Tag: ಹುಲಿ ಸಾವು

  • ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿ ಹತ್ಯೆ; ಪಿಸಿಸಿಎಫ್ ತಂಡದ ತನಿಖೆಗೆ ಖಂಡ್ರೆ ಆದೇಶ

    ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿ ಹತ್ಯೆ; ಪಿಸಿಸಿಎಫ್ ತಂಡದ ತನಿಖೆಗೆ ಖಂಡ್ರೆ ಆದೇಶ

    ಬೆಂಗಳೂರು: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ.

    ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ನಿನ್ನೆ ಸತ್ತ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸುವಂತೆ ಸೂಚಿಸಿದ್ದಾರೆ.

    ಈ ಕಾನನದಲ್ಲಿ ಕಳೆದ 3 ವರ್ಷದಲ್ಲಿ ದಾಖಲಾಗಿರುವ ಕಳ್ಳಬೇಟೆ ಪ್ರಕರಣಗಳ ಬಗ್ಗೆಯೂ ಗಮನಹರಿಸಿ, ಹಿಂದಿನ ತನಿಖಾ ವರದಿಗಳನ್ನೂ ಪರಾಮರ್ಶಿಸಿ ಮುಂದೆ ಈ ಭಾಗದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಲು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಹಾಗೂ ಕಳ್ಳಬೇಟೆಗಾರರ ವಿರುದ್ಧ ಸೂಕ್ತ ಕ್ರಮದ ಶಿಫಾರಸಿನೊಂದಿಗೆ 8 ದಿನಗಳಲ್ಲಿ ವರದಿ ಸಲ್ಲಿಸಿ. ಹುಲಿ ಹಂತಕರನ್ನು ಪತ್ತೆ ಮಾಡಿ ಅವರಿಗೆ ಕಾನೂನು ರೀತ್ಯ ದಂಡನೆ ಕೊಡಿಸಲು ತುರ್ತು ಕ್ರಮ ವಹಿಸಲು ಆದೇಶ ಹೊರಡಿಸುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

    ಈ ಘಟನೆ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ನಿರಂತರವಾಗಿ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿರುವುದನ್ನು ದೃಢಪಡಿಸುತ್ತಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಇನ್ಮುಂದೆ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

  • ವಿಷ ಪ್ರಾಷನದಿಂದಲೇ 5 ಹುಲಿಗಳು ಸಾವು: ಖಚಿತ ಪಡಿಸಿದ ಸಿಸಿಎಫ್ ಹೀರಾಲಾಲ್

    ವಿಷ ಪ್ರಾಷನದಿಂದಲೇ 5 ಹುಲಿಗಳು ಸಾವು: ಖಚಿತ ಪಡಿಸಿದ ಸಿಸಿಎಫ್ ಹೀರಾಲಾಲ್

    ಚಾಮರಾಜನಗರ: ಮಲೆಮಹದೇಶ್ವರ ವನ್ಯಧಾಮದಲ್ಲಿ (Malai Mahadeshwara Wildlife Sanctuary) 5 ಹುಲಿಗಳು (Tiger) ವಿಷ ಪ್ರಾಷನದಿಂದಲೇ ಮೃತ ಪಟ್ಟಿವೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೀರಾಲಾಲ್ ಹೇಳಿದ್ದಾರೆ.

    ತಾಯಿ ಹುಲಿಗೆ 8 ವರ್ಷ ಆಗಿದ್ದರೆ ಮರಿ ಹುಲಿಗಳಿಗೆ 10 ತಿಂಗಳು ಆಗಿತ್ತು. ಹಸುವಿನಲ್ಲಿರುವ ವಿಷದ ಮಾಂಸ ತಿಂದು ಹುಲಿಗಳು ಮೃತ ಪಟ್ಟಿದೆ. ಯಾವ ಪ್ರಮಾಣದ ವಿಷ? ಹುಲಿ ಭೇಟೆಯಾಡಿದ ಮೇಲೆ ಹಸುವಿಗೆ ವಿಷ ಹಾಕಲಾಗಿದ್ಯಾ? ಅಥವಾ ಮೊದಲೇ ಹಸುವಿಗೆ ವಿಷ ಪ್ರಾಷನ ಮಾಡಲಾಗಿತ್ತಾ ಎಂಬುದು ಲ್ಯಾಬ್ ವರದಿ ಮೂಲಕ ಗೊತ್ತಾಗಲಿದೆ ಎಂದು ತಿಳಿಸಿದರು.  ಇದನ್ನೂ ಓದಿ: ಚಾ.ನಗರ| ಹುಲಿಗಳು ಸತ್ತ 10 ಹೆಜ್ಜೆ ದೂರದಲ್ಲಿಯೇ ಹಸು ಕಳೇಬರ ಪತ್ತೆ- ವಿಷಪ್ರಾಶನ ಶಂಕೆ

     

    ಹುಲಿ ಹಸುವಿನ ಹಿಂಬಂದಿಯಿಂದ  ದಾಳಿ ಮಾಡಿದೆ. ಹುಲಿ ಮತ್ತು ಹಸುವಿನ ಎಲ್ಲಾ ಅಂಗಾಂಗಳನ್ನ ಲ್ಯಾಬ್ ಕಳುಹಿಸಲಾಗಿದೆ. ಮೂರು ದಿನದ ಹಿಂದೆ ಹುಲಿ ಸಾವನ್ನಪ್ಪಿದ್ದು ಇದಕ್ಕೆ ಯಾರು ಹೊಣೆಗಾರರು ಎಂಬುದನ್ನ ಇಲಾಖಾ ಮಟ್ಟದಲ್ಲಿ ತನಿಖೆ ಮಾಡುತ್ತೇವೆ ಎಂದರು.

    ವಾಚರ್ ಗಳಿಗೆ ಸಂಬಳ ತಡವಾಗಿದೆ ಎಂಬುದಕ್ಕೆ ಗಸ್ತು ಮಾಡಿಲ್ಲ ಎಂಬ ಆರೋಪಗಳು ಇವೆ. ಎಲ್ಲದರ ಬಗ್ಗೆ ತನಿಖೆ ಮಾಡುತ್ತೇವೆ. ಹಸು ಯಾರದ್ದು ಎಂಬುದರ ಬಗ್ಗೆಯೂ ತನಿಖೆ ಮಾಡುತ್ತಿದ್ದೇವೆ. ಈ ಹಸು ತಮಿಳುನಾಡಿನಿಂದ ಬಂದಿರುವುದಾ ಅಥವಾ ಸ್ಥಳೀಯರದ್ದ ಎಂಬುದರ ಬಗ್ಗೆ ತನಿಖೆಯಾಗುತ್ತಿದೆ ಎಂದು ವಿವರಿಸಿದರು.

  • ದೇಶದಲ್ಲಿ 2021ರಲ್ಲಿ 126 ಹುಲಿಗಳು ಸಾವು – ಹತ್ತು ವರ್ಷಗಳಲ್ಲೇ ಹೆಚ್ಚು

    ದೇಶದಲ್ಲಿ 2021ರಲ್ಲಿ 126 ಹುಲಿಗಳು ಸಾವು – ಹತ್ತು ವರ್ಷಗಳಲ್ಲೇ ಹೆಚ್ಚು

    ನವದೆಹಲಿ: 2021 ರಲ್ಲಿ ದೇಶಾದ್ಯಂತ 126 ಹುಲಿಗಳು ಸಾವನ್ನಪ್ಪಿವೆ. ಕಳೆದ 10 ವರ್ಷಗಳ ಅಂಕಿಅಂಶಗಳಿಗೆ ಹೋಲಿಸಿದರೆ ಈ ಬಾರಿಯೇ ಅತಿ ಹೆಚ್ಚು ಹುಲಿಗಳು ಮೃತಪಟ್ಟಿವೆ ಎಂದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ) ತಿಳಿಸಿದೆ.

    ಎನ್‌ಟಿಸಿಎ ವರದಿ ಪ್ರಕಾರ, ತೀರಾ ಇತ್ತೀಚಿನ ವರ್ಷಗಳಲ್ಲಿ ಮಧ್ಯಪ್ರದೇಶದಲ್ಲಿ ಹೆಚ್ಚು ಹುಲಿಗಳ ಸಾವು ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಕರ್ನಾಟಕ ಸೇರಿ ಎಂಟು ರಾಜ್ಯಗಳಿಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಪತ್ರ

    ಎನ್‌ಟಿಸಿಎ 2012ರಿಂದ ಹುಲಿಗಳ ಸಾವು ಕುರಿತು ದತ್ತಾಂಶ ಸಂಗ್ರಹ ಕಾರ್ಯ ಆರಂಭಿಸಿತು. 2016ರಲ್ಲಿ 121 ಹುಲಿಗಳು ಮೃತಪಟ್ಟಿರುವುದು ವರದಿಯಾಗಿದೆ. ಈ ಅಂಕಿಅಂಶಕ್ಕೆ ಹೋಲಿಸಿದರೆ ಈ ವರ್ಷವೇ ಹೆಚ್ಚು ಹುಲಿಗಳು ಸಾವನ್ನಪ್ಪಿವೆ.

    ವಿಶ್ವದ ಒಟ್ಟು ಹುಲಿಗಳ ಸಂಖ್ಯೆಯಲ್ಲಿ ಶೇ. 75 ರಷ್ಟು ಹುಲಿಗಳು ಭಾರತದಲ್ಲೇ ಇವೆ. 2006ರಲ್ಲಿ 1,411 ಹುಲಿಗಳು ಇದ್ದವು. ಇದು 2028 ರ ವೇಳೆಗೆ 2,967ಕ್ಕೆ ಸಂಖ್ಯೆಗೆ ಏರಿದೆ ಎಂದು ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಖುಷಿ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ನಾಯಿಗಾಗಿ ಜಡೆ ಜಗಳ – ಯುವತಿಯನ್ನ ಕಚ್ಚಿದ ಮಹಿಳೆ!

    ಹುಲಿಗಳ ಸಾವಿಗೆ ನೈಸರ್ಗಿಕ ಕಾರಣಗಳನ್ನು ಎನ್‌ಟಿಸಿಎ ನೀಡಿದೆ. ಅಷ್ಟೇ ಅಲ್ಲದೇ ಮಾನವ-ಪ್ರಾಣಿ ಸಂಘರ್ಷದಿಂದಲೂ ಹುಲಿಗಳು ಸಾವನ್ನಪ್ಪಿವೆ ಎನ್ನಲಾಗಿದೆ. 130 ಕೋಟಿ ಜನಸಂಖ್ಯೆ ಇರುವ ಭಾರತದಲ್ಲಿ ಇತ್ತೀಚಿನ ದಶಕಗಳಲ್ಲಿ ಹುಲಿಗಳ ಆವಾಸ ಸ್ಥಾನಗಳ ಮೇಲೆ ಮಾನವ ಅತಿಕ್ರಮಣ ಹೆಚ್ಚಾಗಿದೆ. ಹುಲಿಗಳ ಸಂಖ್ಯೆಯನ್ನು ವೃದ್ಧಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ.