Tag: ಹುಲಿ ಹತ್ಯೆ ಕೇಸ್‌

  • ಪ್ರಾಣಿ ಸಂಪತ್ತನ್ನು ಕೊಲ್ಲುವವರು ಎಷ್ಟೇ ದೊಡ್ಡವರಾಗಿದ್ರೂ ಕಠಿಣ ಕ್ರಮ: ಸಿದ್ದರಾಮಯ್ಯ

    ಪ್ರಾಣಿ ಸಂಪತ್ತನ್ನು ಕೊಲ್ಲುವವರು ಎಷ್ಟೇ ದೊಡ್ಡವರಾಗಿದ್ರೂ ಕಠಿಣ ಕ್ರಮ: ಸಿದ್ದರಾಮಯ್ಯ

    ಬೆಂಗಳೂರು: ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರು ಎಷ್ಟೇ ದೊಡ್ಡವರಾಗಿದ್ರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಎಚ್ಚರಿಕೆ ನೀಡಿದ್ದಾರೆ.

    ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿದರು. ಬಳಿಕ ಮಾತನಾಡಿದ ಅವರು, ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ (Male mahadeshawara hill) ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜಿಲ್ಲದೇ ಕಾನೂನು ಕ್ರಮ ಕೈಗೊಳ್ಳಲಾಗಿವುದು ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ. ಇದನ್ನೂ ಓದಿ: `ನಟ್ಟು ಬೋಲ್ಟು’ ಹೇಳಿಕೆಗೂ ಬಿಗ್‌ಬಾಸ್ ಬಂದ್‌ಗೂ ಸಂಬಂಧವಿಲ್ಲ – ಈಶ್ವರ್ ಖಂಡ್ರೆ 

    ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯ ಮತ್ತು ಉದ್ದೇಶಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ, ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದಿದ್ದಾರೆ. ಇದನ್ನೂ ಓದಿ: ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ: ನಿಖಿಲ್

    ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು. ಇದಕ್ಕಾಗಿ ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

    ಹುಲಿ, ಆನೆಗಳ ಹತ್ಯೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ, ಅರಣ್ಯಾಧಿಕಾರಿಗಳು ಈ ಬಗ್ಗೆ ಹೆಚ್ಚು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಹುಲಿ ಹತ್ಯೆ ಮಾಡಿದವರು ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ. ದಿನೇ ದಿನೇ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದರೆ ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

    ಕಾರ್ಯಕ್ರಮದಲ್ಲಿ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಅರಣ್ಯ ರಾಯಭಾರಿ ಅನಿಲ್ ಕುಂಬ್ಳೆ, ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವರು ಉಪಸ್ಥಿತರಿದ್ದರು.

  • 5 ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಚಕ್ರಪಾಣಿ ಸೇರಿ 3 ಅಧಿಕಾರಿಗಳ ಅಮಾನತಿಗೆ ಖಂಡ್ರೆ ಶಿಫಾರಸು

    5 ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಚಕ್ರಪಾಣಿ ಸೇರಿ 3 ಅಧಿಕಾರಿಗಳ ಅಮಾನತಿಗೆ ಖಂಡ್ರೆ ಶಿಫಾರಸು

    ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ (Chakrapani) ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ (Eshwar Khandre) ಶಿಫಾರಸು ಮಾಡಿದ್ದಾರೆ.

    ಉನ್ನತ ಮಟ್ಟದ ವಿಚಾರಣಾ ಸಮಿತಿಯ ಪ್ರಾಥಮಿಕ ವರದಿ ಸ್ವೀಕರಿಸಿ, ಪರಾಮರ್ಶಿಸಿದ ಸಚಿವರು, ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಮೇಲ್ನೋಟಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಈ ಶಿಫಾರಸು ಮಾಡಿದ್ದಾರೆ. ಇದನ್ನೂ ಓದಿ: ಟ್ರಂಪ್ ಬಿಗ್ ಬ್ಯೂಟಿಫುಲ್ ಬಿಲ್‌ಗೆ ಒಪ್ಪಿಗೆ – ಭಾರತೀಯರಿಗೂ ಕಾದಿದೆ ಆಘಾತ

    ವೇತನ ಪಾವತಿಸದಿರುವುದೂ ಕರ್ತವ್ಯಲೋಪ
    ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿ ಮಾಡಲು ಏಪ್ರಿಲ್ ತಿಂಗಳಾಂತ್ಯಕ್ಕೇ ಹಣ ಬಿಡುಗಡೆಯಾಗಿದ್ದರೂ, ಜೂನ್ ತಿಂಗಳವರೆಗೆ ವೇತನ ಪಾವತಿಸದಿರುವುದು ಡಿಸಿಎಫ್ ಚಕ್ರಪಾಣಿ ಅವರ ಮೂಲಭೂತ ಕರ್ತವ್ಯ ಲೋಪವಾಗಿದ್ದು, ಇದು ಗಸ್ತು ಕಾರ್ಯಕ್ಕೆ ಹಿನ್ನಡೆ ಉಂಟು ಮಾಡಿದೆ. ಈ ಸಂಬಂಧ ಡಿಸಿಎಫ್ ಚಕ್ರಪಾಣಿ ಅಮಾನತಿಗೆ ಶಿಫಾರಸು ಮಾಡಿ, ಇಲಾಖೆಯ ವಿಚಾರಣೆ ಮಾಡಲು ಶಿಫಾರಸು ಮಾಡಿದ್ದಾರೆ. ಇದನ್ನೂ ಓದಿ: ಎಸ್‌ಸಿ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲಾಗದು: ಛಲವಾದಿ ಆರೋಪ

    ಹೊರಗುತ್ತಿಗೆ ಸಿಬ್ಬಂದಿ ಮಾರ್ಚ್‌ನಿಂದ 3 ತಿಂಗಳ ವೇತನ ಪಾವತಿ ಆಗಿಲ್ಲ ಎಂದು ಜೂನ್ 23ರಂದು ಪ್ರತಿಭಟನೆ ನಡೆಸಿದ್ದರು. ಸಕಾಲದಲ್ಲಿ ವೇತನ ಸಿಗದೇ ಮುಂಚೂಣಿಯ ಸಿಬ್ಬಂದಿ ಕರ್ತವ್ಯ ವಿಮುಖರಾಗಲು ಕಾರಣವಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.

    ಸುಮಾರು 11 ವರ್ಷದ ತಾಯಿ ಹುಲಿ ಮತ್ತು 10ರಿಂದ 11ತಿಂಗಳ 4 ಮರಿ ಹುಲಿಗಳ ಸಾವಿಗೆ ಹುಲಿ ದಾಳಿ ಮಾಡಿ ಕೊಂದ ಹಸುವಿನ ಮೃತದೇಹದ ಒಳಗೆ ಸೇಡು ತೀರಿಸಿಕೊಳ್ಳಲು ಸಿಂಪಡಿಸಲಾದ ರಾಸಾಯನಿಕ ಸಂಯುಕ್ತ ಕಾರಣ ಎಂಬುದು ಪ್ರಾಥಮಿಕ ತನಿಖಾ ವರದಿಯಿಂದ ತಿಳಿದುಬಂದಿದೆ. ಇದನ್ನೂ ಓದಿ: ಕಾರು ರೇಸ್‌ಗೆ ಕಿಚ್ಚ ಎಂಟ್ರಿ – ಬೆಂಗಳೂರು ತಂಡ ಖರೀದಿಸಿದ ಸುದೀಪ್‌

    ಗಸ್ತು ಸಿಬ್ಬಂದಿಯ ಕಾರ್ಯಕ್ಷಮತೆಯ ಮೇಲೆ ಸಂಬಂಧಿತ ವಲಯದ ಎ.ಸಿ.ಎಫ್, ಆರ್.ಎಫ್.ಓ. ಮತ್ತು ಡಿ.ಆರ್.ಎಫ್.ಓ. ನಿಗಾ ಇಡುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ತಮ್ಮ ಮೂಲಭೂತ ಕರ್ತವ್ಯವಾದ ಅರಣ್ಯ ರಕ್ಷಣೆಯಲ್ಲಿ ನಿರ್ಲಕ್ಷ್ಯ ತೋರಿರುತ್ತಾರೆ ಎಂದು ತಿಳಿಸಿರುವ ಈಶ್ವರ್ ಖಂಡ್ರೆ, ಮೂರು ಸಿಬ್ಬಂದಿಯನ್ನು ಅಮಾನತು ಮಾಡಿ, ಇಲಾಖೆಯ ವಿಚಾರಣೆ ನಡೆಸಲು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಬೋಲ್ಡ್ ಫೋಟೋಗೆ ಬ್ಯಾಡ್ ಕಾಮೆಂಟ್, ಗೌರಮ್ಮನಾದ ಸಪ್ತಮಿ!

    ಪ್ರಾಥಮಿಕ ತನಿಖಾ ವರದಿ ಸಲ್ಲಿಸಿರುವ ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಶ್ಕರ್ ನೇತೃತ್ವದ ಉನ್ನತ ಮಟ್ಟದ ಸಮಿತಿಯಲ್ಲಿ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಶ್ರೀನಿವಾಸುಲು, ಚಾಮರಾಜನಗರ ಸಿಸಿಎಫ್ ಹೀರಾಲಾಲ್, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಎ.ಐ.ಜಿ ಹರಿಣಿ ವೇಣುಗೋಪಾಲ್, ವನ್ಯಜೀವಿ ತಜ್ಞ ಡಾ.ಸಂಜಯ್ ಗುಬ್ಬಿ ಮತ್ತು ಮೈಸೂರು ಮೃಗಾಲಯದ ಸಹಾಯಕ ನಿರ್ದೇಶಕ ಡಾ.ಶಶಿಧರ್ ಸದಸ್ಯರಾಗಿದ್ದರು. ಈ ಸಮಿತಿಗೆ ಅಂತಿಮ ವರದಿಯನ್ನು ಇದೇ ತಿಂಗಳ 10ರೊಳಗೆ ಸಲ್ಲಿಸುವಂತೆಯೂ ಸೂಚಿಸಿದ್ದಾರೆ.

  • 5 ಹುಲಿಗಳ ಸಾವು ಪ್ರಕರಣ – ಡಿಸಿಎಫ್, ಎಸಿಎಫ್‌ಗಳಿಗೆ ಕಡ್ಡಾಯ ರಜೆ ಮೇಲೆ ತೆರಳಲು ಸರ್ಕಾರ ಆದೇಶ

    5 ಹುಲಿಗಳ ಸಾವು ಪ್ರಕರಣ – ಡಿಸಿಎಫ್, ಎಸಿಎಫ್‌ಗಳಿಗೆ ಕಡ್ಡಾಯ ರಜೆ ಮೇಲೆ ತೆರಳಲು ಸರ್ಕಾರ ಆದೇಶ

    ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟ (MM Hills) ವನ್ಯಧಾಮದಲ್ಲಿ ಐದು ಹುಲಿಗಳಿಗೆ ವಿಷಪ್ರಾಶನ ಮಾಡಿಸಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.

    ಉಪ ಅರಣ್ಯ ಸಂರಕ್ಷಣಾಧಿಕಾರಿ (DCF) ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಗಳಿಗೆ ಕಡ್ಡಾಯ ರಜೆಯ ಮೇಲೆ ತೆರಳಲು ಆದೇಶಿಸಿದೆ. ತನಿಖಾ ವರದಿ ಬಂದ ಬಳಿಕ ಶಿಸ್ತು ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಇದನ್ನೂ ಓದಿ: 5 ಹುಲಿಕೊಂದ ಹಂತಕರು ಲಾಕ್ – ಕೊನೆಗೂ ಹೊರಬಂತು ರಹಸ್ಯ, 3 ಆರೋಪಿಗಳಿಗೆ ನ್ಯಾಯಾಂಗ ಬಂಧನ

    ಸರ್ಕಾರಿ ಆದೇಶದಲ್ಲಿ ಏನಿದೆ?
    ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ವಿಭಾಗದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅಸಹಜ ಸಾವಿಗಾಡಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಈ ಐದು ಹುಲಿಗಳು ರಸ್ತೆಯಿಂದ ಕೇವಲ 100 ಮೀಟರ್ ದೂರದಲ್ಲಿ ಸತ್ತುಬಿದ್ದಿದ್ದರೂ ಎರಡು ದಿನಗಳವರೆಗೆ ಇಲಾಖೆಯ ಸಿಬ್ಬಂದಿ ಗಮನಕ್ಕೆ ಬಾರದಿರುವುದು ಅರಣ್ಯ, ವನ್ಯಜೀವಿ ಸಂರಕ್ಷಣೆಯಲ್ಲಿ ಲೋಪವಾಗಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ. ಇದನ್ನೂ ಓದಿ: ಐದು ಹುಲಿಗಳ ಸಾವು – ಹಸು ಕೊಂದಿದ್ದಕ್ಕೆ ವಿಷ ಹಾಕಿದ್ನಾ ಹಸು ಮಾಲೀಕ?

    ಸಾವಿಗೀಡಾದ ಸ್ಥಳದಿಂದ ಕೇವಲ 800 ಮೀಟರ್ ದೂರದಲ್ಲಿ ಕಳ್ಳಬೇಟೆ ನಿಗ್ರಹ ಶಿಬಿರವಿದ್ದರೂ ವನ್ಯಜೀವಿ ರಕ್ಷಣೆಯಾಗದಿರುವುದು ಹಾಗೂ ಕಳೆದ ಮೂರು ತಿಂಗಳಿನಿಂದ ಮಾಧ್ಯಮಗಳಲ್ಲಿ ಮುಂಚೂಣಿಯ ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಭತ್ಯೆ ನೀಡದೇ ಇರುವುದು ಗಸ್ತು ಕಾರ್ಯಕ್ಕೆ ಅಡಚಣೆ ಉಂಟಾಗಿರುತ್ತದೆ. ಇದಕ್ಕೆ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹಾಗೂ ಗಸ್ತು ಸಿಬ್ಬಂದಿಯ ಕರ್ತವ್ಯ ಲೋಪವೇ ಕಾರಣವೆಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದನ್ನೂ ಓದಿ: 5 ಹುಲಿಗಳ ನಿಗೂಢ ಸಾವು ಬೆನ್ನಲ್ಲೇ ಬಂಡೀಪುರದಲ್ಲಿ ಮತ್ತೊಂದು ಹುಲಿ ಸಾವು

    ಈ ಕಾರಣದಿಂದ ತನಿಖೆ ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ, ಸಂಬಂಧಿಸಿದ ಶಾಖೆಯ ಉಪ ವಲಯ ಅರಣ್ಯಾಧಿಕಾರಿ-ಕಂ-ಮೋಜಣಿದಾರ ಮತ್ತು ಗಸ್ತು ಸಿಬ್ಬಂದಿಗಳ ಸಂಬಂಧ ಕ್ರಮವನ್ನು ಪ್ರತ್ಯೇಕವಾಗಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಚಾಮರಾಜನಗರ ವೃತ್ತ, ಚಾಮರಾಜನಗರ ರವರ ಹಂತದಲ್ಲಿ ಕ್ರಮಕೈಗೊಳ್ಳಲಾಗುತ್ತಿದೆ. ಮಲೆಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಹನೂರು ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹೂಗ್ಯಂ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಇವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕಡ್ಡಾಯ ರಜೆಯ ಮೇಲೆ ಕಳುಹಿಸಲು ನಿರ್ದೇಶಿಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ವಿಷ ಪ್ರಾಷನದಿಂದಲೇ 5 ಹುಲಿಗಳು ಸಾವು: ಖಚಿತ ಪಡಿಸಿದ ಸಿಸಿಎಫ್ ಹೀರಾಲಾಲ್

    ಏನಿದು ಪ್ರಕರಣ?
    ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿಗಳು ವಿಷ ಬೆರೆಸಿದ್ದ ಜಾನುವಾರುವಿನ ಕಳೇಬರ ತಿಂದು ದುರ್ಮರಣಕ್ಕೆ ಒಳಗಾಗಿವೆ. ಹುಲಿಗಳಿಗೆ ವಿಷಪ್ರಾಶನ ಮಾಡಿ ಕೊಂದಿರುವ ಆರೋಪದ ಮೇಲೆ ಹನೂರು ತಾಲ್ಲೂಕಿನ ಕೊಪ್ಪ ಗ್ರಾಮದ ಮೂವರು ಹಾಗೂ ಕೃತ್ಯಕ್ಕೆ ನೆರವು ನೀಡಿರುವ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದೆ. ಅರಣ್ಯದೊಳಗೆ ಮೇಯುತ್ತಿದ್ದ ಹಸುವನ್ನು ಹುಲಿ ಕೊಂದು ಹಾಕಿರುವ ಘಟನೆಗೆ ಪ್ರತೀಕಾರದ ರೂಪದಲ್ಲಿ ದುಷ್ಕೃತ್ಯ ನಡೆದಿದ್ದು, ಹುಲಿ ತಿಂದು ಉಳಿಸಿದ್ದ ಕಳೇಬರಕ್ಕೆ ವಿಷ ಹಾಕಲಾಗಿದೆ. ಆ ವಿಷಪೂರಿತ ಕಳೇಬರ ತಿಂದು ಐದು ಹುಲಿಗಳೂ ಪ್ರಾಣಬಿಟ್ಟಿವೆ.

    ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನ ಕೊಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗ್ಲೆ ಮೂವರು (ಮಾದ ಅಲಿಯಾಸ್ ಮಾದುರಾಜು, ನಾಗರಾಜ್ ಹಾಗೂ ಕೋನಪ್ಪ) ಆರೋಪಿಗಳ ಕೈಗೆ ಖಾಕಿ ಕೋಳ ತೊಡಿಸಿದೆ. ಅರಣ್ಯ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಜಂಟಿಯಾಗಿ ತನಿಖೆ ನಡೆಸುತ್ತಿವೆ. ಹುಲಿಗಳ ಸಾವಿನ ಹಿಂದೆ ತಮಿಳುನಾಡಿನ ಜಾನುವಾರುಗಳ ಮಾಲೀಕರ ʻಸಗಣಿ ಮಾಫಿಯಾ’ದ ಪರೋಕ್ಷ ಪಾತ್ರ ಇರುವುದರ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇನ್ನೂ ಪ್ರಕರಣದ ಬಗ್ಗೆ ಕೇಳಿದ್ದಕ್ಕೆ ಡಿಸಿಎಫ್‌ ಹಾರಿಕೆ ಉತ್ತರ ನೀಡಿದ್ದರು. ಆ ತರ ಯಾವುದೇ ಸಮಸ್ಯೆ ಇಲ್ವೆ ಇಲ್ಲ ನಮ್ಮ ಮೇಲೆ ಒತ್ತಡ ಕ್ರಿಯೆಟ್‌ ಮಾಡೋಕೆ ಕೆಲವರು ಈ ರೀತಿ ಮಾಡ್ತಾ ಇದ್ದಾರೆ ಎಂದು ಪಲಾಯನ ಮಾಡ್ತಿದ್ದರು. ಈ ಬೆನ್ನಲ್ಲೇ ಸರ್ಕಾರ ಶಿಸ್ತುಕ್ರಮ ಕೈಗೊಂಡಿದೆ.

  • 5 ಹುಲಿಕೊಂದ ಹಂತಕರು ಲಾಕ್ – ಕೊನೆಗೂ ಹೊರಬಂತು ರಹಸ್ಯ, 3 ಆರೋಪಿಗಳಿಗೆ ನ್ಯಾಯಾಂಗ ಬಂಧನ

    5 ಹುಲಿಕೊಂದ ಹಂತಕರು ಲಾಕ್ – ಕೊನೆಗೂ ಹೊರಬಂತು ರಹಸ್ಯ, 3 ಆರೋಪಿಗಳಿಗೆ ನ್ಯಾಯಾಂಗ ಬಂಧನ

    ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನ ಕೊಂದ ಕಿರಾತಕರು ಕೊನೆಗೂ ಅಂದರ್ ಆಗಿದ್ದಾರೆ. ಹುಲಿ ಹತ್ಯೆಯ ಅಸಲಿತ್ತನ್ನ ಖಾಕಿ ಪಡೆ ಬಾಯಿ ಬಿಡಿಸಿದೆ.

    ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನ ಕೊಂದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗ್ಲೆ ಮೂವರು ಆರೋಪಿಗಳ ಕೈಗೆ ಖಾಕಿ ಕೋಳ ತೊಡಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ರಾಜ್ಯದಲ್ಲಿ ಆರಿದ್ರಾ ಮಳೆಯಬ್ಬರ – 93 ವರ್ಷಗಳ ಬಳಿಕ ಜೂನ್‌ನಲ್ಲೇ KRS 123 ಅಡಿ ಭರ್ತಿ

    ಹುಲಿ ಹಸುವನ್ನ ಬೇಟೆಯಾಡಿದಕ್ಕೆ ರೊಚ್ಚಿಗೆದ್ದ ಮಾದ ಅಲಿಯಾಸ್ ಮಾದುರಾಜು, ನಾಗರಾಜ್ ಹಾಗೂ ಕೋನಪ್ಪ ಮೂರು ಮಂದಿ ಮೃತ ಹಸುವಿನ ಕಳೆಬರದ ಮೇಲೆ ಮೃತದೇಹದ ಮೇಲೆ ಕ್ರಿಮಿನಾಶಕ ಸಿಂಪಡಿಸಿದ್ರು. ಕ್ರಿಮಿನಾಶಕ ಸೇವಿಸಿದ ಹುಲಿಗಳು ಸಾವನ್ನಪ್ಪಿದ್ವು ಯಾವಾಗ ಹುಲಿಗಳ ಮೃತದೇಹ ಕೊಳೆತು ವಾಸನೆ ಬರಲು ಶುರುವಾಯ್ತೊ ಬೀಟ್‌ಗೆ ಯಾವಾಗ ಫಾರೆಸ್ಟ್ ವಾಚರ್ಸ್ ಬೀಟ್‌ಗೆ ಬಂದ್ರೊ ಆಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಬೆಳಕಿಗೆ ಬರ್ತಿದ್ದಂತೆ ಎಸ್ಕೇಪ್ ಆಗಿದ್ದ ಕಳಬೇದೊಡ್ಡಿ ಗ್ರಾಮದ ಕೋನಪ್ಪ, ಮಾದರಾಜು ಕೊಪ್ಪಗ್ರಾಮದ ನಾಗರಾಜ್ ರನ್ನ ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 8 ವರ್ಷಗಳಿಂದ ವಿತರಿಸದೇ ಇದ್ದ 1 ಲಕ್ಷಕ್ಕೂ ಹೆಚ್ಚು ಸ್ಯಾನಿಟರಿ ಪ್ಯಾಡ್‌ಗಳಿಗೆ ಬೆಂಕಿ

    ಇನ್ನು ಹುಲಿಗಳ ಸಾವಿಗೆ ಪರೋಕ್ಷವಾಗಿ ಅರಣ್ಯಾಧಿಕಾರಿಗಳೇ ಕಾರಣ ಎಂಬುದು ಈಗ ರಿವೀಲ್ ಆಗ್ತಾಯಿದೆ. ಹಸುವನ್ನ ಹುಲಿ ಬೇಟೆಯಾಡಿದ್ದು ಅಂದೇ ರಾತ್ರಿ ಮಾದುರಾಜು ನಾಗರಾಜ್ ಹಾಗೂ ಕೋನಪ್ಪ ಮೂರು ಮಂದಿ ಹೋಗಿ ಮೃತ ಹಸುವಿನ ದೇಹಕ್ಕೆ ವಿಷ ಸಿಂಪಡಿಸಿದ್ದರು. ಅಂದೇ ಫಾರೆಸ್ಟ್ ವಾಚರ್ಸ್ ಗಳೆಲ್ಲ ಮೂರ್ನಾಲ್ಕು ತಿಂಗಳಿನಿಂದ ವೇತನ ಆಗಿಲ್ಲವೆಂದು ಮಲೆ ಮಹದೇಶ್ವರ ವನ್ಯಧಾಮದ ಅರಣ್ಯ ಭವನದಲ್ಲಿ ಪ್ರತಿಭಟನೆ ಮಾಡ್ತಾಯಿದ್ರು. ಒಂದು ವೇಳೆ ಅರಣ್ಯ ಸಿಬ್ಬಂದಿ ವೇತನ ಸರಿಯಾಗಿ ನೀಡಿದ್ರೆ. ವಾಚರ್ಸ್‌ಗಳು ಪ್ರತಿಭಟನೆ ಮಾಡದೇ ಬೀಟ್‌ಗೆ ಹೋಗಿದ್ರೆ ಇಂದು 5 ಹುಲಿಗಳು ಬದುಕಿ ಉಳಿತಾಯಿದ್ವು ಎಂಬುದು ಈಗ ಬೆಳಕಿಗೆ ಬಂದಿದೆ.

    ಇನ್ನು ಈ ಕುರಿತು ಮಲೆ ಮಹದೇಶ್ವರ ವನ್ಯಧಾಮದ ಡಿಸಿಎಫ್‌ಗೆ ಕೇಳಿದ್ರೆ ಹಾರಿಕೆ ಉತ್ತರ ಕೊಡ್ತಾರೆ. ಆ ತರ ಯಾವುದೇ ಸಮಸ್ಯೆ ಇಲ್ವೆ ಇಲ್ಲ ನಮ್ಮ ಮೇಲೆ ಒತ್ತಡ ಕ್ರಿಯೆಟ್‌ ಮಾಡೋಕೆ ಕೆಲವರು ಈ ರೀತಿ ಮಾಡ್ತಾ ಇದ್ದಾರೆ ಎಂದು ಪಲಾಯನ ಮಾಡ್ತಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಆರಿದ್ರಾ ಮಳೆಯಬ್ಬರ – 93 ವರ್ಷಗಳ ಬಳಿಕ ಜೂನ್‌ನಲ್ಲೇ KRS 123 ಅಡಿ ಭರ್ತಿ

    ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ
    ವಿಷವಿಕ್ಕಿ ಹುಲಿ ಹತ್ಯೆ ಮಾಡಿದ ಆರೋಪಿಗಳು ಜೂನ್ 30ರ ವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತ ಮೂವರು ಆರೋಪಿಗಳು ಕೊಳ್ಳೇಗಾಲ ಪ್ರಧಾನ ಸಿವಿಲ್‌ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು. ತಡವಾದ ಕಾರಣ ನ್ಯಾಯಾಧೀಶರಾದ ಎಂ‌‌.ಕಾವ್ಯಶ್ರೀ ನಿವಾಸಕ್ಕೆ ಆರೋಪಿಗಳನ್ನು ಕರೆತಂದು ಅರಣ್ಯಾಧಿಕಾರಿಗಳು ಹಾಜರು ಪಡಿಸಿದ್ದಾರೆ. ನ್ಯಾಯಧೀಶರ ಮುಂದೆ ಕರೆತರುವ ಮುನ್ನ ಕೊಳ್ಳೇಗಾಲ ತಾಲೂಕು ಆಸ್ಪತ್ರೆಯಲ್ಲಿ ಅರಣ್ಯ ಸಿಬ್ಬಂದಿ ಮೆಡಿಕಲ್ ಮಾಡಿಸಿದ್ದರು. ಕಸ್ಟಡಿಗೆ ಕೊಡುವಂತೆ ಅರಣ್ಯಾಧಿಕಾರಿಗಳು ಮನವಿ ಮಾಡಿದ್ದರು. ಇದೀಗಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು ಜೂನ್ 30 ರಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲು ಸೂಚಿಸಲಾಯಿತು.