಮಾಧ್ಯಮಗಳಲ್ಲಿ ಈ ಕುರಿತು ಸಾಕಷ್ಟು ಸದ್ದು ಆಗುತ್ತಿದ್ದಂತೆಯೇ ನಿಖಿಲ್ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸ್ಪಷ್ಟನೆ ನೀಡಿದ್ದಾರೆ.

    ‘ನನ್ನ ಮದುವೆ ಸಮಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ. ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಸ್ಯಾಂಡಲ್ ವುಡ್ ಸಿಲೆಬ್ರಿಟಿಗಳು ಅಲ್ಲದೇ, ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕೂತಿರುವ ಮತ್ತು ಅರ್ಚಕರೊಬ್ಬರು ಹುಲಿ ಉಗುರಿನ ಸರ ಹಾಕಿರುವ ಕುರಿತಾಗಿಯೂ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಹೀಗಾಗಿ ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಎಲ್ಲರಿಗೂ ನೋಟಿಸ್ ಕೊಡುವುದಾಗಿ ಉನ್ನತ ಮಟ್ಟದ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    ಈ ಕುರಿತಂತೆ ಅರಣ್ಯಾ ಇಲಾಖೆಯ ಅಧಿಕಾರಿಗ ಕಚೇರಿಗೆ ಸಾಲು ಸಾಲು ದೂರುಗಳು ಬರುತ್ತಿವೆ. ಜನತಾ ಪಕ್ಷದ ನಾಗೇಶ್ ಅವರು ಜಗ್ಗೇಶ್ ಮತ್ತು ದರ್ಶನ್ ಅವರ ಮೇಲೆ ದೂರು ನೀಡಿದ್ದು, ‘ಬಿಜೆಪಿ ಮುಖಂಡ ಜಗ್ಗೇಶ್ ಅವರು ಹುಲಿ ಉಗುರಿನ ಬಗ್ಗೆ ಮಾತನಾಡಿದ್ದಾರೆ. ಆದರೂ, ಅರಣ್ಯಾಧಿಕಾರಿಗಳು ಮೌನವಾಗಿದ್ದಾರೆ. ಬಡವರು, ರೈತರು, ವನ್ಯ ಜೀವಿಗಳನ್ನು ಕೊಂದು ಕೇಸ್ ಹಾಕ್ತಾರೆ. ಜಗ್ಗೇಶ್, ದರ್ಶನ್, ವಿನಯ್ ಗುರೂಜಿ ಮೇಲೆ ಕ್ರಮ ಯಾಕೆ ತಗೆದುಕೊಂಡಿಲ್ಲ’ ಎಂದು ಕೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2022ರಲ್ಲೇ ಹುಲಿ ಚರ್ಮ ಹಿಂದಿರುಗಿಸಲಾಗಿದೆ- ವಿನಯ್ ಗುರೂಜಿ ಆಶ್ರಮದಿಂದ ಸ್ಪಷ್ಟನೆ

    2022ರಲ್ಲೇ ಹುಲಿ ಚರ್ಮ ಹಿಂದಿರುಗಿಸಲಾಗಿದೆ- ವಿನಯ್ ಗುರೂಜಿ ಆಶ್ರಮದಿಂದ ಸ್ಪಷ್ಟನೆ

    ಚಿಕ್ಕಮಗಳೂರು: ಹುಲಿ ಉಗುರುಗೆ ಸಂಬಂಧಿಸಿದಂತೆ ಬಿಗ್ ಬಾಸ್ ಸ್ಪರ್ಧಿ ಹಳ್ಳಿಕಾರ್ ಸಂತೋಷ್ (Bigg Boss Santhosh) ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ ಬೆನ್ನಲ್ಲೇ ಇದೀಗ ಲಾಕೆಟ್, ಚರ್ಮ ಬಳಕೆ ಮಾಡಿದ ಆರೋಪದ ಮೇಲೆ ಎಲ್ಲರ ಫೋಟೋ ವೀಡಿಯೋಗಳು ಒಂದೊಂದಾಗಿಯೇ ಹೊರಗೆ ಬರುತ್ತಿವೆ. ಅಂತೆಯೇ ವಿನಯ್ ಗುರೂಜಿ (Vinay Guruji) ಅವರು ಕೂಡ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

    ವಿನಯ್ ಗುರೂಜಿ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಆಶ್ರಮದಿಂದ ಸ್ಪಷ್ಟನೆ ಕೊಡಲಾಗಿದೆ. 2 ವರ್ಷದ ಹಿಂದೆ ಶಿವಮೊಗ್ಗ ಮೂಲದ ಅಮರೇಂದ್ರ ಕಿರೀಟಿ ಎಂಬವರು ವಿನಯ್ ಗುರೂಜಿಗೆ ಉಡುಗೊರೆ ನೀಡಿದ್ದರು. ಕಿರೀಟಿಯವರು ಅರಣ್ಯ ಅಧಿಕಾರಿಗಳ ಅನುಮತಿ ಪಡೆದು ಉಡುಗೊರೆ ನೀಡಿದ್ದರು. ಅಮರೇಂದ್ರ ಅವರ ತಂದೆ ಕಾಲದಿಂದಲೂ ಹುಲಿ ಚರ್ಮ ಮನೆಯಲ್ಲಿತ್ತು. ಆ ಹುಲಿ ಚರ್ಮವನ್ನ ವಿನಯ್ ಗುರೂಜಿಗೆ ನೀಡಿದ್ದರು. ಇದನ್ನೂ ಓದಿ: ಹುಲಿ ಉಗುರು ಕಂಟಕ: ದರ್ಶನ್, ಜಗ್ಗೇಶ್, ನಿಖಿಲ್ ಕ್ರಮಕ್ಕೆ ಒತ್ತಾಯ

    ಈ ಹಿಂದೆಯೂ ಅವಧೂತ ವಿನಯ್ ಗುರೂಜಿ ಹುಲಿ ಚರ್ಮದ ಮೇಲೆ ಕೂತಿರೋ ಫೋಟೋ ವೈರಲ್ ಆಗಿತ್ತು. ಹೀಗಾಗಿ 2022 ರಲ್ಲಿ ಅದನ್ನ ಅರಣ್ಯ ಇಲಾಖೆಗೆ ಹಿಂದಿರುಗಿಸಲಾಗಿದೆ ಎನ್ನುವ ಮೂಲಕ ಹುಲಿ ಚರ್ಮದ ಬಗ್ಗೆ ಸ್ಪಷ್ಟನೆ ಕೊಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವರ್ತೂರ್ ಸಂತೋಷ್ ವಿಚಾರಣಾಧೀನ ಕೈದಿ ನಂ.10935

    ವರ್ತೂರ್ ಸಂತೋಷ್ ವಿಚಾರಣಾಧೀನ ಕೈದಿ ನಂ.10935

    ಬಿಗ್ ಬಾಸ್  ಸ್ಪರ್ಧಿ ವರ್ತೂರ್ ಸಂತೋಷ್ ಕುತ್ತಿಗೆಗೆ ಹುಲಿಯ ಉಗುರು ಹೊಂದಿರುವ ಲಾಕೆಟ್ ಧರಿಸಿದ್ದರು ಎನ್ನುವ ಕಾರಣಕ್ಕಾಗಿ ಎರಡು ದಿನಗಳ ಹಿಂದೆಯಷ್ಟೇ ಬಿಗ್ ಬಾಸ್ ಮನೆಯಿಂದಲೇ ಅವರನ್ನು ಬಂಧಿಸಲಾಗಿತ್ತು. ನಿನ್ನೆ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿತ್ತು. ಎ.ಸಿ.ಜೆ.ಎಂ ನ್ಯಾಯಾಧೀಶರು 14 ದಿನಗಳ ಕಾಲ ಸಂತೋಷ್ ಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹಾಗಾಗಿ ಪರಪ್ಪನ ಅಗ್ರಹಾರ ಜೈಲಿಗೆ(Jail)  ಅವರನ್ನು ಕಳುಹಿಸಲಾಗಿದೆ. ಸಂತೋಷ್ ಅವರಿಗೆ ಕೈದಿ ನಂಬರ್ ಕೂಡ ನೀಡಲಾಗಿದೆ.

    ವರ್ತೂರ್ ಸಂತೋಷ್ ಅವರಿಗೆ ಕಾರಗೃಹ ಅಧಿಕಾರಿಗಳು ವಿಚಾರಣಾಧೀನ ಕೈದಿ ಸಂಖ್ಯೆ 10935 ಅನ್ನು ನೀಡಿದ್ದಾರೆ. ಕೋರ್ಟಿಗೆ ರಜೆ ಇದ್ದ ಕಾರಣದಿಂದಾಗಿ ನ್ಯಾಯಾಧೀಶರ ನಿವಾಸಕ್ಕೆ ಸಂತೋಷ್ ಅವರನ್ನು ಹಾಜರು ಪಡಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನದ ಚೈನು ಮಾಡಿರುವ ಚಿನ್ನದಂಗಡಿ ಮಾಲೀಕನಿಗೆ ಅರಣ್ಯಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

    ಹುಲಿ ಉಗುರು ಕೊಟ್ಟಿದ್ದ್ಯಾರು?

    ಬಿಗ್ ಬಾಸ್ (Bigg Boss Kannada) ಮನೆಯಿಂದ ಮೊನ್ನೆಯಷ್ಟೇ ಅರೆಸ್ಟ್ ಆಗಿರುವ ಸ್ಪರ್ಧಿ ವರ್ತೂರ ಸಂತೋಷ (Varthuru Santhosh) ಅವರನ್ನು ಅರಣ್ಯಾಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ತನ್ನಲ್ಲಿರುವ ಹುಲಿ ಉಗುರು ಬಂದಿದ್ದು ಹೇಗೆ? ಯಾರು ಕೊಟ್ಟರು? ಎಲ್ಲಿಂದ ಖರೀದಿ ಮಾಡಿದ್ದೀರಿ? ಮಾರಿದವರು ಈಗ ಎಲ್ಲಿದ್ದಾರೆ? ಎಷ್ಟು ಮಂದಿಗೆ ಈ ರೀತಿ ಉಗುರು ಮಾರಲಾಗಿದೆ ಹೀಗೆ ಇತ್ಯಾದಿ ಪ್ರಶ್ನೆಗಳನ್ನು ಅರಣ್ಯಾಧಿಕಾರಿಗಳು ಸಂತೋಷ್ ಮುಂದೆ ಇಟ್ಟಿದ್ದಾರೆ. ಅದಕ್ಕೆ ಸಂತೋಷ್ ಕೂಡ ಉತ್ತರ ನೀಡಿದ್ದಾನೆ ಎನ್ನುವ ಮಾಹಿತಿ ಇದೆ.

    ಅಪರಿಚತರು ಹುಲಿ ಉಗುರನ್ನು ಮಾರಾಟಕ್ಕೆ ತಂದಿದ್ದರು. ಅವರು ಎಲ್ಲಿಂದ ಬಂದಿದ್ದರು, ಯಾರು ಎನ್ನುವುದು ನನಗೆ ಗೊತ್ತಿಲ್ಲ. ಮಾರಾಟ ಮಾಡುತ್ತಿರುವ ವಿಷಯ ಗೆಳೆಯರಿಂದ ತಿಳಿಯಿತು. ಹಣ ಕೊಟ್ಟು ಇದನ್ನು ಖರೀದಿ ಮಾಡಿದ್ದೇನೆ ಎಂದು ಅಧಿಕಾರಿಗಳ ಮುಂದೆ ಸಂತೋಷ್ ಹೇಳಿದ್ದಾರೆ ಎನ್ನುವುದು ಸಿಕ್ಕಿರುವ ವರ್ತಮಾನ.

    ವೈಲ್ಡ್​ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಸಂತೋಷ್ ಅವರ ಬಂಧನವಾಗಿದ್ದು, ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಅನ್ನು ಅವರು ಹಾಕಿಕೊಂಡಿದ್ದರು. ಈ ಕುರಿತು ಶರತ್ ಎನ್ನುವವರು ದೂರು ನೀಡಿದ್ದರು. ಈ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಬಂಧಿಸಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಬಿಗ್ ಬಾಸ್’ ಮನೆಯಿಂದ ವರ್ತೂರ್ ಸಂತೋಷ್ ಎಕ್ಸಿಟ್ ಹೇಗಿತ್ತು?

    ‘ಬಿಗ್ ಬಾಸ್’ ಮನೆಯಿಂದ ವರ್ತೂರ್ ಸಂತೋಷ್ ಎಕ್ಸಿಟ್ ಹೇಗಿತ್ತು?

    ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ನಗ್ ನಗ್ತಾ ಇರ್ತಿದ್ದ, ಎಲ್ಲರನ್ನೂ ಕಾಲೆಳೆದುಕೊಂಡು ತಮಾಷೆ ಮಾಡ್ತಿದ್ದ ‘ಹಳ್ಳಿಕಾರ್’ ಖ್ಯಾತಿಯ ವರ್ತೂರ್ ಸಂತೋಷ್ (Varthoo Santhosh) ಅರೆಸ್ಟ್ ಆಗಿದ್ದಾರೆ. ಇಂಥದ್ದೊಂದು ಘಟನೆ ಬಿಗ್ ಬಾಸ್ ಇತಿಹಾಸದಲ್ಲೇ ಈವರೆಗೂ ನಡೆದಿಲ್ಲ. ಬಿಗ್ ಬಾಸ್ ಮನೆ ಒಳಗೆ ಬಂದ ಅರಣ್ಯ ಅಧಿಕಾರಿಗಳು  ನಿನ್ನೆ ರಾತ್ರಿಯೇ ಸಂತೋಷ್‍ ನನ್ನು ಅರೆಸ್ಟ್ ಮಾಡಿಕೊಂಡು ಹೋಗಿದ್ದಾರೆ. ಇಂಥದ್ದೊಂದು ಘಟನೆ ನಡೆಯುವುದಕ್ಕೂ ಮುನ್ನ ಸಂತೋಷ್ ಮನೆಮಂದಿಗೆಲ್ಲ ಭವಿಷ್ಯ ಹೇಳುತ್ತಿದ್ದರು.

    ಹೌದು, ದೊಡ್ಮನೆಯ ಇತರ ಸದಸ್ಯರನ್ನು ಬಿಗ್ ಬಾಸ್ ಮನೆಯ ಅಂಗಳದಲ್ಲಿ ಕೂರಿಸಿಕೊಂಡು ಸಂತೋಷ್ ಭವಿಷ್ಯ ಹೇಳುತ್ತಿದ್ದರು. ತುಕಾಲಿ ಸಂತು, ಸಿರಿ, ವಿನಯ್ ಗೌಡ, ನೀತು ಹೀಗೆ ಅನೇಕರು ದುಂಡಾಗಿ ಕುಳಿತುಕೊಂಡು ಸಂತೋಷ್ ಹೇಳುತ್ತಿದ್ದ ಭವಿಷ್ಯವನ್ನು ಕೇಳುತ್ತಿದ್ದರು. ತಮಾಷೆ ತಮಾಷೆಯಾಗಿಯೇ ಮಾತುಕತೆ ನಡೆದಿತ್ತು. ಎಲ್ಲರ ಭವಿಷ್ಯ ಹೇಳುತ್ತಿದ್ದ ಸಂತೋಷ ಮುಂದಿನ ಗಂಟೆಗಳಲ್ಲಿ ತಾವು ಅರೆಸ್ಟ್ (Arrest) ಆಗಲಿದ್ದೇನೆ ಎನ್ನುವುದೇ ಗೊತ್ತಿರಲಿಲ್ಲ.

    ಬಿಗ್ ಬಾಸ್ ಮನೆಯ ಸದಸ್ಯರನ್ನು ಮನೆಯಿಂದ ಆಚೆ ಕಳುಹಿಸುವುದು ಅಷ್ಟು ಸುಲಭವಲ್ಲ. ಅವರ ಅನಾರೋಗ್ಯ, ರಕ್ತಸಂಬಂಧಿಗಳ ಸಾವು, ಎಲಿಮಿನೇಟ್ ಆದಾಗ ಹಾಗೂ ದೈಹಿಕ ಹಲ್ಲೆಗಳು ನಡೆದಾಗ ಮಾತ್ರ ಮನೆಯಿಂದ ಆಚೆ ಕಳುಹಿಸಲಾಗುತ್ತದೆ. ಬಿಗ್ ಬಾಸ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪೊಲೀಸ್ ಜೊತೆ ಬಿಗ್ ಬಾಸ್ ಸ್ಪರ್ಧಿಯನ್ನು ಕಳುಹಿಸಿ ಕೊಡಲಾಗಿದೆ. ವರ್ತೂರ್ ಸಂತೋಷ್ ಹುಲಿ ಉಗುರನ್ನು ಧರಿಸಿದ್ದರು ಎನ್ನುವ ಕಾರಣಕ್ಕೆ ಅವರ ಬಂಧನವಾಗಿದೆ. ಸಂತೋಷ್ ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿ, ಆನಂತರ ಅವರನ್ನು ಮನೆಯಿಂದ ಆಚೆ ಕಳುಹಿಸಲಾಗಿದೆ.

    ಸಂತೋಷ್ ಬಂಧನದ ವಿಚಾರವನ್ನೂ ಬಿಗ್ ಬಾಸ್ ಮನೆಯಲ್ಲಿ ಗೌಪ್ಯವಾಗಿ ಇಡಲಾಗಿದೆ. ಮನೆಯವರಿಗೆ ಸಂತೋಷ್ ಇಲ್ಲ ಎನ್ನುವ ವಿಚಾರ ಗೊತ್ತಿದೆ. ಆದರೆ, ಅವರು ಯಾವ ಕಾರಣದಿಂದಾಗಿ ಮನೆಯಿಂದ ಆಚೆ ಹೋಗಿದ್ದಾರೆ ಎನ್ನುವುದು ಯಾರಿಗೂ ಗೊತ್ತಿಲ್ಲ. ಮನೆಯವರಿಗೇ ಗೊತ್ತಿಲ್ಲದೇ ಎಲಿಮಿನೇಟ್ ಆಗಿರಬಹುದಾ ಎನ್ನುವ ಚರ್ಚೆ ನಡೆದರೂ ಅಚ್ಚರಿಯಿಲ್ಲ. ಅಥವಾ ಒಂದೊಂದು ಸಲ ಗೌಪ್ಯ ರೂಮ್‍ ನಲ್ಲೂ ಸ್ಪರ್ಧಿಗಳನ್ನು ಇಡುವ ಪರಿಪಾಠವಿದೆ. ಅಲ್ಲಿಗೇನಾದರೂ ಕಳುಹಿಸಿದ್ದಾರಾ ಎನ್ನುವ ಅನುಮಾನ ಕೂಡ ಮೂಡಲಿದೆ.

    ಸಂತೋಷ್ ಸದ್ಯ ಬಂಧನದಲ್ಲಿ ಇದ್ದಾರೆ. ಅವರನ್ನು ನ್ಯಾಯಾಧೀಶರ ಮುಂದೆಯೇ ಕರೆದುಕೊಂಡು ಹೋಗಲಾಗುತ್ತಿದೆ. ನ್ಯಾಯಾಧೀಶರು ತೀರ್ಪು ಏನೇ ನೀಡಿದರೂ, ಇನ್ಮುಂದೆ ಸಂತೋಷ್ ಮತ್ತೆ ಬಿಗ್ ಬಾಸ್ ಮನೆ ಒಳಗೆ ಕಾಲಿಡಲಾರರು. ಹಾಗಾಗಿ ಸಂತೋಷ್ ಈ ವಾರದ ಎಲಿಮಿನೇಟ್‍ ಲಿಸ್ಟ್ ಗೆ ಸೇರಬಹುದು. ಎಲಿಮಿನೇಟ್ ಯಾದಿಗೆ ಸೇರಿದರೆ ಈ ವಾರ ಬಿಗ್ ಬಾಸ್ ಮನೆಯಲ್ಲಿ ಎಲ್ಲರೂ ಸೇಫ್ ಆಗಿ ಇರಬಹುದು. ಬಟ್‍, ಬಿಗ್ ಬಾಸ್ ಇನ್ನೇನಾದರೂ ಟ್ವಿಸ್ಟ್ ನೀಡಬಹುದು. ಅದಕ್ಕಾಗಿ ಇನ್ನೊಂದು ವಾರ ಕಾಯಲೇಬೇಕು.